Covid 19 In China | ಚೀನಾದಲ್ಲಿ ಲಕ್ಷಾಂತರ ಜನರ ಸಾವು? ʼವಿಸ್ತಾರʼಕ್ಕೆ ಕೊರೊನಾ ಕುರಿತು ಕನ್ನಡಿಗ ನೀಡಿದ ಪ್ರತ್ಯಕ್ಷ ವರದಿ ಇಲ್ಲಿದೆ Vistara News
Connect with us

ಪ್ರಮುಖ ಸುದ್ದಿ

Covid 19 In China | ಚೀನಾದಲ್ಲಿ ಲಕ್ಷಾಂತರ ಜನರ ಸಾವು? ʼವಿಸ್ತಾರʼಕ್ಕೆ ಕೊರೊನಾ ಕುರಿತು ಕನ್ನಡಿಗ ನೀಡಿದ ಪ್ರತ್ಯಕ್ಷ ವರದಿ ಇಲ್ಲಿದೆ

ದಕ್ಷಿಣ ಚೀನಾದಲ್ಲಿ ಮೆಡಿಕಲ್‌ ಓದುತ್ತಿರುವ ತುಮಕೂರಿನ ಸಾಹಿಲ್‌ ಅವರು ಕಮ್ಯುನಿಸ್ಟ್‌ ರಾಷ್ಟ್ರದಲ್ಲಿ ಕೊರೊನಾ (Covid 19 In China) ಪರಿಸ್ಥಿತಿ ಹೇಗಿದೆ ಎಂಬುದರ ನಿಖರ ಮಾಹಿತಿಯನ್ನು ‘ವಿಸ್ತಾರ ನ್ಯೂಸ್‌’ ಜತೆ ಹಂಚಿಕೊಂಡಿದ್ದಾರೆ.

VISTARANEWS.COM


on

Coronavirus In China
Koo

ಬೀಜಿಂಗ್:‌ ಚೀನಾದಲ್ಲಿ ಕೊರೊನಾ ಸೋಂಕು (Covid 19 In China) ಉತ್ತುಂಗಕ್ಕೇರಿದೆ. ನಿತ್ಯ ಕೋಟ್ಯಂತರ ಜನರಿಗೆ ಸೋಂಕು ಹರಡುತ್ತಿದೆ. ಲಕ್ಷಾಂತರ ಜನ ಬೀದಿ ಹೆಣವಾಗುತ್ತಿದ್ದಾರೆ ಎಂಬ ವರದಿಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಸೋಂಕಿನ ಕುರಿತು ದಿನನಿತ್ಯ ಮಾಹಿತಿ ನೀಡದಿರಲು ಚೀನಾ ತೀರ್ಮಾನಿಸಿದೆ. ಹಾಗಾಗಿ, ಚೀನಾದಲ್ಲಿ ಕೊರೊನಾ ಪರಿಸ್ಥಿತಿ ಹೇಗಿದೆ ಎಂಬ ಮಾಹಿತಿ ಲಭ್ಯವಾಗುತ್ತಿಲ್ಲ. ಆದರೆ, ಚೀನಾದಲ್ಲಿ ವೈದ್ಯಕೀಯ ಅಧ್ಯಯನ ಮಾಡುತ್ತಿರುವ ಕನ್ನಡಿಗ ಸಾಹಿಲ್‌ ಅವರು ಕಮ್ಯುನಿಸ್ಟ್‌ ರಾಷ್ಟ್ರದಲ್ಲಿರುವ ಸೋಂಕಿನ ತೀವ್ರತೆ ಕುರಿತು ‘ವಿಸ್ತಾರ ನ್ಯೂಸ್‌’ಗೆ ನಿಖರ ಮಾಹಿತಿ ನೀಡಿದ್ದಾರೆ.

ತುಮಕೂರಿನ ಸಾಹಿಲ್‌ ಅವರು ದಕ್ಷಿಣ ಚೀನಾದ ನಾಂಚಾಂಗ್‌ ನಗರದಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಅವರು ವಿಸ್ತಾರ ನ್ಯೂಸ್‌ ಜತೆ ಮಾತನಾಡಿದ್ದು, “ಚೀನಾದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದು. ಇದರಿಂದ ಜನರ ಆರೋಗ್ಯದ ಮೇಲೆ ಗಂಭೀರವಾಗಿ ಪರಿಣಾಮ ಬೀರುತ್ತಿರುವುದು ಹಾಗೂ ಅಧಿಕ ಸಂಖ್ಯೆಯ ಜನ ಮೃತಪಡುತ್ತಿರುವುದು” ಎಂದು ಮಾಹಿತಿ ನೀಡಿದ್ದಾರೆ.

ಕೊರೊನಾ ಹೆಚ್ಚಾಗಲು ಕಾರಣವೇನು?
“ಚೀನಾದಲ್ಲಿ ಇದಕ್ಕೂ ಮೊದಲು ಜೀರೋ ಕೋವಿಡ್‌ ಪಾಲಿಸಿ ಇತ್ತು. ಯಾವುದೇ ಒಂದು ಕಟ್ಟಡದಲ್ಲಿ, ಒಬ್ಬರಿಗೆ ಸೋಂಕು ತಗುಲಿದರೂ ಇಡೀ ಕಟ್ಟಡ ಸೀಲ್‌ಡೌನ್‌ ಮಾಡುತ್ತಿದ್ದರು. ಇದರಿಂದಾಗಿ ಕೊರೊನಾ ನಿಯಂತ್ರಣದಲ್ಲಿತ್ತು. ಆದರೆ, ಕ್ಸಿನ್‌ಜಾಂಗ್‌ ನಗರದಲ್ಲಿ ಕ್ವಾರಂಟೈನ್‌ ಕೇಂದ್ರದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು, 16 ಜನ ಮೃತಪಟ್ಟರು. ಇದಾದ ಬಳಿ, ದೇಶದ ಹಲವೆಡೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆದವು. ಜೀರೋ ಕೋವಿಡ್‌ ನೀತಿ ರದ್ದುಗೊಳಿಸಬೇಕು ಎಂಬ ಆಕ್ರೋಶ ವ್ಯಕ್ತವಾಯಿತು. ಇದರಿಂದಾಗಿ ಸರ್ಕಾರ ನೀತಿಯನ್ನು ರದ್ದುಗೊಳಿಸಿತು. ಹಾಗಾಗಿ, ಕೊರೊನಾ ಹಾವಳಿ ಜಾಸ್ತಿಯಾಗಿದೆ” ಎಂದು ಸಾಹಿಲ್‌ ತಿಳಿಸಿದ್ದಾರೆ.

“ಜೀರೋ ಕೋವಿಡ್‌ ನೀತಿಯು ರದ್ದಾದ ಕಾರಣ ಈಗ ಕ್ವಾರಂಟೈನ್‌, ಲಾಕ್‌ಡೌನ್‌ ಸೇರಿ ಎಲ್ಲ ನಿಯಮಗಳನ್ನು ರದ್ದುಗೊಳಿಸಲಾಗಿದೆ. ಈಗ ಕೊರೊನಾ ದೃಢಪಟ್ಟರೂ ಯಾರು ಕೂಡ ಅವರನ್ನು ಕ್ವಾರಂಟೈನ್‌ನಲ್ಲಿರಿಸುವುದಿಲ್ಲ. ಹಾಗಾಗಿ, ಮನೆಯಿಂದ ಹೊರಗೆ ಕಾಲಿಟ್ಟರೂ ಸೋಂಕು ತಗುಲುತ್ತಿದೆ. ಇದು ಜನರ ಮೇಲೆ ಭಾರಿ ಪರಿಣಾಮ ಬೀರುತ್ತಿದೆ” ಎಂದು ವಿವರಿಸಿದ್ದಾರೆ.

ಹಿರಿಯ ನಾಗರಿಕರ ಸಾವು ಅಧಿಕ
“ಚೀನಾದಲ್ಲಿ ಕೊರೊನಾ ನಿರ್ವಹಣೆ, ವೈದ್ಯಕೀಯ ಮೂಲ ಸೌಕರ್ಯ ಉತ್ತಮವಾಗಿದ್ದರೂ, ಸೋಂಕಿನಿಂದ ಹೆಚ್ಚಿನ ಪ್ರಮಾಣದಲ್ಲಿ ಹಿರಿಯ ನಾಗರಿಕರು ಮೃತಪಡುತ್ತಿದ್ದಾರೆ. ದೇಶದಲ್ಲಿ ಪ್ರತಿಯೊಬ್ಬರೂ ಕೊರೊನಾ ನಿರೋಧಕ ಲಸಿಕೆಯ ಮೂರು ಡೋಸ್‌ಗಳನ್ನು ಪಡೆದಿದ್ದಾರೆ. ಆದರೆ, 60 ವರ್ಷ ದಾಟಿದ ಹಿರಿಯ ನಾಗಿರಕರು ಮೂರನೇ ಡೋಸ್‌ ಪಡೆದಿಲ್ಲ. ಹಾಗಾಗಿಯೇ, ಹೆಚ್ಚಿನ ಪ್ರಮಾಣದಲ್ಲಿ ವೃದ್ಧರು ಸೋಂಕಿಗೆ ಬಲಿಯಾಗುತ್ತಿದ್ದಾರೆ” ಎಂದು ಸಾಹಿಲ್‌ ಹೇಳಿದ್ದಾರೆ.

ಸೋಂಕು ನಿಗ್ರಹದ ಕುರಿತು ಹಲವು ಸಲಹೆ ನೀಡಿದ ಸಾಹಿಲ್‌, “ಕರ್ನಾಟಕದಲ್ಲಿ ವಿಮಾನ ನಿಲ್ದಾಣ, ಬಸ್‌ ನಿಲ್ದಾಣ ಸೇರಿ ಎಲ್ಲ ಒಳಾಂಗಣ ಪ್ರದೇಶದಲ್ಲಿ ಜನ ಮಾಸ್ಕ್‌ ಧರಿಸಬೇಕು ಎಂಬ ನಿಯಮ ಜಾರಿಗೆ ತಂದಿರುವುದು ಉತ್ತಮವಾಗಿದೆ. ಹಾಗೆಯೇ, ವಿಮಾನ ನಿಲ್ದಾಣಗಳಿಗೆ ಬರುವ ವಿದೇಶಿ ಪ್ರಯಾಣಿಕರನ್ನು ಆರ್‌ಟಿ-ಪಿಸಿಆರ್‌ ತಪಾಸಣೆಗೆ ಒಳಪಡಿಸಬೇಕು” ಎಂದು ತಿಳಿಸಿದ್ದಾರೆ.

