PM Modi Indonesia Visit: ಇಂಡೋನೇಷ್ಯಾ ತಲುಪಿದ ಮೋದಿಗೆ ಭಾರತೀಯರಿಂದ ಅದ್ಧೂರಿ ಸ್ವಾಗತ - Vistara News

ದೇಶ

PM Modi Indonesia Visit: ಇಂಡೋನೇಷ್ಯಾ ತಲುಪಿದ ಮೋದಿಗೆ ಭಾರತೀಯರಿಂದ ಅದ್ಧೂರಿ ಸ್ವಾಗತ

PM Modi Indonesia Visit: ಆಸಿಯಾನ್‌-ಇಂಡಿಯಾ ಸಭೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂಡೋನೇಷ್ಯಾಗೆ ಭೇಟಿ ನೀಡಿದ್ದಾರೆ. ಅವರಿಗೆ ಇಂಡೋನೇಷ್ಯಾ ಸರ್ಕಾರ, ಅನಿವಾಸಿ ಭಾರತೀಯರಿಂದ ಅದ್ಧೂರಿ ಸ್ವಾಗತ ದೊರೆಯಿತು.

VISTARANEWS.COM


on

PM Modi Indonesia Visit
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜಕಾರ್ತ: 20ನೇ ಆಸಿಯಾನ್‌-ಭಾರತ ಶೃಂಗಸಭೆ ಹಾಗೂ 18ನೇ ಪೂರ್ವ ಏಷ್ಯಾ ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂಡೋನೇಷ್ಯಾಗೆ ಭೇಟಿ (PM Modi Indonesia Visit) ನೀಡಿದ್ದು, ಅಲ್ಲಿನ ಸರ್ಕಾರ ಹಾಗೂ ಅನಿವಾಸಿ ಭಾರತೀಯರಿಂದ ಅದ್ಧೂರಿ ಸ್ವಾಗತ ದೊರೆತಿದೆ. ಬುಧವಾರ (ಸೆಪ್ಟೆಂಬರ್‌ 6) ರಾತ್ರಿಯೇ ಮೋದಿ ಅವರು ವಿಮಾನ ಹತ್ತಿದ್ದು, ಗುರುವಾರ ಬೆಳಗ್ಗೆ ಇಂಡೋನೇಷ್ಯಾ ತಲುಪಿದರು.

ನರೇಂದ್ರ ಮೋದಿ ಅವರು ಇಂಡೋನೇಷ್ಯಾ ತಲುಪುತ್ತಲೇ ಅಲ್ಲಿನ ಸರ್ಕಾರದಿಂದ ಸಾಂಪ್ರದಾಯಿಕವಾಗಿ ಸ್ವಾಗತ ದೊರೆಯಿತು. ಇನ್ನು ಅನಿವಾಸಿ ಭಾರತೀಯರಂತೂ ನರೇಂದ್ರ ಮೋದಿ ಅವರಿಗಾಗಿ ಕಾದು, ಪ್ರಧಾನಿಯನ್ನು ಸ್ವಾಗತಿಸಿದರು. ಹೆಣ್ಣುಮಕ್ಕಳು, ಮಕ್ಕಳು, ಯುವಕರು ಮೋದಿ ಅವರನ್ನು ಸ್ವಾಗತಿಸಿದರು. ಇದೇ ವೇಳೆ ಮೋದಿ ಅವರು ಅನಿವಾಸಿ ಭಾರತೀಯರೊಂದಿಗೆ ಉಭಯ ಕುಶಲೋಪರಿ ನಡೆಸಿದರು.

ಮೋದಿಗೆ ಅದ್ಧೂರಿ ಸ್ವಾಗತ

ಇದಾದ ಬಳಿಕ 20ನೇ ಆಸಿಯಾನ್‌-ಭಾರತ ಶೃಂಗಸಭೆಯಲ್ಲಿ ಪಾಲ್ಗೊಂಡ ಮೋದಿ ಹಲವು ವಿಷಯಗಳ ಕುರಿತು ಮಾತನಾಡಿದರು. “ಭಾರತ ಹಾಗೂ ಆಸಿಯಾನ್‌ ರಾಷ್ಟ್ರಗಳ ಸಂಬಂಧ, ವ್ಯೂಹಾತ್ಮಕ ಬಂಧವು ನಾಲ್ಕು ದಶಕಗಳನ್ನು ಪೂರೈಸಿದೆ. ಶೃಂಗಸಭೆಯಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ. ಸಭೆ ಆಯೋಜಿಸಿದ ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೊ ಅವರಿಗೆ ಧನ್ಯವಾದಗಳು” ಎಂದರು.

