Imran Khan:‌ ಇಮ್ರಾನ್‌ ಖಾನ್‌ಗೆ ಜೈಲೇ ಕಾಯಂ! ಮತ್ತೊಂದು ಪ್ರಕರಣದಲ್ಲಿ ಪಾಕ್‌ ಮಾಜಿ ಪ್ರಧಾನಿ ಮತ್ತು ಪತ್ನಿ ಬುಶ್ರಾ ಬೀಬಿಗೆ 14 ವರ್ಷ ಸಜೆ - Vistara News

ವಿದೇಶ

Imran Khan:‌ ಇಮ್ರಾನ್‌ ಖಾನ್‌ಗೆ ಜೈಲೇ ಕಾಯಂ! ಮತ್ತೊಂದು ಪ್ರಕರಣದಲ್ಲಿ ಪಾಕ್‌ ಮಾಜಿ ಪ್ರಧಾನಿ ಮತ್ತು ಪತ್ನಿ ಬುಶ್ರಾ ಬೀಬಿಗೆ 14 ವರ್ಷ ಸಜೆ

ತೋಷಖಾನಾ (ಖಜಾನೆಗೆ ಸೇರಬೇಕಾದ ಉಡುಗೊರೆಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಿದ ಪ್ರಕರಣ) ಪ್ರಕರಣದಲ್ಲಿ ಇಮ್ರಾನ್ ಖಾನ್ (Pakistan Ex PM Imran Khan) ಹಾಗೂ ಪತ್ನಿ ಬುಶ್ರಾ ಬೀಬಿಗೆ 14 ವರ್ಷಗಳ ಜೈಲು ಶಿಕ್ಷೆಯಾಗಿದೆ.

VISTARANEWS.COM


on

imran khan bushra bibi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರಾಚಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ (Pakistan Ex PM Imran Khan) ಅವರಿಗೆ ಮತ್ತೊಂದು ಪ್ರಕರಣದಲ್ಲಿ 14 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅವರ ಪತ್ನಿ ಬುಶ್ರಾ ಬೀಬಿಗೂ (Bushra Bibi) ಇದೇ ಶಿಕ್ಷೆಯಾಗಿದೆ. ನಿನ್ನೆ ತಾನೇ ಸರ್ಕಾರಿ ರಹಸ್ಯಗಳನ್ನು ಬಹಿರಂಗ ಮಾಡಿದ ಪ್ರಕರಣವೊಂದರಲ್ಲಿ ಅವರಿಗೆ 10 ವರ್ಷದ ಜೈಲು ಶಿಕ್ಷೆ ವಿಧಿಸಲಾಗಿತ್ತು.

ತೋಷಖಾನಾ (ಖಜಾನೆಗೆ ಸೇರಬೇಕಾದ ಉಡುಗೊರೆಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡಿದ ಪ್ರಕರಣ) ಪ್ರಕರಣದಲ್ಲಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿಗೆ 14 ವರ್ಷಗಳ ಜೈಲು ಶಿಕ್ಷೆಯಾಗಿದೆ ಎಂದು ಡಾನ್‌ ವರದಿ ಮಾಡಿದೆ. ಮುಂಬರುವ ಫೆಬ್ರವರಿ 8ರ ಸಾರ್ವತ್ರಿಕ ಚುನಾವಣೆಗಳಲ್ಲಿ ಭಾರಿ ಸ್ಪರ್ಧೆ ಒಡ್ಡಲು ಮುಂದಾಗಿದ್ದ ಇಮ್ರಾನ್‌ ಅವರ ಚುನಾವಣಾ ಮಹತ್ವಾಕಾಂಕ್ಷೆಗಳಿಗೆ ಇದರಿಂದ ಮತ್ತೊಂದು ಹಿನ್ನಡೆಯಾಗಿದೆ.

ಅಕೌಂಟಬಿಲಿಟಿ ಕೋರ್ಟ್‌ ನ್ಯಾಯಾಧೀಶ ಮೊಹಮ್ಮದ್ ಬಶೀರ್ ಅವರು ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ಇಮ್ರಾನ್‌ ಖಾನ್‌ ಅವರ ವಿಚಾರಣೆ ನಡೆಸಿದರು. ಅಲ್ಲಿ ಮಾಜಿ ಪ್ರಧಾನಿಯನ್ನು ಪ್ರಸ್ತುತ ಬಂಧಿಸಿಡಲಾಗಿದೆ. ಪ್ರಕರಣದಲ್ಲಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಇಬ್ಬರೂ 14 ವರ್ಷಗಳ ಜೈಲು ಶಿಕ್ಷೆ ಮತ್ತು ಭಾರಿ ದಂಡವನ್ನು ಪಡೆದರು. ಜೊತೆಗೆ ಮುಂದಿನ 10 ವರ್ಷಗಳ ಕಾಲ ಯಾವುದೇ ಸರ್ಕಾರಿ ಹುದ್ದೆಯನ್ನು ಹೊಂದದಿರುವ ನಿರ್ಬಂಧವೂ ಸೇರಿದೆ.

