Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ - Vistara News

ವಿದೇಶ

Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Israel-Hamas Conflict: ಅಹ್ಮದ್ ಅಲ್ಸೌರ್ಕಾ ಹಮಾಸ್ ನುಖ್ಬಾ ಪಡೆಗಳಲ್ಲಿ ಕಮಾಂಡರ್ ಆಗಿದ್ದ. ದಕ್ಷಿಣ ಇಸ್ರೇಲ್‌ನಲ್ಲಿ ಅಕ್ಟೋಬರ್ 7 ರಂದು ನಡೆದ ಹತ್ಯಾಕಾಂಡದಲ್ಲಿ ಅವರು ಪ್ರಮುಖ ರೂವಾರಿಯಾಗಿದ್ದ. ಈ ಹತ್ಯಾಕಾಂಡದಲ್ಲಿ 1,189 ಜನರು ಸಾವನ್ನಪ್ಪಿದ್ದರು. IDF ಮತ್ತು ಇಸ್ರೇಲ್ ಸೆಕ್ಯುರಿಟಿ ಏಜೆನ್ಸಿ (ISA)ಯ ಗುಪ್ತಚರ ಮಾಹಿತಿ ಆಧಾರದ ಮೇಲೆ ಇಸ್ರೇಲಿ ವಾಯುಪಡೆಯು ಕಾರ್ಯಾಚರಣೆಯನ್ನು ನಡೆಸಿತು.

VISTARANEWS.COM


on

Israel-Hamas Conflict
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಾಜಾ: ಇಸ್ರೇಲ್‌ ಮತ್ತು ಹಮಾಸ್‌ ಉಗ್ರರ ನಡುವಿನ ಸಂಘರ್ಷ(Israel-Hamas Conflict) ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಲೇ ಇದೆ. ಇಸ್ರೇಲ್‌ ಸೇನೆ(Israeli Air Force) ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‌ ಉಗ್ರರ ಕಮಾಂಡರ್‌(Hamas Commander) ಅಹ್ಮದ್ ಹಸನ್ ಸಲಾಮೆ ಅಲ್ಸೌರ್ಕಾನನ್ನು ಯಶಸ್ವಿಯಾಗಿ ಹೊಡೆದುರುಳಿಸಲಾಗಿದೆ. ಈ ಬಗ್ಗೆ ಇಸ್ರೇಲ್ ರಕ್ಷಣಾ ಪಡೆಗಳು ಅಧಿಕೃತ ಘೋಷಣೆ ಹೊರಡಿಸಿದೆ.

ಅಹ್ಮದ್ ಅಲ್ಸೌರ್ಕಾ ಹಮಾಸ್ ನುಖ್ಬಾ ಪಡೆಗಳಲ್ಲಿ ಕಮಾಂಡರ್ ಆಗಿದ್ದ. ದಕ್ಷಿಣ ಇಸ್ರೇಲ್‌ನಲ್ಲಿ ಅಕ್ಟೋಬರ್ 7 ರಂದು ನಡೆದ ಹತ್ಯಾಕಾಂಡದಲ್ಲಿ ಅವರು ಪ್ರಮುಖ ರೂವಾರಿಯಾಗಿದ್ದ. ಈ ಹತ್ಯಾಕಾಂಡದಲ್ಲಿ 1,189 ಜನರು ಸಾವನ್ನಪ್ಪಿದ್ದರು. IDF ಮತ್ತು ಇಸ್ರೇಲ್ ಸೆಕ್ಯುರಿಟಿ ಏಜೆನ್ಸಿ (ISA)ಯ ಗುಪ್ತಚರ ಮಾಹಿತಿ ಆಧಾರದ ಮೇಲೆ ಇಸ್ರೇಲಿ ವಾಯುಪಡೆಯು ಕಾರ್ಯಾಚರಣೆಯನ್ನು ನಡೆಸಿತು. ಉತ್ತರ ಗಾಜಾದ ಬೀಟ್ ಹನೌನ್ ಪ್ರದೇಶದಲ್ಲಿ ಅಲ್ಸೌರ್ಕಾ ತನ್ನ ಪಡೆಗಳೊಂದಿಗೆ ಬೀಡು ಬಿಟ್ಟಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ಇಸ್ರೇಲ್‌ ಪಡೆಗಳು ದಾಳಿ ನಡೆಸಿದ್ದವು. ಇನ್ನು ಈ ಕಾರ್ಯಾಚರಣೆ ವಿಡಿಯೋ ಸಿಸಿಟಿವಿಯನ್ನು ರೆಕಾರ್ಡ್‌ ಆಗಿದ್ದು, ಎಲ್ಲೆಡೆ ವೈರಲ್‌ ಆಗುತ್ತಿದೆ. ಘಟನೆಯಲ್ಲಿ ನಾಗರಿಕರಿಗೆ ಯಾವುದೇ ಹಾನಿಗಳಾಗದಂತೆ ಎಚ್ಚರಿಕೆ ಕ್ರಮ ವಹಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕೆಲವು ದಿನಗಳ ಹಿಂದೆ ಹಮಾಸ್‌ ಉಗ್ರರು ಗಾಜಾ ಪಟ್ಟಿಯಲ್ಲಿ ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದ ನಾಲ್ವರು ಇಸ್ರೇಲ್‌ ಪ್ರಜೆಗಳನ್ನು ರಕ್ಷಿಸಲಾಗಿತ್ತು. ಇಸ್ರೇಲ್‌ ರಕ್ಷಣಾ ಪಡೆ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ನಾಲ್ವರನ್ನು ರಕ್ಷಿಸಿ ತಮ್ಮ ದೇಶಕ್ಕೆ ಮರಳಿ ತರುವಲ್ಲಿ ಯಶಸ್ವಿಯಾಗಿತ್ತು. ದುರಾದೃಷ್ಟವಶಾತ್‌ ಈ ರಕ್ಷಣಾ ಕಾರ್ಯಾಚಣೆ ವೇಳೆ ಒಬ್ಬ ಇಸ್ರೇಲ್‌ ಯೋಧ ಹುತಾತ್ಮನಾಗಿದ್ದ.

