Akshata Murty: ರಿಷಿ ಸುನಕ್‌ ವಿದಾಯ ಭಾಷಣದ ವೇಳೆ ಅಕ್ಷತಾ ಮೂರ್ತಿ ಧರಿಸಿದ್ದ ಡ್ರೆಸ್ ಬೆಲೆ ಎಷ್ಟು? ಬ್ರಿಟನ್‌‌ನಲ್ಲಿ ಇದೇ ದೊಡ್ಡ ಚರ್ಚೆ! - Vistara News

ವಿದೇಶ

Akshata Murty: ರಿಷಿ ಸುನಕ್‌ ವಿದಾಯ ಭಾಷಣದ ವೇಳೆ ಅಕ್ಷತಾ ಮೂರ್ತಿ ಧರಿಸಿದ್ದ ಡ್ರೆಸ್ ಬೆಲೆ ಎಷ್ಟು? ಬ್ರಿಟನ್‌‌ನಲ್ಲಿ ಇದೇ ದೊಡ್ಡ ಚರ್ಚೆ!

Akshata Murty: ಇದುವರೆಗೆ ಪ್ರಧಾನಿಯಾಗಿದ್ದ ಕನ್ಸರ್ವೇಟಿವ್‌ ಪಕ್ಷದ ರಿಷಿ ಸುನಕ್‌ (Rishi Sunak) ಅವರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಬಳಿಕ ದೇಶದ ಜನರನ್ನು ಉದ್ದೇಶಿಸಿ ಅವರು ಮಾತನಾಡಿದರು. ಇದೇ ವೇಳೆ, ಅವರ ಹಿಂದೆ ನಿಂತಿದ್ದ ಪತ್ನಿ ಅಕ್ಷತಾ ಮೂರ್ತಿ ಅವರು ಧರಿಸಿದ್ದ ಡ್ರೆಸ್‌ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

Akshata Murty
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್:‌ ಬ್ರಿಟನ್‌ ಸಾರ್ವತ್ರಿಕ ಚುನಾವಣೆಯ (Britain Election) ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14 ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್‌ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್‌ ನಂಬರ್‌ 320 ಅನ್ನು ದಾಟುವ ಮೂಲಕ ಸರ್ಕಾರ ರಚಿಸಿದೆ. ಇನ್ನು ಇದುವರೆಗೆ ಪ್ರಧಾನಿಯಾಗಿದ್ದ ಕನ್ಸರ್ವೇಟಿವ್‌ ಪಕ್ಷದ ರಿಷಿ ಸುನಕ್‌ (Rishi Sunak) ಅವರು ರಾಜೀನಾಮೆ ನೀಡಿದ್ದಾರೆ. ಇನ್ನು ರಾಜೀನಾಮೆ ನೀಡಿ, ವಿದಾಯದ ಭಾಷಣ ಮಾಡುವಾಗ ಅವರ ಪತ್ನಿ ಅಕ್ಷತಾ ಮೂರ್ತಿ (Akshata Murty) ಅವರು ಧರಿಸಿದ್ದ ಡ್ರೆಸ್‌ ಹಾಗೂ ಅದರ ಮೌಲ್ಯದ ಕುರಿತು ಭಾರಿ ಚರ್ಚೆ ಶುರುವಾಗಿದೆ.

ಚುನಾವಣೆಯಲ್ಲಿ ಹಿನ್ನಡೆಯಾಗುತ್ತಲೇ ದೇಶದ ಜನರನ್ನು ಉದ್ದೇಶಿಸಿ ರಿಷಿ ಸುನಕ್‌ ಮಾತನಾಡಿದರು. “ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ” ಎಂದು ಅವರು ಹೇಳಿದರು. ಇದೇ ವೇಳೆ, ಅವರ ಹಿಂದೆ ಅಕ್ಷತಾ ಮೂರ್ತಿ ಅವರು ನಿಂತಿದ್ದರು. ಅಷ್ಟೇ ಅಲ್ಲ, ಅಕ್ಷತಾ ಮೂರ್ತಿ ಅವರು ಧರಿಸಿದ್ದ, ಇಂಡಿಯನ್‌ ಲೇಬಲ್‌ನ ಡ್ರೆಸ್‌ ಕುರಿತು ಭಾರಿ ಚರ್ಚೆಯಾಗುತ್ತಿದೆ. ಬ್ರಿಟನ್‌ ರಾಷ್ಟ್ರಧ್ವಜದಲ್ಲಿರುವ ನೀಲಿ, ಕೆಂಪು ಹಾಗೂ ವೈಟ್‌ ಪಟ್ಟಿಗಳು ಇರುವ, ಹೈ ನೆಕ್ಡ್‌ ಆಗಿರುವ ಡ್ರೆಸ್‌ಅನ್ನು ಅಕ್ಷತಾ ಮೂರ್ತಿ ಧರಿಸಿದ್ದು, ಇದರ ಬೆಲೆ 42 ಸಾವಿರ ರೂ. ಇದೆ ಎಂದು ತಿಳಿದುಬಂದಿದೆ.