ಫೆಬ್ರವರಿಯಲ್ಲಿ ಬರಲಿದೆ ಮತ್ತೊಂದು ಅಲೆ
“ಚೀನಾದಲ್ಲಿ ಫೆಬ್ರವರಿಯಲ್ಲಿ ಮತ್ತೊಂದು ಅಲೆ ಬರುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಜನವರಿ ಮಧ್ಯಭಾಗದಲ್ಲಿ ಸೋಂಕು ಉತ್ತುಂಗಕ್ಕೆ ಹೋಗಿ, ಕೊನೆಯ ಭಾಗದಲ್ಲಿ ಇಳಿಕೆಯಾಗಲಿದೆ. ಆದರೆ, ಫೆಬ್ರವರಿ ಮೊದಲ ವಾರದಲ್ಲಿ ಮತ್ತೊಂದು ಅಲೆ ಬಾಧಿಸಲಿದೆ. ಸೋಂಕಿನಿಂದಾಗಿ ಚೀನಾದಲ್ಲಿ ಸಣ್ಣ ಪ್ರಮಾಣದ ಆರ್ಥಿಕ ಬಿಕ್ಕಟ್ಟೂ ಉಂಟಾಗಿದೆ” ಎಂದು ಸಾಹಿಲ್‌ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | China Covid Information | ಕೊರೊನಾ ಸೋಂಕಿತರ ಮಾಹಿತಿ ವಿಚಾರದಲ್ಲಿ ಚೀನಾ ಕಳ್ಳಾಟ, ವರದಿ ನೀಡದಿರಲು ತೀರ್ಮಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಅಂಕಣ

Raja Marga Column : ಮೊದಲು ನಿಮ್ಮ ಹೃದಯವನ್ನು ನೀವು ಪ್ರೀತಿಸಿ, ಬೇರೆಯವರ ಹೃದಯ ಆಮೇಲೆ ನೋಡ್ಕೊಳೋಣ!

Raja Marga Column: ಪ್ರತಿ ದಿನ, ಪ್ರತಿಕ್ಷಣ ಕೆಲಸ ಮಾಡುವ ಹೃದಯಕ್ಕೂ ಒಂದು ದಿನ ಬೇಕು ಅಲ್ವಾ? ಸೆಪ್ಟೆಂಬರ್ 29-ವಿಶ್ವ ಹೃದಯ ದಿನ. ಹೃದಯವನ್ನು ಉಪಯೋಗಿಸಿ, ಹೃದಯವನ್ನು ಅರಿಯಿರಿ ಎನ್ನುವುದು ಈ ವರ್ಷದ ಘೋಷಣೆ. ಜಗತ್ತಿನ ಅತೀ ದೊಡ್ಡ ಕೊಲೆಗಡುಕ ಅಂದರೆ ಅದು ಹೃದಯಾಘಾತ ಅಂತಾರೆ. ಅದನ್ನು ಮೀರುವುದು ಹೇಗೆ ಎಂದರೆ ನಿಮ್ಮ ಹೃದಯವನ್ನು ನೀವೇ ಪ್ರೀತಿಸುವುದರಿಂದ.

VISTARANEWS.COM


on

Edited by

Raja Marga world heart day
Koo
RAJAMARGA

ಸೆಪ್ಟೆಂಬರ್ 29 – ವಿಶ್ವ ಹೃದಯ ದಿನ (World Heart day). ಈದಿನ ಜಗತ್ತಿನಾದ್ಯಂತ ಹೃದಯದ ಆರೋಗ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮಗಳು, ರ‍್ಯಾಲಿಗಳು, ಸಭೆಗಳು, ಸಮಾರಂಭಗಳು ನಡೆಯುತ್ತವೆ. ಜಗತ್ತಿನ 90 ರಾಷ್ಟ್ರಗಳು ಸೆ. 29ರಂದು ಹೃದಯ ದಿನ ಆಚರಿಸುತ್ತವೆ

ಪ್ರತೀ ವರ್ಷವೂ ಹೃದಯ ದಿನಕ್ಕೆ ವಿಶ್ವ ಆರೋಗ್ಯ ಸಂಸ್ಥೆಯು (World Health Organization) ಒಂದು ಘೋಷಣೆಯನ್ನು ಕೊಡುತ್ತಿದ್ದು ಈ ವರ್ಷದ ಘೋಷಣೆಯು – USE HEART, KNOW HEART ಆಗಿದೆ. ಮಾನವನ ಜೀವನದ ಉದ್ದಕ್ಕೂ ಅವಿಶ್ರಾಂತವಾಗಿ ದುಡಿಯುತ್ತ ರಕ್ತವನ್ನು ಪಂಪ್ ಮಾಡುವ ಕೆಲಸವನ್ನು ನಿರಂತರ ಮಾಡುತ್ತಿರುವ ಪುಟ್ಟ ಹೃದಯದ ಬಗ್ಗೆ ನಾವು ತುಂಬಾ ಮಾಹಿತಿ ತಿಳಿದುಕೊಳ್ಳಬೇಕಾದ ಅಗತ್ಯ (Let us Understand our own heart first) ಇದೆ (Raja marga Column).

ಮಿಡಿಯುವ ಪುಟ್ಟ ಹೃದಯ – 21 ಮಾಹಿತಿಗಳು

1. ಪ್ರತೀ ವರ್ಷವೂ ಸೆಪ್ಟೆಂಬರ್ 29ರಂದು ಹೃದಯದ ದಿನವನ್ನು ವಿಶ್ವ ಆರೋಗ್ಯ ಸಂಸ್ಥೆಯು ಆಚರಣೆ ಮಾಡುತ್ತಾ ಬಂದಿದೆ. 2000ನೇ ಇಸವಿಯಿಂದ ಇದು ಜಾರಿಯಲ್ಲಿದೆ.

Sep 29 World heart day

2. ಹೃದಯಾಘಾತವನ್ನು ‘ಜಗತ್ತಿನ ಅತೀ ದೊಡ್ಡ ಕೊಲೆಗಡುಕ’ ಎಂದು ಕರೆಯಲಾಗುತ್ತದೆ. ಏಕೆಂದರೆ ಹೃದಯದ ಆಘಾತ ಮತ್ತು ಹೃದಯದ ಕಾಯಿಲೆಯಿಂದ ಜಗತ್ತಿನಾದ್ಯಂತ ಪ್ರತೀ ವರ್ಷ ಮೃತರಾಗುವ ವ್ಯಕ್ತಿಗಳ ಸಂಖ್ಯೆ 1.7 ಕೋಟಿ ಆಗಿದೆ! ಅಂದರೆ ಮನುಷ್ಯ ಮರಣದ ಒಟ್ಟು ಪ್ರಮಾಣದ 31% ಭಾಗವು ಕೇವಲ ಹೃದಯದ ಸಮಸ್ಯೆಗಳಿಂದ ಉಂಟಾಗುತ್ತಿದೆ.

3. ಮನುಷ್ಯನ ದೇಹದ ಎಲ್ಲ ಭಾಗಗಳೂ ವಿಶ್ರಾಂತಿ ಪಡೆಯುತ್ತವೆ. ಮೆದುಳು ಕೂಡ ವಿಶ್ರಾಂತಿ ಪಡೆಯುತ್ತದೆ. ಆದರೆ ಹೃದಯವು ಒಂದರ್ಧ ಕ್ಷಣ ಕೂಡ ವಿಶ್ರಾಂತಿ ಪಡೆಯುವುದೇ ಇಲ್ಲ. ಮುಷ್ಕರವನ್ನು ಕೂಡ ಮಾಡುವುದಿಲ್ಲ. ಹೃದಯವು ಹಗಲು ರಾತ್ರಿ ಏಕ ರೀತಿಯಲ್ಲಿ ಕೆಲಸ ಮಾಡುತ್ತದೆ.

World heart day

4. ಇದುವರೆಗೆ ವಿಜ್ಞಾನಿಗಳಿಗೆ ಹೃದಯಾಘಾತಕ್ಕೆ ಸರಿಯಾದ ಕಾರಣವನ್ನು ಸಂಶೋಧನೆ ಮಾಡಲು ಸಾಧ್ಯವೇ ಆಗಲಿಲ್ಲ. ಆನುವಂಶೀಯ ಕಾರಣಗಳು ಇವೆ. ಆದರೆ ಅದಕ್ಕೂ ಪುರಾವೆ ಇಲ್ಲ.

5. ಹೃದಯದ ಭದ್ರತೆಗೆ ನಾಲ್ಕು ರಕ್ಷಣಾ ಕವಚಗಳು ಇವೆ. ಆದರೂ ಮಾನವ ಹೃದಯವು ಯಾವಾಗ ಬೇಕಾದರೂ ಸ್ತಬ್ಧ ಆಗಬಹುದು.

6. ಪುರುಷರ ಹೃದಯಕ್ಕಿಂತ ಸ್ತ್ರೀಯರ ಹೃದಯವು ಸ್ವಲ್ಪ ಕಡಿಮೆ ತೂಕ ಇರುತ್ತದೆ. ಆರೋಗ್ಯಪೂರ್ಣ ಪುರುಷರ ಹೃದಯದ ತೂಕ ಸರಾಸರಿ 280-340 ಗ್ರಾಂ ಇದ್ದರೆ ಸ್ತ್ರೀಯರ ಹೃದಯದ ತೂಕವು 230- 280 ಗ್ರಾಂ.

world heart day

7. ಪುರುಷರಲ್ಲಿ ಹೋಲಿಸಿದರೆ ಮಹಿಳೆಯರಲ್ಲಿ ಹೃದಯಾಘಾತದ ಪ್ರಮಾಣ ಕೊಂಚ ಕಡಿಮೆ ಇದೆ.
(ಮಹಿಳೆಯರಲ್ಲಿ ಹೃದಯವೇ ಇರುವುದಿಲ್ಲ ಎಂದು ಹಾಸ್ಯ ಸಾಹಿತಿ ಬೀಚಿ ಒಮ್ಮೆ ಹೇಳಿದ್ದು ತಮಾಷೆಗೆ ಆಯ್ತಾ!)

8. ಮನುಷ್ಯನ ಹೃದಯಾಘಾತಕ್ಕೆ ಯಾವುದೇ ವಯಸ್ಸಿನ ಸಮೀಕರಣ ಇಲ್ಲ. ಇತ್ತೀಚಿನ ವರ್ಷಗಳಲ್ಲಿ ಸಣ್ಣ ಮಕ್ಕಳಲ್ಲಿ ಕೂಡ ಹೃದಯಾಘಾತಗಳು ಹೆಚ್ಚುತ್ತಿವೆ.

9. ವಾಯು ಮಾಲಿನ್ಯದ ಕಾರಣಕ್ಕೆ ಹೆಚ್ಚು ಹೃದಯಾಘಾತಗಳು ನಡೆಯುತ್ತವೆ ಎಂದು ಸಂಶೋಧನೆಗಳು ಹೇಳಿವೆ. ಒಟ್ಟು ಹೃದಯಾಘಾತಗಳಲ್ಲಿ 25% ಆಘಾತಗಳು ವಾಯು ಮಾಲಿನ್ಯದ ಕಾರಣಕ್ಕೆ ಆಗುತ್ತಿವೆ.

world heart day sep 29

10. ಆರೋಗ್ಯವಂತ ಮನುಷ್ಯನ ದೇಹದಲ್ಲಿ ಇರುವ ರಕ್ತದ ಪ್ರಮಾಣ ಐದರಿಂದ ಐದೂವರೆ ಲೀಟರ್. ಆದರೆ ಹೃದಯವು ದಿನಕ್ಕೆ 6000-7500 ಲೀಟರ್ ರಕ್ತವನ್ನು ಪಂಪ್ ಮಾಡುತ್ತದೆ ಅಂದರೆ ನಂಬಲೇ ಬೇಕು! ಒಮ್ಮೆ ಎದೆಯ ಬಡಿತ ಉಂಟಾದಾಗ ರಕ್ತವು ನಮ್ಮ ಇಡೀ ದೇಹವನ್ನು ತಲುಪುತ್ತದೆ.