ರಕ್ಷಿಸಲ್ಪಟ್ಟ ಒತ್ತೆಯಾಳುಗಳನ್ನು ನೋವಾ ಅರ್ಗಾಮನಿ(25ವರ್ಷ), ಅಲ್ಮೋಗ್‌ ಮೀರ್‌ ಜಾನ್‌ (21ವರ್ಷ), ಆಂಡ್ರೆ ಕೊಜ್ಲೋವ್‌ (27ವರ್ಷ) ಹಾಗೂ ಶ್ಲೋಮಿ ಝಿವ್‌ (40ವರ್ಷ) ಎಂದು ಗುರುತಿಸಲಾಗಿದೆ. ಇವರನ್ನು ಹಮಾಸ್‌ ಉಗ್ರರು 2023ರ ಅಕ್ಟೋಬರ್‌ 7ರಂದು ಸೂಪರ್ನೋವಾ ಸಂಗೀತ ರಸಮಂಜರಿ ಕಾರ್ಯಕ್ರಮದ ವೇಳೆ ಅಪಹರಿಸಿಕೊಂಡು ಹೋಗಿರುವುದಾಗಿ ದ ಟೈಮ್ಸ್‌ ಆಫ್‌ ಇಸ್ರೇಲ್‌ ವರದಿ ಮಾಡಿದೆ.

ಇದನ್ನೂ ಓದಿ: International Yoga Day 2024: ದೇಹ ತೂಕ ಇಳಿಕೆಗೆ ಈ 5 ಆಸನಗಳು ಸೂಕ್ತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವಿದೇಶ

Kimberly Cheatle: ಯುಎಸ್ ಸೀಕ್ರೆಟ್ ಸರ್ವೀಸ್ ಡೈರೆಕ್ಟರ್ ಹುದ್ದೆಗೆ ಕಿಂಬರ್ಲಿ ಚೀಟಲ್ ದಿಢೀರ್​ ರಾಜೀನಾಮೆ

Kimberly Cheatle: ಭದ್ರತಾ ಲೋಪದ ಸಂಪೂರ್ಣ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ. ಜತೆಗೆ ನನ್ನ ನಿರ್ದೇಶಕ ಸ್ಥಾನದಿಂದ ಕೆಳಗಿಳಿಯುವ ಕಠಿಣ ನಿರ್ಧಾರವನ್ನು ನಾನು ತೆಗೆದುಕೊಂಡಿದ್ದೇನೆ ಎಂದು ಮೇಲ್‌ನಲ್ಲಿ ಬರೆಯುವ ಮೂಲಕ ಚೀಟಲ್ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದಾರೆ.

VISTARANEWS.COM


on

kimberly cheatle
Koo

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆ(US Presidential Election) ಪ್ರಚಾರದಲ್ಲಿ ಭಾಗಿಯಾಗಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌(Donald Trump Assassination Bid) ಮೇಲಿನ ಗುಂಡಿನ ದಾಳಿ(Shootout) ಯತ್ನವನ್ನು ತಡೆಯುವ ಕಾರ್ಯಾಚರಣೆಯಲ್ಲಿ ತನ್ನ ಸಂಸ್ಥೆ ವಿಫಲವಾದ ಕಾರಣದಿಂದ ಯುಎಸ್ ಸೀಕ್ರೆಟ್ ಸರ್ವೀಸ್ ಡೈರೆಕ್ಟರ್(US Secret Service Director ) ಕಿಂಬರ್ಲಿ ಚೀಟಲ್ (Kimberly Cheatle) ಅವರು ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಪ್ರಚಾರ ಸಭೆಯಲ್ಲಿ 20 ವರ್ಷದ ಬಂದೂಕುಧಾರಿ ಮಾಜಿ ರಿಪಬ್ಲಿಕನ್ ಅಧ್ಯಕ್ಷ ಮತ್ತು ಪ್ರಸ್ತುತ ಶ್ವೇತಭವನದ ಅಭ್ಯರ್ಥಿಯನ್ನು ಗಾಯಗೊಳಿಸಿದ ಪ್ರಕರಣದಲ್ಲಿ ಚೀಟಲ್ ರಾಜೀನಾಮೆ ನೀಡಬೇಕು ಎಂದು ರಾಜಕೀಯ ಪಕ್ಷಗಳು ಒತ್ತಾಯಿಸಿದ್ದವು. ಇದೀಗ ಚೀಟಲ್ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದಾರೆ.

“ಭದ್ರತಾ ಲೋಪದ ಸಂಪೂರ್ಣ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ. ಜತೆಗೆ ನನ್ನ ನಿರ್ದೇಶಕ ಸ್ಥಾನದಿಂದ ಕೆಳಗಿಳಿಯುವ ಕಠಿಣ ನಿರ್ಧಾರವನ್ನು ನಾನು ತೆಗೆದುಕೊಂಡಿದ್ದೇನೆ” ಎಂದು ಮೇಲ್‌ನಲ್ಲಿ ಬರೆಯುವ ಮೂಲಕ ಚೀಟಲ್ ತಮ್ಮ ಹುದ್ದೆಯಿಂದ ಕೆಳಗಿಳಿದಿದ್ದಾರೆ.

ಜುಲೈ 13 ಶನಿವಾರದಂದು ಪೆನ್ಸಿಲ್ವೇನಿಯಾದ ಬಟ್ಲರ್ನ್‌ನಲ್ಲಿ ಸಂಜೆ ನಡೆದ ರ್ಯಾಲಿಯಲ್ಲಿ ಟ್ರಂಪ್‌ ಮಾತನಾಡುತ್ತಿದ್ದ ವೇಳೆ ಈ ಗುಂಡಿನ ದಾಳಿ ನಡೆದಿದ್ದು, ಟ್ರಂಪ್ ಅವರ ಬಲ ಕಿವಿಗೆ ಗುಂಡು ತಗುಲಿತ್ತು. ದಾಳಿಯಿಂದ ಟ್ರಂಪ್‌ ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು.

ಪ್ರಧಾನಿ ನರೇಂದ್ರ ಮೋದಿ ಕೂಡ ಟ್ರಂಪ್ ಮೇಲಿನ ದಾಳಿಯನ್ನು ಖಂಡಿಸಿದ್ದರು. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ‘ನನ್ನ ಸ್ನೇಹಿತ ಡೊನಾಲ್ಡ್‌ ಟ್ರಂಪ್‌ ಮೇಲೆ ನಡೆದಿರುವ ದಾಳಿ ನಿಜಕ್ಕೂ ಆಘಾತಕಾರಿ ವಿಚಾರ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಅವಕಾಶ ಇಲ್ಲ. ಅವರು ಶೀಘ್ರವೇ ಚೇತರಿಸಿಕೊಳ್ಳಲಿ. ಇನ್ನು ಘಟನೆಯಲ್ಲಿ ಗಾಯಗೊಂಡವರು ಕೂಡ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ Donald Trump: ಅಮೆರಿಕವೂ ಐರನ್ ಡೋಮ್ ಕ್ಷಿಪಣಿ ತಯಾರಿಸಲಿದೆ; ಡೊನಾಲ್ಡ್‌ ಟ್ರಂಪ್‌ ಸೂಚನೆ

ಎದುರಾಳಿಗಳಿಗೆ ಎಚ್ಚರಿಕೆ


ನವೆಂಬರ್‌ನಲ್ಲಿ ನಡೆಯುವ ಚುನಾವಣೆಯ ನಂತರ ತಾವು ಶ್ವೇತಭವನಕ್ಕೆ ಮರಳುವ ಮೊದಲು ಅಮೆರಿಕದ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು 78 ವರ್ಷದ ಟ್ರಂಪ್ ವಿರೋಧಿಗಳಿಗೆ ಕಠಿಣ ಎಚ್ಚರಿಕೆಯನ್ನೂ ನೀಡಿದ್ದಾರೆ.

ತಮ್ಮ ಸುದೀರ್ಘ ಭಾಷಣದಲ್ಲಿ ಟ್ರಂಪ್ ಹಣದುಬ್ಬರ, ಅಕ್ರಮ ವಲಸೆ ಮತ್ತು ಹಲವು ಅಂತಾರಾಷ್ಟ್ರೀಯ ಬಿಕ್ಕಟ್ಟುಗಳಿಗೆ ಜೋ ಬೈಡನ್ ಆಡಳಿತವನ್ನು ದೂಷಿಸಿದರು. “ನಾವು ನಮ್ಮ ಸೈನ್ಯವನ್ನು ಇನ್ನಷ್ಟು ಬಲಪಡಿಸುತ್ತೇವೆ ಮತ್ತು ಯಾವುದೇ ಶತ್ರು ನಮ್ಮ ತಾಯ್ನಾಡಿನ ಮೇಲೆ ದಾಳಿ ಮಾಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಐರನ್ ಡೋಮ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ನಿರ್ಮಿಸುತ್ತೇವೆ” ಎಂದು ಘೋಷಿಸಿದರು. ಅದಾಗ್ಯೂ ಟ್ರಂಪ್ ಪ್ರಸ್ತಾಪಿಸಿದ ಐರನ್ ಡೋಮ್ ವ್ಯವಸ್ಥೆಯ ಉದ್ದೇಶವು ಅಸ್ಪಷ್ಟವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಯಾಕೆಂದರೆ ಇದನ್ನು ಅಲ್ಪ-ಶ್ರೇಣಿಯ ರಾಕೆಟ್‌ಗಳನ್ನು ತಡೆಹಿಡಿಯಲು ವಿನ್ಯಾಸಗೊಳಿಸಲಾಗುತ್ತದೆ. ಆದರೆ ಅಮೆರಿಕ ಗಡಿಗಳಲ್ಲಿ ಅಂತಹ ಯಾವುದೇ ಬೆದರಿಕೆಗಳಿಲ್ಲ ಎಂದಿದ್ದಾರೆ.

