Sex Toys: ಸೆಕ್ಸ್ ಟಾಯ್ಸ್ ನಿಷೇಧಿಸಿದ ಸರ್ಕಾರವನ್ನೇ ಕೋರ್ಟ್‌ ಕಟಕಟೆಗೆ ಎಳೆದು ತಂದ ಮಹಿಳೆ! - Vistara News

ಪ್ರಮುಖ ಸುದ್ದಿ

Sex Toys: ಸೆಕ್ಸ್ ಟಾಯ್ಸ್ ನಿಷೇಧಿಸಿದ ಸರ್ಕಾರವನ್ನೇ ಕೋರ್ಟ್‌ ಕಟಕಟೆಗೆ ಎಳೆದು ತಂದ ಮಹಿಳೆ!

Sex Toys: ಜಿಂಬಾಬ್ವೆ ಸರ್ಕಾರವು ಕಳೆದ ವರ್ಷದಿಂದ ಸೆಕ್ಸ್ ಟಾಯ್ಸ್ ನಿಷೇಧ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೆ ತರುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರವನ್ನು ಮಹಿಳೆಯೊಬ್ಬರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ.

VISTARANEWS.COM


on

Sitabile Dewa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಜಿಂಬಾಬ್ವೆ ಸರ್ಕಾರವು (Zimbabwe government) ಕಳೆದ ವರ್ಷ ಜಾರಿಗೆ ತಂದ ಸೆಕ್ಸ್ ಟಾಯ್ಸ್ (ಲೈಂಗಿಕ ಆಟಿಕೆಗಳು – Sex Toys) ನಿಷೇಧ ಪ್ರಶ್ನಿಸಿ ಮಹಿಳೆಯೊಬ್ಬರು (Women) ಕೋರ್ಟ್‌ಗೆ (Court) ಮೊರೆ ಹೋಗಿದ್ದು, ಆಕೆಯ ಮನವಿಯನ್ನು ವಿಚಾರಣೆಗೆ ನ್ಯಾಯಾಲಯವು ಒಪ್ಪಿಕೊಂಡಿದೆ. 35 ವರ್ಷದ ಸಿಟಾಬೈಲ್ ದೇವಾ ಅವರು ಜಿಂಬಾಬ್ವೆ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ಈಕೆ ಮದುವೆಯಾಗಿದ್ದಾಗ ಲೈಂಗಿಕ ಜೀವನದ (Sex Life) ಸಮಸ್ಯೆ ಇರಲಿಲ್ಲ. ಆದರೆ, ಡಿವೋರ್ಸ್ ಆದ ಬಳಿಕ ಈ ಬಗ್ಗೆ ಸಮಸ್ಯೆ ಉಂಟಾದಾಗ, ಸೆಕ್ಸ್ ಟಾಯ್ಸ್ ಮೊರೆ ಹೋಗಿದ್ದಳು. ಈಕೆ ಮಹಿಳಾ ಕಾರ್ಯಕರ್ತೆಯೂ ಹೌದು(Viral News).

ಸಂಪ್ರದಾಯ ಸಮಾಜವನ್ನು ಹೊಂದಿರುವ ಜಿಂಬಾಬ್ವೆಯಲ್ಲಿ ಸಾಮಾನ್ಯವಾಗ ವಿಚ್ಛೇದಿತ ಮಹಿಳೆಯರು ಮತ್ತು ಒಂಟಿ ತಾಯಂದಿರನ್ನು ಪುರುಷರಿಗೆ ಅನಪೇಕ್ಷಿತ ಸಂಗಾತಿಗಳೆಂದು ಭಾವಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸಿಟಾಬೈಲ್ ಅವರು ತಮ್ಮ ಲೈಂಗಿಕ ವಾಂಛೆಯನ್ನು ಈಡೇರಿಸಿಕೊಳ್ಳಲು ಸೆಕ್ಸ್ ಟಾಯ್ಸ್ ಮೊರೆ ಹೋಗಿದ್ದರು.

ಜಿಂಬಾಬ್ವೆಯ ಸೆನ್ಸಾರ್‌ಶಿಪ್ ಮತ್ತು ಮನರಂಜನಾ ನಿಯಂತ್ರಣ ಕಾನೂನಿನ ಭಾಗವು ಲೈಂಗಿಕ ಆಟಿಕೆಗಳ ಆಮದು ಅಥವಾ ಮಾರಾಟವನ್ನು ಕಾನೂನುಬಾಹಿರ ಎಂದುಹೇಳುತ್ತದೆ. ಈ ಲೈಂಗಿಕ ಆಟಿಕೆಗಳು ಅಸಭ್ಯ ಅಥವಾ ಅಶ್ಲೀಲ ಮತ್ತು ಸಾರ್ವಜನಿಕ ನೈತಿಕತೆಗೆ ಹಾನಿಕಾರಕವೆಂದು ಜಿಂಬಾಬ್ವೆಯಲ್ಲಿ ಪರಿಗಣಿಸಲಾಗುತ್ತದೆ. ಹಾಗಾಗಿ, ಸೆಕ್ಸ್ ಟಾಯ್ಸ್ ಹೊಂದಿದ್ದವರನ್ನು ಜೈಲಿಗೆ ಹಾಕಲು ಕಾನೂನಿನಲ್ಲಿ ಅವಕಾಶವಿದೆ.

ಕಾನೂನು ಹಳೆಯದ್ದಾಗಿದೆ, ದಮನಕಾರಿಯಾಗದಿದೆ. ಅಲ್ಲದೇ ಮಹಿಳಾ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತದೆ. ಈ ಆಧಾರದ ಮೇಲೆಯೇ ನಾನು ಕಾನೂನಿ ಕೆಲವು ಭಾಗಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತಿದ್ದೇನೆ ಎಂದು ದೇವಾ ಹೇಳಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಜಿಂಬಾಬ್ವೆ ಸರ್ಕಾರದ ವಿರುದ್ಧ ಮೊಕದ್ದಮೆ ಹೂಡಿದ್ದಾರೆ. ಕಾನೂನಿನ ಕೆಲವು ಭಾಗಗಳನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯಕ್ಕೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದ್ದಾರೆ. ಕೋರ್ಟ್, ಈಕೆ ಅರ್ಜಿಯ ವಿಚಾರಣೆಗೆ ಸಮ್ಮತಿಸಿದೆ. ಆದರೆ, ಹಸ್ತುಮೈಥುನ ಮತ್ತು ಮಹಿಳಾ ಲೈಂಗಿಕತೆಯ ಬಗ್ಗೆ ಆಕೆಯ ಬಹಿರಂಗ ಹೋರಾಟವು ಅನೇಕ ಮಂದಿಗೆ ಇರಿಸುಮುರಿಸು ತಂದಿದೆ. ಹಾಗಿದ್ದೂ, ಹಲವು ಮಹಿಳಾ ಕಾರ್ಯಕರ್ತೆಯ ದೇವಾ ಅವರ ಹೋರಾಟವನ್ನು ಬೆಂಬಲಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Viral News : ನಾಯಿ ನೋಡಿಕೊಂಡು ಇರೋದಕ್ಕೆ 1 ಕೋಟಿ ರೂ. ಸಂಬಳ!

