New Covid variant: ಕೋವಿಡ್ ಹೊಸ ರೂಪಾಂತರಿ ಕಾಟಕ್ಕೆ ಬೆಚ್ಚಿದ ಬ್ರಿಟನ್‌! ಏನಿದು ಎರಿಸ್? ಇಲ್ಲಿದೆ ವಿವರ‌ - Vistara News

ಪ್ರಮುಖ ಸುದ್ದಿ

New Covid variant: ಕೋವಿಡ್ ಹೊಸ ರೂಪಾಂತರಿ ಕಾಟಕ್ಕೆ ಬೆಚ್ಚಿದ ಬ್ರಿಟನ್‌! ಏನಿದು ಎರಿಸ್? ಇಲ್ಲಿದೆ ವಿವರ‌

ಇದು ವೇಗವಾಗಿ ಹರಡುತ್ತಿರುವ Omicronನ ಇನ್ನೊಂದು ರೂಪಾಂತರಿಯಾಗಿದೆ. EG.5.1 ಎಂಬುದು ಇದರ ವೈಜ್ಞಾನಿಕ ಹೆಸರು. ಇದನ್ನು ಮೊದಲ ಬಾರಿಗೆ ಯುಕೆಯಲ್ಲಿ ಕಳೆದ ತಿಂಗಳು ಪತ್ತೆಹಚ್ಚಲಾಯಿತು.

VISTARANEWS.COM


on

Influenza-Like Illness must report As Covid Cases Rise Says Central
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್‌: ಬ್ರಿಟನ್‌ನಲ್ಲಿ ಕೋವಿಡ್ ವೈರಸ್‌ನ ಹೊಸ ರೂಪಾಂತರಿಯೊಂದು (New Covid variant) ವೇಗವಾಗಿ ಹರಡುತ್ತಿದ್ದು, ಇದು ಬ್ರಿಟನ್‌ ಹಾಗೂ ಸುತ್ತಮುತ್ತಲಿನ ದೇಶಗಳಲ್ಲಿ ಕಳವಳಕ್ಕೆ ಕಾರಣವಾಗಿದೆ. ಎರಿಸ್‌ (Eris) ಎಂದು ಇದನ್ನು ಹೆಸರಿಸಲಾಗಿದೆ.

ಇದು ವೇಗವಾಗಿ ಹರಡುತ್ತಿರುವ Omicronನ ಇನ್ನೊಂದು ರೂಪಾಂತರಿಯಾಗಿದೆ. EG.5.1 ಎಂಬುದು ಇದರ ವೈಜ್ಞಾನಿಕ ಹೆಸರು. ಇದನ್ನು ಮೊದಲ ಬಾರಿಗೆ ಯುಕೆಯಲ್ಲಿ ಕಳೆದ ತಿಂಗಳು ಪತ್ತೆಹಚ್ಚಲಾಯಿತು.

ಅಂತಾರಾಷ್ಟ್ರೀಯ ಮಟ್ಟದಲ್ಲಿ, ವಿಶೇಷವಾಗಿ ಏಷ್ಯಾದಲ್ಲಿ ಹೆಚ್ಚುತ್ತಿರುವ ಕೋವಿಡ್‌ (covid 19) ಪ್ರಕರಣಗಳ ಪರಿಶೀಲನೆಯ ಭಾಗವಾಗಿ 3 ಜುಲೈ 2023ರಂದು ನಡೆಸಲಾದ ಪರೀಕ್ಷೆಯಲ್ಲಿ EG.5.1 ಅನ್ನು ಮೊದಲು ಗಮನಿಸಲಾಯಿತು. ಯುಕೆಯ ಡೇಟಾದಲ್ಲಿ ಇದರ ಜಿನೋಮ್‌ಗಳು ಹೆಚ್ಚುತ್ತಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದರ ಬೆಳವಣಿಗೆಯನ್ನು ಗಮನಿಸಲಾಗುತ್ತಿದ್ದು, ವಿವರವಾದ ಗುಣಲಕ್ಷಣ ಮತ್ತು ವಿಶ್ಲೇಷಣೆಯನ್ನು ಮಾಡಲಾಗುತ್ತಿದೆ. ತಜ್ಞರ ಪ್ರಕಾರ ಈಗ ಏಳು ಹೊಸ COVID ಪ್ರಕರಣಗಳಲ್ಲಿ ಒಂದರಲ್ಲಿ ಹೊಸ ರೂಪಾಂತರಿಯು ಕಂಡುಬರುತ್ತಿದೆ. ಆಗಸ್ಟ್ 3ರ ವರದಿಯ ಪ್ರಕಾರ, ಉಸಿರಾಟದ ಸಮಸ್ಯೆಯ 4,396 ಮಾದರಿಗಳಲ್ಲಿ 5.4 ಪ್ರತಿಶತ COVID-19 ಎಂದು ಗುರುತಿಸಲಾಗಿದೆ. ಇದು ಹಿಂದಿನ ವರದಿಗಿಂತ ಹೆಚ್ಚಿದೆ. ಈ ಏರಿಕೆಯ ನಡುವೆ ಇತರ ದೇಶಗಳಿಗೆ ಜಾಗರೂಕರಾಗಿರಿ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಸಲಹೆ ನೀಡಿದೆ.

ರೂಪಾಂತರಿ ಎರಿಸ್ ಹೇಗಿದೆ?

ಹೊಸ ರೂಪಾಂತರಿ EG.5.1, ವೇಗವಾಗಿ ಹರಡುತ್ತಿರುವ Omicronನಿಂದ ಬಂದಿದೆ. ಕಳೆದ ತಿಂಗಳು, ಎರಿಸ್ ಎಂಬ ಅಡ್ಡಹೆಸರನ್ನು ಮೊದಲು ಬಳಸಲಾಯಿತು. ಇದು ಈಗ ದೇಶದಾದ್ಯಂತ ವೇಗವಾಗಿ ಹರಡುತ್ತಿದೆ. ಜನರು ಲಸಿಕೆಗಳಿಂದಾಗಿ ಈಗ ಹೆಚ್ಚು ಸುರಕ್ಷಿತಾಗಿದ್ದಾರೆ. ಆದರೂ ಇದನ್ನು ನಿರ್ಲಕ್ಷಿಸಬಾರದು ಎಂದು WHO ಡೈರೆಕ್ಟರ್ ಜನರಲ್ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಹೇಳಿದ್ದಾರೆ.

ಎರಿಸ್‌ನ ಲಕ್ಷಣಗಳೇನು?

ಅಧ್ಯಯನದ ಪ್ರಕಾರ, ಇದರ ಮುಖ್ಯ ರೋಗಲಕ್ಷಣಗಳು ಓಮಿಕ್ರಾನ್ ಅನ್ನೇ ಹೋಲುತ್ತವೆ. ಇತ್ತೀಚಿನ ವರದಿಗಳ ಪ್ರಕಾರ ಉಸಿರಾಟದ ತೊಂದರೆ, ವಾಸನೆಯ ನಷ್ಟ ಮತ್ತು ಜ್ವರಗಳು ಮುಖ್ಯ ಲಕ್ಷಣಗಳಲ್ಲ. ಇತರ ಪ್ರಮುಖ ಲಕ್ಷಣಗಳು ಹೀಗಿವೆ:

  • ಗಂಟಲು ಕೆರೆತ
  • ಮೂಗು ಸೋರುವಿಕೆ
  • ಮೂಗು ಬ್ಲಾಕ್
  • ಸೀನು
  • ಒಣ ಕೆಮ್ಮು
  • ತಲೆನೋವು
  • ಆರ್ದ್ರ ಕೆಮ್ಮು
  • ಒರಟಾದ ಧ್ವನಿ
  • ಸ್ನಾಯು ನೋವು
  • ವಾಸನೆ ಬದಲಾವಣೆ

ಇದನ್ನೂ ಓದಿ: CoWin Data leak : ಕೋವಿಡ್‌ ಲಸಿಕೆ ಪಡೆದವರ ವಿವರ ಟೆಲಿಗ್ರಾಂ ಆ್ಯಪ್‌ನಲ್ಲಿ ಸೋರಿಕೆ, ಈ ಬಗ್ಗೆ ಇಲಾಖೆ ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Fire Accident : ಬೆಂಗಳೂರು ನಗರ ವಲಯದಲ್ಲಿ ಅರಣ್ಯಕ್ಕೆ ಬೆಂಕಿ, ಭಾರೀ ಹಾನಿ

Fire Accident :ಗುರುವಾರ ರಾತ್ರಿ ವೇಳೆ ಅರಣ್ಯ ಪ್ರದೇಶಕ್ಕೆ ಬೆಂಕಿ ತಾಗಿದೆ. ಎರಡು ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಮಾಡಿದೆ. ಅರಣ್ಯವು ಬಿಬಿಎಂಪಿ ವ್ಯಾಪ್ತಿಗೆ ಸೇರಿದ್ದು, ಅದರಲ್ಲಿ 1.5 ಎಕರೆ ಜಾಗಕ್ಕೆ ಸಂಪೂರ್ಣ ಬೆಂಕಿ ಆವರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Fire Accident
Koo