Continue Reading

Latest

Viral Video: 13ನೇ ಮಹಡಿಯಿಂದ ಬಿದ್ದರೂ ಈಕೆಯ ಒಂದೇ ಒಂದು ಮೂಳೆ ಮುರಿದಿಲ್ಲ! ವಿಡಿಯೊ ನೋಡಿ

Viral Video: ಆಕಸ್ಮಾತ್ ಆಗಿ ಕಾಲು ಜಾರಿ ಬಿದ್ದು ಮೂಳೆ ಮುರಿದು ತಿಂಗಳಿಡೀ ನಡೆಯುವುದಕ್ಕೆ ಆಗದೇ ಒದ್ದಾಡುವವರನ್ನು ನೋಡಿರುತ್ತೇವೆ. ಆದರೆ ರಷ್ಯಾದಲ್ಲಿ ಮಹಿಳೆಯೊಬ್ಬರು 13ನೇ ಮಹಡಿಯಿಂದ ಬಿದ್ದರು ಏನೂ ಆಗದವರ ಹಾಗೇ ಎದ್ದು ಅಂಬ್ಯುಲೆನ್ಸ್ ಕಡೆಗೆ ನಡೆದುಕೊಂಡೇ ಹೋಗಿದ್ದಾಳೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.ಮಹಿಳೆ ಎತ್ತರದ ಮಹಡಿಯಿಂದ ಮೈದಾನದಲ್ಲಿದ್ದ ಹುಲ್ಲುಗಾವಲಿನ ಮೇಲೆ ಬಿದ್ದು, ನಂತರ ತಾನಾಗಿಯೇ ಎದ್ದೇಳುವ ವಿಡಿಯೊ ಅಚ್ಚರಿ ಮೂಡಿಸಿದೆ.

VISTARANEWS.COM


on

Viral Video
Koo


ಮೊದಲ ಮಹಡಿಯಿಂದ ಬಿದ್ದವರ ಜೀವ ಉಳಿಯುವುದೇ ಕಷ್ಟ. ಅಂತಹದರಲ್ಲಿ ರಷ್ಯಾದಲ್ಲಿ 22 ವರ್ಷದ ಮಹಿಳೆಯೊಬ್ಬರು ಎತ್ತರದ ಕಟ್ಟಡದ 13ನೇ ಮಹಡಿಯಿಂದ ಬಿದ್ದರೂ ಆಕೆಗೆ ಸಣ್ಣಪುಟ್ಟ ಗಾಯಗಳಾಗಿ ಆಕೆ ಬದುಕುಳಿದಿದ್ದು ಪವಾಡ ಎನ್ನಲಾಗಿದೆ. ಈ ಆಘಾತಕಾರಿ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ. ಆಶ್ಚರ್ಯವೆನೆಂದರೆ ಆಕೆಯ ಒಂದೇ ಒಂದು ಮೂಳೆ ಕೂಡ ಮುರಿತಕ್ಕೊಳಗಾಗಿಲ್ಲ.

ಮಹಿಳೆ ಎತ್ತರದ ಮಹಡಿಯಿಂದ ಮೈದಾನದಲ್ಲಿದ್ದ ಹುಲ್ಲುಗಾವಲಿನ ಮೇಲೆ ಬಿದ್ದು, ನಂತರ ತಾನಾಗಿಯೇ ಎದ್ದೇಳುವ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಮಹಿಳೆ ತಾನಾಗಿಯೇ ಆಂಬ್ಯುಲೆನ್ಸ್ ಕಡೆಗೆ ಆರಾಮವಾಗಿ ನಡೆದುಕೊಂಡು ಬಂದಿದ್ದಾಳೆ.

ಜುಲೈ 16ರಂದು ಮಹಾರಾಷ್ಟ್ರದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಮಹಾರಾಷ್ಟ್ರದ ಡೊಂಬಿವಲಿಯ ಕಾಂಪ್ಲೆಕ್ಸ್ ಒಂದರ ಮೂರನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದರು. ಡೊಂಬಿವಿಲಿಯ ಪೂರ್ವ ಕಲ್ಯಾಣ್ ಶೀಲ್ ರಸ್ತೆಯ ವಿಕಾಸ್ ನಾಕಾ ಪ್ರದೇಶದ ಗ್ಲೋಬ್‌ಸ್ಟೇಟ್ ಎಂಬ ಸಂಕೀರ್ಣದಲ್ಲಿ ಈ ಘಟನೆ ನಡೆದಿತ್ತು.

ಇದನ್ನೂ ಓದಿ: 7 ಬಜೆಟ್‍ಗಳಲ್ಲಿ 7 ಬಣ್ಣದ ಸೀರೆ ಧರಿಸಿ ಮಿಂಚಿದ ನಿರ್ಮಲಾ ಸೀತಾರಾಮನ್!

ಮೃತರನ್ನು ನಾಗಿನಾದೇವಿ ಮಂಜಿರಾಮ್ ಎಂದು ಗುರುತಿಸಲಾಗಿದ್ದು, ಅಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದರು. ಅವರು ತಮ್ಮ ವಿರಾಮದ ಸಮಯದಲ್ಲಿ ಸಹೋದ್ಯೋಗಿಗಳೊಂದಿಗೆ ಸಂಕೀರ್ಣದ ಗೋಡೆಯ ಬಳಿ ನಿಂತು ತಮಾಷೆ ಮಾಡಿಕೊಳ್ಳುತ್ತಿದ್ದರು. ಆ ವೇಳೆ ನಾಗಿನಾದೇವಿಯನ್ನು ಬಂಟಿ ಎಂದು ಕರೆಯಲಾದ ವ್ಯಕ್ತಿ ತಮಾಷೆಗೆ ತಳ್ಳಿದ್ದಾನೆ. ಇದರಿಂದ ಆಕೆ ಆಯತಪ್ಪಿ ಮೂರನೇ ಮಹಡಿಯಿಂದ ಬಿದ್ದಿದ್ದಾಳೆ. ಇದರ ಪರಿಣಾಮ ಆಕೆ ಸ್ಥಳದಲ್ಲೇ ಸಾವನಪ್ಪಿದ್ದಾಳೆ ಎನ್ನಲಾಗಿದೆ.