ನಿನ್ನೆ, ಸರ್ಕಾರಿ ದಾಖಲೆ ಹೊರಗೆಡವಿದ ಪ್ರಕರಣದಲ್ಲಿ ಇಮ್ರಾನ್‌ಗೆ 10 ವರ್ಷ ಜೈಲು ವಿಧಿಸಲಾಗಿತ್ತು. ಇಮ್ರಾನ್‌ ಖಾನ್‌ ಅವರು ಪ್ರಧಾನಿಯಾಗಿದ್ದಾಗ ಪಾಕಿಸ್ತಾನಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಯೊಂದನ್ನು ಅಮೆರಿಕಕ್ಕೆ ನೀಡಿದ್ದಾರೆ ಎಂಬ ಆರೋಪ. ಇದಕ್ಕೆ ಸಂಬಂಧಿಸಿದಂತೆ ಅಫಿಶಿಯಲ್‌ ಸೀಕ್ರೆಟ್ಸ್‌ ಆ್ಯಕ್ಟ್‌ ಅನ್ವಯ ಇಮ್ರಾನ್‌ ಖಾನ್‌ ಹಾಗೂ ಮಾಜಿ ವಿದೇಶಾಂಗ ಸಚಿವ ಶಾ ಮಹ್ಮೂದ್‌ ಖುರೇಷಿ ವಿರುದ್ಧ ಕೇಸ್‌ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಇಮ್ರಾನ್‌ ಖಾನ್‌ ಹಾಗೂ ಶಾ ಮಹ್ಮೂದ್‌ ಖುರೇಷಿ ಅವರಿಗೆ ತಲಾ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇಮ್ರಾನ್‌ ಖಾನ್‌ ಅವರು ರಹಸ್ಯ ದಾಖಲೆಯನ್ನು ತನಿಖಾ ಸಂಸ್ಥೆಗಳಿಗೆ ವಾಪಸ್‌ ನೀಡಿಲ್ಲ ಎಂದು ಫೆಡರಲ್‌ ಏಜೆನ್ಸಿಯು ಕೋರ್ಟ್‌ ತಿಳಿಸಿದೆ. ಇದಾದ ಬಳಿಕ ಕೋರ್ಟ್‌ ಶಿಕ್ಷೆ ವಿಧಿಸಿದೆ.

ಚುನಾವಣೆ ಆಯೋಗವು ಈಗಾಗಲೇ ಇಮ್ರಾನ್‌ ಖಾನ್‌ ಅವರಿಗೆ ಭಾರಿ ಶಾಕ್‌ ನೀಡಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಇಮ್ರಾನ್‌ ಖಾನ್‌ ಅವರು 2024ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸವಂತಿಲ್ಲ ಎಂದು ಪಾಕಿಸ್ತಾನ ಚುನಾವಣೆ ಆಯೋಗ (Election Commission of Pakistan) ಹೇಳಿದೆ. ಇಮ್ರಾನ್‌ ಖಾನ್‌ ಅವರು ಸಲ್ಲಿಸಿದ ನಾಮನಿರ್ದೇಶನಗಳನ್ನು ಪಾಕ್‌ ಚುನಾವಣೆ ಆಯೋಗವು ನಿರಾಕರಿಸಿದೆ. ಇದರ ಬೆನ್ನಲ್ಲೇ ಇಮ್ರಾನ್‌ ಖಾನ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ: Imran Khan: ಇಮ್ರಾನ್‌ ಖಾನ್‌ಗೆ ‌10 ವರ್ಷ ಜೈಲು; ಪಾಕ್ ಚುನಾವಣೆ ಮೊದಲೇ ಶಾಕ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Anant-Radhika Wedding: ಅನಂತ್‌ ಅಂಬಾನಿ-ರಾಧಿಕಾ ಮರ್ಚಂಟ್‌ ವಿವಾಹ ಸಮಾರಂಭಕ್ಕೆ ಸ್ಥಳ ನಿಗದಿ

Anant-Radhika Wedding: ಕಳೆದ ತಿಂಗಳು ಅದ್ಧೂರಿಯಾಗಿ ಅನಂತ್‌ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ವಿವಾಹಪೂರ್ವ ಕಾರ್ಯಕ್ರಮ ನಡೆದಿತ್ತು. ಜುಲೈಯಲ್ಲಿ ಇವರ ವಿವಾಹ ನಡೆಯಲಿದೆ. ಇದೀಗ ವಿವಾಹ ನಡೆಯಲಿರುವ ಸ್ಥಳದ ಮಾಹಿತಿ ತಿಳಿದು ಬಂದಿದೆ. ಲಂಡನ್‌ನ ಸ್ಟೋಕ್‌ ಪಾರ್ಕ್‌ ಎಸ್ಟೇಟ್‌ನಲ್ಲಿ ಈ ಪ್ರತಿಷ್ಠಿತ, ವೈಭವದ ಕಾರ್ಯಕ್ರಮ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Anant-Radhika Wedding
Koo

ನವದೆಹಲಿ: ಇತ್ತೀಚೆಗೆ ಅದ್ಧೂರಿಯಾಗಿ ವಿವಾಹಪೂರ್ವ ಕಾರ್ಯಕ್ರಮ ಆಚರಿಸಿದ್ದ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ (Mukesh Ambani) ಪುತ್ರ ಅನಂತ್‌ ಅಂಬಾನಿ (Anant Ambani) ಹಾಗೂ ಉದ್ಯಮಿ ವಿರೇನ್‌ ಮರ್ಚಂಟ್‌ ಪುತ್ರಿ ರಾಧಿಕಾ ಮರ್ಚಂಟ್‌ (Radhika Merchant) ಜುಲೈಯಲ್ಲಿ ಸಪ್ತಪದಿ ತುಳಿಯಲಿದ್ದಾರೆ. ಇದೀಗ ಈ ಪ್ರತಿಷ್ಠಿತ ವಿವಾಹ ನಡೆಯುವ ಸ್ಥಳದ ಮಾಹಿತಿ ಬಹಿರಂಗಗೊಂಡಿದೆ. ಲಂಡನ್‌ನ ಸ್ಟೋಕ್‌ ಪಾರ್ಕ್‌ ಎಸ್ಟೇಟ್‌ (Stoke Park estate)ನಲ್ಲಿ ನಡೆಯಲಿರುವ ವೈಭವದ ಸಮಾರಂಭದಲ್ಲಿ ಅನಂತ್‌ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ವಿವಾಹವಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ (Anant-Radhika Wedding).

