Joe Biden: ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದ ಜೋ ಬೈಡೆನ್;‌ ಕಮಲಾ ಹ್ಯಾರಿಸ್‌ಗೆ ಚಾನ್ಸ್? - Vistara News

ವಿದೇಶ

Joe Biden: ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದ ಜೋ ಬೈಡೆನ್;‌ ಕಮಲಾ ಹ್ಯಾರಿಸ್‌ಗೆ ಚಾನ್ಸ್?

Joe Biden: ಅಮೆರಿಕ ಅಧ್ಯಕ್ಷನಾಗಿ ದೇಶದ ಏಳಿಗೆಗೆ ದುಡಿದಿದ್ದೇನೆ. ನಿಮ್ಮೆಲ್ಲರ ಅಧ್ಯಕ್ಷನಾಗಿ ಇಷ್ಟು ದಿನಗಳವರೆಗೆ ಸೇವೆ ಮಾಡಿದ್ದು ನನಗೆ ಖುಷಿಯಾಗಿದೆ. ಎರಡನೇ ಬಾರಿ ಆಯ್ಕೆಗೂ ನಾನು ಮನಸ್ಸು ಮಾಡಿದ್ದೆ. ಆದರೆ, ದೇಶ ಹಾಗೂ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ ಎಂಬುದಾಗಿ ಜೋ ಬೈಡೆನ್‌ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

Joe Biden
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ (US Presidential Election 2024) ದಿನಗಣನೆ ಆರಂಭವಾಗಿದೆ. ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಅಬ್ಬರದ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಗುಂಡಿನ ದಾಳಿಯ ಮಧ್ಯೆಯೂ ಅವರು ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಮಧ್ಯೆಯೇ, ಅಮೆರಿಕ ಅಧ್ಯಕ್ಷ, ಡೆಮಾಕ್ರಟಿಕ್‌ ಪಕ್ಷದ ಜೋ ಬೈಡೆನ್‌ (Joe Biden) ಅವರು ಚುನಾವಣೆ ರೇಸ್‌ನಿಂದಲೇ ಹಿಂದೆ ಸರಿದಿದ್ದಾರೆ. ಇದು ಅಮೆರಿಕ ಮಾತ್ರವಲ್ಲ, ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ.

ಹೌದು, ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿಯುವ ಕುರಿತು ಜೋ ಬೈಡೆನ್‌ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪತ್ರದ ಮೂಲಕ ಘೋಷಿಸಿದ್ದಾರೆ. “ನಾನು ಕಳೆದ ಮೂರುವರೆ ವರ್ಷಗಳಿಂದ ಅಮೆರಿಕ ಅಧ್ಯಕ್ಷನಾಗಿ, ದೇಶದ ಏಳಿಗೆಗೆ ದುಡಿದಿದ್ದೇನೆ. ನಿಮ್ಮೆಲ್ಲರ ಅಧ್ಯಕ್ಷನಾಗಿ ಸೇವೆ ಮಾಡಿದ್ದು ನನಗೆ ಖುಷಿಯಾಗಿದೆ. ಎರಡನೇ ಬಾರಿ ಆಯ್ಕೆಗೂ ನಾನು ಮನಸ್ಸು ಮಾಡಿದ್ದೆ. ಆದರೆ, ದೇಶ ಹಾಗೂ ಪಕ್ಷದ ಹಿತದೃಷ್ಟಿಯಿಂದಾಗಿ ನಾನು ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದಿದ್ದೇನೆ” ಎಂದು ಅವರು ಹೇಳಿದ್ದಾರೆ.

ಜೋ ಬೈಡೆನ್‌ ಅವರಿಗೆ ಇತ್ತೀಚೆಗೆ ಮರೆವು ಜಾಸ್ತಿಯಾಗಿದೆ. ಅಲ್ಲದೆ, 81 ವರ್ಷದ ಜೋ ಬೈಡೆನ್‌ ಅವರ ಮರು ಸ್ಪರ್ಧೆಗೆ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿತ್ತು. ಜಾಗತಿಕ ವೇದಿಕೆಗಳಲ್ಲಿ ಜೋ ಬೈಡೆನ್‌ ಅವರು ಮುಜುಗರ ಅನುಭವಿಸಿದ್ದರು. ಹಾಗಾಗಿ, ಅವರೇ ಸ್ಪರ್ಧೆಯಿಂದ ಹಿಂದೆ ಸರಿಯುವ ತೀರ್ಮಾನ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಇನ್ನು, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಅವರೇ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇವರು ಭಾರತ ಮೂಲದವರು ಎಂಬುದು ಗಮನಾರ್ಹವಾಗಿದೆ.