11. ಆರೋಗ್ಯಪೂರ್ಣ ವ್ಯಕ್ತಿಯ ಹೃದಯವು ನಿಮಿಷಕ್ಕೆ 60-100 ಬಾರಿ ಲಬ್ ಡಬ್ ಎಂದು ಬಡಿಯುತ್ತದೆ. ನವಜಾತ ಶಿಶುಗಳಲ್ಲಿ ಇದು ಕೊಂಚ ಜಾಸ್ತಿ.

12. ಹೃದಯಕ್ಕೆ ಕನೆಕ್ಟ್ ಆದ ರಕ್ತನಾಳಗಳು ಬ್ಲಾಕ್ ಆಗುವ ಕಾರಣ ಹೆಚ್ಚು ಹೃದಯಾಘಾತಗಳು ನಡೆಯುತ್ತವೆ. ಅದಕ್ಕೆ ಮುಖ್ಯ ಕಾರಣ ಕೊಲೆಸ್ಟರಾಲ್ ಮತ್ತು ಹೆಚ್ಚು ರಕ್ತದ ಒತ್ತಡ (ಬಿಪಿ).

walking medicine for heart

13. ಏರೋಬಿಕ್ಸ್, ಸೈಕ್ಲಿಂಗ್, ವೇಗವಾಗಿ ನಡೆಯುವುದು, ಓಡುವುದು, ಸ್ವಿಮ್ಮಿಂಗ್, ಬ್ಯಾಡ್ಮಿಂಟನ್ ಆಡುವುದು ಮತ್ತು ರೋಪ್ ಜಂಪ್ ಇವುಗಳನ್ನು ದಿನವೂ ಮಾಡುವುದರಿಂದ ಹೃದಯದ ಆಯಸ್ಸನ್ನು ಜಾಸ್ತಿ ಮಾಡಬಹುದು.

14. ಸ್ಮೋಕಿಂಗ್ ಮತ್ತು ಡ್ರಿಂಕ್ಸ್ ಮಾಡುವವರಲ್ಲಿ ಹೃದಯಾಘಾತಗಳ ಸಾಧ್ಯತೆ ಹೆಚ್ಚು. ಹೆಚ್ಚು ಒತ್ತಡದಲ್ಲಿ ಕೆಲಸ ಮಾಡುವವರು ಮತ್ತು ವಿಪರೀತ ಬೊಜ್ಜು ಬೆಳೆಸಿಕೊಂಡವರು ಬೇಗ ಹೃದಯದ ಕಾಯಿಲೆಗಳಿಗೆ ಒಳಗಾಗುತ್ತಾರೆ.

15. ಹೆಚ್ಚು ಸಕ್ಕರೆ ಕಾಯಿಲೆ ಇರುವ ವ್ಯಕ್ತಿಗಳಲ್ಲಿ ಹೃದಯಾಘಾತ ಸಾಧ್ಯತೆ ಹೆಚ್ಚು.

16. ಆಹಾರದಲ್ಲಿ ಸೋಡಿಯಂ ಪ್ರಮಾಣ ಕಡಿಮೆ ಮಾಡುವುದರಿಂದ ಹೃದಯದ ಜೋಪಾಸನೆ ಮಾಡಬಹುದು. ಉಪ್ಪು ಕಡಿಮೆ ಬಳಕೆ ಮಾಡುವುದು ಅಗತ್ಯ.

TMT test for heart

17. ಅನಾರೋಗ್ಯಪೂರ್ಣ ಜೀವನ ಕ್ರಮಗಳಿಂದ (Unhealthy life style) ಹೃದಯದ ಸಮಸ್ಯೆಗಳು ಹೆಚ್ಚುತ್ತವೆ. ಜಂಕ್ ಫುಡ್ ಸೇವನೆ ಮತ್ತು ನಿದ್ದೆ ಕಡಿಮೆ ಮಾಡುವುದರಿಂದ ಹೃದಯವು ದುರ್ಬಲ ಆಗುತ್ತದೆ.

18. ನಿರಂತರ ಮೆಡಿಕಲ್ ತಪಾಸಣೆ ಮಾಡುವುದು, ಇಸಿಜಿ (ECG) ಮಾಡುವುದು ಮತ್ತು ಬಾಡಿ ಮಾಸ್ ಇಂಡೆಕ್ಸ್ ಅಳತೆ ಮಾಡುವುದರಿಂದ ಹೃದಯದ ಆರೋಗ್ಯವನ್ನು ಪರೀಕ್ಷೆ ಮಾಡಬಹುದು ಮತ್ತು ಹೃದಯವನ್ನು ಕಾಪಾಡಬಹುದು.

heart foods

19. ಹೃದಯಾಘಾತಗಳು ಉಂಟಾಗುವ ಸಾಕಷ್ಟು ಮೊದಲು ಅದರ ಚಿಹ್ನೆಗಳು (Symptoms) ನಮ್ಮ ಗಮನಕ್ಕೆ ಬರುತ್ತವೆ. ಆಗ ತಕ್ಷಣ ಎಚ್ಚರವಾಗಿ ವೈದ್ಯಕೀಯ ನೆರವನ್ನು ಪಡೆದರೆ ಹೃದಯಾಘಾತ ತಡೆಗಟ್ಟಬಹುದು. ಆ ಅವಧಿಯನ್ನು ಗೋಲ್ಡನ್ ಪೀರಿಯಡ್ ಎಂದು ಕರೆಯುತ್ತಾರೆ.

20. ಹೃದಯಕ್ಕೆ ಕನೆಕ್ಟ್ ಆದ ರಕ್ತನಾಳಗಳು ಬ್ಲಾಕ್ ಆಗದ ಹಾಗೆ ನೋಡಿಕೊಳ್ಳುವುದು ತುಂಬಾ ಮುಖ್ಯ. ಅದಕ್ಕೆ ನಿರಂತರ ವೈದ್ಯಕೀಯ ತಪಾಸಣೆ ಅಗತ್ಯ.

heart day special

21. 1964ರಲ್ಲಿ ಜೇಮ್ಸ್ ಹಾರ್ಡಿ ಎಂಬ ವಿಜ್ಞಾನಿಯು ಮನುಷ್ಯನ ಹೃದಯವನ್ನು ಬದಲಾಯಿಸಿ ಅದರ ಸ್ಥಳದಲ್ಲಿ ಚಿಂಪಾಂಜಿ ಹೃದಯವನ್ನು ಕಸಿ ಮಾಡಿದ್ದ. ಆದರೆ ಆ ರೋಗಿ ಎರಡು ಘಂಟೆಗಳ ಒಳಗೆ ಮೃತ ಪಟ್ಟು ಈ ಪ್ರಯೋಗ ವಿಫಲ ಆಯಿತು.

22. 1967ರಲ್ಲಿ ದಕ್ಷಿಣ ಆಫ್ರಿಕಾದ ಒಂದು ಆಸ್ಪತ್ರೆಯಲ್ಲಿ ಒಬ್ಬ ಸರ್ಜನ್ ಕ್ರಿಶ್ಚಿಯನ್ ಬನಾರ್ಡ್ ರೋಗಿಯ ಅನಾರೋಗ್ಯ ಪೂರ್ಣ ಹೃದಯದ ಜಾಗದಲ್ಲಿ ಇನ್ನೊಂದು ಆರೋಗ್ಯಪೂರ್ಣ ಹೃದಯವನ್ನು ಕಸಿ ಮಾಡಿ ಯಶಸ್ವೀ ಅದನು. ಆ ಶಸ್ತ್ರಚಿಕಿತ್ಸೆಯನ್ನು ಇಂದು ಜಗತ್ತಿನಾದ್ಯಂತ ಸಾವಿರಾರು ಮಂದಿ ಮಾಡಿಕೊಳ್ಳುತ್ತಿದ್ದಾರೆ.

Sleep like a child
ಮಗುವಿನಂತೆ ಮಲಗಿ ಹೃದಯ ಜೋಪಾನ

ಇದನ್ನೂ ಓದಿ: Raja Marga Column : ಅಪ್ಪಾ ಪಾ!! ಅಮಿತಾಭ್ ಬಚ್ಚನ್ ಬದ್ಧತೆ, ಪ್ರಯೋಗಶೀಲತೆಗೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾ?

ಭರತ ವಾಕ್ಯ

peaceful family for hearts health
ನೆಮ್ಮದಿಯೇ ಹೃದಯದ ನಿಜವಾದ ಬಂಡವಾಳ

ಹೃದಯವು ಭಾವನೆಗಳ ಉಗಮ ಸ್ಥಾನ ಎಂದು ನಮ್ಮ ಹಿರಿಯರು ನಂಬಿದ್ದರು. ಪ್ರೀತಿಗಾಗಿ ಮಿಡಿಯುವುದು ಅದೇ ಹೃದಯ ಎಂದರು. ಇವೆಲ್ಲವೂ ವೈಜ್ಞಾನಿಕವಾಗಿ ಇನ್ನೂ ಸಾಬೀತು ಆಗಿಲ್ಲ. ಹೃದಯವು ಅತ್ಯಂತ ಸಕ್ಷಮವಾಗಿ ಮತ್ತು ವೇಗವಾಗಿ ಕೆಲಸ ಮಾಡುವ ಮಾಂಸ, ರಕ್ತ ಮತ್ತು ಸ್ನಾಯುಗಳ ಒಂದು ಪ್ರಮುಖ ದೇಹದ ಭಾಗ ಎಂದು ವಿಜ್ಞಾನಿಗಳು ಹೇಳುತ್ತಾರೆ. ಆದರೆ ಆ ಹೃದಯವನ್ನು ಪ್ರೀತಿ ಮಾಡಿ ಉಳಿಸಿಕೊಳ್ಳುವ ಹೊಣೆ ನಮ್ಮೆಲ್ಲರದು. ಲವ್ ಯುವರ್ ಹಾರ್ಟ್ ಅಂಡ್ ಲಿವ್ ಲಾಂಗ್.

