Huge Blast: ಪೊಲೀಸರು ಶೋಧಕ್ಕೆ ಮುಂದಾಗುತ್ತಿದ್ದಂತೆ ಮನೆಯೊಳಗೆ ಭೀಕರ ಸ್ಫೋಟ; ವಿಡಿಯೊ ಇಲ್ಲಿದೆ - Vistara News

ವಿದೇಶ

Huge Blast: ಪೊಲೀಸರು ಶೋಧಕ್ಕೆ ಮುಂದಾಗುತ್ತಿದ್ದಂತೆ ಮನೆಯೊಳಗೆ ಭೀಕರ ಸ್ಫೋಟ; ವಿಡಿಯೊ ಇಲ್ಲಿದೆ

Huge Blast: ಅಮೆರಿಕದ ವಾಷಿಂಗ್ಟನ್ ಡಿಸಿಯ ಉಪನಗರದ ಮನೆಯೊಂದರಲ್ಲಿ ಭಾರೀ ಸ್ಫೋಟ ) ಸಂಭವಿಸಿದೆ. ಪೊಲೀಸರು ಶೋಧ ವಾರಂಟ್ ಜಾರಿಗೊಳಿಸುತ್ತಿದ್ದಾಗ ಈ ಸ್ಫೋಟ ನಡೆದಿದೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

VISTARANEWS.COM


on

dc
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್‌: ಅಮೆರಿಕದ ವಾಷಿಂಗ್ಟನ್ ಡಿಸಿಯ (Washington DC) ಉಪನಗರದ ಮನೆಯೊಂದರಲ್ಲಿ ಭಾರೀ ಸ್ಫೋಟ (Huge Blast) ಸಂಭವಿಸಿದೆ. ಪೊಲೀಸರು ಶೋಧ ವಾರಂಟ್ ಜಾರಿಗೊಳಿಸುತ್ತಿದ್ದಾಗ ಈ ಸ್ಫೋಟ ನಡೆದು ಒಂದು ಮನೆ ಸಂಪೂರ್ಣ ನಾಶವಾಗಿದೆ. ಸರ್ಚ್ ವಾರಂಟ್ ಜಾರಿಗೊಳಿಸಲು ಮನೆಯೊಳಗೆ ಪ್ರವೇಶಿಸಲು ಪ್ರಯತ್ನಿಸಿದ ಅಧಿಕಾರಿಗಳ ಮೇಲೆ ಮನೆಯೊಳಗಿನ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದಾನೆ. ಬಳಿಕ ಸ್ಫೋಟ ನಡೆದಿದೆ ಎಂದು ವರ್ಜೀನಿಯಾದ ಆರ್ಲಿಂಗ್ಟನ್ (Arlington) ಪೊಲೀಸರು ತಿಳಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಮನೆಯ ಪರಿಶೀಲನೆಗಾಗಿ ಪೊಲೀಸರು ಆಗಮಿಸಿದ ಈ ವೇಳೆ ಸ್ಫೋಟ ಸಂಭವಿಸಿದೆ. ಸೋಮವಾರ ರಾತ್ರಿ ಸಂಭವಿಸಿದ ಈ ಘಟನೆಯಿಂದ ಸಾವುನೋವುಗಳು ಸಂಭವಿಸಿವೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಂಕಿತನನ್ನು ಬಂಧಿಸಲಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸ್ಥಳೀಯರು, ಸ್ಫೋಟದಿಂದ ತಮ್ಮ ಮನೆಗಳು ನಡುಗುತ್ತಿರುವಂತೆ ಭಾಸವಾಯಿತು ಎಂದು ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಇಲಾಖೆ ಕೂಡಲೇ ತಲುಪಿದ್ದು, ಅಧಿಕಾರಿಗಳು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಅಧಿಕಾರಿಗಳು ನಿವಾಸದಲ್ಲಿ ಶೋಧ ನಡೆಸಲು ವಾರಂಟ್ ಜಾರಿಗೊಳಿಸಲು ಪ್ರಯತ್ನಿಸುತ್ತಿದ್ದಾಗ ಶಂಕಿತನು ಮನೆಯೊಳಗೆ ಹಲವಾರು ಸುತ್ತು ಗುಂಡು ಹಾರಿಸಿದ. ಬಳಿಕ ನಿವಾಸದಲ್ಲಿ ಸ್ಫೋಟ ಸಂಭವಿಸಿದೆ ಮತ್ತು ಸ್ಫೋಟದ ಸಂದರ್ಭಗಳ ಬಗ್ಗೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ” ಎಂದು ಆರ್ಲಿಂಗ್ಟನ್ ಕೌಂಟಿ ಕಚೇರಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿಳಿಸಿದೆ.

ಪೊಲೀಸರು ಕೂಡಲೇ ಕೆಲವು ನಿವಾಸಿಗಳನ್ನು ಸ್ಥಳಾಂತರಿಸಿದರು. “ನಾನು 50 ವರ್ಷಗಳಿಂದ ಇಲ್ಲಿದ್ದೇನೆ ಮತ್ತು ನಾನು ಇಂತಹ ಶಬ್ಧವನ್ನು ಎಂದಿಗೂ ಕೇಳಿಲ್ಲ. ಇದು ಹೊಸ ಅನುಭವ” ಎಂದು ಸ್ಥಳೀಯ ನಿವಾಸಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. ʼʼ2011ರಲ್ಲಿ ಡಿಸಿ ಪ್ರದೇಶದಲ್ಲಿ ಸಂಭವಿಸಿದ ಭೂಕಂಪದಂತೆಯೇ ಇದು ಭಾಸವಾಯಿತುʼʼ ಎಂದು ಇನ್ನೊಬ್ಬರು ಹೇಳಿದ್ದಾರೆ. ಈ ಪ್ರದೇಶವು ವಿಲ್ಸನ್ ಬೌಲೆವಾರ್ಡ್‌ನ ಉತ್ತರದಲ್ಲಿರುವ ಬಾಲ್‌ಸ್ಟನ್‌-ಎಂಯು ಮೆಟ್ರೋ ನಿಲ್ದಾಣದಿಂದ ಅರ್ಧ ಮೈಲಿ ದೂರದಲ್ಲಿದೆ.

ಕಾರಣ ತಿಳಿದು ಬಂದಿಲ್ಲ

ಸ್ಫೋಟದ ತೀವ್ರತೆಗೆ ಕನಿಷ್ಠ 10ಕ್ಕಿಂತ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ತನಿಖಾಧಿಕಾರಿಗಳು ತನಿಖೆ ನಡೆಸಲು ಪ್ರಾರಂಭಿಸಿದ್ದಾರೆ. ಸ್ಫೋಟಕ್ಕೆ ಕಾರಣವನ್ನು ಇನ್ನೂ ನಿರ್ಧರಿಸಲಾಗಿಲ್ಲ. ಸದ್ಯ ಸಣ್ಣ ಪುಟ್ಟ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲ ವಿಧದಲ್ಲೂ ತನಿಖೆ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಸ್ಫೋಟದ ಮೊದಲು ಯಾವುದೇ ಅನಿಲ ಸೋರಿಕೆಯಾದ ಬಗ್ಗೆ ಮಾಹಿತಿ ಇಲ್ಲ.

