Bangladesh Protest: ಶೇಖ್‌ ಹಸೀನಾ ರಾಜೀನಾಮೆ ಬೆನ್ನಲ್ಲೇ ರಾಜಕೀಯ ಶತ್ರು ಖಲೇದಾ ಜಿಯಾ ರಿಲೀಸ್‌ಗೆ ಆದೇಶ! - Vistara News

ವಿದೇಶ

Bangladesh Protest: ಶೇಖ್‌ ಹಸೀನಾ ರಾಜೀನಾಮೆ ಬೆನ್ನಲ್ಲೇ ರಾಜಕೀಯ ಶತ್ರು ಖಲೇದಾ ಜಿಯಾ ರಿಲೀಸ್‌ಗೆ ಆದೇಶ!

Bangladesh Protest: ಖಲೇದಾ ಜಿಯಾ ಅವರನ್ನು ಜೈಲಿನಿಂದ ಕೂಡಲೇ ಬಿಡುಗಡೆ ಮಾಡಬೇಕು ಎಂದು ಬಾಂಗ್ಲಾದೇಶ ಅಧ್ಯಕ್ಷ ಮೊಹಮ್ಮದ್‌ ಶಹಾಬುದ್ದೀನ್‌ ಆದೇಶ ಹೊರಡಿಸಿದ್ದಾರೆ. ಬೇಗಂ ಖಲೇದಾ ಜಿಯಾ ಅವರು ಬಾಂಗ್ಲಾದೇಶದ ಪ್ರತಿಪಕ್ಷವಾದ ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಕ್ಷದ (BNP) ಅಧ್ಯಕ್ಷೆಯೂ ಆಗಿದ್ದಾರೆ.

VISTARANEWS.COM


on

Bangladesh Protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ಬಾಂಗ್ಲಾದೇಶದಲ್ಲಿ ಕಳೆದ 15 ವರ್ಷಗಳಿಂದ ಅಧಿಕಾರದ ಗದ್ದುಗೆ ಹಿಡಿದಿದ್ದ ಶೇಖ್‌ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೀಸಲಾತಿ ವಿಷಯಕ್ಕೆ ಸಂಬಂಧಿಸಿದ ಪ್ರತಿಭಟನೆಯು (Bangladesh Protest) ದೇಶಾದ್ಯಂತ ಹಿಂಸಾರೂಪ ತಾಳಿದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ ಶೇಖ್‌ ಹಸೀನಾ (Sheik Hasina) ಅವರು ಪ್ರಾಣಭಯದ ಹಿನ್ನೆಲೆಯಲ್ಲಿ ಭಾರತಕ್ಕೆ ಬಂದಿದ್ದಾರೆ. ಇದರ ಬೆನ್ನಲ್ಲೇ, ಶೇಖ್‌ ಹಸೀನಾ ಅವರ ರಾಜಕೀಯ ಪ್ರತಿಸ್ಪರ್ಧಿ, ಪ್ರತಿಪಕ್ಷ ನಾಯಕಿ, ಮಾಜಿ ಪ್ರಧಾನಿಯೂ ಆದ ಖಲೇದಾ ಜಿಯಾ (Khaleda Zia) ಅವರನ್ನು ಬಿಡುಗಡೆಗೆ ಆದೇಶಿಸಲಾಗಿದೆ.

ಖಲೇದಾ ಜಿಯಾ ಅವರನ್ನು ಜೈಲಿನಿಂದ ಕೂಡಲೇ ಬಿಡುಗಡೆ ಮಾಡಬೇಕು ಎಂದು ಬಾಂಗ್ಲಾದೇಶ ಅಧ್ಯಕ್ಷ ಮೊಹಮ್ಮದ್‌ ಶಹಾಬುದ್ದೀನ್‌ ಆದೇಶ ಹೊರಡಿಸಿದ್ದಾರೆ. ಬೇಗಂ ಖಲೇದಾ ಜಿಯಾ ಅವರು ಬಾಂಗ್ಲಾದೇಶದ ಪ್ರತಿಪಕ್ಷವಾದ ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಕ್ಷದ (BNP) ಅಧ್ಯಕ್ಷೆಯೂ ಆಗಿದ್ದಾರೆ. ಹಾಗಾಗಿ, ಇನ್ನು ಬಾಂಗ್ಲಾದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಲಿವೆ ಎಂದು ತಿಳಿದುಬಂದಿದೆ.

ಬೇಗಂ ಖಲೇದಾ ಜಿಯಾ ಅವರು 1991ರಲ್ಲಿ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು. ಅವರ ಪತಿ ಜಿಯಾವುರ್‌ ರೆಹಮಾನ್‌ ಅವರನ್ನು ಹತ್ಯೆಗೈದ ಬಳಿಕ ಜಿಯಾ ರಾಜಕೀಯಕ್ಕೆ ಪದಾರ್ಪಣೆ ಮಾಡಿದ್ದಾರೆ. ಜಿಯಾವುರ್‌ ರೆಹಮಾನ್‌ ಅವರು 1977ರಿಂದ 1981ರವರೆಗೆ ಬಾಂಗ್ಲಾದೇಶದ ಅಧ್ಯಕ್ಷರಾಗಿದ್ದರು. ಇವರು ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಾರ್ಟಿಯ್ನು 1978ರಲ್ಲಿ ಸ್ಥಾಪಿಸಿದ್ದರು.