Continue Reading

Latest

Train Tragedy: ರೈಲ್ವೆ ಹಳಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ತಂದೆ!

Train Tragedy: ಅಪ್ಪನ ಪ್ರೀತಿ ಅಗಾಧವಾದದ್ದು. ತನ್ನ ಮಕ್ಕಳಿಗೆ ತುಸುವೇ ನೋವಾದರೂ ಅಪ್ಪನಿಗೆ ಸಹಿಸುವುದಕ್ಕೆ ಆಗುವುದಿಲ್ಲ. ಅದರಲ್ಲೂ ತನ್ನ ಕಣ್ಣೆದುರೇ ಕಂದಮ್ಮಗಳು ಸಾವಿನ ದವಡೆಯಲ್ಲಿದ್ದಾರೆ ಯಾವ ತಂದೆ ಕೈ ಕಟ್ಟಿ ಕುಳಿತುಕೊಳ್ಳುತ್ತಾನೆ? ಸಿಡ್ನಿಯಲ್ಲಿ ಕೆಲಸ ಮಾಡುತ್ತಿದ್ದ ಆನಂದ್ ರನ್ವಾಲ್ ಎಂಬುವವರು ಪತ್ನಿ ಮತ್ತು ಅವಳಿ ಹೆಣ್ಣುಮಕ್ಕಳೊಂದಿಗೆ ರೈಲು ನಿಲ್ದಾಣದಲ್ಲಿದ್ದಾಗ ಅವರ ಫ್ಯಾಮಿಲಿ ಲಿಫ್ಟ್‌ನಿಂದ ಇಳಿದು ಬರುವಾಗ ಅವರ ಅವಳಿ ಹೆಣ್ಣು ಮಕ್ಕಳಿದ್ದ ಪ್ರ್ಯಾಮ್ ಆಕಸ್ಮಿಕವಾಗಿ ರೈಲ್ವೆ ಹಳಿಗೆ ಬಿದ್ದಿದೆ. ಆಗ ಮಕ್ಕಳನ್ನು ರಕ್ಷಿಸಲು ಹೋದ ಆನಂದ್‌ ಜೀವ ಕಳೆದುಕೊಂಡಿದ್ದಾರೆ.

VISTARANEWS.COM


on

Train Tragedy
Koo


ತಂದೆ ತನ್ನ ಮಕ್ಕಳಿಗಾಗಿ ಏನು ಬೇಕಾದರೂ ಮಾಡುತ್ತಾರೆ. ಮಕ್ಕಳಿಗಾಗಿ ತಮ್ಮ ಜೀವವನ್ನೂ ಲೆಕ್ಕಿಸುವುದಿಲ್ಲ ಎಂಬುದಕ್ಕೆ ಆಸ್ಟ್ರೇಲಿಯಾದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಆಸ್ಟ್ರೇಲಿಯಾದಲ್ಲಿ ಇನ್ಫೋಸಿಸ್ ಟೆಕ್ಕಿಯೊಬ್ಬರು ರೈಲ್ವೆ ಹಳಿಯ (Train Tragedy) ಮೇಲೆ ಬಿದ್ದ ತನ್ನ ಅವಳಿ ಹೆಣ್ಣುಮಕ್ಕಳನ್ನು ರಕ್ಷಿಸಲು ಪ್ರಯತ್ನಿಸುವಾಗ ದುರಂತಮಯವಾಗಿ ಸಾವನ್ನಪ್ಪಿದ್ದಾರೆ.

Train Tragedy

40 ವರ್ಷದ ಆನಂದ್ ರನ್ವಾಲ್ ಸಾವನಪ್ಪಿದವರು. ಇವರು ಇನ್ಫೋಸಿಸ್ ಐಟಿ ಉದ್ಯೋಗಿಯಾಗಿದ್ದು, ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕೆಲಸ ಮಾಡುತ್ತಿದ್ದರು. ಆನಂದ್ ತಮ್ಮ ಪತ್ನಿ ಮತ್ತು ಅವಳಿ ಹೆಣ್ಣುಮಕ್ಕಳೊಂದಿಗೆ ಕಾರ್ಲ್ಟನ್ ನಿಲ್ದಾಣದಲ್ಲಿ ಲಿಫ್ಟ್ ನಿಂದ ಇಳಿದು ಬರುವಾಗ ಅವರ ಅವಳಿ ಹೆಣ್ಣು ಮಕ್ಕಳಿದ್ದ ಪ್ರ್ಯಾಮ್ ಆಕಸ್ಮಿಕವಾಗಿ ರೈಲ್ವೆ ಹಳಿಗೆ ಬಿದ್ದಿದೆ. ಆಗ ಆನಂದ್ ಹೆಣ್ಣುಮಕ್ಕಳನ್ನು ಉಳಿಸಲು ಪ್ಲಾಟ್ ಫಾರ್ಮ್‌ನಿಂದ ರೈಲ್ವೆ ಹಳಿಯ ಮೇಲೆ ಹಾರಿದ್ದಾರೆ.