ಇದನ್ನೂ ಓದಿ: Lakhbir Singh: ಸಿಖ್​ ಪ್ರತ್ಯೇಕತವಾದಿ ಸಂಘಟನೆ ಮುಖ್ಯಸ್ಥ ಲಖ್ಬೀರ್ ಸಿಂಗ್ ಸಾವು

ಮನೆಯಲ್ಲಿ ಮದ್ದುಗುಂಡುಗಳು ಮತ್ತು ಬಂದೂಕುಗಳನ್ನು ದಾಸ್ತಾನು ಇಡಲಾಗಿತ್ತು ಎಂದು ನೆರೆಹೊರೆಯವರು ಹೇಳಿದ್ದಾರೆ. ಆದರೆ ಇದು ಸ್ಫೋಟಕ್ಕೆ ಕಾರಣವಾಗಿರಲಾರದು ಎಂದು ಅಗ್ನಿಶಾಮಕ ಅಧಿಕಾರಿಗಳು ಹೇಳುತ್ತಾರೆ. ಸದ್ಯ ಮನೆ ಇದ್ದ ಜಾಗದಲ್ಲಿ ಅವಶೇಷ ಮಾತ್ರ ಇದೆ. “ಇದು ಕೇವಲ ಕೇವಲ ಇಟ್ಟಿಗೆಗಳ ರಾಶಿ. ಮನೆಯಲ್ಲಿ ಏನೂ ಉಳಿದಿಲ್ಲ” ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸದ್ಯ ಸ್ಫೋಟದ ವಿಡಿಯೊ ಸೋಷಿಯಲ್‌ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡಿನ ದಾಳಿ ನಡೆಸಿದ್ದು ಓರ್ವ ಕವಿ; ಯಾಕೀ ದ್ವೇಷ?

Robert Fico: ಎಡಪಂಥೀಯ ನಾಯಕ, ಸ್ಲೊವಾಕಿಯಾ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ ಅವರ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಯನ್ನು ಬಂಧಿಸಲಾಗಿದೆ. ಆತನನ್ನು ಆತನನ್ನು 71 ವರ್ಷದ ಜುರಾಜ್ ಸಿಂಟುಲಾ ಎಂದು ಗುರತಿಸಲಾಗಿದೆ. ಸಾಹಿತಿಯೂ ಆಗಿರುವ ಜುರಾಜ್ ಸಿಂಟುಲಾ ಮೂಲತಃ ದಕ್ಷಿಣ ಸ್ಲೊವಾಕಿಯಾದವನು. ಸದ್ಯ ಆತ ಹತ್ಯೆ ಪ್ರಯತ್ನದ ಕಾರಣವನ್ನು ತಿಳಿಸಿದ್ದಾನೆ. ಅದೇನು ಎನ್ನುವುದರ ವಿವರ ಇಲ್ಲಿದೆ.

VISTARANEWS.COM


on

Robert Fico
Koo

ಬ್ರಾಟಿಸ್ಲಾವಾ: ಎಡಪಂಥೀಯ ನಾಯಕ, ಸ್ಲೊವಾಕಿಯಾ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ (Robert Fico) ಅವರ ಹತ್ಯೆಗೆ ಮೇ 15ರಂದು ಯತ್ನಿಸಲಾಗಿದೆ (Assassination attempt). ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯಕ್ಕೆ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ಪಟ್ಟಣದಲ್ಲಿ 59 ವರ್ಷದ ರಾಬರ್ಟ್ ಫಿಕೊ ಅವರು ಸ್ಥಳೀಯರೊಂದಿಗೆ ಮಾತನಾಡುತ್ತಿದ್ದ ವೇಳೆ ದುಷ್ಕರ್ಮಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಮೂರರಿಂದ ನಾಲ್ಕು ಸುತ್ತು ಶೂಟ್‌ ಮಾಡಿದ್ದಾನೆ. ಸದ್ಯ ಆತನನ್ನು 71 ವರ್ಷದ ಜುರಾಜ್ ಸಿಂಟುಲಾ (Juraj Cintula) ಎಂದು ಗುರತಿಸಲಾಗಿದ್ದು, ಬಂಧಿಸಲಾಗಿದೆ. ರಾಬರ್ಟ್ ಫಿಕೊ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಜುರಾಜ್ ಸಿಂಟುಲಾ ಹಿನ್ನೆಲೆ

ಸಾಹಿತಿಯೂ ಆಗಿರುವ ಜುರಾಜ್ ಸಿಂಟುಲಾ ಮೂಲತಃ ದಕ್ಷಿಣ ಸ್ಲೊವಾಕಿಯಾದವನು. ಆತ ಸಾಹಿತ್ಯ ಕ್ಲಬ್ ಒಂದರ ಸಹ-ಸ್ಥಾಪಕ. 2005ರಲ್ಲಿ ಆರಂಭವಾದ ಇದನ್ನು 2016ರವರೆಗೆ ಮುನ್ನಡೆಸಿದ್ದ. ಜುರಾಜ್ ಸಿಂಟುಲಾ ಬರೆದ ಸುಮಾರು ಮೂರು ಕವಿತೆಗಳು ಈಗಾಗಲೇ ಪ್ರಕಟಗೊಂಡಿವೆ. ಆತ ಸ್ಲೋವಾಕ್ ಬರಹಗಾರರ ಸಂಘದ ಸದಸ್ಯನೂ ಹೌದು. ಸ್ಥಳೀಯ ಪತ್ರಿಕೆ ಡೆನ್ನಿಕ್ ಎನ್ (Dennik N) ಪ್ರಕಾರ ಸಿಂಟುಲಾ ಈ ದಾಳಿಯನ್ನು ನಡೆಸಲು ಕಾನೂನುಬದ್ಧವಾಗಿ ನೋಂದಾಯಿತ ಶಾರ್ಟ್ ಬ್ಯಾರೆಲ್ ಗನ್‌ ಅನ್ನು ಬಳಸಿದ್ದಾನೆ.

ಕಾರಣವೇನು?