ಗಲಭೆ ಹಿಂದೆ ಪಾಕಿಸ್ತಾನದ ಕುತಂತ್ರ?

ಬಾಂಗ್ಲಾದೇಶದಲ್ಲಿ ಜಮಾತ್‌-ಎ-ಇಸ್ಲಾಮಿ ಎಂಬ ನಿಷೇಧಿತ ಸಂಘಟನೆಯ ವಿದ್ಯಾರ್ಥಿ ಘಟಕವಾಗಿರುವ ಛತ್ರಾ ಶಿಬಿರ್‌ ಎಂಬ ಸಂಘಟನೆಗೆ ಪಾಕಿಸ್ತಾನದ ಐಎಸ್‌ಐ ಬೆಂಬಲ ಇದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ವಿಮೋಚನೆ ಹೋರಾಟದ ವೇಳೆ ಭಾಗಿಯಾದವರ ಕುಟುಂಬಸ್ಥರಿಗೆ ನೀಡುವ ಮೀಸಲಾತಿಯನ್ನು ಶೇ.5ಕ್ಕೆ ಇಳಿಸಿದರೂ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯ ಹಿಂದಿರುವ ಪ್ರಮುಖ ವಿದ್ಯಾರ್ಥಿ ಸಂಘಟನೆಗಳಲ್ಲಿ ಛತ್ರಾ ಶಿಬಿರ್‌ ಎಂಬ ಸಂಘಟನೆಯ ಪಾತ್ರ ಪ್ರಮುಖವಾಗಿದೆ. ಇದಕ್ಕೆ ಪಾಕಿಸ್ತಾನವು ಹಣಕಾಸು ನೆರವು ಕೂಡ ನೀಡುತ್ತಿದೆ ಎಂದು ತಿಳಿದುಬಂದಿದೆ.

ಶೇಖ್‌ ಹಸೀನಾ ಅವರು ಕಳೆದ 15 ವರ್ಷಗಳಿಂದ ಬಾಂಗ್ಲಾದೇಶದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅವರು ರಾಷ್ಟ್ರೀಯವಾದದಲ್ಲಿ ನಂಬಿಕೆ ಇರಿಸಿರುವುದರ ಜತೆಗೆ ಜನರ ಬೆಂಬಲ ಗಳಿಸಿದ್ದಾರೆ. ಬಡತನ ಪ್ರಮಾಣವನ್ನು ಶೇ.5ಕ್ಕೆ ಇಳಿಸಿದ್ದಾರೆ. ಇದರ ಜತೆಗೆ ಭಾರತದ ಜತೆ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದಿದ್ದಾರೆ. ಮೇಲಾಗಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದನ್ನು ಸಹಿಸದ ಪಾಕಿಸ್ತಾನವು, ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಾರ್ಟಿಯು ಅಧಿಕಾರಕ್ಕೆ ಬರಬೇಕು ಎಂಬುದು ಪಾಕಿಸ್ತಾನದ ಕುತಂತ್ರವಾಗಿದೆ. ಇದಕ್ಕಾಗಿ ಹಿಂಸೆಗೆ ಪ್ರಚೋದನೆ ನೀಡುತ್ತಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Bangladesh Protest: ಬಾಂಗ್ಲಾದೇಶ ಹಿಂಸಾಚಾರ ಕುರಿತು ಮೋದಿ ಮಹತ್ವದ ಸಭೆ; ಚರ್ಚಿಸಿದ ವಿಷಯಗಳೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Mashrafe Mortaza : ಕ್ರಿಕೆಟರ್ ಮುಶ್ರಫೆ ಮೊರ್ತಾಜಾ ಮನೆಗೆ ಬೆಂಕಿ ಹಚ್ಚಿದ ಬಾಂಗ್ಲಾದೇಶದ ಪ್ರತಿಭಟನಾಕಾರರು

Mashrafe Mortaza :

VISTARANEWS.COM


on

Mashrafe Mortaza
Koo

ಬೆಂಗಳೂರು: ಬಾಂಗ್ಲಾದೇಶದ ಮಾಜಿ ಕ್ರಿಕೆಟ್ ನಾಯಕ ಮಶ್ರಫೆ ಬಿನ್ ಮೊರ್ತಾಜಾ ಅವರ ಮನೆಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ಸೋಮವಾರ ದೇಶವನ್ನು ತೊರೆದ ನಂತರ ದೇಶದಲ್ಲಿ ಹಿಂಸಾಚಾರ ಮತ್ತು ಗೊಂದಲ ಮುಂದುವರೆದಿದೆ. ಖುಲ್ನಾ ವಿಭಾಗದ ನರೈಲ್ -2 ಸಂಸತ್​ ಕ್ಷೇತ್ರದಿಂದ ಸದಸ್ಯರಾಗಿರುವ ಮೊರ್ತಾಜಾ, ಈ ವರ್ಷದ ಆರಂಭದಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅವಾಮಿ ಲೀಗ್ ಅಭ್ಯರ್ಥಿಯಾಗಿ ಸತತ ಎರಡನೇ ಬಾರಿಗೆ ಈ ಸ್ಥಾನವನ್ನು ಗೆದ್ದಿದ್ದರು.

ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ನಂತರ ಶೇಖ್ ಹಸೀನಾ ದೇಶದಿಂದ ಪಲಾಯನ ಮಾಡಿದ ನಂತರ ದುಷ್ಕರ್ಮಿಗಳು ಮೊರ್ತಾಜಾ ಅವರ ಮನೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಮೊರ್ತಾಜಾ 117 ಪಂದ್ಯಗಳಲ್ಲಿ ಬಾಂಗ್ಲಾದೇಶವನ್ನು ಮುನ್ನಡೆಸಿದ್ದಾರೆ. 36 ಟೆಸ್ಟ್, 220 ಏಕದಿನ ಮತ್ತು 54 ಟಿ 20 ಪಂದ್ಯಗಳಲ್ಲಿ 390 ಅಂತರರಾಷ್ಟ್ರೀಯ ವಿಕೆಟ್ಗಳನ್ನು ಪಡೆದಿದ್ದಾರೆ ಮತ್ತು 2,955 ರನ್ ಗಳಿಸಿದ್ದಾರೆ. ಆಟವನ್ನು ತೊರೆದ ನಂತರ, ಅವರು 2018 ರಲ್ಲಿ ಹಸೀನಾ ನೇತೃತ್ವದ ಅವಾಮಿ ಲೀಗ್​ಗೆ ಸೇರುವ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದ್ದರು. ನರೈಲ್ -2 ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ: Women’s T20 World Cup : ಬಾಂಗ್ಲಾದಲ್ಲಿ ಕ್ಷೋಭೆ; ಮಹಿಳೆಯ ಟಿ20 ವಿಶ್ವ ಕಪ್ ಮುಂದೂಡಿಕೆ?

ಪ್ರತಿಭಟನಾಕಾರರು ಜಿಲ್ಲಾ ಅವಾಮಿ ಲೀಗ್ ಕಚೇರಿಗೆ ಬೆಂಕಿ ಹಚ್ಚಿದ್ದಾರೆ. ಅಧ್ಯಕ್ಷ ಸುಭಾಷ್ ಚಂದ್ರ ಬೋಸ್ ಅವರ ಮನೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಬಾಂಗ್ಲಾದೇಶದ ಪ್ರಮುಖ ದಿನಪತ್ರಿಕೆ ‘ಢಾಕಾ ಟ್ರಿಬ್ಯೂನ್’ ವರದಿ ಮಾಡಿದೆ.

ಹಸೀನಾ ಸೋಮವಾರ ಸಂಜೆ ದೆಹಲಿ ಬಳಿಯ ಗಾಜಿಯಾಬಾದ್​​ನ ಹಿಂಡನ್ ವಾಯುನೆಲೆಗೆ ಬಂದಿಳಿದರು, ಬಾಂಗ್ಲಾದೇಶ ವಾಯುಪಡೆಯ ಮಿಲಿಟರಿ ಸಾರಿಗೆ ವಿಮಾನದಲ್ಲಿ ಆಗಮಿಸಿದರು, ಸಾವಿರಾರು ಪ್ರತಿಭಟನಾಕಾರರು ಢಾಕಾದಲ್ಲಿನ ಪ್ರಧಾನಿಯ ಅಧಿಕೃತ ನಿವಾಸವಾದ ಗಣಭಬನ್ಗೆ ನುಗ್ಗಿ ಧ್ವಂಸಗೊಳಿಸಿದರು.

Continue Reading

ವಿದೇಶ

Bangladesh Protest: ಶೇಖ್‌ ಹಸೀನಾ ಭಾರತಕ್ಕೆ ಬಂದ ಬೆನ್ನಲ್ಲೇ ಬಾಂಗ್ಲಾದಲ್ಲಿ 4 ಹಿಂದು ದೇಗುಲಗಳ ಧ್ವಂಸ; ಹಿಂದು ಕೌನ್ಸಿಲರ್‌ ಹತ್ಯೆ!

Bangladesh Protest: ಇಸ್ಲಾಮಿಕ್‌ ಮೂಲಭೂತವಾದಿಗಳು ಪ್ರತಿಭಟನೆಯನ್ನು ಹಿಂದು ವಿರೋಧಿ ಪ್ರತಿಭಟನೆಯನ್ನಾಗಿ ಬದಲಿಸಿದ್ದಾರೆ. ಹಿಂದು ದೇವಾಲಯಗಳ ಮೇಲೆ ದಾಳಿ, ಹಿಂದು ಕೌನ್ಸಿಲರ್‌ಗಳ ಹತ್ಯೆ, ಭಾರತೀಯ ಸಂಸ್ಕೃತಿ ಕೇಂದ್ರದ ಧ್ವಂಸ ಸೇರಿ ಹಲವು ರೀತಿಯಾಗಿ ಹಿಂದು ವಿರೋಧಿ ಕೃತ್ಯಗಳಲ್ಲಿ ಮೂಲಭೂತವಾದಿಗಳು ತೊಡಗಿದ್ದಾರೆ.

