MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ - Vistara News

ವಿದೇಶ

MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

MDH, Everest Spices: ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪದ ನಂತರ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲು ಅಮೆರಿಕ ಮುಂದಾಗಿದೆ. ಉತ್ಪನ್ನಗಳನ್ನು ಸಿಂಗಾಪುರ, ಹಾಂಗ್ ಕಾಂಗ್ ನಿಷೇಧಿಸಿದ ನಂತರ ಈ ಬೆಳವಣಿಕೆ ಕಂಡು ಬಂದಿದೆ. ಫುಡ್ ಆ್ಯಂಡ್‌ ಡ್ರಗ್ ಅಡ್ಮಿನಿಸ್ಟ್ರೇಷನ್ ಪರಿಸ್ಥಿತಿಯ ಬಗ್ಗೆ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

MDH, Everest Spices
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್‌: ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪದ ನಂತರ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನ (MDH, Everest Spices)ಗಳ ಮಾರಾಟವನ್ನು ಸಿಂಗಾಪುರ, ಹಾಂಗ್ ಕಾಂಗ್ ನಿಷೇಧಿಸಿದ್ದು, ಇದೀಗ ಅಮೆರಿಕವೂ ಕ್ರಮಕ್ಕೆ ಮುಂದಾಗಿದೆ. ಅಮೆರಿಕದ ಫುಡ್ ಆ್ಯಂಡ್‌ ಡ್ರಗ್ ಅಡ್ಮಿನಿಸ್ಟ್ರೇಷನ್ (Food and Drug Administration) ಎಂಡಿಎಚ್ ಮತ್ತು ಎವರೆಸ್ಟ್‌ ಉತ್ಪನ್ನಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತಿದೆ.

“ಎಫ್‌ಡಿಎ ಪರಿಸ್ಥಿತಿಯ ಬಗ್ಗೆ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸುತ್ತಿದೆ” ಎಂದು ವಕ್ತಾರರು ತಿಳಿಸಿದ್ದಾರೆ. ಭಾರತ ಸೇರಿ ಜಗತ್ತಿನೆಲ್ಲೆಡೆ ಖ್ಯಾತಿ ಗಳಿಸಿರುವ ಎಂಡಿಎಚ್‌ನ ಮೂರು ಮಸಾಲಾ ಪದಾರ್ಥಗಳು ಹಾಗೂ ಎವರೆಸ್ಟ್‌ನ ಒಂದು ಮಸಾಲಾ ಪದಾರ್ಥದಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ ಕಾರ್ಸಿನೋಜೆನಿಕ್‌ ರಾಸಾಯನಿಕ ಇರುವ ಕಾರಣ ಹಾಂಕಾಂಗ್‌ ಆಹಾರ ನಿಯಂತ್ರಣ ಪ್ರಾಧಿಕಾರವು ನಾಲ್ಕೂ ಉತ್ಪನ್ನಗಳ ಮಾರಾಟವನ್ನು ಇತ್ತೀಚೆಗೆ ನಿಷೇಧಿಸಿತ್ತು. ಎಂಡಿಎಚ್‌ನ ಕರಿ ಪೌಡರ್‌, ಮಿಕ್ಸ್ಡ್‌ ಮಸಾಲಾ ಪೌಡರ್‌ ಹಾಗೂ ಸಾಂಬಾರ್‌ ಮಸಾಲಾ ಮತ್ತು ಎವರೆಸ್ಟ್‌ನ ಫಿಶ್‌ ಕರಿ ಮಸಾಲಾವನ್ನು ನಿಷೇಧಿತ ಉತ್ಪನ್ನಗಳು.

ವಿವಾದದ ಬಳಿಕ ಎವರೆಸ್ಟ್ ಸಂಸ್ಥೆ ಪ್ರತಿಕ್ರಿಯಿಸಿ, ʼʼತನ್ನ ಮಸಾಲೆಗಳು ಸೇವನೆಗೆ ಸುರಕ್ಷಿತʼʼ ಎಂದು ಹೇಳಿದೆ. ಆದರೆ ಎಂಡಿಎಚ್ ಇದುವರೆಗೆ ತನ್ನ ಉತ್ಪನ್ನಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಕಂಪನಿಗಳ ಉತ್ಪನ್ನಗಳನ್ನು ಅಮೆರಿಕ, ಯುರೋಪ್‌, ಇಂಗ್ಲೆಂಡ್‌ ಮತ್ತು ಮಧ್ಯಪ್ರಾಚ್ಯ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಇತ್ತ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನಗಳ ಗುಣಮಟ್ಟ ತಪಾಸಣೆಗೆ ಭಾರತೀಯ ಆಹಾರ ಸುರಕ್ಷತಾ ನಿಯಂತ್ರಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸೋಮವಾರ ಆದೇಶ ಹೊರಡಿಸಿದೆ.

ʼʼಹಾಂಕಾಂಗ್ ಮತ್ತು ಸಿಂಗಾಪುರದ ಅಧಿಕಾರಿಗಳಿಂದ ಎಂಡಿಎಚ್ ಮತ್ತು ಎವರೆಸ್ಟ್ ಉತ್ಪನ್ನಗಳ ರಫ್ತು ಬಗ್ಗೆ ಮಾಹಿತಿ ಕೋರಲಾಗಿದೆ. ಗುಣಮಟ್ಟದ ಸಮಸ್ಯೆಗಳ ಮೂಲ ಕಾರಣವನ್ನು ಕಂಡುಹಿಡಿಯಲು ಕಂಪನಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆʼʼ ಎಂದು ಭಾರತದ ಮಸಾಲೆ ಮಂಡಳಿ ಬುಧವಾರ ತಿಳಿಸಿದೆ.

ಇದನ್ನೂ ಓದಿ: Pesticide: ಎವರೆಸ್ಟ್‌ ಫಿಶ್‌ ಕರಿ ಮಸಾಲೆಯಲ್ಲಿ ಕೀಟನಾಶಕ; ಬ್ಯಾನ್‌ ಮಾಡಿದ ಸಿಂಗಾಪುರ

ಏನಿದು ವಿವಾದ?

ಕೆಲವು ದಿನಗಳ ಹಿಂದೆ ಭಾರತದ ಜನಪ್ರಿಯ ಉತ್ಪನ್ನವಾದ ಮಸಾಲೆ ತಯಾರಕ ಎವರೆಸ್ಟ್‌ನ ಫಿಶ್ ಕರಿ ಮಸಾಲಾವನ್ನು ಹಿಂಪಡೆಯಲು ಸಿಂಗಾಪುರ ಆದೇಶಿಸಿತ್ತು. ಇದರಲ್ಲಿ ಸುರಕ್ಷಿತ ಮಿತಿಯನ್ನು ಮೀರಿ ಕೀಟನಾಶಕ ಎಥಿಲೀನ್ ಆಕ್ಸೈಡ್ ಇದೆ ಎಂದು ಅದು ಆರೋಪಿಸಿತ್ತು. ಅನುಮತಿಸಲಾದ ಮಿತಿಯನ್ನು ಮೀರಿದ ಮಟ್ಟದಲ್ಲಿ ಫಿಶ್‌ ಕರಿ ಮಸಾಲಾದಲ್ಲಿ ಎಥಿಲೀನ್ ಆಕ್ಸೈಡ್ ಕೀಟನಾಶಕವಿದೆ. ಎಥಿಲೀನ್ ಆಕ್ಸೈಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿಸಲಾಗಿಲ್ಲ. ಕೃಷಿ ಉತ್ಪನ್ನಗಳ ಫ್ಯುಮಿಗೇಶನ್‌ ವೇಳೆ ಸೂಕ್ಷ್ಮಜೀವಿ ಮಾಲಿನ್ಯವನ್ನು ತಡೆಗಟ್ಟಲು ಮಾತ್ರ ಅದನ್ನು ಬಳಸಲಾಗುತ್ತದೆ ಎಂದು ಕಾರಣ ತಿಳಿಸಿತ್ತು. ಅದಾದ ಬಳಿಕ ಹಾಂಕಾಂಗ್‌ನಲ್ಲೂ ಎಂಡಿಎಚ್‌ ಹಾಗೂ ಎವರೆಸ್ಟ್‌ ಮಸಾಲಾ ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿತ್ತು. ಹಾಗಾಗಿ ಜಾಗತಿಕವಾಗಿ ಭಾರತದ ಎರಡು ಮಸಾಲಾ ಬ್ರ್ಯಾಂಡ್‌ಗಳು ನಕಾರಾತ್ಮಕ ಕಾರಣಕ್ಕಾಗಿ ಸುದ್ದಿಯಾಗಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

ಮನೆಗೆ ನುಗ್ಗಿ ತಮ್ಮದೇ ದೇಶದ ಕಪ್ಪುವರ್ಣೀಯ ಸೇನಾಧಿಕಾರಿಯನ್ನು ಕೊಂದ ಅಮೆರಿಕ ಪೊಲೀಸರು; Video ಇದೆ

ಮೇ 3ರಂದು ಪೊಲೀಸರಿಗೆ ಮಹಿಳೆಯೊಬ್ಬರು ಕರೆ ಮಾಡಿದ್ದಾರೆ. ಪಕ್ಕದ ಫ್ಲ್ಯಾಟ್‌ನಲ್ಲಿ ಗಂಡ-ಹೆಂಡತಿ ಜಗಳವಾಡುತ್ತಿದ್ದಾರೆ. ಇಲ್ಲಿ ದೊಡ್ಡ ಗಲಾಟೆ ನಡೆದಿದ್ದು, ಅಕ್ಕ-ಪಕ್ಕದ ಫ್ಲ್ಯಾಟ್‌ನವರಿಗೆ ತೊಂದರೆಯಾಗುತ್ತಿದೆ ಎಂಬುದಾಗಿ ಪೊಲೀಸರಿಗೆ ಮಹಿಳೆ ತಿಳಿಸಿದ್ದಾರೆ. ಆದರೆ, ಪೊಲೀಸ್‌ ಅಧಿಕಾರಿಯು ಮಹಿಳೆ ಹೇಳಿದ ಅಪಾರ್ಟ್‌ಮೆಂಟ್‌ ಬದಲು, ಬೇರೊಂದು ಅಪಾರ್ಟ್‌ಮೆಂಟ್‌ಗೆ ತೆರಳಿದ್ದೇ ವಾಯುಪಡೆ ಅಧಿಕಾರಿಯ ದುರಂತ ಸಾವಿಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

US Officer
Koo

ವಾಷಿಂಗ್ಟನ್:‌ ಯಾವುದೇ ದೇಶದ ಸೇನಾಧಿಕಾರಿಗಳು, ಪೊಲೀಸರು ಕಾರ್ಯಾಚರಣೆ ಕೈಗೊಳ್ಳುವಾಗ, ಎನ್‌ಕೌಂಟರ್‌ ನಡೆಸುವಾಗ ತುಂಬ ಎಚ್ಚರಿಕೆಯಿಂದ ಇರುತ್ತಾರೆ. ಉಗ್ರರು, ದುಷ್ಕರ್ಮಿಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಾಗ ಸಾರ್ವಜನಿಕರಿಗೆ, ಅಮಾಯಕರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸುತ್ತಾರೆ. ಆದರೆ, ಅಮೆರಿಕದಲ್ಲಿ (America) ಪೊಲೀಸ್‌ ಅಧಿಕಾರಿಯು (US Cop) ದುಷ್ಕರ್ಮಿಗಳ ಅಪಾರ್ಟ್‌ಮೆಂಟ್‌ಗೆ ತೆರಳುವ ಬದಲು, ಅಮೆರಿಕ ವಾಯುಪಡೆಯ ಹಿರಿಯ ಅಧಿಕಾರಿಯೊಬ್ಬರ (US Officer) ಫ್ಲ್ಯಾಟ್‌ಗೆ ನುಗ್ಗಿ, ಅವರನ್ನು ಹತ್ಯೆಗೈದಿದ್ದಾರೆ. ವಾಯುಪಡೆ ಅಧಿಕಾರಿಯು ಕಪ್ಪು ವರ್ಣದವರಾದ ಕಾರಣ, ಪ್ರಕರಣವು ಗಂಭೀರ ಸ್ವರೂಪ ಪಡೆದಿದೆ.