ದಾಳಿಯ ನಂತರ ಸಿಂಟುಲಾ ಪ್ರತಿಕ್ರಿಯಿಸಿ, ಪ್ರಧಾನಿ ರಾಬರ್ಟ್ ಫಿಕೊ ಅವರ ನೀತಿಗಳನ್ನು ಒಪ್ಪುವುದಿಲ್ಲ. ಹೀಗಾಗಿ ಹತ್ಯೆ ಮಾಡಲು ಸಂಚು ರೂಪಿಸಿದ್ದಾಗಿ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ. ʼʼಹತ್ಯೆಯ ಪ್ರಯತ್ನದ ಹಿಂದೆ ರಾಜಕೀಯ ಉದ್ದೇಶವಿದೆ ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆʼʼ ಎಂದು ಸಚಿವ ಮಾತುಸ್ ಸುತಾಜ್ ಎಸ್ಟೋಕ್ ಸ್ಪಷ್ಟಪಡಿಸಿದ್ದಾರೆ. ʼʼಕಳೆದ ವರ್ಷ ಫಿಕೊ ಮೂರನೇ ಅವಧಿಗೆ ಮರು ಆಯ್ಕೆಯಾದ ಹಿನ್ನೆಲೆಯಲ್ಲಿ ಶಂಕಿತರು ಈ ಸಂಚು ರೂಪಿಸಿದ್ದಾರೆʼʼ ಎಂದೂ ಅವರು ಹೇಳಿದ್ದಾರೆ.

ಪ್ರಧಾನಿ ಮೋದಿ ಖಂಡನೆ

ಘಟನೆಯನ್ನು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿಶ್ವ ನಾಯಕರು ಖಂಡಿಸಿದ್ದಾರೆ. ʼʼಸ್ಲೋವಾಕಿಯಾದ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ ಅವರ ಮೇಲೆ ನಡೆದ ಗುಂಡಿನ ದಾಳಿಯ ಸುದ್ದಿಯಿಂದ ತೀವ್ರ ಆಘಾತಕ್ಕೊಳಗಾಗಿದ್ದೇನೆ. ಈ ಹೇಡಿತನದ ಮತ್ತು ಪೈಶಾಚಿಕ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ ಮತ್ತು ಪ್ರಧಾನಿ ಫಿಕೊ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಭಾರತವು ಸ್ಲೋವಾಕ್ ಗಣರಾಜ್ಯದ ಬೆಂಬಲಕ್ಕೆ ನಿಲ್ಲಲಿದೆʼʼ ಎಂದು ಮೋದಿ ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ʼʼಯುರೋಪಿಯನ್ ರಾಜಕೀಯದಲ್ಲಿ ಹಿಂಸೆಗೆ ಯಾವುದೇ ಸ್ಥಳವಿಲ್ಲʼʼ ಎಂದು ಹೇಳಿದ್ದಾರೆ. ಆಸ್ಟ್ರಿಯಾದ ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಅವರು, “ನಮ್ಮ ಪ್ರಜಾಪ್ರಭುತ್ವಗಳಲ್ಲಿ ದ್ವೇಷ ಮತ್ತು ಹಿಂಸಾಚಾರಕ್ಕೆ ಆಸ್ಪದ ಕೊಡಬಾರದು. ಅತ್ಯಂತ ನಿರ್ಣಯದಿಂದ ಇದರ ವಿರುದ್ಧ ಹೋರಾಡಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಕೂಡ ಘಟನೆಯನ್ನು ಖಂಡಿಸಿ, ರಾಬರ್ಟ್ ಫಿಕೊ ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರೂ ದಾಳಿಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್‌ ಫಿಕೊ ಮೇಲೆ ಗುಂಡಿನ ದಾಳಿ; ಭೀಕರ ವಿಡಿಯೊ ಇಲ್ಲಿದೆ

ಆರೋಗ್ಯ ಸ್ಥಿತಿ ಹೇಗಿದೆ?

ಒಂದು ಗುಂಡು ಪ್ರಧಾನಿ ರಾಬರ್ಟ್ ಫಿಕೊ ಅವರ ಹೊಟ್ಟೆಗೆ ತಗುಲಿದ ಕಾರಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಅವರನ್ನು ತಕ್ಷಣ ಹೆಲಿಕಾಪ್ಟರ್ ಮೂಲಕ ಬನ್ಸ್ಕಾ ಬೈಸ್ಟ್ರಿಕಾಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ತೀವ್ರವಾದ ಶಸ್ತ್ರಕ್ರಿಯೆಯ ಅಗತ್ಯವಿದೆ ಎಂದು ಎಂದು ಸರ್ಕಾರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

Continue Reading

ವಿದೇಶ

Pakistan: “ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ, ಆದರೆ ನಾವು..” ಪಾಕ್‌ ಸಂಸದನ ಭಾಷಣ ವೈರಲ್‌

Pakistan:ಮುತ್ತಾಹಿದ್‌ ಕ್ವಾಮಿ ಮೂಮೆಂಟ್‌ ಪಾಕಿಸ್ತಾನ ಎಂಬ ಪಕ್ಷದ ಸಂಸದ ಸಯ್ಯದ್‌ ಮುಸ್ತಾಫಾ ಕಮಲ್‌, ಸಂಸತ್‌ನಲ್ಲಿ ಪಾಕಿಸ್ತಾನದಲ್ಲಿ ತಲೆದೋರಿರುವ ಸಮಸ್ಯೆ ಬಗ್ಗೆ ವಿವರಿಸುತ್ತಾರೆ. ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ. ಆದರೆ ಪಾಕಿಸ್ತಾನ ಮಾತ್ರ ಮಕ್ಕಳು ಚರಂಡಿ ಬೀಳುತ್ತಿರುವ ಬಗ್ಗೆ ವರದಿ ಮಾಡುತ್ತಿದ್ದೇವೆ. ಕರಾಚಿಯಲ್ಲಿ ಜನ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ದೇಶದಲ್ಲಿ 2.6 ಕೋಟಿ ಮಕ್ಕಳಿದ್ದು, ಅವರಿಗೆ ಶಿಕ್ಷಣ ಸೌಲಭ್ಯವೂ ಸಿಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ

VISTARANEWS.COM


on

Pakistan
Koo

ಪಾಕಿಸ್ತಾನ: ಕೆಲವು ದಿನಗಳ ಹಿಂದೆ ಪಾಕ್‌(Pakistan) ಸಂಸತ್‌ನಲ್ಲೇ ಅಲ್ಲಿನ ವಿಪಕ್ಷ ನಾಯಕನೇ ಭಾರತವನ್ನು ಹಾಡಿ ಹೊಗಳಿರುವ ವಿಡಿಯೋವೊಂದು ವೈರಲ್‌(Viral Video) ಆಗಿತ್ತು. ಇದೀಗ ಮತ್ತೊರ್ವ ಸಂಸದ ಭಾರತ(India)ದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ಸಂಸತ್‌ನಲ್ಲಿ ಮಾತನಾಡಿದ ಸಂಸದ ಸಯ್ಯದ್‌ ಮುಸ್ತಾಫಾ ಕಮಲ್‌ ಭಾರತ ಮತ್ತು ಪಾಕಿಸ್ತಾನವನ್ನು ಹೋಲಿಕೆ ಮಾಡಿ ಮಾತನಾಡಿದ್ದು, ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ. ಆದರೆ ಪಾಕಿಸ್ತಾನದ ಸ್ಥಿತಿ ಹೇಗಿದೆ ನೋಡಿ ಎಂದು ಹೇಳಿದ್ದಾರೆ. ಇದೀಗ ಇವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವೈರಲಾಗಿರುವ ವಿಡಿಯೋದಲ್ಲೇನಿದೆ?