ಇತ್ತೀಚೆಗೆ ಹೆಚ್ಚಾದ ಮರೆವು

ಡೊನಾಲ್ಡ್‌ ಟ್ರಂಪ್‌ ಅವರಿಗೆ ಇತ್ತೀಚೆಗೆ ಮರೆವು ಜಾಸ್ತಿಯಾಗಿದೆ. ಕೆಲ ದಿನಗಳ ಹಿಂದೆ ನ್ಯಾಟೋ ಶೃಂಗಸಭೆ ನಡೆದಿದ್ದು, ಜಾಗತಿಕ ನಾಯಕರು ಭಾಗವಹಿಸಿದ್ದರು. ವೇದಿಕೆ ಮೇಲೆ ಭಾಷಣ ಮಾಡಿದ ಜೋ ಬೈಡೆನ್‌ ಅವರು ವೊಲೊಡಿಮಿರ್‌ ಜೆಲೆನ್‌ಸ್ಕಿ ಅವರನ್ನು ಸ್ವಾಗತಿಸಬೇಕಿತ್ತು. “ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್‌ಸ್ಕಿ ಅವರು ತುಂಬ ಧೈರ್ಯಶಾಲಿ” ಎಂದು ಇದೇ ವೇಳೆ ಬೈಡೆನ್‌ ಬಣ್ಣಿಸಿದರು. ಆದರೆ, ವೇದಿಕೆಗೆ ಆಹ್ವಾನಿಸುವ ವೇಳೆ ಅವರು ಪ್ರೆಸಿಡೆಂಟ್‌ ಪುಡಿನ್‌ ಅವರಿಗೆ ಸ್ವಾಗತ ಎಂದು ಹೇಳಿದ್ದು ಪ್ರಮಾದಕ್ಕೆ ಕಾರಣವಾಯಿತು. ಕೂಡಲೇ ಅವರು ಪ್ರಮಾದವನ್ನು ಸರಿಪಡಿಸಿಕೊಂಡರು. ವೇದಿಕೆ ಮೇಲೆಯೇ ಇದ್ದ ವೊಲೊಡಿಮಿರ್‌ ಜೆಲೆನ್‌ಸ್ಕಿ ಅವರು ಜೋ ಬೈಡೆನ್‌ ಪ್ರಮಾದದಿಂದ ನಕ್ಕು, ಮಾತನಾಡಿದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿತ್ತು.

ಕಮಲಾ ಹ್ಯಾರಿಸ್‌ ಅವರ ಹೆಸರು ಪ್ರಸ್ತಾಪಿಸುವ ವೇಳೆಯೂ ಜೋ ಬೈಡೆನ್‌ ನಗೆಪಾಟಲಿಗೀಡಾಗಿದ್ದರು. ವಾಷಿಂಗ್ಟನ್‌ನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡುವಾಗ, ಉಪಾಧ್ಯಕ್ಷೆ ಕಮಲಾ ಹ್ಯಾರೀಸ್‌ ಹೆಸರಿಗೆ ಬದಲಾಗಿ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೆಸರು ಪ್ರಸ್ತಾಪಿಸಿದ್ದರು.

ಇದನ್ನೂ ಓದಿ: Donald Trump: ಅಮೆರಿಕವೂ ಐರನ್ ಡೋಮ್ ಕ್ಷಿಪಣಿ ತಯಾರಿಸಲಿದೆ; ಡೊನಾಲ್ಡ್‌ ಟ್ರಂಪ್‌ ಸೂಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಟೆಹರಾನ್‌ನಲ್ಲಿ ವಿಮಾನ ಹಾರಾಟ ಪುನರಾರಂಭ: ಪಾಕ್‌ಗೆ ಆಗಮಿಸಿದ ಇರಾನ್‌ ನಿಯೋಗ: ಯುದ್ಧದ ಅಂತ್ಯದ ಮುನ್ಸೂಚನೆಯೇ ?

