Israel Palestine War: ಅವಳಿ ಮಕ್ಕಳ ಪ್ರಾಣ ಉಳಿಸಲು ತಮ್ಮ ಜೀವವನ್ನೇ ಬಲಿ ಕೊಟ್ಟ ಇಸ್ರೇಲ್‌ ದಂಪತಿ! - Vistara News

ಪ್ರಮುಖ ಸುದ್ದಿ

Israel Palestine War: ಅವಳಿ ಮಕ್ಕಳ ಪ್ರಾಣ ಉಳಿಸಲು ತಮ್ಮ ಜೀವವನ್ನೇ ಬಲಿ ಕೊಟ್ಟ ಇಸ್ರೇಲ್‌ ದಂಪತಿ!

Israel Palestine War: ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಸಮರವು ತಾರಕಕ್ಕೆ ಏರುತ್ತಿರುವಾಗಲೇ ಜನ ದಾರುಣವಾಗಿ ಮೃತಪಡುತ್ತಿರುವ, ಸಣ್ಣ ಮಕ್ಕಳು ಮಣ್ಣಿನ ಅಡಿಯಲ್ಲಿ ಸಿಲುಕಿದ, ಸುಟ್ಟು ಕರಕಲಾದ ಫೋಟೊ, ವಿಡಿಯೊಗಳು ಜನರ ಮನಸ್ಸನ್ನು ಕಲಕುತ್ತಿವೆ.

VISTARANEWS.COM


on

Itay and Hadar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೆರುಸಲೇಂ: ಇಸ್ರೇಲ್‌ ಮೇಲೆ ಹಮಾಸ್‌ ಉಗ್ರರು ರಾಕೆಟ್‌, ಗುಂಡಿನ ದಾಳಿ ಮಾಡುತ್ತಿದ್ದಾರೆ. ಇಸ್ರೇಲ್‌ ಕೂಡ ಗಾಜಾಪಟ್ಟಿ ಮೇಲೆ ರಾಕೆಟ್‌ಗಳ (Israel Palestine War) ಸುರಿಮಳೆಗೈಯುತ್ತಿದೆ. ಇಸ್ರೇಲ್‌ಗೆ ಹಲವು ರಾಷ್ಟ್ರಗಳು ಬೆಂಬಲ ಘೋಷಿಸಿವೆ. ಒಂದಷ್ಟು ರಾಷ್ಟ್ರಗಳು ಪ್ಯಾಲೆಸ್ತೀನ್‌ಗೂ ಪರೋಕ್ಷವಾಗಿ ಬೆಂಬಲ ಸೂಚಿಸಿವೆ. ಒಟ್ಟಿನಲ್ಲಿ ಯುದ್ಧದ ಭೀಕರತೆ ದಿನೇದಿನೆ ಜಾಸ್ತಿಯಾಗುತ್ತಿದೆ. ಆದರೆ, ಅದು ಇಸ್ರೇಲ್‌ ಇರಲಿ, ಗಾಜಾ ಇರಲಿ. ಹೆಚ್ಚಿನ ಪ್ರಮಾಣದಲ್ಲಿ ಬಲಿಯಾಗುತ್ತಿರುವವರು ಮಾತ್ರ ಮುಗ್ಧ ಜನ. ಇದಕ್ಕೆ ನಿದರ್ಶನ ಎಂಬಂತೆ, ಇಸ್ರೇಲ್‌ನಲ್ಲಿ ಇಬ್ಬರು ದಂಪತಿಯು ತಮ್ಮ ಅವಳಿ ಮಕ್ಕಳಿಗಾಗಿ ತಮ್ಮ ಪ್ರಾಣವನ್ನೇ ಬಲಿ ಕೊಟ್ಟಿದ್ದಾರೆ.

ಹೌದು, ಇಟೇ ಹಾಗೂ ಹದಾರ್‌ ಬೆರ್ಡಿಚೆವ್‌ಸ್ಕಿ ದಂಪತಿಗೆ 10 ತಿಂಗಳ ಹಿಂದಷ್ಟೇ ಅವಳಿ ಮಕ್ಕಳು ಜನಿಸಿದ್ದವು. ನಿತ್ಯವೂ ಮನೆ ತುಂಬ ಎರಡು ಮಕ್ಕಳದ್ದೇ ಕಲರವ. ನಗು, ಅಳು, ತುಂಟಾಟವೇ ದಂಪತಿಯ ಮನೆ ಹಾಗೂ ಮನ ತುಂಬಿತ್ತು. ಆದರೆ, ಏಕಾಏಕಿ ಹಮಾಸ್‌ ಉಗ್ರರು ಮನೆಗೆ ನುಗ್ಗಿದರು. ಆಗ ದಂಪತಿಯು ಎರಡೂ ಮಕ್ಕಳನ್ನು ಬಚ್ಚಿಟ್ಟರು. ಮಕ್ಕಳು ಅತ್ತರೂ ಕೇಳಬಾರದು ಎನ್ನುವ ರೀತಿ ಬಚ್ಚಿಟ್ಟರು. ಉಗ್ರರು ದಾಳಿ ಮಾಡಿದಾಗ ತಾವು ಇಬ್ಬರೇ ಮನೆಯಲ್ಲಿ ಇರುವುದು ಎಂಬಂತೆ ಬಿಂಬಿಸಿದರು.