ಆಸಿಯಾನ್‌ ಸಭೆಯಲ್ಲಿ ಪ್ರಧಾನಿ ಮಾತು

ಇದನ್ನೂ ಓದಿ: Praggnanandhaa: ತವರಿಗೆ ಮರಳಿದ ಪ್ರಜ್ಞಾನಂದಗೆ ಅದ್ಧೂರಿ ಸ್ವಾಗತ

“ನಮ್ಮ ಇತಿಹಾಸ, ಭೌಗೋಳಿಕ ವ್ಯಾಪ್ತಿಯು ಭಾರತ ಹಾಗೂ ಆಸಿಯಾನ್‌ ರಾಷ್ಟ್ರಗಳನ್ನು ಒಗ್ಗೂಡಿಸುತ್ತದೆ. ಹಾಗಾಗಿಯೇ, ಆಸಿಯಾನ್‌ ರಾಷ್ಟ್ರಗಳ ಸಂಬಂಧವು ವೃದ್ಧಿಯಾಗಿದೆ. ಆಸಿಯಾನ್‌ ರಾಷ್ಟ್ರಗಳ ಅಭಿವೃದ್ಧಿ, ಶಾಂತಿ, ಸ್ಥಿರತೆಯು ನಮ್ಮ ಆದ್ಯತೆಯಾಗಿದೆ. ಜಾಗತಿಕ ಏಳಿಗೆಗೆ ಆಸಿಯಾನ್‌ ರಾಷ್ಟ್ರಗಳ ಕೊಡುಗೆ ಅಪಾರವಾಗಿದೆ. ಮುಂದಿನ ದಿನಗಳಲ್ಲೂ ಇದೇ ಗುರಿಯೊಂದಿಗೆ ಸಾಗೋಣ” ಎಂದು ಮೋದಿ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Terrorists Attack : ಜಮ್ಮು ಕಾಶ್ಮೀರದಲ್ಲಿ ಸೇನಾ ನೆಲೆ ಮೇಲೆ ಪಾಕಿಸ್ತಾನದ ಉಗ್ರರ ದಾಳಿ

Terrorists Attack : ಕಥುವಾ ಜಿಲ್ಲೆಯಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದರು. ಅದಾದ ಕೆಲವೇ ಗಂಟೆಗಳಲ್ಲಿ ಸೇನಾ ನೆಲೆಯ ಮೇಲೆ ಈ ದಾಳಿ ನಡೆದಿದೆ. ಮೂರು ದಿನಗಳ ಹಿಂದೆ ಭಯೋತ್ಪಾದಕರು ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ದಾಳಿ ನಡೆಸಿ ಕಮರಿಗೆ ಬಿದ್ದು ಒಂಬತ್ತು ಪ್ರಯಾಣಿಕರು ಮೃತಪಟ್ಟಿದ್ದರು.

VISTARANEWS.COM


on

Terrorists Attack
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾದ ಸೇನಾ ನೆಲೆಯ ಮೇಲೆ ಮಂಗಳವಾರ ತಡರಾತ್ರಿ ಭಯೋತ್ಪಾದಕರು ದಾಳಿ (Terrorists Attack) ನಡೆಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ಇದು ಮೂರನೇ ಉಗ್ರರ ಚಟುವಟಿಕೆಯಾಗಿದೆ. ಪ್ರಸ್ತುತ ಉಗ್ರಗಾಮಿಗಳು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರಂಭಿಕ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಕಥುವಾ ಜಿಲ್ಲೆಯಲ್ಲಿ ಮಂಗಳವಾರ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದರು. ಅದಾದ ಕೆಲವೇ ಗಂಟೆಗಳಲ್ಲಿ ಸೇನಾ ನೆಲೆಯ ಮೇಲೆ ಈ ದಾಳಿ ನಡೆದಿದೆ. ಮೂರು ದಿನಗಳ ಹಿಂದೆ ಭಯೋತ್ಪಾದಕರು ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ದಾಳಿ ನಡೆಸಿದ್ದ ಕಾರಣ ಬಸ್​ ಕಮರಿಗೆ ಬಿದ್ದು ಒಂಬತ್ತು ಪ್ರಯಾಣಿಕರು ಮೃತಪಟ್ಟಿದ್ದರು.

