ವಾಷಿಂಗ್ಟನ್: ನವೆಂಬರ್‌ನಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ (US Presidential Election 2024) ದಿನಾಂಕ ನಿಗದಿಯಾಗಿರುವ ಬೆನ್ನಲ್ಲೇ ಹಾಲಿ ಅಧ್ಯಕ್ಷ, ಡೆಮಾಕ್ರಟಿಕ್ ಪಕ್ಷದ ಜೋ ಬೈಡೆನ್ (Joe Biden) ಅವರು ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ದೇಶ ಹಾಗೂ ಪಕ್ಷದ ಹಿತಕ್ಕಾಗಿ ಅವರು ಚುನಾವಣೆಯಿಂದ ಹಿಂದೆ ಸರಿದಿರುವುದಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲ, “ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ (Kamala Harris) ಅವರು ಉತ್ತಮ ಆಯ್ಕೆ” ಎಂದು ಕೂಡ ಹೇಳಿದ್ದಾರೆ. ಆ ಮೂಲಕ ಎಲ್ಲವೂ ಅಂದುಕೊಂಡಂತೆ ಆದರೆ, ಅಮೆರಿಕಕ್ಕೆ ಭಾರತ ಮೂಲದ ಕಮಲಾ ಹ್ಯಾರಿಸ್ ಅವರು ಅಧ್ಯಕ್ಷೆಯಾಗಲಿದ್ದಾರೆ. ಕಪ್ಪುವರ್ಣಿಯ ಕಮಲಾ ಹ್ಯಾರಿಸ್ ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಮೊದಲ ಏಷ್ಯಾ ಮೂಲಕ ಮಹಿಳೆ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಹಾಗಿದ್ದರೆ ಕಮಲಾ ಹ್ಯಾರಿಸ್ ಅವರ ಹಿನ್ನೆಲೆ ಏನು? ಇಲ್ಲಿ ಕಂಪ್ಲೀಟ್ ಡಿಟೇಲ್ಸ್
ಕಮಲಾ ಹ್ಯಾರಿಸ್ ಮೂಲತಃ ಭಾರತದವರು. ಅವರ ತಾಯಿ ಹುಟ್ಟಿದ್ದು ತಮಿಳುನಾಡಿನ ಚೆನ್ನೈನಲ್ಲಿ. ಬಳಿಕ ಯುಎಸ್ಗೆ ತೆರಳಿ, ಅಲ್ಲಿನವರನ್ನೇ ಮದುವೆಯಾಗಿ ನೆಲೆಸಿದ್ದರು. ಯುಎಸ್ ಉಪಾಧ್ಯಕ್ಷೆ ಸ್ಥಾನಕ್ಕೆ ಏರಿದ ಮೊದಲ ಭಾರತೀಯ ಮೂಲದ ಮಹಿಳೆ ಎಂಬ ಹೆಗ್ಗಳಿಕೆಗೂ ಕಮಲಾ ಹ್ಯಾರಿಸ್ ಪಾತ್ರರಾಗಿದ್ದಾರೆ. ಅವರು ಯುಎಸ್ ಉಪಾಧ್ಯಕ್ಷ ಚುನಾವಣೆಯಲ್ಲಿ ಗೆದ್ದಾಗ ಚೆನ್ನೈನಲ್ಲಿರುವ ಅವರ ಪೂರ್ವಜರ ಊರಿನಲ್ಲಿ ಭರ್ಜರಿ ಸಂಭ್ರಮ ಏರ್ಪಟ್ಟಿತ್ತು. ಸಿಹಿ ವಿತರಣೆಯೂ ನಡೆದಿತ್ತು.
ಅಮೆರಿಕದ ಉಪಾಧ್ಯಕ್ಷ ಸ್ಥಾನದ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿರುವ ಕಮಲಾದೇವಿ ಹ್ಯಾರಿಸ್ ಅವರ ತಂದೆ ಜಮೈಕಾ ಮೂಲದವರಾದರೆ ತಾಯಿ ಭಾರತೀಯ ಮೂಲದವರು. ಉನ್ನತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿರುವ ಕಮಲಾ, ಪೊಲೀಸ್ ವ್ಯವಸ್ಥೆಯಲ್ಲಿ ಗಮನಾರ್ಹ ಸುಧಾರಣೆ ತಂದು ಗಮನ ಸೆಳೆದರು. ನಂತರ ರಾಜಕೀಯ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಿದ ಕಮಲಾದೇವಿ ಹ್ಯಾರಿಸ್, 2020ರಲ್ಲಿ ಅಮೆರಿಕದ ಉಪಾಧ್ಯಕ್ಷ ಚುನಾವಣೆಯಲ್ಲಿ ರಿಪಬ್ಲಿಕ್ ಪಕ್ಷದ ಮೈಕ್ ಪೆನ್ಸೆ ಅವರ ವಿರುದ್ಧ ಅಭೂತಪೂರ್ವ ಗೆಲುವು ಸಾಧಿಸಿದ್ದರು.
