Israel Palestine War: ಹಮಾಸ್‌ ಲೀಡರ್‌ನನ್ನು ಕೊಂದು ನಿರಾಶ್ರಿತರ ಶಿಬಿರ ಧ್ವಂಸಗೊಳಿಸಿದ ಇಸ್ರೇಲ್‌ - Vistara News

ವಿದೇಶ

Israel Palestine War: ಹಮಾಸ್‌ ಲೀಡರ್‌ನನ್ನು ಕೊಂದು ನಿರಾಶ್ರಿತರ ಶಿಬಿರ ಧ್ವಂಸಗೊಳಿಸಿದ ಇಸ್ರೇಲ್‌

ದಾಳಿಯಲ್ಲಿ ಪ್ರಮುಖ ಹಮಾಸ್ ಕಮಾಂಡರ್ ಇಬ್ರಾಹಿಂ ಬ್ಯಾರಿ (Hamas Leader Ibrahim Bari) ಎಂಬಾತನನ್ನು ಕೊಲ್ಲಲಾಗಿದೆ. ಇಸ್ರೇಲ್‌ ಮೇಲೆ ನಡೆದ ಅಕ್ಟೋಬರ್ 7ರ ಹಮಾಸ್‌ ದಾಳಿಯಲ್ಲಿ ಈತ ಪ್ರಮುಖವಾಗಿ ಭಾಗಿಯಾಗಿದ್ದ ಎನ್ನಲಾಗಿದೆ.

VISTARANEWS.COM


on

israel bombing
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಟೆಲ್‌ ಅವಿವ್‌: ಗಾಜಾದ (Gaza strip) ಅತಿದೊಡ್ಡ ನಿರಾಶ್ರಿತರ ಶಿಬಿರವಾದ ಜಬಾಲಿಯಾ ನಿರಾಶ್ರಿತರ ಶಿಬಿರದ (Jabalia refugee camp) ಮೇಲೆ ಇಸ್ರೇಲ್‌ ಸೈನ್ಯ (Israel defence force) ಬುಧವಾರ ಭೀಕರ ವಾಯುದಾಳಿ (Israel Palestine War) ನಡೆಸಿದೆ. ದಾಳಿಯಲ್ಲಿ ಪ್ರಮುಖ ಹಮಾಸ್ ಕಮಾಂಡರ್ ಇಬ್ರಾಹಿಂ ಬ್ಯಾರಿ (Hamas Leader Ibrahim Bari) ಎಂಬಾತನನ್ನು ಕೊಲ್ಲಲಾಗಿದೆ. ಇಸ್ರೇಲ್‌ ಮೇಲೆ ನಡೆದ ಅಕ್ಟೋಬರ್ 7ರ ಹಮಾಸ್‌ ದಾಳಿಯಲ್ಲಿ ಈತ ಪ್ರಮುಖವಾಗಿ ಭಾಗಿಯಾಗಿದ್ದ ಎನ್ನಲಾಗಿದೆ.

ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ಬಾಂಬ್ ದಾಳಿಯಲ್ಲಿ ಡಜನ್‌ಗಟ್ಟಲೆ ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ಬ್ಯಾರಿಯನ್ನು ತೊಡೆದುಹಾಕಲು ನಿರಾಶ್ರಿತರ ಶಿಬಿರವನ್ನು ಧ್ವಂಸ ಮಾಡಿರುವುದಾಗಿ ಇಸ್ರೇಲ್‌ನ ರಕ್ಷಣಾ ಪಡೆಗಳು (IDF) ತಿಳಿಸಿವೆ.

ಉತ್ತರ ಗಾಜಾದ ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿ ಸ್ವಯಂಸೇವಕರು ಧ್ವಂಸಗೊಂಡ ಕಟ್ಟಡಗಳ ಅವಶೇಷಗಳ ನಡುವೆ ದೇಹಗಳು ಮತ್ತು ಬದುಕುಳಿದವರನ್ನು ಹುಡುಕುತ್ತಿದ್ದಾರೆ. ಕನಿಷ್ಠ 47 ಮೃತ ದೇಹಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

“ಸ್ವಲ್ಪ ಸಮಯದ ಹಿಂದೆ IDF ಯುದ್ಧವಿಮಾನಗಳು ಹಮಾಸ್ ಭಯೋತ್ಪಾದಕ ಸಂಘಟನೆಯ ಜಬಾಲಿಯಾ ಬ್ರಿಗೇಡ್‌ನ ಕಮಾಂಡರ್ ಇಬ್ರಾಹಿಂ ಬ್ಯಾರಿಯನ್ನು ಹತ್ಯೆ ಮಾಡಿತು. ಆತ ಅಕ್ಟೋಬರ್ 7ರಂದು ಮಾರಕ ಭಯೋತ್ಪಾದಕ ದಾಳಿಯನ್ನು ನಿರ್ದೇಶಿಸಿದವರಲ್ಲಿ ಒಬ್ಬನಾಗಿದ್ದ” ಎಂದು ಇಸ್ರೇಲಿ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ. “ದಾಳಿಯ ವೇಳೆ ಈ ಕಟ್ಟಡಗಳ ಕೆಳಗಿದ್ದ ಹಮಾಸ್‌ನ ಭೂಗತ ಮಿಲಿಟರಿ ಮೂಲಸೌಕರ್ಯ ಕುಸಿದು ಅನೇಕ ಹಮಾಸ್ ಭಯೋತ್ಪಾದಕರನ್ನು ಬಲಿ ತೆಗೆದುಕೊಂಡಿತು” ಎಂದು ಸೈನ್ಯ ಹೇಳಿದೆ.

