Gopi Hinduja: ನಮ್ಮನ್ನಾಳಿದ ಬ್ರಿಟನ್‌ನಲ್ಲಿ ಭಾರತದ ಉದ್ಯಮಿಯೇ ಅತ್ಯಂತ ಸಿರಿವಂತ; ಯಾರಿವರು? - Vistara News

ವಿದೇಶ

Gopi Hinduja: ನಮ್ಮನ್ನಾಳಿದ ಬ್ರಿಟನ್‌ನಲ್ಲಿ ಭಾರತದ ಉದ್ಯಮಿಯೇ ಅತ್ಯಂತ ಸಿರಿವಂತ; ಯಾರಿವರು?

Gopi Hinduja: ಗೋಪಿಚಂದ್‌ ಅವರ ಆಸ್ತಿಯ ಮೌಲ್ಯವು ಕಳೆದ ವರ್ಷ 35 ಶತಕೋಟಿ ಪೌಂಡ್ಸ್‌ ಇತ್ತು. ಈಗ ಅದು 37 ಶತಕೋಟಿ ಪೌಂಡ್ಸ್‌ಗೆ ಏರಿಕೆಯಾಗಿದೆ. ಸಂಡೇ ಟೈಮ್ಸ್‌ ರಿಚ್‌ ಲಿಸ್ಟ್‌ ಕಳೆದ ಹಲವು ವರ್ಷಗಳಿಂದಲೂ ಪ್ರಕಟವಾಗುತ್ತಿದೆ. ಆದರೆ, ಹಿಂದುಜಾ ಗ್ರೂಪ್, ಕಳೆದ 3 ವರ್ಷದಿಂದಲೂ ಮೊದಲ ಸ್ಥಾನದಲ್ಲಿದೆ.

VISTARANEWS.COM


on

Gopi Hinduja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್‌: ಬ್ರಿಟಿಷರು ನಮ್ಮನ್ನು ಆಳಿದರು, ಶತಮಾನಗಳವರೆಗೆ ಭಾರತದ ಸಂಪತ್ತನ್ನು ಕೊಳ್ಳೆ ಹೊಡೆದರು ಎಂಬ ಬೇಸರವು ಪ್ರತಿ ಭಾರತೀಯನನ್ನೂ ಕಾಡುತ್ತದೆ. ಆದರೆ, ಭಾರತ ಮೂಲದ ರಿಷಿ ಸುನಕ್‌ ಅವರು ಬ್ರಿಟನ್‌ ಪ್ರಧಾನಿಯಾದರೆ, ಭಾರತವು ಆರ್ಥಿಕತೆ ಸೇರಿ ಯಾವುದೇ ವಿಷಯದಲ್ಲಿ ಹಿಂದಿಕ್ಕಿದರೆ ನಮಗೆ ಖುಷಿಯಾಗುತ್ತದೆ. ಇಂತಹ ಖುಷಿಗೆ ಮತ್ತೊಂದು ಕಾರಣ ಸಿಕ್ಕಿದೆ. ಭಾರತ ಮೂಲದ ಗೋಪಿಚಂದ್‌ ಹಿಂದುಜಾ (Gopi Hinduja) ಹಾಗೂ ಅವರ ಕುಟುಂಬವು ಬ್ರಿಟನ್‌ನ ಶ್ರೀಮಂತ (UK’s Richest) ಕುಟುಂಬ ಅಥವಾ ಉದ್ಯಮಿ ಎಂಬ ಖ್ಯಾತಿಗೆ ಭಾಜನವಾಗಿದೆ. ಅಷ್ಟೇ ಅಲ್ಲ, ಸತತ ಮೂರನೇ ವರ್ಷವೂ ಹಿಂದುಜಾ ಕುಟುಂಬವೇ ಅತ್ಯಂತ ಶ್ರೀಮಂತ ಎಂಬ ಖ್ಯಾತಿಗೆ ಪಾತ್ರವಾಗಿದೆ.

‘ಸಂಡೇ ಟೈಮ್ಸ್‌ ರಿಚ್‌ ಲಿಸ್ಟ್‌’ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಗೋಪಿಚಂದ್‌ ಹಿಂದುಜಾ ಅವರೇ ಬ್ರಿಟನ್‌ನ ಶ್ರೀಮಂತ ಉದ್ಯಮಿ ಎನಿಸಿದ್ದಾರೆ. ಇವರ ಆಸ್ತಿಯ ಒಟ್ಟು ಮೌಲ್ಯವು 37 ಶತಕೋಟಿ ಪೌಂಡ್ಸ್‌ (ಸುಮಾರು 3.9 ಲಕ್ಷ ಕೋಟಿ ರೂ.) ಇದೆ. ಬ್ರಿಟನ್‌ನವರೇ ಆದ ಸರ್‌ ಲೆನಾರ್ಡ್‌ ಬ್ಲಾವಾಟ್ನಿಕ್‌ (29 ಶತಕೋಟಿ ಪೌಂಡ್ಸ್)‌, ಡೇವಿಡ್‌, ಸೈಮನ್‌ ರುಬೇನ್‌ ಮತ್ತು ಕುಟುಂಬ (24.98 ಶತಕೋಟಿ ಪೌಂಡ್ಸ್)‌, ಸರ್‌ ಜಿಮ್‌ ರ‍್ಯಾಟ್‌ಕ್ಲಿಫ್‌ (23 ಶತಕೋಟಿ ಪೌಂಡ್ಸ್)‌ ಆಸ್ತಿಯೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ.

