Israel Palestine War: ಗಾಜಾ ನಗರದಲ್ಲಿ ಇಸ್ರೇಲ್‌ ಅಬ್ಬರ; ಉಗ್ರರಿಂದ ಯೋಧೆಯ ರಕ್ಷಣೆ - Vistara News

ಪ್ರಮುಖ ಸುದ್ದಿ

Israel Palestine War: ಗಾಜಾ ನಗರದಲ್ಲಿ ಇಸ್ರೇಲ್‌ ಅಬ್ಬರ; ಉಗ್ರರಿಂದ ಯೋಧೆಯ ರಕ್ಷಣೆ

Israel Palestine War: ಗಾಜಾ ನಗರದ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ ಯೋಧರು, ಹಮಾಸ್‌ ಉಗ್ರರಿಂದ ತಮ್ಮ ದೇಶದ ಮಹಿಳಾ ಯೋಧರೊಬ್ಬರನ್ನು ಯಶಸ್ವಿಯಾಗಿ ರಕ್ಷಿಸಿದ್ದಾರೆ.

VISTARANEWS.COM


on

Israel Rescues Woman Soldier
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೆರುಸಲೇಂ: ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಸಮರವು (Israel Palestine War) ದಿನೇದಿನೆ ಕಾವೇರುತ್ತಿದೆ. ಅದರಲ್ಲೂ, ಹಮಾಸ್‌ ಉಗ್ರರ (Hamas Terrorists) ದಾಳಿಗೆ ಪ್ರತಿಯಾಗಿ ಇಸ್ರೇಲ್‌ ನಡೆಸುತ್ತಿರುವ ಪ್ರತಿದಾಳಿಯು ತೀವ್ರಗೊಂಡಿದ್ದು, ಇಡೀ ಗಾಜಾ ನಗರದ (Gaza City) ಮೇಲೆ ಇಸ್ರೇಲ್‌ ಬಿಗಿಹಿಡಿತ ಸಾಧಿಸುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರು ಅಪಹರಿಸಿದ್ದ ಮಹಿಳಾ ಯೋಧರೊಬ್ಬರನ್ನು ಇಸ್ರೇಲ್‌ ಸೇನೆಯು ಉಗ್ರರಿಂದ ರಕ್ಷಣೆ ಮಾಡಿದೆ.

“ಇಸ್ರೇಲ್‌ ರಕ್ಷಣಾ ಪಡೆಯು ಗಾಜಾ ನಗರದಲ್ಲಿ ರಾತ್ರೋರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಪಿವಿಟಿ ಒರಿ ಮೆಗಿದಿಶ್‌ ಎಂಬ ಮಹಿಳಾ ಯೋಧರನ್ನು ರಕ್ಷಿಸಿದೆ. ಹಮಾಸ್‌ ಉಗ್ರರು ಪಿವಿಟಿ ಒರಿ ಮೆಗಿದಿಶ್‌ ಅವರನ್ನು ಹಮಾಸ್‌ ಉಗ್ರರು ಅಕ್ಟೋಬರ್‌ 7ರಂದು ನಡೆಸಿದ ದಾಳಿಯ ವೇಳೆ ಅಪಹರಣ ಮಾಡಿದ್ದರು. ಆದರೆ, ಇಸ್ರೇಲ್‌ ಸೇನೆಯ ಯೋಧರು ಯೋಧೆಯನ್ನು ರಕ್ಷಿಸಿದ್ದಾರೆ. ಯೋಧೆಯ ಆರೋಗ್ಯ ತಪಾಸಣೆ ಮಾಡಿದ್ದು, ಅವರಿಗೆ ಯಾವುದೇ ತೊಂದರೆಯಾಗಿಲ್ಲ. ಅಲ್ಲದೆ, ಯೋಧೆಯು ಕುಟುಂಬಸ್ಥರನ್ನು ಭೇಟಿಯಾಗಿದ್ದಾರೆ” ಎಂದು ಇಸ್ರೇಲ್‌ ಫೋಟೊ ಸಮೇತ ಪೋಸ್ಟ್‌ ಮಾಡಿದೆ.

ಗಾಜಾ ನಗರದ ಸರ್ವನಾಶ?

ಗಾಜಾ ನಗರದ ಮೇಲೆ ಪೂರ್ಣ ಪ್ರಮಾಣದ ದಾಳಿ ಮಾಡುವ ದಿಸೆಯಲ್ಲಿ ಇಸ್ರೇಲ್‌ ಯುದ್ಧ ಟ್ಯಾಂಕರ್‌ಗಳನ್ನು ನಿಯೋಜಿಸಿದೆ ಎಂದು ತಿಳಿದುಬಂದಿದೆ. ಯುದ್ಧ ಟ್ಯಾಂಕರ್‌ಗಳು, ಬಂಕರ್‌ಗಳು ಗಾಜಾ ನಗರದ ಗಡಿ ಸಮೀಪಿಸಿದ್ದು, ಶೀಘ್ರವೇ ಇಡೀ ನಗರವನ್ನು, ಹಮಾಸ್‌ ಉಗ್ರರನ್ನು ಸರ್ವನಾಶ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Israel Palestine War: ಇಸ್ರೇಲ್‌-ಪ್ಯಾಲೆಸ್ತೀನ್‌ ಬಿಕ್ಕಟ್ಟು; ಈಜಿಪ್ಟ್‌ ಅಧ್ಯಕ್ಷರ ಜತೆ ಮೋದಿ ಚರ್ಚೆ

