ವಾರ್ಸೋ: ಪೋಲೆಂಡ್ ಪ್ರವಾಸ(PM Modi Poland Visit)ದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಪ್ರಸ್ತುತ ನಡೆಯುತ್ತಿರುವ ರಷ್ಯಾ-ಉಕ್ರೇನ್(Russia-Ukraine War) ಯುದ್ಧದ ಬಗ್ಗೆ ಪ್ರತಿಕ್ರಿಯಿಸಿದ್ದು, ಯುದ್ಧ ಭೂಮಿಯಲ್ಲಿ ಯಾವುದೇ ಸಮಸ್ಯೆ ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಪುನರುಚ್ಛರಿಸಿದ್ದಾರೆ. ಇದೇ ವೇಳೆ ಅವರು 2022ರಲ್ಲಿ ಉಕ್ರೇನ್-ರಷ್ಯಾ ಯುದ್ಧದ ಸಂದರ್ಭದಲ್ಲಿ ಅಲ್ಲಿ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ಸಹಾಯ ಮಾಡಿದ ಪೋಲೆಂಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ.
2022 ರಲ್ಲಿ ಉಕ್ರೇನ್ ಸಂಘರ್ಷದ ಸಂದರ್ಭದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ನೀವು ನೀಡಿದ ಸಹಾಯವನ್ನು ಭಾರತದ ಜನರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದಕ್ಕಾಗಿ ನಾನು ಸರ್ಕಾರ ಮತ್ತು ಪೋಲೆಂಡ್ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದರು. ಇದೇ ವೇಳೆ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರಿಗೆ ಆತ್ಮೀಯ ಸ್ವಾಗತಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.
ಸುಂದರವಾದ ನಗರವಾದ ವಾರ್ಸಾದಲ್ಲಿ ನನಗೆ ಆತ್ಮೀಯ ಸ್ವಾಗತ ನೀಡಿದ ಪಿಎಂ ಟಸ್ಕ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನೀವು ದೀರ್ಘಕಾಲದವರೆಗೆ ಭಾರತದ ಸ್ನೇಹಿತರಾಗಿದ್ದೀರಿ ಮತ್ತು ಭಾರತ ಮತ್ತು ಪೋಲೆಂಡ್ ನಡುವಿನ ಸಂಬಂಧವನ್ನು ಹೆಚ್ಚಿಸಲು ನೀವು ದೊಡ್ಡ ಕೊಡುಗೆ ನೀಡಿದ್ದೀರಿ ಎಂದು ಅವರು ಹೇಳಿದರು.
ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಘರ್ಷಣೆಗಳ ಕುರಿತು, ಪ್ರಧಾನಿ ಮೋದಿ ಕಳವಳ ವ್ಯಕ್ತಪಡಿಸಿದ್ದು, ನಿಜಕ್ಕೂ ಆತಂಕಕಾರಿ ವಿಚಾರ ಎಂದು ಹೇಳಿದ್ದಾರೆ. ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಭಾರತ ದೃಢವಾಗಿ ನಂಬುತ್ತದೆ. ಯಾವುದೇ ಬಿಕ್ಕಟ್ಟಿನಲ್ಲಿ ಅಮಾಯಕರ ಜೀವಗಳನ್ನು ಕಳೆದುಕೊಳ್ಳುವುದು ಇಡೀ ಮಾನವಕುಲಕ್ಕೆ ದೊಡ್ಡ ಸವಾಲಾಗಿದೆ. ಶಾಂತಿ ಮತ್ತು ಸ್ಥಿರತೆಯ ಆರಂಭಿಕ ಮರುಸ್ಥಾಪನೆಗಾಗಿ ನಾವು ಸಂಭಾಷಣೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತೇವೆ ಎಂದು ಅವರು ಹೇಳಿದರು.
#WATCH | Prime Minister Narendra Modi says "I want to thank PM Tusk for giving me a warm welcome in the beautiful city of Warsaw. You have been a friend of India for a long time and you have a huge contribution to enhancing the relationship between India and Poland. Today after… pic.twitter.com/KjeoRzWTnw
— ANI (@ANI) August 22, 2024
ಬುಧವಾರ ಪೋಲೆಂಡ್‌ಗೆ ಬಂದಿಳಿದಿರುವ ಪ್ರಧಾನಿ ಮೋದಿ, ಪ್ರಸ್ತುತ ದೇಶಕ್ಕೆ ಅಧಿಕೃತ ಭೇಟಿಯಲ್ಲಿದ್ದಾರೆ. ಇದರ ನಂತರ, ಅವರು ಉನ್ನತ ಮಟ್ಟದ ಸಭೆಗಳಿಗಾಗಿ ಆಗಸ್ಟ್ 23 ರಂದು ಉಕ್ರೇನ್‌ನ ಕೈವ್‌ಗೆ ಪ್ರಯಾಣಿಸಲಿದ್ದಾರೆ. ಕಳೆದ 45 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಪೋಲೆಂಡ್‌ಗೆ ಭೇಟಿ ನೀಡುತ್ತಿರುವ ಮೊದಲ ಪ್ರವಾಸ ಇದಾಗಿದೆ. ಅವರ ಭೇಟಿಯು ನವದೆಹಲಿ ಮತ್ತು ವಾರ್ಸಾ ನಡುವಿನ 70 ವರ್ಷಗಳ ಅಧಿಕೃತ ದ್ವಿಪಕ್ಷೀಯ ಸಂಬಂಧಗಳನ್ನು ಸೂಚಿಸುತ್ತದೆ.
ಇದನ್ನೂ ಓದಿ: PM Modi Poland Visit: ಪೋಲೆಂಡ್‌ಗೆ ಬಂದಿಳಿದ ಪ್ರಧಾನಿ ಮೋದಿ- ಗುಜರಾತಿ ನೃತ್ಯದ ಮೂಲಕ ಭರ್ಜರಿ ಸ್ವಾಗತ