ಈಗಾಗಲೇ ಬಾಲಿವುಡ್‌ನ ಖ್ಯಾತ ಕಲಾವಿದರಿಗೆಲ್ಲ ಆಮಂತ್ರಣ ಪತ್ರಿಕೆ ನೀಡಲಾಗಿದೆ ಎಂದು ವರದಿಯೊಂದು ಹೇಳಿದೆ. ಮದುವೆಯ ಸಿದ್ಧತೆಗಳೆಲ್ಲ ಈಗಾಗಲೇ ಆರಂಭವಾಗಿದ್ದು, ಅನಂತ್‌ ಅವರ ತಾಯಿ ನೀತಾ ಅಂಬಾನಿ ಎಲ್ಲದರ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಪ್ರಿ ವೆಡ್ಡಿಂಗ್‌ ಕಾರ್ಯಕ್ರಮವನ್ನೂ ನೀತಾ ಅಂಬಾನಿ ಅವರೇ ಯಶಸ್ವಿಯಾಗಿ ನಿರ್ವಹಿಸಿದ್ದರು.

ಸ್ಟೋಕ್ ಪಾರ್ಕ್‌ನಲ್ಲಿ ಆಯೋಜಿಸಲಾಗುವ ಈ ಸಮಾರಂಭದ ಥೀಮ್ ಇನ್ನೂ ಬಹಿರಂಗಗೊಂಡಿಲ್ಲ. ಇಲ್ಲಿ ಕಾಕ್‌ಟೈಲ್‌ ಅಥವಾ ಸಂಗೀತ್ ನೈಟ್ ಆಯೋಜಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿದೆ. ಈ ತಿಂಗಳ ಆರಂಭದಲ್ಲಿ ಅನಂತ್ ಮತ್ತು ರಾಧಿಕಾ ದುಬೈಯ ಎರಡು ಪ್ರತಿಷ್ಠಿತ ಮಾಲ್‌ಗಳಲ್ಲಿ ಬಿಗಿ ಭದ್ರತೆಯ ನಡುವೆ ಶಾಪಿಂಗ್ ಮಾಡುತ್ತಿರುವ ವಿಡಿಯೊ ವೈರಲ್‌ ಆಗಿತ್ತು.

ಅದ್ಧೂರಿ ಪ್ರೀ ವೆಡ್ಡಿಂಗ್‌

ಗುಜರಾತ್‌ನ ಜಾಮ್‌ನಗರದಲ್ಲಿ ಕಳೆದ ತಿಂಗಳು ಅದ್ಧೂರಿ ಪ್ರೀ ವೆಡ್ಡಿಂಗ್‌ ಸಮಾರಂಭ ಆಯೋಜಿಸಲಾಗಿತ್ತು. ಅಂದಾಜು 12,00 ಕೋಟಿ ರೂ.ಗಳಲ್ಲಿ ಈ ಸಮಾರಂಭ ನಡೆದಿತ್ತು. ದೇಶ-ವಿದೇಶಗಳ ಗಣ್ಯರ ಉಪಸ್ಥಿತಿ, ಬಾಲಿವುಡ್‌ ನಟ-ನಟಿಯರ ಹಾಡು, ನೃತ್ಯ, ಮೋಜು-ಮಸ್ತಿಯನ್ನು ಆಯೋಜಿಸಲಾಗಿತ್ತು. ಖ್ಯಾತ ಪಾಪ್‌ ಗಾಯಕಿ ರಿಹಾನಾ, ಸಚಿನ್‌ ತೆಂಡೂಲ್ಕರ್‌, ಮಹೇಂದ್ರ ಸಿಂಗ್‌ ಧೋನಿ ಕುಟುಂಬಸ್ಥರು, ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌, ಆಮೀರ್‌ ಖಾನ್‌, ರಣವೀರ್‌ ಸಿಂಗ್‌, ದೀಪಿಕಾ ಪಡುಕೋಣೆ, ಗೌತಮ್‌ ಅದಾನಿ, ಆಲಿಯಾ ಭಟ್‌, ರಣಬೀರ್‌ ಕಪೂರ್‌, ಬಿಲ್‌ ಗೇಟ್ಸ್‌ ಸೇರಿ ದೇಶ-ವಿದೇಶಗಳ ನೂರಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

ಅನಂತ್ ಮತ್ತು ರಾಧಿಕಾ ಅವರ ವಿವಾಹ ನಿಶ್ಚಿತಾರ್ಥ ಆಪ್ತರ ಸಮ್ಮುಖದಲ್ಲಿ 2023ರ ಜನವರಿಯಲ್ಲಿ ಮುಂಬೈಯಲ್ಲಿ ಸಾಂಪ್ರದಾಯಿಕವಾಗಿ ನಡೆದಿತ್ತು. ವಿವಾಹ ನಡೆಯಲಿರುವ ಸ್ಟೋಕ್‌ ಪಾರ್ಕ್‌ ಎಸ್ಟೇಟ್‌ ಸುಮಾರು 900 ವರ್ಷಗಳ ಇತಿಹಾಸ ಹೊಂದಿದ್ದು, ಈ ಐತಿಹಾಸಿಕ ಸ್ಥಳದಲ್ಲಿ ಬಹಳ ವಿಶೇಷ ರೀತಿಯಲ್ಲೇ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂಧು ಮೂಲಗಳು ಹೇಳಿವೆ.

ಇದನ್ನೂ ಓದಿ: Anant Ambani wedding: 2500 ಐಟಂ, 20 ಲೇಡಿ ಶೆಫ್‌ಗಳು… ಇನ್ನೂ ಇದೆ ಅನಂತ್‌ ಅಂಬಾನಿ- ರಾಧಿಕಾ ಮದುವೆ ವಿಶೇಷ!