ಬ್ರಿಟನ್‌ ಪ್ರಧಾನಿಯಾಗಿ ಲೇಬರ್‌ ಪಕ್ಷದ ಕೀರ್‌ ಸ್ಟಾರ್ಮರ್‌ ಆಯ್ಕೆಯಾಗಿದ್ದಾರೆ. ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, “ದೇಶದ ಜನರ ಸೇವೆ ಮಾಡುವುದೇ ನಮಗೆ ಭಾಗ್ಯವಾಗಿದೆ. ನೀವು ಲೇಬರ್‌ ಪಕ್ಷಕ್ಕೆ ಮತ ಹಾಕಿದ್ದೀರೋ, ಬಿಟ್ಟಿದ್ದೀರೋ ಅದು ಬೇಕಾಗಿಲ್ಲ. ದೇಶದ ಪ್ರತಿಯೊಬ್ಬರಿಗೂ ಉತ್ತಮ ಆಡಳಿತ ನೀಡುವುದು ನಮ್ಮ ಆದ್ಯತೆಯಾಗಿದೆ. ರಾಜಕೀಯ ಎಂದರೆ ಉತ್ತಮ ಆಡಳಿತ ನೀಡುವುದು, ರಾಜಕೀಯವನ್ನು ಸಕಾರಾತ್ಮಕ ಸಂಗತಿಗಾಗಿ ಬಳಸಿಕೊಳ್ಳುತ್ತೇವೆ. ಮತಗಳನ್ನು ನೀಡಿ ಗೆಲ್ಲಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಹೇಳಿದರು. ಕೀರ್‌ ಸ್ಟಾರ್ಮರ್‌ ಅವರು ನಿರ್ಗಮಿತ ಪ್ರಧಾನಿ ರಿಷಿ ಸುನಕ್‌ ಅವರ ಆಡಳಿತವನ್ನೂ ಹೊಗಳಿದ್ದು ವಿಶೇಷವಾಗಿತ್ತು.

ಬ್ರಿಟನ್‌ ಪ್ರಧಾನಿಯಾಗಿ ಕೀರ್‌ ಸ್ಟಾರ್ಮರ್‌ ಅವರು ಆಯ್ಕೆಯಾಗುತ್ತಲೇ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. “ಬ್ರಿಟನ್‌ ಸಾರ್ವತ್ರಿಕ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕೀರ್‌ ಸ್ಟಾರ್ಮರ್‌ ಅವರಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಭಾರತ-ಬ್ರಿಟನ್‌ ಒಗ್ಗೂಡಿ, ಸಂಬಂಧವನ್ನು ವೃದ್ಧಿಸಿಕೊಂಡು ಉಭಯ ದೇಶಗಳ ಏಳಿಗೆಗೆ ಶ್ರಮಿಸುವ ವಿಶ್ವಾಸವಿದೆ” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ. ಹಾಗೆಯೇ, ಇದುವರೆಗೆ ಆಡಳಿತ ನಡೆಸಿದ, ಭಾರತದ ಮೂಲದ ರಿಷಿ ಸುನಕ್‌ ಅವರ ಬಗ್ಗೆಯೂ ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಇದನ್ನೂ ಓದಿ: Keir Starmer: ಬ್ರಿಟನ್‌ ಪ್ರಧಾನಿಯಾಗಿ ಕೀರ್‌ ಸ್ಟಾರ್ಮರ್‌ ನೇಮಕ; ಅಭಿನಂದನೆ ಸಲ್ಲಿಸಿದ ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

PM Modi Russia Visit: ದೇಶ, ಜನರಿಗಾಗಿ ನಿಮ್ಮ ಜೀವನವೇ ಮುಡಿಪು ಎಂದು ಮೋದಿಯನ್ನು ಹೊಗಳಿದ ಪುಟಿನ್

PM Modi Russia Visit: ಮಾಸ್ಕೋದಲ್ಲಿರುವ ವ್ಲಾಡಿಮಿರ್‌ ಪುಟಿನ್‌ ಅವರ ನಿವಾಸಕ್ಕೆ (ನೋವೊ-ಒಗಾರ್ಯೊವೊ) ನರೇಂದ್ರ ಮೋದಿ ಅವರನ್ನು ರಷ್ಯಾ ಅಧ್ಯಕ್ಷ ಕೈ ಕುಲುಕಿ, ತಬ್ಬಿಕೊಂಡು ಸ್ವಾಗತಿಸಿದರು. ಉಭಯ ನಾಯಕರು ಆತ್ಮೀಯವಾಗಿ ಮಾತುಕತೆ ನಡೆಸಿದರು. ಬಿಸಿ ಬಿಸಿ ಚಹಾ ಸವಿಯುತ್ತ ಉಭಯ ಕುಶಲೋಪರಿ ನಡೆಸಿದರು. ಇದೇ ವೇಳೆ ಮೋದಿ ಅವರನ್ನು ಪುಟಿನ್‌ ಅವರು ಹಾಡಿ ಹೊಗಳಿದರು.

VISTARANEWS.COM


on

PM Modi Russia Visit
Koo

ಮಾಸ್ಕೋ: ಎರಡು ದಿನಗಳ ರಷ್ಯಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ (PM Modi Russia Visit) ಅವರು ಮಾಸ್ಕೋ ತಲುಪುತ್ತಲೇ ಅದ್ಧೂರಿ ಸ್ವಾಗತ ಸಿಕ್ಕಿದೆ. ಅನಿವಾಸಿ ಭಾರತೀಯರು, ರಷ್ಯಾ ಕಲಾವಿದರು ಹಿಂದಿಗೆ ಹಾಡಿಗೆ ನೃತ್ಯ ಮಾಡಿ, ಭಜನೆ, ಹಾಡುಗಳ ಮೂಲಕ ನರೇಂದ್ರ ಮೋದಿ (Narendra Modi) ಅವರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿದ್ದಾರೆ. ಅಷ್ಟೇ ಅಲ್ಲ, ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ (Vladimir Putin) ಅವರನ್ನೂ ಭೇಟಿಯಾಗಿದ್ದು, ಪುಟಿನ್‌ ಮನೆಯಲ್ಲೇ ಚಾಯ್‌ ಪೆ ಚರ್ಚಾ, ಔತಣ ಕೂಡ ನಡೆದಿದೆ.

ಮಾಸ್ಕೋದಲ್ಲಿರುವ ವ್ಲಾಡಿಮಿರ್‌ ಪುಟಿನ್‌ ಅವರ ನಿವಾಸಕ್ಕೆ (ನೋವೊ-ಒಗಾರ್ಯೊವೊ) ನರೇಂದ್ರ ಮೋದಿ ಅವರನ್ನು ರಷ್ಯಾ ಅಧ್ಯಕ್ಷ ಕೈ ಕುಲುಕಿ, ತಬ್ಬಿಕೊಂಡು ಸ್ವಾಗತಿಸಿದರು. ತಮ್ಮ ನಿವಾಸದಲ್ಲಿಯೇ ಮೋದಿ ಅವರಿಗೆ ಪುಟಿನ್‌ ಅವರು ಚಹಾ, ಭೋಜನಕೂಟದ ಉಸ್ತುವಾರಿ ನೋಡಿಕೊಂಡರು. ಇದೇ ವೇಳೆ ಉಭಯ ನಾಯಕರು ಔಪಚಾರಿಕವಾಗಿ ಮಾತುಕತೆ ನಡೆಸಿದ್ದಾರೆ.

ಮೋದಿಯನ್ನು ಹೊಗಳಿದ ಪುಟಿನ್‌

ನರೇಂದ್ರ ಮೋದಿ ಅವರನ್ನು ವ್ಲಾಡಿಮಿರ್‌ ಪುಟಿನ್‌ ಅವರು ಹಾಡಿ ಹೊಗಳಿದ್ದಾರೆ. “ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೆ ಪ್ರಧಾನಿಯಾಗಿದ್ದಕ್ಕೆ ಅಭಿನಂದನೆಗಳು. ನೀವು ಹೊಂದಿರುವ ಸಾಮರ್ಥ್ಯ, ಉತ್ಸಾಹವು ಅಮೋಘವಾದುದು. ನೀವು ದೇಶ ಹಾಗೂ ಸಾರ್ವಜನಿಕರ ಸೇವೆಗಾಗಿ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದೀರಿ. ನೀವು ನಮ್ಮ ದೇಶಕ್ಕೆ ಆಗಮಿಸಿರುವುದು ಖುಷಿಯಾಗಿದೆ. ಇನ್ನು, ಬಾರತದಲ್ಲಿ 2.3 ಕೋಟಿ ಮಕ್ಕಳಿದ್ದು, ಅವರು ಭವಿಷ್ಯದ ಬಗ್ಗೆ ಯೋಚಿಸುತ್ತಾರೆ, ಕನಸು ಕಾಣುತ್ತಾರೆ. ಅಲ್ಲದೆ, ಇದು ಭದ್ರ, ಸ್ಥಿರ ಭಾರತದ ಸಂಕೇತವಾಗಿದೆ” ಎಂದು ವ್ಲಾಡಿಮಿರ್‌ ಪುಟಿನ್‌ ಅವರು ಖಾಸಗಿ ಭೇಟಿ ವೇಳೆ ಹೊಗಳಿದ್ದಾರೆ.

ಭಾರತ ಮತ್ತು ರಷ್ಯಾ ವಾರ್ಷಿಕ ಶೃಂಗಸಭೆಯು ಮೋದಿಯವರ ರಷ್ಯಾ ಭೇಟಿಯ ಪ್ರಮುಖ ಅಜೆಂಡಾವಾಗಿದ್ದು, ರಷ್ಯಾ-ಉಕ್ರೇನ್‌ ಯುದ್ಧದ ಬಳಿಕ ಮೊದಲ ಭೇಟಿಯಲ್ಲಿ ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್‌ ಪುಟಿನ್‌ ಅವರೊಂದಿಗೆ ಈ ಕುರಿತು ಮಾತುಕತೆ ನಡೆಸಿದ್ದಾರೆ. ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್‌ ಪುಟಿನ್‌ ಅವರು ಸೋಮವಾರ ನರೇಂದ್ರ ಮೋದಿ ಅವರಿಗೆ ಔತಣಕೂಟ ಏರ್ಪಡಿಸಿದ್ದಾರೆ. ಮಂಗಳವಾರ (ಜುಲೈ 9) ಶೃಂಗಸಭೆ ನಡೆಯಲಿದ್ದು, ಉಭಯ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಭಾರತ-ರಷ್ಯಾ ನಡುವಿನ 22ನೇ ವಾರ್ಷಿಕ ಸಭೆಯು ದ್ವಿಪಕ್ಷೀಯ ಸಂಬಂಧದ ದೃಷ್ಟಿಯಿಂದ ಪ್ರಾಮುಖ್ಯತೆ ಪಡೆದಿದೆ.

ಇದನ್ನೂ ಓದಿ: PM Modi Russia Visit: ರಷ್ಯಾ ತಲುಪಿದ ಮೋದಿಗೆ ಭಾರತದ ಸಂಪ್ರದಾಯದಂತೆ ಅದ್ಧೂರಿ ಸ್ವಾಗತ; Video ಇದೆ

Continue Reading

ದೇಶ

PM Modi Russia Visit: ರಷ್ಯಾ ತಲುಪಿದ ಮೋದಿಗೆ ಭಾರತದ ಸಂಪ್ರದಾಯದಂತೆ ಅದ್ಧೂರಿ ಸ್ವಾಗತ; Video ಇದೆ

PM Modi Russia Visit: ರಷ್ಯಾ ನಾಗರಿಕರು, ಕಲಾವಿದರಂತೂ ಮಾಸ್ಕೋದಲ್ಲಿರುವ, ಮೋದಿ ತಂಗಲಿರುವ ಹೋಟೆಲ್‌ ಎದುರು, ಭಾರತೀಯ ಶೈಲಿಯ ದಿರಸುಗಳನ್ನು ಧರಿಸಿ ಭಜನೆ, ಹಾಡು, ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