VISTARANEWS.COM


on

ಟೆಹರಾನ್‌: ಟೆಹರಾನ್‌ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾಣಿಜ್ಯ ವಿಮಾನಗಳ ಹಾರಾಟವನ್ನು ಇರಾನ್‌ ಇಂದಿನಿಂದ ಪುನರಾರಂಭಿಸಿದೆ. ಅಮೆರಿಕ-ಇಸ್ರೇಲ್‌ ವಿರುದ್ಧ ಯುದ್ಧ ಆರಂಭವಾಗದ ಆರಂಭವಾದ ಎರಡು ತಿಂಗಳ ನಂತರ ಇಂದು ವಿಮಾನಗಳು ಸಂಚಾರ ಆರಂಭಿಸಿವೆ. ಟೆಹರಾನ್‌ನ ಇಮಾಮ್ ಖಮೇನಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಸ್ತಾಂಬುಲ್, ಓಮನ್ ರಾಜಧಾನಿ ಮಸ್ಕತ್ ಮತ್ತು ಸೌದಿ ಅರೇಬಿಯಾದ ಮದೀನಾ ನಗರಗಳಿಗೆ ವಿಮಾನಗಳು ಪ್ರಯಣ ಬೆಳೆಸಿವೆ ಎಂದು ಇರಾನ್ ಸರ್ಕಾರಿ ಸ್ವಾಮ್ಯದ ಮಾಧ್ಯಮಗಳು ವರದಿ ಮಾಡಿವೆ.
ಇಂದು ಬೆಳಿಗ್ಗೆ ಇಸ್ತಾಂಬುಲ್‌ಗೆ ಮೂರು ವಿಮಾನಗಳು ಪ್ರಯಾಣ ಬೆಳೆಸಿವೆ ಎಂದು ಫ್ಲೈಟ್‌ ರಾಡಾರ್-24 ಮಾಹಿತಿ ಹಂಚಿಕೊಂಡಿದೆ.

ಪಾಕಿಸ್ತಾನ ತಲುಪಿದ ಇರಾನ್‌ ನಿಯೋಗ:
ಈ ಮಧ್ಯೆ ಪಾಕಿಸ್ತಾನಕ್ಕೆ ಭೇಟಿ ನೀಡಿರುವ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ನೇತೃತ್ವದ ನಿಯೋಗವು, ನಿನ್ನೆ ರಾತ್ರಿಯೇ ಇಸ್ಲಮಾಬಾದ್‌ ತಲುಪಿದೆ. ಇರಾನ್‌ ಸರ್ಕಾರದ ವಕ್ತಾರ ಇಸ್ಮಾಯಿಲ್ ಬುಕಾಯ್ ಹಾಗೂ ಇತರರು ನಿಯೋಗದಲ್ಲಿದ್ದಾರೆ. ಪ್ರಾದೇಶಿಕ ಶಾಂತಿಯನ್ನು ಉತ್ತೇಜಿಸುವ ಪ್ರಯತ್ನದ ಭಾಗವಾಗಿ ಪಾಕಿಸ್ತಾನದ ನಾಯಕರ ಜತೆ ಚರ್ಚೆ ನಡೆಸಲು ಈ ನಿಯೋಗ ಆಗಮಿಸಿದೆ ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಇಸ್ಮಾಯಿಲ್‌ ಬಕಾಯ್‌ ತಿಳಿಸಿದ್ದಾರೆ.
ಅಮೆರಿಕದೊಂದಿಗೆ ಯಾವುದೇ ಮಾತುಕತೆಗಳು ನಿಗದಿಯಾಗಿಲ್ಲ. ಅಮೆರಿಕದ ಜತೆ ನೇರ ಮಾತುಕತೆ ನಡೆಸಲೂ ಒಪ್ಪಿಕೊಂಡಿಲ್ಲ. ಇರಾನ್‌ ಮತ್ತು ಅಮೆರಿಕದ ನಡುವೆ ಯಾವುದೇ ಸಭೆ ನಿಗದಿಯಾಗಿಲ್ಲ. ಆದರೆ ಇರಾನ್‌ ಅಭಿಪ್ರಾಯವನ್ನು ಪಾಕಿಸ್ತಾನಕ್ಕೆ ತಿಳಿಸಲಾಗುವುದು ಎಂದು ಇರಾನ್ ವಿದೇಶಾಂಗ ಸಚಿವಾಲಯವು ಸ್ಪಷ್ಟಪಡಿಸಿದೆ.
ಅಮೆರಿಕ ಹೇರಿರುವ ಆಕ್ರಮಣಕಾರಿ ಯುದ್ಧವನ್ನು ಕೊನೆಗೊಳಿಸಲು ಮತ್ತು ನಮ್ಮ ಪ್ರದೇಶದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಪಾಕಿಸ್ತಾನ ನಡೆಸುತ್ತಿರುವ ಮಧ್ಯಸ್ಥಿಕೆ ಪ್ರಯತ್ನಗಳಿಗೆ ಪೂರಕವಾಗಿ ವಿದೇಶಾಂಗ ಸಚಿವ ಅರಾಘ್ಚಿ ಅವರು ಪಾಕ್‌ ಉನ್ನತ ಮಟ್ಟದ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ ಎಂದು ಬಕಾಯ್‌ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಹೇಳಿದ್ದಾರೆ.