ಜಾಮ್‌ನಗರದ ವಿಶೇಷತೆ

ಅನಂತ್ ಮತ್ತು ರಾಧಿಕಾ ಅವರ ವಿವಾಹಪೂರ್ವ ಸಮಾರಂಭ ನಡೆದ ಜಾಮ್‌ನಗರಕ್ಕೂ ಅಂಬಾನಿ ಕುಟುಂಬಕ್ಕೂ ಬಿಡಿಸಲಾರದ ನಂಟಿದೆ. “ಜಾಮ್‌ನಗರದಲ್ಲೇ ವಿವಾಹ ಪೂರ್ವ ಕಾರ್ಯಕ್ರಮ ಆಯೋಜಿಸಲು ಬೇರೆ ದೇಶಗಳ ಬದಲು ದೇಶದಲ್ಲಿಯೇ ಮದುವೆಯಾಗಿ (Wed In India) ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದು ನನಗೆ ಸ್ಫೂರ್ತಿಯಾಯಿತು. ಇನ್ನು, ಜಾಮ್‌ನಗರವು ನನ್ನ ಅಜ್ಜಿಯ ಜನ್ಮಸ್ಥಳವಾಗಿದೆ. ಅಷ್ಟೇ ಅಲ್ಲ, ನನ್ನ ಅಜ್ಜ ಧೀರೂಭಾಯಿ ಅಂಬಾನಿ ಹಾಗೂ ಅಪ್ಪ ಮುಕೇಶ್‌ ಅಂಬಾನಿ ಅವರು ಜಾಮ್‌ನಗರದಿಂದಲೇ ಉದ್ಯಮ ಆರಂಭಿಸಿದ್ದಾರೆ. ಹಾಗಾಗಿ, ಜಾಮ್‌ನಗರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ” ಎಂದು ಅನಂತ್‌ ಈ ಹಿಂದೆ ತಿಳಿಸಿದ್ದರು.

Continue Reading

ದೇಶ

Everest Spices: ಸಿಂಗಾಪುರ ಬಳಿಕ ಹಾಂಕಾಂಗ್‌ನಲ್ಲೂ ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ ಬ್ಯಾನ್!

Everest Spices: ಮಸಾಲಾ ಉತ್ಪನ್ನಗಳಿಗಾಗಿ ಜಾಗತಿಕವಾಗಿ ಹೆಸರು ಗಳಿಸಿರುವ ಭಾರತದ ಎಂಡಿಎಚ್‌ ಹಾಗೂ ಎವರೆಸ್ಟ್‌ ಕಂಪನಿಗಳು ಈಗ ನಕಾರಾತ್ಮಕವಾಗಿ ಸುದ್ದಿಯಾಗುತ್ತಿವೆ. ಸಿಂಗಾಪುರ ಬಳಿಕ ಹಾಂಕಾಂಗ್‌ಲ್ಲೂ ಎವರೆಸ್ಟ್‌ ಹಾಗೂ ಎಂಡಿಎಚ್‌ ಕಂಪನಿಯ ನಾಲ್ಕು ಮಸಾಲಾ ಪದಾರ್ಥಗಳ ಮಾರಾಟ ನಿಷೇಧಿಸಿದ್ದು, ಕಂಪನಿಗಳು ಈಗ ಸಂಕಷ್ಟಕ್ಕೆ ಸಿಲುಕಿವೆ.

VISTARANEWS.COM


on

Everest Spices
Koo

ಸಿಟಿ ಆಫ್‌ ವಿಕ್ಟೋರಿಯಾ: ಸಿಂಗಾಪುರದಲ್ಲಿ ಭಾರತದ ಜನಪ್ರಿಯ ಉತ್ಪನ್ನವಾದ ಮಸಾಲೆ (Spices) ತಯಾರಕ ಎವರೆಸ್ಟ್‌ನ (Everest Spices) ಫಿಶ್ ಕರಿ ಮಸಾಲಾ (Fish Curry Masala) ಮಾರಾಟ ನಿಷೇಧಗೊಳಿಸಿದ ಬೆನ್ನಲ್ಲೇ, ಹಾಂಕಾಂಗ್‌ನಲ್ಲೂ (Hong Kong) ಭಾರತದ ಎಂಡಿಎಚ್‌ ಹಾಗೂ ಎವರೆಸ್ಟ್‌ ಮಸಾಲಾ ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿದೆ. ಹಾಗಾಗಿ, ಜಾಗತಿಕವಾಗಿ ಭಾರತದ ಎರಡು ಮಸಾಲಾ ಬ್ರ್ಯಾಂಡ್‌ಗಳು ನಕಾರಾತ್ಮಕ ಕಾರಣಕ್ಕಾಗಿ ಸುದ್ದಿಯಾಗಿವೆ. ಇದರ ಪರಿಣಾಮ ಭಾರತದ ಉತ್ಪನ್ನಗಳ ಮೇಲೂ ಉಂಟಾಗಲಿದೆ ಎಂದು ಹೇಳಲಾಗುತ್ತಿದೆ.

ಭಾರತ ಸೇರಿ ಜಗತ್ತಿನೆಲ್ಲೆಡೆ ಖ್ಯಾತಿ ಗಳಿಸಿರುವ ಎಂಡಿಎಚ್‌ನ ಮೂರು ಮಸಾಲಾ ಪದಾರ್ಥಗಳು ಹಾಗೂ ಎವರೆಸ್ಟ್‌ನ ಒಂದು ಮಸಾಲಾ ಪದಾರ್ಥದಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ ಕಾರ್ಸಿನೋಜೆನಿಕ್‌ ರಾಸಾಯನಿಕ ಇರುವ ಕಾರಣ ಹಾಂಕಾಂಗ್‌ ಆಹಾರ ನಿಯಂತ್ರಣ ಪ್ರಾಧಿಕಾರವು ನಾಲ್ಕೂ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ ಎಂದು ತಿಳಿದುಬಂದಿದೆ. ಎಂಡಿಎಚ್‌ನ ಕರಿ ಪೌಡರ್‌, ಮಿಕ್ಸ್ಡ್‌ ಮಸಾಲಾ ಪೌಡರ್‌ ಹಾಗೂ ಸಾಂಬಾರ್‌ ಮಸಾಲಾ ಮತ್ತು ಎವರೆಸ್ಟ್‌ನ ಫಿಶ್‌ ಕರಿ ಮಸಾಲಾವನ್ನು ನಿಷೇಧಿಸಲಾಗಿದೆ.

