ಒಟ್ಟಾವ: ಕೆನಡಾದಲ್ಲಿದ್ದ ಭಾರತದ ಮೋಸ್ಟ್ ವಾಂಟೆಡ್ ಉಗ್ರ, ಖಲಿಸ್ತಾನಿ ಪರ ಹೋರಾಟಗಾರ (Khalistani Terrorist) ಹರ್ದೀಪ್ ಸಿಂಗ್ ನಿಜ್ಜಾರ್ (Nijjar Killing Case)ನ ಹತ್ಯೆಗೈದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಕೆನಡಾ ಸಂಸತ್ತು ಮಂಗಳವಾರ ಹೌಸ್ ಆಫ್ ಕಾಮನ್ಸ್‌ನಲ್ಲಿ ಒಂದು ನಿಮಿಷ ಮೌನ ಆಚರಿಸಿ ಆತನಿಗೆ ಗೌರವ ಸಲ್ಲಿಸಿದೆ. ಸದ್ಯ ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ (Viral Video).
ಕಳೆದ ವರ್ಷ ಜೂನ್ 18ರಂದು ಕೆನಡಾದ ಸುರ‍್ರೆ ನಗರದಲ್ಲಿ ಹರ್ದೀಪ್ ಸಿಂಗ್ ನಿಜ್ಜಾರ್ ಅಪರಿಚಿತರ ಗುಂಡಿಗೆ ಬಲಿಯಾಗಿದ್ದ. ಈ ಘಟನೆ ನಡೆದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಕೆನಡಾ ಸಂಸತ್ತು ಎದ್ದು ನಿಂತು, ಮೌನ ಆಚರಿಸಿತು. ಈ ಬಗ್ಗೆ ಸ್ಪೀಕರ್ ಗ್ರೆಗ್ ಫರ್ಗುಸ್ ಮಾತನಾಡಿ, “ಒಂದು ವರ್ಷದ ಹಿಂದೆ ಸುರ‍್ರೆ ಹತ್ಯೆಗೀಡಾದ ಹರ್ದೀಪ್ ಸಿಂಗ್ ನಿಜ್ಜರ್ ಅವರ ಸ್ಮರಣಾರ್ಥ ಮೌನ ಆಚರಿಸೋಣʼʼ ಎಂದು ಘೋಷಿಸಿದರು. ಅದರಂತೆ ಎಲ್ಲ ಸದಸ್ಯರು ಎದ್ದು ನಿಂತುಕೊಳ್ಳುವುದು ವಿಡಿಯೊದಲ್ಲಿ ಕಂಡು ಬಂದಿದೆ.
Canada's Parliament marked the one-year anniversary of the killing of Khalistani terrorist Hardeep Singh Nijjar by holding a moment of silence in the House of Commons on Tuesday
— IANS (@ians_india) June 19, 2024
(Video Source – Canadian Parliament Official Website) pic.twitter.com/SGkovpiWXc
ಪ್ರಕರಣದ ಹಿನ್ನೆಲೆ
ಮಾಜಿ ಪ್ರಧಾನಿ ಇಂಧಿರಾ ಗಾಂಧಿ ಅವರ ಹತ್ಯೆಯನ್ನು ಕೆನಡಾದಲ್ಲಿರುವ ಖಲಿಸ್ತಾನಿಗಳು ಸಂಭ್ರಮಾಚರಣೆ ಮಾಡಿದ ಕೆಲವೇ ದಿನಗಳಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್‌ನನ್ನು ಕೆನಡಾದ ಸುರ‍್ರೆ ನಗರದಲ್ಲಿ ಕೊಲೆ ಮಾಡಲಾಗಿತ್ತು. ಪಂಜಾಬಿಗಳೇ ಹೆಚ್ಚಿರುವ ಸುರ‍್ರೆ ನಗರದ ಗುರುನಾನಕ್ ಸಿಖ್ ಗುರುದ್ವಾರದ ಬಳಿಕ ಖಲಿಸ್ತಾನಿ ಉಗ್ರನ ಹತ್ಯೆ ನಡೆದಿತ್ತು. ಪಂಜಾಬ್‌ನಲ್ಲಿ ಅರ್ಚಕರೊಬ್ಬರ ಕೊಲೆಗೆ ಪಿತೂರಿ ನಡೆಸಿರುವುದು, ಮೂಲಭೂತವಾದದ ಪ್ರಸರಣ ಸೇರಿ ನಾಲ್ಕು ಪ್ರಕರಣಗಳಲ್ಲಿ ಎನ್‌ಐಎ ಈತನ ವಿರುದ್ಧ ತನಿಖೆ ನಡೆಸುತ್ತಿದೆ. ಅಲ್ಲದೆ ಈತನ ಕುರಿತು ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಕೂಡ ಎನ್‌ಐಎ ಘೋಷಿಸಿತ್ತು.