VISTARANEWS.COM


on

Bangladesh Protest
Koo

ಢಾಕಾ: ಬಾಂಗ್ಲಾದೇಶದಲ್ಲಿ ಮೀಸಲಾತಿ ಪ್ರಕರಣವೊಂದೇ ನಾಗರಿಕ ದಂಗೆಗೆ ಕಾರಣವಾಗಿದೆ. ಪ್ರಧಾನಿ ಶೇಖ್‌ ಹಸೀನಾ ಅವರೂ ರಾಜೀನಾಮೆ ನೀಡಿ, ಭಾರತಕ್ಕೆ ಆಗಮಿಸಿದ್ದಾರೆ. ಪ್ರಧಾನಿ ನಿವಾಸಕ್ಕೆ ನುಗ್ಗಿದ ಪ್ರತಿಭಟನಾಕಾರರು (Bangladesh Protest) ಹುಚ್ಚಾಟ ಮಾಡಿದ್ದಾರೆ. ಗಲಾಟೆ, ಗಲಭೆ, ಹಿಂಸಾಚಾರದಿಂದ 100ಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಇನ್ನು, ಶೇಖ್‌ ಹಸೀನಾ (Sheikh Hasina) ಅವರು ಭಾರತಕ್ಕೆ ಆಗಮಿಸಿದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಹಿಂದು ವಿರೋಧಿ ದಂಗೆ ಆರಂಭವಾಗಿದೆ. ನಾಲ್ಕು ಹಿಂದು ದೇವಾಲಯಗಳನ್ನು (Hindu Temples) ಮೂಲಭೂತವಾದಿಗಳು ಧ್ವಂಸಗೊಳಿಸಿದ್ದಾರೆ.

ಹೌದು, ಬಾಂಗ್ಲಾದೇಶದಲ್ಲಿರುವ ನಾಲ್ಕು ಇಸ್ಕಾನ್‌ ಹಾಗೂ ಕಾಳಿ ದೇವಾಲಯಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಕಾಳಿ ದೇವಾಲಯಕ್ಕೆ ಬೆಂಕಿ ಹಚ್ಚಿದ ಇಸ್ಲಾಮಿಕ್‌ ಮೂಲಭೂತವಾದಿಗಳು ತಮ್ಮ ಮನಸ್ಥಿತಿ ಪ್ರದರ್ಶಿಸಿದ್ದಾರೆ. ಆ ಮೂಲಕ ಬಾಂಗ್ಲಾದೇಶದ ಪ್ರತಿಭಟನೆಯನ್ನು ಹಿಂದು ವಿರೋಧಿ ಪ್ರತಿಭಟನೆಯನ್ನಾಗಿ ಬದಲಿಸಿದ್ದಾರೆ.

ಅಷ್ಟೇ ಅಲ್ಲ, ರಂಗ್‌ಪುರ ಸಿಟಿ ಕಾರ್ಪೊರೇಷನ್‌ನ ಹಿಂದು ಕೌನ್ಸಿರ್‌ ಹರಧನ್‌ ರಾಯ್‌ ಹರ ಎಂಬುವರನ್ನು ಉದ್ರಿಕ್ತರು ಕೊಂದು ಹಾಕಿದ್ದಾರೆ. ಇದೇ ಪಟ್ಟಣದ ಮತ್ತೊಬ್ಬ ಹಿಂದು ಕೌನ್ಸಿಲರ್‌ ಕಾಜಲ್‌ ರಾಯ್‌ ಎಂಬವರನ್ನೂ ಕೊಲೆ ಮಾಡಿದ್ದಾರೆ. ಅಲ್ಲದೆ, ಭಾರತೀಯ ಕಲ್ಚುರಲ್‌ ಸೆಂಟರ್‌ ಮೇಲೆಯೂ ದುಷ್ಕರ್ಮಿಗಳು ದಾಳಿ ನಡೆಸಿ, ಕಟ್ಟಡಕ್ಕೆ ಹಾನಿ ಮಾಡಿದ್ದಾರೆ.

ರೈಲು, ವಿಮಾನ ಸಂಚಾರ ರದ್ದು

ಬಾಂಗ್ಲಾದೇಶದಲ್ಲಿ ಭಾರಿ ಅರಾಜಕತೆ ಸೃಷ್ಟಿಯಾಗಿ, ಗಲಭೆಗಳು ಆರಂಭವಾದ ಹಿನ್ನೆಲೆಯಲ್ಲಿ ಕೋಲ್ಕೊತಾದಿಂದ ಢಾಕಾಗೆ ತೆರಳುವ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಹೇಗೆಯೇ, ಬಾಂಗ್ಲಾದೇಶಕ್ಕೆ ತೆರಳುವ ಏರ್‌ ಇಂಡಿಯಾ ವಿಮಾನಗಳ ಹಾರಾಟವನ್ನು ಕೂಡ ಸ್ಥಗಿತಗೊಳಿಸಲಾಗಿದೆ. ಭಾರತೀಯರು ಮುಂದಿನ ಸೂಚನೆ ಮೇರೆಗೆ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಬಾರದು. ಬಾಂಗ್ಲಾದೇಶದಲ್ಲಿರುವ ಭಾರತೀಯರು, ವಿದ್ಯಾರ್ಥಿಗಳು ತುಂಬ ಎಚ್ಚರಿಕೆಯಿಂದ ಇರಬೇಕು ಎಂದು ಸರ್ಕಾರ ಸೂಚಿಸಿದೆ.