ಸೆಕ್ಸ್ ಟಾಯ್ಸ್ ನಿಷೇಧ ಕಾನೂನು ಹಳೆಯದೇ ಆಗಿದ್ದರೂ ಕಳೆದ ವರ್ಷದಿಂದ ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ. ಈ ಕಾನೂನು ಪ್ರಕಾರ, ಕಳೆದ ವರ್ಷ ಇಬ್ಬರ ಮಹಿಳೆಯರಿಗೆ ಶಿಕ್ಷೆಯನ್ನು ವಿಧಿಸಲಾಗಿದೆ. ಈ ಇಬ್ಬರ ಪೈಕಿ ಒಬ್ಬಳು ಸೆಕ್ಸ್ ಟಾಯ್ಸ್ ಮಾರಾಟ ವ್ಯವಾಹಾರವನ್ನು ಆನ್‌ಲೈನ್ ಮೂಲಕ ನಡೆಸುತ್ತಿದ್ದರು. ಆಕೆಯನ್ನು ಬಂಧಿಸಿ ಡೆಟೇನ್ಷನ್ ಸೆಂಟರ್‌ನಲ್ಲಿ ಇಡಲಾಗಿತ್ತು. ಬಳಿಕ ಆಕೆಗೆ 6 ವರ್ಷ ಜೈಲು ಅಥವಾ 640 ವೇತನ ರಹಿತ ಕಮ್ಯೂನಿಟಿ ವರ್ಕ್ ಮಾಡುವ ಶಿಕ್ಷೆಯನ್ನು ವಿಧಿಸಲಾಗಿತ್ತು. ಮತ್ತೊಬ್ಬ ಮಹಿಳೆಗೂ ಜೈಲು ಶಿಕ್ಷೆ ವಿಧಿಸಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ಆರ್​ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ; ಸದ್ಯದ​ ಲೆಕ್ಕಾಚಾರ ಹೇಗಿದೆ?

IPL 2024: ಆರ್​ಸಿಬಿಗೆ ಲೀಗ್‌ ಹಂತದಲ್ಲಿ ಇನ್ನೂ 4 ಪಂದ್ಯಗಳ ಬಾಕಿ ಇದೆ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಜತೆಗೆ ತನಗಿಂತ ಮೇಲಿರುವ ತಂಡಗಳು ಸತತ ಸೋಲು ಕಂಡರೆ ಕನಿಷ್ಠ 4ನೇ ಸ್ಥಾನಿಯಾಗಿ ಪ್ಲೇ ಆಫ್ ಗೇರುವ ಸಣ್ಣ ಅವಕಾಶವೊಂದಿದೆ.

VISTARANEWS.COM


on

IPL 2024
Koo

ಬೆಂಗಳೂರು: ಸತತವಾಗಿ ಸೋಲಿನಿಂದ ಕಂಗೆಟ್ಟು, ಈ ಬಾರಿ(IPL 2024) ಮುಗಿದು ಹೋದ ಅಧ್ಯಾಯ ಎನ್ನುವ ಹಂತಕ್ಕೆ ಬಂದು ನಿಂತಿದ್ದ ಆರ್​ಬಿಸಿ(RCB) ಈಗ ಗೆಲುವಿನ ಹಳಿಗೆ ಮರಳಿದೆ. ಸತತವಾಗಿ 2 ಪಂದ್ಯಗಳನ್ನು, ಒಟ್ಟಾರೆಯಾಗಿ ಮೂರು ಪಂದ್ಯ ಗೆದ್ದು ಮತ್ತೆ ಅಭಿಮಾನಿಗಳಲ್ಲಿ ಆತ್ಮವಿಶ್ವಾಸ ಮೂಡಿಸುವಂತೆ ಮಾಡಿದೆ. ಸದ್ಯ ಅಂಕಪಟ್ಟಿಯಲ್ಲಿ(IPL 2024 Points Table) ಕೊನೆಯ ಸ್ಥಾನಿಯಾಗಿದ್ದರೂ ಕೂಡ ಆರ್​ಸಿಬಿಯ(Royal Challengers Bengaluru) ಪ್ಲೇ ಆಫ್​ ಬಾಗಿಲು ಇನ್ನೂ ಮುಚ್ಚಿಲ್ಲ. ಇನ್ನೂ ಕೂಡ ಆರ್​ಸಿಬಿಯ ಪ್ಲೇ ಆಫ್​ ಆಸೆ ಜೀವಂತವಾಗಿಯೇ ಇದೆ. ತಂಡದ ಪ್ಲೇ ಆಫ್​ ಲೆಕ್ಕಾಚಾರ ಹೇಗಿದೆ ಎಂಬ ಮಾಹಿತಿ ಇಂತಿದೆ.