“ಎಂಡಿಎಚ್‌ನ ಮೂರು ಹಾಗೂ ಎವರೆಸ್ಟ್‌ನ ಒಂದು ಉತ್ಪನ್ನದ ಸ್ಯಾಂಪಲ್‌ ಪಡೆದು ಪರಿಶೀಲನೆ ನಡೆಸಲಾಗಿದೆ. ಇವುಗಳಲ್ಲಿ ಪೆಸ್ಟಿಸೈಡ್‌ ಎಥಿಲೀನ್‌ ಆಕ್ಸೈಡ್‌ ಪತ್ತೆಯಾಗಿದೆ. ಈ ಆಕ್ಸೈಡ್‌ ಮನುಷ್ಯನು ಸೇವಿಸಲು ಅಪಾಯಕಾರಿಯಾಗಿದೆ. ಕ್ಯಾನ್ಸರ್‌ ಕಾರಕ ಕಾರ್ಸಿನೋಜೆನಿಕ್‌ ರಾಸಾಯನಿಕವೂ ಪತ್ತೆಯಾಗಿದೆ. ಹಾಗಾಗಿ, ದೇಶದ ಮಾರಾಟಗಾರರಿಗೆ ಈ ಉತ್ಪನ್ನಗಳನ್ನು ಮಾರಾಟ ಮಾಡದಂತೆ, ಮಳಿಗೆಗಳಲ್ಲಿ ಇರಿಸದಂತೆ ಸೂಚಿಸಲಾಗಿದೆ” ಎಂಬುದಾಗಿ ಹಾಂಕಾಂಗ್‌ನ ಸೆಂಟರ್‌ ಫಾರ್‌ ಫುಡ್‌ ಸೇಫ್ಟಿ ತಿಳಿಸಿದೆ. ಇವುಗಳನ್ನು ನಿಷೇಧಿಸಿ ಏಪ್ರಿಲ್‌ 5ರಂದೇ ಆದೇಶ ಹೊರಡಿಸಿದೆ.

ಕ್ಯಾನ್ಸರ್‌ ಕುರಿತು ಸಂಶೋಧನೆ ಮಾಡುವ ಅಂತಾರಾಷ್ಟ್ರೀಯ ಸಂಸ್ಥೆಯೇ ಎಥಿಲೀನ್‌ ಆಕ್ಸೈಡ್‌ನ ಅಪಾಯದ ಕುರಿತು ವರದಿ ನೀಡಿದೆ. ಇದು ಕ್ಯಾನ್ಸರ್‌ ಕಾರಕ ಎಂಬುದಾಗಿ ಜಾಗತಿಕ ಸಂಸ್ಥೆ ತಿಳಿಸಿದೆ. ಹಾಗಾಗಿ, ನಾಲ್ಕೂ ಉತ್ಪನ್ನಗಳ ಸಂಗ್ರಹ, ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಹಾಂಕಾಗ್‌ ತಿಳಿಸಿದೆ. ಅನುಮತಿ ನೀಡಿದ ಮಿತಿಯನ್ನು ಮೀರಿದ ಮಟ್ಟದಲ್ಲಿ ಫಿಶ್‌ ಕರಿ ಮಸಾಲಾದಲ್ಲಿ ಎಥಿಲೀನ್ ಆಕ್ಸೈಡ್ ಕೀಟನಾಶಕವಿದೆ. ಎಥಿಲೀನ್ ಆಕ್ಸೈಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿ ಇಲ್ಲ. ಕೃಷಿ ಉತ್ಪನ್ನಗಳ ಫ್ಯುಮಿಗೇಶನ್‌ ವೇಳೆ ಸೂಕ್ಷ್ಮಜೀವಿ ಮಾಲಿನ್ಯವನ್ನು ತಡೆಗಟ್ಟಲು ಮಾತ್ರ ಅದನ್ನು ಬಳಸಲಾಗುತ್ತದೆ ಎಂದು ಸಿಂಗಾಪುರ ಕೂಡ ಎವರೆಸ್ಟ್‌ ಫಿಶ್‌ ಕರಿ ಮಸಾಲಾ ನಿಷೇಧಿಸುವಾಗ ತಿಳಿಸಿತ್ತು.

ಇದನ್ನೂ ಓದಿ: Pesticide: ಎವರೆಸ್ಟ್‌ ಫಿಶ್‌ ಕರಿ ಮಸಾಲೆಯಲ್ಲಿ ಕೀಟನಾಶಕ; ಬ್ಯಾನ್‌ ಮಾಡಿದ ಸಿಂಗಾಪುರ

Continue Reading

ಪ್ರಮುಖ ಸುದ್ದಿ

PM Narendra Modi: ಮಕ್ಕಳಾಗಿ ವಿಶ್ವನಾಯಕರು! ಎಐ ಮೋಡಿಯಲ್ಲಿ ನರೇಂದ್ರ ಮೋದಿ ನೋಡಿ

ಎಐ ಮೂಲಕ ರಚಿಸಲಾದ ನಾಯಕರ ಚಿತ್ರಗಳ ವೀಡಿಯೊವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ನಮ್ಮ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಫೋಟೋ ಸಹಿತ ಇದೆ.

VISTARANEWS.COM


on

world leaders as babies narendra modi
Koo

ಹೊಸದಿಲ್ಲಿ: ವಿಶ್ವ ನಾಯಕರು ಮಕ್ಕಳಾಗಿ (World leaders as babies) ಹೇಗೆ ಕಾಣಬಹುದು ಎಂಬ ಕಲ್ಪನೆಯನ್ನು ಕೃತಕ ಬುದ್ಧಿಮತ್ತೆ (AI) ಮೂಲಕ ಸಾಕಾರಗೊಳಿಸಿಕೊಂಡು ನೋಡಿದ ಒಂದು ಪ್ರಯತ್ನ ಇದೀಗ ವೈರಲ್‌ (viral video) ಆಗಿದೆ. ಎಐ ಮೂಲಕ ರಚಿಸಲಾದ ನಾಯಕರ ಚಿತ್ರಗಳ ವೀಡಿಯೊವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ನಮ್ಮ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಫೋಟೋ ಸಹಿತ ಇದೆ.