Continue Reading

Latest

ಇಸ್ರೇಲ್ ದಾಳಿಗೆ ನಲುಗಿದ ಇರಾನ್ ಸರ್ವೋಚ್ಚ ನಾಯಕ! ಮುಖ ಸುಟ್ಟು ಮಾತನಾಡಲಾಗದ ಸ್ಥಿತಿಯಲ್ಲಿರುವ ಮೊಜ್ತಬಾ

VISTARANEWS.COM


on

ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯ ಸ್ಥಿತಿ ಮತ್ತು ಅವರು ಆಡಳಿತ ನಡೆಸುತ್ತಿರುವ ರೀತಿ ಅಂತರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಫೆಬ್ರವರಿ 28ರಂದು ನಡೆದ ಅಮೆರಿಕ-ಇಸ್ರೇಲಿ ವೈಮಾನಿಕ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರು, ಪ್ರಸ್ತುತ ‘ನಿಗೂಢ ನಾಯಕ’ನಾಗಿ ಉಳಿದಿದ್ದಾರೆ. ವರದಿಗಳ ಪ್ರಕಾರ, ದಾಳಿಯಲ್ಲಿ ಅವರ ಮುಖ ಮತ್ತು ತುಟಿಗಳು ತೀವ್ರವಾಗಿ ಸುಟ್ಟುಹೋಗಿದ್ದು, ಮಾತನಾಡಲು ಸಾಧ್ಯವಾಗದ ಸ್ಥಿತಿಯಲ್ಲಿದ್ದಾರೆ. ಸಾಮಾನ್ಯ ಸ್ಥಿತಿಗೆ ಮರಳಲು ಅವರಿಗೆ ಪ್ಲಾಸ್ಟಿಕ್ ಸರ್ಜರಿಯ ಅಗತ್ಯವಿದ್ದು, ಒಂದು ಕಾಲನ್ನು ಕಳೆದುಕೊಂಡಿರುವ ಅವರಿಗೆ ಕೃತಕ ಅಂಗ ಜೋಡಣೆ ಮಾಡಬೇಕಿದೆ.

ದೈಹಿಕವಾಗಿ ಅಶಕ್ತರಾಗಿರುವ ಮೊಜ್ತಬಾ ಅವರು ಇಂದು ‘ಕೈಬರಹದ ಚೀಟಿಗಳ’ ಮೂಲಕ ದೇಶದ ಆಡಳಿತ ನಡೆಸುತ್ತಿರುವುದು ಬೆಚ್ಚಿಬೀಳಿಸುವ ಸಂಗತಿಯಾಗಿದೆ. ಡಿಜಿಟಲ್ ಯುಗದಲ್ಲೂ ಭದ್ರತಾ ಕಾರಣಗಳಿಂದಾಗಿ ಅವರು ಯಾವುದೇ ತಂತ್ರಜ್ಞಾನ ಬಳಸದೆ, ಮೊಹರು ಮಾಡಿದ ಚೀಟಿಗಳ ಮೂಲಕ ಮಿಲಿಟರಿ ಕಮಾಂಡರ್‌ಗಳಿಗೆ ಆದೇಶ ನೀಡುತ್ತಿದ್ದಾರೆ. ಇಸ್ರೇಲ್ ತನ್ನನ್ನು ಪತ್ತೆಹಚ್ಚಿ ಕೊಲ್ಲಬಹುದು ಎಂಬ ಭೀತಿಯಿಂದ ಅವರು ಅತ್ಯಂತ ರಹಸ್ಯ ಸ್ಥಳದಲ್ಲಿದ್ದು, ದೇಶದ ಪ್ರಮುಖ ಸಚಿವರು ಅಥವಾ ಹಿರಿಯ ಅಧಿಕಾರಿಗಳಿಗೂ ಅವರ ಭೇಟಿಗೆ ಅವಕಾಶ ನೀಡಲಾಗುತ್ತಿಲ್ಲ. ಈ ನಿಗೂಢತೆಯು ಇರಾನ್ ಆಡಳಿತ ವ್ಯವಸ್ಥೆಯಲ್ಲಿ ಭಾರಿ ಗೊಂದಲ ಮೂಡಿಸಿದೆ.

