ಒಟ್ಟಾವ: ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್ ವಾಂಟೆಡ್ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ (Khalistani Terrorist) ಹರ್ದೀಪ್ ಸಿಂಗ್ ನಿಜ್ಜಾರ್ (Nijjar Killing Case)ನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ಕನೇ ಆರೋಪಿ, ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೆನಡಾದ ತನಿಖಾ ತಂಡ ತಿಳಿಸಿದೆ.
ಬಂಧಿತ ಆರೋಪಿಯನ್ನು 22 ವರ್ಷದ ಅಮನ್‌ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕೊಲೆ ಮತ್ತು ನಿಜ್ಜರ್ ಹತ್ಯೆಯ ಪಿತೂರಿ ನಡೆಸಿರುವ ಪ್ರಕರಣ ದಾಖಲಿಸಲಾಗಿದೆ. ಬ್ರಾಂಪ್ಟನ್, ಸರ್ರೆ ಮತ್ತು ಅಬಾಟ್ಸ್ಫೋರ್ಡ್‌ನಲ್ಲಿ ವಾಸಿಸುತ್ತಿದ್ದ ಅಮನ್‌ದೀಪ್ ಸಿಂಗ್‌ನನ್ನು ಈ ಮೊದಲೇ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿ ಒಂಟಾರಿಯೊದಲ್ಲಿ ವಶಕ್ಕೆ ಪಡೆಯಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಪರಾಧಿಗಳ ಪತ್ತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Another individual has been arrested and charged in connection with the murder of Hardeep Singh Nijjar.
— Hussein E (@therealhebrahim) May 12, 2024
Amandeep Singh, aged 22, was apprehended on Saturday by the Integrated Homicide Investigation Team (IHIT). He was previously in custody on unrelated firearms charges by the… pic.twitter.com/hstFYshJjP
ಈ ಹಿಂದೆ ನಿಜ್ಜಾರ್ ಹತ್ಯೆ ಪ್ರಕರಣದಲ್ಲಿ ಭಾರತೀಯ ಮೂಲದ ಕರನ್ ಬ್ರಾರ್ (22), ಕಮಲ್‌ಪ್ರೀತ್ ಸಿಂಗ್ (22) ಮತ್ತು ಕರಣ್‌ಪ್ರೀತ್ ಸಿಂಗ್ (28) ಎಂಬ ಮೂವರನ್ನು ಬಂಧಿಸಲಾಗಿತ್ತು. ಇವರ ವಿರುದ್ಧವೂ ನಿಜ್ಜಾರ್ ಹತ್ಯೆಯ ಸಂಚು ನಡೆಸಿದ ಆರೋಪ ಕೇಳಿ ಬಂದಿದೆ.
ಪ್ರಕರಣದ ಹಿನ್ನೆಲೆ
ಕಳೆದ ವರ್ಷ ಜನವರಿಯಲ್ಲಿ ನಿಜ್ಜಾರ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮಾಜಿ ಪ್ರಧಾನಿ ಇಂಧಿರಾ ಗಾಂಧಿ ಅವರ ಹತ್ಯೆಯನ್ನು ಕೆನಡಾದಲ್ಲಿರುವ ಖಲಿಸ್ತಾನಿಗಳು ಸಂಭ್ರಮಾಚರಣೆ ಮಾಡಿದ ಕೆಲವೇ ದಿನಗಳಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್‌ನನ್ನು ಕೆನಡಾದ ಸುರ‍್ರೆ ನಗರದಲ್ಲಿ ಕೊಲೆ ಮಾಡಲಾಗಿತ್ತು.
ಪಂಜಾಬಿಗಳೇ ಹೆಚ್ಚಿರುವ ಸುರ‍್ರೆ ನಗರದ ಗುರುನಾನಕ್ ಸಿಖ್ ಗುರುದ್ವಾರದ ಬಳಿಕ ಖಲಿಸ್ತಾನಿ ಉಗ್ರನ ಹತ್ಯೆ ನಡೆದಿತ್ತು. ಪಂಜಾಬ್‌ನಲ್ಲಿ ಅರ್ಚಕರೊಬ್ಬರ ಕೊಲೆಗೆ ಪಿತೂರಿ ನಡೆಸಿರುವುದು, ಮೂಲಭೂತವಾದದ ಪ್ರಸರಣ ಸೇರಿ ನಾಲ್ಕು ಪ್ರಕರಣಗಳಲ್ಲಿ ಎನ್‌ಐಎ ಈತನ ವಿರುದ್ಧ ತನಿಖೆ ನಡೆಸುತ್ತಿದೆ. ಅಲ್ಲದೆ ಈತನ ಕುರಿತು ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಕೂಡ ಎನ್‌ಐಎ ಘೋಷಿಸಿತ್ತು.
ಇದನ್ನೂ ಓದಿ: Avtar Khanda Dies: ಬ್ರಿಟನ್‌ನಲ್ಲಿ ಭಾರತದ ತಿರಂಗಾ ಕೆಳಗಿಳಿಸಿದ್ದ ಖಲಿಸ್ತಾನ್ ಉಗ್ರ ಅವತಾರ್ ಖಂಡಾ ಸಾವು
ಖಲಿಸ್ತಾನ್ ಟೈಗರ್ ಫೋರ್ಸ್ (KTF) ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ ಈತ ಪ್ರತ್ಯೇಕವಾದಿಗಳಿಗೆ ಹೆಚ್ಚಿನ ನೆರವು ಒದಗಿಸುತ್ತಿದ್ದ. ಭಾರತದಲ್ಲಿ ಹಲವು ಉಗ್ರ ಚಟುವಟಿಕೆಗಳ ಹಿಂದೆ ಈತನ ಕೈವಾಡವಿದೆ. ಕೆನಡಾದಲ್ಲೂ ಸಿಖ್ ಸಮುದಾಯದವರನ್ನು ಎತ್ತಿ ಕಟ್ಟುತ್ತಿದ್ದ. ಹಾಗಾಗಿ ಈತನು ಸೇರಿ ಸುಮಾರು 40 ಉಗ್ರರನ್ನು ಭಾರತವು ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿಗೆ ಸೇರಿಸಿತ್ತು. ಇದಕ್ಕೂ ಮೊದಲು ಖಲಿಸ್ತಾನಿ ಉಗ್ರ, ಖಲಿಸ್ತಾನ್ ನಾಯಕ, ಬಂಧಿತ ಅಮೃತ್‌ಪಾಲ್ ಸಿಂಗ್‌ನ ಆಪ್ತ, ಲಂಡನ್‌ನಲ್ಲಿರುವ ಭಾರತದ ಹೈಕಮಿಷನ್ ಕಚೇರಿ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿದ್ದರ ರೂವಾರಿ ಅವತಾರ್ ಸಿಂಗ್ ಖಂಡಾ ಲಂಡನ್‌ನಲ್ಲಿ ಮೃತಪಟ್ಟಿದ್ದ. ಅಮೃತ್‌ಪಾಲ್ ಸಿಂಗ್ ಬಂಧನದ ಬಳಿಕ ಕೆನಡಾದಲ್ಲಿರುವ ಖಲಿಸ್ತಾನಿಗಳು ಇನ್ನಷ್ಟು ತೀವ್ರವಾಗಿ ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದರು.