Site icon Vistara News

ದೇಗುಲ ಧ್ವಂಸ ಸಹಿಸಲ್ಲ; ಆಸ್ಟ್ರೇಲಿಯಾದಲ್ಲಿ ನಡೆದ ಕೃತ್ಯ ಖಂಡಿಸಿದ ಪ್ರಧಾನಿ ಮೋದಿ, ಅಲ್ಲಿನ ಪ್ರಧಾನಿ ಹೇಳಿದ್ದೇನು?

PM Modi and Australian PM Anthony Albanese Over temple vandalism In Australia

#image_title

ಪ್ರಧಾನಿ ನರೇಂದ್ರ ಮೋದಿ (PM Modi) ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿ (PM Modi Australia Visit)ಇದ್ದಾರೆ. ಅಲ್ಲಿ ಅವರಿಗೆ ಅದ್ಧೂರಿ ಸ್ವಾಗತ, ಅಪಾರ ಪ್ರೀತಿ ಸಿಕ್ಕಿದೆ. ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್​ (PM Anthony Albanese )ಅವರು ಪ್ರಧಾನಿ ಮೋದಿಯವರನ್ನು ‘ಬಾಸ್​’ ಎಂದು ಕರೆದಿದ್ದಾರೆ. ಇನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಸ್ಟ್ರೇಲಿಯಾ ಪ್ರಧಾನಮಂತ್ರಿಯನ್ನು ’ಭಾರತಕ್ಕೆ ಬನ್ನಿ’ ಎಂದು ಆಹ್ವಾನಿಸಿದ್ದಾರೆ. ಈ ಸಲ ಅಕ್ಟೋಬರ್​​ನಿಂದ ನವೆಂಬರ್​​ ವರೆಗೆ ಕ್ರಿಕೆಟ್ ವಿಶ್ವಕಪ್​ ಪಂದ್ಯಾವಳಿ ಭಾರತದಲ್ಲಿ ನಡೆಯಲಿದೆ. ಈ ಕ್ರಿಕೆಟ್​ ಪಂದ್ಯ ನೋಡಲು ಆಗಮಿಸುವಂತೆ ಮತ್ತು ನವೆಂಬರ್​ 12ರಂದು ನಡೆಯಲಿರುವ ದೀಪಾವಳಿ ಆಚರಣೆಯಲ್ಲಿ ನಮ್ಮೊಂದಿಗೆ ಪಾಲ್ಗೊಳ್ಳಿ ಎಂದು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್​ಗೆ ಮೋದಿಯವರು ಆಮಂತ್ರಣ ನೀಡಿದ್ದಾರೆ.

ಇದಾದ ನಂತರ ಭಾರತದ ಪ್ರಧಾನಿ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನಸ್​ ಅವರು ಸಿಡ್ನಿಯಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಆಸ್ಟ್ರೇಲಿಯಾದಲ್ಲಿರುವ ಹಿಂದು ದೇವಸ್ಥಾನಗಳ ಮೇಲೆ ಇತ್ತೀಚಿನ ದಿನಗಳಲ್ಲಿ ಖಲಿಸ್ತಾನಿಗಳು ದಾಳಿ ಮಾಡುತ್ತಿರುವ ಬಗ್ಗೆಯೂ ಈ ವೇಳೆ ಚರ್ಚೆಯಾಯಿತು. ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ ‘ಭಾರತ ಮತ್ತು ಆಸ್ಟ್ರೇಲಿಯಾದ ಸೌಹಾರ್ದ ಸಂಬಂಧಕ್ಕೆ ಧಕ್ಕೆ ತರುವ ಕೆಲಸಗಳು, ಆಲೋಚನೆಗಳನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಹೇಳಿದರು. ಈ ಮೂಲಕ ಹಿಂದೂ ದೇವಸ್ಥಾನಗಳ ಮೇಲಿನ ದಾಳಿಯನ್ನು ಖಂಡಿಸಿದರು. ಅದಕ್ಕೆ ಪ್ರತಿಯಾಗಿ ಮಾತನಾಡಿದ ಆಸ್ಟ್ರೇಲಿಯಾ ಪ್ರಧಾನಿ ‘ಇಂಥ ಕೃತ್ಯಗಳು ಭವಿಷ್ಯದಲ್ಲಿ ನಡೆಯದಂತೆ ಎಚ್ಚರಿಕೆ ವಹಿಸುತ್ತೇವೆ. ಹಾಗೇ, ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ವಿದೇಶಗಳಲ್ಲಿ ಪ್ರಧಾನಿ ಮೋದಿಗೆ ಆದರ, ಇದು ಭಾರತದ ಹಿರಿಮೆ

‘ಆಸ್ಟ್ರೇಲಿಯಾದಲ್ಲಿ ಪ್ರತ್ಯೇಕತಾವಾದಿಗಳ ಚಟುವಟಿಕೆ, ಹಿಂದು ದೇವಸ್ಥಾನಗಳ ಮೇಲಿನ ದಾಳಿ ಬಗ್ಗೆ ನಾನು ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಅಂಥೋನಿ ಅಲ್ಬನೀಸ್ ಅವರು ಈ ಹಿಂದೆಯೂ ಚರ್ಚೆ ಮಾಡಿದ್ದೇವೆ. ಮತ್ತೆ ಇಂದಿನ ದ್ವಿಪಕ್ಷೀಯ ಮಾತುಕತೆ ಸಂದರ್ಭದಲ್ಲೂ ಇದೇ ವಿಷಯದ ಬಗ್ಗೆ ಮಾತಾಡಿದ್ದೇವೆ. ಭಾರತ-ಆಸ್ಟ್ರೇಲಿಯಾ ಸ್ನೇಹ-ಸೌಹಾರ್ದಯುತ ಸಂಬಂಧಕ್ಕೆ ಧಕ್ಕೆ ತರುವ ಯಾವುದೇ ಸಂಗತಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ’ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

Exit mobile version