ಗಾಜಾ ಗಡಿಯ ಬಳಿ ಇಸ್ರೇಲ್‌ ಟ್ಯಾಂಕರ್‌ಗಳ ನಿಯೋಜನೆಯು ಜನರನ್ನು ಆತಂಕಕ್ಕೀಡು ಮಾಡಿದೆ. ಗಾಜಾದ ಜಾಯ್‌ಟುನ್‌ ಜಿಲ್ಲೆಯ ಗಡಿ ಬಳಿ ಇಸ್ರೇಲ್‌ ಟ್ಯಾಂಕರ್‌ ಇರುವುದು, ಅಲ್ಲಿ ದಾಳಿ ನಡೆಸಿರುವುದರ ಕುರಿತು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಇದರ ಬೆನನ್ಲ್ಲೇ, “ಕಳೆದ 24 ಗಂಟೆಯಲ್ಲಿ ನಾವು 600 ಗುರಿಗಳನ್ನು ಹೊಡೆದುರುಳಿಸಿದ್ದೇವೆ. ದಿನೇದಿನೆ ದಾಳಿ ಜಾಸ್ತಿಯಾಗುತ್ತಿದೆ” ಎಂದು ಇಸ್ರೇಲ್‌ ಸೇನೆ ತಿಳಿಸಿದ್ದು, ದಾಳಿಯ ತೀವ್ರತೆಯನ್ನು ಅಂದಾಜಿಸಬಹುದಾಗಿದೆ. ಗಡಿಯ ಬಳಿ ಸೋಮವಾರ ಇಸ್ರೇಲ್‌ ಸೈನಿಕರು ಹಾಗೂ ಉಗ್ರರ ಮಧ್ಯೆ ಸಂಘರ್ಷ ಉಂಟಾಗಿದೆ ಎಂದು ತಿಳಿದುಬಂದಿದೆ.

ಹಮಾಸ್‌ ಉಗ್ರರು ಮೊದಲು ಇಸ್ರೇಲ್‌ ಮೇಲೆ ದಾಳಿ ಶುರು ಮಾಡಿದ ಬಳಿಕ ಇಸ್ರೇಲ್‌ ತಿರುಗೇಟು ನೀಡುತ್ತಿದೆ. ಅದರಲ್ಲೂ, ಹಮಾಸ್‌ ಉಗ್ರರ ತಾಣವಾದ ಗಾಜಾ ನಗರದ ಮೇಲೆ ಇಸ್ರೇಲ್‌ ನಿರಂತರವಾಗಿ ದಾಳಿ ನಡೆಸುತ್ತಿದ್ದು, ನಗರದಲ್ಲಿ ಇದುವರೆಗೆ 7,700 ಜನ ಮೃತಪಟ್ಟಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯವೇ ಮಾಹಿತಿ ನೀಡಿದೆ. ಇನ್ನೂ 1,700 ಜನ ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು, ಅವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂಬುದಾಗಿ ಮಾಹಿತಿ ನೀಡಿದೆ. ಇನ್ನು ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ನಲ್ಲಿ 1,400 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Malaysia Masters Final: ಮಲೇಷ್ಯಾ ಮಾಸ್ಟರ್ಸ್ ಫೈನಲ್​ನಲ್ಲಿ ಸೋಲು ಕಂಡ ಪಿ.ವಿ.ಸಿಂಧು

Malaysia Masters Final: ಶನಿವಾರ ರಾತ್ರಿ ನಡೆದಿದ್ದ ಮಹಿಳಾ ಸಿಂಗಲ್ಸ್​ ವಿಭಾಗದ ತೀವ್ರ ಪೈಪೋಟಿಯ ಸೆಮಿಫೈನಲ್‌ ಸೆಣಸಾಟದಲ್ಲಿ 5ನೇ ಶ್ರೇಯಾಂಕದ ಸಿಂಧು ಥಾಯ್ಲೆಂಡ್‌ನ‌ 20ನೇ ಶ್ರೇಯಾಂಕದ ಆಟಗಾರ್ತಿ ಬುಸಾನನ್‌(Busanan Ongbamrungphan) ವಿರುದ್ಧ 13-21, 21-16, 21-12 ಅಂತರದಿಂದ ಗೆಲುವು ಸಾಧಿಸಿ ಫೈನಲ್​ಗೆ ಲಗ್ಗೆಯಿಟ್ಟಿದ್ದರು.

VISTARANEWS.COM


on

Malaysia Masters Final
Koo

ಕೌಲಾಲಂಪುರ: ಕಳೆದೆರಡು ವರ್ಷಗಳಿಂದ ಪ್ರಶಸ್ತಿ ಬರ ಎದುರಿಸುತ್ತಿದ್ದ ಭಾರತದ ತಾರಾ ಶಟ್ಲರ್ ಪಿ.ವಿ.ಸಿಂಧು(PV Sindhu)ಗೆ ಮತ್ತೆ ನಿರಾಸೆ ಉಂಟಾಗಿದೆ. ಭಾನುವಾರ ಇಲ್ಲಿ ನಡೆದ ಮಲೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್(Malaysia Masters final) ಟೂರ್ನಿಯ ಫೈನಲ್‌ನಲ್ಲಿ ಚೀನಾದ ವಾಂಗ್‌ ಝಿ ಯಿ ವಿರುದ್ಧ ಸೋಲು ಕಂಡಿದ್ದಾರೆ.

ಭಾನುವಾರ ನಡೆದ ಮಹಿಳಾ ಸಿಂಗಲ್ಸ್​ನ ಮೂರು ಗೇಮ್​ಗಳ ಮ್ಯಾರಥಾನ್‌ ಫೈನಲ್‌ ಸೆಣಸಾಟದಲ್ಲಿ 5ನೇ ಶ್ರೇಯಾಂಕದ, 15ನೇ ರ್‍ಯಾಂಕ್‌ನ ಸಿಂಧು ಚೀನಾದ ದ್ವಿತೀಯ ಶ್ರೇಯಾಂಕದ ಹಾಗೂ 7ನೇ ರ್‍ಯಾಂಕ್‌ನ ವಾಂಗ್‌ ಝಿ ಯಿ ವಿರುದ್ಧ 21-16, 5-21, 21-16 ಗೇಮ್​ಗಳ ಅಂತರದಿಂದ ಸೋಲು ಕಂಡರು. ಇದು ವಾಂಗ್‌ ಝಿ ಯಿ(Wang Zhi Yi) ವಿರುದ್ಧ ಸಿಂಧುಗೆ ಎದುರಾದ 2ನೇ ಸೋಲಾಗಿದೆ. ಒಟ್ಟು 4 ಬಾರಿ ಉಭಯ ಆಟಗಾರ್ತಿಯರು ಮುಖಾಮುಖಿಯಾಗಿದ್ದಾರೆ.

ಇದನ್ನು ಓದಿ ಪಿ.ವಿ ಸಿಂಧು-ನೀರಜ್ ಚೋಪ್ರಾ ಮಧ್ಯೆ ಪ್ರೇಮಾಂಕುರ? ಅನುಮಾನ ಹುಟ್ಟಿಸಿದ​ ಪೋಸ್ಟ್​!

ಮೊದಲ ಗೇಮ್​ನಲ್ಲಿ ಅತ್ಯಂತ ಜೋಶ್​ನಿಂದ ಆಡಿದ ಸಿಂಧು 21-16 ಗೇಮ್​ಗಳ ಅಂತರದಿಂದ ಗೆದ್ದು ಮುನ್ನಡೆ ಸಾಧಿಸಿದರು. ಆದರೆ, ದ್ವಿತೀಯ ಗೇಮ್​ನಲ್ಲಿ ತಿರುಗಿ ಬಿದ್ದ ವಾಂಗ್‌ ಝಿ ತಮ್ಮ ಬಲಿಷ್ಠ ಹೊಡೆತಗಳ ಮೂಲಕ 21-5 ಅಂತರದ ಗೆಲುವು ಸಾಧಿಸಿ ಪಂದ್ಯವನ್ನು 1-1 ಸಮಬಲಕ್ಕೆ ತಂದರು. ಅಂತಿಮ ಹಾಗೂ ನಿರ್ಣಾಯಕ ಗೇಮ್‌ನಲ್ಲಿ ಇವರಿಬ್ಬರ ನಡುವೆ ತೀವ್ರ ಪೈಪೋಟಿಯೇ ನಡೆಯಿತು. ಆರಂಭದಲ್ಲಿ ಭಾರೀ ಹಿನ್ನಡೆಯಲ್ಲಿದ್ದ ವಾಂಗ್‌ ಝಿ ಆ ಬಳಿಕ ಸತತವಾಗಿ ಅಂಕಗಳಿಸಿ 14-13 ಮುನ್ನಡೆ ಕಾಯ್ದುಕೊಂಡರು. ಆನಂತರವೂ ಸತತ ಅಂಕಗಳಿಂದ ಪಂದ್ಯವನ್ನು ಗೆದ್ದು ಬೀಗಿದರು.

ಸಿಂಧು 2022ರಲ್ಲಿ ಸ್ವಿಸ್ ಓಪನ್, ಸಿಂಗಾಪೂರ ಓಪನ್, ಸೆಯ್ಯದ್ ಮೋದಿ ಇಂಟರ್‌ನ್ಯಾಷನಲ್ ಟೂರ್ನಿಯಲ್ಲಿ ಗೆದ್ದಿದ್ದರು. ಆ ಬಳಿಕ ಯಾವುದೇ ಟೂರ್ನಿಯಲ್ಲಿ ಚಾಂಪಿಯನ್ ಆಗಿಲ್ಲ. ಕಳೆದ ವರ್ಷ ಸ್ಪೇನ್ ಮಾಸ್ಟರ್ಸ್ ಫೈನಲ್‌ಗೇರಿ ಸೋತಿದ್ದರು. ಕಳೆದ ವರ್ಷ ಮೊಣಕಾಲಿನ ಗಾಯಕ್ಕಾಗಿ ವಿಶ್ರಾಂತಿ ಪಡೆದು, ಚೇತರಿಸಿಕೊಂಡ ಬಳಿಕ ಅವರಿಗೆ ಫಾರ್ಮ್‌ ಕಂಡುಕೊಳ್ಳಲು ಸಾಧ್ಯವಾಗಿರಲಿಲ್ಲ. ಮಲೇಷ್ಯಾ ಮಾಸ್ಟರ್ಸ್ ಮೂಲಕ 2 ವರ್ಷಗಳ ಬಳಿಕ ಪ್ರಶಸ್ತಿಯೊಂದನ್ನು ಗೆಲ್ಲುವ ಇರಾದೆಯಲ್ಲಿದ್ದ ಸಿಂಧುಗೆ ಫೈನಲ್​ನಲ್ಲಿ ವಾಂಗ್‌ ಝಿ ಅಡಗಾಲಿಕ್ಕಿದರು.

ಶನಿವಾರ ರಾತ್ರಿ ನಡೆದಿದ್ದ ಮಹಿಳಾ ಸಿಂಗಲ್ಸ್​ ವಿಭಾಗದ ತೀವ್ರ ಪೈಪೋಟಿಯ ಸೆಮಿಫೈನಲ್‌ ಸೆಣಸಾಟದಲ್ಲಿ 5ನೇ ಶ್ರೇಯಾಂಕದ ಸಿಂಧು ಥಾಯ್ಲೆಂಡ್‌ನ‌ 20ನೇ ಶ್ರೇಯಾಂಕದ ಆಟಗಾರ್ತಿ ಬುಸಾನನ್‌(Busanan Ongbamrungphan) ವಿರುದ್ಧ 13-21, 21-16, 21-12 ಅಂತರದಿಂದ ಗೆಲುವು ಸಾಧಿಸಿದ್ದರು. ಕ್ವಾರ್ಟರ್​ ಫೈನಲ್‌ ಪಂದ್ಯದಲ್ಲಿ ವಿಶ್ವ ನಂ.6, ಚೀನಾದ ಹ್ಯಾನ್‌ ಯು ವಿರುದ್ಧ ತೀವ್ರ ಹೋರಾಟ ನಡೆಸಿ ಸಿಂಧು 21-13, 14-21, 21-12ಅಂತರದಲ್ಲಿ ಗೆಲುವು ಸಾಧಿಸಿದ್ದರು.

Continue Reading

ಪ್ರಮುಖ ಸುದ್ದಿ

Lockup Death: ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್; 23 ಕಿಡಿಗೇಡಿಗಳ ಸೆರೆ

Lockup Death: ಯುವಕನ ಲಾಕಪ್‌ ಡೆತ್‌ ಪ್ರಕರಣ ಖಂಡಿಸಿ, ಚನ್ನಗಿರಿ ಠಾಣೆಗೆ ಕಲ್ಲು ತೂರಾಟ ನಡೆಸಿದ್ದ 23 ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

VISTARANEWS.COM


on

Lockup Death
Koo

ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ 23 ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಚನ್ನಗಿರಿ ಟೌನ್ ನಿವಾಸಿಗಳು ಎಂದು ಗುರುತಿಸಲಾಗಿದೆ. ಯುವಕನ ಲಾಕಪ್‌ ಡೆತ್‌ ಪ್ರಕರಣ ಖಂಡಿಸಿ, ಠಾಣೆಗೆ ಕಲ್ಲು ತೂರಾಟ (Lockup Death) ನಡೆಸಿದ್ದ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಸದ್ಯ ಬಂಧಿತರಾಗಿರುವ 23 ಆರೋಪಿಗಳಿಗೆ ಚನ್ನಗಿರಿ ನ್ಯಾಯಾಲಯ, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಆದಿಲ್‌ ಎಂಬ ಯುವಕನ ಲಾಕಪ್‌ ಡೆತ್‌ ಆಗಿದೆ ಎಂದು ಆರೋಪಿಸಿ ಕುಟುಂಬಸ್ಥರು ಚನ್ನಗಿರಿ ಪೊಲೀಸ್ ಠಾಣೆಯ ಎದುರು ಶುಕ್ರವಾರ ರಾತ್ರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕೆಲ ಕಿಡಿಗೇಡಿಗಳು ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ವಾಹನಗಳನ್ನು ಜಖಂಗೊಳಿಸಿದ್ದರು. ಸಿಸಿ ಕ್ಯಾಮೆರಾ, ಮೊಬೈಲ್‌ ವಿಡಿಯೊ ಆಧರಿಸಿ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಇಂದು ಮರಣೋತ್ತರ ಪರೀಕ್ಷೆ ವರದಿ ಬಿಡುಗಡೆ

ಯುವಕನ ಲಾಕಪ್‌ ಡೆತ್‌ ಪ್ರಕರಣದಿಂದ ಉದ್ವಿಗ್ನಗೊಂಡಿದ್ದ ಜಿಲ್ಲೆಯ ಚನ್ನಗಿರಿ ಪಟ್ಟಣ ಸಹಜ‌ ಸ್ಥಿತಿಯತ್ತ ಮರಳುತ್ತಿದೆ. ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ನಡೆದಿದ್ದರಿಂದ ಆಯ ಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ.

ಪೊಲೀಸ್ ವಶದಲ್ಲಿದ್ದ ಆದಿಲ್ (32) ಎಂಬ ವ್ಯಕ್ತಿ ಸಾವಿಗೀಡಾದ ಹಿನ್ನೆಲೆಯಲ್ಲಿ ಲಾಕಪ್ ಡೆತ್ ಆರೋಪ ಕೇಳಿಬಂದಿತ್ತು. ಇದರಿಂದ ರೊಚ್ಚಿಗೆದ್ದ ಕೆಲ ಕಿಡಿಗೇಡಿಗಳು ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಮಾಡಿದ್ದರು. ಈ ವೇಳೆ ಐದು ಪೊಲೀಸ್ ವಾಹನ‌‌ ಜಖಂಗೊಂಡು, ಹನ್ನೊಂದು ಪೊಲೀಸರಿಗೆ ಗಾಯಗಳಾಗಿದ್ದವು. 200ಕ್ಕೂ ಹೆಚ್ಚು ಜನರಿಂದ ಏಕಕಾಲಕ್ಕೆ ದಾಳಿಯಾದ ಹಿನ್ನೆಲೆ ಚನ್ನಗಿರಿ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿತ್ತು.

ಇದನ್ನೂ ಓದಿ | Teenage Boy Arrested: ತನ್ನನ್ನು ಅತ್ಯಾಚಾರ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನನ್ನು ಕೊಂದ ಬಾಲಕ!

ಈಗ ಶವ ಪರೀಕ್ಷೆ ವರದಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಆದಿಲ್‌ ಪೊಲೀಸ್ ಠಾಣೆಯಲ್ಲಿದ್ದದ್ದು ಕೇವಲ‌ ಏಳು ನಿಮಿಷ. ಈ ವೇಳೆ ಕಡಿಮೆ ರಕ್ತದೊತ್ತಡದಿಂದ ಹೃದಯಾಘಾತವಾಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂದು ವೈದ್ಯರು ಪ್ರಾಥಮಿಕ ವರದಿ ನೀಡುವ ಸಾಧ್ಯತೆ ಇದೆ.