ಏನಾಗಿತ್ತು ಕಥುವಾ ಜಿಲ್ಲೆಯಲ್ಲಿ?

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಮನೆಯೊಂದಕ್ಕೆ ನುಗ್ಗಿದ್ದ ಉಗ್ರರ ಗುಂಪಿನಲ್ಲಿ ಒಬ್ಬನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದೆ (Terrorist Killed) . ಮೂವರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಭಾರಿ ಶೋಧ ಕಾರ್ಯಾಚರಣೆ ನಡೆಸಿ ಅವರಲ್ಲೊಬ್ಬರನ್ನು ಹೊಡೆದುರುಳಿಸಿದ್ದಾರೆ. ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಹಿರಾನಗರ್ ಸೆಕ್ಟರ್​ನ ಸೆಡಾ ಸೋಹಲ್ ಗ್ರಾಮದಲ್ಲಿ ಸಂಜೆ 7: 45 ರ ಸುಮಾರಿಗೆ ಅನುಮಾನಾಸ್ಪದ ಉಗ್ರಗಾಮಿ ಚಟುವಟಿಕೆ ಪತ್ತೆಯಾಗಿತ್ತು. ಅವರಿಗೆ ಶರಣಾಗುವಂತೆ ಸೂಚಿಸಿದೆವು. ಅವರು ಮನವಿ ಧಿಕ್ಕರಿಸಿ ಕಾಡಿನೊಳಗೆ ಹೋಗಿ ಗುಂಡಿನ ದಾಳಿ ನಡೆಸಿದ್ದರು. ಪೊಲೀಸರು ಮತ್ತು ಇತರ ಭದ್ರತಾ ಪಡೆಗಳು ಶಂಕಿತರನ್ನು ಪತ್ತೆಹಚ್ಚಲು ದೊಡ್ಡ ಪ್ರಮಾಣದ ಶೋಧ ಕಾರ್ಯಾಚರಣೆ ನಡೆಸಿ ಅವರಲ್ಲೊಬ್ಬರನ್ನು ಹೊಡೆದುರುಳಿಸಿದ್ದಾರೆ.

ಘಟನೆ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಘಟನೆ ಬಗ್ಗೆ ಕಥುವಾ ಜಿಲ್ಲಾಧಿಕಾರಿಯೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Lt. General Upendra Dwivedi : ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ

ಭಾರತ ಪಾಕ್​ ಗಡಿಗೆ ಹತ್ತಿರವಿರುವ ಹಿರಾನಗರ್ ಸೆಕ್ಟರ್​ನ ಸೈದಾ ಗ್ರಾಮದ ಮನೆಯೊಂದರ ಮೇಲೆ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ನಾನು ಡಿಸಿ #Kathua ಶ್ರೀ ರಾಕೇಶ್ ಮಿನ್ಹಾಸ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ನಾನು ಸ್ಥಳದಲ್ಲಿರುವ ಕಥುವಾ ಎಸ್ಎಸ್ಪಿ ಅನಾಯತ್ ಅಲಿ ಚೌಧರಿ ಜತೆಗೂ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ” ಎಂದು ಸಿಂಗ್ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ದಾಳಿಗೊಳಗಾದ ಮನೆಯ ಮಾಲೀಕರು ಮೊಬೈಲ್ ಫೋನ್​ನಲ್ಲಿ ಮಾತನಾಡಿದ್ದಾರೆ. ಜಂಟಿ ಪೊಲೀಸ್ ಮತ್ತು ಪ್ಯಾರಾ ಮಿಲಿಟರಿ ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೆ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ನಾನು ಮತ್ತು ನನ್ನ ಕಚೇರಿ ನಿರಂತರ ಸಂಪರ್ಕರುತ್ತದೆ” ಎಂದು ಕೇಂದ್ರ ಸಚಿವರು ಹೇಳಿದರು.

