ಜಕಾರ್ತ: ಮುಸ್ಲಿಮರು ಮಾಡುವ ಬಿಸ್ಮಿಲ್ಲಾ (Bismillah) ಪ್ರಾರ್ಥನೆ ಬಳಿಕ ಹಂದಿ ಮಾಂಸ ತಿಂದ ಟಿಕ್‌ಸ್ಟಾರ್ ಲೀನಾ ಮುಖರ್ಜಿ (Lina Mukherjee) ಅವರಿಗೆ ಇಸ್ಲಾಮಿಕ್ ರಾಷ್ಟ್ರವಾದ ಇಂಡೋನೇಷ್ಯಾ (Indonesia) ನ್ಯಾಯಾಲಯವು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪ್ರಾರ್ಥನೆ ಮಾಡಿದ ಬಳಿಕ ಹಂದಿ ಮಾಂಸ ತಿಂದ ವಿಡಿಯೊವನ್ನು ಲೀನಾ ಮುಖರ್ಜಿ ಅವರು ಟಿಕ್‌ಟಾಕ್‌ನಲ್ಲಿ ಹಂಚಿಕೊಂಡ ಆರು ತಿಂಗಳ ಬಳಿಕ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.
ಬಾಲಿಯಲ್ಲಿ 33 ವರ್ಷದ ಲೀನಾ ಮುಖರ್ಜಿ ಅವರು ಕಳೆದ ಮಾರ್ಚ್‌ನಲ್ಲಿ ಬಿಸ್ಮಿಲ್ಲಾ ಪ್ರಾರ್ಥನೆ ಬಳಿಕ ಹಂದಿ ಮಾಂಸ ತಿಂದ ವಿಡಿಯೊ ವೈರಲ್ ಆಗುತ್ತಲೇ ಜನರಿಂದ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಅದರಲ್ಲೂ, ಇಸ್ಲಾಂನಲ್ಲಿ ಹಂದಿ ಮಾಂಸವು ನಿಷಿದ್ಧವಾಗಿರುವ ಕಾರಣ ಲೀನಾ ಮುಖರ್ಜಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಧರ್ಮ ನಿಂದನೆಯ ಆರೋಪದಲ್ಲಿ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ.
ವೈರಲ್ ಆಗಿದ್ದ ವಿಡಿಯೊ
Ada Indonesia guys … 🥲
— 🌸 Bebeb Bubu 🌸 (@NyaiiBubu) September 21, 2023
Lina Mukherjee pic.twitter.com/JNNuUltAZF
ಕೋರ್ಟ್ ಹೇಳಿದ್ದೇನು?
ಧಾರ್ಮಿಕ ಆಚಾರ-ವಿಚಾರಗಳನ್ನು ನಂಬುವವರು ಹಾಗೂ ಒಂದು ನಿಗದಿತ ಸಮುದಾಯದ ಜನರ ವಿರುದ್ಧ ದ್ವೇಷವನ್ನು ಹರಡಿಸುವ ಉದ್ದೇಶದಿಂದ ಮಾಡಿದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಹಿನ್ನೆಲೆಯಲ್ಲಿ ಲೀನಾ ಮುಖರ್ಜಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ” ಎಂದು ಪಾಲೆಮ್‌ಬಾಂಗ್ ನ್ಯಾಯಾಲಯವು ತಿಳಿಸಿದೆ.
ಇದನ್ನೂ ಓದಿ: Burqa Ban: ಬುರ್ಖಾ, ಹಿಜಾಬ್ ನಿಷೇಧಿಸಿದ ಸ್ವಿಟ್ಜರ್‌ಲ್ಯಾಂಡ್ ಸರ್ಕಾರ; ಬೀಳಲಿದೆ ಭಾರಿ ದಂಡ!
ಇಸ್ಲಾಮಿಕ್ ರಾಷ್ಟ್ರವಾಗಿರುವ ಇಂಡೋನೇಷ್ಯಾದಲ್ಲಿ ಧರ್ಮನಿಂದನೆಯ ಕಾನೂನುಗಳು ಬಲಿಷ್ಠವಾಗಿವೆ. ಪ್ರವಾದಿ ಮೊಹಮ್ಮದ್ ಹೆಸರಿನಲ್ಲಿ ಜನರಿಗೆ ಉಚಿತವಾಗಿ ಮದ್ಯ ಹಂಚುತ್ತಿದ್ದ ಆರು ಜನರನ್ನು ಇತ್ತೀಚೆಗಷ್ಟೇ ಬಂಧಿಸಲಾಗಿತ್ತು. ಆದಾಗ್ಯೂ, ಇಂಡೋನೇಷ್ಯಾದಲ್ಲಿ ಅಲ್ಪಸಂಖ್ಯಾತರ ಮೇಲೆ ಧರ್ಮನಿಂದನೆಯ ಕಾನೂನುಗಳನ್ನು ಗುರಾಣಿಯಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬಂದಿವೆ.