Bangladesh Protests: ಬಾಂಗ್ಲಾ ಹಿಂಸಾಚಾರದ ಹಿಂದೆ ಪಾಕ್‌ ಕೈವಾಡ; ಭಾರತದ ಜತೆ ಹಸೀನಾ ಸ್ನೇಹ ಕಾರಣ? - Vistara News

ವಿದೇಶ

Bangladesh Protests: ಬಾಂಗ್ಲಾ ಹಿಂಸಾಚಾರದ ಹಿಂದೆ ಪಾಕ್‌ ಕೈವಾಡ; ಭಾರತದ ಜತೆ ಹಸೀನಾ ಸ್ನೇಹ ಕಾರಣ?

Bangladesh Protests: ಭಾರತದ ವಿರೋಧಿಯಾಗಿರುವ, ಉಗ್ರರನ್ನು ಛೂಬಿಟ್ಟು ಉಪಟಳ ಮಾಡುವ ಪಾಕಿಸ್ತಾನವು ಈಗ ಬಾಂಗ್ಲಾದೇಶದಲ್ಲಿ ಅಶಾಂತಿ ಸೃಷ್ಟಿಸಲು ಕುತಂತ್ರ ಮಾಡಿದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಸರ್ಕಾರ ರಚನೆಯಾಗಲಿ ಎಂಬುದು ಪಾಕಿಸ್ತಾನದ ಕುತುಂತ್ರವಾಗಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Bangladesh Protests
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಢಾಕಾ: ಭಾರತದ ಮಿತ್ರರಾಷ್ಟ್ರ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಹಿಂಸಾಚಾರ, ಗಲಭೆ (Bangladesh Protests) ಉಂಟಾಗಿವೆ. ಶೇಖ್‌ ಹಸೀನಾ (Sheikh Hasina) ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಮಧ್ಯೆಯೇ, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಕುತಂತ್ರದಿಂದಾಗಿಯೇ ಬಾಂಗ್ಲಾದೇಶದಲ್ಲಿ ಅರಾಜಕತೆ ಉಂಟಾಗಿದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ ಪಾಕಿಸ್ತಾನದ ಕೈವಾಡ ಏನು? ಏಕೆ? ಇದಕ್ಕೂ-ಭಾರತಕ್ಕೆ ಏನು ಸಂಬಂಧ ಎಂಬುದರ ವಿವರಣೆ ಇಲ್ಲಿದೆ.

ಪಾಕಿಸ್ತಾನದ ಕೈವಾಡ ಏನು?

ಬಾಂಗ್ಲಾದೇಶದಲ್ಲಿ ಜಮಾತ್‌-ಎ-ಇಸ್ಲಾಮಿ ಎಂಬ ನಿಷೇಧಿತ ಸಂಘಟನೆಯ ವಿದ್ಯಾರ್ಥಿ ಘಟಕವಾಗಿರುವ ಛತ್ರಾ ಶಿಬಿರ್‌ ಎಂಬ ಸಂಘಟನೆಗೆ ಪಾಕಿಸ್ತಾನದ ಐಎಸ್‌ಐ ಬೆಂಬಲ ಇದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ವಿಮೋಚನೆ ಹೋರಾಟದ ವೇಳೆ ಭಾಗಿಯಾದವರ ಕುಟುಂಬಸ್ಥರಿಗೆ ನೀಡುವ ಮೀಸಲಾತಿಯನ್ನು ಶೇ.5ಕ್ಕೆ ಇಳಿಸಿದರೂ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯ ಹಿಂದಿರುವ ಪ್ರಮುಖ ವಿದ್ಯಾರ್ಥಿ ಸಂಘಟನೆಗಳಲ್ಲಿ ಛತ್ರಾ ಶಿಬಿರ್‌ ಎಂಬ ಸಂಘಟನೆಯ ಪಾತ್ರ ಪ್ರಮುಖವಾಗಿದೆ. ಇದಕ್ಕೆ ಪಾಕಿಸ್ತಾನವು ಹಣಕಾಸು ನೆರವು ಕೂಡ ನೀಡುತ್ತಿದೆ ಎಂದು ತಿಳಿದುಬಂದಿದೆ.

ಶೇಖ್‌ ಹಸೀನಾ ವಿರುದ್ಧ ಪಾಕ್‌ ಆಕ್ರೋಶವೇಕೆ?