ಮುತ್ತಾಹಿದ್‌ ಕ್ವಾಮಿ ಮೂಮೆಂಟ್‌ ಪಾಕಿಸ್ತಾನ ಎಂಬ ಪಕ್ಷದ ಸಂಸದ ಸಯ್ಯದ್‌ ಮುಸ್ತಾಫಾ ಕಮಲ್‌, ಸಂಸತ್‌ನಲ್ಲಿ ಪಾಕಿಸ್ತಾನದಲ್ಲಿ ತಲೆದೋರಿರುವ ಸಮಸ್ಯೆ ಬಗ್ಗೆ ವಿವರಿಸುತ್ತಾರೆ. ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ. ಆದರೆ ಪಾಕಿಸ್ತಾನ ಮಾತ್ರ ಮಕ್ಕಳು ಚರಂಡಿ ಬೀಳುತ್ತಿರುವ ಬಗ್ಗೆ ವರದಿ ಮಾಡುತ್ತಿದ್ದೇವೆ. ಕರಾಚಿಯಲ್ಲಿ ಜನ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ದೇಶದಲ್ಲಿ 2.6 ಕೋಟಿ ಮಕ್ಕಳಿದ್ದು, ಅವರಿಗೆ ಶಿಕ್ಷಣ ಸೌಲಭ್ಯವೂ ಸಿಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ

ಕರಾಚಿ ಪಾಕಿಸ್ತಾನದ ಆದಾಯದ ಮೂಲ. ಆದರೇ ಕಳೆದ 15ವರ್ಷಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಸಲು ಕರಾಚಿಗೆ ಸಾಧ್ಯವಾಗುತ್ತಿಲ್ಲ. ನೀರು ಬಂದರೂ ಟ್ಯಾಂಕರ್‌ ಮಾಫಿಯಾ ಶುರುವಾಗುತ್ತದೆ. ಇನ್ನು ನಾವು 48,000 ಶಾಲೆಗಳಿವೆ. ಆದರೆ ವರದಿ ಪ್ರಕಾರ 11,000 ಶಾಲೆಗಳು ಮುಚ್ಚಿವೆ. ಸಿಂಧ್‌ ಪ್ರಾಂತ್ಯದಲ್ಲಿ 70 ಲಕ್ಷ ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ದೇಶದಲ್ಲಿ ಒಟ್ಟು 2,62,00,000 ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ಆದರೂ ಸರ್ಕಾರ ಮಾತ್ರ ನಿದ್ದೆಯಿಂದ ಏಳುತ್ತಿಲ್ಲ ಎಂದು ಕಿಡಿ ಕಾರಿದ್ದಾರೆ.

ಕೆಲವು ದಿನಗಳ ಹಿಂದೆ ಇಡೀ ಪ್ರಪಂಚದಲ್ಲೇ ಭಾರತ ಬಲಿಷ್ಠ ರಾಷ್ಟ್ರವಾಗಿ ಬೆಳೆಯುತ್ತಿದೆ. ನಾವು ಮಾತ್ರ ಹಣಕಾಸಿನ ಸಹಾಯಕ್ಕಾಗಿ ಭಿಕ್ಷೆ ಬೇಡುತ್ತಿದ್ದೇವೆ ಎಂದು ಪಾಕಿಸ್ತಾನದ ವಿಪಕ್ಷ ನಾಯಕ ಮೌಲಾನ ಫಜ್ಲೂರ್‌ ರೆಹಮಾನ್‌ ಹೇಳಿದ್ದರು. ಅವರು ಪಾಕಿಸ್ತಾನ ಸಂಸತ್‌ನಲ್ಲಿ ಸರ್ಕಾರ ವೈಫಲ್ಯದ ವಿರುದ್ಧ ವಾಗ್ದಾಳಿ ನಡೆಸುತ್ತಾ ಭಾರತದ ವಿಚಾರವನ್ನು ಪ್ರಸ್ತಾಪಿಸಿದರು. ಭಾರತ ಜಾಗತಿಕ ಮಟ್ಟದಲ್ಲಿ ಸೂಪರ್‌ ಪವರ್‌ಫುಲ್‌ ರಾಷ್ಟ್ರವಾಗಿ ಬೆಳೆಯುತ್ತಿದೆ ಪಾಕಿಸ್ತಾನ ಮಾತ್ರ ದಿವಾಳಿತನದ ಸಾಗುತ್ತಿದೆ. 1947ರಲ್ಲಿ ಭಾರತ ಮತ್ತು ಪಾಕಿಸ್ತಾನ ಸ್ವಾತಂತ್ರ್ಯ ಪಡೆದುಕೊಂಡಿತ್ತು. ಇಂದು ಭಾರತದ ಸ್ಥಿತಿ ಎಲ್ಲಿದೆ ಹಾಗೂ ನಮ್ಮ ಸ್ಥಿತಿ ಎಲ್ಲಿದೆ? ಇಷ್ಟಕ್ಕೆಲ್ಲಾ ಯಾರು ಹೊಣೆ ಎಂದು ಜಮಾತ್‌ ಉಲೇಮಾ ಎ-ಇಸ್ಲಾಂನ ಅಧ್ಯಕ್ಷರೂ ಆಗಿರುವ ಫಜ್ಲೂರ್‌ ರೆಹಮಾನ್‌ ಕಟುವಾಗಿ ಪ್ರಶ್ನಿಸಿದ್ದರು.

ಇದನ್ನೂ ಓದಿ:Prajwal Revanna Case: ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಅವರು ಇತ್ತೀಚೆಗೆ ನಡೆದ ಚುನಾವಣೆ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸಿ, ಇದು ಎಂಥಾ ಚುನಾವಣೆ? ಇಲ್ಲಿ ಸೋಲುಂಡವರಿಗೆ ತೃಪ್ತಿಯೇ ಇಲ್ಲ ಮತ್ತು ಗೆದ್ದವರಿಗೆ ಸಂತೋಷವೇ ಇಲ್ಲ. ಪ್ರಸ್ತುತ ಆಡಳಿತ ನಡೆಸುತ್ತಿರುವ ಸರ್ಕಾರದ ಸದಸ್ಯರು ನೈತಿಕತೆಯನ್ನು ಮರೆತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಮಾರಾಟ ಮಾಡುತ್ತಿದ್ದಾರೆ. ಗೋಡೆಗಳ ಹಿಂದೆ ನಮ್ಮನ್ನು ನಿಯಂತ್ರಿಸುವ ಶಕ್ತಿಗಳಿವೆ, ಮತ್ತು ನಾವು ಕೇವಲ ಕೈಗೊಂಬೆಗಳಾಗಿದ್ದಾಗ ಅವರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಫಜ್ಲುರ್ ರೆಹಮಾನ್ ಕಿಡಿ ಕಾರಿದ್ದರು.


