ಪಾಕಿಸ್ತಾನ: ಕೆಲವು ದಿನಗಳ ಹಿಂದೆ ಪಾಕ್(Pakistan) ಸಂಸತ್‌ನಲ್ಲೇ ಅಲ್ಲಿನ ವಿಪಕ್ಷ ನಾಯಕನೇ ಭಾರತವನ್ನು ಹಾಡಿ ಹೊಗಳಿರುವ ವಿಡಿಯೋವೊಂದು ವೈರಲ್(Viral Video) ಆಗಿತ್ತು. ಇದೀಗ ಮತ್ತೊರ್ವ ಸಂಸದ ಭಾರತ(India)ದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ಸಂಸತ್‌ನಲ್ಲಿ ಮಾತನಾಡಿದ ಸಂಸದ ಸಯ್ಯದ್ ಮುಸ್ತಾಫಾ ಕಮಲ್ ಭಾರತ ಮತ್ತು ಪಾಕಿಸ್ತಾನವನ್ನು ಹೋಲಿಕೆ ಮಾಡಿ ಮಾತನಾಡಿದ್ದು, ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ. ಆದರೆ ಪಾಕಿಸ್ತಾನದ ಸ್ಥಿತಿ ಹೇಗಿದೆ ನೋಡಿ ಎಂದು ಹೇಳಿದ್ದಾರೆ. ಇದೀಗ ಇವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೈರಲಾಗಿರುವ ವಿಡಿಯೋದಲ್ಲೇನಿದೆ?
ಮುತ್ತಾಹಿದ್ ಕ್ವಾಮಿ ಮೂಮೆಂಟ್ ಪಾಕಿಸ್ತಾನ ಎಂಬ ಪಕ್ಷದ ಸಂಸದ ಸಯ್ಯದ್ ಮುಸ್ತಾಫಾ ಕಮಲ್, ಸಂಸತ್‌ನಲ್ಲಿ ಪಾಕಿಸ್ತಾನದಲ್ಲಿ ತಲೆದೋರಿರುವ ಸಮಸ್ಯೆ ಬಗ್ಗೆ ವಿವರಿಸುತ್ತಾರೆ. ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ. ಆದರೆ ಪಾಕಿಸ್ತಾನ ಮಾತ್ರ ಮಕ್ಕಳು ಚರಂಡಿ ಬೀಳುತ್ತಿರುವ ಬಗ್ಗೆ ವರದಿ ಮಾಡುತ್ತಿದ್ದೇವೆ. ಕರಾಚಿಯಲ್ಲಿ ಜನ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ದೇಶದಲ್ಲಿ 2.6 ಕೋಟಿ ಮಕ್ಕಳಿದ್ದು, ಅವರಿಗೆ ಶಿಕ್ಷಣ ಸೌಲಭ್ಯವೂ ಸಿಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ
ಕರಾಚಿ ಪಾಕಿಸ್ತಾನದ ಆದಾಯದ ಮೂಲ. ಆದರೇ ಕಳೆದ 15ವರ್ಷಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಸಲು ಕರಾಚಿಗೆ ಸಾಧ್ಯವಾಗುತ್ತಿಲ್ಲ. ನೀರು ಬಂದರೂ ಟ್ಯಾಂಕರ್ ಮಾಫಿಯಾ ಶುರುವಾಗುತ್ತದೆ. ಇನ್ನು ನಾವು 48,000 ಶಾಲೆಗಳಿವೆ. ಆದರೆ ವರದಿ ಪ್ರಕಾರ 11,000 ಶಾಲೆಗಳು ಮುಚ್ಚಿವೆ. ಸಿಂಧ್ ಪ್ರಾಂತ್ಯದಲ್ಲಿ 70 ಲಕ್ಷ ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ದೇಶದಲ್ಲಿ ಒಟ್ಟು 2,62,00,000 ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ಆದರೂ ಸರ್ಕಾರ ಮಾತ್ರ ನಿದ್ದೆಯಿಂದ ಏಳುತ್ತಿಲ್ಲ ಎಂದು ಕಿಡಿ ಕಾರಿದ್ದಾರೆ.