ಸರ್ವೋಚ್ಚ ನಾಯಕ ಸಕ್ರಿಯವಾಗಿ ಲಭ್ಯವಿಲ್ಲದ ಕಾರಣ ಇರಾನ್ ನಾಯಕತ್ವದೊಳಗೆ ಬಿರುಕು ಮೂಡಿದೆ ಎಂದು ಹೇಳಲಾಗುತ್ತಿದೆ. ದೇಶದ ಪ್ರಮುಖ ನಿರ್ಧಾರಗಳನ್ನು ಪ್ರಸ್ತುತ ಮಿಲಿಟರಿ ನಾಯಕರು ತೆಗೆದುಕೊಳ್ಳುತ್ತಿದ್ದು, ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಮತ್ತು ವಿದೇಶಾಂಗ ಸಚಿವರು ಅಮೆರಿಕದೊಂದಿಗಿನ ಸಂಧಾನದ ವಿಚಾರದಲ್ಲಿ ಭಿನ್ನಾಭಿಪ್ರಾಯ ಎದುರಿಸುತ್ತಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ಮೊಜ್ತಬಾ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆಯೇ ಅಥವಾ ಇರಾನ್ ಸಂಪೂರ್ಣವಾಗಿ ಮಿಲಿಟರಿ ಆಡಳಿತಕ್ಕೆ ಒಳಗಾಗುತ್ತದೆಯೇ ಎಂಬುದು ಈಗ ಜಾಗತಿಕ ಮಟ್ಟದ ದೊಡ್ಡ ಪ್ರಶ್ನೆಯಾಗಿ ಉಳಿದಿದೆ.

Continue Reading

Latest

ಟ್ರಂಪ್ ಸೋಷಿಯಲ್ ಮೀಡಿಯಾದಲ್ಲಿ ಭಾರತಕ್ಕೆ ಅವಮಾನ: ಭಾರತ-ಚೀನಾ ‘ನರಕ’ ಎಂದ ಮೈಕೆಲ್ ಸ್ಯಾವೇಜ್ ಪೋಸ್ಟ್ ಹಂಚಿಕೊಂಡ ಅಧ್ಯಕ್ಷ

VISTARANEWS.COM


on

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಚೀನಾ ರಾಷ್ಟ್ರಗಳ ವಿರುದ್ಧ ಮತ್ತೊಮ್ಮೆ ವಿವಾದಾತ್ಮಕ ಧೋರಣೆ ತಳೆದಿದ್ದಾರೆ. ಅಮೆರಿಕದ ರಾಜಕೀಯ ನಿರೂಪಕ ಮೈಕೆಲ್ ಸ್ಯಾವೇಜ್ ಅವರ ‘ಜನಾಂಗೀಯ ನಿಂದನೆ’ಯಿಂದ ಕೂಡಿದ ಪಾಡ್‌ಕಾಸ್ಟ್ ಅನ್ನು ಟ್ರಂಪ್ ತಮ್ಮ ‘ಟ್ರೂತ್ ಸೋಶಿಯಲ್’ ಪ್ಲಾಟ್‌ಫಾರ್ಮ್‌ನಲ್ಲಿ ಮರುಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಸ್ಯಾವೇಜ್, ಭಾರತ ಮತ್ತು ಚೀನಾವನ್ನು “ಭೂಮಿಯ ಮೇಲಿನ ನರಕಗಳು” ಎಂದು ಬಣ್ಣಿಸಿದ್ದು, ಈ ದೇಶಗಳ ಜನರು ಕೇವಲ ಪೌರತ್ವ ಪಡೆಯುವ ಉದ್ದೇಶದಿಂದ ಅಮೆರಿಕಕ್ಕೆ ಬರುತ್ತಾರೆ ಎಂದು ಹೀಯಾಳಿಸಿದ್ದಾರೆ. ಇದು ಅನಿವಾಸಿ ಭಾರತೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಮೈಕೆಲ್ ಸ್ಯಾವೇಜ್ ತಮ್ಮ ಹೇಳಿಕೆಯಲ್ಲಿ, ಏಷ್ಯಾದ ರಾಷ್ಟ್ರಗಳ ಗರ್ಭಿಣಿಯರು “ಒಂಬತ್ತನೇ ತಿಂಗಳಲ್ಲಿ ಮಗುವನ್ನು ಹಡೆಯಲು” ಅಮೆರಿಕಕ್ಕೆ ಬರುತ್ತಾರೆ ಮತ್ತು ಇಲ್ಲಿ ಮಗು ಜನಿಸಿದ ತಕ್ಷಣ ಅಮೆರಿಕದ ನಾಗರಿಕರನ್ನಾಗಿ ಮಾಡಲಾಗುತ್ತದೆ. ನಂತರ ಅವರು ತಮ್ಮ ಇಡೀ ಕುಟುಂಬವನ್ನು “ಭಾರತ ಅಥವಾ ಚೀನಾದಂತಹ ನರಕದಿಂದ” ಇಲ್ಲಿಗೆ ಕರೆತರುತ್ತಾರೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ, ಭಾರತೀಯ ವಲಸಿಗರನ್ನು “ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು” ಎಂದು ಕರೆದಿರುವ ಅವರು, ಈ ವಲಸಿಗರು ಅಮೆರಿಕದ ಧ್ವಜದ ಮೇಲೆ ಕಾಲಿಟ್ಟಿದ್ದಾರೆ ಮತ್ತು ದೇಶವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಅತಿರೇಕದ ಜನಾಂಗೀಯ ಕಾಮೆಂಟ್ ಮಾಡಿದ್ದಾರೆ.