VISTARANEWS.COM


on

PM Modi Russia Visit
Koo

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ (PM Modi Russia Visit ) ಮೂರು ದಿನಗಳ ರಷ್ಯಾ (Russia) ಮತ್ತು ಆಸ್ಟ್ರೀಯಾ ಪ್ರವಾಸ (Austria) ಕೈಗೊಂಡಿದ್ದು, ಸೋಮವಾರ (ಜುಲೈ 8) ಸಂಜೆ ರಷ್ಯಾ ರಾಜಧಾನಿ ಮಾಸ್ಕೋ ತಲುಪಿದ್ದಾರೆ. ನರೇಂದ್ರ ಮೋದಿ (Narendra Modi) ಅವರು ರಷ್ಯಾ ತಲುಪುತ್ತಲೇ ಅದ್ಧೂರಿಯಾಗಿ ಸ್ವಾಗತ ಸಿಕ್ಕಿದೆ. ಅನಿವಾಸಿ ಭಾರತೀಯರು, ರಷ್ಯಾ ನಾಗರಿಕರು ಭಜನೆ, ಹಾಡು, ಜೈಕಾರದ ಮೂಲಕ ಭಾರತದ ಪ್ರಧಾನಿಯನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿದ್ದಾರೆ.

ಉಕ್ರೇನ್‌ ಹಾಗೂ ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ರಷ್ಯಾ ಪ್ರವಾಸ ಕೊಂಡಿದ್ದು, ಇಂದು ಮತ್ತು ನಾಳೆ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಬಳಿಕ ಬುಧವಾರ ಆಸ್ಟ್ರಿಯಾಗೆ ತೆರಳಿ ಗುರುವಾರದವರೆಗೂ ಅಲ್ಲೆ ಇರಲಿದ್ದಾರೆ. ರಷ್ಯಾ ನಾಗರಿಕರಂತೂ ಮಾಸ್ಕೋದಲ್ಲಿರುವ, ಮೋದಿ ತಂಗಲಿರುವ ಹೋಟೆಲ್‌ ಎದುರು, ಭಾರತೀಯ ಶೈಲಿಯ ದಿರಸುಗಳನ್ನು ಧರಿಸಿ ಭಜನೆ, ಹಾಡು, ನೃತ್ಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಇನ್ನು ಭಾರತ ಮತ್ತು ರಷ್ಯಾ ವಾರ್ಷಿಕ ಶೃಂಗಸಭೆಯು ಮೋದಿಯವರ ರಷ್ಯಾ ಭೇಟಿಯ ಪ್ರಮುಖ ಅಜೆಂಡಾವಾಗಿದ್ದು, ರಷ್ಯಾ-ಉಕ್ರೇನ್‌ ಯುದ್ಧದ ಬಳಿಕ ಮೊದಲ ಭೇಟಿಯಲ್ಲಿ ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್‌ ಪುಟಿನ್‌ ಅವರೊಂದಿಗೆ ಈ ಕುರಿತು ಮಾತುಕತೆ ನಡೆಸಲಿದ್ದಾರೆ. ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್‌ ಪುಟಿನ್‌ ಅವರು ಸೋಮವಾರ ನರೇಂದ್ರ ಮೋದಿ ಅವರಿಗೆ ಔತಣ ಕೂಡ ಏರ್ಪಡಿಸಿದ್ದಾರೆ. ಮಂಗಳವಾರ ಶೃಂಗಸಭೆ ನಡೆಯಲಿದ್ದು, ಉಭಯ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಜುಲೈ 8 ಹಾಗೂ 9ರಂದು ನರೇಂದ್ರ ಮೋದಿ ಅವರು ಮಾಸ್ಕೋದಲ್ಲಿ ಇರಲಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರನ್ನು ಭೇಟಿಯಾಗಲಿದ್ದಾರೆ. ಇದೇ ವೇಳೆ ಭಾರತ-ರಷ್ಯಾ ನಡುವಿನ 22ನೇ ವಾರ್ಷಿಕ ಸಭೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಭೇಟಿ ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಬಲಗೊಳಿಸಲಿದೆ. ಈ ಭೇಟಿ ವೇಳೆ ಉಭಯ ರಾಷ್ಟಗಳು ರಕ್ಷಣೆ, ಅನಿಲ ಮತ್ತು ಇತರೆ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Narendra Modi: ಬ್ರಿಟನ್‌ ನೂತನ ಪ್ರಧಾನಿ ಕೀರ್‌ ಸ್ಟಾರ್ಮರ್‌ಗೆ ಮೋದಿ ಕರೆ; ಭಾರತಕ್ಕೆ ಆಗಮಿಸುವಂತೆ ಮನವಿ!

Continue Reading

ಪ್ರಮುಖ ಸುದ್ದಿ

France Election: ಫ್ರಾನ್ಸ್ ಚುನಾವಣೆ: ಎಡ ಪಕ್ಷಗಳ ಒಕ್ಕೂಟದ ಮೇಲುಗೈ; ಅತಂತ್ರ ಫಲಿತಾಂಶ

France Election: ಇಮ್ಯಾನುಯೆಲ್‌ ಮ್ಯಾಕ್ರನ್‌ ನೇತೃತ್ವದ ಒಕ್ಕೂಟವು 160 ಕ್ಷೇತ್ರಗಳನ್ನು ಗೆದ್ದರೂ ಬಹುಮತ ಸಾಧಿಸಲು ಹಲವು ಪಕ್ಷಗಳ ಬೆಂಬಲ ಪಡೆಯಬೇಕಾಗುತ್ತದೆ. ನ್ಯಾಷನಲ್‌ ಪಾಪುಲರ್‌ ಫ್ರಂಟ್‌ ತೀವ್ರತರವಾದ ಎಡಪಂಥೀಯವಾದದಲ್ಲಿ ನಂಬಿಕೆ ಇರಿಸುವ ಪಕ್ಷವಾಗಿದ್ದು, ಇಮ್ಯಾನುಯೆಲ್‌ ಮ್ಯಾಕ್ರನ್‌ ಅವರಿಗೆ ಸೋಷಿಯಲಿಸ್ಟ್‌ ಪಕ್ಷದ ಬೆಂಬಲವು ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ.