ಹಮಾಸ್ ಭಯೋತ್ಪಾದಕ ಗುಂಪಿನ ಮಿಲಿಟರಿ ವಿಭಾಗವಾಗಿರುವ ಎಝೆಡಿನ್ ಅಲ್-ಕಸ್ಸಾಮ್ ಬ್ರಿಗೇಡ್ಸ್, ಗಾಜಾವನ್ನು ʼಇಸ್ರೇಲಿ ಪಡೆಗಳ ಸ್ಮಶಾನʼವಾಗಿ ಮಾಡುವುದಾಗಿ ಪ್ರತಿಜ್ಞೆ ಮಾಡಿದೆ. ಹಮಾಸ್ ನಡೆಸುತ್ತಿರುವ ಗಜಾನ್ ಆರೋಗ್ಯ ಸಚಿವಾಲಯವು, ಈ ದಾಳಿಯಲ್ಲಿ 50ಕ್ಕೂ ಹೆಚ್ಚು ಮಂದಿ ಸತ್ತು 150 ಮಂದಿ ಗಾಯಗೊಂಡಿದ್ದಾರೆ ಎಂದಿದೆ. ಇದು ಇಸ್ರೇಲಿನ ಘೋರ ಹತ್ಯಾಕಾಂಡ. ಇನ್ನೂ ಹೆಚ್ಚಿನ ಮಂದಿ ಅವಶೇಷಗಳಡಿಯಲ್ಲಿ ಸಮಾಧಿಯಾಗಿದ್ದಾರೆ ಎಂದಿದೆ.

ಈಜಿಪ್ಟ್ ದೇಶ ಈ ದಾಳಿಗಾಗಿ ಇಸ್ರೇಲ್ ಅನ್ನು ಖಂಡಿಸಿದೆ. ಗಾಯಗೊಂಡ ಪ್ಯಾಲೆಸ್ತೀನಿಯನ್ನರಿಗೆ ಚಿಕಿತ್ಸೆ ನೀಡಲು ರಾಫಾ ಕ್ರಾಸಿಂಗ್ ಅನ್ನು ತೆರೆಯುವುದಾಗಿ ಹೇಳಿದೆ. ಹಮಾಸ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಪ್ರಾರಂಭವಾದಾಗಿನಿಂದ ನಾಗರಿಕರಿಗೆ ಅದು ಗಡಿಯನ್ನು ತೆರೆದಿರಲಿಲ್ಲ. “ಇಂತಹ ದಾಳಿಯು ರಾಜಿಸಂಧಾನದ ಪ್ರಯತ್ನಗಳನ್ನು ದುರ್ಬಲಗೊಳಿಸುತ್ತದೆ” ಎಂದು ಕತಾರ್ ಎಚ್ಚರಿಸಿದೆ.

ಇದನ್ನೂ ಓದಿ: Israel Palestine War: ಇಸ್ರೇಲ್‌ ಮೇಲೆ ದಾಳಿಗೆ ಆದೇಶಿಸಿದ್ದ ಹಮಾಸ್ ಉಗ್ರನ ಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Video: ನಾನು ‘ಅಮಾಯಕ’ ಎನ್ನುವ ಪ್ರಜ್ವಲ್‌ಗೆ ‘ವಿಸ್ತಾರ ನ್ಯೂಸ್‌’ 10 ಪ್ರಶ್ನೆಗಳು

Prajwal Revanna Video: ನನಗೆ ಪ್ರಕರಣದ ಬಗ್ಗೆ ಗೊತ್ತೇ ಇರಲಿಲ್ಲ, ನಾನು ತಪ್ಪೇ ಮಾಡಿಲ್ಲ, ಕಾನೂನಿನ ಬಗ್ಗೆ ಗೌರವ ಇದೆ ಎನ್ನುವ ಪ್ರಜ್ವಲ್‌ ರೇವಣ್ಣ ಅವರು ಕಳೆದ 1 ತಿಂಗಳಿಂದ ಏಕೆ ವಿಚಾರಣೆಗೆ ಹಾಜರಾಗಲಿಲ್ಲ? ಸಾರ್ವಜನಿಕರಿಗೆ ಮುಖ ತೋರಿಸಲಿಲ್ಲ? ಇಂತಹ ಹತ್ತಾರು ಪ್ರಶ್ನೆಗಳು ನಿಮ್ಮ ಮನಸ್ಸಿನಲ್ಲೂ ಇರಬಹುದು. ಅವುಗಳನ್ನು ವಿಸ್ತಾರ ನ್ಯೂಸ್‌ ಕೇಳಿದೆ.