ಇದನ್ನೂ ಓದಿ: Joe Biden : ಬಂದೂಕು ಪ್ರಕರಣದಲ್ಲಿ ಅಮೆರಿಕ ಅಧ್ಯಕ್ಷ ಜೊ ಬೈಡೆನ್ ಪುತ್ರ ತಪ್ಪಿತಸ್ಥ; ಕಾದಿದೆ 25 ವರ್ಷ ಜೈಲು ಶಿಕ್ಷೆ

ಶಿವ ಖೋರಿ ದೇವಸ್ಥಾನದಿಂದ ಕತ್ರಾದ ಮಾತಾ ವೈಷ್ಣೋ ದೇವಿ ದೇವಾಲಯಕ್ಕೆ ಪ್ರಯಾಣಿಸುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ಎರಡು ದಿನಗಳ ನಂತರ ಈ ಘಟನೆ ನಡೆದಿದೆ. ರಿಯಾಸಿಯ ಪೋನಿ ಪ್ರದೇಶದ ಟೆರ್ಯಾತ್ ಗ್ರಾಮದ ಬಳಿ ಉಗ್ರರ ಗುಂಡೇಟು ತಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿದೆ. ಈ ದಾಳಿಯಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 41 ಜನರು ಗಾಯಗೊಂಡಿದ್ದರು.

Continue Reading

ಪ್ರಮುಖ ಸುದ್ದಿ

Lt. General Upendra Dwivedi : ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ

VISTARANEWS.COM


on

Lt. General Upendra Dwivedi
Koo

ಬೆಂಗಳೂರು: ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ (Lt. General Upendra Dwivedi ) ಅವರನ್ನು ಮುಂದಿನ ಸೇನಾ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಪ್ರಸ್ತುತ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಸೇನಾ ಮುಖ್ಯಸ್ಥರಾಗಿರುವ ಜನರಲ್ ಮನೋಜ್ ಸಿ ಪಾಂಡೆ ಅವರ ಅಧಿಕಾರವಧಿ ಜೂನ್ 30, 2024 ರಂದು ಕೊನೆಗೊಳ್ಳಲಿದೆ. ಹೀಗಾಗಿ ಉಮೇಂದ್ರ ದ್ವಿವೇದಿ ಅವರನ್ನು ನೇಮಕ ಮಾಡಲಾಗಿದೆ.

ಜುಲೈ 1, 1964 ರಂದು ಜನಿಸಿದ ದ್ವಿವೇದಿ ಅವರನ್ನು ಡಿಸೆಂಬರ್ 15, 1984 ರಂದು ಭಾರತೀಯ ಸೇನೆಯ ಇನ್ಫೆಂಟ್ರಿ (ಜಮ್ಮು ಮತ್ತು ಕಾಶ್ಮೀರ ರೈಫಲ್ಸ್) ಗೆ ನಿಯೋಜಿಸಲಾಯಿತು. ಸುಮಾರು 40 ವರ್ಷಗಳ ಸುದೀರ್ಘ ಸೇವಾವಧಿಯಲ್ಲಿ ಅವರು ವಿವಿಧ ಕಮಾಂಡ್​ಗಳಲ್ಲಿ, ಸಿಬ್ಬಂದಿ, ಸೂಚನೆ ಮತ್ತು ವಿದೇಶಿ ನೇಮಕ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರು, ರೆಜಿಮೆಂಟ್ ಕಮಾಂಡ್ (18 ಜಮ್ಮು ಮತ್ತು ಕಾಶ್ಮೀರ ರೈಫಲ್ಸ್), ಬ್ರಿಗೇಡ್ (26 ಸೆಕ್ಟರ್ ಅಸ್ಸಾಂ ರೈಫಲ್ಸ್), ಡಿಐಜಿ, ಅಸ್ಸಾಂ ರೈಫಲ್ಸ್ (ಪೂರ್ವ) ಮತ್ತು 9 ಕಾರ್ಪ್ಸ್​​ನ ಕಮಾಂಡ್​ಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

2022-2024 ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ನೇಮಕಗೊಳ್ಳುವ ಮೊದಲು ಉಪೇಂದ್ರ ದ್ವಿವೇದಿ ಅವರು ಡೈರೆಕ್ಟರ್ ಜನರಲ್ ಇನ್ಫೆಂಟ್ರಿ ಮತ್ತು ಜನರಲ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ (ಪ್ರಧಾನ ಕಚೇರಿ ನಾರ್ತ್​ ಕಮಾಂಡ್) ಸೇರಿದಂತೆ ಪ್ರಮುಖ ನೇಮಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.