ಪರಿಸ್ಥಿತಿ ಅವಲೋಕಿಸಿದ ಮೋದಿ

ಭಾರತಕ್ಕೆ ಆಗಮಿಸಿರುವ ಶೇಖ್‌ ಹಸೀನಾ ಅವರನ್ನು ಘಾಜಿಯಾಬಾದ್‌ನ ಹಿಂಡನ್‌ ಏರ್‌ ಬೇಸ್‌ನಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಭೇಟಿಯಾಗಿದ್ದು, ಅವರ ಜತೆ ಚರ್ಚಿಸಿದ್ದಾರೆ. ಶೀಘ್ರದಲ್ಲೇ ಶೇಖ್‌ ಹಸೀನಾ ಅವರು ಲಂಡನ್‌ಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು, ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್‌ ಅವರು ಶೇಖ್‌ ಹಸೀನಾ ಭಾರತಕ್ಕೆ ಬಂದಿರುವುದು, ಬಾಂಗ್ಲಾದೇಶದ ಹಿಂಸಾಚಾರ, ಗಡಿ ಬಿಕ್ಕಟ್ಟು ಸೇರಿ ಹಲವು ವಿಷಯಗಳನ್ನು ಮೋದಿಗೆ ಮನವರಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರೂ ಎಸ್.ಜೈಶಂಕರ್‌ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

ಇದನ್ನೂ ಓದಿ: Bangladesh Protests: ಬಾಂಗ್ಲಾ ಹಿಂಸಾಚಾರದ ಹಿಂದೆ ಪಾಕ್‌ ಕೈವಾಡ; ಭಾರತದ ಜತೆ ಹಸೀನಾ ಸ್ನೇಹ ಕಾರಣ?

Continue Reading

ದೇಶ

Bangladesh Protest: ಬಾಂಗ್ಲಾದೇಶ ಹಿಂಸಾಚಾರ ಕುರಿತು ಮೋದಿ ಮಹತ್ವದ ಸಭೆ; ಚರ್ಚಿಸಿದ ವಿಷಯಗಳೇನು?

Bangladesh Protest: ಬಾಂಗ್ಲಾದೇಶದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತೆ ಕುರಿತ ಸಂಸದೀಯ ಸಭೆ ನಡೆಸಿದ್ದಾರೆ. ಒಳನುಸುಳುವಿಕೆ ನಿಯಂತ್ರಣ, ಬಾಂಗ್ಲಾದೇಶದ ಜತೆಗಿನ ವ್ಯಾಪಾರ-ಒಪ್ಪಂದ, ಹಿಂಸಾಚಾರ ಇನ್ನೂ ಜಾಸ್ತಿಯಾದರೆ ಏನಾಗಬಹುದು, ಭಾರತ ತೆಗೆದುಕೊಳ್ಳಬೇಕಾದ ಕ್ರಮಗಳು ಯಾವವು ಎಂಬುದು ಸೇರಿ ಹಲವು ಸಂಗತಿಗಳ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Bangladesh Protest
Koo

ನವದೆಹಲಿ: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರವು (Bangladesh Protest) ನಾಗರಿಕ ದಂಗೆಗೆ ತಿರುಗಿ, ಪ್ರಧಾನಿ ಶೇಖ್‌ ಹಸೀನಾ (Sheikh Hasina) ಅವರೇ ರಾಜೀನಾಮೆ ನೀಡಿ ಭಾರತಕ್ಕೆ ಆಗಮಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಆಗುತ್ತಿರುವ ಬೆಳವಣಿಗೆಗಳು ಭಾರತದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇದಕ್ಕಾಗಿಯೇ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇದರ ಬೆನ್ನಲ್ಲೇ, ಬಾಂಗ್ಲಾದೇಶದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಭದ್ರತೆ ಕುರಿತ ಸಂಸದೀಯ ಸಭೆ ನಡೆಸಿದ ಮೋದಿ, ಬಾಂಗ್ಲಾದೇಶ ಹಿಂಸಾಚಾರದ ಕುರಿತು ಮಾಹಿತಿ ಪಡೆದರು. ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ವಿದೇಶಾಂಗ ವ್ಯವಹಾರಗಳ ಸಚಿವ ಎಸ್.‌ ಜೈಶಂಕರ್‌, ಸಂಸದೀಯ ಕಾರ್ಯದರ್ಶಿ ರಾಜೀವ್‌ ಗೌಬಾ, ರಾ ಮುಖ್ಯಸ್ಥ ರವಿ ಸಿನ್ಹಾ, ಐಬಿ ನಿರ್ದೇಶಕ ತಪನ್‌ ದೇಕಾ ಸೇರಿ ಹಲವರೊಂದಿಗೆ ಮೋದಿ ಉನ್ನತ ಮಟ್ಟದ ಸಭೆ ನಡೆಸಿದರು.

ಚರ್ಚಿಸಿದ ವಿಷಯಗಳು ಏನೇನು?