ಮೇ 3ರಂದು ಫ್ಲೊರಿಡಾದ ಫೋರ್ಟ್‌ ವ್ಯಾಲ್ಟನ್‌ ಬೀಚ್‌ನಲ್ಲಿರುವ ಶೆಜ್‌ ಎಲನ್‌ ಅಪಾರ್ಟ್‌ಮೆಂಟ್‌ಗೆ ತೆರಳಿದ ಪೊಲೀಸ್‌ ಅಧಿಕಾರಿಯು ತಪ್ಪಾಗಿ ಭಾವಿಸಿ ಅಮೆರಿಕ ವಾಯುಪಡೆಯ ಅಧಿಕಾರಿ, ಕಪ್ಪು ವರ್ಣದವರಾದ ರೋಜರ್‌ ಫೋರ್ಟ್‌ಸನ್‌ ಎಂಬುವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪೊಲೀಸ್‌ ಅಧಿಕಾರಿಯು ಬೇರೊಂದು ಅಪಾರ್ಟ್‌ಮೆಂಟ್‌ಗೆ ತೆರಳಿ, ಹಿಂದೆ-ಮುಂದೆ ನೋಡದೆ ಶೂಟ್‌ ಮಾಡಿದ ಕಾರಣ ಕಪ್ಪು ವರ್ಣೀಯ ಅಧಿಕಾರಿಯಾಗಿದ್ದಾರೆ. ಇದಕ್ಕೆ ಅಮೆರಿಕದಲ್ಲಿರುವ ಕಪ್ಪು ವರ್ಣದ ಸಮುದಾಯದವರು (ಆಫ್ರಿಕಾ ಮೂಲದ ಅಮೆರಿಕದವರು) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸ್‌ ಅಧಿಕಾರಿ ದಾಳಿ ಮಾಡಿದ್ದೇಕೆ?

ಮೇ 3ರಂದು ಪೊಲೀಸರಿಗೆ ಮಹಿಳೆಯೊಬ್ಬರು ಕರೆ ಮಾಡಿದ್ದಾರೆ. ಪಕ್ಕದ ಫ್ಲ್ಯಾಟ್‌ನಲ್ಲಿ ಗಂಡ-ಹೆಂಡತಿ ಜಗಳವಾಡುತ್ತಿದ್ದಾರೆ. ಇಲ್ಲಿ ದೊಡ್ಡ ಗಲಾಟೆ ನಡೆದಿದ್ದು, ಅಕ್ಕ-ಪಕ್ಕದ ಫ್ಲ್ಯಾಟ್‌ನವರಿಗೆ ತೊಂದರೆಯಾಗುತ್ತಿದೆ ಎಂಬುದಾಗಿ ಪೊಲೀಸರಿಗೆ ಮಹಿಳೆ ತಿಳಿಸಿದ್ದಾರೆ. ಇದಾದ ಬಳಿಕ, ಪೊಲೀಸ್‌ ಅಧಿಕಾರಿಯೂ ಕೂಡಲೇ ಅಪಾರ್ಟ್‌ಮೆಂಟ್‌ಗೆ ತೆರಳಿದ್ದಾರೆ. ಆದರೆ, ಮಹಿಳೆ ಕರೆ ಮಾಡಿ ತಿಳಿಸಿದ್ದೇ ಬೇರೆ, ಪೊಲೀಸ್‌ ಅಧಿಕಾರಿ ತೆರಳಿದ ಅಪಾರ್ಟ್‌ಮೆಂಟೇ ಬೇರೆಯಾದ ಕಾರಣ ಅಚಾತುರ್ಯ ಸಂಭವಿಸಿದೆ. ಪೊಲೀಸ್‌ ಅಧಿಕಾರಿಯ ಬಾಡಿ ಕ್ಯಾಮೆರಾದಲ್ಲಿ ಇಡೀ ಘಟನೆಯ ದೃಶ್ಯಗಳು ಸೆರೆಯಾಗಿದ್ದು, ವಾಯುಪಡೆ ಅಧಿಕಾರಿಯ ದುರಂತ ಸಾವಿನ ವಿಡಿಯೊ ವೈರಲ್‌ ಆಗಿದೆ.

ವಾಯುಪಡೆ ಅಧಿಕಾರಿ ಇದ್ದ ಫ್ಲ್ಯಾಟ್‌ಗೆ ನುಗ್ಗಿದ ಪೊಲೀಸ್‌ ಅಧಿಕಾರಿಯು ಪದೇಪದೆ ಬಾಗಿಲು ಬಡಿದಿದ್ದಾರೆ. ರೋಜರ್‌ ಫೋರ್ಟ್‌ಸನ್‌ ಅವರು ಬಾಗಿಲು ತೆಗೆಯುವುದು ತುಸು ವಿಳಂಬವಾಗಿದೆ. ಇದೇ ಕೋಪದಲ್ಲಿದ್ದ ಪೊಲೀಸ್‌ ಅಧಿಕಾರಿಯು, ಫೋರ್ಟ್‌ಸನ್‌ ಬಾಗಿಲು ತೆಗೆಯುತ್ತಲೇ ಹಿಂದೆ-ಮುಂದೆ ನೋಡದೆ ಗುಂಡಿನ ದಾಳಿ ನಡೆಸಿದ್ದಾರೆ. ಸತತ ಆರು ಗುಂಡು ಹಾರಿಸಿದ ಕಾರಣ ರೋಜರ್‌ ಫೋರ್ಟ್‌ಸನ್‌ ಅಲ್ಲಿಯೇ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಪ್ರಕರಣದ ಕುರಿತು ರೋಜರ್‌ ಫೋರ್ಟ್‌ಸನ್‌ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕಪ್ಪು ವರ್ಣೀಯರ ಮೇಲೆ ಪೊಲೀಸರ ದೌರ್ಜನ್ಯದ ಕುರಿತು ತನಿಖೆಯಾಗಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

Continue Reading

ದೇಶ

ಪಿತ್ರೋಡಾ ‘ಸಂಪತ್ತು ಹಂಚಿಕೆ’ ಹೇಳಿಕೆ, ಮಣಿಶಂಕರ್‌ ಅಯ್ಯರ್‌ ಪಾಕ್‌ ಪ್ರೇಮ; ಕಾಂಗ್ರೆಸ್‌ಗೆ ಈಗ ತೀವ್ರ ಫಜೀತಿ!

