ಇಸ್ಲಾಮಾಬಾದ್: ವಾಯುದಾಳಿ ನಡೆಸಿದ ಇರಾನ್ ಮೇಲೆ ಪ್ರತಿದಾಳಿ ಮಾಡುವ ಮೂಲಕ ಪಾಕಿಸ್ತಾನವು ಸೇಡು ತೀರಿಸಿಕೊಂಡಿದೆ. ಪಾಕಿಸ್ತಾನದಲ್ಲಿರುವ ಜೈಶ್ ಅಲ್ ಅದ್ಲ್ (Jaish al Adl) ಉಗ್ರ ಸಂಘಟನೆಯ ಎರಡು ನೆಲೆಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ (Iran Attack) ಪ್ರತಿಯಾಗಿ ಪಾಕಿಸ್ತಾನವೂ ವಾಯುದಾಳಿ (Pakistan Airstrike) ಮೂಲಕವೇ ಪ್ರತ್ಯುತ್ತರ ನೀಡಿದೆ. ಇರಾನ್‌ನಲ್ಲಿರುವ ಬಲೂಚಿಸ್ತಾನ ಪ್ರತ್ಯೇಕವಾದಿಗಳ ನೆಲೆಗಳ ಮೇಲೆ ಪಾಕಿಸ್ತಾನವು ಗುರುವಾರ (ಜನವರಿ 18) ವಾಯುದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
“ಪಾಕಿಸ್ತಾನ ಕೂಡ ಇರಾನ್ ಮೇಲೆ ವಾಯುದಾಳಿ ನಡೆಸಿದೆ. ಪ್ರತ್ಯೇಕ ಬಲೂಚಿಸ್ತಾನಕ್ಕೆ ಬೇಡಿಕೆ ಇಟ್ಟಿರುವ ಬಂಡುಕೋರರು ಇರಾನ್‌ನಲ್ಲಿ ನೆಲೆಸಿದ್ದು, ಅವರ ನೆಲೆಗಳನ್ನು ಧ್ವಂಸಗೊಳಿಸಲಾಗಿದೆ ಎಂದಷ್ಟೇ ಹೇಳಬಲ್ಲೆ” ಎಂದು ಪಾಕಿಸ್ತಾನದ ಗುಪ್ತಚರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕ್ಷಿಪಣಿ ಹಾಗೂ ಡ್ರೋನ್‌ಗಳ ಮೂಲಕ ಇರಾನ್ ಮೇಲೆ ಪಾಕಿಸ್ತಾನ ದಾಳಿ ನಡೆಸಿದೆ ಎನ್ನಲಾಗಿದೆ. ದಾಳಿಯಲ್ಲಿ ಮೂವರು ಮಕ್ಕಳು ಹಾಗೂ ನಾಲ್ವರು ಮಹಿಳೆಯರು ಸೇರಿ ಒಟ್ಟು ಏಳು ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Pakistan launches several airstrikes in retaliatory assault on Balochistan, government official said, according to reports pic.twitter.com/4gKhsqkKPM
— Emeka Gift Official (@EmekaGift100) January 18, 2024
ಪಾಕಿಸ್ತಾನದ ಬಲೂಚಿಸ್ತಾನದಲ್ಲಿರುವ ಎರಡು ಉಗ್ರರ ನೆಲೆಗಳ ಮೇಲೆ ಮಾತ್ರ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಇರಾನ್ ಸ್ಪಷ್ಟಪಡಿಸಿತ್ತು. ಆದರೆ, ಇರಾನ್ ಅಮಾಯಕರ ಮೇಲೆ ದಾಳಿ ನಡೆಸಿದೆ ಎಂಬಂತೆ ಬಿಂಬಿಸುತ್ತಿರುವ ಪಾಕಿಸ್ತಾನವು, “ಇರಾನ್ ಕ್ಷಿಪಣಿ ದಾಳಿಗೆ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮೂವರು ನಾಗರಿಕರು ಗಾಯಗೊಂಡಿದ್ದಾರೆ. ಕ್ಷಿಪಣಿ ದಾಳಿಯ ಪರಿಣಾಮವನ್ನು ಇರಾನ್ ಗಂಭೀರವಾಗಿ ಎದುರಿಸಬೇಕಾಗುತ್ತದೆ” ಎಂದು ಗುಟುರು ಹಾಕಿತ್ತು. ಪರಿಣಾಮದ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕಿಸ್ತಾನವು ಪ್ರತಿದಾಳಿ ಮಾಡಿದೆ.
ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಇರಾನ್ ದಾಳಿ ನಂತರವಾದರೂ ಪಾಕಿಸ್ತಾನಕ್ಕೆ ಬುದ್ಧಿ ಬರಲಿ!
ಹಾಗೆ ನೋಡಿದರೆ, ಜನವರಿಯ ಆರಂಭದಲ್ಲಿ ಇರಾನ್‌ನಲ್ಲಿ ಎರಡು ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದವು. ಇದರಿಂದ ಇರಾನ್‌ನ 80ಕ್ಕೂ ಅಧಿಕ ನಾಗರಿಕರು ಮೃತಪಟ್ಟಿದ್ದರು. ದಾಳಿಯನ್ನು ಹೊಣೆಯನ್ನು ಐಸಿಸ್ ಹೊತ್ತುಕೊಂಡ ಕಾರಣ ಇರಾಕ್ ಹಾಗೂ ಸಿರಿಯಾ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನದ ಮೇಲೂ ಕ್ರಿಪಣಿ ಹಾಗೂ ಡ್ರೋನ್‌ಗಳ ಮೂಲಕ ದಾಳಿ ನಡೆಸಿತ್ತು. ಇದರಿಂದ ಪಾಕಿಸ್ತಾನವು ಜಾಗತಿಕ ಮಟ್ಟದಲ್ಲಿ ಹಿನ್ನಡೆ ಅನುಭವಿಸಿತ್ತು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