ಲಂಡನ್: ಬ್ರಿಟನ್ ರಾಣಿ ಎಲಿಜಬೆತ್ II ನಿಧನದ ಬೆನ್ನಲ್ಲೇ ಅವರ ಉತ್ತರಾಧಿಕಾರಿಯಾಗಿ ಕಿಂಗ್ ಚಾರ್ಲ್ಸ್ III (೭೩) (King Charles III) ಅವರನ್ನು ಆಯ್ಕೆ ಮಾಡಲಾಗಿದೆ. ಆ ಮೂಲಕ ಚಾರ್ಲ್ಸ್ ಅವರು ಈ ಹುದ್ದೆಗೇರಿದ ಹಿರಿಯ ರಾಜ ಎನಿಸಿದ್ದಾರೆ. ಇದಕ್ಕೂ ಮೊದಲು ೧೮೩೦ರಲ್ಲಿ ವಿಲಿಯಂ IV ಅವರು ೬೪ನೇ ವಯಸ್ಸಿನಲ್ಲಿ ಬ್ರಿಟನ್ ರಾಜನಾಗಿ ಅಧಿಕಾರ ವಹಿಸಿಕೊಂಡಿದ್ದರು.
ಪ್ರಿನ್ಸ್ ಚಾರ್ಲ್ಸ್ ಅವರು ರಾಣಿ ಎಲಿಜಬೆತ್ ಅವರ ನಾಲ್ವರು ಮಕ್ಕಳಲ್ಲಿ ಹಿರಿಯವರಾದ ಕಾರಣ ಅವರನ್ನೇ ಉತ್ತರಾಧಿಕಾರಿಯನ್ನಾಗಿ ನೇಮಿಸಲಾಗಿದೆ. ರಾಣಿ ಎಲಿಜಬೆತ್ ಅವರು ಹಲವು ತಿಂಗಳುಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಚಿಕಿತ್ಸೆ ಫಲಿಸದೆ ಅವರು ಗುರುವಾರ ನಿಧನರಾಗಿದ್ದಾರೆ. ನಿಧನದ ಹಿನ್ನೆಲೆಯಲ್ಲಿ ೧೦ ದಿನ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದೆ.
ಇದನ್ನೂ ಓದಿ | Queen Elizabeth | ಪ್ರಗತಿಶೀಲ, ಪ್ರಯೋಗಶೀಲ ವ್ಯಕ್ತಿತ್ವದ ಬ್ರಿಟನ್ ರಾಣಿ ಕ್ವೀನ್ ಎಲಿಜಬೆತ್