ಆ ವೇಳೆ ರೈಲು ಹಾದುಹೋಗುತ್ತಿದ್ದ ಆನಂದ್ ಮತ್ತು ಅವರ ಒಬ್ಬ ಮಗಳು ರೈಲಿಗೆ ಸಿಲುಕಿ ಸಾವನಪ್ಪಿದ್ದಾರೆ. ಆದರೆ ಅವರು ಈ ಹೋರಾಟದಲ್ಲಿ ತಮ್ಮ ಒಬ್ಬ ಮಗಳ ಜೀವ ರಕ್ಷಿಸಿದ್ದಾರೆ. ಆನಂದ್ ಅವರ ಪತ್ನಿ ಮತ್ತು ಮಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರಿಗೆ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.

Train Tragedy

ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರಲ್ಲಿ ಕುಟುಂಬವು ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸುತ್ತದೆ, ಅವರು ಲಿಫ್ಟ್ ಮೂಲಕ ಪ್ಲಾಟ್‌ಫಾರ್ಮ್‌ಗೆ ಬಂದಿದ್ದರು ಮತ್ತು ಕ್ಷಣಾರ್ಧದಲ್ಲಿ ಅವರು ಪ್ರ್ಯಾಮ್ ಅನ್ನು ಬಿಟ್ಟುಬಿಟ್ಟರು. ಇದರಿಂದ ಅದು ಉರುಳುತ್ತಾ ಹೋಗಿ ಹಳಿಗಳ ಮೇಲೆ ಬಿದ್ದಿದೆ. ಆಗ ಆನಂದ್ ಅವರ ಪತ್ನಿ ಕಿರುಚಿದಾಗ ಆನಂದ್ ರೈಲು ಹಳಿಗಳ ಮೇಲೆ ಮಕ್ಕಳನ್ನು ರಕ್ಷಿಸಲು ಹಾರಿದ್ದಾರೆ. ಆ ವೇಳೆ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ರಿಮಾಂಡ್‌ ಹೋಮ್‌ನಿಂದಲೇ ಮಧ್ಯರಾತ್ರಿ 17 ವರ್ಷದ ಬಾಲಕಿಯ ಅಪಹರಣ! ವಿಡಿಯೊದಲ್ಲಿ ಕೃತ್ಯ ಸೆರೆ

ಆನಂದ್ ಮತ್ತು ಅವರ ಕುಟುಂಬವು 2023ರ ಕೊನೆಯಲ್ಲಿ ಸಿಡ್ನಿಗೆ ಸ್ಥಳಾಂತರಗೊಂಡಿತ್ತು. ಅವರು ಸಿಡ್ನಿಯ ಕೊಗರಾ ಉಪನಗರದಲ್ಲಿ ವಾಸಿಸುತ್ತಿದ್ದರು. ಇತ್ತೀಚೆಗೆ, ಆನಂದ್ ಅವರ ಪೋಷಕರು (ವಿಸ್ತಾರ ನ್ಯೂಸ್‌) ಸಿಡ್ನಿಯಲ್ಲಿದ್ದ ಅವರ ಮನೆಗೆ ಭೇಟಿ ನೀಡಿದ್ದರು ಎನ್ನಲಾಗಿದೆ. ವರದಿಗಳ ಪ್ರಕಾರ, ತನ್ನ ತಾಯಿ ಮತ್ತು ತಂದೆಯನ್ನು ತಮ್ಮ ಜೊತೆ ಆಸ್ಟ್ರೇಲಿಯಾದಲ್ಲಿ ಇಟ್ಟುಕೊಳ್ಳುವ ಹಂಬಲ ಆನಂದವರಿಗಿತ್ತು ಎಂದು ಅವರ ಸ್ನೇಹಿತರೊಬ್ಬರು ತಿಳಿಸಿದ್ದಾರೆ.

ಆದರೆ ವಿಧಿ ಅದಕ್ಕೂ ಅವಕಾಶ ಮಾಡಿಕೊಡಲಿಲ್ಲ. ಅವರ ಹಠಾತ್ ನಿಧನದಿಂದ ಅವರ ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ. ಅವರು ಇನ್ನಿಲ್ಲ ಎಂಬ ವಿಚಾರ ಅವರ ಕುಟುಂಬಕ್ಕೆ ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತಿದೆ ಎಂದವರು ಪ್ರತಿಕ್ರಿಯಿಸಿದ್ದಾರೆ.

Continue Reading

Latest

Viral News: ಮದುವೆಯಾದ ಮೂರೇ ಮೂರು ನಿಮಿಷದೊಳಗೆ ವಿಚ್ಛೇದನ! ಕಾರಣ ವಿಚಿತ್ರ!

Viral News: ಗಂಡ – ಹೆಂಡತಿಯ ಬಂಧ ಮಧುರವಾದದ್ದು. ಅದು ಪ್ರೀತಿ, ನಂಬಿಕೆ, ವಿಶ್ವಾಸದ ತಳಹದಿಯ ಮೇಲೆ ನಿಂತಿರುತ್ತದೆ. ಆದರೆ ಕೆಲವೊಂದು ಮದುವೆಗಳು ಶುರುವಾಗುತ್ತಿದ್ದಂತೆ ಮುರಿದು ಬೀಳುತ್ತದೆ. ಕುವೈತ್ನಲ್ಲಿ ಮದುವೆಯಾದ ಜೋಡಿಯೊಂದು ಮೂರೇ ಮೂರು ನಿಮಿಷಕ್ಕೆ ವಿಚ್ಛೇದನ ನೀಡಿದ್ದಾರೆ. ಮದುವೆಯ ಆಚರಣೆಗಳು ಮುಗಿದ ನಂತರ, ದಂಪತಿ ನ್ಯಾಯಾಲಯದಿಂದ ಹೊರಗೆ ಹೋಗುತ್ತಿರುವಾಗ ವಧು ಕಾಲು ಜಾರಿಬಿದ್ದಳು. ಆಗ ವರನು ಅವಳ ಕೈ ಹಿಡಿದು ಮೇಲೆತ್ತುವ ಬದಲು ಕೆಳಗೆ ಬಿದ್ದಿದ್ದಕ್ಕಾಗಿ ‘ಸ್ಟುಪಿಡ್’ ಎಂದು ಹೇಳಿದ್ದಾನೆ. ಇದನ್ನು ಕೇಳಿದ ಮಹಿಳೆ ಕೋಪಗೊಂಡು ತಕ್ಷಣ ತಮ್ಮ ಮದುವೆಯನ್ನು ರದ್ದುಗೊಳಿಸುವಂತೆ ನ್ಯಾಯಾಧೀಶರನ್ನು ಕೇಳಿದ್ದಾಳೆ. ನ್ಯಾಯಾಧೀಶರು ಇದಕ್ಕೆ ಒಪ್ಪಿಗೆ ನೀಡಿ ಬಿಟ್ಟಿದ್ದಾರೆ!