ಬೆಂಗಳೂರು: ಮಹಾನಗರದ ಹೊರವಲಯದ ಸುಮನ್ನಹಳ್ಳಿ ಬ್ರಿಡ್ಜ್ ಬಳಿ ಶ್ರೀಗಂಧ ಕಾವಲ್ ನಲ್ಲಿ ಬೆಂಕಿ ಅವಘಡ (Fire Accident) ಸಂಭವಿಸಿದೆ. ಮೂರು ಎಕರೆ ಅರಣ್ಯ ಪ್ರದೇಶದಲ್ಲಿ ಹೊತ್ತಿ ಮರಗಳು ಹೊತ್ತಿ ಉರಿದಿವೆ. ಒಣ ಕಸಕ್ಕೆ ಬೆಂಕಿ ಹಾಕಿರುವ ಹಿನ್ನಲೆ ಮರಗಳಿಗೆ ಬೆಂಕಿ ತಗುಲಿದೆ ಎಂದು ಶಂಕಿಸಲಾಗಿದೆ. ಬೆಂಗಳೂರು ನಗರದಲ್ಲಿ ಬೇಸಿಗೆ ಪ್ರಭಾವ ಹೆಚ್ಚಾಗಿದೆ. ಹೀಗಾಗಿ ಕಸಕ್ಕೆ ಹಾಕಿದ ಬೆಂಕಿ ಅರಣಕ್ಕೆ ತಾಗಿದೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ರಾತ್ರಿ ವೇಳೆ ಅರಣ್ಯ ಪ್ರದೇಶಕ್ಕೆ ಬೆಂಕಿ ತಾಗಿದೆ. ಎರಡು ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಮಾಡಿದೆ. ಅರಣ್ಯವು ಬಿಬಿಎಂಪಿ ವ್ಯಾಪ್ತಿಗೆ ಸೇರಿದ್ದು, ಅದರಲ್ಲಿ 1.5 ಎಕರೆ ಜಾಗಕ್ಕೆ ಸಂಪೂರ್ಣ ಬೆಂಕಿ ಆವರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ತೆರವುಗೊಳಿಸಿದ ಮರಗಳನ್ನು ಇಲ್ಲಿ ತಂದು ಡಂಪ್ ಮಾಡಲಾಗುತ್ತಿತ್ತು. ಅದೇ ರೀತಿ ಹೊರಗಡೆ ಮಾರಟ ಮಾಡುವ ಕಟ್ಟಿಗೆಗಳನ್ನು ಇಲ್ಲಿ ತಂದು ಹಾಕಿ ಹರಾಜು ಮಾಡಲಾಗ್ತಿತ್ತು. ಹರಾಜು ಆಗದೇ ಉಳಿದಿದ್ದ ಕಟ್ಟಿಗೆಗಳೆಲ್ಲ ಅರಣ್ಯ ವ್ಯಾಪ್ತಿಯಲ್ಲಿ ರಾಶಿ ಬಿದ್ದಿದ್ದವು. ತೀವ್ರ ಬಿಸಿಲಿನ ಕಾರಣ ಸಂಪೂರ್ಣ ಒಣಗಿದ್ದ ಮರದ ತುಂಡುಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಸಾಧ್ಯತೆಯೂ ಇದೆ ಎಂಬುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ.

ಕಾಮಾಕ್ಷಿಪಾಳ್ಯ ಪೊಲೀಸರು ಮತ್ತು ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸತತ 9 ಗಂಟೆಗಳಿಂದ ನಿರಂತರ ಕಾರ್ಯಾಚರಣೆ ನಡೆಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಉತ್ತರಾಖಂಡದಲ್ಲಿ ಕಾಡಿನ ಬೆಂಕಿ ನಂದಿಸಲು ವಾಯು ಪಡೆಯ ಹೆಲಿಕಾಪ್ಟರ್‌ ಬಳಕೆ


ಡೆಹ್ರಾಡೂನ್‌: ಉತ್ತರಾಖಂಡದ ನೈನಿತಾಲ್ ಜಿಲ್ಲೆಯಲ್ಲಿ ಭುಗಿಲೆದ್ದಿರುವ ಕಾಡ್ಗಿಚ್ಚು (Forest Fires) ಶನಿವಾರ ಪೈನ್‌ ಪ್ರದೇಶದ ಹೈಕೋರ್ಟ್‌ ಕಾಲನಿಯ ಸಮೀಪಕ್ಕೂ ವ್ಯಾಪಿಸಿದ್ದು, ನಂದಿಸಲು ಐಎಎಫ್ (Indian Air Force) ಹೆಲಿಕಾಪ್ಟರ್‌ (Air Force Chopper) ಬಳಸಲಾಗಿದೆ. ಸದ್ಯ ಹೆಲಿಕಾಪ್ಟರ್‌ ಕಾರ್ಯಾಚರಣೆಯ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ: Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

ಅಗ್ನಿಯ ಕೆನ್ನಾಲಗೆ ಅಪಾಯಕಾರಿಯಾಗಿ ವ್ಯಾಪಿಸುತ್ತಿದ್ದು, ಜನವಸತಿ ಪ್ರದೇಶಗಳತ್ತ ನುಗ್ಗ ತೊಡಗಿದೆ. ಪೈನ್‌ನ ಈ ಪ್ರದೇಶದಿಂದ ಸುಮಾರು 5 ಕಿ.ಮೀ. ದೂರಲ್ಲಿ ಸೇನಾ ಕಂಟೋನ್‌ಮೆಂಟ್‌ ಇದ್ದು, ಅಧಿಕಾರಿಗಳ ತ್ವರಿತವಾಗಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ʼʼಎಂಐ-17 ವಿ5 (Mi-17 V5) ಹೆಲಿಕಾಪ್ಟರ್‌ ಅನ್ನು ಬೆಂಕಿ ನಿಯಂತ್ರಣ ಕಾರ್ಯಾಚರಣೆಗಾಗಿ ಬಳಸಲಾಗಿದೆʼʼ ಎಂದು ಭಾರತೀಯ ವಾಯುಪಡೆ ತಿಳಿಸಿದೆ. ಕಾರ್ಯಾಚರಣೆಯ ವಿಡಿಯೊವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದೆ. “ನೈನಿತಾಲ್ ಬಳಿಯ ವಾಯುಪಡೆ ನಿಲ್ದಾಣದ ಸಮೀಪದ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅದನ್ನು ನಿಯಂತ್ರಿಸಲು ಐಎಎಫ್‌ ತನ್ನ ವೈಮಾನಿಕ ಸಾಹಸ ಪ್ರದರ್ಶಿಸಿದೆʼʼ ಎಂದು ಐಎಎಫ್ ಬರೆದುಕೊಂಡಿದೆ.