ಗೋಪಿಚಂದ್‌ ಹಿಂದುಜಾ ಅವರು ಭಾರತ ಮೂಲದವರಾಗಿದ್ದು, ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಇವರ ತಂದೆಯೂ ಉದ್ಯಮಿಯಾಗಿದ್ದರು. ಹಿಂದುಜಾ ಗ್ರೂಪ್‌ಗೆ ಗೋಪಿಚಂದ್‌ ಹಿಂದುಜಾ ಅವರು ಸಹ ಚೇರ್ಮನ್‌ ಆಗಿದ್ದಾರೆ. ಇವರ ಆಸ್ತಿಯ ಮೌಲ್ಯವು ಕಳೆದ ವರ್ಷ 35 ಶತಕೋಟಿ ಪೌಂಡ್ಸ್‌ ಇತ್ತು. ಈಗ ಅದು 37 ಶತಕೋಟಿ ಪೌಂಡ್ಸ್‌ಗೆ ಏರಿಕೆಯಾಗಿದೆ. ಸಂಡೇ ಟೈಮ್ಸ್‌ ರಿಚ್‌ ಲಿಸ್ಟ್‌ ಕಳೆದ ಹಲವು ವರ್ಷಗಳಿಂದಲೂ ಪ್ರಕಟವಾಗುತ್ತಿದೆ. ಆದರೆ, ಹಿಂದುಜಾ ಗ್ರೂಪ್, ಕಳೆದ 3 ವರ್ಷದಿಂದಲೂ ಮೊದಲ ಸ್ಥಾನದಲ್ಲಿದೆ.

“ಗೋಪಿಚಂದ್‌ ಹಿಂದುಜಾ ಹಾಗೂ ಅವರ ಕುಟುಂಬವು ಜಗತ್ತಿನಾದ್ಯಂತ 48 ದೇಶಗಳಲ್ಲಿ ಉದ್ಯಮಗಳನ್ನು ಹೊಂದಿದೆ. ಆಟೋಮೋಟಿವ್‌, ತೈಲ, ಕೆಮಿಕಲ್‌, ಬ್ಯಾಂಕಿಂಗ್‌, ಐಟಿ, ಫೈನಾನ್ಸ್‌, ಸೈಬರ್‌ ಸೆಕ್ಯುರಿಟಿ, ಆರೋಗ್ಯ, ಮೂಲ ಸೌಕರ್ಯ ಅಭಿವೃದ್ಧಿ, ಮನರಂಜನೆ, ಮಾಧ್ಯಮ, ರಿಯಲ್‌ ಎಸ್ಟೇಟ್‌ ಸೇರಿ ಹತ್ತಾರು ಕ್ಷೇತ್ರಗಳಲ್ಲಿ ಹಿಂದುಜಾ ಗ್ರೂಪ್‌ ಪ್ರಾಬಲ್ಯ ಸಾಧಿಸಿದೆ” ಎಂದು ದಿ ಸಂಡೇ ಟೈಮ್ಸ್‌ ಬಣ್ಣಿಸಿದೆ. ಹಿಂದುಜಾ ಕುಟುಂಬಸ್ಥರು ಮುಂಬೈನಲ್ಲಿ ಸಣ್ಣದೊಂದು ಉದ್ಯಮ ಆರಂಭಿಸಿ, ಈಗ ಬ್ರಿಟನ್‌ನ ಶ್ರೀಮಂತ ಔದ್ಯಮಿಕ ಕುಟುಂಬ ಎನಿಸಿದೆ. ಇವರ ಮನೆಯು ಬ್ರಿಟನ್‌ ಅರಸ ವಾಸಿಸುವ ಬಕಿಂಗ್‌ಹ್ಯಾಮ್‌ ಪ್ಯಾಲೇಸ್‌ ಬಳಿಯೇ ಇದೆ.

ಇದನ್ನೂ ಓದಿ: Indian billionaires: ಭಾರತದಲ್ಲಿ 200 ಬಿಲಿಯನೇರ್‌ಗಳು! ಅತಿ ಶ್ರೀಮಂತರ ಸಂಖ್ಯೆಯಲ್ಲಿ ಭಾರತ ನಂ.3

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Israel Hamas War: ಗಾಜಾ ಮೇಲೆ ಇಸ್ರೇಲ್‌ ದಾಳಿ; ಹಮಾಸ್‌ ‘ಮಿಲಿಟರಿ ಚೀಫ್’ ಸೇರಿ 71 ಮಂದಿಯ ಹತ್ಯೆ

Israel Hamas War: ಇಸ್ರೇಲ್‌ ಮೇಲೆ ನಿರಂತರವಾಗಿ ದಾಳಿಗೆ ಪಿತೂರಿ ನಡೆಸುವ, 2023ರ ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ದಾಳಿ ನಡೆಸುವ ಯೋಜನೆಯ ರೂವಾರಿ ಎನಿಸಿರುವ ಮೊಹಮ್ಮದ್‌ ಡೈಫ್‌ ಹತ್ಯೆಗಾಗಿ ಹಲವು ವರ್ಷಗಳಿಂದಲೂ ಇಸ್ರೇಲ್‌ ಗುಪ್ತಚರ ಇಲಾಖೆಯು ಪ್ಲಾನ್‌ ಮಾಡಿತ್ತು ಎಂದು ಹೇಳಲಾಗುತ್ತಿದೆ. ಕೊನೆಗೆ ಆತನನ್ನು ಹೊಡೆದುರುಳಿಸುವಲ್ಲಿ ಇಸ್ರೇಲ್‌ ಯಶಸ್ವಿಯಾಗಿದೆ.