Continue Reading

ಕ್ರೀಡೆ

KKR vs SRH IPL 2024: ಐಪಿಎಲ್​ ಫೈನಲ್​ ಸಮಾರಂಭದಲ್ಲಿ ಸಂಗೀತ ರಸದೌತಣ ನೀಡಲಿದ್ದಾರೆ ಕೊಹ್ಲಿಯ ಅಪ್ಪಟ ಅಭಿಮಾನಿ

KKR vs SRH IPL 2024: ಫೈನಲ್​ ಪಂದ್ಯಕ್ಕೂ ಮುನ್ನ ವಿಶ್ವ-ಪ್ರಸಿದ್ಧ ಅಮೇರಿಕನ್ ರಾಕ್ ಬ್ಯಾಂಡ್ ಇಮ್ಯಾಜಿನ್ ಡ್ರಾಗನ್ಸ್(Imagine Dragons) ತಂಡದಿಂದ ಅದ್ಧೂರಿ ಸಂಗೀತ ರಸದೌತಣ ಕಾರ್ಯಕ್ರಮ(IPL 2024 closing ceremony) ನಡೆಯಲಿದೆ.

VISTARANEWS.COM


on

KKR vs SRH IPL 2024
Koo

ಚೆನ್ನೈ: 17ನೇ ಆವೃತ್ತಿಯ ಐಪಿಎಲ್(IPL 2024)​ ಟೂರ್ನಿಗೆ ಒಂದು ಅಧಿಕೃತ ತೆರೆ ಬೀಳಲಿದೆ. ಚೆನ್ನೈಯಲ್ಲಿ ನಡೆಯುವ ಫೈನಲ್​ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(KKR vs SRH IPL 2024)​ ಮುಖಾಮುಖಿಯಾಗುವ ಮೂಲಕ ಟೂರ್ನಿ ಮುಕ್ತಾಯ ಕಾಣದಲಿದೆ. ಫೈನಲ್​ ಪಂದ್ಯಕ್ಕೂ ಮುನ್ನ ವಿಶ್ವ-ಪ್ರಸಿದ್ಧ ಅಮೇರಿಕನ್ ರಾಕ್ ಬ್ಯಾಂಡ್ ಇಮ್ಯಾಜಿನ್ ಡ್ರಾಗನ್ಸ್(Imagine Dragons) ತಂಡದಿಂದ ಅದ್ಧೂರಿ ಸಂಗೀತ ರಸದೌತಣ ಕಾರ್ಯಕ್ರಮ(IPL 2024 closing ceremony) ನಡೆಯಲಿದೆ. ಪ್ರೋಮೋ ಹಂಚಿಕೊಂಡು ಈ ವಿಚಾರವನ್ನು ಸ್ಟಾರ್​ ಸ್ಪೋರ್ಟ್ಸ್​ ತನ್ನ ಅಧಿಕೃತ ಟ್ವೀಟರ್​ ಎಕ್ಸ್​ನಲ್ಲಿ ಪ್ರಕಟಿಸಿದೆ.

ವಿರಾಟ್​ ಕೊಹ್ಲಿಯ(Virat Kohli) ಅಪ್ಪಟ ಅಭಿಮಾನಿಯಾಗಿರುವ ಅಮೆರಿಕನ್​ ಸಿಂಗರ್,​ ಡಾನ್ ರೆನಾಲ್ಡ್ಸ್ ಸಮಾರೋಪ ಕಾರ್ಯಕ್ರಮದಲ್ಲಿ ಹಲವು ಹಾಡುಗಳನ್ನು ಹಾಡಲಿದ್ದಾರೆ. ಸ್ಟಾರ್​ ಸ್ಪೋರ್ಟ್ಸ್​ ಜತೆ ಮಾತನಾಡುವ ವೇಳೆ ತಾನು ಕೊಹ್ಲಿಯ ಅಭಿಮಾನಿ, ಆತ ನಿಜವಾಗಿಯೂ ಗ್ರೇಟೆಸ್ಟ್​ ಆಲ್​ ಟೈಮ್​ ಎಂದರು. ಅಲ್ಲದೆ ಅವರ ಬ್ಯಾಟಿಂಗ್​ ನೋಡುವುದೇ ಒಂದು ಸುಂದರ ಅನುಭವ ಎಂದು ಕೊಹ್ಲಿಯನ್ನು ಗುಣಗಾನ ಮಾಡಿದರು. ಐಪಿಎಲ್​ ಸಮಾರೋಪ ಸಮಾರಂಭವು ಸಂಜೆ 6 ಗಂಟೆಯಿಂದ ಪ್ರಾರಂಭವಾಗಲಿದೆ. ಪಂದ್ಯ 7.30ಕ್ಕೆ ಆರಂಭಗೊಳ್ಳಲಿದೆ.