ಈ ಬೆಳವಣಿಗೆಯು ಟ್ರಂಪ್ ಅವರ ‘ಜನ್ಮಸಿದ್ಧ ಪೌರತ್ವ’ (Birthright Citizenship) ರದ್ದತಿ ಅಭಿಯಾನದ ಭಾಗವಾಗಿದೆ. ಅಮೆರಿಕದ ಸಂವಿಧಾನದ 14ನೇ ತಿದ್ದುಪಡಿಯ ಅಡಿಯಲ್ಲಿ ನೆಲದಲ್ಲಿ ಜನಿಸಿದವರಿಗೆ ಸಿಗುವ ಸ್ವಯಂಚಾಲಿತ ಪೌರತ್ವವನ್ನು ಕೊನೆಗೊಳಿಸಲು ಟ್ರಂಪ್ ಕಾರ್ಯಕಾರಿ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಈ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿದ್ದು, ಟ್ರಂಪ್ ಸುಳ್ಳು ಮಾಹಿತಿಗಳನ್ನು ಹಂಚಿಕೊಳ್ಳುವ ಮೂಲಕ ಜನರನ್ನು ದಾರಿತಪ್ಪಿಸುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಜಗತ್ತಿನಲ್ಲಿ ಅಮೆರಿಕ ಮಾತ್ರ ಪೌರತ್ವ ನೀಡುತ್ತದೆ ಎಂದು ಟ್ರಂಪ್ ಹೇಳಿದ್ದರೂ, ವಾಸ್ತವದಲ್ಲಿ ಕೆನಡಾ, ಮೆಕ್ಸಿಕೋ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ದೇಶಗಳಲ್ಲಿ ಈ ಕಾನೂನು ಜಾರಿಯಲ್ಲಿದೆ.

Continue Reading

Latest

ನೇಪಾಳದಲ್ಲಿ ‘ರ‍್ಯಾಪರ್’ ಪ್ರಧಾನಿ ಬಾಲೆನ್ ಶಾ ಕ್ರಾಂತಿ: ಭ್ರಷ್ಟಾಚಾರಕ್ಕೆ ಜಾಗವಿಲ್ಲ, ಆರೋಪ ಕೇಳಿಬಂದ 26 ದಿನಕ್ಕೇ ಇಬ್ಬರು ಸಚಿವರ ಔಟ್!