ಬಾಂಗ್ಲಾದೇಶದ ಹಿಂಸಾಚರದಿಂದ ಭಾರತದ ಮೇಲಾಗುವ ಪರಿಣಾಮಗಳು ಏನು? ಗಡಿಯಲ್ಲಿ ಭದ್ರತೆಗಾಗಿ ತೆಗೆದುಕೊಳ್ಳಬೇಕಾದ ಕ್ರಮಗಳು, ಒಳನುಸುಳುವಿಕೆ ನಿಯಂತ್ರಣ, ಬಾಂಗ್ಲಾದೇಶದ ಜತೆಗಿನ ವ್ಯಾಪಾರ-ಒಪ್ಪಂದ, ಹಿಂಸಾಚಾರ ಇನ್ನೂ ಜಾಸ್ತಿಯಾದರೆ ಏನಾಗಬಹುದು, ಭಾರತ ತೆಗೆದುಕೊಳ್ಳಬೇಕಾದ ಕ್ರಮಗಳು ಯಾವವು ಎಂಬುದು ಸೇರಿ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿದುಬಂದಿದೆ.

ಭಾರತದ ಮೇಲೆ ಏನೆಲ್ಲ ಪರಿಣಾಮ ಸಾಧ್ಯತೆ?

ಬಾಂಗ್ಲಾದೇಶದಲ್ಲಿ ಹಿಂಸಾಚಾರವು ಭುಗಿಲೆದ್ದಿರುವುದರ ಪರಿಣಾಮವು ಭಾರತದ ಮೇಲೂ ಬೀರುವ ಸಾಧ್ಯತೆ ಹೆಚ್ಚಿದೆ. ಬಾಂಗ್ಲಾದಲ್ಲಿ ಶಾಂತಿ ನೆಲೆಸಿದ್ದಾಗಲೇ ನುಸುಳುಕೋರರು ಭಾರತವನ್ನು ಪ್ರವೇಶಿಸುತ್ತಿದ್ದರು. ಈಗ ಸುಮಾರು 4 ಲಕ್ಷ ಜನ ದಂಗೆಯೆದ್ದಿರುವ ಕಾರಣ ಇನ್ನಷ್ಟು ಜನ ಭಾರತವನ್ನು ಅಕ್ರಮವಾಗಿ ಪ್ರವೇಶಿಸಿ, ಅವರು ದೇಶಕ್ಕೆ ತಲೆನೋವಾಗಬಹುದು. ಸೇನೆಯಲ್ಲಿ ಆಡಳಿತ ಯಂತ್ರ ಕುಸಿದುಬಿದ್ದಿದ್ದು, ಮಿಲಿಟರಿ ಆಡಳಿತ ಜಾರಿಗೆ ಬಂದಿರುವ ಕಾರಣ ಭಾರತ ಹಾಗೂ ಬಾಂಗ್ಲಾದೇಶದ ವ್ಯಾಪಾರ, ಒಪ್ಪಂದಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ.

ಮಿಲಿಟರಿ ಆಡಳಿತ ಕೊನೆಯಾಗಿ, ಹೊಸ ಸರ್ಕಾರ ರಚನೆಯಾಗಿ, ಪ್ರತಿಭಟನೆ ಶಾಂತವಾಗುವವರೆಗೂ ಭಾರತಕ್ಕೆ ಸಂಕಷ್ಟ ತಪ್ಪಿದ್ದಲ್ಲ ಎಂದೇ ವಿಶ್ಲೇಷಿಸಲಾಗುತ್ತಿದೆ. ಶೇಖ್‌ ಹಸೀನಾ ಭಾರತ ಪರ ನಿಲುವು ಹೊಂದಿದ್ದಾರೆ. ಹಾಗಾಗಿ ಪ್ರತಿಭಟನೆಕಾರರ ಕೋಪ ಭಾರತದ ಮೇಲೆ ತಿರುಗಬಹುದು. ಬಾಂಗ್ಲಾದಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆಯುವ ಅಪಾಯವೂ ಇದೆ.

ಇದನ್ನೂ ಓದಿ: Bangladesh Protests: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ; ಮೃತರ ಸಂಖ್ಯೆ 98ಕ್ಕೆ ಏರಿಕೆ: ಭಾರತೀಯರಿಗೆ ಮುನ್ನೆಚ್ಚರಿಕೆ

Continue Reading

ವಿದೇಶ

Taslima Nasrin: ಇಸ್ಲಾಮಿಸ್ಟ್‌ಗಳನ್ನು ಬೆಳೆಯಲು ಬಿಟ್ಟಿದ್ದೇ ಬಾಂಗ್ಲಾ ದುಸ್ಥಿತಿಗೆ ಕಾರಣ; ತಸ್ಲೀಮಾ ನಸ್ರಿನ್‌ ಆಕ್ರೋಶ

Taslima Nasrin: ಬಾಂಗ್ಲಾದೇಶದ ಈಗಿನ ಅವರ ಪರಿಸ್ಥಿತಿಗೆ ಶೇಖ್‌ ಹಸೀನಾ ಅವರೇ ಕಾರಣರಾಗಿದ್ದಾರೆ. ಇಸ್ಲಾಮಿಸ್ಟ್‌ಗಳು ಬೆಳೆಯಲು ಅವರು ಬಿಟ್ಟರು. ಭ್ರಷ್ಟಾಚಾರದಲ್ಲಿ ಅವರು ಭಾಗಿಯಾಗಲು ಅವಕಾಶ ಮಾಡಿಕೊಟ್ಟರು. ಆದರೀಗ, ಬಾಂಗ್ಲಾದೇಶವು ಮತ್ತೊಂದು ಪಾಕಿಸ್ತಾನದ ರೀತಿ ಆಗಬಾರದು.