VISTARANEWS.COM


on

France Election
Photo Courtesy- AP
Koo

ಪ್ಯಾರಿಸ್:‌ ಐರೋಪ್ಯ ಒಕ್ಕೂಟದ ದ್ವಿತೀಯ ಬೃಹತ್‌ ಆರ್ಥಿಕತೆ ಹೊಂದಿರುವ ರಾಷ್ಟ್ರವಾದ, ಕೆಲವೇ ದಿನಗಳಲ್ಲಿ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಸಾಕ್ಷಿಯಾಗುವ ಫ್ರಾನ್ಸ್‌ ಸಾರ್ವತ್ರಿಕ ಚುನಾವಣೆ ಫಲಿತಾಂಶ (France Election) ಪ್ರಕಟವಾಗಿದ್ದು, ಎಡಪಕ್ಷಗಳ ಒಕ್ಕೂಟವೇ ಪಾರಮ್ಯ ಸಾಧಿಸಿದೆ. ಇದರೊಂದಿಗೆ ಆಡಳಿತಾರೂಢ ಇಮ್ಯಾನುಯೆಲ್‌ ಮ್ಯಾಕ್ರನ್‌ (Emmanuel Macron) ನೇತೃತ್ವದ ಒಕ್ಕೂಟಕ್ಕೆ ಭಾರಿ ಹಿನ್ನಡೆಯಾಗಿದೆ. ಆದರೆ, ಯಾವುದೇ ಒಕ್ಕೂಟಕ್ಕೆ ಬಹುಮತ ಸಿಕ್ಕಿಲ್ಲ ಎಂಬುದು ಗಮನಾರ್ಹವಾಗಿದೆ. ಇಷ್ಟಾದರೂ ಎಡಪಕ್ಷಗಳು ಒಗ್ಗೂಡಿ ಸರ್ಕಾರ ರಚಿಸಲು ಮುಂದಾಗಿವೆ.

ಫ್ರಾನ್ಸ್‌ ನ್ಯಾಷನಲ್‌ ಅಸೆಂಬ್ಲಿಯ ಒಟ್ಟು 577 ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆ ಫಲಿತಾಂಶದ ನಿಖರ ಮಾಹಿತಿಯು ಸೋಮವಾರ (ಜುಲೈ 8) ಲಭ್ಯವಾಗಿದೆ. ನ್ಯೂ ಪಾಪುಲರ್‌ ಫ್ರಂಟ್‌ ನೇತೃತ್ವದ, ಎಡಪಕ್ಷಗಳ ಒಕ್ಕೂಟವು 180 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಹಾಲಿ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರನ್‌ ನೇತೃತ್ವದ ಒಕ್ಕೂಟವು 160 ಕ್ಷೇತ್ರ ಹಾಗೂ ಮರೀನ್‌ ಲೆ ಪೆನ್‌ ನೇತೃತ್ವದ ನ್ಯಾಷನಲ್‌ ರ‍್ಯಾಲಿ ಪಕ್ಷದ ಮುಂಚೂಣಿಯ ಒಕ್ಕೂಟವು 140 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇದರೊಂದಿಗೆ, ಯಾವೊಂದು ಒಕ್ಕೂಟವೂ 289ರ ಮ್ಯಾಜಿಕ್‌ ನಂಬರ್‌ ದಾಟುವಲ್ಲಿ ವಿಫಲವಾಗಿವೆ. ಆದರೆ, ಸರ್ಕಾರ ರಚಿಸಲು ಎಡಪಕ್ಷಗಳಿಗೆ ಹೆಚ್ಚು ಅವಕಾಶಗಳಿವೆ ಎಂದು ಹೇಳಲಾಗುತ್ತಿದೆ.

ಎಡಪಂಥೀಯ ಪಕ್ಷಗಳ ಸಂಭ್ರಮಾಚರಣೆ

ಪ್ರಧಾನಿ ಆಯ್ಕೆಗೆ ಎಡಪಕ್ಷಗಳ ಕಸರತ್ತು

ಫ್ರಾನ್ಸ್‌ ನೂತನ ಪ್ರಧಾನಿಯನ್ನು ಆಯ್ಕೆ ಮಾಡಲು ಎಡಪಕ್ಷಗಳ ಒಕ್ಕೂಟವು ಕಸರತ್ತು ನಡೆಸುತ್ತಿವೆ. “ಶೀಘ್ರದಲ್ಲೇ ನ್ಯಾಷನಲ್‌ ಪಾಪುಲರ್‌ ಫ್ರಂಟ್‌ ನೇತೃತ್ವದ ಒಕ್ಕೂಟದ ಸಭೆ ನಡೆಸಿ, ನೂತನ ಪ್ರಧಾನಿಯನ್ನು ಒಮ್ಮತದಿಂದ ಆಯ್ಕೆ ಮಾಡುತ್ತೇವೆ” ಎಂದು ಒಕ್ಕೂಟದ ಭಾಗವಾಗಿರುವ ಸೋಷಿಯಲಿಸ್ಟ್‌ ಪಕ್ಷದ ನಾಯಕ ಒಲಿವರ್‌ ಫಾರ್‌ ಅವರು ಮಾಹಿತಿ ನೀಡಿದ್ದಾರೆ. ಇದಕ್ಕಾಗಿ ಬೇರೆ ಪಕ್ಷಗಳೊಂದಿಗೆ ಒಕ್ಕೂಟದ ನಾಯಕರು ಸಂಪರ್ಕ ಸಾಧಿಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಎಡಪಕ್ಷಗಳದ್ದೇ ಸರ್ಕಾರ?

