ನವದೆಹಲಿ: 2022ರಲ್ಲಿ ವಿಶ್ವಾದ್ಯಂತ ಭಯೋತ್ಪಾದನೆ ಸಂಬಂಧಿತ ಸಾವುಗಳಲ್ಲಿ ಪಾಕಿಸ್ತಾನವು (Pakistan Terrorism) ಎರಡನೇ ಅತಿದೊಡ್ಡ ಹೆಚ್ಚಳವನ್ನು ದಾಖಲಿಸಿದೆ. 2021ರಲ್ಲಿ 292 ಇದ್ದ ಸಾವಿನ ಸಂಖ್ಯೆ ಕಳೆದ ವರ್ಷದ ಶೇ.120 ಏರಿಕೆ ದಾಖಲಿಸಿದ್ದು, ಒಟ್ಟು 643 ಸಾವು ವರದಿಯಾಗಿದೆ.
ಇದನ್ನೂ ಓದಿ: Asia Cup: ಏಷ್ಯಾ ಕಪ್ ಟೂರ್ನಿ ಪಾಕಿಸ್ತಾನದಲ್ಲೇ ನಡೆಯಲಿದೆ; ಬಿಸಿಸಿಐಗೆ ಎಚ್ಚರಿಕೆ ನೀಡಿದ ನಜಮ್ ಸೇಥಿ
ಆಸ್ಟ್ರೇಲಿಯಾ ಮೂಲದ ಇನ್‌ಸ್ಟಿಟ್ಯೂಟ್ ಫಾರ್ ಎಕನಾಮಿಕ್ಸ್ ಅಂಡ್ ಪೀಸ್ ಈ ವಾರ್ಷಿಕ ಜಾಗತಿಕ ಭಯೋತ್ಪಾದನಾ ಸೂಚ್ಯಂಕ(ಜಿಟಿಐ)ವನ್ನು ಬಿಡುಗಡೆ ಮಾಡಿದೆ. ಅದರ ಪ್ರಕಾರ, ದಕ್ಷಿಣ ಏಷ್ಯಾದಲ್ಲಿ ಭಯೋತ್ಪಾದಕ ದಾಳಿಯಿಂದ ಅತಿ ಹೆಚ್ಚು ಸಾವಾಗುತ್ತಿರುವುದು ಪಾಕಿಸ್ತಾನದಲ್ಲಾಗಿದೆ.
ಪಾಕಿಸ್ತಾನದಲ್ಲಿ ಸಾವಿನ ಸಂಖ್ಯೆಯು ಕಳೆದ ದಶಕದಲ್ಲಿ ವರ್ಷದಿಂದ ವರ್ಷಕ್ಕೆ ಅತಿದೊಡ್ಡ ಹೆಚ್ಚಳವನ್ನು ಕಾಣುತ್ತಿದೆ. ಅದರಲ್ಲೂ ಭಯೋತ್ಪಾದನೆಯಿಂದಾಗಿ ಸಾವನ್ನಪ್ಪುತ್ತಿರುವವರಲ್ಲಿ ಶೇ.55 ಮಂದಿ ಸೇನೆಯ ಸಿಬ್ಬಂದಿಗಳಾಗಿದ್ದಾರೆ. ಭಯೋತ್ಪಾದನೆ ಸಂಬಂಧಿತವಾಗಿ ಜನರು ಸಾವನ್ನಪ್ಪುತ್ತಿರುವ ಪಟ್ಟಿಯಲ್ಲಿ ಪಾಕಿಸ್ತಾನ ನಾಲ್ಕು ಸ್ಥಾನ ಮೇಲಕ್ಕೆ ಹೋಗಿದ್ದು ಸದ್ಯ ಆರನೇ ಸ್ಥಾನದಲ್ಲಿದೆ.
ಪಾಕಿಸ್ತಾನದಲ್ಲಿ ಭಯೋತ್ಪಾದನೆ ಸಂಬಂಧಿತ ಸಾವುಗಳಲ್ಲಿ ಅತಿ ದೊಡ್ಡ ಕಾರಣವಾಗಿರುವುದು ಬಲೂಚಿಸ್ತಾನ್ ಲಿಬರೇಶನ್ ಆರ್ಮಿ(ಬಿಎಲ್‌ಎ). ಕಳೆದ ವರ್ಷ ಪಾಕ್‌ನಲ್ಲಿ ಭಯೋತ್ಪಾದನೆ ಸಂಬಂಧಿಸಿ ಆದ ಸಾವುಗಳಲ್ಲಿ ಶೇ. 36 ಪಾಲು ಈ ಉಗ್ರ ಸಂಘಟನೆಯದ್ದಿದೆ. 2021ಕ್ಕೆ ಹೋಲಿಸಿದರೆ ಇದು 9 ಪಟ್ಟು ಹೆಚ್ಚಾಗಿದೆ.
ಇದನ್ನೂ ಓದಿ: SCO Meet: ದೆಹಲಿಯಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆ ಸಭೆಗೆ ಪಾಕ್ ರಕ್ಷಣಾ ಸಚಿವರನ್ನು ಆಹ್ವಾನಿಸಿದ ಭಾರತ
ಅಫ್ಘಾನಿಸ್ತಾನ ಮತ್ತು ಇರಾನ್‌ನ ಗಡಿಯಲ್ಲಿರುವ ಬಲೂಚಿಸ್ತಾನ್ ಪ್ರಾಂತ್ಯದ ಸ್ವಾತಂತ್ರ್ಯಕ್ಕಾಗಿ ಬಿಎಲ್‌ಎ ಹೋರಾಡುತ್ತಿರುವುದಾಗಿ ಹೇಳಿಕೊಂಡಿದೆ. ಈ ಪ್ರದೇಶದ ನೈಸರ್ಗಿಕ ಸಂಪನ್ಮೂಲಗಳನ್ನು ಪಾಕಿಸ್ತಾನಿ ಸರ್ಕಾರವು ಸುಲಿಗೆ ಮಾಡಿದೆ ಮತ್ತು ಅಲ್ಲಿನ ಬಲೂಚ್ ಜನಸಂಖ್ಯೆಯ ವಿರುದ್ಧ ತಾರತಮ್ಯವನ್ನು ಮಾಡುತ್ತಿದೆ ಎನ್ನುವುದು ಬಿಎಲ್‌ಎ ಆರೋಪ.