ಸದ್ಯದ ಪರಿಸ್ಥಿತಿಯಲ್ಲಿ ಆರ್‌ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ಮತ್ತು ಪವಾಡವೊಂದು ನಡೆದರೆ ಆರ್​ಸಿಬಿಗೆ ಪ್ಲೇ ಆಫ್​ ಟಿಕೆಟ್​ ಸಿಗಲಿದೆ. ಈಗಾಗಲೇ 10 ಪಂದ್ಯ ಆಡಿದ್ದು, 3 ಪಂದ್ಯ ಗೆದ್ದು, 7 ಪಂದ್ಯದಲ್ಲಿ ಸೋಲು ಕಂಡಿದೆ. 6 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ, ಲೀಗ್‌ ಹಂತದಲ್ಲಿ ಇನ್ನೂ 4 ಪಂದ್ಯಗಳ ಬಾಕಿ ಇದೆ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಜತೆಗೆ ತನಗಿಂತ ಮೇಲಿರುವ ತಂಡಗಳು ಸತತ ಸೋಲು ಕಂಡರೆ ಕನಿಷ್ಠ 4ನೇ ಸ್ಥಾನಿಯಾಗಿ ಪ್ಲೇ ಆಫ್ ಗೇರುವ ಸಣ್ಣ ಅವಕಾಶವೊಂದಿದೆ. ಉಳಿದ 4 ಪಂದ್ಯಗಳ ಪೈಕಿ 2 ಪಂದ್ಯಗಳನ್ನು ಆರ್​ಸಿಬಿ ತವರಿನಲ್ಲಿ ಆಡಲಿದೆ. ಒಂದು ಪಂದ್ಯ ಹಾಲಿ ಚಾಂಪಿಯನ್​ ಚೆನ್ನೈ ವಿರುದ್ಧ. ಇದು ಆರ್​ಸಿಬಿಗೆ ಕೊನೆಯ ಲೀಗ್​ ಪಂದ್ಯವಾಗಿರಲಿದೆ. ಮೇ 18ರಂದು ಈ ಪಂದ್ಯ ನಡೆಯಲಿದೆ.

ಅದೃಷ್ಟ ಕೂಡ ಬೇಕು


ಆರ್​ಸಿಬಿ ಮುಂದಿನ ಎಲ್ಲ 4 ಪಂದ್ಯಗಳನ್ನು ಗೆದ್ದರೆ 14 ಅಂಕ ಆಗಲಿದೆ. 14 ಅಂಕ ಗಳಿಸಿದರೂ ಪ್ಲೇ ಆಫ್​ ಟಿಕೆಟ್​ಖಚಿತಗೊಳ್ಳುವುದಿಲ್ಲ. 16 ಅಂಕ ಗಳಿಸಿರುವ ರಾಜಸ್ಥಾನ್​ ತಂಡಕ್ಕೆ ಪ್ಲೇ ಆಫ್​ ಸ್ಥಾನ ಬಹುತೇಕ ಖಚಿತಗೊಂಡಂತಿದೆ. ಅದಲ್ಲದೆ ರಾಜಸ್ಥಾನ್​ಗೆ ಇನ್ನೂ ಕೂಡ 5 ಪಂದ್ಯಗಳು ಬಾಕಿ ಇದೆ. ಇದರಲ್ಲಿ 1 ಪಂದ್ಯ ಗೆದ್ದರೂ ಸಾಕು. ಉಳಿದಿರುವ ಮೂರು ಸ್ಥಾನಗಳಿಗೆ 5 ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ಎಲ್ಲ 5 ತಂಡಗಳು ಕೂಡ 10 ಅಂಕ ಗಳಿಸಿವೆ. ರನ್​ ರೇಟ್​ ಆಧಾರದಲ್ಲಿ ಸದ್ಯ ಮೇಲೆ ಕೆಳಗಿನ ಸ್ಥಾನ ಪಡೆದುಕೊಂಡಿದೆ. ಈ 5 ತಂಡಗಳ ಪೈಕಿ ಕನಿಷ್ಠ ಮೂರು ತಂಡಗಳು ಉಳಿದ ಲೀಗ್​ ಪಂದ್ಯಗಳಲ್ಲಿ ಸೋಲು ಕಂಡರೆ, 14 ಅಂಕದ ಗಡಿ ದಾಟಲು ವಿಫಲರಾದರೆ ಆಗ ಆರ್​ಸಿಬಿಗೆ ಪ್ಲೇ ಆಫ್​ ಅವಕಾಶ ಸಿಗಲಿದೆ. ಹೀಗಾಗಿ ಆರ್​ಸಿಬಿಗೆ ಗೆಲುವಿನ ಜತೆ ಅದೃಷ್ಟ ಕೂಡ ಕೈ ಹಿಡಿಯಬೇಕಿದೆ.