Raja Marga Column: ಪ್ರತಿ ದಿನ, ಪ್ರತಿಕ್ಷಣ ಕೆಲಸ ಮಾಡುವ ಹೃದಯಕ್ಕೂ ಒಂದು ದಿನ ಬೇಕು ಅಲ್ವಾ? ಸೆಪ್ಟೆಂಬರ್ 29-ವಿಶ್ವ ಹೃದಯ ದಿನ. ಹೃದಯವನ್ನು ಉಪಯೋಗಿಸಿ, ಹೃದಯವನ್ನು ಅರಿಯಿರಿ ಎನ್ನುವುದು ಈ ವರ್ಷದ ಘೋಷಣೆ. ಜಗತ್ತಿನ ಅತೀ ದೊಡ್ಡ ಕೊಲೆಗಡುಕ ಅಂದರೆ ಅದು ಹೃದಯಾಘಾತ ಅಂತಾರೆ. ಅದನ್ನು ಮೀರುವುದು ಹೇಗೆ ಎಂದರೆ ನಿಮ್ಮ ಹೃದಯವನ್ನು ನೀವೇ ಪ್ರೀತಿಸುವುದರಿಂದ.

Continue Reading

ಕರ್ನಾಟಕ

Sudha Murty: ಅಮೆರಿಕದಲ್ಲಿ ಕಾರ್ಯಕ್ರಮ ಎಂದು ಸುಧಾ ಮೂರ್ತಿ ಹೆಸರಲ್ಲಿ ವಂಚನೆ; ಇಬ್ಬರ ವಿರುದ್ಧ ಕೇಸ್‌

Sudha Murty: ಅಮೆರಿಕದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ, ಸುಧಾ ಮೂರ್ತಿ ಅವರು ಆಗಮಿಸಲಿದ್ದಾರೆ ಎಂದು ಹೇಳಿಕೊಂಡು ವಂಚಿಸಿದ ಹಿನ್ನೆಲೆಯಲ್ಲಿ ಇಬ್ಬರು ಮಹಿಳೆಯರ ವಿರುದ್ಧ ಕೇಸ್‌ ದಾಖಲಿಸಲಾಗಿದೆ.

VISTARANEWS.COM


on

Edited by

Sudha Murty
Koo

ಬೆಂಗಳೂರು: ಅಮೆರಿಕದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆ ಕಾರ್ಯಕ್ರಮಕ್ಕೆ ಇನ್ಫೋಸಿಸ್‌ ಪ್ರತಿಷ್ಠಾನದ (Infosys Foundation) ಸುಧಾ ಮೂರ್ತಿ ಅವರು ಆಗಮಿಸಲಿದ್ದಾರೆ ಎಂದು ಹೇಳಿಕೊಂಡು, ಸುಧಾ ಮೂರ್ತಿ (Sudha Murty) ಅವರ ಫೋಟೊ ಬಳಸಿ ವಂಚನೆ ಮಾಡಿದ ಹಿನ್ನೆಲೆಯಲ್ಲಿ ಇಬ್ಬರು ಮಹಿಳೆಯರ ವಿರುದ್ಧ ಸುಧಾ ಮೂರ್ತಿ ಅವರ ಆಪ್ತ ಸಹಾಯಕಿ (Personal Assistant) ಮಮತಾ ಸಂಜಯ್‌ ದೂರು ದಾಖಲಿಸಿದ್ದಾರೆ.

ಸುಧಾ ಮೂರ್ತಿ ಅವರ ಹೆಸರು, ಫೋಟೊ ಬಳಸಿಕೊಂಡು ವಂಚನೆ ಮಾಡಿದ ಹಿನ್ನೆಲೆಯಲ್ಲಿ ಶ್ರುತಿ ಹಾಗೂ ಲಾವಣ್ಯ ಎಂಬುವರ ವಿರುದ್ಧ ಜಯನಗರ ಪೊಲೀಸ್‌ ಠಾಣೆಯಲ್ಲಿ ಮಮತಾ ಸಂಜಯ್‌ ಅವರು ದೂರು ನೀಡಿದ್ದಾರೆ. ಕಂಪನಿಯಲ್ಲಿ ಪರಿಶೀಲನೆ ನಡೆಸಿದಾಗ ಸುಧಾ ಮೂರ್ತಿ ಅವರ ಹೆಸರು ಬಳಸಿಕೊಂಡು ಜನರಿಗೆ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಕೇಸ್‌ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ದಾಖಲಾದ ಎಫ್‌ಐಆರ್‌ ಪ್ರತಿ

ಏನಿದು ಪ್ರಕರಣ?

ಅಮೆರಿಕದಲ್ಲಿ ಕನ್ನಡ ಕೂಟ ಆಫ್‌ ನಾರ್ತನ್‌ ಕ್ಯಾಲಿಫೋರ್ನಿಯಾ (KKNC) ವತಿಯಿಂದ ಕಳೆದ ಏಪ್ರಿಲ್‌ನಲ್ಲಿ 50ನೇ ವಾರ್ಷಿಕೋತ್ಸವ ಆಯೋಜಿಸಲಾಗಿತ್ತು. ಸುಧಾ ಮೂರ್ತಿ ಅವರಿಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ ಎಂಬುದಾಗಿ ಇ-ಮೇಲ್‌ ಮೂಲಕ ಆಹ್ವಾನ ನೀಡಲಾಗಿತ್ತು. ಆದರೆ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗುವುದಿಲ್ಲ ಎಂದು ಸುಧಾ ಮೂರ್ತಿ ಅವರು ಇ-ಮೇಲ್‌ ಮೂಲಕ ತಿಳಿಸಿದ್ದರು. ಆದರೆ, ಕೆಕೆಎನ್‌ಸಿ ಕಾರ್ಯಕ್ರಮದಲ್ಲಿ ಸುಧಾ ಮೂರ್ತಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಶ್ರುತಿ ಹಾಗೂ ಲಾವಣ್ಯ ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Sudha Murty: ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ನೋಡಿ ಶ್ಲಾಘಿಸಿದ ಸುಧಾ ಮೂರ್ತಿ

ಸುಧಾ ಮೂರ್ತಿ ಅವರು ಅಮೆರಿಕಕ್ಕೆ ಆಗಮಿಸಲಿದ್ದಾರೆ. ಮೀಟ್‌ ಆ್ಯಂಡ್‌ ಗ್ರೀಟ್‌ ವಿತ್‌ ಡಾ.ಸುಧಾ ಮೂರ್ತಿ (Meet And Greet With Dr. Sudha Murty) ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಇಬ್ಬರು ಆರೋಪಿಗಳು ಜನರನ್ನು ವಂಚಿಸಿದ್ದಾರೆ. ಒಂದು ಟಿಕೆಟ್‌ಗೆ 40 ಡಾಲರ್ (ಸುಮಾರು 3,300 ರೂ.) ಪಡೆದು ವಂಚಿಸಲಾಗಿದೆ. ಸುಧಾ ಮೂರ್ತಿ ಕಚೇರಿ ಹೆಸರಿನಲ್ಲಿ, ಸುಧಾ ಮೂರ್ತಿ ಅವರ ಫೋಟೊ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಲಾಗಿದೆ. ಹಾಗಾಗಿ, ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸುಧಾ ಮೂರ್ತಿ ಅವರ ಆಪ್ತ ಸಹಾಯಕಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಜಯನಗರ ಠಾಣೆಯಲ್ಲಿ ಐಟಿ ಕಾಯ್ದೆಯ 66 C, 66 D ಸೆಕ್ಷನ್ ಹಾಗೂ ಐಪಿಸಿ 419, 420 ಸೆಕ್ಷನ್ ಅಡಿ ಪ್ರಕರಣ ದಾಖಲಿಸಲಾಗಿದೆ.

Continue Reading

ಕರ್ನಾಟಕ

Cauvery Dispute : ಸಮರ್ಥವಾಗಿ ವಾದ ಮಾಡದೆ ನಮಗೆ ಸೋಲಾಯಿತೇ? ಆರೋಪದಲ್ಲಿ ನಿಜವೆಷ್ಟು? ಸುಳ್ಳೆಷ್ಟು?

Cauvery Dispute: ಕಾವೇರಿ ವಿಚಾರದಲ್ಲಿ ಎಲ್ಲ ಹಂತಗಳಲ್ಲಿ ನಮಗೆ ಸೋಲಾಗಲು ಪ್ರಮುಖ ಕಾರಣ, ನಾವು ಸರಿಯಾಗಿ ವಾದ ಮಾಡದೆ ಇರುವುದು, ವಾಸ್ತವಾಂಶ ತಿಳಿಸದೆ ಇರುವುದು. ಈ ಆರೋಪ ನಿಜವೇ? ಹಾಗಿದ್ದರೆ ಕರ್ನಾಟಕದ ವಾದ ಏನಿತ್ತು? ಬಾರ್‌ ಎಂಡ್‌ ಬೆಂಚ್‌ ವೆಬ್‌ಸೈಟ್‌ ಪ್ರಸ್ತುತಪಡಿಸಿದ ಅಧ್ಯಯನಾತ್ಮಕ ಅಂಶಗಳನ್ನು ನಿಮ್ಮ ಮುಂದಿಡಲಾಗಿದೆ.

VISTARANEWS.COM


on

Edited by

Cauvery water Dispute
Koo

ಬೆಂಗಳೂರು: ಕಾವೇರಿ ನೀರು ವಿಚಾರದಲ್ಲಿ (Cauvery Dispute) ಕರ್ನಾಟಕ ಎಲ್ಲ ಹಂತಗಳಲ್ಲೂ ಹಿನ್ನಡೆ ಅನುಭವಿಸಲು ಕಾರಣ ರಾಜ್ಯದ ಅಧಿಕಾರಿಗಳು (Officials of Karnataka) ಸರಿಯಾದ ವಾದ ಮಂಡಿಸದೇ ಇರುವುದು ಎನ್ನುವುದು ಹೆಚ್ಚಿನವರ ಆಪಾದನೆ. ಅದರಲ್ಲೂ ಕರ್ನಾಟಕದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್‌ ಮೂಲಕ ವಾದ ಮಾಡಿದ್ದರಿಂದ ಸೋಲಾಯಿತು ಎನ್ನುವುದು ಇನ್ನೊಂದು ವಾದ. ಹಾಗಿದ್ದರೆ ಈ ಆರೋಪ ಸತ್ಯವೇ? ಅಥವಾ ರಾಜಕೀಯಪ್ರೇರಿತವೇ? ಹಾಗಿದ್ದರೆ ಕರ್ನಾಟಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (Cauvery Water Management Authority) ಮುಂದೆ ಏನೇನು ವಾದ ಮಾಡಿತ್ತು?