VISTARANEWS.COM


on

Prajwal Revanna Video
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರೀಗ ವಿಡಿಯೊದಲ್ಲಿ ಪ್ರತ್ಯಕ್ಷರಾಗಿದ್ದಾರೆ. ವಿದೇಶದಲ್ಲಿದ್ದಾರೆ ಎನ್ನಲಾಗುವ ಪ್ರಜ್ವಲ್‌ ರೇವಣ್ಣ, ವಿಡಿಯೊ (Prajwal Revanna Video) ಬಿಡುಗಡೆ ಮಾಡಿದ್ದು, “ನಾನು ಮೇ 31ರಂದು ವಿಚಾರಣೆಗೆ ಹಾಜರಾಗುತ್ತೇನೆ. ನಾನು ಪ್ರಕರಣದಲ್ಲಿ ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತಿದ್ದು, ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂದಿದ್ದಾರೆ. ಆದರೆ, ನನಗೆ ಪ್ರಕರಣದ ಬಗ್ಗೆ ಗೊತ್ತೇ ಇರಲಿಲ್ಲ, ನಾನು ತಪ್ಪೇ ಮಾಡಿಲ್ಲ, ಕಾನೂನಿನ ಬಗ್ಗೆ ಗೌರವ ಇದೆ ಎನ್ನುವ ಪ್ರಜ್ವಲ್‌ ರೇವಣ್ಣ (Prajwal Revanna) ಅವರು ಕಳೆದ 1 ತಿಂಗಳಿಂದ ಏಕೆ ವಿಚಾರಣೆಗೆ ಹಾಜರಾಗಲಿಲ್ಲ? ಸಾರ್ವಜನಿಕರಿಗೆ ಮುಖ ತೋರಿಸಲಿಲ್ಲ? ಜನರ ಮನಸಲ್ಲಿರುವ ಇಂತಹ 10 ಪ್ರಶ್ನೆಗಳನ್ನು ‘ವಿಸ್ತಾರ ನ್ಯೂಸ್’‌ ಪ್ರಜ್ವಲ್‌ ರೇವಣ್ಣ ಅವರಿಗೆ ಕೇಳಿದೆ. ಅವು ಇಂತಿವೆ.

ವಿಸ್ತಾರ ನ್ಯೂಸ್‌ 10 ಪ್ರಶ್ನೆಗಳು

  1. ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಾಗಿದೆ ಎಂದು ಹೇಳುತ್ತಿರುವ ನೀವು ಒಂದು ತಿಂಗಳಿಂದ ತಲೆಮರೆಸಿಕೊಂಡಿರುವುದು ಏಕೆ?
  2. ಯುಟ್ಯೂಬ್‌ ಮೂಲಕ ಪ್ರಕರಣ ಗೊತ್ತಾಗಿದೆ ಅಂತಿದ್ದೀರಿ, ಗೊತ್ತಾದ ಮೇಲೂ ವಿದೇಶದಲ್ಲೇ ಇರುವುದೇಕೆ? ಆಗಲೇ ಸ್ಪಷ್ಟನೆ ನೀಡಲಿಲ್ಲ ಏಕೆ?
  3. ಅಮಾಯಕರಾದ ನೀವು ಕಾಂಗ್ರೆಸ್‌ನ ನವೀನ್‌ ಗೌಡ ಸೇರಿ ಹಲವರ ವಿರುದ್ಧ ಕೇಸ್‌ ದಾಖಲಿಸಿದ್ದೇಕೆ?
  4. ನ್ಯಾಯಾಂಗದ ಮೇಲೆ ವಿಶ್ವಾಸ ಇದೆ ಎಂದು ಹೇಳುವ ನೀವು, ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗಲಿಲ್ಲ ಏಕೆ?
  5. ತಪ್ಪೇ ಮಾಡದ, ಸತ್ಯಸಂಧರಾದ ನೀವು ಒಂದು ತಿಂಗಳು ಮೊದಲೇ ಸ್ಟೇ ತಂದಿದ್ದು ಏಕೆ?
  6. ತಾತ, ತಂದೆ-ತಾಯಿ, ಚಿಕ್ಕಪ್ಪನ ಮೇಲೆ ಗೌರವ ಇರುವ ನೀವು, ಅವರು ವಾಪಸ್‌ ಬಾ ಎಂದರೂ ಏಕೆ ಬರಲಿಲ್ಲ?
  7. ವಿಚಾರಣೆ ಎದುರಿಸಿ, ದೋಷಮುಕ್ತರಾಗುವ ವಿಶ್ವಾಸ ಇರುವ ನೀವು ಎಸ್‌ಐಟಿಗೆ ಒಂದು ವಾರ ಕಾಲಾವಕಾಶ ಏಕೆ ಕೇಳಿದಿರಿ?
  8. ಒಂದು ವಾರ ಕಾಲಾವಕಾಶ ಕೇಳಿದ ಬಳಿಕವೂ ನಿಗದಿತ ದಿನಾಂಕದಂದು ಭಾರತಕ್ಕೆ ಏಕೆ ಬರಲಿಲ್ಲ? ಏಕೆ ವಿಚಾರಣೆ ಎದುರಿಸಲಿಲ್ಲ?
  9. ತಾತ, ತಂದೆ-ತಾಯಿ, ಕುಮಾರಣ್ಣನ ಮೇಲೆ ಗೌರವ ಹೊಂದಿರುವ ನೀವು, ಅವರ ಮಾತನ್ನು ಏಕೆ ಕೇಳಲಿಲ್ಲ?
  10. ವಿದೇಶದಲ್ಲಿದ್ದೇನೆ ಎಂದು ಹೇಳುವ ನೀವು ಏಕೆ ಯಾವ ದೇಶದಲ್ಲಿದ್ದೇನೆ ಎಂದು ಹೇಳುತ್ತಿಲ್ಲ?