VISTARANEWS.COM


on

ಕಠ್ಮಂಡು: ದಕ್ಷಿಣ ಏಷ್ಯಾದ ರಾಜಕಾರಣದಲ್ಲಿ ಹಿರಿಯ ನಾಯಕರ ನಡುವೆ 35 ವರ್ಷದ ಯುವ ರ‍್ಯಾಪರ್-ರಾಜಕಾರಣಿ ಬಾಲೆನ್ ಶಾ (Balen Shah) ಹೊಸ ಮನ್ವಂತರ ಸೃಷ್ಟಿಸುತ್ತಿದ್ದಾರೆ. ನೇಪಾಳದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಕೇವಲ ಒಂದು ತಿಂಗಳೊಳಗೆ, ತಮ್ಮ ಆಡಳಿತದಲ್ಲಿ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತಕ್ಕೆ ಕಿಂಚಿತ್ತೂ ಅವಕಾಶವಿಲ್ಲ ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ. ಮಂತ್ರಿಗಳ ಮೇಲೆ ಸಣ್ಣ ಆರೋಪ ಕೇಳಿಬಂದರೂ ಸಹನೆ ತೋರದೆ, ಕೇವಲ 26 ದಿನಗಳ ಅವಧಿಯಲ್ಲಿ ಇಬ್ಬರು ಪ್ರಭಾವಿ ಸಚಿವರ ರಾಜೀನಾಮೆ ಪಡೆಯುವ ಮೂಲಕ ಬಾಲೆನ್ ಶಾ ಭಾರತದಂತಹ ನೆರೆರಾಷ್ಟ್ರಗಳ ರಾಜಕಾರಣಿಗಳಿಗೂ ಮಾದರಿ ಎನಿಸುವಂತಹ ಕಠಿಣ ಸಂದೇಶ ರವಾನಿಸಿದ್ದಾರೆ.

ಸಾಮಾನ್ಯವಾಗಿ ರಾಜಕೀಯದಲ್ಲಿ ಆರೋಪಗಳು ಕೇಳಿಬಂದಾಗ ನಾಯಕರು ತಮ್ಮ ಸಚಿವರನ್ನು ಸಮರ್ಥಿಸಿಕೊಳ್ಳುವುದು ಅಥವಾ ತನಿಖೆ ಮುಗಿಯುವವರೆಗೆ ಕಾಯುವುದು ವಾಡಿಕೆ. ಆದರೆ ಬಾಲೆನ್ ಶಾ ಸರ್ಕಾರದಲ್ಲಿ ‘ನೈತಿಕತೆ’ಗೆ ಮೊದಲ ಆದ್ಯತೆ ನೀಡಲಾಗಿದೆ. ತಮ್ಮ ಕಚೇರಿಯನ್ನು ದುರುಪಯೋಗಪಡಿಸಿಕೊಂಡ ಆರೋಪ ಎದುರಿಸಿದ ಕಾರ್ಮಿಕ ಸಚಿವ ದೀಪಕ್ ಕುಮಾರ್ ಸಾ ಅವರನ್ನು ಪ್ರಮಾಣವಚನ ಸ್ವೀಕರಿಸಿದ ಕೇವಲ 13 ದಿನಕ್ಕೆ ವಜಾಗೊಳಿಸಲಾಯಿತು. ಅದರ ಬೆನ್ನಲ್ಲೇ, ವೈಯಕ್ತಿಕ ವ್ಯವಹಾರಗಳ ಬಗ್ಗೆ ಪ್ರಶ್ನೆ ಎದುರಾದಾಗ ಗೃಹ ಸಚಿವ ಸುಡಾನ್ ಗುರುಂಗ್ ಅವರೇ ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಿದ್ದು, “ಸ್ಥಾನಕ್ಕಿಂತ ನೈತಿಕತೆ ದೊಡ್ಡದು” ಎಂಬ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಇದು ಅಧಿಕಾರಕ್ಕಾಗಿ ಅಂಟಿ ಕುಳಿತುಕೊಳ್ಳುವ ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆಯ ಮುನ್ಸೂಚನೆಯಾಗಿದೆ.