ಕಾರ್ಯಾಚರಣೆ ಹೇಗಿತ್ತು?

ʼʼಹೆಲಿಕಾಪ್ಟರ್ ನೈನಿ ಮತ್ತು ಭೀಮ್ತಾಲ್ ಸರೋವರಗಳಿಂದ ಬಾಂಬಿ ಬಕೆಟ್‌ (Bambi bucket)ನಲ್ಲಿ ನೀರನ್ನು ಸಂಗ್ರಹಿಸಿ ಪೈನ್ಸ್, ಭೂಮಿಧರ್, ಜ್ಯೋಲಿಕೋಟ್, ನಾರಾಯಣ್ ನಗರ, ಭವಾಲಿ, ರಾಮ್ಗಢ್ ಮತ್ತು ಮುಕ್ತೇಶ್ವರ ಪ್ರದೇಶಗಳಲ್ಲಿ ಕಾಣಿಸಿಕೊಂಡ ಬೆಂಕಿಯ ಮೇಲೆ ಸುರಿದಿದೆʼʼ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಕೆಟ್ ಏಕಕಾಲದಲ್ಲಿ 5,000 ಲೀಟರ್ ನೀರನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಹೊಂದಿದೆ.

ನೈನಿ ಸರೋವರದಲ್ಲಿ ನೀರಿನ ಮಟ್ಟ ಕಡಿಮೆಯಾದ ಕಾರಣ ದೋಣಿ ವಿಹಾರದ ಚಟುವಟಿಕೆಗಳನ್ನು ಕೆಲವು ದಿನಗಳ ಹಿಂದೆಯೇ ಸ್ಥಗಿತಗೊಳಿಸಲಾಗಿತ್ತು. ಇದೀಗ ಕಾರ್ಯಾಚರಣೆಗಾಗಿ ಭೀಮ್ತಾಲ್ ಸರೋವರದಲ್ಲಿ ದೋಣಿ ವಿಹಾರ ನಿಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ʼʼಬೆಂಕಿಯನ್ನು ನಿಯಂತ್ರಣಕ್ಕೆ ತರಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆʼʼ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ. ಅವರು ಬೆಂಕಿ ಆವರಿಸಿರುವ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಂಡಿದ್ದಾರೆ.

Continue Reading

ದೇಶ

Narendra Modi : ಇಂದು, ನಾಳೆ ರಾಜ್ಯದಲ್ಲಿ ಮೋದಿಯಿಂದ ಅಬ್ಬರದ ಪ್ರಚಾರ; ಬಹಿರಂಗ ಭಾಷಣದ ವಿವರ ಇಲ್ಲಿದೆ

Narendra Modi: ನರೇಂದ್ರ ಮೋದಿ ಅವರು ಶನಿವಾರ (ಏಪ್ರಿಲ್‌ 27) ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸಿದ್ದಾರೆ. ಕುಂದಾ ನಗರಿಯಲ್ಲಿಯೇ ಐಟಿಸಿ ವೆಲ್​ಕಮ್​ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ರಾತ್ರಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಮಂದಿಗೆ ಸ್ವಾಗತ ಕೋರಲು ಅವಕಾಶ ನೀಡಲಾಗಿತ್ತು.

VISTARANEWS.COM


on

Narendra modi
Koo

ಬೆಂಗಳೂರು: ಕರ್ನಾಟಕದ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಉತ್ತರ ಕರ್ನಾಟಕ ಪ್ರದೇಶದ 14 ಕ್ಷೇತ್ರಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳು ಉತ್ತರ ಕರ್ನಾಟಕ ಭಾಗದ ಕಡೆ ಹೆಚ್ಚು ಒತ್ತು ಕೊಡುತ್ತಿವೆ. ಪಕ್ಷಗಳ ಬಹುತೇಕ ನಾಯಕರು ಉತ್ತರ ಕರ್ನಾಟಕದಲ್ಲಿಯೇ ಬೀಡುಬಿಟ್ಟಿದ್ದಾರೆ. ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುತ್ತಿದ್ದಾರೆ. ಈ ಹಿನ್ನೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಭಾನುವಾರ (ಏಪ್ರಿಲ್‌ 28) ಹಾಗೂ ಸೋಮವಾರ (ಏಪ್ರಿಲ್‌ 29) ರಾಜ್ಯದಲ್ಲಿ ನರೇಂದ್ರ ಮೋದಿ (Narendra Modi) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ.