ಶೇಖ್‌ ಹಸೀನಾ ಅವರು ಕಳೆದ 15 ವರ್ಷಗಳಿಂದ ಬಾಂಗ್ಲಾದೇಶದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅವರು ರಾಷ್ಟ್ರೀಯವಾದದಲ್ಲಿ ನಂಬಿಕೆ ಇರಿಸಿರುವುದರ ಜತೆಗೆ ಜನರ ಬೆಂಬಲ ಗಳಿಸಿದ್ದಾರೆ. ಬಡತನ ಪ್ರಮಾಣವನ್ನು ಶೇ.5ಕ್ಕೆ ಇಳಿಸಿದ್ದಾರೆ. ಇದರ ಜತೆಗೆ ಭಾರತದ ಜತೆ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದಿದ್ದಾರೆ. ಮೇಲಾಗಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದನ್ನು ಸಹಿಸದ ಪಾಕಿಸ್ತಾನವು, ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಾರ್ಟಿಯು ಅಧಿಕಾರಕ್ಕೆ ಬರಬೇಕು ಎಂಬುದು ಪಾಕಿಸ್ತಾನದ ಕುತಂತ್ರವಾಗಿದೆ. ಇದಕ್ಕಾಗಿ ಹಿಂಸೆಗೆ ಪ್ರಚೋದನೆ ನೀಡುತ್ತಿದೆ ಎಂದು ಹೇಳಲಾಗುತ್ತಿದೆ.

ಪಾಕಿಸ್ತಾನವು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸಲು ಕುತಂತ್ರ ಮಾಡುತ್ತದೆ. ಬಾಂಗ್ಲಾದೇಶ ಭಾರತದ ಗಡಿ ಪ್ರದೇಶವಾಗಿರುವ ಕಾರಣ, ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಪಕ್ಷವು ಆಡಳಿತಕ್ಕೆ ಬಂದರೆ, ಬಾಂಗ್ಲಾ ಮೂಲಕವೂ ಭಾರತದಲ್ಲಿ ಉಗ್ರರನ್ನು ಛೂಬಿಟ್ಟು ಅಂಶಾತಿ ಸೃಷ್ಟಿಸಬಹುದು ಎಂಬುದು ಐಎಸ್‌ಐ ಲೆಕ್ಕಾಚಾರವಾಗಿದೆ. ಪಾಕಿಸ್ತಾನದ ಐಎಸ್‌ಐ ಜತೆಗೆ ವಿದೇಶಿ ಎನ್‌ಜಿಒಗಳು ಕೂಡ ಬಾಂಗ್ಲಾದೇಶದ ಗಲಭೆಯ ಹಿಂದಿವೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Bangladesh Protests: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ; ಮೃತರ ಸಂಖ್ಯೆ 98ಕ್ಕೆ ಏರಿಕೆ: ಭಾರತೀಯರಿಗೆ ಮುನ್ನೆಚ್ಚರಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

VISTARANEWS.COM


on

ಅಬುಧಾಬಿ: ಆರು ದಿನಗಳ ವಿದೇಶ ಪ್ರವಾಸದಲ್ಲಿ ಪ್ರಧಾನಿ ಮೊದಲು ಯುಎಇಗೆ ಭೇಟಿ ನೀಡಿದ್ದಾರೆ. ಯುರೋಪ್ ಭೇಟಿಗೂ ಮುನ್ನ ಅಬುಧಾಬಿಗೆ ಭೇಟಿ ನೀಡಿದ್ದು, ಭಾರತ-ಯುಎಇ ನಡುವಿನ ನಿಕಟ ಸಂಬಂಧಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
ಅಬುಧಾಬಿಯಲ್ಲಿ ಪ್ರಧಾನಿ ಮೋದಿ ಮತ್ತು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ರಕ್ಷಣೆ, ವ್ಯಾಪಾರ, ಹೂಡಿಕೆ, ಇಂಧನ ಭದ್ರತೆ ಕುರಿತು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಎಲ್ಲಾ ಅಗತ್ಯ ನೆರವು ನೀಡುವ ಭರವಸೆ ನೀಡಿದರು. ಇದೇ ವೇಳೆ ಅವರು, ಯುಎಇ ಮೇಲಿನ ಇರಾನ್ ದಾಳಿಯನ್ನು ಖಂಡಿಸಿದರು.
ಪ್ರಧಾನಿ ಮೋದಿಯವರ ಭೇಟಿಯನ್ನು ಯುಎಇ ಮುಕ್ತಕಂಠದಿಂದ ಹೊಗಳಿದೆ. ‘ಭಾರತದ ಪ್ರಧಾನಿ ನಮ್ಮ ನಿಜವಾದ ಆಸ್ತಿ’ ಎಂದು ಯುಎಇ ಅಂತಾರಾಷ್ಟ್ರೀಯ ಸಹಕಾರ ಸಚಿವೆ ರೀಮ್ ಅಲ್ ಹಶಿಮಿ ಬಣ್ಣಿಸಿದ್ದಾರೆ.
ಪ್ರಧಾನಿ ಮೋದಿ ಯುಎಇಗೆ ಆಗಮಿಸುತ್ತಿದ್ದಂತೆಯೇ ಭವ್ಯ ಸ್ವಾಗತ ನೀಡಲಾಯಿತು. ಮೋದಿ ಅವರಿದ್ದ ವಿಶೇಷ ವಿಮಾನಕ್ಕೆ ಗಗನಮಾರ್ಗದಲ್ಲೇ ಯುಎಇಯ ಎಫ್‌-16 ಯುದ್ಧ ವಿಮಾನಗಳು ಗೌರವ ರಕ್ಷೆ ನೀಡಿದ್ದವು.
ಯುಎಇ ಬಳಿಕ ಮೋದಿ ನೆದರ್‌ಲ್ಯಾಂಡ್‌, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ತೆರಳಲಿದ್ದಾರೆ.