VISTARANEWS.COM


on

Viral News
Koo


ಮದುವೆ ಎನ್ನುವುದು ಹೆಣ್ಣು ಗಂಡು ಇಬ್ಬರ ಜೀವನದಲ್ಲಿ ಬಹಳ ವಿಶೇಷವಾದುದು. ಹೆಣ್ಣು ಗಂಡು ಇಬ್ಬರೂ ದಂಪತಿಯಾಗಿ ಒಬ್ಬರನೊಬ್ಬರು ಅರಿತುಕೊಂಡು ಕಷ್ಟ ಸುಖ ಹಂಚಿಕೊಂಡು ದೀರ್ಘ ಕಾಲ ಜೀವನ ನಡೆಸಲೆಂದು ನಮ್ಮ ಹಿರಿಯರು ಮದುವೆ ಮಾಡಿಸುತ್ತಾರೆ. ಆದರೆ ಇಂದಿನ ಕಾಲದಲ್ಲಿ ನೂರು ದಿನ ಬಾಳುವುದನ್ನು ಬಿಡಿ, ಮೂರು ದಿನವೂ ಕೂಡ ಈ ಸಂಬಂಧ ಉಳಿಯುತ್ತಿಲ್ಲ. ಅಂತಹದೊಂದು ಘಟನೆ ಇದೀಗ ಕುವೈತ್‌ನಲ್ಲಿ ನಡೆದಿದೆ. ಮದುವೆ ಸಮಾರಂಭ ಮುಗಿಸಿ ಹೊರಹೋಗುವಾಗ ವರನು ವಧುವನ್ನು ಅವಮಾನಿಸಿದ ಕಾರಣ ಗಂಡ ಮತ್ತು ಹೆಂಡತಿ ಇಬ್ಬರು ಮದುವೆಯಾದ ಕೇವಲ ಮೂರು ನಿಮಿಷಗಳಲ್ಲೇ ವಿಚ್ಛೇದನ ಪಡೆದಿದ್ದಾರೆ. ಈ ಘಟನೆ 2019ರಲ್ಲಿ ನಡೆದಿದ್ದು ಎನ್ನಲಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈಗ ಮತ್ತೆ ವೈರಲ್(Viral News) ಆಗುತ್ತಿದೆ.

ಮದುವೆಯ ಆಚರಣೆಗಳು ಮುಗಿದ ನಂತರ, ದಂಪತಿ ನ್ಯಾಯಾಲಯದಿಂದ ಹೊರಗೆ ಹೋಗುತ್ತಿರುವಾಗ ವಧು ಕಾಲು ಜಾರಿಬಿದ್ದಳು. ಆಗ ವರನು ಅವಳ ಕೈ ಹಿಡಿದು ಮೇಲೆತ್ತುವ ಬದಲು ಕೆಳಗೆ ಬಿದ್ದಿದ್ದಕ್ಕಾಗಿ ‘ಸ್ಟುಪಿಡ್’ ಎಂದು ಹೇಳಿದ್ದಾನೆ. ಇದನ್ನು ಕೇಳಿದ ವಧು ಕೋಪಗೊಂಡು ತಕ್ಷಣ ತಮ್ಮ ಮದುವೆಯನ್ನು ರದ್ದುಗೊಳಿಸುವಂತೆ ನ್ಯಾಯಾಧೀಶರನ್ನು ಕೇಳಿದ್ದಾಳೆ. ನ್ಯಾಯಾಧೀಶರು ಇದಕ್ಕೆ ಒಪ್ಪಿಗೆ ನೀಡಿದ್ದು, ಅವರು ಮದುವೆಯಾದ ಕೇವಲ ಮೂರು ನಿಮಿಷಗಳ ನಂತರ ವಿಚ್ಛೇದನ ಪಡೆದಿದ್ದಾರೆ.