ಹೇಗಾಯಿತು ಉಗ್ರರ ದಾಳಿ?

ಹಮಾಸ್‌ ಉಗ್ರರು ಮನೆಗೆ ದಾಳಿ ಮಾಡಿದವರೇ ದಂಪತಿಯನ್ನು ಕೊಂದುಹಾಕಿದರು. ಮನೆಯಲ್ಲಿ ಹುಡುಕಿದರೂ ಯಾರೂ ಸಿಗಲಿಲ್ಲ. ಆದರೆ, ದಂಪತಿಯು ಮೃತಪಟ್ಟ 14 ತಾಸುಗಳ ಬಳಿಕ ಎರಡೂ ಕಂದಮ್ಮಗಳನ್ನು ಇಸ್ರೇಲ್‌ ಸೇನೆಯು ರಕ್ಷಿಸಿತು. ಹೀಗೆ, ತಮ್ಮ ಇಬ್ಬರು ಮಕ್ಕಳಿಗಾಗಿ ಪ್ರಾಣಕೊಟ್ಟು ಹೋರಾಡಿರುವುದು ಜಾಗತಿಕವಾಗಿ ಸುದ್ದಿಯಾಗಿದೆ. ಇಸ್ರೇಲ್‌ ಸೇನೆಯೂ ದಂಪತಿಯ ಧೈರ್ಯ, ಹೋರಾಟವನ್ನು ಮೆಚ್ಚಿದೆ. ದಂಪತಿ ಹಾಗೂ ಮಕ್ಕಳ ಫೋಟೊಗಳು ವೈರಲ್‌ ಆಗಿವೆ. ಆದರೆ, ಈಗ ಎರಡೂ ಮಕ್ಕಳು ಅನಾಥರಾಗಿದ್ದು, ಅವರ ಹಾರೈಕೆ ಕುರಿತು ಜನ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: Israel Palestine War: ಗಾಜಾದತ್ತ ಹೊರಟ ಇಸ್ರೇಲ್‌ ಬಂಕರ್‌ಗಳು; ಹಮಾಸ್‌ ಉಗ್ರರ ಉಡೀಸ್‌ ಫಿಕ್ಸ್!

ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ಸಂಘರ್ಷದಿಂದಾಗಿ ಮಕ್ಕಳು, ಮಹಿಳೆಯರು, ಹಿರಿಯರು ಮೃತಪಟ್ಟಿರುವ, ಅವರು ರಕ್ತದ ಮಡುವಿನಲ್ಲಿ ಬಿದ್ದಿರುವ, ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿರುವ ಫೋಟೊ, ವಿಡಿಯೊಗಳು ವೈರಲ್‌ ಆಗುತ್ತಿವೆ. ಜನ ಈ ಯುದ್ಧದ ಸಹವಾಸವೇ ಬೇಡ ಎನ್ನುವಷ್ಟರಮಟ್ಟಿಗೆ ರಣಭೀಕರವಾಗಿ ದಾಳಿ ನಡೆಯುತ್ತಿದೆ. ಇನ್ನು ಗಾಜಾಪಟ್ಟಿಯನ್ನು, ಹಮಾಸ್‌ ಉಗ್ರರನ್ನು ನಿರ್ನಾಮ ಮಾಡಲಾಗುವುದು ಎಂದು ಇಸ್ರೇಲ್‌ ಘೋಷಿಸಿದೆ. ಅತ್ತ, ಇಸ್ರೇಲ್‌ಅನ್ನು ನಾಶಪಡಿಸುವುದಾಗಿ ಹಮಾಸ್‌ ಉಗ್ರರು ಪಣ ತೊಟ್ಟಿದ್ದಾರೆ. ಇವರ ಕಾಳಗದ ಮಧ್ಯೆ ಪ್ರಾಣ ಕಳೆದುಕೊಳ್ಳುತ್ತಿರುವುದು ಮಾತ್ರ ಮುಗ್ಧ ಜನ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

DK Shivakumar: ಹೆಚ್ಚುವರಿ ಡಿಸಿಎಂ ಹುದ್ದೆಗೆ ಹೈಕಮಾಂಡ್ ಬಳಿ ಹೋಗಲಿ; ಡಿ.ಕೆ. ಶಿವಕುಮಾರ್

DK Shivakumar: ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ. ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ . ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ. ಯಾರು ಬೇಕಾದರೂ ಹೈಕಮಾಂಡ್ ನಾಯಕರ ಬಳಿ ಹೋಗಿ ಪರಿಹಾರ ಹುಡುಕಿಕೊಂಡು ಬರಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

Post of Additional DCM Those who speak before the media should go to the High Command and speak says DCM DK Shivakumar
Koo

ಬೆಂಗಳೂರು: ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ. ಯಾರು ಬೇಕಾದರೂ ಹೈಕಮಾಂಡ್ ನಾಯಕರ ಬಳಿ ಹೋಗಿ ಪರಿಹಾರ ಹುಡುಕಿಕೊಂಡು ಬರಲಿ ಎಂದರು.