ಸಂಪತ್ತಿನ ಹಂಚಿಕೆ ಕುರಿತು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ, ಪಾಕಿಸ್ತಾನದ ಕುರಿತು ಪಕ್ಷದ ನಾಯಕ ಮಣಿಶಂಕರ್‌ ಅಯ್ಯರ್‌ ಅವರು ನೀಡಿರುವ ಹೇಳಿಕೆಗಳು ಕಾಂಗ್ರೆಸ್‌ಗೆ ಭಾರಿ ಮುಜುಗರ ತಂದಿವೆ. ಇಬ್ಬರೂ ನಾಯಕರ ವಿರುದ್ಧ ಸಾರ್ವಜನಿಕವಾಗಿಯೂ ಆಕ್ರೋಶ ವ್ಯಕ್ತವಾಗುತ್ತದೆ. ಹಾಗಾಗಿ, ಕಾಂಗ್ರೆಸ್‌ ಪಕ್ಷವು ಇಬ್ಬರ ಹೇಳಿಕೆಗಳಿಂದಲೂ ಅಂತರ ಕಾಪಾಡಿಕೊಳ್ಳುವ ಮೂಲಕ ಮುಜುಗರದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದೆ.

VISTARANEWS.COM


on

Sam Pitroda
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಿಡಿದು, ಸ್ಥಳೀಯ ಪಕ್ಷದ ನಾಯಕನವರೆಗೆ ಭಾಷಣಗಳು, ಹೇಳಿಕೆಗಳು, ಆರೋಪ, ಟೀಕೆ, ವ್ಯಂಗ್ಯಗಳು ಮೊನಚಾಗಿವೆ. ಆದರೆ, ಕಾಂಗ್ರೆಸ್‌ನ ಕೆಲ ನಾಯಕರು ನೀಡುತ್ತಿರುವ ಹೇಳಿಕೆಗಳು ಆ ಪಕ್ಷಕ್ಕೇ ಮುಳುವಾಗುತ್ತಿವೆ. ಸಂಪತ್ತಿನ ಹಂಚಿಕೆ ಕುರಿತು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ, ಪಾಕಿಸ್ತಾನದ ಕುರಿತು ಪಕ್ಷದ ನಾಯಕ ಮಣಿಶಂಕರ್‌ ಅಯ್ಯರ್‌ (Mani Shankar Aiyar) ಅವರು ನೀಡಿರುವ ಹೇಳಿಕೆಗಳು ಕಾಂಗ್ರೆಸ್‌ಗೆ ಭಾರಿ ಮುಜುಗರ ತಂದಿವೆ. ಇದೇ ಕಾರಣಕ್ಕಾಗಿ, ಇಬ್ಬರೂ ನಾಯಕರ ಹೇಳಿಕೆಗಳಿಂದ ಕಾಂಗ್ರೆಸ್‌ ಅಂತರ ಕಾಪಾಡಿಕೊಂಡಿದೆ.

ಸ್ಯಾಮ್‌ ಪಿತ್ರೋಡಾ ಅವಾಂತರಗಳು

“ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ದೇಶದ ಜನರ ಸಂಪತ್ತನ್ನು ಕಸಿದು, ಹಂಚಿಕೆ ಮಾಡುತ್ತದೆ. ಮಹಿಳೆಯರ ಮಂಗಳಸೂತ್ರಕ್ಕೆ ಕೈ ಹಾಕುತ್ತದೆ” ಎಂಬುದಾಗಿ ನರೇಂದ್ರ ಮೋದಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸುವ ಭರದಲ್ಲಿ, ಸ್ಯಾಮ್‌ ಪಿತ್ರೋಡಾ ಅವರು ಅಮೆರಿಕದ ಉದಾಹರಣೆ ಕೊಟ್ಟರು. “ಅಮೆರಿಕದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ಅಪ್ಪನ ಆಸ್ತಿಯಲ್ಲಿ ಶೇ.55ರಷ್ಟು ಆಸ್ತಿಯನ್ನು ಸರ್ಕಾರಕ್ಕೆ ಕೊಡಬೇಕು” ಎಂಬುದಾಗಿ ಹೇಳಿದ್ದು ವಿವಾದಕ್ಕೆ ಕಾರಣವಾಯಿತು.

“ಅಮೆರಿಕದಲ್ಲಿ ಪಿತ್ರಾರ್ಜಿತ ತೆರಿಗೆ ಇದೆ. ಒಬ್ಬನು 100 ಮಿಲಿಯನ್ USD ಮೌಲ್ಯದ ಸಂಪತ್ತನ್ನು ಹೊಂದಿದ್ದರೆ ಅವನು ಸತ್ತಾಗ ಕೇವಲ 45 ಪ್ರತಿಶತವನ್ನು ತನ್ನ ಮಕ್ಕಳಿಗೆ ವರ್ಗಾಯಿಸಬಹುದು. 55 ಪ್ರತಿಶತವನ್ನು ಸರ್ಕಾರವು ಹೊಂದುತ್ತದೆ. ಅದು ಆಸಕ್ತಿದಾಯಕ ಕಾನೂನು. ನಿಮ್ಮ ಪೀಳಿಗೆಯಲ್ಲಿ ನೀವು ಸಂಪತ್ತನ್ನು ಸಂಪಾದಿಸಿದ್ದೀರಿ. ಮತ್ತು ನೀವು ಈಗ ಹೋಗುವಾಗ, ನಿಮ್ಮ ಸಂಪತ್ತನ್ನು ಸಾರ್ವಜನಿಕರಿಗೆ ಬಿಡಬೇಕು. ಎಲ್ಲವನ್ನೂ ಅಲ್ಲ, ಅದರಲ್ಲಿ ಅರ್ಧದಷ್ಟು, ಇದು ನ್ಯಾಯೋಚಿತವಾಗಿದೆ” ಎಂದು ಪಿತ್ರೋಡಾ ಹೇಳಿದ್ದರು. ಇನ್ನು, ಅವರು ದಕ್ಷಿಣ ಭಾರತೀಯರು ಆಫ್ರಿಕಾದವರಂತೆ ಇದ್ದಾರೆ ಎಂದು ವರ್ಣ ಭೇದದ ಹೇಳಿಕೆಗಳಿಂದಾಗಿ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.