ಮೈಕ್ರೋಬ್ಲಾಗಿಂಗ್ ಪ್ಲಾಟ್‍ಫಾರ್ಮ್‍ನಲ್ಲಿ ಈ ಸುದ್ದಿಯನ್ನು ಹಂಚಿಕೊಳ್ಳಲಾಗಿದ್ದು. ಇದಕ್ಕೆ ಹಲವು ಕಾಮೆಂಟ್‌ಗಳು ಬಂದಿವೆ. ಅದರಲ್ಲಿ ಪತಿ ಪತ್ನಿ ಒಬ್ಬರಿಗೊಬ್ಬರು ಗೌರವ ನೀಡದಿದ್ದರೆ ಆ ಸಂಬಂಧ ದೀರ್ಘಕಾಲ ಇರುವುದಿಲ್ಲ ಎಂದು ನೆಟ್ಟಿಗರು ಬರೆದಿದ್ದಾರೆ. ಹಾಗೇ ಕೆಲವರು ಪತಿ ಆರಂಭದಲ್ಲಿ ತನ್ನ ಪತ್ನಿಯ ಜೊತೆ ಈ ರೀತಿ ವರ್ತಿಸಿದರೆ, ಅಂತವನನ್ನು ಬಿಡುವುದು ಉತ್ತಮ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಕ್ಕಳ ಹಸಿವು ನೀಗಿಸಲು ಸೈನಿಕರೆದುರು ಬೆತ್ತಲಾಗುತ್ತಿರುವ ಮಹಿಳೆಯರು!

ಇಂತಹ ಘಟನೆ ಇದೇ ಮೊದಲಲ್ಲ. ಈ ಹಿಂದೆ 2004ರಲ್ಲಿ ಯುನೈಟೆಡ್ ಕಿಂಗ್‌ಡಮ್‍ನಲ್ಲಿ ದಂಪತಿ ಮದುವೆಯಾದ ಕೇವಲ 90 ನಿಮಿಷಗಳ ನಂತರ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರು. ಗ್ರೇಟರ್ ಮ್ಯಾಂಚೆಸ್ಟರ್‌ನ ಸ್ಟಾಕ್ಪೋರ್ಟ್ ರಿಜಿಸ್ಟರ್ ಕಚೇರಿಯಲ್ಲಿ ಸ್ಕಾಟ್ ಮೆಕಿ ಮತ್ತು ವಿಕ್ಟೋರಿಯಾ ಆಂಡರ್ಸನ್ ಮದುವೆ ಆಚರಣೆ ಮುಗಿದ 90ನಿಮಿಷಗಳ ನಂತರ, ಸಂಬಂಧವನ್ನು ಕೊನೆಗೊಳಿಸಿದ್ದಾರೆ. ವಧುವಿಗೆ ತಿನ್ನಲು ವರ ಟೋಸ್ಟ್ ನೀಡಿದ್ದರಿಂದ ಕೋಪಗೊಂಡ ಆಕೆ ಆರತಕ್ಷತೆಯಲ್ಲಿ ಅವನ ತಲೆಗೆ ಹೊಡೆದಿದ್ದಾಳೆ. ಇದರಿಂದ ಇಬ್ಬರ ನಡುಗೆ ಜಗಳವಾಗಿ ಅದು ವಿಚ್ಛೇದನಕ್ಕೆ ಕಾರಣವಾಯ್ತು ಎನ್ನಲಾಗಿದೆ.

Continue Reading
Advertisement
karnataka Weather Forecast
ಮಳೆ12 mins ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Khajjiar Tour
ಪ್ರವಾಸ18 mins ago

Khajjiar Tour: ಖಜ್ಜಿಯಾರ್! ಇದು ಹಿಮಾಲಯದ ತಪ್ಪಲಿನಲ್ಲಿರುವ ಮಿನಿ ಸ್ವಿಟ್ಜರ್ಲೆಂಡ್!

Allergies During Monsoon
ಆರೋಗ್ಯ42 mins ago

Allergies During Monsoon: ಮಳೆಗಾಲದಲ್ಲಿ ಅಲರ್ಜಿ ಸಮಸ್ಯೆಯಿಂದ ಪಾರಾಗುವುದು ಹೇಗೆ?

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ಮಧುರ ಪ್ರೀತಿ ಸಿಗಲಿದೆ

INDIA Bloc To Protest
ದೇಶ7 hours ago

INDIA Bloc To Protest: ಬಜೆಟ್‌ ತಾರತಮ್ಯ ಖಂಡಿಸಿ ನಾಳೆ ಸಂಸತ್ತಿನಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ

Paris Olympics
ಕ್ರೀಡೆ8 hours ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೂ ವಕ್ಕರಿಸಿದ ಕೊರೊನಾ ಸೋಂಕು; ಮೊದಲ ಪ್ರಕರಣ ಪತ್ತೆ

Union Minister Pralhad Joshi statement about Union Budget
ಕರ್ನಾಟಕ8 hours ago

Pralhad Joshi: ನವಭಾರತ ನಿರ್ಮಾಣಕ್ಕೆ ಅತ್ಯುತ್ತಮ ಬಜೆಟ್: ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ

The Kaftan kannada Album Song Release
ಕರ್ನಾಟಕ8 hours ago

The Kaptan Song: ‘ದ ಕಪ್ತಾನ್’ ಆಲ್ಬಂ ಸಾಂಗ್ ಬಿಡುಗಡೆ

kimberly cheatle
ವಿದೇಶ8 hours ago

Kimberly Cheatle: ಯುಎಸ್ ಸೀಕ್ರೆಟ್ ಸರ್ವೀಸ್ ಡೈರೆಕ್ಟರ್ ಹುದ್ದೆಗೆ ಕಿಂಬರ್ಲಿ ಚೀಟಲ್ ದಿಢೀರ್​ ರಾಜೀನಾಮೆ

Womens Asia Cup
ಕ್ರೀಡೆ9 hours ago

Womens Asia Cup: ಶಫಾಲಿ ಬ್ಯಾಟಿಂಗ್​ ಆರ್ಭಟ; ಭಾರತಕ್ಕೆ ಹ್ಯಾಟ್ರಿಕ್​ ಜಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ12 mins ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ12 hours ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ13 hours ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ17 hours ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ5 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