ಎಲ್ಲರಿಗೂ ತಿಳಿದಿರುವಂತೆ ಸೆ. 21ರಂದು ನಡೆದ ವಿಚಾರಣೆಯ ವೇಳೆ ಸುಪ್ರೀಂಕೋರ್ಟ್‌ (Supreme Court) ಎತ್ತಿ ಹಿಡಿದದ್ದು ಸೆ. 19ರಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶವನ್ನು. ಅದರಾಚೆಗೆ ಅದು ಯಾವ ಅಂಶವನ್ನೂ ಕೇಳಿಸಿಕೊಳ್ಳಲಿಲ್ಲ. ಹಾಗಿದ್ದರೆ ಸೆ. 19ರ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕ ತನ್ನ ವಾದದಲ್ಲಿ ಸೋಲು ಕಂಡಿತೇ? ಹಾಗಾಗಿ ಪ್ರಾಧಿಕಾರ ಕರ್ನಾಟಕದ ವಿರುದ್ಧವಾಗಿ ತೀರ್ಪು ನೀಡಲು, ನೀರು ಬಿಡುಗಡೆಗೆ ಆದೇಶ ನೀಡಲು ಕಾರಣವಾಯಿತೇ ಎನ್ನುವುದು ಮುಖ್ಯ ಪ್ರಶ್ನೆ.

ಇದನ್ನು ತಿಳಿಯಬೇಕು ಎಂದಾದರೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೆ.19ರಂದು ನಡೆಸಿರುವ 24ನೇ ಸಭೆಯ (ತುರ್ತು ಸಭೆ) ನಡಾವಳಿಗಳನ್ನು ಗಮನಿಸಬೇಕು.

ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೆ. 12ರಂದು ನೀಡಿದ ಆದೇಶದಲ್ಲಿ ಪ್ರತಿದಿನ 5000 ಕ್ಯೂಸೆಕ್‌ ನೀರು ಬಿಡುಗಡೆ ಮಾಡುವಂತೆ ಸೂಚಿಸಿತ್ತು. ವಾಸ್ತವವಾಗಿ ತಮಿಳುನಾಡಿನ ಅಧಿಕಾರಿಗಳು ಪ್ರತಿದಿನ 12,500 ಕ್ಯೂಸೆಕ್ಸ್‌ ನೀರು ಬಿಡುಗಡೆ ಮಾಡಬೇಕು ಎಂದು ಕೋರಿದ್ದರು. ಇದಕ್ಕೆ ಪ್ರತಿಯಾಗಿ ಕರ್ನಾಟಕದ ಅಧಿಕಾರಿಗಳು ವಾಸ್ತವಾಂಶಗಳನ್ನು ಮುಂದಿಟ್ಟು ತಮಿಳುನಾಡು ಕೋರಿಕೆಯನ್ನು ಮನ್ನಿಸಲು ಸಾಧ್ಯವಿಲ್ಲ. ತಾವು ಕೆಆರ್‌ಎಸ್‌ ಹಾಗೂ ಕಬಿನಿಯಿಂದ ಒಟ್ಟು 2500 ಕ್ಯೂಸೆಕ್ಸ್‌ ನೀರು ಮಾತ್ರ ಹರಿಸಬಹುದು ಎಂದು ವಾದ ಮಾಡಿದ್ದರು. ಅಂತಿಮವಾಗಿ ಪ್ರಾಧಿಕಾರವು ಪ್ರತಿದಿನ 5000 ಕ್ಯೂಸೆಕ್ಸ್‌ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲುಆರ್‌ಸಿ) ಸೆ.12ರ ಅದೇಶವನ್ನು ಎತ್ತಿಹಿಡಿದಿತ್ತು. ಹಾಗಿದ್ದರೆ 2500 ಕ್ಯೂಸೆಕ್‌ ನೀರು ಬಿಡಬಹುದು ಎಂದು ಒಪ್ಪಿದ್ದಾದರೂ ಯಾಕೆ ಎನ್ನುವ ಪ್ರಶ್ನೆಯೂ ಎದ್ದು ಬರುತ್ತದೆ. ಹೀಗೆ ಮಾಡಿದ್ದರಿಂದ ಸಮನ್ವಯ ಸೂತ್ರವಾಗಿ ಪ್ರಾಧಿಕಾರ 5000 ಕ್ಯೂಸೆಕ್‌ ನೀರು ಬಿಡಿ ಎಂದು ಹೇಳಿದೆ. ಕೊಡುವುದೇ ಇಲ್ಲ ಎಂದು ವಾದಿಸಬೇಕಿತ್ತು ಎನ್ನುವುದು ಕೆಲವರ ವಾದ.

ಹಾಗಿದ್ದರೆ ಒಟ್ಟಾರೆಯಾಗಿ ಪ್ರಾಧಿಕಾರದ ಅಂದಿನ ಸಭೆಯಲ್ಲಿ ಕರ್ನಾಟಕ ಮಾಡಿದ ವಾದ ಏನಾಗಿತ್ತು? ತಮಿಳುನಾಡು ಏನು ಹೇಳಿತ್ತು. ಬಾರ್‌ ಎಂಡ್‌ ಬೆಂಚ್‌ ವೆಬ್‌ ಸೈಟ್‌ ಸಂಗ್ರಹಿಸಿದ ಸಮಗ್ರ ಮಾಹಿತಿಯ ಸಾರವನ್ನು ಇಲ್ಲಿ ನೀಡಲಾಗಿದೆ.

ಪ್ರಾಧಿಕಾರದ ಮುಂದೆ ಕರ್ನಾಟಕದ ವಾದ ಏನಿತ್ತು?