ನರೇಂದ್ರ ಮೋದಿ ಅವರು ಶನಿವಾರ (ಏಪ್ರಿಲ್‌ 27) ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸಿದ್ದಾರೆ. ಕುಂದಾ ನಗರಿಯಲ್ಲಿಯೇ ಐಟಿಸಿ ವೆಲ್​ಕಮ್​ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ರಾತ್ರಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಮಂದಿಗೆ ಸ್ವಾಗತ ಕೋರಲು ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರಿಗೆ ಮೋದಿ ಅವರನ್ನು ಸ್ವಾಗತಿಸಲು ಅವಕಾಶ ಮಾಡಿಕೊಡಲಾತ್ತು.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: Modi in Karnataka: ಬೆಳಗಾವಿ ಹೋಟೆಲ್‌ನಲ್ಲಿ 36 ಬಗೆಯ ಭಕ್ಷ್ಯ ಭೋಜನ ಇದ್ರೂ ಎಳನೀರು ಮಾತ್ರ ಸೇವಿಸಿದ ಮೋದಿ!

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading

ಭವಿಷ್ಯ

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಚೌತಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಧನಸ್ಸು ರಾಶಿಯಿಂದ ಭಾನುವಾರ ಬೆಳಗ್ಗೆ 05:37ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮಿಥುನ, ಕಟಕ, ತುಲಾ, ಧನಸ್ಸು, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಚೌತಿ 08:21 ವಾರ: ಭಾನುವಾರ
ನಕ್ಷತ್ರ: ಮೂಲಾ 28:47 ಯೋಗ: ಶಿವ 26:04
ಕರಣ: ಬಾಲವ 08:21 ಅಮೃತಕಾಲ: ರಾತ್ರಿ 10:19 ರಿಂದ 11:57
ದಿನದ ವಿಶೇಷ: ಪಂಚಮಿ

ಸೂರ್ಯೋದಯ : 06:00   ಸೂರ್ಯಾಸ್ತ : 06:34

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ
3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ದೀರ್ಘಕಾಲದ ಪ್ರಯೋಜನಗಳನ್ನು ಹೊಂದಿರುವ ಯೋಜನೆಗಳ ಮೇಲೆ ಕೆಲಸ ಮಾಡವ ಸಾಧ್ಯತೆ ಇದೆ. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಏರಿಳಿತಗಳ ನಂತರ, ಇಂದು ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನ. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಉದ್ಯೋಗಿಗಳಿಗೆ ಶುಭ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢವಾಗಿರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ:ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚು. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳ ಬಗ್ಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮ. ಆರ್ಥಿಕವಾಗಿ ಉತ್ತಮ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ:ಆರೋಗ್ಯದ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ. ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ ಇದೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರ ಆರೋಗ್ಯ ಹದಗೆಡುವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಹೆಚ್ಚಿದ ಕಿರಿಕಿರಿ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯದ ಬೇಡಿಕೆ, ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಶಂಸೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಕರ:ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು, ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳ. ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ ಇರಲಿದೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ ನೀಡಲಿದೆ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕಳೆದ ಕೆಲವು ವರ್ಷಗಳಲ್ಲಿ ಭಾರತದಿಂದ ರಫ್ತಾಗುವ ಹಲವು ಸಾಮಗ್ರಿಗಳಲ್ಲಿ ಕೀಟನಾಶಕಗಳ ಅಂಶ ನಿಗದಿತ ಮಿತಿ ಮೀರಿದೆ ಎಂದು ಕಾರಣ ನೀಡಿ ತಿರಸ್ಕರಿಸಲಾಗಿದೆ. ಅಮೆರಿಕದಲ್ಲಿ ನಮ್ಮ ಬಾಸ್ಮತಿ ಅಕ್ಕಿ, ಪಾಲಿಶ್ಡ್‌ ಅಕ್ಕಿ, ಬೆಂಡೆಕಾಯಿ ಹಾಗೂ ಕ್ಯಾಪ್ಸಿಕಂ, ಯುರೋಪಿನಲ್ಲಿ ಬಾಸ್ಮತಿ ಅಕ್ಕಿ, ಜಪಾನ್‌ನಲ್ಲಿ ಸಿಗಡಿ ಸೇರಿದಂತೆ ಹಲವು ಉತ್ಪನ್ನಗಳನ್ನು ಎತೋಕ್ಸಿಕ್ವಿನ್‌, ಆಕ್ಸಿಟೆಟ್ರಾಸೈಕ್ಲಿನ್‌, ಸಲ್ಫೈಟ್‌, ನೈಟ್ರೋಫರಾನ್‌, ಕ್ಲೋರಾಂಫೆನಿಕಾಲ್‌ ಮುಂತಾದ ಕೀಟನಾಶಕ ಅಂಶಗಳ ಕಾರಣದಿಂದ ತಿರಸ್ಕರಿಸಲಾಗಿತ್ತು. ಇದು ಆತಂಕಕಾರಿ