ಬಾಲೆನ್ ಶಾ ನೇತೃತ್ವದ ರಾಷ್ಟ್ರೀಯ ಸ್ವತಂತ್ರ ಪಕ್ಷವು (RSP) ಜನರಲ್ಲಿ ಸುಧಾರಣೆಯ ಭರವಸೆ ಮೂಡಿಸಿದ್ದರೂ, ಪ್ರಸ್ತುತ ದೇಶವು ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದೆ. ಇಂಧನ ಬೆಲೆ ಏರಿಕೆ ಮತ್ತು ಭಾರತದ ಗಡಿಯಿಂದ ಬರುವ ಸರಕುಗಳ ಮೇಲಿನ ಕಟ್ಟುನಿಟ್ಟಿನ ಸುಂಕದ ನೀತಿ ಜನರಲ್ಲಿ ಅಸಮಾಧಾನ ಮೂಡಿಸಿರುವುದು ನಿಜ. ಆದರೆ, ಆಡಳಿತದಲ್ಲಿ ಪಾರದರ್ಶಕತೆ ತರಲು ಅವರು ತೋರುತ್ತಿರುವ ಧೈರ್ಯ ಮತ್ತು ಭ್ರಷ್ಟರನ್ನು ತಕ್ಷಣವೇ ಸಂಪುಟದಿಂದ ಹೊರಹಾಕುವ ಅವರ “ಝೀರೋ ಟಾಲರೆನ್ಸ್” ನೀತಿ ಯುವ ಪೀಳಿಗೆಯ ಮೆಚ್ಚುಗೆಗೆ ಪಾತ್ರವಾಗಿದೆ. ಹಳೆಯ ರಾಜಕೀಯ ವ್ಯವಸ್ಥೆಯನ್ನು ಬುಡಮೇಲು ಮಾಡಿ ಸ್ವಚ್ಛ ಆಡಳಿತ ನೀಡಲು ಹೊರಟಿರುವ ಈ Gen Z ನಾಯಕನ ನಡೆ ಈಗ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ.

Continue Reading
Advertisement
Latest4 minutes ago

ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್‌ ವಿರುದ್ಧ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ

Latest58 minutes ago

ಟೆಹರಾನ್‌ನಲ್ಲಿ ವಿಮಾನ ಹಾರಾಟ ಪುನರಾರಂಭ: ಪಾಕ್‌ಗೆ ಆಗಮಿಸಿದ ಇರಾನ್‌ ನಿಯೋಗ: ಯುದ್ಧದ ಅಂತ್ಯದ ಮುನ್ಸೂಚನೆಯೇ ?

Latest2 hours ago

ಪರಮಾಣು ಶಸ್ತ್ರಾಸ್ತ್ರಗಳು ಶಾಂತಿಯ ಉದ್ದೇಶಕ್ಕೆ ಬಳಕೆಯಾಗಲಿ: ವಿಶ್ವಸಂಸ್ಥೆ ಕಳಕಳಿ

Latest2 hours ago

ರಾಜಕುಮಾರ್‌ ಸಮಾಧಿಗೆ ಭೂಮಿ: ವಿವಾದ ಹುಟ್ಟು ಹಾಕಿದ ನಟ ಚೇತನ್‌ ವಿರುದ್ಧ ಅಭಿಮಾನಿಗಳ ಆಕ್ರೋಶ; ದೂರು ದಾಖಲು

Latest3 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಅನರ್ಹತೆ ಭೀತಿ; ಶಿಕ್ಷೆ ರದ್ದುಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಶಾಸಕ ವಿನಯ್‌ ಕುಲಕರ್ಣಿ

Latest3 hours ago

ಕಲಬುರಗಿ ಜಿಲ್ಲೆಯ ಮಕ್ಕಳನ್ನು ಅವಮಾನಿಸಬೇಡಿ, ಅವರೂ ಬುದ್ದಿವಂತರು; ಬಿಜೆಪಿ ಮುಖಂಡರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು

Latest3 hours ago

ಕಾಂತಾರ ಚಾಪ್ಟರ್‌-1 ಮಿಮಿಕ್ರಿ: ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೇಲಿನ ಪ್ರಕರಣ ಇತ್ಯರ್ಥ; ಕೋರ್ಟ್‌ ಆದೇಶವೇನು?

Latest4 hours ago

ಒಳಮೀಸಲಾತಿ ಜಾರಿ: ಕೊಟ್ಟ ಮಾತು ಈಡೇರಿಸಿದ ದಲಿತರಾಮಯ್ಯ; ಸಚಿವ ಆರ್.ಬಿ. ತಿಮ್ಮಾಪುರ

Latest4 hours ago

ಒಳ ಮೀಸಲಾತಿಯಿಂದ ಅನ್ಯಾಯ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೋರಾಟ; ಬಿಜೆಪಿ ಘೋಷಣೆ

Latest5 hours ago

ದೆಹಲಿಯಲ್ಲಿ ಬೀಡುಬಿಟ್ಟ ಡಿಕೆ ಶಿವಕುಮಾರ್;‌ ಪ್ರತಿತಂತ್ರ ಹೆಣೆಯುತ್ತಿರುವ ಸಿದ್ದರಾಮಯ್ಯ ಟೀಂ; ಮುಂದುವರೆದ ಹಾವು ಏಣಿಯಾಟ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