ಪಿಎಂ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬಿಡನ್, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್, ರಷ್ಯನ್ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮತ್ತು ಅನೇಕರು ಇದರಲ್ಲಿ ಕಂಡುಬರುತ್ತಾರೆ. ವೀಡಿಯೊ ಈ ಚಿತ್ರಗಳನ್ನು ಒಂದೊಂದಾಗಿ ತೋರಿಸುತ್ತದೆ. ಶೀರ್ಷಿಕೆಯಲ್ಲಿ ನಾಯಕನ ಹೆಸರನ್ನು ಕೊಡಲಾಗಿದೆ. ಶೀರ್ಷಿಕೆ ಕೊಡದಿದ್ದರೂ ಆಯಾ ನಾಯಕರ ಮುಖ ನೋಡಿಯೇ ನಾವು ಊಹಿಸಬಹುದಾಗಿದೆ.

ಈ ವೀಡಿಯೊವನ್ನು “ಆಸ್ಕಿಂಗ್ AI ಟು ಡ್ರಾ ವರ್ಲ್ಡ್ ಲೀಡರ್ಸ್ ಆಸ್ ಬೇಬೀಸ್” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ. ಪ್ಲಾನೆಟ್ AI ಇದನ್ನು ಹಂಚಿದೆ. ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್, ಫ್ರೆಂಚ್ ಅಧ್ಯಕ್ಷರನ್ನೂ ವೀಡಿಯೊ ತೋರಿಸುತ್ತದೆ. ಇಮ್ಯಾನುಯೆಲ್ ಮ್ಯಾಕ್ರನ್, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಪೋಪ್ ಫ್ರಾನ್ಸಿಸ್, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಇನ್ನಷ್ಟು ನಾಯಕರು ಇದರಲ್ಲಿ ಇದ್ದಾರೆ. ತೀರಿಹೋದ ನಾಯಕ ಜಾನ್‌ ಕೆನೆಡಿ, ಪೋಪ್ ಥರವದರೂ ಇದ್ದಾರೆ. ‌

ಮಾಸ್ಸಿಮೊ ಎಂಬ ಬಳಕೆದಾರರಿಂದ ಈ ವೀಡಿಯೊವನ್ನು ಇತ್ತೀಚೆಗೆ Xನಲ್ಲಿ ಹಂಚಿಕೊಳ್ಳಲಾಗಿದೆ. ವೀಡಿಯೊವನ್ನು ಹಂಚಿಕೊಂಡ ಖಾತೆಯ ಬಳಕೆದಾರ ಹೆಸರು @Rainmaker1973. ಶೀರ್ಷಿಕೆಯಲ್ಲಿ ಬಳಕೆದಾರರು ಹೀಗೆ ಬರೆದಿದ್ದಾರೆ: “AI ಪ್ರಕಾರ ಶಿಶುಗಳಾಗಿ ವಿಶ್ವ ನಾಯಕರು”. ಪೋಸ್ಟ್ Xನಲ್ಲಿ ವೈರಲ್ ಆಗಿದೆ. 1.45 ಲಕ್ಷ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ಖಾತೆಯೇ 19 ಕೋಟಿಗಿಂತ ಅಧಿಕ ಫಾಲೋವರ್ಸ್‌ ಹೊಂದಿದೆ.

ಇದನ್ನೂ ಓದಿ: Video Viral: ಜಲ ತರಂಗ್‌ನಲ್ಲಿ ಮಹಿಳೆ ನುಡಿಸಿದ ಐಗಿರಿ ನಂದಿನಿ ವಿಡಿಯೋ ವೈರಲ್

Continue Reading

ಪ್ರಮುಖ ಸುದ್ದಿ

Maldives Election: ಮಾಲ್ಡೀವ್ಸ್‌ ಚುನಾವಣೆಯಲ್ಲಿ ಭಾರತ ವಿರೋಧಿ ಮುಯಿಜುಗೆ ಬಹುಮತ, ಮತ್ತೆ ಅಧಿಕಾರಕ್ಕೆ

Maldives Election: ಚೀನಾ ಪರವಾದ ಹೊಸ ಕಾನೂನುಗಳನ್ನು ಮಾಡಲು ಹಾಲಿ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಪಕ್ಷಕ್ಕೆ ಸಂಸತ್ತಿನ ಚುನಾವಣೆಯಲ್ಲಿ ಗೆಲ್ಲುವುದು ಅನಿವಾರ್ಯವಾಗಿತ್ತು. ಆಡಳಿತ ಪಕ್ಷವಾಗಿರುವ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಮಾಲ್ಡೀವ್ಸ್‌ನ 93 ಸ್ಥಾನಗಳಲ್ಲಿ 86ರಲ್ಲಿ ಸ್ಪರ್ಧಿಸಿತ್ತು.

VISTARANEWS.COM


on

Mohamed Muizzu
Koo

ಮಾಲೆ: ಭಾರತ ವಿರೋಧಿ ಮನಸ್ಥಿತಿಯ ಅಧ್ಯಕ್ಷ ಮೊಹಮ್ಮದ್‌ ಮುಯಿಜು (Mohamed Muizzu) ಮಾಲ್ಡೀವ್ಸ್‌ನಲ್ಲಿ ನಡೆದ ಚುನಾವಣೆಯಲ್ಲಿ (Maldives Election) ಭಾರಿ ಬಹುಮತದಲ್ಲಿ ಆರಿಸಿ ಬಂದಿದ್ದಾರೆ. ಮಾಲ್ಡೀವ್ಸ್‌ನ ಸಂಸತ್ತಿಗೆ (ಮಜ್ಲಿಸ್) ನಡೆದ ಚುನಾವಣೆಯಲ್ಲಿ ಚೀನಾ ಪರ (Pro China) ಆಡಳಿತ ನೀಡುತ್ತಿರುವ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಪಕ್ಷ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ (ಪಿಎನ್‌ಸಿ) ಸ್ಪಷ್ಟ ಬಹುಮತವನ್ನು ಪಡೆದುಕೊಂಡಿದೆ.