VISTARANEWS.COM


on

Vistara Editorial
Koo

ಭಾರತದಲ್ಲಿ ತಯಾರಾಗುವ ಒಟ್ಟು 527 ಆಹಾರ ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲಿನ್‌ ಆಕ್ಸೈಡ್‌ (Ethylene oxide) ಹೆಚ್ಚಿನ ಪ್ರಮಾಣದಲ್ಲಿದೆ ಎಂದು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಹೇಳಿದ್ದಾರೆ. 572 ಉತ್ಪನ್ನಗಳ ಪೈಕಿ 87 ಉತ್ಪನ್ನಗಳ ರಫ್ತನ್ನು ಈಗಾಗಲೇ ಗಡಿಯಲ್ಲಿ ರದ್ದುಗೊಳಿಸಲಾಗಿದೆ. ಎಂಡಿಎಚ್, ಎವರೆಸ್ಟ್ ಮಸಾಲೆ ಸೇರಿದಂತೆ ಜನಪ್ರಿಯ ಕಂಪನಿಗಳ ಆಹಾರ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಹೆಚ್ಚಿನ ಮಟ್ಟದಲ್ಲಿದೆಯಂತೆ. ಇದರ ಬೆನ್ನಲ್ಲೇ ಎರಡು ಕಂಪನಿಗಳ ಉತ್ಪನ್ನಗಳನ್ನು ಈಗಾಗಲೇ ಹಾಂಗ್ ಕಾಂಗ್ (Hong Kong) ಮತ್ತು ಸಿಂಗಾಪುರ (Singapore)ದಲ್ಲಿ ಸಂಪೂರ್ಣವಾಗಿ ಬ್ಯಾನ್‌ ಮಾಡಲಾಗಿದೆ. ಎಳ್ಳು ಬೀಜಗಳು, ಗಿಡಮೂಲಿಕೆಗಳು, ಮಸಾಲೆಗಳು ಮತ್ತು ಇತರ ಆಹಾರ ಪದಾರ್ಥಗಳಲ್ಲೂ ಅಪಾಯಕಾರಿ ಕೆಮಿಕಲ್‌ಗಳು ಕಂಡು ಬಂದಿವೆ. ಇದು ಭಾರತದ ರಫ್ತು ವಲಯದ ಮಟ್ಟಿಗೆ ಆತಂಕಕಾರಿ ಸಂಗತಿ.

ಹೀಗಾಗುತ್ತಿರುವುದು ಇದೇ ಮೊದಲ ಬಾರಿ ಅಲ್ಲ. ಕಳೆದ ಕೆಲವು ವರ್ಷಗಳಲ್ಲಿ ಭಾರತದಿಂದ ರಫ್ತಾಗುವ ಹಲವು ಸಾಮಗ್ರಿಗಳಲ್ಲಿ ಕೀಟನಾಶಕಗಳ ಅಂಶ ನಿಗದಿತ ಮಿತಿಯನ್ನು ಮೀರಿದೆ ಎಂದು ಕಾರಣ ನೀಡಿ ತಿರಸ್ಕರಿಸಲಾಗಿದೆ. ಅಮೆರಿಕದಲ್ಲಿ ನಮ್ಮ ಬಾಸ್ಮತಿ ಅಕ್ಕಿ, ಪಾಲಿಶ್ಡ್‌ ಅಕ್ಕಿ, ಬೆಂಡೆಕಾಯಿ ಹಾಗೂ ಕ್ಯಾಪ್ಸಿಕಂ, ಯುರೋಪಿನಲ್ಲಿ ಬಾಸ್ಮತಿ ಅಕ್ಕಿ, ಜಪಾನ್‌ನಲ್ಲಿ ಸಿಗಡಿ ಸೇರಿದಂತೆ ಹಲವು ಉತ್ಪನ್ನಗಳನ್ನು ಎತೋಕ್ಸಿಕ್ವಿನ್‌, ಆಕ್ಸಿಟೆಟ್ರಾಸೈಕ್ಲಿನ್‌, ಸಲ್ಫೈಟ್‌, ನೈಟ್ರೋಫರಾನ್‌, ಕ್ಲೋರಾಂಫೆನಿಕಾಲ್‌ ಮುಂತಾದ ಕೀಟನಾಶಕ ಅಂಶಗಳ ಕಾರಣದಿಂದ ತಿರಸ್ಕರಿಸಲಾಗಿತ್ತು. ಅಮೆರಿಕದಲ್ಲಿ ಭಾರತದ ಮಾವು, ಜರ್ಮನಿಯಲ್ಲಿ ಭಾರತದ ಡಾರ್ಜಲಿಂಗ್‌ ಟೀ, ಯುಎಇಯಲ್ಲಿ ನಮ್ಮ ಮಾವು ಹಾಗೂ ತರಕಾರಿ ತಿರಸ್ಕಾರಕ್ಕೊಳಗಾಗಿದ್ದವು. ಇದೀಗ ಮಸಾಲೆ ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಅತಿಯಾಗಿ ಕಂಡುಬಂದಿದೆ. ಎಥಿಲೀನ್ ಆಕ್ಸೈಡ್ ಅನ್ನು ಮೂಲತಃ ವೈದ್ಯಕೀಯ ಸಾಧನಗಳನ್ನು ಸ್ವಚ್ಛಗೊಳಿಸುವ ಕ್ರಿಮಿನಾಶಕವಾಗಿ ಬಳಸಲಾಗುತ್ತದೆ. ಈ ರಾಸಾಯನಿಕ ದೇಹಕ್ಕೆ ಸೇರಿದರೆ ಲಿಂಫೋಮಾ ಮತ್ತು ಲ್ಯುಕೇಮಿಯಾ ಸೇರಿದಂತೆ ವಿವಿಧ ಕ್ಯಾನ್ಸರ್‌ಗಳು ಬರುವ ಸಾಧ್ಯತೆ ಹೆಚ್ಚಿದೆ. ಇದು ಈ ಹಿಂದೆ ಕೆಮ್ಮಿನ ಸಿರಪ್‌ಗಳಲ್ಲೂ ಪತ್ತೆಯಾಗಿತ್ತು. ಇದರಿಂದ ಆಫ್ರಿಕಾದ ಕೆಲವು ದೇಶಗಳಲ್ಲಿ ಸಾವಿಗೆ ಕಾರಣವಾಗಿತ್ತು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