ಇಮ್ಯಾನುಯೆಲ್‌ ಮ್ಯಾಕ್ರನ್‌ ನೇತೃತ್ವದ ಒಕ್ಕೂಟವು 160 ಕ್ಷೇತ್ರಗಳನ್ನು ಗೆದ್ದರೂ ಬಹುಮತ ಸಾಧಿಸಲು ಹಲವು ಪಕ್ಷಗಳ ಬೆಂಬಲ ಪಡೆಯಬೇಕಾಗುತ್ತದೆ. ನ್ಯಾಷನಲ್‌ ಪಾಪುಲರ್‌ ಫ್ರಂಟ್‌ ತೀವ್ರತರವಾದ ಎಡಪಂಥೀಯವಾದದಲ್ಲಿ ನಂಬಿಕೆ ಇರಿಸುವ ಪಕ್ಷವಾಗಿದ್ದು, ಇಮ್ಯಾನುಯೆಲ್‌ ಮ್ಯಾಕ್ರನ್‌ ಅವರಿಗೆ ಸೋಷಿಯಲಿಸ್ಟ್‌ ಪಕ್ಷದ ಬೆಂಬಲವು ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ. ಹಾಗಾಗಿ, ಎಡಪಕ್ಷಗಳ ನೇತೃತ್ವದ ಸರ್ಕಾರವೇ ಅಸ್ತಿತ್ವಕ್ಕೆ ಬರುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ. ಇದರೊಂದಿಗೆ ಬ್ರಿಟನ್‌ನಲ್ಲಿ ಬಲಪಂಥೀಯ ಸರ್ಕಾರ ಪತನಗೊಂಡು, ಎಡಪಕ್ಷ ಅಧಿಕಾರಕ್ಕೆ ಬಂದಿರುವ ಬೆನ್ನಲ್ಲೇ, ಫ್ರಾನ್ಸ್‌ನಲ್ಲೂ ಎಡಪಕ್ಷಗಳೇ ಪಾರಮ್ಯ ಸಾಧಿಸುವ ಲಕ್ಷಣಗಳು ದಟ್ಟವಾಗಿವೆ.

ಇದನ್ನೂ ಓದಿ: Kamala Harris: ಅಮೆರಿಕ ಚುನಾವಣೆ; ಟ್ರಂಪ್‌ಗೆ ಪೈಪೋಟಿ ನೀಡಲು ಬೈಡನ್‌ಗಿಂತ ಕಮಲಾ ಹ್ಯಾರಿಸ್‌ ಸಮರ್ಥ ಎನ್ನುತ್ತವೆ ಸಮೀಕ್ಷೆ!

Continue Reading

ವಿದೇಶ

Kamala Harris: ಅಮೆರಿಕ ಚುನಾವಣೆ; ಟ್ರಂಪ್‌ಗೆ ಪೈಪೋಟಿ ನೀಡಲು ಬೈಡನ್‌ಗಿಂತ ಕಮಲಾ ಹ್ಯಾರಿಸ್‌ ಸಮರ್ಥ ಎನ್ನುತ್ತವೆ ಸಮೀಕ್ಷೆ!

ಅಮೆರಿಕದಲ್ಲಿ ಈಗ ಅಧ್ಯಕ್ಷೀಯ ಚುನಾವಣೆಯ ರಂಗು ಏರಲಾರಂಭಿಸಿದೆ. ಅಧ್ಯಕ್ಷೀಯ ಚುನಾವಣೆ ಕಣ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಬಾರಿ ಅಧ್ಯಕ್ಷೀಯ ರೇಸ್‌ನಲ್ಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ (Kamala Harris) ಅವರು ಟ್ರಂಪ್ ಅವರನ್ನು ಸೋಲಿಸಬಹುದೇ ಎನ್ನುವ ಕುತೂಹಲ ಹೆಚ್ಚಾಗಿದೆ. ಈ ಕುರಿತು ಸಮೀಕ್ಷೆಗಳು ಏನು ಹೇಳುತ್ತವೆ ಎನ್ನುವ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Kamala Harris
Koo

ವಾಷಿಂಗ್ಟನ್: ಅಮೆರಿಕ (US) ಚುನಾವಣೆ (election) ಕಣ ರಂಗೇರಿದೆ. ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ (Kamala Harris) ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಕಮಲಾ ಹ್ಯಾರಿಸ್ ತಮ್ಮದೇ ಆದ ಛಾಪು ಬೀರಿ ಅಮೆರಿಕ ರಾಜಕೀಯ ವಲಯದಲ್ಲಿ ಗುರುತಿಸಲ್ಪಟ್ಟಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಸಾಕಷ್ಟು ಮಂದಿ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಜೋ ಬೈಡನ್‌ ಅವರು ಚುನಾವಣಾ ಕಣದಿಂದ ಹಿಂದೆ ಸರಿದರೆ ಕಮಲಾ ಹ್ಯಾರಿಸ್‌ ಅವರು ಬೈಡನ್‌ ಅವರ ಉತ್ತರಾಧಿಕಾರಿಯಾಗುತ್ತಾರೆ ಎಂದೇ ಉನ್ನತ ಡೆಮಾಕ್ರಟ್‌ ಮೂಲಗಳು ಹೇಳಿವೆ. ಡೊನಾಲ್ಡ್ ಟ್ರಂಪ್ ಅವರನ್ನು ಸೋಲಿಸಲು ಬೈಡೆನ್‌ ಅವರಿಗೆ ಉತ್ತಮ ಅವಕಾಶವಿದೆಯೇ? ಬೈಡೆನ್ ರೇಸ್‌ನಲ್ಲಿ ಉಳಿದುಕೊಳ್ಳುತ್ತಾರೆಯೇ ಎನ್ನುವ ಬಗ್ಗೆಯೂ ಪ್ರಶ್ನೆಗಳು ಉದ್ಭವವಾಗಿವೆ.