ಆಡಳಿತ ಪಕ್ಷವಾಗಿರುವ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಮಾಲ್ಡೀವ್ಸ್‌ನ 93 ಸ್ಥಾನಗಳಲ್ಲಿ 86ರಲ್ಲಿ ಸ್ಪರ್ಧಿಸಿತ್ತು. ಮಾಲ್ಡೀವ್ಸ್ ಸಂಸತ್ತಿನಲ್ಲಿ PNC ಬಹುಮತವನ್ನು ಪಡೆದುಕೊಂಡಿದೆ. ಇತ್ತೀಚಿನ ಮಾಹಿತಿಯ ಪ್ರಕಾರ 86 ಸ್ಥಾನಗಳ ಪೈಕಿ ಪಿಎನ್‌ಸಿ 66 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಪ್ರಮುಖ ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ (MDP) ಕೇವಲ 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಸ್ವತಂತ್ರ ಅಭ್ಯರ್ಥಿಗಳು 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದ ರೆ, ಮಾಲ್ಡೀವ್ಸ್ ಡೆವಲಪ್ಮೆಂಟ್ ಅಲಯನ್ಸ್ ಎರಡು ಸ್ಥಾನಗಳಲ್ಲಿ ಗೆಲುವು ಪಡೆದಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವಿಪಕ್ಷ ನಾಯಕ ಮೊಹಮ್ಮದ್‌ ಸೋಲಿಹ್ ಅವರನ್ನು ಸೋಲಿಸುವ ಮೂಲಕ ಮುಯಿಝು ಅಧ್ಯಕ್ಷರಾದರು. ಸೊಲಿಹ್ ಅವರ ಪಕ್ಷ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಕ್ಷವು ಪ್ರಸ್ತುತ ಸಂಸತ್ತಿನಲ್ಲಿ ಬಹುಮತವನ್ನು ಹೊಂದಿತ್ತು. ಇದು ಮುಯಿಜುಗೆ ಹೊಸ ವಿಧೇಯಕಗಳನ್ನು ತರಲು ಅಡ್ಡಿಯುಂಟುಮಾಡಿತ್ತು. ಚೀನಾ ಪರವಾದ ಹೊಸ ಕಾನೂನುಗಳನ್ನು ಮಾಡಲು ಹಾಲಿ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಪಕ್ಷಕ್ಕೆ ಸಂಸತ್ತಿನ ಚುನಾವಣೆಯಲ್ಲಿ ಗೆಲ್ಲುವುದು ಅನಿವಾರ್ಯವಾಗಿತ್ತು.

ಸಂಸತ್ತಿನ 93 ಸ್ಥಾನಗಳಿಗೆ ಆರು ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಗುಂಪುಗಳು 368 ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಜನಸಂಖ್ಯೆಯ ಹೆಚ್ಚಳದ ನಂತರ, ಹಿಂದಿನ ಸಂಸತ್ತಿಗಿಂತ ಆರು ಹೆಚ್ಚು ಸ್ಥಾನಗಳಿವೆ. ಚುನಾವಣೆಯಲ್ಲಿ ಸುಮಾರು 2,84,000 ಜನರು ಮತ ಚಲಾಯಿಸಿದ್ದಾರೆ. ಮುಯಿಜುವಿನ ಪೀಪಲ್ಸ್ ನ್ಯಾಷನಲ್ ಕಾಂಗ್ರೆಸ್ ಮತ್ತು ಪ್ರಮುಖ ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಸ್ವತಂತ್ರರು ಕಣದಲ್ಲಿದ್ದಾರೆ.

ಭೂಮಧ್ಯರೇಖೆಯಾದ್ಯಂತ ಸುಮಾರು 800 ಕಿಲೋಮೀಟರ್ (500 ಮೈಲುಗಳು) ಹರಡಿರುವ ಸುಮಾರು 1,192 ಸಣ್ಣ ಹವಳ ದ್ವೀಪಗಳ ತಗ್ಗು ರಾಷ್ಟ್ರವಾದ ಮಾಲ್ಡೀವ್ಸ್, ಜಾಗತಿಕ ತಾಪಮಾನ ಏರಿಕೆಯಿಂದ ಉಂಟಾಗುವ ಸಮುದ್ರ ಮಟ್ಟ ಏರಿಕೆಗೆ ಹೆಚ್ಚು ಅಪಾಯಕ್ಕೊಳಗಾಗುವ ದೇಶಗಳಲ್ಲಿ ಒಂದಾಗಿದೆ. ಮಾಜಿ ನಿರ್ಮಾಣ ಸಚಿವರಾದ ಮುಯಿಜು ಅವರು ಮಹತ್ವಾಕಾಂಕ್ಷೆಯ ಭೂ ಸುಧಾರಣೆ ಮತ್ತು ದ್ವೀಪಗಳನ್ನು ಎತ್ತರಕ್ಕೆ ನಿರ್ಮಿಸುವ ಮೂಲಕ ಅಲೆಗಳನ್ನು ಸೋಲಿಸುವುದಾಗಿ ಭರವಸೆ ನೀಡಿದ್ದಾರೆ. ಪರಿಸರವಾದಿಗಳು ಈ ನೀತಿಯಲ್ಲಿ ಪ್ರವಾಹದ ಹೊಸ ಅಪಾಯಗಳನ್ನು ಕಂಡಿದ್ದಾರೆ.