ಇದನ್ನೂ ಓದಿ IPL 2024 Points Table: ಚೆನ್ನೈ ಗೆಲುವಿನಿಂದ ಅಂಕಪಟ್ಟಿಯಲ್ಲಿ 3 ತಂಡಗಳಿಗೆ ಭಾರೀ ಹೊಡೆತ

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​85310 (+0.972)
ಚೆನ್ನೈ​​95410 (+0.810)
ಹೈದರಾಬಾದ್​95410 (+0.075)
ಲಕ್ನೋ95410 (+0.059)
ಡೆಲ್ಲಿ105510 (-0.276)
ಗುಜರಾತ್​10468 (-1.113)
ಪಂಜಾಬ್9368 (-0.187)
ಮುಂಬೈ9366 (-0.261)
ಆರ್​ಸಿಬಿ10376 (-0.415)
Continue Reading

ಕ್ರೈಂ

Hassan Pen Drive Case: ಜರ್ಮನಿಯಲ್ಲಿ ಪ್ರಜ್ವಲ್‌ ಎಲ್ಲಿದ್ದಾರೆ? ಪತ್ತೆ ಮಾಡುತ್ತಿದೆ ಎಸ್‌ಐಟಿ!

Hassan Pen Drive Case: ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಏಪ್ರಿಲ್‌ 29) ಸಂಜೆ ವೇಳೆಗೆ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಯಲಿದೆ. ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದ ತನಿಖಾ ತಂಡವನ್ನು ಎಸ್‌ಐಟಿ ಈ ವೇಳೆ ರಚಿಸಿಕೊಳ್ಳಲಿದೆ. ಅಲ್ಲದೆ, ಯಾರು ಯಾರಿಗೆ ಯಾವೆಲ್ಲ ಜವಾಬ್ದಾರಿಯನ್ನು ನೀಡಬೇಕು? ಅವರು ಅದಕ್ಕೆ ಸಂಬಂಧಿಸಿ ಏನೆಲ್ಲ ಸಾಕ್ಷಿಗಳನ್ನು ಸಂಗ್ರಹಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿ ತೀರ್ಮಾನ ಆಗಲಿದೆ.

VISTARANEWS.COM


on

Hassan Pen Drive Case Where is Prajwal in Germany SIT is on lookout
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತನಿಖೆ ಚುರುಕುಗೊಂಡಿದೆ. ವೈರಲ್ ವಿಡಿಯೊಗಳ ಸತ್ಯಾಸತ್ಯತೆ ಪರಿಶೀಲನೆಗೆ ಮುಂದಾಗಲಾಗಿದೆ. ಇನ್ನು ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ ಅಲ್ಲಿ ಎಲ್ಲಿದ್ದಾರೆ ಎಂಬ ಬಗ್ಗೆ ಎಂಬ ಬಗ್ಗೆ ಎಸ್‌ಐಟಿ ಮಾಹಿತಿಯನ್ನು ಕಲೆಹಾಕುತ್ತಿದೆ. ಹೀಗಾಗಿ ಅವಶ್ಯ ಬಿದ್ದರೆ ಪ್ರಜ್ವಲ್‌ ಇರುವಲ್ಲಿಗೆ ಹೋಗಿ ಕರೆತರಲು ಪ್ಲ್ಯಾನ್‌ ಮಾಡಲಾಗುತ್ತಿದೆ ಎನ್ನಲಾಗಿದೆ.

ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ಏಪ್ರಿಲ್‌ 29) ಸಂಜೆ ವೇಳೆಗೆ ಸಿಐಡಿ ಕಚೇರಿಯಲ್ಲಿ ಎಸ್‌ಐಟಿ ಅಧಿಕಾರಿಗಳ ಸಭೆ ನಡೆಯಲಿದೆ. ಪ್ರಕರಣದ ತನಿಖೆಗೆ ಪೂರ್ಣ ಪ್ರಮಾಣದ ತನಿಖಾ ತಂಡವನ್ನು ಎಸ್‌ಐಟಿ ಈ ವೇಳೆ ರಚಿಸಿಕೊಳ್ಳಲಿದೆ. ಅಲ್ಲದೆ, ಯಾರು ಯಾರಿಗೆ ಯಾವೆಲ್ಲ ಜವಾಬ್ದಾರಿಯನ್ನು ನೀಡಬೇಕು? ಅವರು ಅದಕ್ಕೆ ಸಂಬಂಧಿಸಿ ಏನೆಲ್ಲ ಸಾಕ್ಷಿಗಳನ್ನು ಸಂಗ್ರಹಿಸಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಇಲ್ಲಿ ತೀರ್ಮಾನ ಆಗಲಿದೆ.

ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ.ಕೆ. ಸಿಂಗ್ ನೇತೃತ್ವದ ಎಸ್‌ಐಟಿ ತಂಡ ಇದಾಗಿದ್ದು, ಸಿಂಗ್‌ ಅವರು ಈಗಾಗಲೇ ಸಿಐಡಿ ಕಚೇರಿಗೆ ಆಗಮಿಸಿದ್ದಾರೆ. ಟೀಂ ರಚನೆಯಾದ ಬಳಿಕ ತನಿಖೆ ಪ್ರಾರಂಭವಾಗಲಿದ್ದು, ಮತ್ತಷ್ಟು ವೇಗ ಪಡೆದುಕೊಳ್ಳಲಿದೆ.

ಕೆಲವು ತಂಡಗಳ ರಚನೆ

ತನಿಖೆ ನಡೆಸಲು ಕೆಲವು ತಂಡಗಳನ್ನು ರಚನೆ ಮಾಡಲು ಈಗಾಗಲೇ ನಿರ್ಧಾರ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ನೂತನ ತಂಡಗಳು ಇಂದು ಅಥವಾ ನಾಳೆ (ಏಪ್ರಿಲ್‌ 29 – 30) ಹಾಸನಕ್ಕೆ ತೆರಳಲಿವೆ. ಸದ್ಯ ಹೊಳೆನರಸೀಪುರ ನಗರ ಠಾಣೆಯಲ್ಲಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.‌

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಹೊಳೆನರಸೀಪುರ ನಗರ ಠಾಣೆಗೆ ದೂರು ನೀಡಿದ ಎಸ್‌ಐಟಿ ತಂಡವು ಮೊದಲಿಗೆ ಸಂತ್ರಸ್ತೆಯ ಹೇಳಿಕೆಯನ್ನು ಪಡೆದುಕೊಳ್ಳಲಿದ್ದಾರೆ. ಇನ್ನು ಪ್ರಕರಣದ ಬಗ್ಗೆ ರಾಜ್ಯದ ಯಾವುದೇ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾದರೂ ಎಸ್ಐಟಿಗೆ ವರ್ಗಾವಣೆ ಆಗಲಿದೆ, ಹಾಗೆಯೇ ತನಿಖೆ ಭಾಗವಾಗಿ ವೈರಲ್ ವಿಡಿಯೊಗಳ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಲು ಎಸ್‌ಐಟಿ ಮುಂದಾಗಿದ್ದು, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್‌) ಕಳುಹಿಸಲಿದೆ.