Continue Reading

Latest

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

VISTARANEWS.COM


on

ಅಮೆರಿಕ-ಇರಾನ್‌ ಯುದ್ಧದ ನಡುವೆಯೇ ಅಮೆರಿಕ ಅಧ್ಯಕ್ಷ ಟ್ರಂಪ್ ಚೀನಾ ಪ್ರವಾಸ ಕೈಗೊಂಡಿದ್ದಾರೆ. ಎರಡು ದಿನಗಳ ಪ್ರವಾಸದಲ್ಲಿ ಅವರು ಚೀನಾ ಅಧ್ಯಕ್ಷ ಶಿ ಜಿನ್‌ ಪಿಂಗ್‌ ಜೊತೆ ಹಲವು ಮಹತ್ವದ ಮಾತುಕತೆಗಳನ್ನು ನಡೆಸಲಿದ್ದಾರೆ. ಅತಿದೊಡ್ಡ ನಿಯೋಗದೊಂದಿಗೆ ಟ್ರಂಪ್‌ ರಾಜಧಾನಿ ಬೀಜಿಂಗ್‌ಗೆ ಆಗಮಿಸಿದ್ದಾರೆ.
ಅಧ್ಯಕ್ಷ ಶಿ ಜಿನ್‌ ಪಿಂಗ್‌ ಆಯೋಜಿಸಿದ್ದ ಭೋಜನಕೂಟದಲ್ಲಿ ಪಾಲ್ಗೊಂಡ ಟ್ರಂಪ್‌, ಅಮೆರಿಕ ಮತ್ತು ಚೀನಾ ನಡುವಣ ಬಾಂಧವ್ಯವನ್ನು ಕೊಂಡಾಡಿದ್ದಾರೆ. ಚೀನಾ ಜೊತೆ ಸಕಾರಾತ್ಮಕ ಮಾತುಕತೆ ನಿರೀಕ್ಷೆ ಮಾಡುವುದಾಗಿ ಟ್ರಂಪ್ ಹೇಳಿದ್ದಾರೆ.
ತೈವಾನ್ ವಿಚಾರ ಸೂಕ್ಷ್ಮ ಎಂದ ಚೀನಾ
ಬೀಜಿಂಗ್‌ನಲ್ಲಿ ಗುರುವಾರ ನಡೆದ ಉನ್ನತ ಮಟ್ಟದ ಶೃಂಗಸಭೆಯಲ್ಲಿ ಉಭಯ ನಾಯಕರ ಮಾತುಕತೆಯ ವೇಳೆ ತೈವಾನ್‌ ವಿಷಯ ಮುಂಚೂಣಿಗೆ ಬಂದಿದೆ. ಚೀನಾದ ಸರ್ಕಾರಿ ಸುದ್ದಿ ಸಂಸ್ಥೆ ‘ಕ್ಸಿನ್ಹುವಾ’ ಪ್ರಕಾರ, ಚೀನಾ-ಅಮೆರಿಕ ಸಂಬಂಧಗಳಲ್ಲಿ ತೈವಾನ್ ಅತ್ಯಂತ ಪ್ರಮುಖ ಮತ್ತು ಸೂಕ್ಷ್ಮವಾದ ವಿಷಯವಾಗಿದೆ ಎಂಬುದನ್ನು ಜಿನ್‌ಪಿಂಗ್ ಸ್ಪಷ್ಟಪಡಿಸಿದ್ದಾರೆ.
ಇದಕ್ಕೂ ಮೊದಲು, ಟ್ರಂಪ್‌ಗೆ ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. 9 ವರ್ಷಗಳ ನಂತರ ಅಮೆರಿಕ ಅಧ್ಯಕ್ಷರು ಬೀಜಿಂಗ್‌ಗೆ ಭೇಟಿ ನೀಡಿರುವುದು ವಿಶೇಷ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