ಇದನ್ನೂ ಓದಿ ;Terrorist Killed : ಜಮ್ಮು ಕಾಶ್ಮೀರದಲ್ಲಿ ಉಗ್ರನೊಬ್ಬನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಸೈನಿಕ್ ಸ್ಕೂಲ್ ರೇವಾ, ನ್ಯಾಷನಲ್ ಡಿಫೆನ್ಸ್ ಕಾಲೇಜ್ ಮತ್ತು ಯುಎಸ್ ಆರ್ಮಿ ವಾರ್ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿರುವ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರು ಡಿಎಸ್ಎಸ್ಸಿ ವೆಲ್ಲಿಂಗ್ಟನ್ ಮತ್ತು ಮೋವ್​​ನ ಆರ್ಮಿ ವಾರ್ ಕಾಲೇಜಿನಲ್ಲಿ ಕೋರ್ಸ್​ಗಳನ್ನು ಪಡೆದಿದ್ದಾರೆ. ಅಮೆರಿಕದ ಕಾರ್ಲೈಲ್​ನ ಯುಎಸ್ಎಡಬ್ಲ್ಯೂಸಿಯಲ್ಲಿ ಎನ್​ಡಿಸಿ ಸಮಾನ ಕೋರ್ಸ್​​ನಲ್ಲಿ ‘ವಿಶೇಷ ಡಾಕ್ಟರೇಟ್​’ ಪಡೆದಿದ್ದಾರೆ. ಡಿಫೆನ್ಸ್ ಮತ್ತು ಮ್ಯಾನೇಜ್ಮೆಂಟ್ ಸ್ಟಡೀಸ್​ನಲ್ಲಿ ಎಂ.ಫಿಲ್ ಮತ್ತು ಸ್ಟ್ರಾಟೆಜಿಕ್ ಸ್ಟಡೀಸ್ ಮತ್ತು ಮಿಲಿಟರಿಯಲ್ಲಿ ಎರಡು ಸ್ನಾತಕೋತ್ತರ ಪದವಿಗಳನ್ನು ಹೊಂದಿದ್ದಾರೆ.

Continue Reading

ಪ್ರಮುಖ ಸುದ್ದಿ

Terrorist Killed : ಜಮ್ಮು ಕಾಶ್ಮೀರದಲ್ಲಿ ಉಗ್ರನೊಬ್ಬನ್ನು ಹೊಡೆದುರುಳಿಸಿದ ಭದ್ರತಾ ಪಡೆ

Terrorist Killed: ಹಿರಾನಗರ್ ಸೆಕ್ಟರ್​ನ ಸೆಡಾ ಸೋಹಲ್ ಗ್ರಾಮದಲ್ಲಿ ಸಂಜೆ 7: 45 ರ ಸುಮಾರಿಗೆ ಅನುಮಾನಾಸ್ಪದ ಉಗ್ರಗಾಮಿ ಚಟುವಟಿಕೆ ಪತ್ತೆಯಾಗಿತ್ತು. ಅವರಿಗೆ ಶರಣಾಗುವಂತೆ ಸೂಚಿಸಿದೆವು. ಅವರು ಮನವಿ ಧಿಕ್ಕರಿಸಿ ಕಾಡಿನೊಳಗೆ ಹೋಗಿ ಗುಂಡಿನ ದಾಳಿ ನಡೆಸಿದ್ದರು. ಪೊಲೀಸರು ಮತ್ತು ಇತರ ಭದ್ರತಾ ಪಡೆಗಳು ಶಂಕಿತರನ್ನು ಪತ್ತೆಹಚ್ಚಲು ದೊಡ್ಡ ಪ್ರಮಾಣದ ಶೋಧ ಕಾರ್ಯಾಚರಣೆ ನಡೆಸಿ ಅವರಲ್ಲೊಬ್ಬರನ್ನು ಹೊಡೆದುರುಳಿಸಿದ್ದಾರೆ.