ಭಾರತೀಯ ಮೂಲದ ಯುಎಸ್ ಉಪಾಧ್ಯಕ್ಷ ಕಮಲಾ ಹ್ಯಾರಿಸ್ ಕೂಡ ಮೂಲದ ಪ್ರಮುಖ ನಾಯಕರಲ್ಲಿ ಒಬ್ಬರು. 2021 ರಲ್ಲಿ ಅಧ್ಯಕ್ಷ ಜೋ ಬೈಡೆನ್ ಅವರ ಅನಾರೋಗ್ಯದ ಕಾರಣ, ಕಮಲಾ ಅವರಿಗೆ ಯುಎಸ್ ಅಧ್ಯಕ್ಷ ಸ್ಥಾನದ ಅಧಿಕಾರವನ್ನು 85 ನಿಮಿಷಗಳ ಕಾಲ ನೀಡಲಾಯಿತು. ಇದರೊಂದಿಗೆ ಕಮಲಾ ಹ್ಯಾರಿಸ್ ಅವರು ಅಮೆರಿಕದ ಇತಿಹಾಸದಲ್ಲಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಮೊದಲ ಮಹಿಳೆಯಾಗಿದ್ದಾರೆ.
I will do everything in my power to unite the Democratic Party—and unite our nation—to defeat Donald Trump and his extreme Project 2025 agenda. If you’re with me, add a donation right now.https://t.co/xpPDkCRhoZ
— Kamala Harris (@KamalaHarris) July 21, 2024
ಕಮಲಾ ಹ್ಯಾರಿಸ್ ಅವರ ತಾತ ಪಿವಿ ಗೋಪಾಲನ್ ಭಾರತದ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಪ್ರಜಾಪ್ರಭುತ್ವದ ಪ್ರಬಲ ಪ್ರತಿಪಾದಕರಾಗಿದ್ದವರು. ಈ ಹಿಂದೆಯೊಮ್ಮೆ ಅವರ ಬಗ್ಗೆ ಮಾತನಾಡಿದ್ದ ಕಮಲಾ ಹ್ಯಾರಿಸ್, ತಮ್ಮ ತಾತನೇ ತಮ್ಮ ರಾಜಕೀಯ ಗುರು ಎಂದಿದ್ದರು. “ನನ್ನಲ್ಲಿ ವಿಶ್ವ ಕಲ್ಯಾಣದ ಬದ್ಧತೆ ಮೂಡಿಸಿದ ಪಿವಿ ಗೋಪಾಲನ್ ಅವರೇ ನನ್ನ ಮೊದಲ ರಾಜಕೀಯ ಗುರು ಎಂದು ಕಮಲಾ ಹ್ಯಾರಿಸ್ ಹೇಳಿದ್ದಾರೆ. ಭಾರತದಲ್ಲಿ ಕಳೆದ ಬಾಲ್ಯದ ದಿನಗಳು ನನ್ನನ್ನು ಇಲ್ಲಿಯವರೆಗೂ ಕೈ ಹಿಡಿದು ನಡೆಸಿಕೊಂಡು ಬಂದಿದೆ. ಚೆನ್ನೈನ ಕಡಲತೀರದಲ್ಲಿ ನನ್ನ ತಾತ ನನ್ನನ್ನು ಬೆಳಗಿನ ವಾಕಿಂಗ್‌ಗೆ ಕರೆದುಕೊಂಡು ಹೋಗುತ್ತಿದ್ದರು. ಆ ಸಮಯದಲ್ಲಿ ಪ್ರಜಾಪ್ರಭುತ್ವದ ಮಹತ್ವ ಹಾಗೂ ಎಲ್ಲರನ್ನೂ ಸಮಾನವಾಗಿ ಕಾಣುವ ಗುಣಗಳನ್ನು ನನ್ನಲ್ಲಿ ಬಿತ್ತಿದರು ಎಂದು ಕಮಲಾ ಹ್ಯಾರಿಸ್ ಹೇಳಿದ್ದರು.
ಇದನ್ನೂ ಓದಿ: Donald Trump: ಬೈಡೆನ್ ಅತಿ ಕೆಟ್ಟ ಅಧ್ಯಕ್ಷ, ಕಮಲಾ ಹ್ಯಾರಿಸ್‌ರನ್ನು ಸೋಲಿಸುವೆ; ಡೊನಾಲ್ಡ್ ಟ್ರಂಪ್ ವಿಶ್ವಾಸ