ಕೆಲವು ದಿನಗಳ ಹಿಂದೆ ಇಡೀ ಪ್ರಪಂಚದಲ್ಲೇ ಭಾರತ ಬಲಿಷ್ಠ ರಾಷ್ಟ್ರವಾಗಿ ಬೆಳೆಯುತ್ತಿದೆ. ನಾವು ಮಾತ್ರ ಹಣಕಾಸಿನ ಸಹಾಯಕ್ಕಾಗಿ ಭಿಕ್ಷೆ ಬೇಡುತ್ತಿದ್ದೇವೆ ಎಂದು ಪಾಕಿಸ್ತಾನದ ವಿಪಕ್ಷ ನಾಯಕ ಮೌಲಾನ ಫಜ್ಲೂರ್ ರೆಹಮಾನ್ ಹೇಳಿದ್ದರು. ಅವರು ಪಾಕಿಸ್ತಾನ ಸಂಸತ್‌ನಲ್ಲಿ ಸರ್ಕಾರ ವೈಫಲ್ಯದ ವಿರುದ್ಧ ವಾಗ್ದಾಳಿ ನಡೆಸುತ್ತಾ ಭಾರತದ ವಿಚಾರವನ್ನು ಪ್ರಸ್ತಾಪಿಸಿದರು. ಭಾರತ ಜಾಗತಿಕ ಮಟ್ಟದಲ್ಲಿ ಸೂಪರ್ ಪವರ್‌ಫುಲ್ ರಾಷ್ಟ್ರವಾಗಿ ಬೆಳೆಯುತ್ತಿದೆ ಪಾಕಿಸ್ತಾನ ಮಾತ್ರ ದಿವಾಳಿತನದ ಸಾಗುತ್ತಿದೆ. 1947ರಲ್ಲಿ ಭಾರತ ಮತ್ತು ಪಾಕಿಸ್ತಾನ ಸ್ವಾತಂತ್ರ್ಯ ಪಡೆದುಕೊಂಡಿತ್ತು. ಇಂದು ಭಾರತದ ಸ್ಥಿತಿ ಎಲ್ಲಿದೆ ಹಾಗೂ ನಮ್ಮ ಸ್ಥಿತಿ ಎಲ್ಲಿದೆ? ಇಷ್ಟಕ್ಕೆಲ್ಲಾ ಯಾರು ಹೊಣೆ ಎಂದು ಜಮಾತ್ ಉಲೇಮಾ ಎ-ಇಸ್ಲಾಂನ ಅಧ್ಯಕ್ಷರೂ ಆಗಿರುವ ಫಜ್ಲೂರ್ ರೆಹಮಾನ್ ಕಟುವಾಗಿ ಪ್ರಶ್ನಿಸಿದ್ದರು.
ಇದನ್ನೂ ಓದಿ:Prajwal Revanna Case: ವಿದೇಶದಿಂದ ಬಾರದ ಪ್ರಜ್ವಲ್; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?
ಅವರು ಇತ್ತೀಚೆಗೆ ನಡೆದ ಚುನಾವಣೆ ಬಗ್ಗೆ ಕೂಡ ಅಸಮಾಧಾನ ವ್ಯಕ್ತಪಡಿಸಿ, ಇದು ಎಂಥಾ ಚುನಾವಣೆ? ಇಲ್ಲಿ ಸೋಲುಂಡವರಿಗೆ ತೃಪ್ತಿಯೇ ಇಲ್ಲ ಮತ್ತು ಗೆದ್ದವರಿಗೆ ಸಂತೋಷವೇ ಇಲ್ಲ. ಪ್ರಸ್ತುತ ಆಡಳಿತ ನಡೆಸುತ್ತಿರುವ ಸರ್ಕಾರದ ಸದಸ್ಯರು ನೈತಿಕತೆಯನ್ನು ಮರೆತು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಮಾರಾಟ ಮಾಡುತ್ತಿದ್ದಾರೆ. ಗೋಡೆಗಳ ಹಿಂದೆ ನಮ್ಮನ್ನು ನಿಯಂತ್ರಿಸುವ ಶಕ್ತಿಗಳಿವೆ, ಮತ್ತು ನಾವು ಕೇವಲ ಕೈಗೊಂಬೆಗಳಾಗಿದ್ದಾಗ ಅವರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಫಜ್ಲುರ್ ರೆಹಮಾನ್ ಕಿಡಿ ಕಾರಿದ್ದರು.