VISTARANEWS.COM


on

Israel Hamas War
Koo

ಜೆರುಸಲೇಂ: 2023ರ ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು (Israel Hamas War) ನಡೆಸಿದ ದಾಳಿಗೆ ನಿರಂತರವಾಗಿ ಪ್ರತಿದಾಳಿ ನಡೆಸುತ್ತಿರುವ ಇಸ್ರೇಲ್‌, ಹಮಾಸ್‌ ಉಗ್ರರನ್ನು ಹುಡುಕಿ ಹುಡುಕಿ ಹತ್ಯೆ ಮಾಡುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಗಾಜಾ ಪಟ್ಟಿಯ ಖಾನ್‌ ಯೌನಿಸ್‌ (Khan Younis) ಪ್ರದೇಶದ ಮೇಲೆ ಇಸ್ರೇಲ್‌ ಭೀಕರ ದಾಳಿ ನಡೆಸಿದ್ದು, ಅಕ್ಟೋಬರ್‌ 7ರ ದಾಳಿಯ ರೂವಾರಿ, ಹಮಾಸ್‌ ಮಿಲಿಟರಿ ವಿಭಾಗದ ಮುಖ್ಯಸ್ಥ ಮೊಹಮ್ಮದ್‌ ಡೈಫ್ (Mohammed Deif)‌ ಎಂಬಾತನನ್ನು ಹತ್ಯೆ ಮಾಡಲಾಗಿದೆ. ಆದರೆ, ಇಸ್ರೇಲ್‌ ದಾಳಿಯಲ್ಲಿ 71 ಮಂದಿ ಮೃತಪಟ್ಟಿದ್ದಾರೆ.

ಖಾನ್‌ ಯೌನಿಸ್‌ ಪ್ರದೇಶವು ಹಮಾಸ್‌ ಉಗ್ರರ ಸುರಕ್ಷಿತ ತಾಣ ಎಂದೇ ಖ್ಯಾತಿ ಪಡೆದಿದೆ. ಇದರ ಮೇಲೆ ಇಸ್ರೇಲ್‌ ಭೀಕರ ದಾಳಿ ನಡೆಸಿದ ಕಾರಣ 71 ಮಂದಿ ಮೃತಪಟ್ಟರೆ, 289 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರೂ ನಾಗರಿಕರು ಎಂದು ಗಾಜಾ ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ. ಹಾಗೆಯೇ, ಗಾಜಾ ನಗರದ ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿಯನ್ನು ತೀವ್ರವಾಗಿ ಖಂಡಿಸಿದೆ.

ಇಸ್ರೇಲ್‌ ಮೇಲೆ ನಿರಂತರವಾಗಿ ದಾಳಿಗೆ ಪಿತೂರಿ ನಡೆಸುವ, 2023ರ ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ದಾಳಿ ನಡೆಸುವ ಯೋಜನೆಯ ರೂವಾರಿ ಎನಿಸಿರುವ ಮೊಹಮ್ಮದ್‌ ಡೈಫ್‌ ಹತ್ಯೆಗಾಗಿ ಹಲವು ವರ್ಷಗಳಿಂದಲೂ ಇಸ್ರೇಲ್‌ ಗುಪ್ತಚರ ಇಲಾಖೆಯು ಪ್ಲಾನ್‌ ಮಾಡಿತ್ತು ಎಂದು ಹೇಳಲಾಗುತ್ತಿದೆ. ಖಾನ್‌ ಯೌನಿಸ್‌ ಪ್ರದೇಶದಲ್ಲಿ ಮೊಹಮ್ಮದ್‌ ಡೈಫ್‌ ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್‌ ಯೋಧರು ದಾಳಿಯ ಮೂಲಕ ಆತನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿ 1,200 ನಾಗರಿಕರ ಸಾವಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಇಸ್ರೇಲ್, ಗಾಜಾಪಟ್ಟಿಯಲ್ಲಿನ ಹಮಾಸ್ ಉಗ್ರರನ್ನು ನಾಶ ಮಾಡುವ ಪಣತೊಟ್ಟು, ಸೇನಾ ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡಿದೆ. ಗಾಜಾ ನಗರದ ಮೇಲೆ ಇಸ್ರೇಲ್‌ ನಡೆಸುತ್ತಿರುವ ನಿರಂತರ ದಾಳಿಗಳಿಂದಾಗಿ ಸಾವಿರಾರು ಜನ ಮೃತಪಟ್ಟಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಸಾವಿರಾರು ಕಟ್ಟಡಗಳು ಧರೆಗುರುಳಿವೆ. ಇಷ್ಟಾದರೂ ಇಸ್ರೇಲ್‌ ಪ್ರತಿದಾಳಿ ನಿಲ್ಲಿಸುತ್ತಿಲ್ಲ.

ಇದನ್ನೂ ಓದಿ: Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Continue Reading

ವಾಣಿಜ್ಯ

Anant Radhika Wedding: ಅನಂತ್ – ರಾಧಿಕಾ ವಿವಾಹದಂತೆ ಅದ್ಧೂರಿಯಾಗಿ ನಡೆದಿತ್ತು ಈ ಐದು ಮದುವೆಗಳು

ಸುಮಾರು 5000- 6000 ಕೋಟಿ ರೂಪಾಯಿ ಖರ್ಚು ಮಾಡಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ (Anant Radhika Wedding) ಅದ್ದೂರಿಯಾಗಿ ನೆರವೇರಿದೆ. ಅಂತೆಯೇ ವಿಶ್ವದ 5 ವಿವಾಹ ಕಾರ್ಯಕ್ರಮಗಳನ್ನು ಅತ್ಯಂತ ದುಬಾರಿ ವಿವಾಹಗಳು ಎಂದೇ ಪರಿಗಣಿಸಲಾಗಿದೆ. ಯಾರ ಮದುವೆ ಎಷ್ಟು ವೆಚ್ಚದಲ್ಲಿ ನಡೆದಿತ್ತು ಎಂಬುದರ ವಿವರ ಇಲ್ಲಿದೆ.