Continue Reading

ಕರ್ನಾಟಕ

Hassan Pen Drive Case: ಪ್ರಜ್ವಲ್ ರೇವಣ್ಣ ಉಚ್ಚಾಟನೆ ನಿರ್ಧಾರ ಆಗಿದೆ ಎಂದ ಎಚ್‌ಡಿಕೆ

Hassan Pen Drive Case: ಪ್ರಜ್ವಲ್‌ ರೇವಣ್ಣ ಉಚ್ಚಾಟನೆ ಬಗ್ಗೆ ನೆನ್ನೆ ರಾತ್ರಿಯೇ ತೀರ್ಮಾನ ಆಗಿತ್ತು. ನಾಳೆ ಕೋರ್ ಕಮಿಟಿ ಸಭೆಯಲ್ಲಿ ಉಚ್ಚಾಟನೆ ಬಗ್ಗೆ ಅಂತಿಮ ತೀರ್ಮಾನ ಆಗಲಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

VISTARANEWS.COM


on

Hassan Pen Drive Case
Koo

ಶಿವಮೊಗ್ಗ: ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Hassan Pen Drive Case) ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿಬಂದಿದ್ದರಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಬೇಕು ಎಂದು ಕಾಂಗ್ರೆಸ್‌ ನಾಯಕರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು, ಪ್ರಜ್ವಲ್‌ ಉಚ್ಚಾಟನೆ ಬಗ್ಗೆ ದೇವೇಗೌಡರ ಬಳಿ ಚರ್ಚೆ ಮಾಡಿದ್ದೆ. ನೆನ್ನೆ ರಾತ್ರಿಯೇ ಈ ಬಗ್ಗೆ ತೀರ್ಮಾನ ಆಗಿತ್ತು. ನಾಳೆ ಕೋರ್ ಕಮಿಟಿ ಸಭೆಯಲ್ಲಿ ಉಚ್ಚಾಟನೆ ಬಗ್ಗೆ ಅಂತಿಮ ತೀರ್ಮಾನ ಆಗಲಿದೆ. ಈ ನೆಲದ ಕಾನೂನಿನಲ್ಲಿ ತಪ್ಪು ಆಗಿದ್ರೆ ಶಿಕ್ಷೆ ಆಗಬೇಕು ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಈ ಪ್ರಕರಣದಲ್ಲಿ ದೇವೇಗೌಡರು, ನನ್ನನ್ನು ಯಾಕೆ ತರುತ್ತೀರಿ? ಬಿಜೆಪಿಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಈಗಾಗಲೇ ನಾವು ಬೇರೆ ಆಗಿದ್ದೇವೆ. ನಮ್ಮ ವ್ಯವಹಾರ, ಅವರ ವ್ಯವಹಾರ ಬೇರೆ ಬೇರೆ ನಡೆಯುತ್ತದೆ. ರಾಜ್ಯದ ಹೆಣ್ಣು ಮಕ್ಕಳ ಧ್ವನಿಯಾಗಿ ನಾನು ಧ್ವನಿ ಎತ್ತುತ್ತೇನೆ. ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ತಪ್ಪು ನಡೆದಿದ್ದರೆ ಈ ನೆಲ್ಲದಲ್ಲಿ ಶಿಕ್ಷೆ ಆಗಬೇಕು. ಈ ನಿಟ್ಟಿನಲ್ಲಿ ನನ್ನ ನಿಲುವು ಮುಂದುವರಿದಿದೆ ಎಂದು ಹೇಳಿದರು.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಕಾನೂನು ಉಲ್ಲಂಘನೆ ಆಗಿದ್ದರೆ ಕ್ರಮ ಆಗಲಿ, ಚುನಾವಣೆ ಸಮಯದಲ್ಲಿ ಪೆನ್ ಡ್ರೈ ಹಂಚಿರುವುದು ಕೂಡ ತನಿಖೆ ಯಾಗಬೇಕು. ಯಾರಿಂದ ಹೊರಬಂದಿದೆ, ಯಾರು ಲಕ್ಷಾಂತರ ಪೆನ್ ಡ್ರೈ ಹಂಚಿದವರು ಯಾರು ಅಂತ ತಿಳಿಯಬೇಕು. ಪೆನ್ ಡ್ರೈ ಹಂಚಿದ್ದು ದೊಡ್ಡ ಅಪರಾಧ ಎಂದು ಕಿಡಿಕಾರಿದ್ದಾರೆ.