Continue Reading

ಪ್ರಮುಖ ಸುದ್ದಿ

Robert Fico: ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು, ಅಮೆರಿಕ ವಿರೋಧಿ ನಾಯಕ ಗಂಭೀರ

Robert Fico: ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯಕ್ಕೆ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. 59 ವರ್ಷದ ರಾಬರ್ಟ್ ಫಿಕೊ ಅವರು ಸ್ಥಳೀಯ ಸಭಾಂಗಣದ ಮುಂದೆ ತಮ್ಮ ಬೆಂಬಲಿಗರನ್ನು ಭೇಟಿಯಾಗುವ ಸಂದರ್ಭದಲ್ಲಿ ದುಷ್ಕರ್ಮಿ ಅವರ ಹೊಟ್ಟೆಗೆ ನಾಲ್ಕು ಗುಂಡುಗಳನ್ನು ಹಾರಿಸಿದ್ದಾನೆ.

VISTARANEWS.COM


on

Slovakian PM Robert Fico critical after assassination attempt
Koo

ಹೊಸದಿಲ್ಲಿ: ಅಮೆರಿಕ ವಿರೋಧಿ ನಿಲುವುಗಳನ್ನು ಹೊಂದಿರುವ ತೀವ್ರ ಎಡಪಂಥೀಯ ನಾಯಕ, ಸ್ಲೊವಾಕಿಯಾ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ (Slovakia Prime minister Robert Fico) ಹತ್ಯೆ ಯತ್ನ (Assassination attempt) ಬುಧವಾರ ನಡೆದಿದೆ. ದುಷ್ಕರ್ಮಿಯೊಬ್ಬ ಅವರತ್ತ ಗುಂಡು ಹಾರಿಸಿದ್ದು, ರಾಬರ್ಟ್‌ ಫಿಕೊ ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸುದ್ದಿ ದೂರದರ್ಶನ ಕೇಂದ್ರ TA3 ಪ್ರಕಾರ, ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯಕ್ಕೆ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. 59 ವರ್ಷದ ರಾಬರ್ಟ್ ಫಿಕೊ ಅವರು ಸ್ಥಳೀಯ ಸಭಾಂಗಣದ ಮುಂದೆ ತಮ್ಮ ಬೆಂಬಲಿಗರನ್ನು ಭೇಟಿಯಾಗುವ ಸಂದರ್ಭದಲ್ಲಿ ದುಷ್ಕರ್ಮಿ ಅವರ ಹೊಟ್ಟೆಗೆ ನಾಲ್ಕು ಗುಂಡುಗಳನ್ನು ಹಾರಿಸಿದ್ದಾನೆ.

“ಇಂದು ಹ್ಯಾಂಡ್ಲೋವಾದಲ್ಲಿ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಹತ್ಯೆ ಪ್ರಯತ್ನ ನಡೆದಿದೆ. ಗಾಯಗೊಂಡ ಅವರನ್ನು ಹೆಲಿಕಾಪ್ಟರ್ ಮೂಲಕ ಬನ್ಸ್ಕಾ ಬೈಸ್ಟ್ರಿಕಾಗೆ ಸಾಗಿಸಲಾಗುತ್ತಿದೆ. ಅವರಿಗೆ ತೀವ್ರವಾದ ಶಸ್ತ್ರಕ್ರಿಯೆಯ ಅಗತ್ಯವಿದೆ” ಎಂದು ಎಂದು ಸರ್ಕಾರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಸ್ಲೊವಾಕಿಯಾ ಸಂಸತ್ತಿನ ಉಪ ಸ್ಪೀಕರ್ ಲುಬೊಸ್ ಬ್ಲಾಹಾ ಅವರು ಸಂಸತ್ತಿನ ಅಧಿವೇಶನದಲ್ಲಿ ರಾಬರ್ಟ್ ಫಿಕೊ ಮೇಲಿನ ದಾಳಿಯನ್ನು ದೃಢಪಡಿಸಿದರು. ಸ್ಲೋವಾಕಿಯಾದ ಅಧ್ಯಕ್ಷ ಜುಝಾನಾ ಕ್ಯಾಪುಟೋವಾ ಈ ದಾಳಿಯನ್ನು ಖಂಡಿಸಿದ್ದು, ಇದು ಪ್ರಧಾನ ಮಂತ್ರಿಯವರ ಮೇಲಿನ “ಕ್ರೂರ ಮತ್ತು ನಿರ್ದಯ” ದಾಳಿ ಎಂದು ಕರೆದರು. “ನಾನು ಆಘಾತಕ್ಕೊಳಗಾಗಿದ್ದೇನೆ. ಈ ನಿರ್ಣಾಯಕ ಕ್ಷಣದಲ್ಲಿ ರಾಬರ್ಟ್ ಫಿಕೊಗೆ ಹೆಚ್ಚಿನ ಶಕ್ತಿ ಮತ್ತು ಚೇತರಿಕೆ ದೊರೆಯಲಿ ಎಂದು ಹಾರೈಸುತ್ತೇನೆ” ಎಂದರು.

ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿರುವ ರಾಬರ್ಟ್ ಫಿಕೊ ಮತ್ತು ಅವರ ಎಡಪಂಥೀಯ ಸ್ಮರ್ (ದಿಕ್ಕು) ಪಕ್ಷವು ಸ್ಲೋವಾಕಿಯಾದಲ್ಲಿ ಸೆಪ್ಟೆಂಬರ್ 30ರಂದು ನಡೆದ ಸಂಸತ್ತಿನ ಚುನಾವಣೆಯಲ್ಲಿ ಜಯಗಳಿಸಿತು. ಈ ಗೆಲುವು ಫಿಕೊ ಅವರ ರಾಜಕೀಯ ಪುನರಾಗಮನಕ್ಕೆ ದಾರಿಯಾಗಿದೆ. ಅವರು ರಷ್ಯಾದ ಪರ ಮತ್ತು ಅಮೇರಿಕನ್ ವಿರೋಧಿ ನಿಲುವನ್ನು ಹೊಂದಿದ್ದಾರೆ. ಫಿಕೊ ನೀತಿಗಳನ್ನು ಪ್ರತಿಭಟಿಸಲು ಸಾವಿರಾರು ಜನರು ರಾಜಧಾನಿಯಲ್ಲಿ ಮತ್ತು ಸ್ಲೋವಾಕಿಯಾದಾದ್ಯಂತ ಪದೇ ಪದೆ ರ್ಯಾಲಿ, ಪ್ರತಿಭಟನೆ ಮಾಡಿದ್ದಾರೆ.