VISTARANEWS.COM


on

By

Anant Radhika Wedding
Koo

ಏಷ್ಯಾದ ಬಿಲಿಯನೇರ್ ಉದ್ಯಮಿ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹ (Anant Radhika Wedding) ಈಗ ವಿಶ್ವದ ಗಮನ ಸೆಳೆದಿದೆ. ಅಂತೆಯೇ ಈ ಹಿಂದೆ ವಿಶ್ವದ ಗಮನ ಸೆಳೆದ ಐದು ಪ್ರಮುಖ ಅದ್ದೂರಿ ಮದುವೆಗಳು ಯಾರದ್ದು, ಹೇಗಿತ್ತು ಗೊತ್ತೇ?

ಸುಮಾರು 5000- 6000 ಕೋಟಿ ರೂಪಾಯಿ ಖರ್ಚು ಮಾಡಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಭರ್ಜರಿಯಾಗಿ ನೆರವೇರಿದೆ. ಅಂತೆಯೇ ವಿಶ್ವದ 5 ವಿವಾಹ ಕಾರ್ಯಕ್ರಮಗಳನ್ನು ಅತ್ಯಂತ ದುಬಾರಿ ವಿವಾಹಗಳು ಎಂದೇ ಪರಿಗಣಿಸಲಾಗಿದೆ.


1. ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್

1979ರಲ್ಲಿ ರಾಜಕುಮಾರಿ ಸಲಾಮಾ ಅವರನ್ನು ವಿವಾಹವಾದ ದುಬೈನ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಮ್ಮ ಮದುವೆಗಾಗಿ 137 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 11,44,21,50,950 ರೂಪಾಯಿ ಖರ್ಚು ಮಾಡಿದ್ದರು. ಮದುವೆಯು ಐದು ದಿನಗಳ ಕಾಲ ನಡೆಯಿತು. ಈ ಸಮಾರಂಭದಲ್ಲಿ ವಧುವಿಗೆ ಮದುವೆಯ ಉಡುಗೊರೆಗಳಾಗಿ 20 ಬೆಜೆವೆಲ್ಡ್ ಒಂಟೆಗಳನ್ನು ನೀಡಲಾಯಿತು. ಈ ಮದುವೆಯು ಅತ್ಯಂತ ದುಬಾರಿ ವಿವಾಹಕ್ಕಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಪಡೆದಿದೆ.


2. ಮೊನಾಕೊದ ಪ್ರಿನ್ಸ್ ಆಲ್ಬರ್ಟ್ II

ಮೊನಾಕೊದ ಪ್ರಿನ್ಸ್ ಆಲ್ಬರ್ಟ್ II ಮತ್ತು ಚಾರ್ಲೀನ್ ವಿಟ್‌ಸ್ಟಾಕ್ 2011ರಲ್ಲಿ ವಿವಾಹವಾಗಿದ್ದು, ಈ ರಾಜಮನೆತನದ ವಿವಾಹವು ಬಹು ದಿನಗಳ ಆಚರಣೆಗಳನ್ನು ಒಳಗೊಂಡಿತ್ತು. ಇದು ಪ್ರಿನ್ಸ್ ಅರಮನೆಯಲ್ಲಿ ನಡೆದ ಸಮಾರಂಭ. ಮೊನಾಕೊದಲ್ಲಿ ಗಣ್ಯರು ಮತ್ತು ಪ್ರಸಿದ್ಧ ವ್ಯಕ್ತಿಗಳಿಗೆ ಅದ್ದೂರಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ಈ ಮದುವೆಗಾಗಿ 70 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 5,847,779,000 ರೂ. ಗಳನ್ನು ಖರ್ಚು ಮಾಡಲಾಗಿತ್ತು.


3. ವನಿಶಾ ಮಿತ್ತಲ್

ಉಕ್ಕಿನ ಉದ್ಯಮಿ ಲಕ್ಷ್ಮಿ ಮಿತ್ತಲ್ ಅವರ ಮಗಳು ವನಿಶಾ ಮಿತ್ತಲ್ ಅವರು ಅಮಿತ್ ಭಾಟಿಯಾ ಅವರೊಂದಿಗೆ
2004ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಐಷಾರಾಮಿ ವಸತಿ ಮತ್ತು ಸಾಂಪ್ರದಾಯಿಕ ಆಚರಣೆಗಳಿಂದ ಗುರುತಿಸಲ್ಪಟ್ಟ ಈ ವಿವಾಹಕ್ಕೆ 66 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 5,512,392,006 ರೂ. ವೆಚ್ಚವಾಗಿತ್ತು.


4. ಪ್ರಿನ್ಸ್ ಚಾರ್ಲ್ಸ್

ಪ್ರಿನ್ಸ್ ಚಾರ್ಲ್ಸ್ ಮತ್ತು ಪ್ರಿನ್ಸೆಸ್ ಡಯಾನಾ 1981ರಲ್ಲಿ ವಿವಾಹವಾಗಿದ್ದು, ಇವರ ವಿವಾಹವು ಅತ್ಯಂತ ಸಾಂಪ್ರದಾಯಿಕ ಮತ್ತು ದುಬಾರಿ ವಿವಾಹಗಳಲ್ಲಿ ಒಂದಾಗಿದೆ. ಸೇಂಟ್ ಪಾಲ್ಸ್ ಕ್ಯಾಥೆಡ್ರಲ್‌ನಲ್ಲಿ ನಡೆದ ಈ ಮದುವೆಗೆ 750 ಮಿಲಿಯನ್ ಜನರು ಸಾಕ್ಷಿಯಾಗಿದ್ದರು. 48 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 4,007,368,656 ರೂಪಾಯಿ ವೆಚ್ಚವಾಗಿದೆ.