VISTARANEWS.COM


on

Terrorist Killed
Koo

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಮನೆಯೊಂದಕ್ಕೆ ನುಗ್ಗಿದ್ದ ಉಗ್ರರ ಗುಂಪಿನಲ್ಲಿ ಒಬ್ಬನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದೆ (Terrorist Killed) . ಮೂವರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಭಾರಿ ಶೋಧ ಕಾರ್ಯಾಚರಣೆ ನಡೆಸಿ ಅವರಲ್ಲೊಬ್ಬರನ್ನು ಹೊಡೆದುರುಳಿಸಿದ್ದಾರೆ. ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಹಿರಾನಗರ್ ಸೆಕ್ಟರ್​ನ ಸೆಡಾ ಸೋಹಲ್ ಗ್ರಾಮದಲ್ಲಿ ಸಂಜೆ 7: 45 ರ ಸುಮಾರಿಗೆ ಅನುಮಾನಾಸ್ಪದ ಉಗ್ರಗಾಮಿ ಚಟುವಟಿಕೆ ಪತ್ತೆಯಾಗಿತ್ತು. ಅವರಿಗೆ ಶರಣಾಗುವಂತೆ ಸೂಚಿಸಿದೆವು. ಅವರು ಮನವಿ ಧಿಕ್ಕರಿಸಿ ಕಾಡಿನೊಳಗೆ ಹೋಗಿ ಗುಂಡಿನ ದಾಳಿ ನಡೆಸಿದ್ದರು. ಪೊಲೀಸರು ಮತ್ತು ಇತರ ಭದ್ರತಾ ಪಡೆಗಳು ಶಂಕಿತರನ್ನು ಪತ್ತೆಹಚ್ಚಲು ದೊಡ್ಡ ಪ್ರಮಾಣದ ಶೋಧ ಕಾರ್ಯಾಚರಣೆ ನಡೆಸಿ ಅವರಲ್ಲೊಬ್ಬರನ್ನು ಹೊಡೆದುರುಳಿಸಿದ್ದಾರೆ.

ಘಟನೆ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಘಟನೆ ಬಗ್ಗೆ ಕಥುವಾ ಜಿಲ್ಲಾಧಿಕಾರಿಯೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.

ಭಾರತ ಪಾಕ್​ ಗಡಿಗೆ ಹತ್ತಿರವಿರುವ ಹಿರಾನಗರ್ ಸೆಕ್ಟರ್​ನ ಸೈದಾ ಗ್ರಾಮದ ಮನೆಯೊಂದರ ಮೇಲೆ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ನಾನು ಡಿಸಿ #Kathua ಶ್ರೀ ರಾಕೇಶ್ ಮಿನ್ಹಾಸ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ನಾನು ಸ್ಥಳದಲ್ಲಿರುವ ಕಥುವಾ ಎಸ್ಎಸ್ಪಿ ಅನಾಯತ್ ಅಲಿ ಚೌಧರಿ ಜತೆಗೂ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ” ಎಂದು ಸಿಂಗ್ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ದಾಳಿಗೊಳಗಾದ ಮನೆಯ ಮಾಲೀಕರು ಮೊಬೈಲ್ ಫೋನ್​ನಲ್ಲಿ ಮಾತನಾಡಿದ್ದಾರೆ. ಜಂಟಿ ಪೊಲೀಸ್ ಮತ್ತು ಪ್ಯಾರಾ ಮಿಲಿಟರಿ ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೆ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ನಾನು ಮತ್ತು ನನ್ನ ಕಚೇರಿ ನಿರಂತರ ಸಂಪರ್ಕರುತ್ತದೆ” ಎಂದು ಕೇಂದ್ರ ಸಚಿವರು ಹೇಳಿದರು.

ಇದನ್ನೂ ಓದಿ: Joe Biden : ಬಂದೂಕು ಪ್ರಕರಣದಲ್ಲಿ ಅಮೆರಿಕ ಅಧ್ಯಕ್ಷ ಜೊ ಬೈಡೆನ್ ಪುತ್ರ ತಪ್ಪಿತಸ್ಥ; ಕಾದಿದೆ 25 ವರ್ಷ ಜೈಲು ಶಿಕ್ಷೆ

ಶಿವ ಖೋರಿ ದೇವಸ್ಥಾನದಿಂದ ಕತ್ರಾದ ಮಾತಾ ವೈಷ್ಣೋ ದೇವಿ ದೇವಾಲಯಕ್ಕೆ ಪ್ರಯಾಣಿಸುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ಎರಡು ದಿನಗಳ ನಂತರ ಈ ಘಟನೆ ನಡೆದಿದೆ. ರಿಯಾಸಿಯ ಪೋನಿ ಪ್ರದೇಶದ ಟೆರ್ಯಾತ್ ಗ್ರಾಮದ ಬಳಿ ಉಗ್ರರ ಗುಂಡೇಟು ತಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದಿದೆ. ಈ ದಾಳಿಯಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 41 ಜನರು ಗಾಯಗೊಂಡಿದ್ದಾರೆ.