ರಾಬರ್ಟ್ ಫಿಕೊ ಹತ್ಯೆಯ ಯತ್ನದ ಬಗ್ಗೆ ವಿಶ್ವದಾದ್ಯಂತ ಹಲವಾರು ನಾಯಕರು ಆಘಾತ ವ್ಯಕ್ತಪಡಿಸಿದ್ದಾರೆ. Xನಲ್ಲಿನ ಪೋಸ್ಟ್‌ನಲ್ಲಿ, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ʼಯುರೋಪಿಯನ್ ರಾಜಕೀಯದಲ್ಲಿ ಹಿಂಸೆಗೆ ಯಾವುದೇ ಸ್ಥಳವಿಲ್ಲʼ ಎಂದು ಹೇಳಿದರು.

ಆಸ್ಟ್ರಿಯಾದ ಚಾನ್ಸೆಲರ್ ಕಾರ್ಲ್ ನೆಹಮ್ಮರ್ ಅವರು, “ನಮ್ಮ ಪ್ರಜಾಪ್ರಭುತ್ವಗಳಲ್ಲಿ ದ್ವೇಷ ಮತ್ತು ಹಿಂಸಾಚಾರಕ್ಕೆ ಆಸ್ಪದ ಕೊಡಬಾರದು. ಅತ್ಯಂತ ನಿರ್ಣಯದಿಂದ ಇದರ ವಿರುದ್ಧ ಹೋರಾಡಬೇಕು” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಸಿಎಎ ಅನುಷ್ಠಾನ ಮೋದಿ ಸರ್ಕಾರದ ದಿಟ್ಟ ನಿರ್ಧಾರ

ಅಲ್ಪಸಂಖ್ಯಾತರನ್ನು ಗುರಿಯಾಗಿಸಲು ಸಿಎಎ ಮತ್ತು ಅಷ್ಟೇ ವಿವಾದಾತ್ಮಕ ಎನ್ಆರ್​​ಸಿ ಅಥವಾ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ತರಲಾಗಿದೆ ಎಂಬ ಭಯವನ್ನು ಗೃಹ ಸಚಿವರು ಆಗಾಗ ಹೇಳಿಕೆಗಳ ಮೂಲಕ ನಿವಾರಿಸುತ್ತ ಬಂದಿದ್ದಾರೆ. ಸಿಎಎ ಬಗ್ಗೆ ಅಪಪ್ರಚಾರಗಳ ಮೂಲಕ ಈಗಲೂ ಮುಸ್ಲಿಮರನ್ನು ದಾರಿ ತಪ್ಪಿಸಲು ಯತ್ನಿಸಲಾಗುತ್ತಿದೆ. ಇದು ಯಾರ ಪೌರತ್ವವನ್ನೂ ಕಸಿದುಕೊಳ್ಳಲು ಇರುವುದಲ್ಲ.

VISTARANEWS.COM


on

CAA
Koo

ಭಾರಿ ಆಕ್ಷೇಪದ ಮಧ್ಯೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಡಿ (ಸಿಎಎ) ಮೊದಲ ಕಂತಿನಲ್ಲಿ 14 ಜನರಿಗೆ ಭಾರತೀಯ ನಾಗರಿಕತ್ವವನ್ನು ನೀಡಲಾಗಿದೆ. ಎಲ್ಲರಿಗೂ ಪೌರತ್ವ ಪ್ರಮಾಣಪತ್ರವನ್ನು ಬುಧವಾರ ವಿತರಿಸಲಾಯಿತು. ಈ ಮೂಲಕ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆ ನೀಡುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಅಧಿಕೃತ ಚಾಲನೆ ನೀಡಿದೆ. ದೆಹಲಿಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು, 14 ಜನರು ಆನ್​ಲೈನ್​ ಮೂಲಕ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ ನಂತರ ಭಾರತೀಯ ಪೌರತ್ವ ನೀಡಿದ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದರು. ಜಿಲ್ಲಾ ಮಟ್ಟದ ಸಮಿತಿಗಳು ಗೊತ್ತುಪಡಿಸಿದ ಅಧಿಕಾರಿಗಳ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆಯ ನಂತರ ಅರ್ಜಿಗಳನ್ನು ಅಖೈರು ಮಾಡಲಾಗಿದೆ.

ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ನಾಲ್ಕು ವರ್ಷಗಳ ನಂತರ ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯಿದೆಯನ್ನು ಈ ವರ್ಷ ಜಾರಿ ಮಾಡಿದೆ. ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರು 2014ರ ಡಿಸೆಂಬರ್ 31ಕ್ಕೂ ಮೊದಲು ಭಾರತಕ್ಕೆ ಬಂದಿದ್ದಲ್ಲಿ ಅವರಿಗೆ ಭಾರತದ ನಾಗರಿಕತ್ವ ನೀಡಲು ಕೇಂದ್ರ ಸರ್ಕಾರ ಸಿಎಎ ಕಾಯ್ದೆ ಜಾರಿಗೆ ತಂದಿದೆ. 2019ರಲ್ಲಿ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಇದರಲ್ಲಿ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಕಾಯ್ದೆಯಡಿ ಬರುತ್ತಾರೆ. 2019ರಲ್ಲಿ ಜಾರಿಯಾದರೂ ಇದರ ನಿಯಮಗಳನ್ನು ರೂಪಿಸಲು ಸರ್ಕಾರ 4 ವರ್ಷ ಸಮಯಾವಕಾಶ ತೆಗೆದುಕೊಂಡಿತು. 2024ರ ಮಾರ್ಚ್ 11ರಂದು ಅಧಿಕೃತ ನಿಯಮಾವಳಿಗಳನ್ನು ರೂಪಿಸಿ ಆದೇಶ ಹೊರಡಿಸಿತು. ನಿಗದಿಪಡಿಸಿದ ಪೋರ್ಟಲ್​ ಮೂಲಕ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ಇವುಗಳನ್ನು ಜಿಲ್ಲಾ ಮಟ್ಟದ ಸಮಿತಿ (ಡಿಎಲ್​ಸಿ), ರಾಜ್ಯ ಮಟ್ಟದ ಸಶಕ್ತ ಸಮಿತಿಯಿಂದ (ಇಸಿ) ಪರಿಶೀಲನೆ ಮಾಡಿದ ಬಳಿಕ ಪೌರತ್ವ ನೀಡಬೇಕೆ ಬೇಡವೇ ಎಂಬುದನ್ನು ನಿರ್ಧರಿಸಲಾಗುತ್ತದೆ.