ಇದಕ್ಕೆ ಕಾರಣ, ನಮ್ಮವರು ಬೆಳೆಯುವ ಬೆಳೆಗೆ ಬಳಸುವ ಕೀಟನಾಶಕ ಹಾಗೂ ರಸಗೊಬ್ಬರದ ಪ್ರಮಾಣದಲ್ಲಿ ಲಂಗುಲಗಾಮೇ ಇಲ್ಲದಿರುವುದು. ಕೀಟನಾಶಕಗಳು ಹಾಗೂ ರಸಗೊಬ್ಬರಗಳಿಗೆ ಅತಿ ಭಾರೀ ಪ್ರಮಾಣದಲ್ಲಿ ಸಬ್ಸಿಡಿಯನ್ನು ಕೊಡುವ ದೇಶವೂ ನಮ್ಮದೇ. ಹೀಗಾಗಿ ಇವು ಅತ್ಯಂತ ಅಗ್ಗವಾಗಿ ಸಿಗುತ್ತವೆ. ಅಮೆರಿಕ ಬಹಳಷ್ಟು ಸಾರಿ ನಮ್ಮಲ್ಲಿ ನೀಡಲಾಗುತ್ತಿರುವ ರಸಗೊಬ್ಬರ ಸಬ್ಸಿಡಿಯ ಬಗ್ಗೆ ತಗಾದೆ ಎತ್ತಿದೆ. ಇದರಲ್ಲಿ ಅಮೆರಿಕದ ಹಿತಾಸಕ್ತಿಯೂ ಇದೆ ಎನ್ನೋಣ. ಆದರೆ ಅಮೆರಿಕದ ಆಕ್ಷೇಪದಲ್ಲಿ ಸತ್ಯವೂ ಇದೆ. ಅಮೆರಿಕ, ಮುಂದುವರಿದ ಯುರೋಪ್ ದೇಶಗಳು, ಸಿಂಗಾಪುರ ಮುಂತಾದೆಡೆಗಳಲ್ಲಿ ಆಹಾರ ವಸ್ತುಗಳ ಗುಣಮಟ್ಟದ ಬಗ್ಗೆ ಕಟ್ಟುನಿಟ್ಟಾದ ನಿಯಮಗಳಿವೆ. ಈ ನಿಯಮ ಮೀರಿದ ಉತ್ಪನ್ನಗಳನ್ನು ಅವು ಸ್ವೀಕರಿಸುವುದಿಲ್ಲ. ಹೀಗಾಗಿ ರಫ್ತಿನ ಮಟ್ಟಿಗೆ ನಾವೂ ಕಠಿಣ ನಿಯಮಗಳನ್ನು ಪಾಲಿಸಬೇಕಾದುದು ಅತ್ಯವಶ್ಯಕ.

ದೇಶದಿಂದ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತಿನ ಪ್ರಾಮುಖ್ಯತೆ ಹಾಗೂ ಅದರ ಗುಣಮಟ್ಟ ಕಾಪಾಡಿಕೊಳ್ಳಬೇಕಾದ ಅಗತ್ಯ ಅರಿತುಕೊಂಡ ಕೇಂದ್ರ ಸರ್ಕಾರ 1986ರಲ್ಲಿ ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಸಂಸತ್ತಿನ ಕಾಯಿದೆಯ ಮೂಲಕ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರವನ್ನು (APEDA) ಸ್ಥಾಪಿಸಿತು. ರಫ್ತು ಮಾಡಬೇಕಾದ ಸರಕುಗಳ ಕಡ್ಡಾಯ ಗುಣಮಟ್ಟದ ನಿಯಂತ್ರಣ ಮತ್ತು ಪೂರ್ವ-ರವಾನೆ ತಪಾಸಣೆಯ ಉದ್ದೇಶಕ್ಕಾಗಿ ರಫ್ತು (ಗುಣಮಟ್ಟ ನಿಯಂತ್ರಣ ಮತ್ತು ತಪಾಸಣೆ) ಕಾಯಿದೆ, 1963ರ ಸೆಕ್ಷನ್ 3ರ ಅಡಿಯಲ್ಲಿ ಭಾರತ ಸರ್ಕಾರದಿಂದ ರಫ್ತು ಪರಿಶೀಲನಾ ಮಂಡಳಿ (EIC) ಅನ್ನು ಸ್ಥಾಪಿಸಲಾಯಿತು. ಇದು 1000ಕ್ಕೂ ಹೆಚ್ಚು ಸರಕುಗಳನ್ನು ತಪಾಸಿಸುತ್ತದೆ. ಆಹಾರ ಮತ್ತು ಕೃಷಿ, ಮೀನುಗಾರಿಕೆ, ಖನಿಜಗಳು, ಸಾವಯವ ಮತ್ತು ಅಜೈವಿಕ ರಾಸಾಯನಿಕಗಳು, ರಬ್ಬರ್ ಉತ್ಪನ್ನಗಳು, ಸೆರಾಮಿಕ್ ಉತ್ಪನ್ನಗಳು, ಕೀಟನಾಶಕಗಳು, ಲಘು ಎಂಜಿನಿಯರಿಂಗ್, ಉಕ್ಕಿನ ಉತ್ಪನ್ನಗಳು, ಸೆಣಬು ಉತ್ಪನ್ನಗಳು, ತೆಂಗಿನಕಾಯಿ ಉತ್ಪನ್ನಗಳು, ಪಾದರಕ್ಷೆಗಳು ಇವನ್ನೆಲ್ಲ ಪರಿಶೀಲಿಸುತ್ತದೆ. ಇದಕ್ಕಾಗಿಯೇ ದೊಡ್ಡ ಸಂಖ್ಯೆಯ ಲ್ಯಾಬ್‌ಗಳಿವೆ. ಹೀಗಿದ್ದರೂ ಕಣ್ತಪ್ಪಿಸಿ ವಿಷಕಾರಕ ಅಂಶಗಳಿರುವ ಉತ್ಪನ್ನಗಳು ವಿದೇಶಕ್ಕೆ ಹೋಗುತ್ತವೆ ಎಂದರೇನರ್ಥ?

