ನವದೆಹಲಿ: ಪೋಲೆಂಡ್ ಪ್ರವಾಸ(PM Modi Poland Visit)ದ ಬಳಿಕ ಇದೀಗ ಉಕ್ರೇನ್‌ನ ಕೈವ್‌ಗೆ ಬಂದಿಳಿದಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಅಧ್ಯಕ್ಷ ವ್ಲಾಡಮಿರ್ ಝೆಲೆನ್ಸ್ಕಿ(Volodymyr Zelensky) ಅವರನ್ನು ಭೇಟಿ(PM Modi Ukraine Visit)ಯಾದರು. ಕೈವ್‌ನಲ್ಲಿ ಭೇಟಿಯಾದ ಉಭಯ ನಾಯಕರು ಪರಸ್ಪರ ಕೈಕುಲುಕಿ ಅಪ್ಪಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
#WATCH | PM Modi and Ukrainian President Volodymyr Zelenskyy honour the memory of children at the Martyrologist Exposition in Kyiv pic.twitter.com/oV8bbZ8bQh
— ANI (@ANI) August 23, 2024
ಶುಕ್ರವಾರ ಕೈವ್‌ನಲ್ಲಿ ಭೇಟಿಯಾದ ಉಭಯ ನಾಯಕರು ದ್ವಿಪಕ್ಷೀಯ ಸಭೆ ನಡೆಸಿದ್ದಾರೆ. 30 ವರ್ಷಗಳ ಹಿಂದೆ ಭಾರತ ಮತ್ತು ಉಕ್ರೇನ್ ನಡುವೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ ದೇಶಕ್ಕೆ ಕಾಲಿಟ್ಟ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಿ ಮೋದಿ ಅವರ ಉಕ್ರೇನ್ ಭೇಟಿ ಐತಿಹಾಸಿಕವಾಗಿದೆ. ಉಕ್ರೇನ್ ಮತ್ತು ರಷ್ಯಾ ನಡುವಿನ ನಡೆಯುತ್ತಿರುವ ಸಂಘರ್ಷದ ನಡುವೆ ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ಭೇಟಿ ಬಹಳ ಮಹತ್ವವನ್ನು ಪಡೆದುಕೊಂಡಿದೆ. ಈ ವೇಳೆ ರಾಜತಾಂತ್ರಿಕ ಪರಿಹಾರಕ್ಕಾಗಿ ಮೋದಿ ಸಲಹೆ ನೀಡುತ್ತಾರೆ ಎಂದು ನಿರೀಕ್ಷಿಸಲಾಗಿದೆ.
PM Narendra Modi and Ukrainian President Volodymyr Zelenskyy at Exposition 'Martyrologist', in Kyiv pic.twitter.com/0HPvJTPrez
— ANI (@ANI) August 23, 2024
ಪೋಲೆಂಡ್ ಪ್ರವಾಸ(PM Modi Poland Visit)ದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಪ್ರಸ್ತುತ ನಡೆಯುತ್ತಿರುವ ರಷ್ಯಾ-ಉಕ್ರೇನ್(Russia-Ukraine War) ಯುದ್ಧದ ಬಗ್ಗೆ ಪ್ರತಿಕ್ರಿಯಿಸಿದ್ದು, ಯುದ್ಧ ಭೂಮಿಯಲ್ಲಿ ಯಾವುದೇ ಸಮಸ್ಯೆ ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಪುನರುಚ್ಛರಿಸಿದ್ದಾರೆ. ಇದೇ ವೇಳೆ ಅವರು 2022ರಲ್ಲಿ ಉಕ್ರೇನ್-ರಷ್ಯಾ ಯುದ್ಧದ ಸಂದರ್ಭದಲ್ಲಿ ಅಲ್ಲಿ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ಸಹಾಯ ಮಾಡಿದ ಪೋಲೆಂಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ.
2022 ರಲ್ಲಿ ಉಕ್ರೇನ್ ಸಂಘರ್ಷದ ಸಂದರ್ಭದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ನೀವು ನೀಡಿದ ಸಹಾಯವನ್ನು ಭಾರತದ ಜನರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದಕ್ಕಾಗಿ ನಾನು ಸರ್ಕಾರ ಮತ್ತು ಪೋಲೆಂಡ್ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದರು. ಇದೇ ವೇಳೆ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರಿಗೆ ಆತ್ಮೀಯ ಸ್ವಾಗತಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.
ಸುಂದರವಾದ ನಗರವಾದ ವಾರ್ಸಾದಲ್ಲಿ ನನಗೆ ಆತ್ಮೀಯ ಸ್ವಾಗತ ನೀಡಿದ ಪಿಎಂ ಟಸ್ಕ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನೀವು ದೀರ್ಘಕಾಲದವರೆಗೆ ಭಾರತದ ಸ್ನೇಹಿತರಾಗಿದ್ದೀರಿ ಮತ್ತು ಭಾರತ ಮತ್ತು ಪೋಲೆಂಡ್ ನಡುವಿನ ಸಂಬಂಧವನ್ನು ಹೆಚ್ಚಿಸಲು ನೀವು ದೊಡ್ಡ ಕೊಡುಗೆ ನೀಡಿದ್ದೀರಿ ಎಂದು ಅವರು ಹೇಳಿದರು.
ಇದನ್ನೂ ಓದಿ: PM Modi Ukraine Visit: ಜಗತ್ತಿಗೆ ಶಾಂತಿ ಸಂದೇಶ ಸಾರಲು ಭಾರತ ಬದ್ಧ; ಉಕ್ರೇನ್ ಭೇಟಿ ಮೂಲಕ ನಿಲುವು ಸ್ಪಷ್ಟಪಡಿಸಿದ ಮೋದಿ