ಇದೊಂದು ಐತಿಹಾಸಿಕ ಘಟ್ಟ. ಇತಿಹಾಸದ ಸಂಕಷ್ಟಗಳಲ್ಲಿ ನೊಂದವರು ಒಂದು ನೆಲೆಯನ್ನು ಪಡೆಯಲು ಇಂದು ಸಾಧ್ಯವಾಗಿದೆ. ಯಥಾಪ್ರಕಾರ, ಕೇಂದ್ರ ಸರ್ಕಾರದ ಎದುರಾಳಿಗಳು ಈ ಕ್ರಮವನ್ನು ಹಳಿಯುತ್ತಿದ್ದಾರೆ. ಇದು ಸಂಸತ್​ನಲ್ಲಿ ಅಂಗೀಕಾರಗೊಂಡಾಗ ದೆಹಲಿಯಯಲ್ಲಿ ಮತ್ತು ಅಸ್ಸಾಂನಲ್ಲಿ ಭಾರಿ ಪ್ರತಿಭಟನೆಗಳು ನಡೆದಿದ್ದವು. ಇದೀಗ ಸರ್ಕಾರ ಎಲ್ಲ ಸಿದ್ಧತೆಗಳ ಬಳಿಕ ಜಾರಿಗೆ ತಂದಿದೆ. ಪಶ್ಚಿಮ ಬಂಗಾಳ, ಕೇರಳದಂಥ ಕೆಲವು ರಾಜ್ಯಗಳು ಇದನ್ನು ಜಾರಿಗೆ ತರುವುದಿಲ್ಲ ಎಂದು ಹೇಳಿದ್ದೂ ಉಂಟು. ಆದರೆ ಕಾಲಕ್ರಮೇಣ ಇದರ ಕುರಿತು ಇದ್ದ ಪ್ರತಿಭಟನೆಯ ಅಂಶ ಕಡಿಮೆಯಾಗಿದೆ. ಆದರೆ ಇದರ ಬಗೆಗೆ ಕೆಲವು ವಲಯದಲ್ಲಿ ಇನ್ನೂ ತಪ್ಪು ಕಲ್ಪನೆ ಉಳಿದಂತಿದೆ. ಇದು ನಿವಾರಣೆ ಆಗುವುದು ಮತ್ತು ಎಲ್ಲರೂ ಇದರ ಜಾರಿಗೆ ಸಹಕರಿಸುವುದು ಮುಖ್ಯ.

ಅಲ್ಪಸಂಖ್ಯಾತರನ್ನು ಗುರಿಯಾಗಿಸಲು ಸಿಎಎ ಮತ್ತು ಅಷ್ಟೇ ವಿವಾದಾತ್ಮಕ ಎನ್ಆರ್​​ಸಿ ಅಥವಾ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ತರಲಾಗಿದೆ ಎಂಬ ಭಯವನ್ನು ಗೃಹ ಸಚಿವರು ಆಗಾಗ ಹೇಳಿಕೆಗಳ ಮೂಲಕ ನಿವಾರಿಸುತ್ತ ಬಂದಿದ್ದಾರೆ. ಸಿಎಎ ಬಗ್ಗೆ ಅಪಪ್ರಚಾರಗಳ ಮೂಲಕ ಈಗಲೂ ಮುಸ್ಲಿಮರನ್ನು ದಾರಿ ತಪ್ಪಿಸಲು ಯತ್ನಿಸಲಾಗುತ್ತಿದೆ. ಇದು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಮಾತ್ರ ಪೌರತ್ವ ನೀಡುವ ಉದ್ದೇಶವನ್ನು ಹೊಂದಿದೆ. ಇದು ಯಾರ ಪೌರತ್ವವನ್ನೂ ಕಸಿದುಕೊಳ್ಳಲು ಇರುವುದಲ್ಲ. ಈ ಕಾಯ್ದೆಯಲ್ಲಿ ಮುಸ್ಲಿಮರನ್ನು ಕೈಬಿಟ್ಟ ಕಾರಣ ವಿರೋಧ ಪಕ್ಷಗಳಿಂದ ಮತ್ತು ಮುಸ್ಲಿಂ ಸಮುದಾಯದಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಆದರೆ ಇದರಲ್ಲಿ ಹುರುಳಿಲ್ಲ. ಮುಸ್ಲಿಮರಿಗೂ ಈ ಕಾಯಿದೆಗೂ ಯಾವುದೇ ಸಂಬಂಧವಿಲ್ಲ.

ಹಿಂದೂ, ಸಿಖ್, ಬೌದ್ಧರಿಗೆ ಭಾರತ ಹೊರತುಪಡಿಸಿ ಪೌರತ್ವ ಪಡೆಯಲು ಬೇರೆ ದೇಶಗಳೇ ಇಲ್ಲ. ಇತಿಹಾಸವನ್ನು ನೋಡಿದರೆ, ಭಾರತ, ಅಫ್ಘಾನಿಸ್ಥಾನ, ಪಾಕಿಸ್ಥಾನ ಮತ್ತು ಬಾಂಗ್ಲಾದೇಶದ ಗಡಿಯುದ್ದಕ್ಕೂ ವಲಸೆ ನಡೆದಿರುವುದು ತಿಳಿಯುತ್ತದೆ. ಧರ್ಮದ ಕಾರಣಕ್ಕಾಗಿ ದೌರ್ಜನ್ಯಕ್ಕೆ ಒಳಗಾಗಿ ಭಾರತಕ್ಕೆ ಆಶ್ರಯ ಕೋರಿ ಬಂದಿರುವ ಸಮುದಾಯಗಳಲ್ಲಿ ಅನೇಕರ ಟ್ರಾವೆಲ್‌ ಡಾಕ್ಯುಮೆಂಟ್‌ಗಳ ಅವಧಿ ಮುಗಿದಿದೆ ಅಥವಾ ಅಪೂರ್ಣ ದಾಖಲೆಗಳಿವೆ ಅಥವಾ ಅವರ ಬಳಿ ದಾಖಲೆಗಳೇ ಇಲ್ಲ. ಮೋದಿ ಸರ್ಕಾರವು ತನ್ನ ಮೊದಲನೇ ಅವಧಿಯಲ್ಲಿ ಈ ರೀತಿಯ ವಲಸಿಗರಿಗೆ ಪಾಸ್‌ಪೋರ್ಟ್‌ ಅಧಿನಿಯಮ (ಭಾರತ ಪ್ರವೇಶಕ್ಕೆ) 1920ರ ಹಾಗೂ ವಿದೇಶಿ ಅಧಿನಿಯಮ 1946ರ ಪ್ರತಿಕೂಲ ದಂಡನಾರ್ಹ ಅಂಶಗಳಿಂದಲೂ ವಿನಾಯಿತಿ ನೀಡಿದೆ. ಇದಷ್ಟೇ ಅಲ್ಲದೇ 2016ರಲ್ಲಿ ಮೋದಿ ಸರ್ಕಾರ ಈ ನಿರಾಶ್ರಿತರಿಗೆ ದೀರ್ಘ‌ಕಾಲಿಕ ವೀಸಾ ಪಡೆಯಲೂ ಅರ್ಹರನ್ನಾಗಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆಯು ಒಟ್ಟಲ್ಲಿ, ಧಾರ್ಮಿಕ ಹಿಂಸೆಗೆ ತುತ್ತಾಗಿರುವವರಿಗೆ ನಾಗರಿಕತೆ ದೊರಕುವಂತೆ ಮಾಡಲು ಸಶಕ್ತಗೊಳಿಸುತ್ತದೆ.