ವಿಡಿಯೊದಲ್ಲಿ ಏನಿದೆ?

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Video: ವಿದೇಶದಿಂದಲೇ ಪ್ರಜ್ವಲ್‌ ವಿಡಿಯೊ ಮೆಸೇಜ್; ಮೇ 31ರ ಬೆಳಗ್ಗೆ 10ಕ್ಕೆ ಎಸ್‌ಐಟಿಗೆ ಹಾಜರ್‌!

Continue Reading

ಕರ್ನಾಟಕ

Prajwal Revanna Video: ವಿದೇಶದಿಂದಲೇ ಪ್ರಜ್ವಲ್‌ ವಿಡಿಯೊ ಮೆಸೇಜ್; ಮೇ 31ರ ಬೆಳಗ್ಗೆ 10ಕ್ಕೆ ಎಸ್‌ಐಟಿಗೆ ಹಾಜರ್‌!

Prajwal Revanna Video: ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪಾಸ್‌ಪೋರ್ಟ್‌ ರದ್ದತಿಯ ಪ್ರಕ್ರಿಯೆ ಆರಂಭಿಸಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣನಿಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಇದರ ಬೆನ್ನಲ್ಲೇ, ವಿದೇಶದಿಂದಲೇ ಪ್ರಜ್ವಲ್‌ ರೇವಣ್ಣ ಅವರು ಹೊಸ ವಿಡಿಯೊ ಬಿಡುಗಡೆ ಮಾಡಿದ್ದಾರೆ.

VISTARANEWS.COM


on

Prajwal revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna Video) ಕೂಡಲೇ ಕರ್ನಾಟಕಕ್ಕೆ ಬಂದು, ನೆಲದ ಕಾನೂನು ಗೌರವಿಸಬೇಕು ಎಂದು ಸಂಸದನ ಅಜ್ಜ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ (H D Deve Gowda) ಅವರು ಬಹಿರಂಗ ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ಭಾರತಕ್ಕೆ ಬರುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಪ್ರಜ್ವಲ್‌ ರೇವಣ್ಣ ಅವರು ಹೊಸ ವಿಡಿಯೊ ಬಿಡುಗಡೆ ಮಾಡಿದ್ದು, “ಮೇ 31ರಂದು ಭಾರತಕ್ಕೆ ಬಂದು ವಿಚಾರಣೆಗೆ ಹಾಜರಾಗುವುದಾಗಿ ಘೋಷಣೆ ಮಾಡಿದ್ದಾರೆ.

ವಿಡಿಯೊದಲ್ಲಿ ಏನಿದೆ?

“ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ.

“ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ” ಎಂಬುದಾಗಿ ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಬೇಕು ಎಂದು ಸಿದ್ದರಾಮಯ್ಯ ಅವರು ಎರಡು ಬಾರಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇನ್ನು, ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಕೋರಿ ಪ್ರಜ್ವಲ್‌ ರೇವಣ್ಣಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಶೋಕಾಸ್‌ ನೋಟಿಸ್‌ಗೂ ಉತ್ತರ ನೀಡದಿದ್ದರೆ, ಕೇಂದ್ರ ಸರ್ಕಾರವು ಪಾಸ್‌ಪೋರ್ಟ್‌ ರದ್ದುಗೊಳಿಸಲಿದೆ ಎಂದು ಹೇಳಲಾಗುತ್ತಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ ಸೇರಿ ಹಲವು ಪ್ರಕರಣಗಳಲ್ಲಿ ಪ್ರಜ್ವಲ್‌ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರ ತಂದೆ ಎಚ್‌.ಡಿ.ರೇವಣ್ಣ ಅವರು ಕೂಡ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇಷ್ಟಾದರೂ, ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರದ ಕಾರಣ ಅವರ ತಾತ ಎಚ್‌.ಡಿ.ದೇವೇಗೌಡ ಅವರು ಬಹಿರಂಗ ಪತ್ರ ಬರೆದಿದ್ದರು. ನನ್ನ ಮೇಲೆ ಗೌರವ ಇದ್ದರೆ ವಾಪಸ್‌ ಬಾ ಎಂದಿದ್ದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಅಜ್ಞಾತವಾಸಕ್ಕೆ ಒಂದು ತಿಂಗಳು, ಎಲ್ಲಿದ್ದೀಯಪ್ಪಾ ಪ್ರಜ್ವಲ್?