VISTARANEWS.COM


on

Taslima Nasrin
Koo

ಢಾಕಾ: ಬಾಂಗ್ಲಾದೇಶದಲ್ಲಿ ವಿವಾದಿತ ಮೀಸಲಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂಸಾತ್ಮಕ ಪ್ರತಿಭಟನೆ (Bangladesh Protest) ನಡೆದ ಬಳಿಕ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಶೇಖ್‌ ಹಸೀನಾ (Sheikh Hasina) ಅವರು ಭಾರತಕ್ಕೆ ಬಂದಿದ್ದಾರೆ. ಬಾಂಗ್ಲಾದೇಶದಲ್ಲಿ ಈಗ ಸೇನೆಯ ಆಡಳಿತ ಜಾರಿಗೆ ಬಂದಿದೆ. ದಂಗೆ ಹಿನ್ನೆಲೆಯಲ್ಲಿ ಭಾರತದ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇದರ ಬೆನ್ನಲ್ಲೇ, ಬಾಂಗ್ಲಾದೇಶದ ವಿವಾದಿತ ಲೇಖಕಿ ತಸ್ಲಿಮಾ ನಸ್ರೀನ್‌ (Taslima Nasrin) ಅವರು ಇಸ್ಲಾಮಿಸ್ಟ್‌ಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಶೇಖ್‌ ಹಸೀನಾ ಅವರು ರಾಜೀನಾಮೆ ನೀಡಿ, ದೇಶವನ್ನು ತೊರೆಯಬೇಕಾಗಿದೆ. ಈಗಿನ ಅವರ ಪರಿಸ್ಥಿತಿಗೆ ಅವರೇ ಕಾರಣರಾಗಿದ್ದಾರೆ. ಇಸ್ಲಾಮಿಸ್ಟ್‌ಗಳು ಬೆಳೆಯಲು ಅವರು ಬಿಟ್ಟರು. ಭ್ರಷ್ಟಾಚಾರದಲ್ಲಿ ಅವರು ಭಾಗಿಯಾಗಲು ಅವಕಾಶ ಮಾಡಿಕೊಟ್ಟರು. ಆದರೀಗ, ಬಾಂಗ್ಲಾದೇಶವು ಮತ್ತೊಂದು ಪಾಕಿಸ್ತಾನದ ರೀತಿ ಆಗಬಾರದು. ಸೇನೆಯ ಆಡಳಿತ ಜಾರಿಗೆ ಬರಬಾರದು. ರಾಜಕೀಯ ಪಕ್ಷಗಳು ದೇಶದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಿ, ಜಾತ್ಯತೀತತೆಯನ್ನು ಅಳವಡಿಸಿಕೊಳ್ಳಬೇಕು” ಎಂದು ಲೇಖಕಿ ಪೋಸ್ಟ್‌ ಮಾಡಿದ್ದಾರೆ.

ರೈಲು, ವಿಮಾನ ಸಂಚಾರ ರದ್ದು

ಬಾಂಗ್ಲಾದೇಶದಲ್ಲಿ ಭಾರಿ ಅರಾಜಕತೆ ಸೃಷ್ಟಿಯಾಗಿ, ಗಲಭೆಗಳು ಆರಂಭವಾದ ಹಿನ್ನೆಲೆಯಲ್ಲಿ ಕೋಲ್ಕೊತಾದಿಂದ ಢಾಕಾಗೆ ತೆರಳುವ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಹೇಗೆಯೇ, ಬಾಂಗ್ಲಾದೇಶಕ್ಕೆ ತೆರಳುವ ಏರ್‌ ಇಂಡಿಯಾ ವಿಮಾನಗಳ ಹಾರಾಟವನ್ನು ಕೂಡ ಸ್ಥಗಿತಗೊಳಿಸಲಾಗಿದೆ. ಭಾರತೀಯರು ಮುಂದಿನ ಸೂಚನೆ ಮೇರೆಗೆ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಬಾರದು. ಬಾಂಗ್ಲಾದೇಶದಲ್ಲಿರುವ ಭಾರತೀಯರು, ವಿದ್ಯಾರ್ಥಿಗಳು ತುಂಬ ಎಚ್ಚರಿಕೆಯಿಂದ ಇರಬೇಕು ಎಂದು ಸರ್ಕಾರ ಸೂಚಿಸಿದೆ.