ಮಣಿಶಂಕರ್‌ ಅಯ್ಯರ್‌ ಪಾಕ್‌ ಪ್ರೇಮ

ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿರುವ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ ಅವರೀಗ ಪಾಕಿಸ್ತಾನದ ಪರವಾಗಿ ಮಾತನಾಡಿದ್ದಾರೆ. ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದು ಅವರು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ, ಮಣಿಶಂಕರ್‌ ಅಯ್ಯರ್‌ ಅವರ ಹೇಳಿಕೆಯಿಂದ ಕಾಂಗ್ರೆಸ್‌ ಅಂತರ ಕಾಪಾಡಿಕೊಂಡಿದೆ.

“ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ, ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ” ಎಂದು ಅಯ್ಯರ್‌ ಹೇಳಿದ್ದಾರೆ.

ಇದನ್ನೂ ಓದಿ: Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Continue Reading

ವಿದೇಶ

Sharia Law: “ಅಮೆರಿಕನ್ನರ ಮೇಲೂ ಷರಿಯಾ ಕಾನೂನು ಹೇರಲಾಗುತ್ತದೆ…”; ಸಂಚಲನ ಮೂಡಿಸಿದ ವೈರಲ್‌ ವಿಡಿಯೋ

Sharia Law: ಮುಂದಿನ ದಿನಗಳಲ್ಲಿ ಷರಿಯಾ ಕಾನೂನನ್ನು ಅಮೆರಿಕನ್ನರ ಮೇಲೆ ಹೇರಲಾಗುವಂತಹ ಸ್ಥಿತಿ ನಿರ್ಮಾಣ ಆಗುತ್ತದೆ ಎಂದು ರಿಪಬ್ಲಿಕ್‌ ಪಕ್ಷದ ಸದಸ್ಯ ಚಿಪ್‌ ರಾಯ್‌ ಕಳವಳ ವ್ಯಕ್ತಪಡಿಸಿದ್ದಾರೆ. ಗಡಿ ಭದ್ರತೆ ಮತ್ತು ವಿದೇಶಿಗರ ನೆಲೆ ಬಗ್ಗೆ ಅಮೆರಿಕ ಸಂಸತ್‌ನಲ್ಲಿ ಪ್ರಸ್ತಾಪಿಸಿದ ರಾಯ್‌, ಷರಿಯಾ ಕಾನೂನುಗಳ ಬಗ್ಗೆ ತಮಗೆ ಕೊಂಚ ಕಳವಳ ಇದ್ದೇ ಇದೆ ಎಂದು ಹೇಳಿದರು.

VISTARANEWS.COM


on

Sharia law
Koo

ಅಮೆರಿಕ: ಇದೇ ಮೊದಲ ಬಾರಿಗೆ ಷರಿಯಾ ಕಾನೂನು(Sharia Law) ಬಗ್ಗೆ ಅಮೆರಿಕ(America)ದಲ್ಲಿ ದನಿ ಎತ್ತಿ ಎದ್ದಿದೆ. ಮುಂದಿನ ದಿನಗಳಲ್ಲಿ ಷರಿಯಾ ಕಾನೂನನ್ನು ಅಮೆರಿಕನ್ನರ ಮೇಲೆ ಹೇರಲಾಗುವಂತಹ ಸ್ಥಿತಿ ನಿರ್ಮಾಣ ಆಗುತ್ತದೆ ಎಂದು ರಿಪಬ್ಲಿಕ್‌ ಪಕ್ಷದ ಸದಸ್ಯ ಚಿಪ್‌ ರಾಯ್‌(Rep. Chip Roy) ಕಳವಳ ವ್ಯಕ್ತಪಡಿಸಿದ್ದಾರೆ. ಗಡಿ ಭದ್ರತೆ ಮತ್ತು ವಿದೇಶಿಗರ ನೆಲೆ ಬಗ್ಗೆ ಅಮೆರಿಕ ಸಂಸತ್‌ನಲ್ಲಿ ಪ್ರಸ್ತಾಪಿಸಿದ ರಾಯ್‌, ಷರಿಯಾ ಕಾನೂನುಗಳ ಬಗ್ಗೆ ತಮಗೆ ಕೊಂಚ ಕಳವಳ ಇದ್ದೇ ಇದೆ ಎಂದು ಹೇಳಿದರು. ಇದೀಗ ಅವರ ಈ ವಿಡಿಯೋ ಪ್ರಪಂಚಾದ್ಯಂತ ಬಹಳ ಸದ್ದು ಮಾಡುತ್ತಿದೆ. ಮತ್ತು ಸಾಮಾಜಿಕ ಜಾಲಾತಾಣಗಳಲ್ಲಿ ಭಾರೀ ವೈರಲ್‌(Viral video) ಆಗುತ್ತಿದೆ.

ರಾಯ್‌ ಹೇಳಿದ್ದೇನು?