Continue Reading

ವಿದೇಶ

Landslide: ಪಪುವಾ ನ್ಯೂಗಿನಿಯಾದಲ್ಲಿ ಭೂಕುಸಿತ; ಜೀವಂತ ಸಮಾಧಿಯಾದವರ ಸಂಖ್ಯೆ 2000ಕ್ಕೆ ಏರಿಕೆ

Landslide: ಗುಡ್ಡಗಾಡು ಪ್ರದೇಶವಾಗಿರುವ ಎಂಗಾ ಪ್ರದೇಶದಲ್ಲಿ ಸಂಪೂರ್ಣವಾಗಿ ಭೂಕುಸಿತಕ್ಕೆ ತುತ್ತಾಗಿದೆ. ಸಾವಿನ ಸಂಖ್ಯೆ 2000ಕ್ಕೆ ಏರಿಕೆಯಾಗಿದೆ. 150 ಮನೆಗಳು ಭೂಮಿಯಲ್ಲಿ ಹುದುಗಿಹೋಗಿವೆ. ಮಳೆಯ ನೀರು ಇನ್ನೂ ಹರಿಯುತ್ತಿರುವ ಕಾರಣ ಜನರ ರಕ್ಷಣೆಯು ಕಷ್ಟವಾಗುತ್ತಿದೆ. ಸಾವಿರಾರು ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ವಿಶ್ವಸಂಸ್ಥೆಯು ಮಾಹಿತಿ ನೀಡಿದೆ.

VISTARANEWS.COM


on

Landslide
Koo

ಪೋರ್ಟ್‌ ಮೋರ್‌ಸ್ಬಿ: ಪಪುವಾ ನ್ಯೂಗಿನಿಯಾದಲ್ಲಿ (Papua New Guinea) ಕಂಡು ಕೇಳರಿಯದ ಭೂಕುಸಿತ (Landslide) ಸಂಭವಿಸಿದ್ದು, ಸಾವಿನ ಸಂಖ್ಯೆ 2000ಕ್ಕೆ ಏರಿಕೆಯಾಗಿದೆ. ಸಾವಿರಾರು ಜನ ಗಾಯಗೊಂಡಿದ್ದು, ನೂರಾರು ಜನ ಭೂಮಿ ಅವಶೇಷಗಳ ಅಡಿಯಲ್ಲಿ ಹುದುಗಿಹೋಗಿವೆ. ಸಾವಿರಾರು ಜನರನ್ನು ಸ್ಥಳಾಂತರ ಮಾಡಲಾಗಿದೆ. ಸಾವಿನ ಸಂಖ್ಯೆ 670ಕ್ಕೆ ಏರಿಕೆಯಾಗಿದೆ ಎಂದು ವಿಶ್ವಸಂಸ್ಥೆ ಮಾಹಿತಿ ನೀಡಿದೆ. ಪಪುವಾ ನ್ಯೂಗಿನಿಯಾದಲ್ಲಿ ಇತ್ತೀಚಿನ ದಶಕಗಳಲ್ಲಿ ಸಂಭವಿಸಿದ ಭೀಕರ ದುರಂತ ಇದಾಗಿದೆ ಎಂದು ಹೇಳಲಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಎಲ್ಲೆಂದರಲ್ಲಿ ಭೂಕುಸಿತ, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಎಂಗಾ ಪ್ರದೇಶದಲ್ಲಿ ಸಂಪೂರ್ಣವಾಗಿ ಭೂಕುಸಿತಕ್ಕೆ ತುತ್ತಾಗಿದೆ. ಸಾವಿನ ಸಂಖ್ಯೆ 2000ಕ್ಕೆ ಏರಿಕೆಯಾಗಿದೆ. 150 ಮನೆಗಳು ಭೂಮಿಯಲ್ಲಿ ಹುದುಗಿಹೋಗಿವೆ. ಮಳೆಯ ನೀರು ಇನ್ನೂ ಹರಿಯುತ್ತಿರುವ ಕಾರಣ ಜನರ ರಕ್ಷಣೆಯು ಕಷ್ಟವಾಗುತ್ತಿದೆ. ಸಾವಿರಾರು ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ವಿಶ್ವಸಂಸ್ಥೆಯು ಮಾಹಿತಿ ನೀಡಿದೆ.