ವಿವರಣೆ ಪಡೆದ ಮೋದಿ

ಭಾರತಕ್ಕೆ ಆಗಮಿಸಿರುವ ಶೇಖ್‌ ಹಸೀನಾ ಅವರನ್ನು ಘಾಜಿಯಾಬಾದ್‌ನ ಹಿಂಡನ್‌ ಏರ್‌ ಬೇಸ್‌ನಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಭೇಟಿಯಾಗಿದ್ದು, ಅವರ ಜತೆ ಚರ್ಚಿಸಿದ್ದಾರೆ. ಶೀಘ್ರದಲ್ಲೇ ಶೇಖ್‌ ಹಸೀನಾ ಅವರು ಲಂಡನ್‌ಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು, ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್‌ ಅವರು ಶೇಖ್‌ ಹಸೀನಾ ಭಾರತಕ್ಕೆ ಬಂದಿರುವುದು, ಬಾಂಗ್ಲಾದೇಶದ ಹಿಂಸಾಚಾರ, ಗಡಿ ಬಿಕ್ಕಟ್ಟು ಸೇರಿ ಹಲವು ವಿಷಯಗಳನ್ನು ಮೋದಿಗೆ ಮನವರಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರೂ ಎಸ್.ಜೈಶಂಕರ್‌ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಹಿಂದೂಗಳು ಅಸುರಕ್ಷಿತ: ಕಳವಳ ವ್ಯಕ್ತಪಡಿಸಿದ ತಸ್ಲೀಮಾ ನಸ್ರೀನ್‌

Continue Reading
Advertisement
Mashrafe Mortaza
ಪ್ರಮುಖ ಸುದ್ದಿ3 hours ago

Mashrafe Mortaza : ಕ್ರಿಕೆಟರ್ ಮುಶ್ರಫೆ ಮೊರ್ತಾಜಾ ಮನೆಗೆ ಬೆಂಕಿ ಹಚ್ಚಿದ ಬಾಂಗ್ಲಾದೇಶದ ಪ್ರತಿಭಟನಾಕಾರರು

Bangladesh Protest
ವಿದೇಶ3 hours ago

Bangladesh Protest: ಶೇಖ್‌ ಹಸೀನಾ ರಾಜೀನಾಮೆ ಬೆನ್ನಲ್ಲೇ ರಾಜಕೀಯ ಶತ್ರು ಖಲೇದಾ ಜಿಯಾ ರಿಲೀಸ್‌ಗೆ ಆದೇಶ!

Women's T20 World Cup
ಪ್ರಮುಖ ಸುದ್ದಿ3 hours ago

Women’s T20 World Cup : ಬಾಂಗ್ಲಾದಲ್ಲಿ ಕ್ಷೋಭೆ; ಮಹಿಳೆಯ ಟಿ20 ವಿಶ್ವ ಕಪ್ ಮುಂದೂಡಿಕೆ?

Bangladesh Protest
ವಿದೇಶ4 hours ago

Bangladesh Protest: ಶೇಖ್‌ ಹಸೀನಾ ಭಾರತಕ್ಕೆ ಬಂದ ಬೆನ್ನಲ್ಲೇ ಬಾಂಗ್ಲಾದಲ್ಲಿ 4 ಹಿಂದು ದೇಗುಲಗಳ ಧ್ವಂಸ; ಹಿಂದು ಕೌನ್ಸಿಲರ್‌ ಹತ್ಯೆ!

ಪ್ರಮುಖ ಸುದ್ದಿ5 hours ago

Rohit Sharma : ಧೋನಿಯ ನಾಯಕತ್ವದ ದಾಖಲೆಯೊಂದನ್ನು ಮುರಿದ ರೋಹಿತ್ ಶರ್ಮಾ

ಪ್ರಮುಖ ಸುದ್ದಿ5 hours ago

Gowri Movie: ‘ಗೌರಿ’ ಚಿತ್ರದ ಟ್ರೈಲರ್ ಅನಾವರಣ ಮಾಡಿದ ಕಿಚ್ಚ ಸುದೀಪ್

Bangladesh Protest
ದೇಶ5 hours ago

Bangladesh Protest: ಬಾಂಗ್ಲಾದೇಶ ಹಿಂಸಾಚಾರ ಕುರಿತು ಮೋದಿ ಮಹತ್ವದ ಸಭೆ; ಚರ್ಚಿಸಿದ ವಿಷಯಗಳೇನು?

Independence Day 2024
ಸಿನಿಮಾ5 hours ago

Independence Day 2024: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದ ಕಥೆ ಹೇಳುವ ಟಾಪ್‌ 10 ಹಿಂದಿ ಸಿನೆಮಾಗಳಿವು

CM Siddaramaiah instructs to provide immediate relief to those affected by heavy rains
ಕರ್ನಾಟಕ5 hours ago

CM Siddaramaiah: ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ತಕ್ಷಣ ಪರಿಹಾರ; ಸಿದ್ದರಾಮಯ್ಯ ಸೂಚನೆ

ಪ್ರಮುಖ ಸುದ್ದಿ6 hours ago

Vinod Kambli : ಹದಗೆಟ್ಟಿದೆ ಮಾಜಿ ಕ್ರಿಕೆಟರ್​ ವಿನೋದ್ ಕಾಂಬ್ಳಿ ಆರೋಗ್ಯ ; ಸಚಿನ್ ಜತೆಗಾರನಿಗೆ ಈಗ ಕೈ ಹಿಡಿದುಕೊಂಡು ನಡೆಯುವ ಪರಿಸ್ಥಿತಿ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ2 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ5 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ7 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