ಇದನ್ನೂ ಓದಿ: Anant Radhika Wedding: ಅನಂತ್ ರಾಧಿಕಾ ಮದುವೆಯಲ್ಲಿ 160 ವರ್ಷಗಳ ಹಿಂದಿನ ಸೀರೆ ಧರಿಸಿ ಮಿಂಚಿದ ಅಲಿಯಾ


5. ಪ್ರಿನ್ಸ್ ವಿಲಿಯಂ

ಪ್ರಿನ್ಸ್ ವಿಲಿಯಂ ಮತ್ತು ಕೇಟ್ ಮಿಡಲ್‌ಟನ್ 2011ರಲ್ಲಿ ವಿವಾಹವಾಗಿದ್ದು, ಅವರ ಹೆತ್ತವರ ಮದುವೆಗಿಂತ ಕಡಿಮೆ ಅತಿರಂಜಿತವಾಗಿದ್ದರೂ ಕೇಂಬ್ರಿಡ್ಜ್‌ನ ಡ್ಯೂಕ್ ಮತ್ತು ಡಚೆಸ್ ಸಂಪ್ರದಾಯದ ವಿವಾಹಗಳು ಜಾಗತಿಕವಾಗಿ ದೂರದರ್ಶನದಲ್ಲಿ ಪ್ರಸಾರ ಮಾಡಲಾಗಿತ್ತು. ಬಕಿಂಗ್ ಹ್ಯಾಮ್ ಅರಮನೆಯಲ್ಲಿ ಅದ್ದೂರಿ ಮೆರವಣಿಗೆ ಮತ್ತು ವಿಶೇಷ ಅತಿಥಿ ಸತ್ಕಾರ ಕಾರ್ಯಕ್ರಮವನ್ನು ಒಳಗೊಂಡಿತ್ತು. 34 ಮಿಲಿಯನ್ ಡಾಲರ್ ಅಂದರೆ ಸರಿಸುಮಾರು 2,838,056,500 ರೂಪಾಯಿ ಖರ್ಚಾಗಿತ್ತು.

Continue Reading

ದೇಶ

Ajit Doval: ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಸುಲ್ಲಿವಾನ್ ಜತೆ ಭಾರತದ ಅಜಿತ್ ದೋವಲ್ ಚರ್ಚೆ; ಜಾಗತಿಕ ಶಾಂತಿಗಾಗಿ ಮಾತುಕತೆ

Ajit Doval: ಪ್ರಧಾನಿ ನರೇಂದ್ರ ಮೋದಿ ಅವರ ರಷ್ಯಾ ಭೇಟಿಯ ನಂತರ ಭಾರತ-ಅಮೆರಿಕ ಸಂಬಂಧಗಳಲ್ಲಿ ಬಿರುಕು ಮೂಡಲಾರಂಭಿಸಿದೆ ಎನ್ನುವ ವದಂತಿಗಳ ಮಧ್ಯೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.

VISTARANEWS.COM


on

Ajit Doval
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ರಷ್ಯಾ ಭೇಟಿಯ ನಂತರ ಭಾರತ-ಅಮೆರಿಕ ಸಂಬಂಧಗಳಲ್ಲಿ ಬಿರುಕು ಮೂಡಲಾರಂಭಿಸಿದೆ ಎನ್ನುವ ವದಂತಿಗಳ ಮಧ್ಯೆ ರಾಷ್ಟ್ರೀಯ ಭದ್ರತಾ ಸಲಹೆಗಾರ (National Security Advisor) ಅಜಿತ್ ದೋವಲ್ (Ajit Doval) ಶುಕ್ರವಾರ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ (Jake Sullivan) ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.

ಶಾಂತಿ ಮತ್ತು ಭದ್ರತೆಗೆ ಸಂಬಂಧಿಸಿದ ಜಾಗತಿಕ ಸವಾಲುಗಳನ್ನು ಎದುರಿಸಲು ಮತ್ತು ಭಾರತ-ಅಮೆರಿಕ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ವಿಸ್ತರಿಸಲು ಒಟ್ಟಾಗಿ ಕೆಲಸ ಮಾಡುವ ಅಗತ್ಯವನ್ನು ದೋವಲ್ ಮತ್ತು ಸುಲ್ಲಿವಾನ್ ಪುನರುಚ್ಚರಿಸಿದರು ಎಂದು ವಿದೇಶಾಂಗ ಸಚಿವಾಲಯ (MEA) ತಿಳಿಸಿದೆ.

ಸಾಮಾನ್ಯ ಕಾರ್ಯತಂತ್ರ ಮತ್ತು ಭದ್ರತಾ ಹಿತಾಸಕ್ತಿಗಳ ಮೇಲೆ ಭಾರತ-ಅಮೆರಿಕ ಸಂಬಂಧ ಮತ್ತಷ್ಟು ದೃಢವಾಗುವಂತಾಗಲು ನಿಕಟವಾಗಿ ಕೆಲಸ ಮಾಡಲು ಎರಡೂ ಕಡೆಯ ರಾಷ್ಟ್ರೀಯ ಭದ್ರತಾ ಸಲಹೆಗಾರರು ಒಪ್ಪಿಕೊಂಡಿದ್ದಾರೆ ಎಂದು ಎಂಇಎ ಹೇಳಿದೆ.

“ಅವರು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಕಾಳಜಿಯ ವ್ಯಾಪಕ ಶ್ರೇಣಿಯ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು” ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ. ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ (Eric Garcetti) ಅವರು ರಷ್ಯಾದೊಂದಿಗಿನ ಭಾರತದ ಸಂಬಂಧವನ್ನು ಟೀಕಿಸಿದ ಒಂದು ದಿನದ ನಂತರ ಈ ದೂರವಾಣಿ ಸಂಭಾಷಣೆ ನಡೆದಿದೆ.

ದೆಹಲಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಾರ್ಸೆಟ್ಟಿ, ಇತರ ದೇಶಗಳು ನಿಯಮ ಮೀರಿದಾಗ ಭಾರತ ಮತ್ತು ಅಮೆರಿಕ ಪ್ರಜಾಪ್ರಭುತ್ವ ತತ್ವಗಳನ್ನು ಎತ್ತಿಹಿಡಿಯಬೇಕು ಎಂದು ಹೇಳಿದ್ದರು. “ಭಾರತವು ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ಇಷ್ಟಪಡುತ್ತದೆ ಎಂದು ನನಗೆ ಗೊತ್ತು. ಇದನ್ನು ನಾನು ಗೌರವಿಸುತ್ತೇನೆ. ಆದರೆ ಸಂಘರ್ಷದ ಸಮಯದಲ್ಲಿ ಇದಕ್ಕೆ ಪ್ರಸಕ್ತಿ ಇಲ್ಲ. ಹೀಗಾಗಿ ಬಿಕ್ಕಟ್ಟಿನ ವೇಳೆ ನಾವು ಪರಸ್ಪರ ತಿಳಿದುಕೊಳ್ಳಬೇಕು. ನಾವು ವಿಶ್ವಾಸಾರ್ಹ ಸ್ನೇಹಿತರು, ಸಹೋದರರು ಮತ್ತು ಸಹೋದರಿಯರು, ಸಹೋದ್ಯೋಗಿಗಳು ಎಂದು ತಿಳಿದುಕೊಳ್ಳಬೇಕು” ಎಂದು ಗಾರ್ಸೆಟ್ಟಿ ಪ್ರಧಾನಿ ಮೋದಿ ಅವರ ರಷ್ಯಾ ಪ್ರವಾಸವನ್ನು ಉಲ್ಲೇಖಿಸಲದೆ ಮಾತನಾಡಿದ್ದರು.

ಉಕ್ರೇನ್ ಮೇಲೆ ರಷ್ಯಾದ ಆಕ್ರಮಣವನ್ನು ಸ್ಪಷ್ಟವಾಗಿ ಉಲ್ಲೇಖಿಸಿದ ಅಮೆರಿಕ ರಾಯಭಾರಿ ಗಾರ್ಸೆಟ್ಟಿ ಯುದ್ಧ ದೂರವಿಲ್ಲ ಎಂದು ಹೇಳಿದ್ದರು. “ಯಾವುದೇ ಯುದ್ಧವು ಇನ್ನು ಮುಂದೆ ದೂರವಿಲ್ಲ ಮತ್ತು ನಾವು ಶಾಂತಿಗಾಗಿ ಶ್ರಮಿಸುವ ಜತೆಗೆ ಶಾಂತಿಯುತ ನಿಯಮಗಳ ಪಾಲಿಸದ, ಯುದ್ಧ ಮುಂದಾಗುವವರನ್ನು ಖಂಡಿಸಲು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಅವರು ಕರೆ ನೀಡಿದ್ದರು. ಜತೆಗೆ ಗಡಿಗಳ ನಿಯಮವನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಒತ್ತಿ ಹೇಳಿದ್ದರು. “ಗಡಿಗಳು ಎಷ್ಟು ಮುಖ್ಯ ಎಂದು ನಾನು ಭಾರತಕ್ಕೆ ನೆನಪಿಸುವ ಅಗತ್ಯವಿಲ್ಲ. ನಾವು ಒಟ್ಟಾಗಿ ನಿಂತಾಗ ನಮ್ಮ ಪ್ರದೇಶದ ಭದ್ರತೆ ಮತ್ತು ಸ್ಥಿರತೆಯನ್ನು ಹೆಚ್ಚಿಸಬಹುದು” ಎಂದು ಅವರು ತಿಳಿಸಿದ್ದರು.

ಇದನ್ನೂ ಓದಿ: Ajit Doval: ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್‌ ದೋವಲ್‌ 3ನೇ ಅವಧಿಗೆ ನೇಮಕ; ಉಗ್ರರಿಗೆ ನಡುಕ

ಆ ವಾರದ ಆರಂಭದಲ್ಲಿ ಪ್ರಧಾನಿ ಮೋದಿ ರಷ್ಯಾ ಮತ್ತು ಆಸ್ಟ್ರಿಯಾ ಪ್ರವಾಸ ಕೈಗೊಂಡಿದ್ದರು. ಹೀಗಾಗಿ ಗಾರ್ಸೆಟ್ಟಿ ಈ ಅಂಶಗಳನ್ನು ಉಲ್ಲೇಖಿಸಿದ್ದರು ಎಂದು ವಿಶ್ಲೇಷಿಸಲಾಗುತ್ತಿದೆ.

Continue Reading

ವಿದೇಶ

Joe Biden: ಜೋ ಬೈಡೆನ್‌ ಮತ್ತೊಂದು ಎಡವಟ್ಟು; ಜೆಲೆನ್‌ಸ್ಕಿ ಬದಲು ಪುಟಿನ್‌ ಹೆಸರು ಹೇಳಿ ಪ್ರಮಾದ!

Joe Biden: ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್‌ಸ್ಕಿ ಅವರನ್ನು ವೇದಿಕೆಗೆ ಆಹ್ವಾನಿಸುವ ವೇಳೆ ಜೋ ಬೈಡೆನ್‌ ಅವರು ಅವರು ಪ್ರೆಸಿಡೆಂಟ್‌ ಪುಡಿನ್‌ ಅವರಿಗೆ ಸ್ವಾಗತ ಎಂದು ಹೇಳಿದ್ದು ಪ್ರಮಾದಕ್ಕೆ ಕಾರಣವಾಯಿತು. ಕೂಡಲೇ ಅವರು ಪ್ರಮಾದವನ್ನು ಸರಿಪಡಿಸಿಕೊಂಡರು. ವೇದಿಕೆ ಮೇಲೆಯೇ ಇದ್ದ ವೊಲೊಡಿಮಿರ್‌ ಜೆಲೆನ್‌ಸ್ಕಿ ಅವರು ಜೋ ಬೈಡೆನ್‌ ಪ್ರಮಾದದಿಂದ ನಕ್ಕು, ಮಾತನಾಡಿದರು.