ಶುಕ್ರವಾರದಿಂದಲೂ ಸಾಲು ಸಾಲು ಭೂಕುಸಿತ ಸಂಭವಿಸಿವೆ. ಶುಕ್ರವಾರವೇ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಇದಾದ ಬಳಿಕ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿ ಭಾನುವಾರದ ಹೊತ್ತಿಗೆ ಈ ಸಂಖ್ಯೆ 650ಕ್ಕೆ ಏರಿಕೆ ಆಗಿತ್ತು. ಸಂಬಂಧಿಕರನ್ನು ಕಳೆದುಕೊಂಡವರ ದುಃಖವು ಮುಗಿಲುಮುಟ್ಟಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಮೃತರ ಸಂಬಂಧಿಕರು ಶವಗಳನ್ನು ಹೊರತೆಗೆಯಲು ಭೂಮಿ ಅಗೆಯುತ್ತಿದ್ದಾರೆ. ಇದರಿಂದಾಗಿ ಜನರನ್ನು ನಿಯಂತ್ರಿಸುವುದು ಕೂಡ ಸಿಬ್ಬಂದಿಗೆ ಕಷ್ಟವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಅವಶೇಷಗಳ ಅಡಿಯಲ್ಲಿ ಯಾರಾದರೂ ಬದುಕಿದ್ದಾರೇನೋ ಎಂಬ ವಿಶ್ವಾಸದಿಂದ ಭೂಮಿಯನ್ನು ಅಗೆಯಲಾಗುತ್ತಿದೆ. ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ. ಜನರು ಕೂಡ ಇದಕ್ಕೆ ಸಾಥ್‌ ನೀಡುತ್ತಿದ್ದಾರೆ. ಆದರೆ, ಗಾಯಾಳುಗಳ ಬದಲು ಶವಗಳನ್ನೇ ಹೊರ ತೆಗೆಯುವಂತಾಗಿದೆ. ಗ್ರಾಮದಲ್ಲಿ ಹಾಗೂ ಸುತ್ತಮುತ್ತಲಿನಲ್ಲಿ 4 ಸಾವಿರ ಜನ ವಾಸವಿದ್ದರು. ದಿಢೀರನೆ ಭೂಕುಸಿತ ಉಂಟಾದ ಕಾರಣ ಇಡೀ ಗ್ರಾಮವೇ ನರಕಸದೃಶವಾಗಿದೆ ಎಂಬುದಾಗಿ ಮಾಧ್ಯಮಗಳ ವರದಿಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ:Cyclone Remal: ರೆಮಲ್‌ ಚಂಡ ಮಾರುತದ ಅಬ್ಬರ ಶುರು; ಬಾಂಗ್ಲಾದೇಶ, ಪ.ಬಂಗಾಳ ಸೇರಿದಂತೆ ಹಲವಡೆ ಭಾರೀ ಮಳೆ, ಭೂಕುಸಿತ ಸಾಧ್ಯತೆ

ಈ ಭೀಕರ ಭೂಕುಸಿತ ಪ್ರವಾಹದೊಂದಾಗಿ ದೇಶದ ಆರ್ಥಿಕತೆ ಮೇಲೂ ಗಂಭೀರ ಪರಿಣಾಮ ಬೀರಿದ್ದು, ಆಹಾರ ಪದಾರ್ಥಗಳಿಗೂ ಜನ ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಇನ್ನು ಪೋರ್ಗೆರಾ ಮೈನಿಂಗ್‌ ಪ್ರದೇಶಕ್ಕೆ ಸಾಗುವ ಪ್ರಮುಖ ಹೆದ್ದಾರಿಯೂ ಸಂಪೂರ್ಣವಾಗಿ ಮುಚ್ಚಿದೆ. ಇನ್ನು ಸಂಕಷ್ಟದಲ್ಲಿರುವ ಪಪುವಾ ನ್ಯೂಗಿನಿಯಾಗೆ ಸಹಾಯ ಮಾಡುವಂತೆ ಮಿತ್ರ ರಾಷ್ಟ್ರಗಳಿಗೆ ವಿಶ್ವಸಂಸ್ಥೆ ಕರೆ ನೀಡಿದೆ.

Continue Reading

ವಿದೇಶ

Israel Palestine War: ಇಸ್ರೇಲ್‌ ಪ್ರತೀಕಾರದ ದಾಳಿ, 35 ಪ್ಯಾಲೆಸ್ತೀನೀಯರ ಸಾವು

ಇಸ್ರೇಲಿ ಸೈನ್ಯವು ತನ್ನ ದಾಳಿ ವಿಮಾನವು ರಫಾದಲ್ಲಿ ಹಮಾಸ್ ಆವರಣವನ್ನು ಘಾತಿಸಿದೆ ಎಂದು ವರದಿ ಮಾಡಿದೆ, ಇದರ ಪರಿಣಾಮವಾಗಿ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪಿನ ಹಿರಿಯ ಅಧಿಕಾರಿಗಳಾದ ಯಾಸಿನ್ ರಬಿಯಾ ಮತ್ತು ಖಲೀದ್ ನಗರ್ ಸಾವನ್ನಪ್ಪಿದರು.