ಖಲಿಸ್ತಾನ್ ಟೈಗರ್ ಫೋರ್ಸ್ (KTF) ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ ಈತ ಪ್ರತ್ಯೇಕವಾದಿಗಳಿಗೆ ಹೆಚ್ಚಿನ ನೆರವು ಒದಗಿಸುತ್ತಿದ್ದ. ಭಾರತದಲ್ಲಿ ಹಲವು ಉಗ್ರ ಚಟುವಟಿಕೆಗಳ ಹಿಂದೆ ಈತನ ಕೈವಾಡವಿದೆ. ಕೆನಡಾದಲ್ಲೂ ಸಿಖ್ ಸಮುದಾಯದವರನ್ನು ಎತ್ತಿ ಕಟ್ಟುತ್ತಿದ್ದ. ಹಾಗಾಗಿ ಈತನು ಸೇರಿ ಸುಮಾರು 40 ಉಗ್ರರನ್ನು ಭಾರತವು ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಗೆ ಸೇರಿಸಿತ್ತು. ಇದಕ್ಕೂ ಮೊದಲು ಖಲಿಸ್ತಾನಿ ಉಗ್ರ, ಖಲಿಸ್ತಾನ್ ನಾಯಕ, ಬಂಧಿತ ಅಮೃತ್‌ಪಾಲ್ ಸಿಂಗ್‌ನ ಆಪ್ತ, ಲಂಡನ್‌ನಲ್ಲಿರುವ ಭಾರತದ ಹೈಕಮಿಷನ್ ಕಚೇರಿ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿದ್ದರ ರೂವಾರಿ ಅವತಾರ್ ಸಿಂಗ್ ಖಂಡಾ ಲಂಡನ್‌ನಲ್ಲಿ ಮೃತಪಟ್ಟಿದ್ದ. ಅಮೃತ್‌ಪಾಲ್ ಸಿಂಗ್ ಬಂಧನದ ಬಳಿಕ ಕೆನಡಾದಲ್ಲಿರುವ ಖಲಿಸ್ತಾನಿಗಳು ಇನ್ನಷ್ಟು ತೀವ್ರವಾಗಿ ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದರು.
ಇದನ್ನೂ ಓದಿ: Avtar Khanda Dies: ಬ್ರಿಟನ್‌ನಲ್ಲಿ ಭಾರತದ ತಿರಂಗಾ ಕೆಳಗಿಳಿಸಿದ್ದ ಖಲಿಸ್ತಾನ್ ಉಗ್ರ ಅವತಾರ್ ಖಂಡಾ ಸಾವು
ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯ ಸಂಬಂಧ ಈಗಾಗಲೇ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದೆ. ಭಾರತೀಯ ಮೂಲದ ಕರನ್ ಬ್ರಾರ್ (22), ಕಮಲ್‌ಪ್ರೀತ್ ಸಿಂಗ್ (22), ಕರಣ್‌ಪ್ರೀತ್ ಸಿಂಗ್ (28) ಮತ್ತು ಅಮನ್‌ದೀಪ್ ಸಿಂಗ್ (22) ಬಂಧಿತರು.