ಮಾಲ್ಡೀವ್ಸ್ ತನ್ನ ಪ್ರಾಚೀನ ಧವಳ ಕಡಲತೀರಗಳು ಮತ್ತು ರೆಸಾರ್ಟ್‌ಗಳಿಂದ ಉನ್ನತ ಮಟ್ಟದ ಐಷಾರಾಮಿ ಹಾಲಿಡೇ ಸ್ಪಾಟ್‌ ಆಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಇದು ಹಿಂದೂ ಮಹಾಸಾಗರದಲ್ಲಿ ಭೂ-ರಾಜಕೀಯ ಹಾಟ್‌ಸ್ಪಾಟ್. ಇಲ್ಲಿ ಜಾಗತಿಕ ಪೂರ್ವ-ಪಶ್ಚಿಮ ಹಡಗು ಮಾರ್ಗಗಳು ದ್ವೀಪಸಮೂಹವನ್ನು ಹಾದುಹೋಗುತ್ತವೆ. ಕಳೆದ ಸೆಪ್ಟೆಂಬರ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಚೀನಾ ಪರ ಮಾಜಿ ಅಧ್ಯಕ್ಷ ಅಬ್ದುಲ್ಲಾ ಯಮೀನ್‌ಗೆ ಪ್ರಾಕ್ಸಿಯಾಗಿ ಮುಯಿಜು ಗೆದ್ದರು. ಕಳೆದ ವಾರ ನ್ಯಾಯಾಲಯ ಯಮೀನ್‌ಗೆ ಭ್ರಷ್ಟಾಚಾರಕ್ಕಾಗಿ ನೀಡಿದ್ದ 11 ವರ್ಷಗಳ ಜೈಲು ಶಿಕ್ಷೆಯಿಂದ ರಿಲೀಫ್‌ ನೀಡಿತ್ತು.

ಮಾಲ್ಡೀವ್ಸ್‌ನ ವಿಶಾಲವಾದ ಸಮುದ್ರ ಗಡಿಗಳಲ್ಲಿ ಗಸ್ತು ತಿರುಗಲು ನವದೆಹಲಿಯಿಂದ ಉಡುಗೊರೆಯಾಗಿ ನೀಡಿದ ವಿಮಾನದಳ ಹಾಗೂ 89 ಭಾರತೀಯ ಸೈನಿಕರ ಗ್ಯಾರಿಸನ್ ಅನ್ನು ವಾಪಸ್‌ ಕಳಿಸಲು ಮುಯಿಜು ಆಡಳಿತ ಡೆಡ್‌ಲೈನ್‌ ನೀಡಿದೆ.

ಇದನ್ನೂ ಓದಿ: Maldives Election: ಮಾಲ್ಡೀವ್ಸ್‌ನಲ್ಲಿ ಇಂದು ಚುನಾವಣೆ; ಭಾರತ ವಿರೋಧಿ ಮುಯಿಜುಗೆ ಸೋಲು?

Continue Reading
Advertisement
Shakti Scheme
ಕರ್ನಾಟಕ4 hours ago

Shakti Scheme: ಸಿಎಂ ಸಿದ್ದರಾಮಯ್ಯಗೆ ಫ್ರೀ ಟಿಕೆಟ್ ಹಾರ ಅರ್ಪಣೆ; ಕಾನೂನು‌ ವಿದ್ಯಾರ್ಥಿನಿಯಿಂದ ವಿಭಿನ್ನವಾಗಿ ಕೃತಜ್ಞತೆ

IPL 2024
ಕ್ರೀಡೆ5 hours ago

IPL 2024 : ಮುಂಬೈ ವಿರುದ್ಧ ರಾಜಸ್ಥಾನ್​ ತಂಡಕ್ಕೆ 9 ವಿಕೆಟ್​ ಅಮೋಘ​ ಗೆಲುವು

Gurulinga Shivacharya Swamiji
ಕರ್ನಾಟಕ5 hours ago

Gurulinga Shivacharya Swamiji: ಕಾರು ಅಪಘಾತದಲ್ಲಿ ಬಂಗರಗಾ ಹಿರೇಮಠದ ಶ್ರೀ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

Actor Darshan election campaign for Mandya Lok Sabha constituency Congress candidate star Chandru
ಮಂಡ್ಯ5 hours ago

Lok Sabha Election 2024: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಮತ ನೀಡಿ, ಗೆಲ್ಲಿಸಿ: ನಟ ದರ್ಶನ್ ಮನವಿ

Tulsi Gowda
ಪ್ರಮುಖ ಸುದ್ದಿ5 hours ago

Tulsi Gowda: ಮನೆಯಲ್ಲಿ ಕಾಲು ಜಾರಿ ಬಿದ್ದು ಪದ್ಮಶ್ರೀ ತುಳಸಿ ಗೌಡ ಅಸ್ವಸ್ಥ

IPL 2024
ಪ್ರಮುಖ ಸುದ್ದಿ5 hours ago

ವಿಸ್ತಾರ ಸಂಪಾದಕೀಯ: ತಂತ್ರಜ್ಞಾನ ಕಾಲದಲ್ಲೂ ಐಪಿಎಲ್​ ಅಂಪೈರ್ ಗಳ ಸೋಮಾರಿತನ ಆಕ್ಷೇಪಾರ್ಹ

Terrorist Attack
ದೇಶ5 hours ago

Terrorist Attack: ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು; ಉಗ್ರನ ದಾಳಿಗೆ ಸರ್ಕಾರಿ ನೌಕರ ಬಲಿ

Reliance Industries net profit of Rs 18,951 crore, declares interim dividend of Rs 10 per share
ದೇಶ6 hours ago

Reliance Industries: ರಿಲಯನ್ಸ್ ಇಂಡಸ್ಟ್ರೀಸ್‌ಗೆ 18,951 ಕೋಟಿ ರೂ. ನಿವ್ವಳ ಲಾಭ; ಷೇರಿಗೆ 10 ರೂ. ಮಧ್ಯಂತರ ಲಾಭಾಂಶ

Hardik Pandya
ಪ್ರಮುಖ ಸುದ್ದಿ6 hours ago

Hardik Pandya : ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್​​ನಲ್ಲಿ ಮತ್ತೆ ವಿಫಲ; ಬೆಂಡೆತ್ತಿದ ಅಭಿಮಾನಿಗಳು

Rain News
ಕರ್ನಾಟಕ6 hours ago

Rain News: ಪ್ರತ್ಯೇಕ ಮಳೆ ಅವಘಡ; ಬೀದರ್‌ನಲ್ಲಿ ಸಿಡಿಲು ಬಡಿದು ಇಬ್ಬರು ಯುವಕರ ದುರ್ಮರಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru karaga 2024
ಬೆಂಗಳೂರು11 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ12 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು15 hours ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು17 hours ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ24 hours ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ3 days ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

ಟ್ರೆಂಡಿಂಗ್‌