ಇದನ್ನೂ ಓದಿ: Ballari News: ಬಳ್ಳಾರಿಯಲ್ಲಿ ಅಕ್ರಮ ಗಾಂಜಾ ಸಂಗ್ರಹ; ಇಬ್ಬರು ಆರೋಪಿಗಳ ಬಂಧನ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, “”ಬಹಳ ಸಂತೋಷ. ಸಮಯ ವ್ಯರ್ಥ ಮಾಡಬಾರದು. ಅವರಿಗೆ ಪರಿಹಾರ ಕಂಡುಕೊಳ್ಳಲು ಎಲ್ಲಿ ಹೋಗಬೇಕೋ ಅಲ್ಲಿ ಹೋಗಲಿ. ಆರೋಗ್ಯ ಸರಿಯಿಲ್ಲ ಎಂದು ವೈದ್ಯರ ಬಳಿ ಹೋದರೆ ಔಷಧಿ ನೀಡುತ್ತಾರೆ. ಅದೇ ರೀತಿ ಅವರು ಎಲ್ಲಾದರೂ ಪರಿಹಾರವನ್ನು ಹುಡುಕಿಕೊಂಡು ಹೋಗಲಿʼʼ ಎಂದು ತಿಳಿಸಿದರು.

ಮುಂದಿನ ವರ್ಷದಿಂದ ಇಂತಹ ತಪ್ಪು ಆಗದಂತೆ ಕ್ರಮ

ಕೆಂಪೇಗೌಡರ ಜಯಂತಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡದ ವಿಚಾರವಾಗಿ ರಾಜ್ಯ ಒಕ್ಕಲಿಗರ ಸಂಘ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ಯಾರನ್ನೂ ಅಗೌರವಿಸುವ ಉದ್ದೇಶ ನಮಗಿಲ್ಲ. ಒಕ್ಕಲಿಗ ಸಮುದಾಯದ ನಾಯಕರಾಗಿ ಎಸ್.ಎಂ. ಕೃಷ್ಣ, ಸದಾನಂದ ಗೌಡರು, ದೇವೇಗೌಡರು, ಕುಮಾರಸ್ವಾಮಿ ಅವರು ಇದ್ದಾರೆ. ಪ್ರಾಧಿಕಾರದ ಅಧಿಕಾರಿಗಳು ಶಿಷ್ಟಾಚಾರವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಮಾತ್ರ ಆಹ್ವಾನ ನೀಡಿದ್ದಾರೆ. ದೇವೇಗೌಡರು ಹಾಸನ ಜಿಲ್ಲಾ ವ್ಯಾಪ್ತಿಗೆ ಬರುತ್ತಾರೆ. ಕುಮಾರಸ್ವಾಮಿ ಮಂಡ್ಯ ಸಂಸದರಾಗಿದ್ದಾರೆ. ಈ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕಿತ್ತು. ಮುಂದಿನ ವರ್ಷ ಈ ರೀತಿಯ ತಪ್ಪುಗಳು ನಡೆಯದಂತೆ ಸರಿಪಡಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Railway New Rules: ರೈಲು ಪ್ರಯಾಣಿಕರೇ, ಬರ್ತ್‌ನಲ್ಲಿ ಮಲಗುವ ಕುರಿತ ಈ ಹೊಸ ರೂಲ್ಸ್‌ ನೆನಪಿನಲ್ಲಿರಲಿ!

ದೆಹಲಿ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ರಾಜ್ಯದಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದರನ್ನು ಭೇಟಿ ಮಾಡಿ, ನಮ್ಮ ರಾಜ್ಯದಲ್ಲಿ ಬಾಕಿ ಉಳಿದಿರುವ ಕೇಂದ್ರದ ಯೋಜನೆಗಳು, ಅನುದಾನ ಬಾಕಿ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯದ ಹಿತಕ್ಕಾಗಿ ಧ್ವನಿ ಎತ್ತುವಂತೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

Continue Reading

ದೇಶ

Jio Tariffs: ಜಿಯೋ ಬಳಕೆದಾರರಿಗೆ ಬ್ಯಾಡ್‌ ನ್ಯೂಸ್;‌ ಶೇ.20ರಷ್ಟು ಶುಲ್ಕ ಹೆಚ್ಚಳ, ನೂತನ ದರಪಟ್ಟಿ ಇಲ್ಲಿದೆ

Jio Tariffs: ಭಾರತದಲ್ಲಿ ಸುಮಾರು 45 ಕೋಟಿಗೂ ಅಧಿಕ ಜನ ರಿಲಯನ್ಸ್‌ ಜಿಯೋ ಬಳಸುತ್ತಾರೆ. ಹಾಗಾಗಿ, ಇದು ದೇಶದಲ್ಲೇ ಬೃಹತ್‌ ಟೆಲಿಕಾಮ್‌ ಕಂಪನಿ ಎನಿಸಿದೆ. ಈಗ ರಿಲಯನ್ಸ್‌ ಜಿಯೋ ಪ್ಲಾನ್‌ಗಳ ಬೆಲೆಯನ್ನು ಶೇ.20ರಷ್ಟು ಏರಿಕೆ ಮಾಡಿದ್ದು, ಕೋಟ್ಯಂತರ ಗ್ರಾಹಕರಿಗೆ ಹೊರೆಯಾಗಲಿದೆ.