59 ವರ್ಷದ ಕಮಲಾ ಹ್ಯಾರಿಸ್ ಅವರು ಭಾರತ ಮೂಲದವರು. ಮಾಜಿ ಯುಎಸ್ ಸೆನೆಟರ್ ಮತ್ತು ಕ್ಯಾಲಿಫೋರ್ನಿಯಾದ ಅಟಾರ್ನಿ ಜನರಲ್ ಆಗಿದ್ದವರು. ಅವರು ಪಕ್ಷದಿಂದ ನಾಮನಿರ್ದೇಶಿತರಾದರೆ, ಮುಂದಿನ ನವೆಂಬರ್ 5ರ ಚುನಾವಣೆಯಲ್ಲಿ ಅವರು ಮೇಲುಗೈ ಸಾಧಿಸಿದರೆ ಅಮೆರಿಕದ ಅಧ್ಯಕ್ಷರಾದ ಮೊದಲ ಮಹಿಳೆ ಎಂಬ ಐತಿಹಾಸಿಕ ಖ್ಯಾತಿಗೆ ಪಾತ್ರರಾಗಲಿದ್ದಾರೆ. ಅವರು ಅಮೆರಿಕ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮೊದಲ ಆಫ್ರಿಕನ್ ಅಮೆರಿಕನ್ ಮತ್ತು ಏಷ್ಯನ್ ವ್ಯಕ್ತಿಯಾಗಿದ್ದಾರೆ.

ಮೂರೂವರೆ ವರ್ಷಗಳ ಶ್ವೇತಭವನದ ಅಧಿಕಾರಾವಧಿಯು ಬೈಡನ್‌ಗೆ ಪ್ರಮುಖ ಯಶಸ್ಸನ್ನು ಉಂಟು ಮಾಡಿಲ್ಲ. ಕಳೆದ ವರ್ಷದಂತೆ ಶ್ವೇತಭವನದೊಳಗಿನ ಅನೇಕರು ಮತ್ತು ಬೈಡೆನ್ ಪ್ರಚಾರ ತಂಡದವರು ಖಾಸಗಿಯಾಗಿ ಹ್ಯಾರಿಸ್ ಪರ ಅಭಿಯಾನವನ್ನು ನಡೆಸುತ್ತಿದ್ದಾರೆ ಎನ್ನಲಾಗಿತ್ತು. ಅಂದಿನಿಂದ ಪರಿಸ್ಥಿತಿ ಗಮನಾರ್ಹವಾಗಿ ಬದಲಾಯಿತು. ಹ್ಯಾರಿಸ್ ಅವರು ಗರ್ಭಪಾತದ ಹಕ್ಕುಗಳ ಕುರಿತು ಮಾತನಾಡಿದರು ಮತ್ತು ಯುವ ಮತದಾರರನ್ನು ಮೆಚ್ಚಿಸಲು ಪ್ರಾರಂಭಿಸಿದರು ಎನ್ನುತ್ತಾರೆ ಡೆಮಾಕ್ರಟಿಕ್ ನಾಯಕರು.


ಹ್ಯಾರಿಸ್‌ಗೆ ಒಲವು

ಇತ್ತೀಚಿನ ಕೆಲವು ಸಮೀಕ್ಷೆಗಳು ರಿಪಬ್ಲಿಕನ್ ಅಭ್ಯರ್ಥಿ ಟ್ರಂಪ್ ವಿರುದ್ಧ ಬೈಡನ್‌ಗಿಂತ ಹ್ಯಾರಿಸ್ ಪರವಾಗಿ ಒಲವು ತೋರಿಸಿದೆ. ಆದರೂ ಅವರು ತೀವ್ರ ಸ್ಪರ್ಧೆಯನ್ನು ಎದುರಿಸಬೇಕಾಗುತ್ತದೆ ಎಂದು ಸಮೀಕ್ಷೆ ಹೇಳಿದೆ. ಜುಲೈ 2ರಂದು ಬಿಡುಗಡೆಯಾದ ಸಿಎನ್‌ಎನ್ ಸಮೀಕ್ಷೆಯಲ್ಲಿ ಮತದಾರರು ಬೈಡೆನ್‌ಗಿಂತ ಟ್ರಂಪ್‌ ಮೇಲೆ ಶೇಕಡಾ 49ರಷ್ಟು ಒಲವು ತೋರಿದ್ದಾರೆ. ಟ್ರಂಪ್ ವಿರುದ್ಧ ಹ್ಯಾರಿಸ್ ಶೇ. 47ರಷ್ಟು ಮತದಾರ ಒಲವನ್ನು ಗಳಿಸಿದ್ದಾರೆ. ಸ್ವತಂತ್ರರು ಟ್ರಂಪ್‌ಗಿಂತ ಹ್ಯಾರಿಸ್‌ಗೆ ಶೇ. 43ರಿಂದ 40ರಷ್ಟು ಬೆಂಬಲ ನೀಡಿದ್ದಾರೆ. ಎರಡೂ ಪಕ್ಷಗಳಿಂದ ತಟಸ್ಥ ಆಗಿರುವವರು ಶೇ. 39ರಷ್ಟು ಪ್ರಮಾಣದಲ್ಲಿ ಕಮಲಾ ಹ್ಯಾರಿಸ್‌ಗೆ ಆದ್ಯತೆ ನೀಡಿದ್ದಾರೆ.