ಸಂಸತ್‌ನಲ್ಲಿ ಮಾತನಾಡಿದ ರಾಯ್‌, ಮುಸ್ಲಿಮರ ಪ್ರತ್ಯೇಕ ಕಾನೂನು ಆಗಿರುವ ಷರಿಯಾ ಕಾನೂನು ಬಗ್ಗೆ ಕಳವಳ ವ್ಯಕ್ತಪಡಿಸಿದರು. ಯಾರಾದಾರೂ ಇಂಗ್ಲೆಂಡ್‌ನಲ್ಲಿ ಏನಾಗ್ತಿದೆ ಎಂಬುದನ್ನು ಗಮನಿಸುತ್ತಿದ್ದೀರಾ? ಅಲ್ಲಿ ಬಹುದೊಡ್ಡ ಸಂಖ್ಯೆಯಲ್ಲಿ ಮುಸ್ಲಿಮರು ಬಂದು ನೆಲೆಸಿದ್ದಾರೆ. ಅಲ್ಲಿ ನೆಲೆವೂರಿರುವ ಅವರು ಏನು ಮಾಡುತ್ತಿದ್ದಾರೆ ಗೊತ್ತೇ? ಅಲ್ಲಿ ಇಸ್ರೇಲ್‌ ವಿರುದ್ಧ ಏನಾದರೂ ಘಟನೆಗಳು ನಡೆದಾಗ ಅದನ್ನು ಸಂಭ್ರಮಿಸುತ್ತಾರೆ. ನೂತನವಾಗಿ ಚುನಾಯಿತನಾಗಿರುವ ಅಲ್ಲಿನ ಸಂಸತ್‌ ಸದಸ್ಯ ಮೋತಿನ್‌ ಅಲಿ ಕೂಡ ಅವರಿಗೆ ಬೆಂಬಲ ನೀಡುತ್ತಾರೆ. ಇಂತಹ ಸ್ಥಿತಿ ಅಮೆರಿಕದಲ್ಲೂ ಬರಬಹುದೆಂಬ ಆತಂಕ ನನಗಿದೆ ಎಂದು ಹೇಳಿದರು. ಅಲಿ ತಮ್ಮ ಗೆಲುವಿನ ಬೆನ್ನಲ್ಲೇ ಪ್ಯಾಲೆಸ್ತೀನ್‌ ಧ್ವಜ ಹಿಡಿ ಅಲ್ಲಾಹು ಅಕ್ಬರ್‌ ಎಂಬು ಘೋಷಣೆ ಕೂಗುತ್ತಾ, ಇದು ಗಾಜಾ ಜನರ ಗೆಲವು ಎಂದು ಹೇಳಿದ್ದರು. ಈ ವಿಡಿಯೋ ಬಹಳ ವೈರಲ್‌ ಆಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ರಾಯ್‌, ಶೀಘ್ರದಲ್ಲೇ ಅಮೆರಿಕಕ್ಕೆ ಇಂತಹ ಸ್ಥಿತಿ ಬರುತ್ತದೆ ಎಂದು ಬರೆದುಕೊಳ್ಳುವ ಮೂಲ ಗಮನ ಸೆಳೆದಿದ್ದರು. ಇದಾದ ಬಳಿಕ ಅಲಿ ಕ್ಷಮೆಯನ್ನೂ ಯಾಚಿಸಿದ್ದರು. ಇದೇ ವಿಚಾರವನ್ನು ಪ್ರಸ್ತಾಪಿಸಿ ರಾಯ್‌ ಸಂಸತ್‌ನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ನಂತರ ಅವರು ಅಮೆರಿಕದಲ್ಲಿ ನೆಲೆಸಿರುವ ವಿದೇಶಿಗರ ಬಗ್ಗೆ ಪ್ರಸ್ತಾಪಿಸಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಅಮೆರಿಕಕ್ಕೆ ವಿದೇಶಿಗರು ವಲಸೆ ಬರುತ್ತಿದ್ದಾರೆ. ವಿದೇಶಿಗರ ಸಂಖ್ಯೆ ದೇಶದಲ್ಲಿ ದಿನೇ ದಿನೇ ಏರಿಕೆ ಆಗುತ್ತಿದೆ. ನಮ್ಮಲ್ಲಿ 51.5 ಮಿಲಿಯನ್‌ ವಿದೇಶಿ ಮೂಲದ ಪ್ರಜೆಗಳಿದ್ದಾರೆ. ಅವರಿಗೆ 20 ರಿಂದ 25 ಮಿಲಿಯನ್‌ ಮಕ್ಕಳಿವೆ. ನಮ್ಮ ಜನಸಂಖ್ಯೆಗಿಂತಲೂ ಅವರ ಜನಸಂಖ್ಯೆ ಶೇ.20ಕ್ಕಿಂತ ಹೆಚ್ಚಿದೆ. ಇದು ಖುಷಿ ವಿಚಾರವೇ? ಎಂದು ಅವರು ಪ್ರಶ್ನಿಸಿದ್ದಾರೆ. ಚಿಪ್‌ ರಾಯ್‌ ಈ ಹೇಳಿಕೆ ಇಡೀ ಪ್ರಪಂಚದ ಗಮನ ಸೆಳೆದಿದ್ದು, ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ:Indian Sailors Released: ಭಾರತಕ್ಕೆ ಭಾರೀ ರಾಜತಾಂತ್ರಿಕ ಗೆಲುವು; ಐವರು ಭಾರತೀಯ ನಾವಿಕರು ರಿಲೀಸ್‌

ಯಾರು ಈ ಚಿಪ್‌ ರಾಯ್‌?

ಚಾರ್ಲ್ಸ್ ಯುಜೀನ್ ” ಚಿಪ್ ” ರಾಯ್ ಒಬ್ಬ ಅಮೇರಿಕನ್ ವಕೀಲ ಮತ್ತು ರಾಜಕಾರಣಿಯಾಗಿದ್ದು ಟೆಕ್ಸಾಸ್‌ನ US ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ . ರಿಪಬ್ಲಿಕನ್ ಪಕ್ಷದ ಸದಸ್ಯ , ರಾಯ್ ಜನವರಿ 3, 2019 ರಂದು ಅಧಿಕಾರ ವಹಿಸಿಕೊಂಡರು. ಕಾಂಗ್ರೆಸ್‌ಗೆ ಆಯ್ಕೆಯಾಗುವ ಮೊದಲು, ಅವರು ಸೆನೆಟರ್ ಟೆಡ್ ಕ್ರೂಜ್‌ಗೆ ಸಿಬ್ಬಂದಿ ಮುಖ್ಯಸ್ಥರಾಗಿ ಮತ್ತು ಟೆಕ್ಸಾಸ್‌ನ ಮೊದಲ ಸಹಾಯಕ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದರು. ಹೌಸ್ ಫ್ರೀಡಂ ಕಾಕಸ್‌ನ ಸದಸ್ಯ ಮತ್ತು ನೀತಿ ಅಧ್ಯಕ್ಷರಾದ ರಾಯ್ ಅವರನ್ನು ಹೌಸ್ ರಿಪಬ್ಲಿಕನ್ ಕಾನ್ಫರೆನ್ಸ್‌ನ ಬಲಪಂಥೀಯ ಬಣದ ಸದಸ್ಯ ಎಂದು ಪರಿಗಣಿಸಲಾಗಿದೆ .