  1. ಪ್ರಸಕ್ತ ವರ್ಷದಲ್ಲಿ ಮಳೆಯ ಅಭಾವ ಉಂಟಾಗಿದ್ದು, ಶೇ.75ರಷ್ಟು ನೈರುತ್ಯ ಮುಂಗಾರು ಇದಾಗಲೇ ಪೂರ್ಣಗೊಂಡಿದೆ. ಮಳೆ ಸಾಧ್ಯತೆ ಕ್ಷೀಣಿಸಿದ್ದು, ಒಂದೊಮ್ಮೆ ಮಳೆಯಾದರೂ ಕಾವೇರಿ ಜಲಾನಯನ ಪ್ರದೇಶದಲ್ಲಿನ ಪರಿಸ್ಥಿತಿ ಬದಲಾಗುವುದಿಲ್ಲ. ಪರಿಸ್ಥಿತಿಯು ಇನ್ನೂ ಕೆಟ್ಟ ಸ್ಥಿತಿಗೆ ಹೊರಳಬಹುದು ಎಂಬುದು ನಮ್ಮ ಆತಂಕವಾಗಿದೆ. ಇಂಥ ವಿಷಮ ಪರಿಸ್ಥಿತಿಯಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಸಂಕಷ್ಟ ಹಂಚಿಕೆಗೆ ಮುಂದಾಗಬೇಕಿದೆ. ಕಾವೇರಿ ನೀರು ವಿವಾದ ನ್ಯಾಯ ಮಂಡಳಿಯ ಅಧಿಸೂಚನೆಯ ಕಲಂ VII ಜೊತೆಗೆ ಕಲಂ XIX(ಎ) ಅಡಿ ನಿರ್ದೇಶಿಸಿರುವಂತೆ ಸೂಕ್ತ ಅನುಪಾತದ ಅನ್ವಯ ನೀರು ಹಂಚಿಕೆಗೆ ಮುಂದಾಗಬೇಕು. ಈ ವಿಚಾರವನ್ನು ಸುಪ್ರೀಂ ಕೋರ್ಟ್ 2018ರ ತೀರ್ಪಿನಲ್ಲಿಯೂ ಬದಲು ಮಾಡಿಲ್ಲ.
  2. 2023ರ ಸೆಪ್ಟೆಂಬರ್ 12ರಂದು ನಡೆದ ಸಭೆಯಲ್ಲಿ ಸಿಡಬ್ಲ್ಯುಆರ್‌ಸಿ ಪ್ರತಿ ದಿನ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ತಪ್ಪಾಗಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 19ರಂದು ಸಿಡಬ್ಲ್ಯುಆರ್‌ಸಿಗೆ ಪತ್ರ ಬರೆದು ಹೊಸದಾಗಿ ಪ್ರಕರಣ ಪರಿಗಣಿಸಿ, ನಿರ್ದೇಶಿಸುವಂತೆ ಕೋರಲಾಗಿದೆ.
  3. ಜೂನ್ 1ರಿಂದ ಸೆಪ್ಟೆಂಬರ್ 11ರವರೆಗೆ ಕರ್ನಾಟಕದ ಜಲಾಶಗಳಿಗೆ 104.273 ಟಿಎಂಸಿ ನೀರು ಮಾತ್ರ ಹರಿದುಬಂದಿದೆ. ಕಳೆದ 30 ವರ್ಷಗಳ ಸರಾಸರಿ ಮಳೆ ಪ್ರಮಾಣದ ಹೋಲಿಕೆಯಲ್ಲಿ ಶೇ. 54.42ರಷ್ಟು ಕೊರತೆಯಾಗಿದೆ. ಸಾಮಾನ್ಯವಾಗಿ ಈ ಅವಧಿಯಲ್ಲಿ 228.793 ಟಿಎಂಸಿ ನೀರು ಹರಿದು ಬರುತ್ತಿತ್ತು.
  4. ಜೂನ್ 1ರಿಂದ ಸೆಪ್ಟೆಂಬರ್ 11ರವರೆಗೆ 46.271 ಟಿಎಂಸಿ ನೀರನ್ನು ಕಬಿನಿ ಮತ್ತು ಕೆಆರ್‌ಎಸ್‌ ಜಲಾಶಯದಿಂದ ಹರಿಸಲಾಗಿದೆ. ಕರ್ನಾಟಕವು ನೈರುತ್ಯ ಮುಂಗಾರಿನಿಂದ ಕೇವಲ 25.689 ಟಿಎಂಸಿ ನೀರು ಸಂಗ್ರಹಿಸಿದೆ. ತಮಿಳುನಾಡು ರಾಜ್ಯವು ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ ಬೆಳೆಗಳಿಗೆ ಈಶಾನ್ಯ ಮಾರುತ ಆಧರಿಸಿದ್ದು, ಕ್ಯಾರಿಓವರ್ ಸ್ಟೋರೇಜ್ (ಮುಂಬಳಕೆ ಸಂಗ್ರಹ) ಅನ್ನು ದುರ್ಬಳಕೆ ಮಾಡಿ ಈಗಾಗಲೇ 100 ಟಿಎಂಸಿ ನೀರನ್ನು ಕರ್ನಾಟಕದಿಂದ ಪಡೆದಿದೆ. ಸಂಕಷ್ಟದ ಸಂದರ್ಭದಲ್ಲಿ ತಮಿಳುನಾಡು ನೀರು ದುರ್ಬಳಕೆ ಮಾಡಿಕೊಂಡಿರುವುದನ್ನು ಎಲ್ಲರೂ ಕಾಣಬಹುದಾಗಿದೆ.
  5. ಮಳೆ ಕೊರತೆಯನ್ನು ನಿರ್ಧರಿಸುವಾಗ ನಿಯಂತ್ರಣ ಸಮಿತಿಯು ಕಾವೇರಿ ಪಾತ್ರದ ಒಟ್ಟು 81,155 ಚದರ ಕಿ ಮೀ ಜಲಾನಯನ ಪ್ರದೇಶವನ್ನು ಪರಿಗಣಿಸುವ ಬದಲಾಗಿ ಕರ್ನಾಟಕದ ನಾಲ್ಕು ಜಲಾಶಯಗಳ ಜಲಾನಯನ ಪ್ರದೇಶ 12,812 ಚದರ ಕಿ ಮೀ ಅನ್ನು ಮಾತ್ರವೇ ಪರಿಗಣಿಸುವ ಮೂಲಕ ಸ್ವೇಚ್ಛೆಯಿಂದ ನಿರ್ಧಾರ ತಳೆದಿದೆ. ಮಳೆಯ ಕೊರತೆಯನ್ನು ಆಧರಿಸಿ ಮಾತ್ರವೇ ಸಂಕಷ್ಟ ನಿರ್ಧರಿಸುವಂತಿಲ್ಲ. ಬದಲಿಗೆ ನದೀ ಮುಖಜ ಭೂಮಿಯಲ್ಲಿರುವ ಅಂತರ್ಜಲದ ಲಭ್ಯತೆಯನ್ನು ಪರಿಗಣಿಸಬೇಕು. ಅಲ್ಲದೇ, ನದೀ ಮುಖಜ ಭಾಗದಲ್ಲಿನ ಈಶಾನ್ಯ ಮಳೆಮಾರುತವನ್ನೂ ಸಹ ಪರಿಗಣಿಸಬೇಕು. ಸಂಕಷ್ಟದ ಸಂದರ್ಭದಲ್ಲಿ ರಾಜ್ಯಗಳ ಕನಿಷ್ಠ ಅವಶ್ಯಕತೆ ಹಾಗೂ ವಾಸ್ತವಿಕ ಅಂಶಗಳನ್ನು ಆಧರಿಸಿ ನೀರು ಹಂಚಿಕೆ ಮಾಡುವುದು ಸೂಕ್ತವಾದ ಮಾನದಂಡವಾಗಿದೆ.
  6. ಸಿಡಬ್ಲ್ಯುಆರ್‌ಸಿಯು ಕಳೆದ 30 ವರ್ಷಗಳ ಸರಾಸರಿ ಮಳೆ ಹಾಗೂ 2023ರ ಜೂನ್ 1ರಿಂದ ಸೆಪ್ಟೆಂಬರ್ 11ರವರೆಗಿನ ಬೆಳೆ ಆಧರಿಸಿ ಕೊರತೆ ಅಂದಾಜಿಸಿದೆ. ಆದರೆ, ಕಾವೇರಿ ನ್ಯಾಯ ಮಂಡಳಿಯು 1938-35ರಿಂದ 1971-27ರವರೆಗಿನ ಅಂಕಿ ಅಂಶ ಆಧರಿಸಿ ಸಾಮಾನ್ಯ ಮಳೆ ವರ್ಷದಲ್ಲಿ ಕಾವೇರಿ ಕೊಳ್ಳದ ನೀರು ಲಭ್ಯತೆಯನ್ನು 740 ಟಿಎಂಸಿ ಎಂದು ನಿರ್ಧರಿಸಿತ್ತು.
  7. ಕರ್ನಾಟಕ ಜಲಾಶಯಗಳ ಜಲಾನಯನ ಪ್ರದೇಶಗಳ ವಿಚಾರದಲ್ಲಿ, ಕರ್ನಾಟಕದ ಅಣೆಕಟ್ಟುಗಳ ಕೆಳಗಿರುವ ಹಾಗೂ ಬಿಳಿಗುಂಡ್ಲು ಅಂತರ ರಾಜ್ಯ ಗಡಿಗಿಂತ ಮೇಲಿರುವ ಸುಮಾರು 23,921 ಚ.ಕಿಮೀ ವ್ಯಾಪ್ತಿಯ ಮಧ್ಯಂತರ ಜಲಾನಯನ ಪ್ರದೇಶದಲ್ಲಿನ ಮಳೆ ಕೊರತೆಯನ್ನು ಸಿಡಬ್ಲ್ಯುಆರ್‌ಸಿಯು ಪ್ರಜ್ಞಾಪೂರ್ವಕವಾಗಿ ಮರೆಮಾಚಿದೆ. ಇದರ ವ್ಯಾಪ್ತಿಯು 23,921 ಚದರ ಕಿ ಮೀ ಆಗಿದೆ. ಈ ಪ್ರದೇಶದಲ್ಲಿನ ಮಳೆ ಕೊರತೆಯು ಕರ್ನಾಟಕದ ಅಣೆಕಟ್ಟುಗಳ ಮೇಲ್ಭಾಗದಲ್ಲಿರುವ ಜಲಾನಯನ ಪ್ರದೇಶದಲ್ಲಿ ಮಳೆಕೊರತೆ ಪ್ರಮಾಣವಾದ ಶೇ.54.42 ಕ್ಕಿಂತ ಹೆಚ್ಚಿದೆ.
  8. ಈ ಮಧ್ಯಂತರ ಜಲಾನಯನ ಪ್ರದೇಶದ 23,921 ಚದರ ಕಿಮೀ ವ್ಯಾಪ್ತಿಯಲ್ಲಿ 2023ರ ಜೂನ್ 1ರಿಂದ ಸೆಪ್ಟೆಂಬರ್ 11ರ ಅವಧಿಯಲ್ಲಿ ಅಂದಾಜು 14.286 ಟಿಎಂಸಿ ಹರಿಯುವ ನಿರೀಕ್ಷೆ ಇತ್ತು. ಆದರೆ, ಇದರಿಂದ 2 ಟಿಎಂಸಿಗೂ ಕಡಿಮೆ ಪ್ರಮಾಣದ ಕನಿಷ್ಠ ಹರಿವಾಗಿದೆ.
  9. ಸಾಮಾನ್ಯ ವರ್ಷದಲ್ಲಿ ಸೆಪ್ಟೆಂಬರ್ ತಿಂಗಳ ಕೋಟಾ ಪ್ರಕಾರ 36.76 ಟಿಎಂಸಿ ನೀರನ್ನು ಬಿಳಿಗುಂಡ್ಲು ಮೂಲಕ ಹರಿಸಬೇಕು. 2023ರ ಸೆಪ್ಟೆಂಬರ್ 13ರಿಂದ 27ರ ಅವಧಿಯಲ್ಲಿ 18.38 ಟಿಎಂಸಿ ಬಿಡಬೇಕಿದೆ. ಆದರೆ, ಮಳೆ ಕೊರತೆಯ ಕಾರಣಕ್ಕೆ 10.002 ಟಿಎಂಸಿ ಕಳೆದು 8.378 ಟಿಎಂಸಿ ಅಥವಾ ಪ್ರತಿ ದಿನ 6400 ಕ್ಯೂಸೆಕ್ಸ್ ನೀರು ಹರಿಸಬೇಕು ಎಂದು ನಿರ್ಧರಿಸುವ ಮೂಲಕ ಸಿಡಬ್ಲ್ಯುಆರ್‌ಸಿ ಪ್ರಮಾದ ಎಸಗಿದೆ. ಈ ಅಂದಾಜು ಸ್ವೇಚ್ಛೆಯಿಂದ ಕೂಡಿದೆ. ಏಕೆಂದರೆ ಸೆಪ್ಟೆಂಬರ್‌ನಲ್ಲಿ ನೈರುತ್ಯ ಮುಂಗಾರು ವಿಫಲವಾಗಿದೆ. ಅಲ್ಲದೆ, ಹವಾಮಾನ ಇಲಾಖೆಯ ಅಂದಾಜನ್ನು ಗಣನೆಗೆ ತೆಗೆದುಕೊಂಡರೆ ಮಧ್ಯಂತರ ಜಲಾನಯನ ಪ್ರದೇಶದಲ್ಲಿ ಮಳೆಯ ಕೊರತೆ ಇನ್ನೂ ಹೆಚ್ಚಿರಲಿದೆ. ಈ ನೆಲೆಯಲ್ಲಿ 2023ರ ಸೆಪ್ಟೆಂಬರ್ 27ರವರೆಗೆ ಪ್ರತಿದಿನ 5000 ಕ್ಯೂಸೆಕ್ಸ್ ನೀರು ಹರಿಸುವಂತೆ ಆದೇಶಿಸುವ ಮೂಲಕ ಸಿಡಬ್ಲ್ಯುಆರ್‌ಸಿ ತರ್ಕದಲ್ಲಿ ವಿಫಲವಾಗಿದೆ.
  10. ನದಿ ಮುಖಜ ಭಾಗದಲ್ಲಿನ ಅಂತರ್ಜಲ ಲಭ್ಯತೆಯನ್ನು ಸಿಡಬ್ಲ್ಯುಆರ್‌ಸಿ ಅನುಕೂಲಕ್ಕೆ ತಕ್ಕಂತೆ ಅವಗಣನೆ ಮಾಡಿದೆ. ಈಶಾನ್ಯ ಮಾರುತವು ತಮಿಳುನಾಡಿನ ಕೊರತೆಯನ್ನು ತುಂಬುವ ಸಾಧ್ಯತೆ ಇದೆ. ಇದನ್ನು ಸಿಡಬ್ಲ್ಯುಆರ್‌ಸಿ ಪರಿಗಣಿಸಿಲ್ಲ. ಬಾಕಿ ಇರುವ ತಿಂಗಳ ಅವಧಿಗೆ (ಮುಂದಿನ ಜೂನ್‌ವರೆಗೆ) ಕರ್ನಾಟಕಕ್ಕೆ ಕನಿಷ್ಠ ಅಗತ್ಯವಾಗಿ 106 ಟಿಎಂಸಿ ನೀರು ಬೇಕಿದೆ ಎಂಬುದನ್ನು ಸಿಡಬ್ಲ್ಯುಆರ್‌ಸಿ ಗಣನೆಗೆ ತೆಗೆದುಕೊಳ್ಳುವಲ್ಲಿ ಎಡವಿದೆ. ಕರ್ನಾಟಕದ ಜಲಾಶಯಗಳಲ್ಲಿ ಸದ್ಯ 54.114 ಟಿಎಂಸಿ ನೀರು ಇದ್ದು, ಸರಾಸರಿ ಮಳೆಯ ಪ್ರಮಾಣಕ್ಕೆ ಶೇ.54 ಮಳೆ ಕೊರತೆಯನ್ನು ಸೇರಿಸಿದರೆ ಒಳಹರಿವು 44.78 ಟಿಎಂಸಿ ಮಾತ್ರ ಇರುವ ಸಾಧ್ಯತೆ ಇದೆ. ಈ ಲೆಕ್ಕದಲ್ಲಿ ಒಟ್ಟ ನೀರು ಲಭ್ಯತೆಯ ಪ್ರಮಾಣ 98.854 ಟಿಎಂಸಿ ಮಾತ್ರ ಆಗಲಿದೆ. ಆದರೆ, ನಾವು ಕಳೆದ ಮೂವತ್ತು ವರ್ಷಗಳ ಅತಿ ಹೆಚ್ಚು ಮಳೆ ಕೊರತೆಯ ವರ್ಷಗಳಲ್ಲಿನ ಪ್ರತಿ ತಿಂಗಳ ಕನಿಷ್ಠ ಒಳಹರಿವನ್ನು ಪರಿಗಣಿಸಿ ಲೆಕ್ಕ ಹಾಕಿದರೆ ಸೆಪ್ಟೆಂಬರ್‌ ತಿಂಗಳ ಉಳಿಕೆ ಅವಧಿಯ 10 ಟಿಎಂಸಿಯೂ ಸೇರಿದಂತೆ ಡಿಸೆಂಬರ್‌ ವರೆಗಿನ ನೀರು ಲಭ್ಯತೆಯ ಪ್ರಮಾಣ ಒಟ್ಟು 20 ಟಿಎಂಸಿ ದಾಟುವುದಿಲ್ಲ. ಈ ನೆಲೆಯಲ್ಲಿ ಗಮನಿಸಿದರೆ ಕರ್ನಾಟಕಕ್ಕೆ ಲಭ್ಯವಾಗುವ ನೀರಿನ ಪ್ರಮಾಣ 74.114 ಟಿಎಂಸಿ ಮೀರುವ ಸಾಧ್ಯತೆ ಇಲ್ಲ. ಹಾಗಾಗಿ, ಕರ್ನಾಟಕದ ಅಗತ್ಯ ಬಳಕೆಗೆ ಮಿತಿಗೊಳಿಸಲಾದ 106 ಟಿಎಂಸಿ ನೀರಿನ ಪ್ರಮಾಣವು ಸಹ ಲಭ್ಯವಾಗದೆ ಹೋಗಬಹುದು.
  11. ಸಿಡಬ್ಲ್ಯುಆರ್‌ಸಿಯು ಬಿಳಿಗುಂಡ್ಲುವಿನಲ್ಲಿ ಕರ್ನಾಟಕದಿಂದ ಹರಿಸಬೇಕಾದ ನೀರಿನ ಪ್ರಮಾಣದಲ್ಲಿ 7.799 ಟಿಎಂಸಿ ಕೊರತೆಯಾಗಿದೆ ಎಂದು ಅಂದಾಜಿಸಿರುವುದು ಸಂಪೂರ್ಣವಾಗಿ ದೋಷಪೂರಿತವಾಗಿದೆ. ಇದಕ್ಕೆ ಯಾವುದೇ ಆಧಾರವಿಲ್ಲ. ಬರುವ ತಿಂಗಳುಗಳಲ್ಲಿ ಸಿಡಬ್ಲ್ಯುಆರ್‌ಸಿ ಅಂದಾಜಿಸಿರುವ ಕೊರತೆಯು ಶೇ. 45.58 ಮಾತ್ರವಲ್ಲ. ಇದು ಇನ್ನೂ ಹೆಚ್ಚಾಗಲಿದೆ.
  12. ಈಶಾನ್ಯ ಮಳೆಮಾರುತವು ತಮಿಳುನಾಡಿನಲ್ಲಿ ಸಾಧಾರಣವಾಗಿ 45 ದಿನ ಇರಲಿದೆ. ತಮಿಳುನಾಡಿನಲ್ಲಿ ಅಂತರ್ಜಲವು 20ರಿಂದ 30 ಟಿಎಂಸಿ ಇದ್ದು, ಹಾಲಿ ನೀರು ಸಂಗ್ರಹ ಮತ್ತು ಅಂದಾಜು 60 ಟಿಎಂಸಿ ನೀರು ಮಧ್ಯಂತರ ಜಲಾನಯನ ಪ್ರದೇಶದಿಂದ ಹರಿದು ಬರುವುದರಿಂದ ತಮಿಳುನಾಡು ಪರಿಸ್ಥಿತಿಯನ್ನು ನಿರ್ವಹಿಸಬಹುದಾಗಿದೆ. ಕರ್ನಾಟಕದ ರೈತರಿಗೆ ಅಗತ್ಯವಾಗಿರುವ ಕನಿಷ್ಠ ನೀರಾವರಿ ಅಗತ್ಯತೆ ಹಾಗೂ ಕುಡಿಯುವ ನೀರಿನ ಅಗತ್ಯತೆಯ ದೃಷ್ಟಿಯಿಂದ ನೀರು ಬಿಡುಗಡೆ ಮಾಡಲಾಗದು. ವಿಶೇಷವಾಗಿ ಜಗತ್ತಿನ ತಂತ್ರಜಾನ ಹಬ್ ಆಗಿರುವ ಬೆಂಗಳೂರು ವಾರ್ಷಿಕ 100 ಬಿಲಿಯನ್ ಡಾಲರ್ ವಿದೇಶಿ ವಿನಿಮಯ ಗಳಿಕೆ ಮಾಡುತ್ತಿದ್ದು, ಇದರ ಕುಡಿಯುವ ನೀರಿನ ಅವಶ್ಯಕತೆಯ ದೃಷ್ಟಿಯಿಂದ ನೀರು ಹರಿಸಲಾಗದು.
  13. ಕರ್ನಾಟಕದಲ್ಲಿ ಬರ ಪರಿಸ್ಥಿತಿ ಇದ್ದು, ಕಾವೇರಿ ಪ್ರದೇಶದಲ್ಲಿ ಬರುವ 15 ತಾಲ್ಲೂಕುಗಳು ಬರಪೀಡಿತವಾಗಿವೆ. ಇದನ್ನು ಸಹ ಪ್ರಾಧಿಕಾರವು ಪರಿಣಿಸಬೇಕಿದೆ.