ಟ್ರಂಪ್ ಮತ್ತು ಬೈಡನ್ ನಡುವಿನ ಕಳೆದ ವಾರದ ದೂರದರ್ಶನದ ಚರ್ಚೆಯ ಅನಂತರ ರಾಯಿಟರ್ಸ್ ಸುದ್ದಿ ಸಂಸ್ಥೆ ನಡೆಸಿದ ಸಮೀಕ್ಷೆಯು ಹ್ಯಾರಿಸ್ ಮತ್ತು ಟ್ರಂಪ್ ಸ್ಪರ್ಧೆ ಬಹುತೇಕ ಸಮಬಲವಾಗಿದೆ ಎಂದು ಹೇಳಿದೆ. ಹ್ಯಾರಿಸ್ ಶೇ. 42 ಮತ್ತು ಟ್ರಂಪ್ ಶೇ. 43ರಷ್ಟು ಬೆಂಬಲ ಪಡೆಯುತ್ತಾರೆ ಎಂದು ಸಮೀಕ್ಷೆ ಹೇಳಿದೆ. ಬೈಡೆನ್ ಅವರು ಈಗಾಗಲೇ ಟ್ರಂಪ್‌ಗಿಂತ ಹಿಂದೆ ಬಿದ್ದಿದ್ದಾರೆ. ಹೀಗಾಗಿ ಕಮಲಾ ಹ್ಯಾರಿಸ್ ಅವರನ್ನು ಡೆಮೋಕ್ರಾಟ್ ಪಕ್ಷ ಮುನ್ನೆಲೆಗೆ ತರುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: UK Election: ಬ್ರಿಟನ್‌ ಸಂಸತ್ತಿಗೆ 28 ಭಾರತೀಯ ಮೂಲದವರು ಆಯ್ಕೆ; ಈ ಪೈಕಿ 12 ಮಂದಿ ಸಿಖ್‌ ಸಮುದಾಯದವರು

Continue Reading
Advertisement
PM Modi Russia Visit
ವಿದೇಶ3 hours ago

PM Modi Russia Visit: ದೇಶ, ಜನರಿಗಾಗಿ ನಿಮ್ಮ ಜೀವನವೇ ಮುಡಿಪು ಎಂದು ಮೋದಿಯನ್ನು ಹೊಗಳಿದ ಪುಟಿನ್

LKG UKG
ಪ್ರಮುಖ ಸುದ್ದಿ4 hours ago

LKG, UKG: ಎಲ್‌ಕೆಜಿ, ಯುಕೆಜಿ, 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ನಿಗದಿ; ಇಲ್ಲಿದೆ ಹೊಸ ಅಪ್‌ಡೇಟ್

IND vs SL
ಕ್ರೀಡೆ4 hours ago

IND vs SL: ಶ್ರೀಲಂಕಾ ವಿರುದ್ಧದ ಸರಣಿಗೆ ರೋಹಿತ್​-ಕೊಹ್ಲಿಗೆ ವಿಶ್ರಾಂತಿ

Ramniwas Rawat
ದೇಶ5 hours ago

Ramniwas Rawat: 15 ನಿಮಿಷದಲ್ಲಿ 2 ಬಾರಿ ಸಚಿವನಾಗಿ ಬಿಜೆಪಿ ಶಾಸಕ ಪ್ರಮಾಣವಚನ; ಎಲ್ಲಾಯ್ತು ಎಡವಟ್ಟು?

Paris Olympics 2024
ಕ್ರೀಡೆ5 hours ago

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿಂಧು, ಶರತ್ ಕಮಲ್ ಭಾರತದ ಧ್ವಜಧಾರಿ

MLA Satish Sail visited the flood affected areas of Karwar taluk
ಉತ್ತರ ಕನ್ನಡ5 hours ago

Uttara Kannada News: ಕಾರವಾರ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಸತೀಶ ಕೆ. ಸೈಲ್ ಭೇಟಿ

Union Budget 2024
ದೇಶ6 hours ago

Union Budget 2024: ಕೇಂದ್ರ ಬಜೆಟ್;‌ 8ನೇ ವೇತನ ಆಯೋಗ ಸೇರಿ 7 ಬೇಡಿಕೆ ಇಟ್ಟ ಸರ್ಕಾರಿ ನೌಕರರು!

Dengue Cases
ಕರ್ನಾಟಕ6 hours ago

Dengue Cases: ರಾಜ್ಯದಲ್ಲಿ ಸೋಮವಾರ 197 ಡೆಂಗ್ಯೂ ಕೇಸ್‌ಗಳು ಪತ್ತೆ, ಒಬ್ಬರ ಸಾವು

ಕ್ರೀಡೆ6 hours ago

Kuldeep Yadav: ಕುಲ್​ದೀಪ್ ಯಾದವ್​ರನ್ನು​ ಅಭಿನಂದಿಸಿದ ಯೋಗಿ ಆದಿತ್ಯನಾಥ್

Channappa Gowda Mosambi elected as new District President of Akhila bharata Veerashaiva Mahasabha
ಯಾದಗಿರಿ6 hours ago

Yadgiri News: ಅಖಿಲ ಭಾರತ ವೀರಶೈವ ಮಹಾಸಭಾ ನೂತನ ಜಿಲ್ಲಾಧ್ಯಕ್ಷರಾಗಿ ಚನ್ನಪ್ಪಗೌಡ ಮೋಸಂಬಿ ಅವಿರೋಧ ಆಯ್ಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ10 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ12 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ14 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ14 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು16 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ1 day ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