VISTARANEWS.COM


on

Joe Biden
Koo

ವಾಷಿಂಗ್ಟನ್:‌ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ (US Presidential Election 2024) ದಿನಗಣನೆ ಆರಂಭವಾಗಿದೆ. ಜೋ ಬೈಡೆನ್‌ ಅವರು ಎರಡನೇ ಅವಧಿಗೆ ಸ್ಪರ್ಧಿಸಲು ಮುಂದಾಗಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ ಇತ್ತೀಚೆಗೆ, 81 ವರ್ಷದ ಜೋ ಬೈಡೆನ್‌ (Joe Biden) ಅವರು ಹೆಚ್ಚು ಮರೆಯುತ್ತಿರುವುದು, ವೇದಿಕೆ ಮೇಲೆ ಒಬ್ಬರ ಹೆಸರಿನ ಬದಲಾಗಿ ಮತ್ತೊಬ್ಬರ ಹೆಸರು ಕರೆಯುವುದು ಸೇರಿ ಹಲವು ರೀತಿಯ ಪ್ರಮಾದಗಳು ಅವರನ್ನು ಪೇಚಿಗೆ ಸಿಲುಕಿಸುತ್ತಿವೆ. ಇದರ ಬೆನ್ನಲ್ಲೇ ಅವರು, ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್‌ಸ್ಕಿ (Volodymyr Zelenskyy) ಬದಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಅವರ ಹೆಸರನ್ನು ಕರೆದು ಮುಜುಗರ ಅನುಭವಿಸಿದ್ದಾರೆ.

ಇತ್ತೀಚೆಗೆ ನ್ಯಾಟೋ ಶೃಂಗಸಭೆ ನಡೆದಿದ್ದು, ಜಾಗತಿಕ ನಾಯಕರು ಭಾಗವಹಿಸಿದ್ದರು. ವೇದಿಕೆ ಮೇಲೆ ಭಾಷಣ ಮಾಡಿದ ಜೋ ಬೈಡೆನ್‌ ಅವರು ವೊಲೊಡಿಮಿರ್‌ ಜೆಲೆನ್‌ಸ್ಕಿ ಅವರನ್ನು ಸ್ವಾಗತಿಸಬೇಕಿತ್ತು. “ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್‌ಸ್ಕಿ ಅವರು ತುಂಬ ಧೈರ್ಯಶಾಲಿ” ಎಂದು ಇದೇ ವೇಳೆ ಬೈಡೆನ್‌ ಬಣ್ಣಿಸಿದರು. ಆದರೆ, ವೇದಿಕೆಗೆ ಆಹ್ವಾನಿಸುವ ವೇಳೆ ಅವರು ಪ್ರೆಸಿಡೆಂಟ್‌ ಪುಡಿನ್‌ ಅವರಿಗೆ ಸ್ವಾಗತ ಎಂದು ಹೇಳಿದ್ದು ಪ್ರಮಾದಕ್ಕೆ ಕಾರಣವಾಯಿತು. ಕೂಡಲೇ ಅವರು ಪ್ರಮಾದವನ್ನು ಸರಿಪಡಿಸಿಕೊಂಡರು. ವೇದಿಕೆ ಮೇಲೆಯೇ ಇದ್ದ ವೊಲೊಡಿಮಿರ್‌ ಜೆಲೆನ್‌ಸ್ಕಿ ಅವರು ಜೋ ಬೈಡೆನ್‌ ಪ್ರಮಾದದಿಂದ ನಕ್ಕು, ಮಾತನಾಡಿದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಕಮಲಾ ಹ್ಯಾರಿಸ್‌ ಬದಲು ಟ್ರಂಪ್‌ ಹೆಸರು ಉಲ್ಲೇಖ

ಕಮಲಾ ಹ್ಯಾರಿಸ್‌ ಅವರ ಹೆಸರು ಪ್ರಸ್ತಾಪಿಸುವ ವೇಳೆಯೂ ಜೋ ಬೈಡೆನ್‌ ನಗೆಪಾಟಲಿಗೀಡಾಗಿದ್ದಾರೆ. ವಾಷಿಂಗ್ಟನ್‌ನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುವಾಗ, ಉಪಾಧ್ಯಕ್ಷೆ ಕಮಲಾ ಹ್ಯಾರೀಸ್‌ ಹೆಸರಿಗೆ ಬದಲಾಗಿ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೆಸರು ಪ್ರಸ್ತಾಪಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಬೈಡೆನ್‌, ಕಮಲಾ ಹ್ಯಾರೀಸ್‌ ಪರ ಪ್ರಚಾರ ಮಾಡಿದರು. ಈ ವೇಳೆ ಮಾತನಾಡುತ್ತಾ ಉಪಾಧ್ಯಕ್ಷ ಟ್ರಂಪ್‌ ಅವರು ಅಧ್ಯಕ್ಷರಾಗಲು ಅರ್ಹರಲ್ಲ ಎಂದು ನಾನು ಭಾವಿಸದಿದ್ದರೆ ನಾನು ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡುತ್ತಿರಲಿಲ್ಲ ಎಂದು ಹೇಳಿದ್ದಾರೆ. ತಕ್ಷಣ ಪತ್ರಕರ್ತರೊಬ್ಬರು ಈ ತಪ್ಪನ್ನು ಪ್ರಸ್ತಾಪಿಸಿದಾಗ ಅದನ್ನು ಏನೂ ಮಾತನಾಡದೇ ಸುಮ್ಮನೆ ನಗಾಡಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದಿಂದ ಸತತ ಎರಡನೇ ಅವಧಿಗೆ ಆಯ್ಕೆ ಬಯಸಿರುವ ಹಾಲಿ ಅಧ್ಯಕ್ಷ ಜೋ ಬೈಡನ್ ಅವರಿಗೆ ಒಂದರ ಹಿಂದೊಂದರಂತೆ ಅಡೆತಡೆಗಳು ಎದುರಾಗುತ್ತಿವೆ. ಸ್ವಪಕ್ಷದಲ್ಲಿಯೇ ಬೈಡನ್ ಸ್ಪರ್ಧೆಗೆ ವಿರೋಧ ವ್ಯಕ್ತವಾಗುತ್ತಿದೆ. ಡೆಮಾಕ್ರಟಿಕ್ ಪಕ್ಷದ ಮುಂಚೂಣಿ ದೇಣಿಗೆದಾರರಲ್ಲಿ ಒಬ್ಬರಾದ ನಟ ಜಾರ್ಜ್ ಕ್ಲೂನಿ, ಚುನಾವಣೆಯಿಂದ ಹಿಂದೆ ಸರಿಯುವಂತೆ ಬೈಡನ್‌ಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: US Presidential Election: ಬಹಿರಂಗ ಚರ್ಚೆ ಬಳಿಕ ಅಭ್ಯರ್ಥಿಯ ಬದಲಾವಣೆ? ಬೈಡೆನ್‌ ಬದಲಿಗೆ ಮಿಶೆಲ್‌ ಒಬಾಮಾ ಕಣಕ್ಕೆ?