VISTARANEWS.COM


on

israel palestine war12
Koo

ಟೆಲ್‌ ಅವಿವ್:‌ ಇಸ್ರೇಲ್‌ನ (Israel) ವಾಣಿಜ್ಯ ಕೇಂದ್ರವಾದ ಟೆಲ್ ಅವೀವ್‌ನಲ್ಲಿ (Tel Aviv) “ದೊಡ್ಡ ರಾಕೆಟ್ ದಾಳಿ” ನಡೆಸಿರುವುದಾಗಿ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪು ಹಮಾಸ್ (hamas) ಹೇಳಿಕೊಂಡ ಗಂಟೆಗಳ ನಂತರ, ಇಸ್ರೇಲ್ ಮಿಲಿಟರಿ ದಕ್ಷಿಣ ಗಾಜಾ ಪಟ್ಟಿಯ (Gaza Strip) ರಫಾದಲ್ಲಿ ಸ್ಥಳಾಂತರಗೊಂಡ ಜನರ ಶಿಬಿರದ ಮೇಲೆ ವೈಮಾನಿಕ ದಾಳಿ (Israel Palestine War) ನಡೆಸಿತು. ಭಾನುವಾರ ತಡರಾತ್ರಿ ನಡೆಸಿದ ದಾಳಿಯಲ್ಲಿ ಕನಿಷ್ಠ 35 ಪ್ಯಾಲೆಸ್ಟೀನಿಯನ್ನರನ್ನು ಕೊಂದಿತು.

ತಿಂಗಳುಗಳಲ್ಲಿ ಮೊದಲ ಬಾರಿಗೆ ಇಂಥ ಭಾರಿ ದಾಳಿ ನಡೆಯುತ್ತಿದೆ. ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ನೀಡಿದ ಹೇಳಿಕೆಯಲ್ಲಿ, “ಇಸ್ರೇಲ್‌ ದಾಳಿ 35 ಜನರ ಪ್ರಾಣವನ್ನು ಬಲಿ ತೆಗೆದುಕೊಂಡಿದೆ. ಡಜನ್‌ಗಟ್ಟಲೆ ಜನ ಗಾಯಗೊಂಡಿದ್ದಾರೆ. ಅವರಲ್ಲಿ ಹೆಚ್ಚಿನವರು ಮಕ್ಕಳು ಮತ್ತು ಮಹಿಳೆಯರು” ಎಂದು ಹೇಳಿದೆ. ರಫಾಹ್ ಬಳಿ ಪ್ಯಾಲೇಸ್ಟಿನಿಯನ್ ನಿರಾಶ್ರಿತರಿಗಾಗಿ ವಿಶ್ವಸಂಸ್ಥೆ ಏಜೆನ್ಸಿ ನಿರ್ವಹಿಸುತ್ತಿದ್ದ ಕೇಂದ್ರವನ್ನು ಗುರಿಯಾಗಿಟ್ಟುಕೊಂಡು ದಾಳಿಯನ್ನು “ಭಯಾನಕ ಹತ್ಯಾಕಾಂಡ” ಎಂದು ಹಮಾಸ್ ಮೀಡಿಯಾ ಕರೆದಿದೆ.

“ಅಂತಾರಾಷ್ಟ್ರೀಯ ಕಾನೂನಿನಡಿಯಲ್ಲಿ ಕಾನೂನುಬದ್ಧ ಗುರಿಗಳ ವಿರುದ್ಧ ನಿಖರವಾದ ಗುಪ್ತಚರ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಲಾಗಿದೆ. ಮತ್ತು ಪಶ್ಚಿಮ ದಂಡೆಯಲ್ಲಿ ಉಗ್ರ ಕಾರ್ಯಾಚರಣೆ ನಡೆಸುತ್ತಿದ್ದ ಇಬ್ಬರು ಹಿರಿಯ ಹಮಾಸ್ ಅಧಿಕಾರಿಗಳನ್ನು ಕೊಂದಿದ್ದೇವೆ” ಎಂದು ಇಸ್ರೇಲಿ ಮಿಲಿಟರಿ ಹೇಳಿಕೆಯಲ್ಲಿ ತಿಳಿಸಿದೆ.

ಇಸ್ರೇಲಿ ಸೈನ್ಯವು ತನ್ನ ದಾಳಿ ವಿಮಾನವು ರಫಾದಲ್ಲಿ ಹಮಾಸ್ ಆವರಣವನ್ನು ಘಾತಿಸಿದೆ ಎಂದು ವರದಿ ಮಾಡಿದೆ, ಇದರ ಪರಿಣಾಮವಾಗಿ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಪ್ಯಾಲೇಸ್ಟಿನಿಯನ್ ಉಗ್ರಗಾಮಿ ಗುಂಪಿನ ಹಿರಿಯ ಅಧಿಕಾರಿಗಳಾದ ಯಾಸಿನ್ ರಬಿಯಾ ಮತ್ತು ಖಲೀದ್ ನಗರ್ ಸಾವನ್ನಪ್ಪಿದರು. ಇಸ್ರೇಲಿ ಸೈನ್ಯವು ದಾಳಿಯ ಪರಿಣಾಮವಾಗಿ, ಆ ಪ್ರದೇಶದಲ್ಲಿ ಹಲವಾರು ನಾಗರಿಕರಿಗೆ ಹಾನಿಯಾಗಿದೆ ಎಂದು ಸೂಚಿಸುವ ವರದಿಗಳ ಬಗ್ಗೆ ನಮಗೆ ತಿಳಿದಿದೆ ಎಂದು ಒಪ್ಪಿಕೊಂಡಿದೆ.