ಭಾರೀ ಪೈಪೋಟಿ ನಿರೀಕ್ಷೆ


ಕೋಲ್ಕತಾ ವಿರುದ್ಧದ ಲೀಗ್​ ಮತ್ತು ಕ್ವಾಲಿಫೈಯರ್​ ಪಂದ್ಯದಲ್ಲಿ ಸನ್​ರೈಸರ್ಸ್​ ಸೋಲು ಕಂಡಿದ್ದರೂ ಕೂಡ ಫೈನಲ್​ ಪಂದ್ಯದ ಗೇಮ್​ ಪ್ಲಾನ್​ ಬೇರೆಯೆ ಇರಲಿದೆ. ಇದಕ್ಕೆ ಕಾರಣ ಹೈದರಾಬಾದ್​ ತಂಡವನ್ನು ಮುನ್ನಡೆಸುತ್ತಿರುವ ಆಸ್ಟ್ರೇಲಿಯಾದ ನಾಯಕ ಪ್ಯಾಟ್​ ಕಮಿನ್​. ಆಸೀಸ್ ತಂಡ ಹಾಗೂ ಆಟಗಾರರು ಯಾವುದೇ ಫೈನಲ್​ನಲ್ಲಿ ಡಿಫರೆಂಟ್​ ಆಟಕ್ಕೆ ಹೆಸರುವಾಸಿ. ಟ್ರಾವಿಸ್​ ಹೆಡ್​ ಕೂಡ ಇದೇ ತಂಡದಲ್ಲಿದ್ದಾರೆ. ಅತ್ತ ಕೆಕೆಆರ್​ ಪರ ಮಿಚೆಲ್​ ಸ್ಟಾಕ್​ ಇದ್ದಾರೆ. ಜತೆಗೆ ವಿಂಡೀಸ್​ನ ಬಿಗ್​ ಹಿಟ್ಟರ್​ ಆ್ಯಂಡ್ರೆ ರಸೆಲ್​, ಸುನೀಲ್​ ನರೈನ್​ ಕಾಣಿಸಿಕೊಂಡಿದ್ದಾರೆ. ಉಭಯ ಆಟಗಾರರು ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡಕ್ಕೂ ಸೈ ಎನಿಸಿಕೊಂಡಿದ್ದಾರೆ. ಹೀಗಾಗಿ ಫೈನಲ್​ ಪಂದ್ಯ ರೋಚಕ ಮತ್ತು ತೀವ್ರ ಪೈಪೋಟಿಯಿಂದ ಕೂಡಿರಬಹುದು ಎಂದು ನಿರೀಕ್ಷೆ ಮಾಡಬಹುದು.

ಇದನ್ನೂ ಓದಿ KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ?

ಫೈನಲ್​ನಲ್ಲಿ ವಿಜೇತ ತಂಡ 20 ಕೋಟಿ ರೂಪಾಯಿ ಬಹುಮಾನವನ್ನು ಪಡೆಯಲಿದೆ. ರನ್ನರ್ ಅಪ್‌ ತಂಡಕ್ಕೆ 15 ಕೋಟಿ ರೂ. ಸಿಗಲಿದೆ. ಮೂರನೇ ಸ್ಥಾನಿಯಾದ ತಂಡಕ್ಕೆ 7 ಕೋಟಿ ಮತ್ತು 4ನೇ ಸ್ಥಾನಿಗೆ 6.5 ಕೋಟಿ ರೂ ಸಿಗಲಿದೆ. ಈಗಾಗಲೇ ರಾಜಸ್ಥಾನ್​ ಮತ್ತು ಆರ್​ಸಿಬಿ ಪ್ಲೇ ಆಫ್​ನಲ್ಲಿ ಸೋಲಿ ಕಂಡು ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನ ಪಡೆದಿವೆ. ಹೀಗಾಗಿ ರಾಜಸ್ಥಾನ್​ಗೆ(7 ಕೋಟಿ) ಮತ್ತು ಆರ್​ಸಿಬಿಗೆ(6.5 ಕೋಟಿ) ಮೊತ್ತ ಸಿಗಲಿದೆ. ಒಟ್ಟು ಬಹುಮಾನ ಮೊತ್ತ 46.5 ಕೋಟಿ ರೂ. ಆಗಿದೆ.

ಸಂಭಾವ್ಯ ತಂಡಗಳು


ಹೈದರಾಬಾದ್​:
 ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.

ಕೆಕೆಆರ್​: ರಹಮಾನುಲ್ಲಾ ಗುರ್ಬಾಜ್ (ವಿಕೆಟ್​ ಕೀಪರ್​), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Continue Reading

ಕ್ರೀಡೆ

KKR vs SRH IPL Final: ಫೈನಲ್​ ಪಂದ್ಯಕ್ಕೆ ಕ್ಷಣಗಣನೆ; ಇತ್ತಂಡಗಳ ದಾಖಲೆ ಹೇಗಿದೆ?

KKR vs SRH IPL Final: ಚೆನ್ನೈಯ ಎಂ.ಎ.ಚಿದಂಬರಂ ಮೈದಾನ ಪಿಚ್​ ನಿಧಾನಗತಿಯಿಂದ ಕೂಡಿದೆ. ಸ್ಪಿನ್‌ ಸ್ನೇಹಿಯಾಗಿದ್ದರೂ ಕೂಡ ಈ ಮೈದಾನ ಹೈ ಸ್ಕೋರಿಂಗ್‌ ಪಂದ್ಯ ಕೂಡ ಕಂಡುಬಂದಿದೆ. ಚೆನ್ನೈ ಮತ್ತು ಲಕ್ನೋ ನಡುವಣ ಪಂದ್ಯದಲ್ಲಿ ಚೆನ್ನೈ 210 ರನ್‌ ಬಾರಿಸಿತ್ತು. ಈ ಬೃಹತ್​ ಮೊತ್ತವನ್ನು ಲಕ್ನೋ ತಂಡ 19.3 ಓವನ್‌ನಲ್ಲೇ ಗುರಿ ತಲುಪಿತ್ತು.

VISTARANEWS.COM


on

KKR vs SRH IPL Final
Koo

ಚೆನ್ನೈ: ಸನ್​ರೈಸರ್ಸ್​ ಹೈದರಾಬಾದ್(KKR vs SRH Final 2024)​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders) ವಿದುದ್ಧದ ಐಪಿಎಲ್​-2024ರ(IPL 2024) ಫೈನಲ್​ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಉಭಯ ತಂಡಗಳ ಪ್ರಶಸ್ತಿ ಕಾಳಗಕ್ಕೆ ಚೆನ್ನೈಯ ಎಂ.ಎ. ಚಿದಂಬರಂ ಸ್ಟೇಡಿಯಂ ಅಣಿಯಾಗಿದೆ.