Continue Reading
Advertisement
Bypoll Results
ದೇಶ50 seconds ago

Bypoll Results: ಉಪ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ; 13ರ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟಕ್ಕೆ ಜಯ!

MS Dhoni
ಪ್ರಮುಖ ಸುದ್ದಿ2 mins ago

MS Dhoni : ಅಂಬಾನಿ ಪುತ್ರನ ಮದುವೆಯಲ್ಲಿ ಬಿಂದಾಸ್​ ​ ಡಾನ್ಸ್ ಮಾಡಿದ ಮಹೇಂದ್ರ ಸಿಂಗ್ ಧೋನಿ

CM Siddaramaiah
ಕರ್ನಾಟಕ20 mins ago

CM Siddaramaiah: ಕೆಪಿಸಿಸಿ ಕಚೇರಿ ಸ್ವಚ್ಛತಾ ಸಿಬ್ಬಂದಿಗೆ ಮನೆ ನೀಡಲು ಸಿಎಂ ಸೂಚನೆ

Israel Hamas War
ವಿದೇಶ27 mins ago

Israel Hamas War: ಗಾಜಾ ಮೇಲೆ ಇಸ್ರೇಲ್‌ ದಾಳಿ; ಹಮಾಸ್‌ ‘ಮಿಲಿಟರಿ ಚೀಫ್’ ಸೇರಿ 71 ಮಂದಿಯ ಹತ್ಯೆ

karnataka Weather Forecast
ಮಳೆ35 mins ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

Healthy Food For Dengue
ಫ್ಯಾಷನ್37 mins ago

Healthy Food For Dengue: ಈ ಆಹಾರಗಳನ್ನು ತಿನ್ನಿ; ಡೆಂಗ್ಯೂಗೆ ಡೋಂಟ್ ಕೇರ್ ಅನ್ನಿ

radioactive material
ದೇಶ1 hour ago

Radioactive Material: ಅಪಾಯಕಾರಿ ರಾಸಾಯನಿಕ ವಸ್ತು ತುಂಬಿದ್ದ ಬಾಕ್ಸ್‌ಗಳು ಪತ್ತೆ; ಐವರು ಅರೆಸ್ಟ್‌

Ambani Wedding Fashion
ಫ್ಯಾಷನ್1 hour ago

Ambani Wedding Fashion: ಅನಂತ್ ಅಂಬಾನಿ ಶೆರ್ವಾನಿ ಬೆಲೆಯೇ 214 ಕೋಟಿ ರೂ! ಹೇಗಿತ್ತು ನೋಡಿ ಅಂಬಾನಿ ಜೋಡಿಯ ವೆಡ್ಡಿಂಗ್ ಫ್ಯಾಷನ್!

Bagalkot news
ಕರ್ನಾಟಕ1 hour ago

Bagalkot News: ಭಕ್ತರಿಗೆ ಭಂಡಾರ ಹಚ್ಚಿ ಕೊಡಲಿ ಏಟು ನೀಡೋ ಪೂಜಾರಿ; ಮೌಢ್ಯ ನಿಷೇಧ ಕಾಯ್ದೆಯಡಿ ಬಂಧನ!

T20 World Cup 2024
ಕ್ರೀಡೆ1 hour ago

T20 World Cup 2024 : ವಿಶ್ವ ಕಪ್ ಆಯೋಜನೆಯಲ್ಲಿ ಐಸಿಸಿಗೆ ಸಿಕ್ಕಾಪಟ್ಟೆ ನಷ್ಟ ​; ತೆರೆಮರೆಯಲ್ಲಿ ಜೋರು ಚರ್ಚೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ35 mins ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ6 hours ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

karnataka Rain Effect
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ4 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

karnataka Rain
ಮಳೆ4 days ago

Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್‌ ಜಡಿದ ಪೊಲೀಸರು!

karnataka weather Forecast
ಮಳೆ5 days ago

Karnataka Weather : 11 ಜಿಲ್ಲೆಗಳಲ್ಲಿ ರಣಮಳೆ; ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌

Rain Effect
ಮಳೆ5 days ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ5 days ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ಟ್ರೆಂಡಿಂಗ್‌