ಗಾಜಾ: ಹಮಾಸ್ ಉಗ್ರರು ಅಕ್ಟೋಬರ್ 7ರಂದು ಸಾವಿರಾರು ರಾಕೆಟ್‌ಗಳೊಂದಿಗೆ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ಗಾಜಾ ನಗರದ (Gaza City) ಮೇಲೆ ನಡೆಸುತ್ತಿರುವ ದಾಳಿಯು (Israel Palestine War) ದಿನೇದಿನೆ ತೀವ್ರವಾಗುತ್ತಿದೆ. ಅದರಲ್ಲೂ, ಗಾಜಾ ನಗರದಲ್ಲಿರುವ ಅಲ್-ಶಿಫಾ (Al-Shifa) ಆಸ್ಪತ್ರೆ, ಆಸ್ಪತ್ರೆ ಎದುರಿರುವ ಆಂಬುಲೆನ್ಸ್‌ಗಳ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸಿದ್ದು, ಸುಮಾರು 15 ಜನ ಮೃತಪಟ್ಟಿದ್ದಾರೆ. 50ಕ್ಕೂ ಅಧಿಕ ಜನ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಹಮಾಸ್ ಉಗ್ರರನ್ನು ನಿರ್ನಾಮ ಮಾಡುತ್ತೇವೆ ಎಂದು ಶಪಥ ಮಾಡಿರುವ ಇಸ್ರೇಲ್ ಈಗ ಸಾರ್ವಜನಿಕರನ್ನು ಗುರಿಯಾಗಿಸಿದ ದಾಳಿ ನಡೆಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಗಾಜಾ ಆಸ್ಪತ್ರೆ ಮೇಲೆ ನಡೆಸಿದ ದಾಳಿಯನ್ನು ಇಸ್ರೇಲ್ ದೃಢಪಡಿಸಿದ್ದು, ಹಮಾಸ್ ಉಗ್ರರು ಆಸ್ಪತ್ರೆಯಲ್ಲಿ ಇದ್ದಾರೆ. ಹಾಗಾಗಿ ದಾಳಿ ಮಾಡಲಾಗಿದೆ ಎಂದು ಇಸ್ರೇಲ್ ಡಿಫೆನ್ಸ್ ಫೋರ್ಸ್ ಸ್ಪಷ್ಟಪಡಿಸಿದೆ. ಮತ್ತೊಂದೆಡೆ, ಗಾಜಾ ನಗರದಲ್ಲಿರುವ ಶಾಲೆಯೊಂದರ ಮೇಲೂ ಇಸ್ರೇಲ್ ದಾಳಿ ನಡೆಸಿದ್ದು, 20ಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
🚨BREAKING: 🇮🇱 IDF confirms strike on ambulance in Gaza, saying it was being used by Hamas.#Israel #Gaza #Hamas #IDF #Hezbollah #US #Hosp pic.twitter.com/acroK1fZ6U
— The Geopolitical Index 🌍 (@Geopolitic_Info) November 4, 2023
ಕದನ ವಿರಾಮ ಇಲ್ಲ ಎಂದ ನೆತನ್ಯಾಹು
ಹಮಾಸ್ ಉಗ್ರರನ್ನು ನಿರ್ನಾಮ ಮಾಡದೆ ಬಿಡುವುದಿಲ್ಲ ಎಂದು ಶಪಥ ಮಾಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಮತ್ತೆ ಕದನ ವಿರಾಮದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಗಾಜಾ ನಗರದಲ್ಲಿ ಕದನ ವಿರಾಮ ಘೋಷಿಸಬೇಕು ಎಂಬ ಅಮೆರಿಕ ಪ್ರಸ್ತಾಪವನ್ನು ನೆತನ್ಯಾಹು ತಿರಸ್ಕರಿಸಿದ್ದಾರೆ. ಕದನ ವಿರಾಮ ಘೋಷಿಸಬೇಕು ಎಂದು ಈಗಾಗಲೇ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಅಂಗೀಕಾರಗೊಂಡರೂ, ನೆತನ್ಯಾಹು ಅವರು ದಾಳಿ ನಿಲ್ಲಿಸುವ ಯಾವ ಲಕ್ಷಣವನ್ನೂ ತೋರಿಲ್ಲ.
Israel says it launched an air strike on an ambulance convoy outside a hospital in Gaza.
— Globe🌎 News 🗞️🎤 (@Nycon01) November 3, 2023
Israel Gaza Palestinian Jerusalem Hamas Genocide pic.twitter.com/XWtcDwh4Uo
ಇದನ್ನೂ ಓದಿ: Israel Palestine War: ಯಾರಿಗೂ ಜಗ್ಗದ ಇಸ್ರೇಲ್; ದೇಶದತ್ತ ಬಂದ ‘ಇರಾನ್’ ಕ್ಷಿಪಣಿ ಧ್ವಂಸ!
10 ಸಾವಿರ ದಾಟಿದ ಸಾವಿನ ಸಂಖ್ಯೆ
ಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವಿನ ಸಮರದಲ್ಲಿ ಮೃತಪಟ್ಟವರ ಸಂಖ್ಯೆ 10 ಸಾವಿರ ದಾಟಿದೆ. ಅದರಲ್ಲೂ, ಹಮಾಸ್ ಉಗ್ರರ ತಾಣವಾದ ಗಾಜಾ ನಗರದ ಮೇಲೆ ಇಸ್ರೇಲ್ ನಿರಂತರವಾಗಿ ದಾಳಿ ನಡೆಸುತ್ತಿದ್ದು, ನಗರದಲ್ಲಿ ಇದುವರೆಗೆ 9,227 ಜನ ಮೃತಪಟ್ಟಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯವೇ ಮಾಹಿತಿ ನೀಡಿದೆ. ಇನ್ನೂ 2 ಸಾವಿರಕ್ಕೂ ಅಧಿಕ ಜನ ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು, ಅವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂಬುದಾಗಿ ಮಾಹಿತಿ ನೀಡಿದೆ. ಇನ್ನು ಹಮಾಸ್ ಉಗ್ರರ ದಾಳಿಗೆ ಇಸ್ರೇಲ್‌ನಲ್ಲಿ 1,400 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