ಇಸ್ಲಮಾಬಾದ್: ಈ ಬಾರಿಯ ಲೋಕಸಭೆ ಚುನಾವಣೆ(Lok Sabha Election 2024)ಯಲ್ಲಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ನರೇಂದ್ರ ಮೋದಿ(PM Narendra Modi)ಗೆ ದೇಶ ವಿದೇಶಗಳ ಗಣ್ಯರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಮೋದಿಗೆ ವಿದೇಶಗಳ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ಅದೂ ಅಲ್ಲದೇ ನಾಳೆ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗಲಿದ್ದಾರೆ. ಆದರೆ ನೆರೆಯ ರಾಷ್ಟ್ರ ಪಾಕಿಸ್ತಾನ(Pakistan) ಮಾತ್ರ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿಲ್ಲ. ಇದು ಎಲ್ಲ ಕಡೆ ಬಹಳ ಚರ್ಚೆ ಆಗುತ್ತಿದೆ. ಇದರ ನಡುವೆ ಈ ಬಗ್ಗೆ ಪಾಕಿಸ್ತಾನವೇ ಪ್ರತಿಕ್ರಿಯಿಸಿದೆ.
ಪಾಕ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರೆ ಮುಮ್ತಾಜ್ ಜಹ್ರಾ ಬಲೂಚ್ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ತಮ್ಮ ನಾಯಕನನ್ನು ಆಯ್ಕೆ ಮಾಡುವ ಅಧಿಕಾ ಭಾರತೀಯರಿಗಿದೆ. ಹೀಗಿರುವಾಗ ಅದರ ಬಗ್ಗೆ ಪಾಕಿಸ್ತಾನಕ್ಕೆ ಯಾವುದೇ ರೀತಿಯ ಅಭಿಪ್ರಾಯ ಇಲ್ಲ ಎಂದು ಹೇಳಿದ್ದಾರೆ.ಭಾರತ ಸೇರಿದಂತೆ ನೆರೆಯ ರಾಷ್ಟ್ರಗಳ ಜೊತೆ ಉತ್ತಮ ಸಂಬಂಧ ಹೊಂದಬೇಕೆಂಬುದಷ್ಟೇ ಪಾಕಿಸ್ತಾನದ ಆಶಯ. ಅದೂ ಅಲ್ಲದೇ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವುದು ಪಾಕಿಸ್ತಾನದ ಗುರಿ ಎಂದು ಹೇಳಿದ್ದಾರೆ.
ಭಾರತದಲ್ಲಿ ಇನ್ನೂ ಹೊಸ ಸರ್ಕಾರ ಅಧಿಕೃತವಾಗಿ ಅಧಿಕಾರಕ್ಕೆ ಬಂದಿಲ್ಲ. ಹೀಗಿರುವಾಗ ಭಾರತದ ಪ್ರಧಾನಿಗೆ ಅಭಿನಂದನೆ ಸಲ್ಲಿಸಲು ಇದು ಸಕಾಲವಲ್ಲ. ಅದೂ ಅಲ್ಲದೇ ಭಾರತದ ಚುನಾವಣಾ ಪ್ರಕ್ರಿಯೆ ಬಗ್ಗೆ ಪ್ರತಿಕ್ರಿಯೆ ನೀಡಲು ಪಾಕಿಸ್ತಾನಕ್ಕೆ ಏನೂ ಉಳಿದಿಲ್ಲ. ಜಮ್ಮು-ಕಾಶ್ಮೀರ ಬಿಕ್ಕಟ್ಟು ಸೇರಿದಂತೆ ಭಾರತದ ಜೊತೆಗಿರುವ ಎಲ್ಲಾ ಸಮಸ್ಯೆಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕೆಂದು ಪಾಕಿಸ್ತಾನ ಬಯಸುತ್ತದೆ ಎಂದು ಅವರು ತಿಳಿಸಿದ್ದಾರೆ.
ನರೇಂದ್ರ ಮೋದಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಬೆನ್ನಲ್ಲೇ ವಿಶ್ವದ ಹಲವು ನಾಯಕರಿಂದ ಅಭಿನಂದನೆ ಮಹಾಪೂರಗಳು ಹರಿದುಬಂದಿವೆ. ಮಾಲ್ಡೀವಿಯನ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಇಟಾಲಿಯನ್ ಅಧ್ಯಕ್ಷೆ ಜಾರ್ಜಿಯಾ ಮೆಲೋನಿ ಸೇರಿದಂತೆ ನೆರೆಯ ರಾಷ್ಟ್ರಗಳಾದ ಭೂತಾನ್, ನೇಪಾಳಗಳಿಂದ ನಾಯಕರು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಹೀಗಾಗಿ ನಾಳೆ ಪ್ರಧಾನಿ ಮೋದಿಯ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ದಕ್ಷಿಣ ಏಷ್ಯಾದ ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ. ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಇಂದೇ ದೆಹಲಿಗೆ ಬಂದಿಳಿದಿದ್ದಾರೆ.
ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರ ಕಚೇರಿಯ ಮಾಧ್ಯಮ ವಿಭಾಗವು ಭಾನುವಾರದ ಕಾರ್ಯಕ್ರಮಕ್ಕೆ ಹಾಜರಾಗಲು ಅವರು ಆಹ್ವಾನವನ್ನು ಸ್ವೀಕರಿಸಿದ್ದಾರೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಪ್ರಧಾನಿ ಮೋದಿಯವರನ್ನು ಅಭಿನಂದಿಸಿದ ಮೊದಲ ವಿದೇಶಿ ನಾಯಕರಲ್ಲಿ ಒಬ್ಬರು, ಬಾಂಗ್ಲಾದೇಶ ಮಾಧ್ಯಮಗಳ ಪ್ರಕಾರ, ಕಾರ್ಯಕ್ರಮಕ್ಕೆ ಒಂದು ದಿನ ಮುಂಚಿತವಾಗಿ ಅಂದರೆ ಇಂದು ದೆಹಲಿಗೆ ಆಗಮಿಸುತ್ತಾರೆ.
ಇದನ್ನೂ ಓದಿ:Rahul Gandhi: ಷೇರುಪೇಟೆಯಲ್ಲಿ ಭಾರಿ ಹಗರಣವಾಗಿದೆ ಎಂದಿದ್ದ ರಾಹುಲ್ ಗಾಂಧಿಗೆ ಐದೇ ದಿನದಲ್ಲಿ 25 ಲಕ್ಷ ರೂ. ಲಾಭ!