VISTARANEWS.COM


on

Jio Tariffs
Koo

ಮುಂಬೈ: ರಿಲಯನ್ಸ್‌ ಜಿಯೋ (Reliance Jio) ಪ್ರಿಪೇಯ್ಡ್‌ ಬಳಕೆದಾರರಿಗೆ ಕಂಪನಿಯು ಕಹಿ ಸುದ್ದಿ ನೀಡಿದೆ. ಜಿಯೋ ಪ್ರಿಪೇಯ್ಡ್‌ ಪ್ಲಾನ್‌ನ ಶುಲ್ಕಗಳನ್ನು (Jio Tariffs) ಶೇ.20ರಷ್ಟು ಏರಿಕೆ ಮಾಡಿದ್ದು, ಇದರಿಂದ ಗ್ರಾಹಕರಿಗೆ ಹೊರೆಯಾಗಲಿದೆ. ಅದರಲ್ಲೂ, ಇತ್ತೀಚೆಗೆ ಕರ್ನಾಟಕದಲ್ಲಿ ಪೆಟ್ರೋಲ್‌, ಡೀಸೆಲ್‌, ಹಾಲಿನ ಬೆಲೆಯೇರಿಕೆ ಆಗಿದ್ದು, ಇದರ ಬೆನ್ನಲ್ಲೇ ಜಿಯೋ ಪ್ರಿಪೇಯ್ಡ್‌ ಪ್ಲಾನ್‌ಗಳ ಶುಲ್ಕವೂ ಜಾಸ್ತಿಯಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜುಲೈ 3ರಿಂದ ರಿಲಯನ್ಸ್‌ ಜಿಯೋ ಹೊಸ ರೇಟ್‌ ಅನ್ವಯವಾಗಲಿದೆ.

ತಿಂಗಳ ಪ್ಲಾನ್‌ಗೆ ಇಷ್ಟಾಗಲಿದೆ ಹೊರೆ

28 ದಿನಗಳವರೆಗೆ 2 ಜಿಬಿ ಡೇಟಾ (ಪ್ರತಿದಿನ ಅಲ್ಲ), ಅನ್‌ಲಿಮಿಟೆಡ್‌ ಕರೆಗಳು ಇರುವ 155 ಪ್ಲಾನ್‌ಗೆ ಇನ್ನು 189 ರೂ. ಪಾವತಿಸಬೇಕಾಗುತ್ತದೆ. ಹಾಗೆಯೇ, ಪ್ರತಿದಿನ 1 ಜಿಬಿ ಇಂಟರ್‌ನೆಟ್‌ ಪ್ಲಾನ್‌ಗೆ 28 ದಿನಗಳಿಗೆ 209 ರೂ. ಬದಲು 249 ರೂ., ನಿತ್ಯ 1.5 ಜಿಬಿ ಪ್ಲಾನ್‌ಗೆ 239 ರೂ. ಬದಲು 299 ರೂ., 2 ಜಿಬಿ ಪ್ಲಾನ್‌ಗೆ 299 ರೂ. ಬದಲು 349 ರೂ., 2.5 ಜಿಬಿಗೆ 349 ರೂ. ಬದಲು 399 ರೂ., 3 ಜಿಬಿಗೆ 399 ರೂ. ಬದಲು 449 ರೂ. ಪಾವತಿಸಬೇಕಾಗುತ್ತದೆ.

2 ಹಾಗೂ 3 ತಿಂಗಳ ಪ್ಲಾನ್‌

ಎರಡು ಹಾಗೂ ಮೂರು ತಿಂಗಳ ಪ್ಲಾನ್‌ಗಳ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಪ್ರತಿ ದಿನ 1.5 ಜಿಬಿ ಇಂಟರ್‌ನೆಟ್‌, ಅನ್‌ಲಿಮಿಟೆಡ್‌ ಕರೆಗಳಿಗೆ ಇನ್ನು 479 ರೂ. ಬದಲು 579 ರೂ., 2 ಜಿಬಿಗೆ 533 ರೂ. ಬದಲು 629, 3 ತಿಂಗಳು ಅನ್‌ಲಿಮಿಟೆಡ್‌ ಕರೆ, 6 ಜಿಬಿ ಇಂಟರ್‌ನೆಟ್‌ (ಪ್ರತಿದಿನ ಅಲ್ಲ) ಪ್ಲಾನ್‌ಗೆ 395 ರೂ. ಬದಲಾಗಿ 479 ರೂ. ಪಾವತಿಸಬೇಕಾಗುತ್ತದೆ. ಮೂರು ತಿಂಗಳು ಪ್ರತಿ ದಿನ 1.5 ಜಿಬಿ ಅಂತರ್ಜಾಲ, ಅನ್‌ಲಿಮಿಟೆಡ್‌ ಕಾಲ್ಸ್‌ ಪ್ಲಾನ್‌ಗೆ 666 ರೂ. ಬದಲಾಗಿ 799 ರೂ. 2 ಜಿಬಿಗೆ 719 ರೂ. ಬದಲು 859 ರೂ., 3 ಜಿಬಿಗೆ 999 ರೂ. ಬದಲಾಗಿ 1,199 ರೂ. ತೆರಬೇಕಾಗಿದೆ.

ವಾರ್ಷಿಕ ಹಾಗೂ ಡೇಟಾ ಆ್ಯಡ್‌ ಆನ್‌ಗೆ ಎಷ್ಟು ಏರಿಕೆ

336 ದಿನಗಳವರೆಗೆ ಅನ್‌ಲಿಮಿಟೆಡ್‌ ಕರೆಗಳು, 24 ಜಿಬಿ ಡೇಟಾ (ಪ್ರತಿದಿನ ಅಲ್ಲ) ಪ್ಲಾನ್‌ಗೆ 1,559 ರೂ. ಬದಲು 1,899 ರೂ., ಒಂದು ವರ್ಷಕ್ಕೆ ನಿತ್ಯ 2.5 ಜಿಬಿ ಪ್ಲಾನ್‌ಗೆ 2,999 ರೂ. ಬದಲು 3,599 ರೂ. ಪಾವತಿಸಬೇಕಾಗುತ್ತದೆ. ಡೇಟಾ ಆ್ಯಡ್‌ ಆನ್‌ ಪ್ಲಾನ್‌ಗಳನ್ನೂ ಬಿಟ್ಟಿಲ್ಲ. 1 ಜಿಬಿ ಡೇಟಾಗೆ 15 ರೂ.ನಿಂದ 19 ರೂ.ಗೆ ಏರಿಕೆ ಮಾಡಲಾಗಿದೆ. ಇನ್ನು 2 ಜಿಬಿ ಡೇಟಾಗೆ 25 ರೂ.ನಿಂದ 29 ರೂ., 6 ಜಿಬಿ ಡೇಟಾಗೆ 61 ರೂ.ನಿಂದ 69 ರೂ.ಗೆ ಹೆಚ್ಚಳ ಮಾಡಲಾಗಿದೆ. ಭಾರತದಲ್ಲಿ ಸುಮಾರು 45 ಕೋಟಿಗೂ ಅಧಿಕ ಜನ ರಿಲಯನ್ಸ್‌ ಜಿಯೋ ಬಳಸುತ್ತಾರೆ. ಹಾಗಾಗಿ, ಇದು ದೇಶದಲ್ಲೇ ಬೃಹತ್‌ ಟೆಲಿಕಾಮ್‌ ಕಂಪನಿ ಎನಿಸಿದೆ.

ಇದನ್ನೂ ಓದಿ: GST Council Meeting : ಪೆಟ್ರೋಲ್, ಡೀಸೆಲ್ ಜಿಎಸ್​​ಟಿ ವ್ಯಾಪ್ತಿಗೆ ಬರಲಿದೆಯೇ? ಸಭೆಯ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

Continue Reading

ಕರ್ನಾಟಕ

Ballari News: ಬಳ್ಳಾರಿಯಲ್ಲಿ ಅಕ್ರಮ ಗಾಂಜಾ ಸಂಗ್ರಹ; ಇಬ್ಬರು ಆರೋಪಿಗಳ ಬಂಧನ

Ballari News: ಬಳ್ಳಾರಿ ನಗರದ ರೂಪನಗುಡಿ ರಸ್ತೆಯ ವಾಲ್ಮೀಕಿ ಬೀದಿಯಲ್ಲಿರುವ ಮನೆಯೊಂದರಲ್ಲಿ ಗಾಂಜಾವನ್ನು ಅಕ್ರಮವಾಗಿ ಶೇಖರಿಸಿ, ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಸುಮಾರು 19.10 ಲಕ್ಷ ರೂ. ಮೌಲ್ಯದ 19 ಕೆಜಿಯಷ್ಟು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

VISTARANEWS.COM


on

Illegal ganja storage in Ballari Arrest of two accused Rs 19 10 lakh Valuable ganja seized
Koo

ಬಳ್ಳಾರಿ: ನಗರದ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಗಾಂಜಾವನ್ನು ಅಕ್ರಮವಾಗಿ ಶೇಖರಿಸಿ, ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು 19.10 ಲಕ್ಷ ರೂ. ಮೌಲ್ಯದ 19 ಕೆಜಿಯಷ್ಟು ಗಾಂಜಾವನ್ನು (Ballari News) ವಶಪಡಿಸಿಕೊಳ್ಳಲಾಗಿದೆ.