VISTARANEWS.COM


on

ಪಶ್ಚಿಮ ಬಂಗಾಳದ ಚುನಾವಣೋತ್ತರ ಸಮೀಕ್ಷೆಯ ಟ್ರೆಂಡ್‌ ಪಕ್ಕದ ಬಾಂಗ್ಲಾದೇಶಕ್ಕೆ ಆತಂಕ ಉಂಟುಮಾಡಿದೆ. ಎಂಟು ಎಕ್ಸಿಟ್‌ ಪೋಲ್‌ಗಳ ಪೈಕಿ ಆರು ಸಮೀಕ್ಷೆಗಳು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೇರುವ ಮುನ್ಸೂಚನೆ ನೀಡಿವೆ. ಈ ಮುನ್ಸೂಚನೆಯೇ ಬಾಂಗ್ಲಾದೇಶದ ಆತಂಕಕ್ಕೆ ಕಾರಣವಾಗಿದೆ.
ಬಾಂಗ್ಲಾದೇಶದ ಸಂಸದ ಆಖ್ತರ್‌ ಹೊಸೈನ್‌ ಈ ವಿಷಯವನ್ನು ಅಲ್ಲಿನ ಸಂಸತ್ತಿನಲ್ಲಿ ಎತ್ತಿದ್ದಾರೆ. “ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಅದು ಅಲ್ಲಿನ ಎಲ್ಲಾ ಬಾಂಗ್ಲಾದೇಶಿ ನುಸುಳುಕೋರರನ್ನು ಹೊರಗಟ್ಟುತ್ತದೆ. ಇದು ಬಾಂಗ್ಲಾದೇಶದಲ್ಲಿ ಅತಿದೊಡ್ಡ ಮಾನವೀಯ, ಅರ್ಥಿಕ ಹಾಗೂ ನಿರಾಶ್ರಿತರ ಬಿಕ್ಕಟ್ಟನ್ನು ಸೃಷ್ಟಿಸಲಿದೆ. ಇದು ನಮ್ಮ ಅತಿದೊಡ್ಡ ಆತಂಕಕ್ಕೆ ಕಾರಣವಾಗಿದೆʼʼ ಎಂದು ಹೇಳಿದ್ದಾರೆ.
ಗಡಿದಾಟಿ ಭಾರತಕ್ಕೆ ಬಂದಿರುವ ಅಕ್ರಮ ಬಾಂಗ್ಲಾ ದೇಶಿ ನುಸುಳುಕೋರರನ್ನು ಬಿಜೆಪಿ ಹೊರಗಟ್ಟಿದರೆ ಅವರಿಗೆ ಹೊಸ ನೆಲೆ ಕಲ್ಪಿಸುವುದು ಹೇಗೆ ಎಂಬ ಚಿಂತೆ ಬಾಂಗ್ಲಾದೇಶವನ್ನು ಕಾಡುತ್ತಿದೆ. ಬಾಂಗ್ಲಾದೇಶದ ಅಕ್ರಮ ನುಸುಳುಕೋರರ ಸಮಸ್ಯೆಯೇ ಪಶ್ಚಿಮ ಬಂಗಾಳದ ಅತಿದೊಡ್ಡ ಚುನಾವಣಾ ವಿಷಯವಾಗಿತ್ತು. ಅಧಿಕಾರಕ್ಕೇರಿದ ತಕ್ಷಣವೇ ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವುದಾಗಿ ಬಿಜೆಪಿ ಹೇಳಿತ್ತು.