ಸಂವಿಧಾನದ ಅನುಚ್ಛೇದ 25, ಪ್ರತಿಯೊಬ್ಬ ವ್ಯಕ್ತಿಗೂ ತನಗೆ ಇಷ್ಟವಾದ ಧರ್ಮವನ್ನು ಮುಕ್ತವಾಗಿ ಅನುಸರಿಸಲು, ಆಚರಿಸಲು ಸಮಾನ ಹಕ್ಕನ್ನು ನೀಡುತ್ತದೆ. ಪೌರತ್ವ ತಿದ್ದುಪಡಿ ಕಾಯ್ದೆಯು ಯಾವುದೇ ರೀತಿಯಲ್ಲೂ ಈ ಅಂಶಗಳನ್ನು ಉಲ್ಲಂಘಿಸಿಲ್ಲ. ಸಿಎಎಯಿಂದಾಗಿ ಭಾರತೀಯ ಅಲ್ಪಸಂಖ್ಯಾತರ ಹಕ್ಕುಗಳ, ಭಾರತೀಯ ಜಾತ್ಯತೀತ ಮೌಲ್ಯಗಳ ಮತ್ತು ಸಂಪ್ರದಾಯಗಳ ಹನನವಾಗುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ. ಸಿಎಎ ಎನ್ನುವುದು ಅನ್ಯಾಯವನ್ನು ಎದುರಿಸುತ್ತಿರುವ ಸಾವಿರಾರು ನಿರ್ವಸಿತ ಕುಟುಂಬಗಳನ್ನು ಸಬಲೀಕರಣಗೊಳಿಸುವ ಐತಿಹಾಸಿಕ ಹೆಜ್ಜೆಯಾಗಿದೆ. ಇದು ಸಮರ್ಪಕವಾಗಿ ಅನುಷ್ಠಾನಕ್ಕೂ ಬರುತ್ತಿದೆ ಎಂದು ಸಂತೋಷಪಡೋಣ.

ಇದನ್ನೂ ಓದಿ: CAA: ಸಿಎಎ ಕಾಯ್ದೆಯಡಿ 14 ವಲಸಿಗರಿಗೆ ಭಾರತದ ಪೌರತ್ವ; ಏನಿದು ಕಾಯ್ದೆ? ಭಾರತದ ಮುಸ್ಲಿಮರಿಗೆ ತೊಂದರೆ ಇದೆಯೇ?

Continue Reading
Advertisement
sunil chhetri
ಕ್ರೀಡೆ9 mins ago

Sunil Chhetri: ಮೈ ಬ್ರದರ್, ನಿಮ್ಮ ಬಗ್ಗೆ ಹೆಮ್ಮೆಯಿದೆ ಎಂದು ಚೆಟ್ರಿಗೆ ಶುಭ ಹಾರೈಸಿದ ಗೆಳೆಯ ವಿರಾಟ್​ ಕೊಹ್ಲಿ

Success Story
ದೇಶ14 mins ago

Success Story: ರಾಧಾಮಣಿ ಅಮ್ಮಂಗೆ ವಯಸ್ಸು ಕೇವಲ ನಂಬರ್‌ ಅಷ್ಟೇ; 73 ವರ್ಷದ ಇವರ ಬಳಿ ಇದೆ ಬರೋಬ್ಬರಿ 11 ವಾಹನಗಳ ಲೈಸನ್ಸ್‌

Kiccha Sudeep Max Cinema shooting completed
ಸ್ಯಾಂಡಲ್ ವುಡ್18 mins ago

Kiccha Sudeep: ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಮುಗಿಸಿದ ಕಿಚ್ಚ ಸುದೀಪ್‌: ರಿಲೀಸ್‌ ಯಾವಾಗ?

gold rate today priyamani
ಚಿನ್ನದ ದರ33 mins ago

Gold Rate Today: ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ, ಮತ್ತೆ ಚಿನ್ನದ ಮಾರುಕಟ್ಟೆಯಲ್ಲಿ ತುರುಸು; ದರಗಳು ಹೀಗಿವೆ

Swati maliwal
ದೇಶ37 mins ago

Swati Maliwal: ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆಆರೋಪಿ ಕೇಜ್ರಿವಾಲ್‌ ಜೊತೆ ಏರ್‌ಪೋರ್ಟ್‌ನಲ್ಲಿ ಪ್ರತ್ಯಕ್ಷ

Murder case in Bengaluru
ಬೆಂಗಳೂರು39 mins ago

Murder case : ಮನೆ ಓನರ್ ಕೊಲೆ ಕೇಸ್; ಇದು ಕಳ್ಳಿ ಕೊಲೆಗಾರ್ತಿಯಾದ ಕಥೆ

Cannes 2024 Urvashi Rautela pink gown remind Deepika Padukone
ಬಾಲಿವುಡ್51 mins ago

Cannes 2024: ಕಾನ್ ರೆಡ್‌ ಕಾರ್ಪೆಟ್‌ ಮೇಲೆ ಮಿಂಚಿದ ಊರ್ವಶಿ ರೌಟೇಲಾ: ದೀಪಿಕಾ ಸ್ಟೈಲ್ ಕಾಪಿ ಮಾಡಿದ್ರಾ?

Sanju Samson
ಕ್ರೀಡೆ1 hour ago

Sanju Samson: ಸತತ 4 ಸೋಲು; ಬೇಸರ ಹೊರಹಾಕಿದ ನಾಯಕ ಸಂಜು ಸ್ಯಾಮ್ಸನ್

Suspicious Case
ಬೆಂಗಳೂರು2 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Star Suvarna HuAnthiya UhuuAnthiya new celebrity game show
ಕಿರುತೆರೆ2 hours ago

Star Suvarna: ಕಿರುತೆರೆಗೆ ಬರ್ತಿದೆ ಹೊಸ ಸೆಲೆಬ್ರಿಟಿ ಗೇಮ್ ಶೋ ‘Huu ಅಂತೀಯಾ…Uhuu ಅಂತೀಯಾ’: ಪ್ರಸಾರ ಯಾವಾಗ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