ನಗರದ ಎಸ್ಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು, ಬಳ್ಳಾರಿ ನಗರದ ರೂಪನಗುಡಿ ರಸ್ತೆಯ ವಾಲ್ಮೀಕಿ ಬೀದಿಯಲ್ಲಿರುವ ಮನೆಯೊಂದರಲ್ಲಿ ಗಾಂಜಾವನ್ನು ಅಕ್ರಮವಾಗಿ ಶೇಖರಿಸಿ, ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಸುಮಾರು 19.10 ಲಕ್ಷ ರು. ಮೌಲ್ಯದ 19 ಕೆಜಿ 100 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಗಾಂಜಾ ಅಕ್ರಮ ಶೇಖರಣೆ ಪ್ರಕರಣದಲ್ಲಿ ನಗರದ ರಾಣಿತೋಟದ ಬೀರಪ್ಪಗುಡಿ ಹತ್ತಿರದ ನಿವಾಸಿ ವಾಹೀದ್‌ (38) ಹಾಗೂ ರೂಪನಗುಡಿ ರಸ್ತೆಯ ಮಾರಮ್ಮದೇವಿ ಗುಡಿ ಬಳಿಯ ಪಿ. ಚಾಂದ್ ಬಾಷಾ (40) ಅವರನ್ನು ಬಂಧಿಸಲಾಗಿದೆ. ಇನ್ನು ನಾಲ್ವರು ಪತ್ತೆಯಾಗಬೇಕಿದ್ದು, ಶೀಘ್ರವೇ ಬಂಧಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Vande Bharath Train: ಬೆಂಗಳೂರು-ಮಧುರೈ ʼವಂದೇ ಭಾರತ್ʼ ರೈಲು ಜುಲೈನಿಂದ ಆರಂಭ

ಕೂಲಿ ಕೆಲಸ ಮಾಡಿಕೊಂಡಿರುವ ಬಂಧಿತ ಇಬ್ಬರು ಆರೋಪಿಗಳ ಬಳಿ ನಾಪತ್ತೆಯಾಗಿರುವ ನಾಲ್ವರು ಗಾಂಜಾವನ್ನು ತಂದಿಡುತ್ತಿದ್ದರು. ಬಳಿಕ ಇದನ್ನು ಮಾರಾಟ ಮಾಡಲಾಗುತ್ತಿತ್ತು ಎಂದು ತನಿಖೆಯಿಂದ ತಿಳಿದು ಬಂದಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನದ ಬಳಿಕ ಈ ಪ್ರಕರಣದ ಪೂರ್ಣ ಮಾಹಿತಿ ಗೊತ್ತಾಗಲಿದೆ ಎಂದು ಎಸ್ಪಿ ಹೇಳಿದರು.

ಆಂಧ್ರಪ್ರದೇಶದ ಕರ್ನೂಲ್, ಅನಂತಪುರ, ರಾಯದುರ್ಗ ಕಡೆಗಳಿಂದ ಗಾಂಜಾ ಅಕ್ರಮವಾಗಿ ಬಳ್ಳಾರಿಗೆ ಪೂರೈಕೆಯಾಗುತ್ತಿರುವುದು ತನಿಖೆ ವೇಳೆ ದೃಢಪಟ್ಟಿದೆ. ಗಾಂಜಾ ಪೂರೈಕೆ ಮಾಡುವ ಒಂದು ತಂಡ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿರುವುದು ಗೊತ್ತಾಗಿದೆ. ಗಡಿಪ್ರದೇಶದಲ್ಲಿ ಈ ರೀತಿಯ ಅಕ್ರಮ ಮಾದಕ ದ್ರವ್ಯಗಳ ಸಾಗಾಣೆ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದ ಅವರು, ಈ ವರ್ಷದಲ್ಲಿ 13 ಗಾಂಜಾ ಪ್ರಕರಣಗಳು ದಾಖಲಾಗಿದ್ದು, 18 ಜನರನ್ನು ಬಂಧಿಸಲಾಗಿದೆ. ಬಳ್ಳಾರಿಗೆ ಪೂರೈಕೆಯಾಗುವ ಅಕ್ರಮ ಗಾಂಜಾ ಎಲ್ಲಿ ಸರಬರಾಜಾಗುತ್ತದೆ ಎಂಬುದರ ಕಡೆ ನಿಗಾ ಇಡಲಾಗಿದೆ. ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗಾಂಜಾ ಪೂರೈಕೆ ಮಾಡಲಾಗುತ್ತಿದೆಯೇ ಎಂಬುದನ್ನು ಸಹ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

ಶಾಲಾ ಕಾಲೇಜುಗಳಲ್ಲಿ ಸೈಬರ್ ಕ್ರೈಂ, ಮಾದಕ ದ್ರವ್ಯ ಅಪರಾಧ ಕುರಿತು ಜಾಗೃತಿ ಮೂಡಿಸುವ ಕಾರ್ಯ ಜಿಲ್ಲಾ ಪೊಲೀಸ್ ಇಲಾಖೆಯಿಂದ ನಿರಂತರವಾಗಿ ನಡೆಯುತ್ತಿದೆ. ಈವರೆಗೆ 45 ಶಾಲಾ-ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮ ನಡೆದಿವೆ ಎಂದು ಎಸ್ಪಿ ರಂಜೀತ್ ಕುಮಾರ್ ಬಂಡಾರು ವಿವರಿಸಿದರು.

ಗಾಂಜಾ ಪ್ರಕರಣವನ್ನು ಬೇಧಿಸಿದ ಸೈಬರ್‌ ಹಾಗೂ ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯವನ್ನು ಎಸ್ಪಿ ಶ್ಲಾಘಿಸಿದರು. ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಹುಮಾನ ವಿತರಿಸಿದರು.

ಇದನ್ನೂ ಓದಿ: KMH CUP: ʼಕೆಎಂಎಚ್‌ ಕಪ್‌ʼ ಕ್ರಿಕೆಟ್‌ಗೆ ನಟಿ ಭಾವನಾ ರಾಮಣ್ಣ ರಾಯಭಾರಿ

ಈ ವೇಳೆ ಸೈಬರ್ ಪೊಲೀಸ್ ಠಾಣೆಯ ಡಿವೈಎಸ್ಪಿ ಡಾ. ಸಂತೋಷ್ ಚೌವ್ಹಾಣ್ ಹಾಗೂ ಹೆಚ್ಚುವರಿ ಎಸ್ಪಿ ನವೀನ್ ಕುಮಾರ್ ಇದ್ದರು.

Continue Reading

ದೇಶ

Arvind Kejriwal: ಪ್ಯಾಂಟ್‌ ಲೂಸ್‌ ಆಗಿದೆ, ಒಂದು ಬೆಲ್ಟ್‌ ಕೊಡಿ; ಕೋರ್ಟ್‌ಗೆ ಅರವಿಂದ್‌ ಕೇಜ್ರಿವಾಲ್‌ ಮನವಿ‌

Arvind Kejriwal: ಅರವಿಂದ್‌ ಕೇಜ್ರಿವಾಲ್‌ ಅವರು ಸಿಬಿಐ ಕಸ್ಟಡಿಯಲ್ಲಿರುವಾಗ ಮನೆಯಿಂದ ತರುವ ಊಟ ಮಾಡಬಹುದು, ವೈದ್ಯರು ಸೂಚಿಸಿದ ಮಾತ್ರೆಗಳನ್ನು ಸೇವಿಸಬಹುದು ಹಾಗೂ ಪ್ರತಿ ದಿನ ಅರ್ಧ ಗಂಟೆ ಪತ್ನಿಯನ್ನು ಮತ್ತು ಇನ್ನರ್ಧ ಗಂಟೆ ವಕೀಲರನ್ನು ಭೇಟಿಯಾಗಬಹುದು ಎಂದು ನ್ಯಾಯಾಲಯವು ಅನುಮತಿ ನೀಡಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ (Delhi Excise Policy Case) ನಡೆದಿದೆ ಎನ್ನಲಾದ ಪ್ರಕರಣದಲ್ಲಿ ತಿಹಾರ ಜೈಲುಪಾಲಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರೀಗ ಸಿಬಿಐ ಕಸ್ಟಡಿಯಲ್ಲಿದ್ದಾರೆ. ಮೂರು ದಿನ ಸಿಬಿಐ ಕಸ್ಟಡಿಗೆ ವಹಿಸಿ ಬುಧವಾರ (ಜೂನ್‌ 26) ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ, ಅರವಿಂದ್‌ ಕೇಜ್ರಿವಾಲ್‌ ಅವರು ಕೋರ್ಟ್‌ಗೆ ವಿಶೇಷ ಮನವಿ ಮಾಡಿದ್ದಾರೆ. “ತಿಹಾರ ಜೈಲಿಗೆ ಹೋಗುವಾಗ ಪ್ಯಾಂಟ್‌ ಹಿಡಿದುಕೊಂಡೇ ಹೋಗಬೇಕಾಗಿದೆ. ಹಾಗಾಗಿ, ನನಗೊಂದು ಬೆಲ್ಟ್‌ ಬಳಸಲು ಅವಕಾಶ ಮಾಡಿಕೊಡಿ” ಎಂದು ಮನವಿ ಮಾಡಿದ್ದಾರೆ. ಇದಕ್ಕೆ ನ್ಯಾಯಾಲಯವು ಅನುಮತಿ ನೀಡಿದೆ.

ಅರವಿಂದ್‌ ಕೇಜ್ರಿವಾಲ್‌ ಅವರು ಸಿಬಿಐ ಕಸ್ಟಡಿಯಲ್ಲಿರುವಾಗ ಮನೆಯಿಂದ ತರುವ ಊಟ ಮಾಡಬಹುದು, ವೈದ್ಯರು ಸೂಚಿಸಿದ ಮಾತ್ರೆಗಳನ್ನು ಸೇವಿಸಬಹುದು ಹಾಗೂ ಪ್ರತಿ ದಿನ ಅರ್ಧ ಗಂಟೆ ಪತ್ನಿಯನ್ನು ಮತ್ತು ಇನ್ನರ್ಧ ಗಂಟೆ ವಕೀಲರನ್ನು ಭೇಟಿಯಾಗಬಹುದು ಎಂದು ಅನುಮತಿ ನೀಡಿದೆ. ಹಾಗೆಯೇ, ಓದಲು ಭಗವದ್ಗೀತೆ, ಒಂದು ಬೆಲ್ಟ್‌ ಬಳಕೆ ಮಾಡಲು ಕೂಡ ರೋಸ್‌ ಅವೆನ್ಯೂ ಕೋರ್ಟ್‌ ಸಮ್ಮತಿ ಸೂಚಿಸಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರು ಮನೆಯ ಊಟ ಸೇವಿಸಲು ಅನಮತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

Arvind Kejriwal

ಏನಿದು ಪ್ರಕರಣ?

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್‌ ಈ ಹಿಂದೆಯೇ ಆದೇಶಿಸಿತ್ತು. ಅದರಂತೆ ಅವರು ಜೈಲಿಗೆ ತೆರಳಿದ್ದರು.

ಇದನ್ನೂ ಓದಿ: Arvind Kejriwal : ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಸಿಬಿಐ

Continue Reading
Advertisement
Post of Additional DCM Those who speak before the media should go to the High Command and speak says DCM DK Shivakumar
ಕರ್ನಾಟಕ21 seconds ago

DK Shivakumar: ಹೆಚ್ಚುವರಿ ಡಿಸಿಎಂ ಹುದ್ದೆಗೆ ಹೈಕಮಾಂಡ್ ಬಳಿ ಹೋಗಲಿ; ಡಿ.ಕೆ. ಶಿವಕುಮಾರ್

Paris Olympics 2024
ಕ್ರೀಡೆ25 mins ago

Paris Olympics 2024 : ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ “ಇಂಡಿಯಾ ಹೌಸ್”

Viral Video
ವೈರಲ್ ನ್ಯೂಸ್29 mins ago

Viral Video: ಅಬ್ಬಾ.. ಎಂಥಾ ಕ್ರೌರ್ಯ! ಮಹಿಳೆ ಮೇಲೆ ಕಿಡಿಗೇಡಿಗಳಿಂದ ಇದೆಂಥಾ ದೌರ್ಜನ್ಯ-ವಿಡಿಯೋ ಇದೆ ನೋಡಿ

Jio Tariffs
ದೇಶ29 mins ago

Jio Tariffs: ಜಿಯೋ ಬಳಕೆದಾರರಿಗೆ ಬ್ಯಾಡ್‌ ನ್ಯೂಸ್;‌ ಶೇ.20ರಷ್ಟು ಶುಲ್ಕ ಹೆಚ್ಚಳ, ನೂತನ ದರಪಟ್ಟಿ ಇಲ್ಲಿದೆ

Internet Addiction
ಆರೋಗ್ಯ39 mins ago

Internet Addiction: ಈ 10 ಲಕ್ಷಣಗಳು ನಿಮ್ಮಲ್ಲಿದ್ದರೆ, ನೀವೂ ಇಂಟರ್ನೆಟ್‌ ಚಟಕ್ಕೆ ಬಿದ್ದಿದ್ದೀರಿ ಎಂದರ್ಥ!

Paris Olympics 2024
ಕ್ರೀಡೆ43 mins ago

Paris Olympics 2024: ಒಲಿಂಪಿಕ್ಸ್​ಗೆ ಅರ್ಹತೆ ಪಡೆದ​ ರಾಜ್ಯದ ಇಬ್ಬರು ಸ್ವಿಮ್ಮರ್​ಗಳು

Illegal ganja storage in Ballari Arrest of two accused Rs 19 10 lakh Valuable ganja seized
ಕರ್ನಾಟಕ1 hour ago

Ballari News: ಬಳ್ಳಾರಿಯಲ್ಲಿ ಅಕ್ರಮ ಗಾಂಜಾ ಸಂಗ್ರಹ; ಇಬ್ಬರು ಆರೋಪಿಗಳ ಬಂಧನ

Arvind Kejriwal
ದೇಶ1 hour ago

Arvind Kejriwal: ಪ್ಯಾಂಟ್‌ ಲೂಸ್‌ ಆಗಿದೆ, ಒಂದು ಬೆಲ್ಟ್‌ ಕೊಡಿ; ಕೋರ್ಟ್‌ಗೆ ಅರವಿಂದ್‌ ಕೇಜ್ರಿವಾಲ್‌ ಮನವಿ‌

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

Railway New Rules
Latest1 hour ago

Railway New Rules: ರೈಲು ಪ್ರಯಾಣಿಕರೇ, ಬರ್ತ್‌ನಲ್ಲಿ ಮಲಗುವ ಕುರಿತ ಈ ಹೊಸ ರೂಲ್ಸ್‌ ನೆನಪಿನಲ್ಲಿರಲಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ8 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