Continue Reading

ಪ್ರಮುಖ ಸುದ್ದಿ

Priyanka Gandhi : ವಾರಾಣಸಿಯಲ್ಲಿ ಪ್ರಿಯಾಂಕ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು; ರಾಹುಲ್​ ಗಾಂಧಿ

Priyanka Gandhi: ಅಮೇಥಿ ಮತ್ತು ರಾಯ್​​ಬರೇಲಿ ಲೋಕಸಭಾ ಸ್ಥಾನಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಯ್ಕೆಯಾಗಿದ್ದವು. ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎಂದು ಊಹಿಸಲಾಗಿತ್ತು. ಕೊನೆಗೆ ರಾಹುಲ್ ಗಾಂಧಿ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್​ಬರೇಲಿಯಲ್ಲಿ ಸ್ಪರ್ಧಿಸಿದ್ದರು.

VISTARANEWS.COM


on

Priyanka Gandhi:
Koo

ನವದೆಹಲಿ: ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಸ್ಪರ್ಧಿಯಾಗಿ ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ(Priyanka Gandhi) ನಿಂತಿದ್ದರೆ 2 ರಿಂದ 3 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಿದ್ದರು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ರಾಯ್​ಬರೇರಿಯಲ್ಲಿ ನಡೆದ ಸಮಾರಂಭದಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

“ನಾನು ಇದನ್ನು ಅಹಂಕಾರದಿಂದ ಹೇಳುತ್ತಿಲ್ಲ” ಎಂದು ಹೇಳಿದ ರಾಹುಲ್ ಗಾಂಧಿ, ಭಾರತದ ಜನರು ಪ್ರಧಾನಿ ಮೋದಿಯವರ ಆಡಳಿತದಿಂದ ಸಂತುಷ್ಟರಾಗಿಲ್ಲ. ಅವರಿಗೆ ಮತದಾರರು ಸ್ಪಷ್ಟ ಸಂದೇಶ ಕಳುಹಿಸಿದ್ದಾರೆ. ಹೀಗಾಗಿ ಈ ಮಾತು ಹೇಳುತ್ತಿದ್ದೇನೆ ಎಂದು ನುಡಿದಿದ್ದಾರೆ. ಜನರು ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ನಿಲ್ಲುತ್ತೇವೆ ಎಂಬ ಸಂದೇಶವನ್ನು ಕಳುಹಿಸಿದ್ದಾರೆ” ಎಂದು ಮುಂದುವರಿದ ರಾಹುಲ್ ಗಾಂಧಿ ಹೇಳಿದರು.

ಅಮೇಥಿ ಮತ್ತು ರಾಯ್​​ಬರೇಲಿ ಲೋಕಸಭಾ ಸ್ಥಾನಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಯ್ಕೆಯಾಗಿದ್ದವು. ಪ್ರಿಯಾಂಕಾ ಗಾಂಧಿ ವಾದ್ರಾ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎಂದು ಊಹಿಸಲಾಗಿತ್ತು. ಕೊನೆಗೆ ರಾಹುಲ್ ಗಾಂಧಿ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್​ಬರೇಲಿಯಲ್ಲಿ ಸ್ಪರ್ಧಿಸಿದ್ದರು. ಅವರು ಅಮೇಥಿಯಿಂದ ಕೆಎಲ್ ಶರ್ಮಾ ಅವರನ್ನು ಕಣಕ್ಕಿಳಿಸಿದರು, ಅವರು ಬಿಜೆಪಿಯ ಸ್ಮೃತಿ ಇರಾನಿ ಅವರನ್ನು 1.6 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು.