ಇಸ್ರೇಲಿ ಮಿಲಿಟರಿ ಮತ್ತು ಹಮಾಸ್ ನಡುವಿನ ಯುದ್ಧದ ತೀವ್ರತೆಯು ಇತ್ತೀಚೆಗೆ ರಫಾದಲ್ಲಿ ಕೇಂದ್ರೀಕೃತವಾಗಿದೆ. ಅಲ್ಲಿ ಸೇನಾಪಡೆಗಳು ಮೇ ಆರಂಭದಲ್ಲಿ ವ್ಯಾಪಕ ವಿರೋಧದ ಹೊರತಾಗಿಯೂ ಭೂಸೇನಾ ಕಾರ್ಯಾಚರಣೆಯನ್ನು ನಡೆಸಿವೆ.

ಇದನ್ನೂ ಓದಿ: Iran-Israel Conflict: “ಅಚ್ಚರಿಯ ದಾಳಿ ನಿರೀಕ್ಷಿಸಿ”- ಇಸ್ರೇಲ್‌ಗೆ ಇರಾನ್‌ನಿಂದ ವಾರ್ನಿಂಗ್‌

Continue Reading
Advertisement
Prajwal Revanna Case
ಕರ್ನಾಟಕ28 mins ago

Prajwal Revanna Case: ಪ್ರಜ್ವಲ್‌ ಬಂದ್ರೆ ಎಸ್‌ಐಟಿ ಮುಂದೆ ನಾನೂ ಹಾಜರಾಗುವೆ: ಆರೋಪಿ ನವೀನ್‌ ಗೌಡ

Narendra Modi
ದೇಶ52 mins ago

Narendra Modi: ರಾಹುಲ್‌ ಗಾಂಧಿ, ಕೇಜ್ರಿವಾಲ್‌ಗೆ ಪಾಕ್‌ ಬೆಂಬಲ; ತನಿಖೆಯಾಗಲಿ ಎಂದ ಮೋದಿ

INDIA Bloc
ದೇಶ1 hour ago

INDIA Bloc: ಜೂನ್‌ 1ರಂದು ‘ಇಂಡಿಯಾ’ ಸಭೆಗೆ ಮಮತಾ ಬ್ಯಾನರ್ಜಿ ಗೈರು; ಆದ್ಯತೆ ಬೇರೆ ಎಂದ ದೀದಿ

Bomb Threat
ದೇಶ1 hour ago

Bomb Threat: ಮುಂಬೈ ತಾಜ್‌ ಹೋಟೆಲ್‌, ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ; 26/11 ರೀತಿ ದಾಳಿಗೆ ಸಂಚು?

Suspicious Death
ಕರ್ನಾಟಕ1 hour ago

Suspicious Death: ಕಾಂಗ್ರೆಸ್ ಮುಖಂಡನ ಸಾವಿಗೆ ಕೊನೆಗೂ ಸಿಕ್ತು ಟ್ವಿಸ್ಟ್; ನಿಗೂಢ ಸಾವನ್ನು ಭೇದಿಸಿದ ಖಾಕಿ

MLC North East Graduate Constituency Non Party Candidate Nara Pratap Reddy election campaign in Vijayanagara District
ರಾಜಕೀಯ2 hours ago

MLC Election: ಕ್ಷೇತ್ರದೆಲ್ಲೆಡೆ ಪದವೀಧರ ಮತದಾರರಿಂದ ಉತ್ತಮ ಸ್ಪಂದನೆ: ನಾರಾ ಪ್ರತಾಪ್‌ ರೆಡ್ಡಿ

Python spotted in Chikkasandra village of Shira taluk
ಕರ್ನಾಟಕ2 hours ago

Snake Rescue: ಶಿರಾದಲ್ಲಿ ಹೆಬ್ಬಾವು ರಕ್ಷಿಸಿದ ಮಾಜಿ ಸೈನಿಕ

Fortis Hospital doctors team performed complex surgery for three different diseases simultaneously
ಕರ್ನಾಟಕ2 hours ago

Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

New Financial Rules
ವಾಣಿಜ್ಯ2 hours ago

New Financial Rules: ಜೂನ್ 1ರಿಂದ ಏನೆಲ್ಲಾ ಬದಲಾವಣೆಗಳಾಗಲಿವೆ ಗೊತ್ತಿದೆಯೆ?

Balkar Singh
ದೇಶ2 hours ago

Balkar Singh: ಕೆಲಸ ಕೇಳಿಕೊಂಡು ಬಂದ ಯುವತಿ ಎದುರು ಹಸ್ತಮೈಥುನ ಮಾಡಿಕೊಂಡ ಆಪ್‌ ಸಚಿವ; ವಿಡಿಯೊ ವೈರಲ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ5 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