ಸದ್ಯ ಈ ತಪಾಸಣೆಯನ್ನು ಬಿಗಿ ಮಾಡಬೇಕಿದೆ. ವಿಷಕಾರಕ ಅಂಶಗಳನ್ನು ಹೊಂದಿರುವ ಉತ್ಪನ್ನಗಳನ್ನು ಹಿಂದೆಗೆದುಕೊಳ್ಳುವ, ಪರೀಕ್ಷಿಸುವ, ದೇಶಕ್ಕೆ ಕೆಟ್ಟ ಹೆಸರು ತರುವ ಉತ್ಪನ್ನಗಳ ನಿರ್ಬಂಧಕ್ಕೆ ಕಠಿಣ ಕ್ರಮ ಆಗಬೇಕಿದೆ. ಯಾಕೆಂದರೆ ಇದು ಭಾರತದ ಘನತೆಯನ್ನು ಜಾಗತಿಕವಾಗಿ ಉಳಿಸುವ ಅಥವಾ ನಾಶಮಾಡುವ ಸಂಗತಿಯಾಗಿದೆ.

Continue Reading
Advertisement
Lok Sabha Election 2024
ರಾಜಕೀಯ17 mins ago

Yogi Adityanath:”ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಮುಸ್ಲಿಮರಿಗೆ ಬೀಫ್‌ ಸೇವನೆ ಹಕ್ಕು”- ಮತ್ತೆ ಗುಡುಗಿದ ಯೋಗಿ

Drinks for Summer
ಆರೋಗ್ಯ1 hour ago

Drinks for Summer: ಬೇಸಿಗೆಯಲ್ಲಿ ತಂಪಾಗಿರಬೇಕೆ? ಈ ಪೇಯಗಳನ್ನು ತಪ್ಪದೇ ಕುಡಿಯಿರಿ

Fire Accident
ಪ್ರಮುಖ ಸುದ್ದಿ2 hours ago

Fire Accident : ಬೆಂಗಳೂರು ನಗರ ವಲಯದಲ್ಲಿ ಅರಣ್ಯಕ್ಕೆ ಬೆಂಕಿ, ಭಾರೀ ಹಾನಿ

karnataka weather forecast
ಮಳೆ2 hours ago

Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Narendra modi
ದೇಶ2 hours ago

Narendra Modi : ಇಂದು, ನಾಳೆ ರಾಜ್ಯದಲ್ಲಿ ಮೋದಿಯಿಂದ ಅಬ್ಬರದ ಪ್ರಚಾರ; ಬಹಿರಂಗ ಭಾಷಣದ ವಿವರ ಇಲ್ಲಿದೆ

Summer Food Tips
ಆರೋಗ್ಯ2 hours ago

Summer Food Tips: ಬೇಸಿಗೆಯಲ್ಲಿ ಈ 8 ಆಹಾರಗಳಿಂದ ದೂರ ಇರಿ!

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Swiggy fined
ಬೆಂಗಳೂರು8 hours ago

Swiggy fined: ಐಸ್‌ ಕ್ರೀಂ ಡೆಲಿವರಿ ಮಾಡಲು ವಿಫಲ; ಸ್ವಿಗ್ಗಿಗೆ 5000 ರೂ. ದಂಡ ವಿಧಿಸಿದ ಕೋರ್ಟ್!

Vistara Editorial
ಪ್ರಮುಖ ಸುದ್ದಿ9 hours ago

ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕರ್ನಾಟಕ9 hours ago

Modi in Karnataka: ಬೆಳಗಾವಿ ಹೋಟೆಲ್‌ನಲ್ಲಿ 36 ಬಗೆಯ ಭಕ್ಷ್ಯ ಭೋಜನ ಇದ್ರೂ ಎಳನೀರು ಮಾತ್ರ ಸೇವಿಸಿದ ಮೋದಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202416 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ20 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ3 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

ಟ್ರೆಂಡಿಂಗ್‌