ನವದೆಹಲಿ: 2023ರ ಸಾಲಿನ ನೊಬೆಲ್ ಪ್ರಶಸ್ತಿ (Nobel Prize 2023) ಘೋಷಣೆಯಾಗುತ್ತಿದ್ದು, ಫ್ರಾನ್ಸ್‌ನ ಪಿಯರೆ ಅಗೋಸ್ಟಿನಿ(Pierre Agostini), ಹಂಗೇರಿ-ಆಸ್ಟ್ರಿಯಾದ ಫೆರೆಂಕ್ ಕ್ರೌಸ್ಟ್ (Ferenc Krausz) ಮತ್ತು ಫ್ರಾನ್ಸ್-ಸ್ವೀಡನ್‌ನ ಆನ್ನೆ ಎಲ್’ಹುಲ್ಲಿಯರ್ (Anne L’ Huillier) ವಿಜ್ಞಾನಿಗಳಿಗೆ ಸೋಮವಾರ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ವಸ್ತುಗಳಲ್ಲಿನ ಎಲೆಕ್ಟ್ರಾನ್ ಡೈನಾಮಿಕ್ಸ್ ಅಧ್ಯಯನಕ್ಕಾಗಿ ಬೆಳಕಿನ ಅಟೊಸೆಕೆಂಡ್ ಪಲ್ಸ್ ಅನ್ನು ಉತ್ಪಾದಿಸುವ ಪ್ರಾಯೋಗಿಕ ವಿಧಾನಗಳಿಗಾಗಿ ಈ ನೊಬೆಲ್ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ನೊಬೆಲ್ ಪ್ರಶಸ್ತಿ ನೀಡುವ ಸಂಸ್ಥೆ ತಿಳಿಸಿದೆ.
BREAKING NEWS
— The Nobel Prize (@NobelPrize) October 3, 2023
The Royal Swedish Academy of Sciences has decided to award the 2023 #NobelPrize in Physics to Pierre Agostini, Ferenc Krausz and Anne L’Huillier “for experimental methods that generate attosecond pulses of light for the study of electron dynamics in matter.” pic.twitter.com/6sPjl1FFzv
ನಿನ್ನೆಯಷ್ಟೇ ವೈದ್ಯಕೀಯ ಸಂಶೋಧನೆಗಾಗಿ ಕಟಲಿನ್ ಕರಿಕೊ ಮತ್ತು ಡ್ರೂ ವೈಸ್‌ಮನ್ ಅವರಿಗೆ ನೊಬೆಲ್ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ತ್ವರಿತ ಕೋವಿಡ್ ವ್ಯಾಕ್ಸಿನ್ (Covid Vaccine) ತಯಾರಿಕೆಗೆ ದಾರಿ ಮಾಡಿಕೊಟ್ಟ ಮೆಂಸೆಂಜರ್ ಆರ್‌ಎನ್ಎ(mRNA) ತಂತ್ರಜ್ಞಾನದ ಕೆಲಸಕ್ಕಾಗಿ ಕಟಲಿನ್ ಕರಿಕೊ (Katalin Kariko) ಮತ್ತು ಡ್ರೂ ವೈಸ್‌ಮನ್ (Drew Weissman) ಅವರಿಗೆ ವೈದ್ಯಕೀಯ (Medicine) ನೊಬೆಲ್ ಪುರಸ್ಕಾರ ಲಭಿಸಿದೆ(Nobel Prize 2023). ಆಧುನಿಕ ಕಾಲದ ಮಾನವ ಆರೋಗ್ಯಕ್ಕೆ ದೊಡ್ಡ ಬೆದರಿಕೆಯ ಸಮಯದಲ್ಲಿ ಲಸಿಕೆ ಅಭಿವೃದ್ಧಿಗೆ ಅಭೂತಪೂರ್ವ ಕಾಣಿಕೆಯನ್ನು ಮೆಂಸೆಂಜರ್ ಆರ್‌ಎನ್ಎ ನೀಡಿದೆ ಎಂದು ತೀರ್ಪುಗಾರರ ಸಮಿತಿ ಹೇಳಿದೆ.
ಈ ಸುದ್ದಿಯನ್ನೂ ಓದಿ: Nobel Peace Prize: 20ನೇ ಶತಮಾನದ ಮೇರು ನಾಯಕ ‘ಮಹಾತ್ಮ ಗಾಂಧಿ’ಗೇಕೆ ಸಿಗಲಿಲ್ಲ ನೊಬೆಲ್ ಪ್ರಶಸ್ತಿ?
ವೈದ್ಯಕೀಯ ಕ್ಷೇತ್ರದಲ್ಲಿ ನೊಬೆಲ್ ಪುರಸ್ಕಾರಕ್ಕೆ ಪರಿಗಣಿಸುವಾಗ ದಶಕಗಳ ಹಳೆಯ ಸಂಶೋಧನೆಯನ್ನು ಗೌರವಿಸುವ ತನ್ನ ಸಂಪ್ರದಾಯವನ್ನು ನೊಬೆಲ್ ಸಮಿತಿ ಈ ಬಾರಿ ಕೈ ಬಿಟ್ಟಿದೆ. ಬಹುಮಾನ ವಿಜೇತ ವಿಜ್ಞಾನವು 2005ರ ಹಿಂದಿನದ್ದಾರೂ ಎಂಆರ್‌ಎನ್‌ಎ ತಂತ್ರಜ್ಞಾನವನ್ನು ಬಳಸಿಕೊಂಡು ಫೈಜರ್/ಬಯೋಎನ್‌ಟೆಕ್ ಮತ್ತು ಮಾಡರ್ನಾ ಕೋವಿಡ್ ಲಸಿಕೆಗಳನ್ನು ತಯಾರಿಸಿದವು.
ಕರಿಕೊ ಅವರು ಹಂಗ್ರಿ ದೇಶದವರು ಮತ್ತು ವೈಸ್‌ಮನ್ ಅವರು ಅಮೆರಿಕದವರು. ಯುನಿರ್ವಸಿಟಿ ಆಫ್ ಪೆನ್ಸಿಲ್ವೇನಿಯಾ ಇಬ್ಬರು ಕೊಲಿಗ್ಸ್ ಆಗಿದ್ದವು. ತಮ್ಮ ಸಂಶೋಧನೆಗಳಿಗಾಗಿ 2021ರಲ್ಲಿ ಲಸ್ಕರ್ ಅವಾರ್ಡ್ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.