ಇದನ್ನೂ ಓದಿ: Cauvery Dispute : ಕಾವೇರಿ ವಿವಾದದಲ್ಲಿ ಪ್ರಧಾನಿ ಮಧ್ಯಪ್ರವೇಶ ಕೋರುವುದು ತಪ್ಪಲ್ಲ; ಮಾಜಿ ಅಡ್ವೊಕೇಟ್‌ ಜನರಲ್‌ ಬಿ.ವಿ ಆಚಾರ್ಯ

ಹಾಗಿದ್ದರೆ ತಮಿಳುನಾಡು ವಾದ ಏನಾಗಿತ್ತು?

  • ತಮಿಳುನಾಡಿನಲ್ಲಿ ನೀರಾವರಿ ಪ್ರದೇಶ ವಿಸ್ತರಿಸಲಾಗಿದೆ ಮತ್ತು ದೊಡ್ಡ ಮಟ್ಟದಲ್ಲಿ ಫಸಲು ಬೆಳೆಯಲಾಗುತ್ತಿದೆ ಎಂಬ ಕರ್ನಾಟಕದ ವಾದದಲ್ಲಿ ಸತ್ಯವಿಲ್ಲ.
  • ನೀರು ಸಂಗ್ರಹಕ್ಕೆ ಸೌಲಭ್ಯ ಇದ್ದರೂ ತಮಿಳುನಾಡು ಸಮರ್ಥವಾಗಿ ನೀರು ಬಳಕೆ ಮಾಡುತ್ತಿಲ್ಲ ಎಂಬ ವಾದ ಸರ್ವಥಾ ಸರಿಯಲ್ಲ. ಕುರುವೈಗೆ ನ್ಯಾಯಮಂಡಳಿಯ ಬೆಳೆ ನೀರು ಅಗತ್ಯದ (ಸಿಡಬ್ಲುಆರ್) ಪ್ರಕಾರ ಜೂನ್-ಆಗಸ್ಟ್‌ನಲ್ಲಿ 30 ಟಿಎಂಸಿ ಬೇಕಿದೆ. ಜುಲೈ-ಆಗಸ್ಟ್‌ನಲ್ಲಿ ಸಾಂಬಾ ಬೆಳೆಗೆ 32 ಟಿಎಂಸಿ ನೀರು ಬೇಕಿದೆ. ಭೂಮಿ ಹದಗಳಿಸಲು ಮತ್ತು ಬಿತ್ತನೆಗೆ ಹೆಚ್ಚಿನ ನೀರು ಬೇಕಿದೆ. ಒಟ್ಟಾರೆ 95 ಟಿಎಂಸಿ ನೀರು ಬೇಕಿದ್ದು, ಜೂನ್ 12ರಿಂದ 31ರವರೆಗೆ ಮೆಟ್ಟೂರಿನಲ್ಲಿ 68.357 ಟಿಎಂಸಿ ಮಾತ್ರ ನೀರಿದೆ.
  • ಈಶಾನ್ಯ ಮಳೆಮಾರುತದ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗುವುದಿಲ್ಲ. ಈ ವೇಳೆ ಚಂಡಮಾರುತದಿಂದಾಗಿ ಬೆಳೆಗೆ ಹಾನಿ ಉಂಟಾಗಿದ್ದೂ ಇದೆ. ನೈರುತ್ಯ ಮಾನ್ಸೂನ್ ವಿಫಲವಾಗಿರುವುದರಿಂದ ಈಶಾನ್ಯ ಮಾನ್ಸೂನ್ ಸಹ ವಿಫಲವಾಗುವ ಸಾಧ್ಯತೆ ಇದೆ.
  • ಪ್ರಸಕ್ತ ವರ್ಷದಲ್ಲಿ ಕರ್ನಾಟಕ 1.701 ಲಕ್ಷ ಎಕರೆ ಪ್ರದೇಶದಲ್ಲಿ ಫಸಲು ಮಾಡಿದೆ ಎಂದು ಹೇಳಿದೆ. 2023ರ ಜೂನ್ 1ರಿಂದ ಸೆಪ್ಟೆಂಬರ್ 11ರವರೆಗೆ ಕರ್ನಾಟಕವು 25.662 ಟಿಎಂಸಿ ನೀರನ್ನು ನಾಲ್ಕು ಪ್ರಮುಖ ಜಲಾಶಯಗಳಿಂದ ಕಾಲುವೆಗಳ ಮೂಲಕ ಹರಿಸಿಕೊಂಡಿದೆ. ಇದರ ಜೊತೆಗೆ ಕೆಆರ್‌ಎಸ್‌ ಮತ್ತು ಕಬಿನಿ ಅಣೆಕಟ್ಟುಗಳ ಕಾಲುವೆಗಳ ಮೂಲಕ ಹರಿಸಿರುವ ನೀರಿನ ಮಾಹಿತಿಯನ್ನು ಕರ್ನಾಟಕ ನೀಡಿಲ್ಲ.
  • 2023ರ ಜೂನ್‌ನಿಂದ 2024ರ ಜನವರಿಯವರೆಗೆ ನಾಲ್ಕು ಜಲಾಶಯಗಳಿಂದ 72 ಟಿಎಂಸಿ ಕರ್ನಾಟಕಕ್ಕೆ ಬೇಕಿದೆ. ಆದರೆ, ಕರ್ನಾಟಕವು ಈಗಾಗಲೇ ಶೇ. 50ರಷ್ಟು ನೀರುಬಳಕೆ ಮಾಡಿದೆ.
  • ತಮಿಳುನಾಡು ವಾದವನ್ನು ಪರಿಗಣಿಸದೇ ಸೆಪ್ಟೆಂಬರ್ 13ರಿಂದ 15 ದಿನ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಅರ್‌ಸಿ ಆದೇಶಿಸಿದೆ. ಪ್ರೊ-ರಾಟಾ ತತ್ವದ ಅಡಿ ವಿಮುಖವಾಗಿರುವುದು ಮತ್ತು 12,500 ಕ್ಯೂಸೆಕ್ಸ್‌ನಿಂದ 5 ಸಾವಿರ ಕ್ಯೂಸೆಕ್ಸ್‌ಗೆ ಇಳಿಸಿರುವುದಕ್ಕೆ ಯಾವುದೇ ಕಾರಣ ನೀಡಲಾಗಿಲ್ಲ ಎಂದು ತಮಿಳುನಾಡಿನ ಅಧಿಕಾರಿಗಳು ವಾದಿಸಿದ್ದಾರೆ.