ಮೇ 21 ಮಂಗಳವಾರ ನಡೆದಿದ್ದ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಕೆಕೆಆರ್​ ತಂಡ ಹೈದರಾಬಾದ್(Sunrisers Hyderabad)​ ವಿರುದ್ಧ 8 ವಿಕೆಟ್​ ಅಂತರದ ಗೆಲುವು ಸಾಧಿಸಿತ್ತು. ಲೀಗ್​ ಹಂತದ ಪಂದ್ಯದಲ್ಲಿಯೂ ಕೆಕೆಆರ್​ ಮೇಲುಗೈ ಸಾಧಿಸಿತ್ತು. ಇದೀಗ ಈ ಎಲ್ಲ ಸೋಲಿಗೆ ಕಮಿನ್ಸ್​ ಪಡೆ​ ಫೈನಲ್​ನಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಪಿಚ್​ ರಿಪೋರ್ಟ್​


ಚೆನ್ನೈಯ ಎಂ.ಎ.ಚಿದಂಬರಂ ಮೈದಾನ ಪಿಚ್​ ನಿಧಾನಗತಿಯಿಂದ ಕೂಡಿದೆ. ಸ್ಪಿನ್‌ ಸ್ನೇಹಿಯಾಗಿದ್ದರೂ ಕೂಡ ಈ ಮೈದಾನ ಹೈ ಸ್ಕೋರಿಂಗ್‌ ಪಂದ್ಯ ಕೂಡ ಕಂಡುಬಂದಿದೆ. ಚೆನ್ನೈ ಮತ್ತು ಲಕ್ನೋ ನಡುವಣ ಪಂದ್ಯದಲ್ಲಿ ಚೆನ್ನೈ 210 ರನ್‌ ಬಾರಿಸಿತ್ತು. ಈ ಬೃಹತ್​ ಮೊತ್ತವನ್ನು ಲಕ್ನೋ ತಂಡ 19.3 ಓವನ್‌ನಲ್ಲೇ ಗುರಿ ತಲುಪಿತ್ತು. ಹೀಗಾಗಿ ಪಿಚ್​ ವರ್ತನೆಯನ್ನು ಸ್ಪಷ್ಟವಾಗಿ ಹೇಳುವುದು ಕೊಂಚ ಕಷ್ಟವಾಗಿದೆ. ಮಂಜಿನ ಕಾಟ ಇರುವ ಕಾರಣ ಟಾಸ್‌ ಗೆಲ್ಲುವ ತಂಡ ಬೌಲಿಂಗ್‌ ಆಯ್ದುಕೊಳ್ಳುವ ಸಾಧ್ಯತೆ ಹೆಚ್ಚು.

ಮುಖಾಮುಖಿ


ಕೆಕೆಆರ್​ ಮತ್ತು ಸನ್​ರೈಸರ್ಸ್ ಹೈದರಾಬಾದ್​ ತಂಡಗಳು ಇದುವರೆಗಿನ ಐಪಿಎಲ್​ ಇತಿಹಾಸದಲ್ಲಿ 27 ಪಂದ್ಯಗಳನ್ನು ಆಡಿದೆ. ಈ ಪೈಕಿ 18 ಪಂದ್ಯಗಳಲ್ಲಿ ಕೆಕೆಆರ್​ ಗೆಲುವು ಸಾಧಿಸಿದೆ. ಹೈದರಾಬಾದ್​ ಕೇವಲ 9 ಪಂದ್ಯ ಮಾತ್ರ ಗೆದ್ದಿದೆ. ಈ ಆವೃತ್ತಿಯಲ್ಲಿಯೂ ಆಡಿದ ಲೀಗ್​ ಮತ್ತು ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಸೋಲು ಕಂಡಿತ್ತು. ಈ ಲೆಕ್ಕಾಚಾರವನ್ನು ನೋಡುವಾಗ ಇಂದಿನ ಪಂದ್ಯದಲ್ಲಿಯೂ ಕೆಕೆಆರ್​ ಗೆಲುವಿನ ಫೇವರಿಟ್ ತಂಡವಾಗಿದೆ. ಫೈನಲ್​ನಲ್ಲಿ ಇತ್ತಂಡಗಳು ಪರಸ್ಪರ ಎದುರಾಗುತ್ತಿರುವುದು ಇದೇ ಮೊದಲು.

ಇದನ್ನೂ ಓದಿ KKR vs SRH IPL Final: ರೀಮಲ್‌ ಚಂಡಮಾರುತ; ಫೈನಲ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

ಆಸ್ಟ್ರೇಲಿಯಾದ ನಾಯಕನಾಗಿರುವ ಪ್ಯಾಟ್​ ಕಮಿನ್ಸ್​ 2 ವಿಶ್ವಕಪ್​ ಗೆದ್ದ ನಾಯಕ. ಅದು ಕೂಡ ಚೊಚ್ಚಲ ಪ್ರಯತ್ನದಲ್ಲೇ ಈ ಸಾಧನೆ ಮಾಡಿದ್ದಾರೆ. ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವರು ಟ್ರೋಫಿ ಗೆದ್ದಿದ್ದಾರೆ. ಹೀಗಾಗಿ ಇವರು ಹೈದರಾಬಾದ್​ಗೂ ತಮ್ಮ ನಾಯಕತ್ವದಲ್ಲಿ ಕಪ್​ ಗೆಲ್ಲಬಹುದು ಎನ್ನುವುದು ಕ್ರಿಕೆಟ್​ ಅಭಿಮಾನಿಗಳ ನಂಬಿಕೆ. ಮೊತ್ತೊಂದೆಡೆ ಆಸ್ಟ್ರೇಲಿಯಾ ಟೆಸ್ಟ್​ ಮತ್ತು ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಗೆಲುವಿನ ಹೀರೊ ಎನಿಸಿಕೊಂಡಿದ್ದ ಟ್ರಾವಿಸ್​ ಹೆಡ್​ ಕೂಡ ಹೈದರಾಬಾದ್​ ತಂಡದಲ್ಲಿದ್ದಾರೆ. ಹೀಗಾಗಿ ಫೈನಲ್​ನಲ್ಲಿಯೂ ಇವರ ಸ್ಫೋಟಕ ಬ್ಯಾಟಿಂಗ್​ ನಿರೀಕ್ಷೆ ಮಾಡಲಾಗಿದೆ.