Continue Reading

ವಿದೇಶ

Indian Sailors Released: ಭಾರತಕ್ಕೆ ಭಾರೀ ರಾಜತಾಂತ್ರಿಕ ಗೆಲುವು; ಐವರು ಭಾರತೀಯ ನಾವಿಕರು ರಿಲೀಸ್‌

Indian Sailors Released:ಇರಾನ್‌ ಜೊತೆಗಿನ ಭಾರತದ ಮಾತುಕತೆ ಯಶಸ್ವಿಯಾಗಿದ್ದು, ವಶಕ್ಕೆ ಪಡೆದಿರುವ ಐವರನ್ನು ರಿಲೀಸ್‌ ಮಾಡಲು ಇರಾನ್‌ ಒಪ್ಪಿದ್ದು, ಅವರನ್ನು ಈಗಾಗಲೇ ತಾಯ್ನಾಡಿಗೆ ಕಳುಹಿಸಲಾಗಿದೆ ಎಂದು ಇರಾನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೇಳಿದೆ. ಇದು ಭಾರತದ ಬಹುದೊಡ್ಡ ರಾಜತಾಂತ್ರಿಕ ಗೆಲುವಾಗಿದೆ.

VISTARANEWS.COM


on

Indian Sailors Released
Koo

ಟೆಹ್ರಾನ್‌: ವಶಕ್ಕೆ ಪಡೆದಿದ್ದ ಇಸ್ರೇಲ್‌(Israel) ಮೂಲದ ಹಡಗಿನಲ್ಲಿದ್ದ ಐವರು ಭಾರತೀಯರನ್ನು(Indian Sailors Released) ಇರಾನ್‌(Iran) ಕೊನೆಗೂ ಬಿಡುಗಡೆಗೊಳಿಸಿದೆ. ಇರಾನ್‌ ಜೊತೆಗಿನ ಭಾರತದ ಮಾತುಕತೆ ಯಶಸ್ವಿಯಾಗಿದ್ದು, ವಶಕ್ಕೆ ಪಡೆದಿರುವ ಐವರನ್ನು ರಿಲೀಸ್‌ ಮಾಡಲು ಇರಾನ್‌ ಒಪ್ಪಿದ್ದು, ಅವರನ್ನು ಈಗಾಗಲೇ ತಾಯ್ನಾಡಿಗೆ ಕಳುಹಿಸಲಾಗಿದೆ ಎಂದು ಇರಾನ್‌ನಲ್ಲಿರುವ ಭಾರತೀಯ ರಾಯಭಾರಿ(Indian Embassy) ಕಚೇರಿ ಹೇಳಿದೆ. ಇದು ಭಾರತದ ಬಹುದೊಡ್ಡ ರಾಜತಾಂತ್ರಿಕ ಗೆಲುವಾಗಿದೆ.

ಈ ರಾಜತಾಂತ್ರಿಕ ಗೆಲುವಿಗೆ ಬಂದರ್ ಅಬ್ಬಾಸ್‌ನಲ್ಲಿರುವ ಭಾರತದ ರಾಯಭಾರ ಕಚೇರಿ, ಇರಾನ್ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದೆ. ಇಸ್ರೇಲ್-ಸಂಬಂಧಿತ ಸರಕು ಹಡಗನ್ನು ಏ.13 ರಂದು ಇರಾನ್ ವಶಪಡಿಸಿಕೊಂಡಿತು. ಅದರಲ್ಲಿ 17 ಭಾರತೀಯರು ಇದ್ದರು. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ನೌಕಾಪಡೆಯು ಹಾರ್ಮುಜ್ ಜಲಸಂಧಿಯ ಬಳಿ ಕಂಟೈನರ್ ಹಡಗನ್ನು ವಶಪಡಿಸಿಕೊಂಡಿತ್ತು. ಏ.13 ರಂದು ಇರಾನ್ ವಶಪಡಿಸಿಕೊಂಡಿದ್ದ ಇಸ್ರೇಲ್ ಸಂಪರ್ಕಿತ ಸರಕು ಹಡಗು ‘ಎಂಎಸ್‌ಸಿ ಏರೀಸ್’ನ 17 ಭಾರತೀಯ ಸಿಬ್ಬಂದಿಯಲ್ಲಿ ಒಬ್ಬರಾದ ಕೇರಳದ ತ್ರಿಶೂರ್‌ನ ಆನ್ ಟೆಸ್ಸಾ ಜೋಸೆಫ್ ಏ.18 ರಂದು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದರು. 17 ಭಾರತೀಯ ಸಿಬ್ಬಂದಿಯಲ್ಲಿ ಒಬ್ಬರು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ. ಇತರರು ಸುರಕ್ಷಿತವಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿತ್ತು. ಒಪ್ಪಂದದ ಜವಾಬ್ದಾರಿಗಳನ್ನು ಪೂರೈಸಿದ ನಂತರ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದೆ.