Continue Reading

ದೇಶ

DUSU Election: ದೆಹಲಿ ವಿವಿಯಲ್ಲಿ ಎಬಿವಿಪಿ ದರ್ಬಾರ್;‌ ಚುನಾವಣೆಯಲ್ಲಿ ಭಾರಿ ಗೆಲುವು, ದೇಶ ಮೊದಲು ಎಂದ ಬಿಜೆಪಿ

DUSU Election: ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಚುನಾವಣೆಯಲ್ಲಿ ಎಬಿವಿಪಿ ಭರ್ಜರಿ ಗೆಲುವು ಸಾಧಿಸಿದೆ. ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಜಂಟಿ ಕಾರ್ಯದರ್ಶಿ ಹುದ್ದೆಗಳು ಎಬಿವಿಪಿ ಪಾಲಾದರೆ, ಉಪಾಧ್ಯಕ್ಷ ಸ್ಥಾನ ಎನ್‌ಎಸ್‌ಯುಐ ಪಾಲಾಗಿದೆ.

VISTARANEWS.COM


on

Edited by

DUSU Election Result
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಒಕ್ಕೂಟದ (DUSU) ಚುನಾವಣೆಯಲ್ಲಿ (DUSU Election) ಎಬಿವಿಪಿ (ABVP) ಭರ್ಜರಿ ಗೆಲುವು ಸಾಧಿಸಿದೆ. ಡಿಯುಎಸ್‌ಯು ಅಧ್ಯಕ್ಷ ಸೇರಿ ಕೇಂದ್ರೀಯ ಸಮಿತಿ ನಾಲ್ಕು ಪ್ರಮುಖ ಹುದ್ದೆಗಳಲ್ಲಿ ಮೂರು ಹುದ್ದೆಗಳು ಆರ್‌ಎಸ್‌ಎಸ್‌ ವಿದ್ಯಾರ್ಥಿ ಘಟಕವಾದ ಎಬಿವಿಪಿ ಪಾಲಾದರೆ, ಉಪಾಧ್ಯಕ್ಷ ಸ್ಥಾನವು ಕಾಂಗ್ರೆಸ್‌ ವಿದ್ಯಾರ್ಥಿ ಘಟಕವಾದ ಎನ್‌ಎಸ್‌ಯುಐ ಪಾಲಾಗಿದೆ.

ಎಬಿವಿಪಿಯ ತುಷಾರ್‌ ದೆಢಾ ಅವರು ಎನ್‌ಎಸ್‌ಯುಐನ ಹಿತೇಶ್‌ ಗುಲಿಯಾ ವಿರುದ್ಧ ಗೆಲುವು ಸಾಧಿಸಿದ್ದಾರೆ. ಎನ್‌ಎಸ್‌ಯುಐನ ಅಭಿ ದಾಹಿಯಾ ಡಿಯುಎಸ್‌ಯು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಾಗೆಯೇ, ಎಬಿವಿಪಿಯ ಅಪರಾಜಿತಾ ಕಾರ್ಯದರ್ಶಿ ಹಾಗೂ ಸಚಿನ್‌ ಬೈಸ್ಲಾ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ದೆಹಲಿ ವಿವಿಯಲ್ಲಿ ಇನ್ನು ಎಬಿವಿಪಿ ಮತ್ತಷ್ಟು ಪ್ರಬಲವಾಗಿದೆ.

3 ವರ್ಷದ ಬಳಿಕ ಚುನಾವಣೆ

ದೆಹಲಿ ವಿವಿಯಲ್ಲಿ 2019ರಲ್ಲಿ ನಡೆದ ಚುನಾವಣೆಯಲ್ಲೂ ಎಬಿವಿಪಿಯು ನಾಲ್ಕು ಪ್ರಮುಖ ಹುದ್ದೆಗಳಲ್ಲಿ ಮೂರು ಹುದ್ದೆಗಳನ್ನು ಪಡೆದಿತ್ತು. ಇದಾದ ಬಳಿಕ ಕೊರೊನಾ ಹಿನ್ನೆಲೆಯಲ್ಲಿ 2020 ಹಾಗೂ 2021ರಲ್ಲಿ ಡಿಯುಎಸ್‌ಯು ಚುನಾವಣೆ ನಡೆದಿರಲಿಲ್ಲ. ಅಕಾಡೆಮಿಕ್‌ ಕ್ಯಾಲೆಂಡರ್‌ನಲ್ಲಿ ಏರುಪೇರಾದ ಕಾರಣ 2022ರಲ್ಲೂ ಡಿಯುಎಸ್‌ಯು ಚುನಾವಣೆ ನಡೆದಿರಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ 24 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಎಬಿವಿಪಿ ಸಂಭ್ರಮಾಚರಣೆ, ಅಮಿತ್‌ ಶಾ ಅಭಿನಂದನೆ

ಡಿಯುಎಸ್‌ಯು ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವಿವಿ ಕ್ಯಾಂಪಸ್‌ನಲ್ಲಿ ಎಬಿವಿಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು. ಇನ್ನು ಎಬಿವಿಪಿ ಗೆಲುವಿನ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿ ಬಿಜೆಪಿಯ ಹಲವು ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ಹಾಗೆಯೇ, ದೇಶದ ಹಿತಾಸಕ್ತಿ ಮೊದಲು ಎಂಬ ಉದ್ದೇಶದಿಂದ ಎಬಿವಿಪಿ ಕಾರ್ಯನಿರ್ವಹಿಸಲಿದೆ ಎಂದಿದ್ದಾರೆ.

ಇದನ್ನೂ ಓದಿ: New JNU Rules: ಜೆಎನ್‌ಯುನಲ್ಲಿ ಪ್ರತಿಭಟನೆ ಮಾಡಿದರೆ 20 ಸಾವಿರ ರೂ., ದುರ್ವರ್ತನೆಗೆ 50 ಸಾವಿರ ರೂ. ದಂಡ

“ಎಬಿವಿಪಿ ನಾಯಕರು ದೆಹಲಿ ವಿವಿಯ ಕೇಂದ್ರೀಯ ಸಮಿತಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸವಿದೆ. ಹಾಗೆಯೇ, ಸ್ವಾಮಿ ವಿವೇಕಾನಂದರ ಆಶಯ, ವಿಚಾರಗಳ ಪಾಲನೆ, ಯುವಕರಲ್ಲಿ ರಾಷ್ಟ್ರೀಯವಾದದ ಜಾಗೃತಿ ಹೆಚ್ಚಿಸುವ ದಿಸೆಯಲ್ಲಿ ಕಾರ್ಯನಿರ್ವಹಿಸಲಿದೆ ಎಂಬ ದೃಢ ನಂಬಿಕೆ ಇದೆ” ಎಂದು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

Continue Reading
Advertisement
Raja Marga world heart day
ಅಂಕಣ54 seconds ago

Raja Marga Column : ಮೊದಲು ನಿಮ್ಮ ಹೃದಯವನ್ನು ನೀವು ಪ್ರೀತಿಸಿ, ಬೇರೆಯವರ ಹೃದಯ ಆಮೇಲೆ ನೋಡ್ಕೊಳೋಣ!

Sudha Murty
ಕರ್ನಾಟಕ29 mins ago

Sudha Murty: ಅಮೆರಿಕದಲ್ಲಿ ಕಾರ್ಯಕ್ರಮ ಎಂದು ಸುಧಾ ಮೂರ್ತಿ ಹೆಸರಲ್ಲಿ ವಂಚನೆ; ಇಬ್ಬರ ವಿರುದ್ಧ ಕೇಸ್‌

Cauvery water Dispute
ಕರ್ನಾಟಕ42 mins ago

Cauvery Dispute : ಸಮರ್ಥವಾಗಿ ವಾದ ಮಾಡದೆ ನಮಗೆ ಸೋಲಾಯಿತೇ? ಆರೋಪದಲ್ಲಿ ನಿಜವೆಷ್ಟು? ಸುಳ್ಳೆಷ್ಟು?

Bus Accident In Raichur
ಕರ್ನಾಟಕ58 mins ago

Bus Accident: ನಿಂತಿದ್ದ ಲಾರಿಗೆ ಸಾರಿಗೆ ಬಸ್‌ ಡಿಕ್ಕಿ; 32 ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ

DUSU Election Result
ದೇಶ1 hour ago

DUSU Election: ದೆಹಲಿ ವಿವಿಯಲ್ಲಿ ಎಬಿವಿಪಿ ದರ್ಬಾರ್;‌ ಚುನಾವಣೆಯಲ್ಲಿ ಭಾರಿ ಗೆಲುವು, ದೇಶ ಮೊದಲು ಎಂದ ಬಿಜೆಪಿ

fruits and cold cough
ಆರೋಗ್ಯ2 hours ago

Health Tips: ಶೀತ, ನೆಗಡಿಯಾದಾಗ ಈ ಎಲ್ಲ ಹಣ್ಣುಗಳಿಂದ ದೂರವಿರುವುದು ಒಳ್ಳೆಯದು!

new kannada book yabli
ಕಲೆ/ಸಾಹಿತ್ಯ2 hours ago

Sunday Read: ಹೊಸ ಪುಸ್ತಕ: ಯಾಬ್ಲಿ: ಯಥಾಪ್ರಕಾರ

cryptocurrency fraud
ಅಂಕಣ2 hours ago

ಸೈಬರ್‌ ಸೇಫ್ಟಿ ಅಂಕಣ: ಅಳಿವಿನ ಅಂಚಿನಲ್ಲಿ ಝಣ ಝಣ ಕಾಂಚಾಣ!

pak human right
ಕ್ರಿಕೆಟ್3 hours ago

ವಿಸ್ತಾರ ಸಂಪಾದಕೀಯ: ಮಾನವ ಹಕ್ಕುಗಳ ಪ್ರಶ್ನೆ; ಪಾಕ್‌ ಮೊದಲು ತನ್ನ ಹುಳುಕು ಸರಿಪಡಿಸಿಕೊಳ್ಳಲಿ

dina bhavishya
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

dina bhavishya
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ6 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ1 week ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ1 week ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ1 week ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

ಟ್ರೆಂಡಿಂಗ್‌