Site icon Vistara News

Ras Al Khaimah | 673 ಡ್ರೋನ್‌, 4.7 ಕಿ.ಮೀವರೆಗೆ ಆಗಸದಲ್ಲಿ ಪಟಾಕಿ, ಬೆಳಕಿನ ಚಿತ್ತಾರ, 2 ಗಿನ್ನೆಸ್‌ ದಾಖಲೆ ಬರೆದ ರಸ್‌ ಅಲ್‌ ಖೈಮಾ

Ras Al Khaimah New Year Celebration

ಅಬುಧಾಬಿ: ಭಾರತ ಸೇರಿ ಜಗತ್ತಿನಾದ್ಯಂತ ಸಂಭ್ರಮ-ಸಡಗರದಿಂದ ಹೊಸ ವರ್ಷ ಆಚರಣೆ ಮಾಡಲಾಗಿದೆ. ಪಟಾಕಿ ಸಿಡಿಸಿ, ಹಾಡಿ, ಕುಣಿದು, ನಲಿದು ಹೊಸ ಸಂವತ್ಸರವನ್ನು ಸ್ವಾಗತಿಸಲಾಗಿದೆ. ಹೀಗೆ, ಅದ್ಧೂರಿಯಾಗಿ ಹೊಸ ವರ್ಷಾವನ್ನು ಸ್ವಾಗತಿಸುವ ಮೂಲಕ ಯುಎಇಯ ರಸ್‌ ಅಲ್‌ ಖೈಮಾ (Ras Al Khaimah) ನಗರವು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಹೊಸ ವರ್ಷಾಚರಣೆಗೆ ತಾನೇ ಅಧಿಪತಿ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ.

ಹೌದು, ರಸ್‌ ಅಲ್‌ ಖೈಮಾದಲ್ಲಿ ಶನಿವಾರ ರಾತ್ರಿ 673 ಡ್ರೋನ್‌ಗಳನ್ನು ಬಳಸಿ ಸುಮಾರು 4.7 ಕಿ.ಮೀ ವ್ಯಾಪ್ತಿಯಲ್ಲಿ ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿ, ಕೊನೆಗೆ ಆಗಸದಲ್ಲಿಯೇ ‘ಹ್ಯಾಪಿ ನ್ಯೂ ಇಯರ್‌ 2023’ (Happy New Year 2023) ಎಂಬ ಅಕ್ಷರಗಳು ಮೂಡುವ ಮೂಲಕ ಶುಭಕೋರಲಾಗಿದೆ. ಹಾಗಾಗಿ, ರಸ್‌ ಅಲ್‌ ಖೈಮಾದಲ್ಲಿ ಪಟಾಕಿ ಹಾಗೂ ದೀಪಗಳ ಚಿತ್ತಾರ ಮೂಡಿಸಿದ್ದು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಸುಮಾರು 1,100 ಮೀಟರ್‌ ಎತ್ತರದಲ್ಲಿ ಪಟಾಕಿ ಸಿಡಿಸಿ, ವಿದ್ಯುತ್‌ ದೀಪಗಳನ್ನು ಬೆಳಗಲಾಗಿದೆ. ಹೀಗೆ, ಆಗಸದಲ್ಲಿ ಬೆಳಕಿನ ರಂಗಿನಾಟವಿರುವ 12 ನಿಮಿಷದ ವಿಡಿಯೊವನ್ನು ರಸ್‌ ಅಲ್‌ ಖೈಮಾದ ಆಡಳಿತವು ಶೇರ್‌ ಮಾಡಿದೆ.

ಇದಕ್ಕೂ ಮೊದಲು ಸುಮಾರು 458 ಡ್ರೋನ್‌ಗಳನ್ನು ಬಳಸಿ, ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿದ್ದು ಗಿನ್ನೆಸ್‌ ದಾಖಲೆ ಆಗಿತ್ತು. ಈಗ ಈ ದಾಖಲೆಯನ್ನು ರಸ್‌ ಅಲ್‌ ಖೈಮಾ ಮುರಿದಿದೆ. ಹೊಸ ವರ್ಷಾಚರಣೆಗೆ ರಸ್‌ ಅಲ್‌ ಖೈಮಾ ಖ್ಯಾತಿ ಗಳಿಸಿದ್ದು, ಈ ಬಾರಿ 30 ಸಾವಿರಕ್ಕೂ ಅಧಿಕ ಜನ ಹೊಸ ವರ್ಷ ಆಚರಿಸಲು ನಗರಕ್ಕೆ ಆಗಮಿಸಿದ್ದರು ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | New Year 2023 | ಜಗತ್ತಿನಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಿದ್ದು ಹೇಗೆ? ಇಲ್ಲಿವೆ ಫೋಟೊಗಳು

Exit mobile version