ಬಿಡುಗಡೆಗೊಂಡವರಲ್ಲಿ ಐವರು ಭಾರತೀಯರು, ಓರ್ವ ಫಿಲಿಪ್ಪೀನ್ಸ್ ಹಾಗೂ ಓರ್ವ ಎಸ್ಟೋನಿಯಾ ಪ್ರಜೆಗಳು ಸೇರಿದ್ದಾರೆ. ಪೋರ್ಚುಗೀಸ್ ಧ್ವಜ ಹೊಂದಿರುವ ಎಂಎಸ್‍ಸಿ ಏರೀಸ್ ಹಡಗನ್ನು ಎಪ್ರಿಲ್ 13ರಂದು ಇರಾನ್‍ನ ರೆವೊಲ್ಯುಷನರಿ ಗಾಡ್ರ್ಸ್ ವಶಕ್ಕೆ ಪಡೆದಿತ್ತು. ಕಂಟೈನರ್ ಹಡಗು ಇಸ್ರೇಲ್ ಜತೆ ಸಂಪರ್ಕ ಹೊಂದಿತ್ತು ಎಂದು ಇರಾನ್ ವಿದೇಶಾಂಗ ಇಲಾಖೆ ಹೇಳಿತ್ತು. ಇರಾನ್‍ನ ಕ್ರಮವನ್ನು ಸ್ವಾಗತಿಸಿರುವ ಪೋರ್ಚುಗಲ್, ಉಳಿದ 17 ಸಿಬ್ಬಂದಿಗಳನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿದೆ. ಹಡಗಿನ ಎಲ್ಲಾ ಸಿಬ್ಬಂದಿಗಳನ್ನೂ ಮಾನವೀಯ ನೆಲೆಯಲ್ಲಿ ಬಿಡುಗಡೆಗೊಳಿಸಲಾಗುವುದು. ಆದರೆ ಜಫ್ತಿ ಮಾಡಿರುವ ಹಡಗನ್ನು ಬಿಡುಗಡೆಗೊಳಿಸುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವರು ಕಳೆದ ವಾರ ಹೇಳಿದ್ದರು.

ಇದನ್ನೂ ಓದಿ:Actor Ravichandran: ಕನಸುಗಾರನ ʻಪ್ರೇಮಲೋಕ 2’ ಚಿತ್ರಕ್ಕೆ ನಾಯಕಿ ಫಿಕ್ಸ್‌!

ಇರಾನ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಭಾರತ ವಿದೇಶಾಂಗ ಇಲಾಖೆ ಭಾರತೀಯರ ಸುರಕ್ಷಿತ ಬಿಡುಗಡೆ ಒತ್ತಾಯಿಸಿತ್ತು. ಖುದ್ದು ಕೇಂದ್ರ ಸಚಿವ ಜೈಶಂಕರ್​ ಸಹ ಇರಾನ್ ಜತೆ ಮಾತುಕತೆ ನಡೆಸಿ ಭಾರತೀಯರನ್ನು ಬಿಟ್ಟು ಕಳುಹಿಸುವಂತೆ ಮನವಿ ಮಾಡಿದ್ದು, ರಾಜತಾಂತ್ರಿಕ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಲು ಮುಂದಾಗಿತ್ತು.


Promoted

Continue Reading
Advertisement
Prajwal Revanna Case
ಕರ್ನಾಟಕ44 seconds ago

Prajwal Revanna Case: ರೇವಣ್ಣ ಬಸವನಗುಡಿ ನಿವಾಸದಲ್ಲಿ 2ನೇ ಬಾರಿ ಸ್ಥಳ ಮಹಜರು

Arvind Kejriwal
ದೇಶ2 mins ago

Arvind Kejriwal: 50 ದಿನಗಳ ವನವಾಸ ಅಂತ್ಯ; ತಿಹಾರ ಜೈಲಿನಿಂದ ಅರವಿಂದ್ ಕೇಜ್ರಿವಾಲ್‌ ಬಿಡುಗಡೆ

Xiaomi Smart Phone
ಗ್ಯಾಜೆಟ್ಸ್19 mins ago

Xiaomi Smart Phone: ವರ್ಷಾಂತ್ಯಕ್ಕೆ ಬರಲಿದೆ ಶಿಯೊಮಿಯ ಫೋಲ್ಡಿಂಗ್​ ಫೋನ್​ಗಳು; ಇಲ್ಲಿದೆ ಸಂಪೂರ್ಣ ವಿವರ

Rahul Dravid
Latest29 mins ago

Rahul Dravid : ವಿಶ್ವ ಕಪ್​ ಬಳಿಕ ದ್ರಾವಿಡ್​ ಭಾರತದ ಕೋಚ್ ಅಗಿರುವುದಿಲ್ಲ; ಮುಂದೆ ಯಾರು?

karnataka Weather Forecast
ಮಳೆ30 mins ago

Karnataka Weather : ಬಿರುಗಾಳಿ ಸಹಿತ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸೇರಿ ಶ್ವಾನ ಸಾವು‌, ಮತ್ತೊಬ್ಬ ಗಂಭೀರ

Mango Facepack
ಫ್ಯಾಷನ್32 mins ago

Mango Facepack: ಆಕರ್ಷಕ ತ್ವಚೆಗಾಗಿ ಸೀಸನ್‌ ಮ್ಯಾಂಗೋ ಫೇಸ್‌ಪ್ಯಾಕ್‌

Manisha Koirala
ಸಿನಿಮಾ33 mins ago

Manisha Koirala: ಕ್ಯಾನ್ಸರ್‌ ವಿರುದ್ಧ ಹೋರಾಡಿದ್ದು ಹೇಗೆ? ಅನುಭವ ಹಂಚಿಕೊಂಡ ಮನೀಶಾ ಕೊಯಿರಾಲ

New Tata Ace EV 1000 launched by Tata Motors
ವಾಣಿಜ್ಯ40 mins ago

Tata Motors: Tata Ace EV 1000 ಬಿಡುಗಡೆ ಮಾಡಿದ ಟಾಟಾ ಮೋಟರ್ಸ್‌; ಏನಿದರ ವಿಶೇಷತೆ? ದರ ಎಷ್ಟು?

Brij Bhushan
Latest46 mins ago

Brij Bhushan : ಡಬ್ಲ್ಯುಎಫ್​ಐ ಮಾಜಿ ಅಧ್ಯಕ್ಷ ಬ್ರಿಜ್​ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಲು ಕೋರ್ಟ್​ ಆದೇಶ

Dates Benefits
ಆರೋಗ್ಯ47 mins ago

Dates Benefits: ಲೈಂಗಿಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ದಿನಕ್ಕೊಂದು ಖರ್ಜೂರ ತಿಂದರೆ ಸಾಕು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ5 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ6 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ8 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ14 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ21 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ22 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ23 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