Site icon Vistara News

Israel Palestine War:‌ ದಾಳಿ ಮಾಡಿದವರೇ ದಿವಾಳಿ; ಗಾಜಾ ಇಸ್ರೇಲ್‌ ವಶಕ್ಕೆ, 3 ಸಾವಿರ ಜನ ಸಾವು

Israel Palestine War

Israel Warns 10.1 Lakh Gaza Residents To Relocate; Ground Offensive Today?

ಜೆರುಸಲೇಂ: ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಸಮರವು ದಿನೇದಿನೆ (Israel Palestine War) ಕಾವೇರುತ್ತಿದೆ. ಇಸ್ರೇಲ್‌ ಮೇಲೆ ಪ್ಯಾಲೆಸ್ತೀನ್‌ ಉಗ್ರರು, ಗಾಜಾಪಟ್ಟಿ ಮೇಲೆ ಇಸ್ರೇಲ್‌ ಸೇನೆಯು ನಿರಂತರವಾಗಿ ದಾಳಿ ನಡೆಸುತ್ತಿದೆ. ಹಮಾಸ್‌ ಉಗ್ರರನ್ನು (Hamas Terrorists) ನಿರ್ನಾಮ ಮಾಡಿಯೇ ತೀರುತ್ತೇವೆ ಎಂದು ಪಣ ತೊಟ್ಟಿರುವ ಇಸ್ರೇಲ್‌ ಈಗ ಗಾಜಾಪಟ್ಟಿಯನ್ನು ನಾವು ವಶಪಡಿಸಿಕೊಂಡಿದ್ದೇವೆ ಎಂಬುದಾಗಿ ಘೋಷಿಸಿದೆ.

ರಾತ್ರೋರಾತ್ರಿ ಸುಮಾರು 200 ಕಟ್ಟಡಗಳನ್ನು ಗುರಿಯಾಗಿಸಿ ಇಸ್ರೇಲ್‌ನ ಯುದ್ಧವಿಮಾನಗಳು ಗಾಜಾಪಟ್ಟಿ ಮೇಲೆ ದಾಳಿ ನಡೆಸಿದ್ದು, ಇಡೀ ಗಾಜಾ ನಮ್ಮ ವಶವಾಗಿದೆ ಎಂದು ಇಸ್ರೇಲ್‌ ತಿಳಿಸಿದೆ. ಹಮಾಸ್‌ ಉಗ್ರರ ಕಟ್ಟಡಗಳು ಸೇರಿ ಪ್ರಮುಖ ಕಟ್ಟಡಗಳನ್ನು ಇಸ್ರೇಲೆ ಧರೆಗುರುಳಿಸಿದೆ. ಮತ್ತೊಂದೆಡೆ, ಗಾಜಾಪಟ್ಟಿ ಮೇಲೆ ಇಸ್ರೇಲ್‌ ನಡೆಸಿದ ದಾಳಿಗೆ 1.8 ಲಕ್ಷ ನಾಗರಿಕರು ನಿರಾಶ್ರಿತರಾಗಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಇದು ಇಸ್ರೇಲ್‌ ದಾಳಿಯ ತೀವ್ರತೆಗೆ ಸಾಕ್ಷಿಯಾಗಿದೆ.

ಇಸ್ರೇಲ್‌ ದಾಳಿ ಬಳಿಕ ಗಾಜಾ ಸ್ಥಿತಿ

3 ಸಾವಿರ ದಾಟಿದ ಸಾವಿನ ಸಂಖ್ಯೆ

ಮತ್ತೊಂದೆಡೆ, ಎರಡೂ ದೇಶಗಳಲ್ಲಿ ನಡೆಯುತ್ತಿರುವ ದಾಳಿಯಿಂದಾಗಿ ಮೃತಪಟ್ಟವರ ಸಂಖ್ಯೆ 3 ಸಾವಿರ ದಾಟಿದೆ ಎಂದು ತಿಳಿದುಬಂದಿದೆ. ಗಾಜಾಪಟ್ಟಿ ಮೇಲೆ ಇಸ್ರೇಲ್‌ ನಿರಂತರವಾಗಿ ದಾಳಿ ನಡೆಸುತ್ತಿರುವ ಕಾರಣ ಸಾವಿನ ಸಂಖ್ಯೆ ದಿಢೀರ್‌ ಏರಿಕೆಯಾಗಿದೆ ಎನ್ನಲಾಗಿದೆ. ಇಸ್ರೇಲ್‌ನಲ್ಲೂ ಸಾವಿರಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. “ನಾವು ಯುದ್ಧ ಆರಂಭಿಸಿಲ್ಲ. ಆದರೆ ಮುಗಿಸುತ್ತೇವೆ” ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಈಗಾಗಲೇ ಘೋಷಿಸಿದ್ದಾರೆ.

ಇದನ್ನೂ ಓದಿ: ಮೋದಿಗೆ ಇಸ್ರೇಲ್ ಪಿಎಂ ಫೋನ್ ಕಾಲ್!, ಇಸ್ರೇಲ್‌ಗೇ ಬೆಂಬಲ ಎಂದ ಭಾರತ

ಏತನ್ಮಧ್ಯೆಯೇ, ಇಸ್ರೇಲ್‌ಗೆ ಭಾರತ ಬೆಂಬಲ ಘೋಷಿಸಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ, ಇಸ್ರೇಲ್ ಮತ್ತು ಹಮಾಸ್ ಮಧ್ಯೆ ನಡೆಯುತ್ತಿರುವ ಕಾಳಗದ ಕುರಿತು ವಿಸ್ತಾರ ಮಾಹಿತಿ ನೀಡಿದ್ದಾರೆ. ಈ ವಿಷಯವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಹಂಚಿಕೊಂಡಿದ್ದಾರೆ. ತಮ್ಮ ದೂರವಾಣಿ ಸಂಭಾಷಣೆ ವೇಳೆ, ಈ ಸಂಕಷ್ಟದ ಸ್ಥಿತಿಯ್ಲಲಿ ಭಾರತವು ಇಸ್ರೇಲ್ ಜತೆಗೆ ನಿಲ್ಲಲಿದೆ. ಭಾರತವು ಎಲ್ಲ ರೀತಿಯ ಭಯೋತ್ಪಾದನೆಯನ್ನು ಬಲವಾಗಿ ಖಂಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಅವರಿಗೆ ತಿಳಿಸಿದ್ದಾರೆ.

Exit mobile version