ಇದನ್ನೂ ಓದಿ: Modi Ka Parivar : ಸೋಶಿಯಲ್​ ಮೀಡಿಯಾ ಹ್ಯಾಂಡಲ್​​ಗಳಿಂದ ‘ಮೋದಿ ಕಾ ಪರಿವಾರ್​’ ತೆಗೆಯಲು ಸೂಚನೆ

ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಆದಾಗ್ಯೂ, ಅವರ ಗೆಲುವಿನ ಅಂತರವು 2019 ಮತ್ತು 2014 ಕ್ಕಿಂತ ಕಡಿಮೆಯಾಗಿದೆ. 1.5 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. 2024 ರ ಲೋಕಸಭಾ ಚುನಾವಣೆಯಲ್ಲಿ ಎನ್​ಡಿಎ 543 ಸ್ಥಾನಗಳಲ್ಲಿ 293 ಸ್ಥಾನಗಳನ್ನು ಗೆದ್ದಿದೆ. ಆದಾಗ್ಯೂ, ಬಿಜೆಪಿ ಲೋಕಸಭೆಯಲ್ಲಿ 240 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತದ ಕೊರತೆಯನ್ನು ಎದುರಿಸಿತು. 2014 ಮತ್ತು 2019 ರ ಲೋಕಸಭಾ ಚುನಾವಣೆಗಳಿಗೆ ಹೋಲಿಸಿದರೆ ಕಾಂಗ್ರೆಸ್ 99 ಸ್ಥಾನಗಳನ್ನು ಗಳಿಸಿದೆ

Continue Reading
Advertisement
Terrorists Attack
ಪ್ರಮುಖ ಸುದ್ದಿ6 mins ago

Terrorists Attack : ಜಮ್ಮು ಕಾಶ್ಮೀರದಲ್ಲಿ ಸೇನಾ ನೆಲೆ ಮೇಲೆ ಪಾಕಿಸ್ತಾನದ ಉಗ್ರರ ದಾಳಿ

Rock Salt Or Powder Salt
ಆರೋಗ್ಯ58 mins ago

Rock Salt Or Powder Salt: ಬೆಳ್ಳನೆಯ ಪುಡಿ ಉಪ್ಪು ಆರೋಗ್ಯಕರವೇ ಅಥವಾ ಕಲ್ಲುಪ್ಪೇ?

Actor Darshan Arrested
ಪ್ರಮುಖ ಸುದ್ದಿ2 hours ago

Actor Darshan Arrested : ದರ್ಶನ್​ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ; ಚಿಕ್ಕಪೇಟೆ ಬಿರಿಯಾನಿ, ಡೋಲೊ 650 ಮಾತ್ರೆ!

Dina Bhavishya
ಭವಿಷ್ಯ2 hours ago

Dina Bhavishya : ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆ; ಪ್ರಭಾವಿ ವ್ಯಕ್ತಿಗಳ ಬೆಂಬಲ

Health Benefits Of Jaggery
ಆರೋಗ್ಯ2 hours ago

Health Benefits Of Jaggery: ಬೆಲ್ಲ ಉಳಿದ ಆಹಾರದಂಥಲ್ಲ; ಇದರ ಲಾಭಗಳು ಏನೇನು ತಿಳಿದುಕೊಂಡಿರಿ

T20 World Cup
ಪ್ರಮುಖ ಸುದ್ದಿ7 hours ago

T20 World Cup : ಕೊನೆಗೂ ದುರ್ಬಲ ಕೆನಾಡ ತಂಡದ ವಿರುದ್ಧ ಜಯ ಗಳಿಸಿದ ಪಾಕಿಸ್ತಾನ

Lt. General Upendra Dwivedi
ಪ್ರಮುಖ ಸುದ್ದಿ8 hours ago

Lt. General Upendra Dwivedi : ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ

Terrorist Killed
ಪ್ರಮುಖ ಸುದ್ದಿ8 hours ago

Terrorist Killed : ಜಮ್ಮು ಕಾಶ್ಮೀರದಲ್ಲಿ ಉಗ್ರನೊಬ್ಬನ್ನು ಹೊಡೆದುರುಳಿಸಿದ ಭದ್ರತಾ ಪಡೆ

Joe Biden
ಪ್ರಮುಖ ಸುದ್ದಿ9 hours ago

Joe Biden : ಬಂದೂಕು ಪ್ರಕರಣದಲ್ಲಿ ಅಮೆರಿಕ ಅಧ್ಯಕ್ಷ ಜೊ ಬೈಡೆನ್ ಪುತ್ರ ತಪ್ಪಿತಸ್ಥ; ಕಾದಿದೆ 25 ವರ್ಷ ಜೈಲು ಶಿಕ್ಷೆ

Pavithra Gowda
ಕರ್ನಾಟಕ9 hours ago

Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ14 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ15 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ16 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ17 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ20 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