ಕೆಕೆಆರ್​ ಪಾಲಿನ ದೊಡ್ಡ ಬಲವೆಂದರೆ ಆಟಗಾರರ ಸಂಘಟಿತ ಪ್ರದರ್ಶನ. ಬ್ಯಾಟಿಂಗ್​, ಬೌಲಿಂಗ್​ ಎರಡೂ ವಿಭಾಗದಲ್ಲಿ ಸಮರ್ಥವಾಗಿದೆ. ಸೀಮಿತ ಆಗಾರರ ಪ್ರದರ್ಶನದ ಮೇಲೆ ತಂಡ ನೆಚ್ಚಿಕೊಂಡಿಲ್ಲ. ಇಂಗ್ಲೆಂಡ್​ನ ಫಿಲ್​ ಸಾಲ್ಟ್ ಪಾಕ್​ ವಿರುದ್ಧದ ಟಿ20 ಸರಣಿಯ ಭಾಗವಾಗಿ ತವರಿಗೆ ಮರಳಿದ್ದರೂ ಕೂಡ ಇವರ ಸ್ಥಾನದಲ್ಲಿ ಕಳೆದ ಪಂದ್ಯದಲ್ಲಿ ಆಡಲಿಳಿದಿದ್ದ ಅಫಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ ಕೂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಯಶಸ್ಸು ಕಂಡಿದ್ದರು. ಆ್ಯಂಡ್ರೆ ರೆಸಲ್​ ಈ ಬಾರಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ.

Continue Reading
Advertisement
Iran-Israel Conflict
ವಿದೇಶ2 mins ago

Iran-Israel Conflict: “ಅಚ್ಚರಿಯ ದಾಳಿ ನಿರೀಕ್ಷಿಸಿ”- ಇಸ್ರೇಲ್‌ಗೆ ಇರಾನ್‌ನಿಂದ ವಾರ್ನಿಂಗ್‌

Congress Karnataka
ಕರ್ನಾಟಕ1 hour ago

Congress Karnataka: ಬದಲಾಗ್ತಾರಾ ಕೆಪಿಸಿಸಿ ಅಧ್ಯಕ್ಷರು?; ಡಿಕೆಶಿ ಹೇಳಿಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆ ಶುರು!

Malaysia Masters Final
ಕ್ರೀಡೆ1 hour ago

Malaysia Masters Final: ಮಲೇಷ್ಯಾ ಮಾಸ್ಟರ್ಸ್ ಫೈನಲ್​ನಲ್ಲಿ ಸೋಲು ಕಂಡ ಪಿ.ವಿ.ಸಿಂಧು

Priyanka Upendra Red Rock Studio in collaboration with Comer Film Factory
ಸ್ಯಾಂಡಲ್ ವುಡ್1 hour ago

Priyanka Upendra: ’ಕಮರ್ ಫಿಲಂ ಫ್ಯಾಕ್ಟರಿ’ ಸಹಯೋಗದಲ್ಲಿ ‘ರೆಡ್ ರಾಕ್ ಸ್ಟುಡಿಯೊ’ ಶುಭಾರಂಭ: ಪ್ರಿಯಾಂಕ ಉಪೇಂದ್ರ ಸಾಥ್‌!

Mob Attacks
ವಿದೇಶ1 hour ago

Mob Attacks: ಕುರಾನ್ ಅಪವಿತ್ರ ನೆಪ; ಪಾಕಿಸ್ತಾನದಲ್ಲಿ ಕ್ರಿಶ್ಚಿಯನ್ನರ ಮೇಲೆ ಮುಸ್ಲಿಮರ ದಾಳಿ

theft Case
ಚಿಕ್ಕಬಳ್ಳಾಪುರ1 hour ago

Theft Case : ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

Flight Emergency Landing
ದೇಶ2 hours ago

Flight Emergency Landing: ತಪ್ಪಿದ ಮತ್ತೊಂದು ಭಾರೀ ಅವಘಡ; ಸ್ಪೈಸ್‌ ಜೆಟ್‌ ವಿಮಾನ ತುರ್ತು ಭೂಸ್ಪರ್ಶ

Lockup Death
ಪ್ರಮುಖ ಸುದ್ದಿ2 hours ago

Lockup Death: ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್; 23 ಕಿಡಿಗೇಡಿಗಳ ಸೆರೆ

theft Case
ಬೆಂಗಳೂರು2 hours ago

Theft case : ಬೆಳಗ್ಗೆ ಕೋಳಿ ಕುಯ್ಯುತ್ತಾರೆ, ರಾತ್ರಿಯಾದರೆ ಸುಲಿಗೆಗೆ ಇಳಿಯುತ್ತಾರೆ!

Amrithadhare Serial Fans reaction about goutham Bhoomika
ಕಿರುತೆರೆ2 hours ago

Amrithadhare Serial: ಭೂಮಿಗೆ ಒಲವಿನುಸಿರ ಕೊಟ್ಟು ಮರುಜನ್ಮ ನೀಡಿದ ಗೌತಮ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 week ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 week ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