Continue Reading

Latest

ಜಕಾರ್ತಾದಲ್ಲಿ ರೈಲುಗಳ ಮುಖಾಮುಖಿ ಡಿಕ್ಕಿ: 7 ಮಂದಿ ಸಾವು, 81 ಜನರಿಗೆ ಗಾಯ! ಅಪಘಾತಕ್ಕೆ ಕಾರಣವಾಯಿತೇ ಟ್ಯಾಕ್ಸಿ?

VISTARANEWS.COM


on

ಇಂಡೋನೇಷ್ಯಾದ ರಾಜಧಾನಿ ಜಕಾರ್ತಾ ಹೊರವಲಯದ ಬೆಕಾಸಿಯಲ್ಲಿ ಸೋಮವಾರ ತಡರಾತ್ರಿ ಭೀಕರ ರೈಲು ಅಪಘಾತ ಸಂಭವಿಸಿದೆ. ದೂರದ ಊರುಗಳಿಗೆ ಸಂಚರಿಸುವ ಪ್ರಯಾಣಿಕ ರೈಲು ಮತ್ತು ಸ್ಥಳೀಯ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ ಮತ್ತು 81 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೊಳಗಾದ ರೈಲು ಬೋಗಿಗಳ ಒಳಗೆ ಅನೇಕರು ಸಿಲುಕಿಕೊಂಡಿದ್ದು, ರಕ್ಷಣಾ ಸಿಬ್ಬಂದಿ ಲೋಹವನ್ನು ಕತ್ತರಿಸುವ ಯಂತ್ರಗಳನ್ನು ಬಳಸಿ ಜನರನ್ನು ಹೊರತೆಗೆಯುತ್ತಿದ್ದಾರೆ. ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಆತಂಕವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಭೀಕರ ಅಪಘಾತಕ್ಕೆ ರೈಲು ಹಳಿ ಮೇಲೆ ಬಂದ ಟ್ಯಾಕ್ಸಿಯೇ ಕಾರಣ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಹಳಿಗಳ ಮೇಲೆ ಚಲಿಸುತ್ತಿದ್ದ ಟ್ಯಾಕ್ಸಿಯೊಂದಕ್ಕೆ ಪ್ರಯಾಣಿಕರ ರೈಲು ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ನಿಯಂತ್ರಣ ತಪ್ಪಿದ ರೈಲು, ಪಕ್ಕದ ಹಳಿಯಲ್ಲಿ ಮಹಿಳೆಯರು ಮಾತ್ರ ಪ್ರಯಾಣಿಸುತ್ತಿದ್ದ ಮತ್ತೊಂದು ರೈಲಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಈ ಟ್ಯಾಕ್ಸಿಯು ವಿಯೆಟ್ನಾಂ ಮೂಲದ ‘ಗ್ರೀನ್ ಎಸ್‌ಎಂ’ ಎಂಬ ಸಂಸ್ಥೆಗೆ ಸೇರಿದ್ದಾಗಿದ್ದು, ಕಂಪನಿಯು ಈಗಾಗಲೇ ಅಪಘಾತದ ತನಿಖೆಗೆ ಸಹಕರಿಸುವುದಾಗಿ ಘೋಷಿಸಿದೆ.

ಇಂಡೋನೇಷ್ಯಾದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಸಮಿತಿ (KNKT) ಘಟನೆಯ ಬಗ್ಗೆ ಸಮಗ್ರ ತನಿಖೆ ಆರಂಭಿಸಿದೆ. ರೈಲು ಬೋಗಿಗಳ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವುದು ಈಗ ದೊಡ್ಡ ಸವಾಲಾಗಿದ್ದು, ತಜ್ಞರ ತಂಡವು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಇಂಡೋನೇಷ್ಯಾದಲ್ಲಿ ಸಾರಿಗೆ ಸುರಕ್ಷತೆಯ ಕೊರತೆಯಿಂದಾಗಿ ರೈಲು ಅಪಘಾತಗಳು ಆಗಾಗ ಸಂಭವಿಸುತ್ತಲೇ ಇರುತ್ತವೆ, ಆದರೆ ಎರಡು ರೈಲುಗಳ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿಯು ಇತ್ತೀಚಿನ ವರ್ಷಗಳಲ್ಲೇ ನಡೆದ ಅತ್ಯಂತ ದೊಡ್ಡ ದುರಂತ ಎಂದು ಹೇಳಲಾಗುತ್ತಿದೆ.

Continue Reading
Advertisement
ಪ್ರಮುಖ ಸುದ್ದಿ14 hours ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest14 hours ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest2 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest3 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest3 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest3 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest3 days ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ3 days ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest3 days ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest4 days ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