ಪ್ರಜ್ವಲ್‌, ರೇವಣ್ಣ ಹಾಗೆ ಮಾಡಿಯೇ ಇಲ್ಲ ಎಂದ ದೂರುದಾರೆಯ ಅತ್ತೆ!

Hassan Pen drive case

ಬೆಂಗಳೂರು: ಲೈಂಗಿಕ ದೌರ್ಜನ್ಯ ಎಸಗಿದ್ದಾರೆ (Hassan Pen Drive Case) ಎಂದು ಆರೋಪಿಸಿ ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಮಾಜಿ ಸಚಿವ ಎಚ್‌.ಡಿ.ರೇವಣ್ಣ ವಿರುದ್ಧ ಅವರ ಮನೆ ಕೆಲಸದಾಕೆಯೇ ದೂರು ನೀಡಿದ್ದಾಳೆ. ಇದರಿಂದ ತಂದೆ-ಮಗನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ರೇವಣ್ಣ ಕುಟುಂಬ ತಮ್ಮ ಮೇಲೆ ಯಾವುದೇ ರೀತಿಯ ದೌರ್ಜನ್ಯ ಮಾಡಿಲ್ಲ ಎಂದು ದೂರುದಾರೆಯ ಸಂಬಂಧಿಕರು ಹೇಳಿರುವುದು ಕಂಡುಬಂದಿದೆ.

ಹಾಸನ ಅಶ್ಲೀಲ ವಿಡಿಯೊ ಪ್ರಕರಣದ ಬಗ್ಗೆ ದೂರುದಾರೆಯ ಅತ್ತೆ ಗೌರಮ್ಮ ಸುದ್ದಿಗೋಷ್ಠಿ ನಡೆಸಿದ್ದು, ದೂರುದಾರೆಗೆ ಭವಾನಿ ರೇವಣ್ಣನವರೇ ಸಹಾಯ ಮಾಡಿ ಕೆಲಸ ಕೊಡಿಸಿದ್ದರು. ರೇವಣ್ಣನವರ ಕುಟುಂಬ ನಮ್ಮ ಮೇಲೆ ಯಾವುದೇ ದೌರ್ಜನ್ಯ ಮಾಡಿಲ್ಲ. ದೂರುದಾರೆಯನ್ನು ಕರೆದುಕೊಂಡು ಹೋಗಿ ಇರಿಸಿಕೊಳ್ಳಿ ಎಂದು ನಾವೇ ಭವಾನಿ ಅಮ್ಮನವರಿಗೆ ಹೇಳಿದ್ದೆವು. ಅವರು ಯಾವ ದೌರ್ಜನ್ಯವೂ ಮಾಡಿಲ್ಲ ಎಂದು ತಿಳಿಸಿದ್ದಾರೆ.

ರೇವಣ್ಣ ಅವರ ಮನೆಯಲ್ಲಿ ಮಹಿಳೆಯನ್ನು ನಾಲ್ಕು ವರ್ಷ ಕೆಲಸಕ್ಕೆ ಇರಿಸಿಕೊಂಡಿದ್ದರು ಮತ್ತೆ ನಾನು ಅಲ್ಲಿ ಇರೋದಿಲ್ಲ ಅಂತ ಆಕೆ ಹೇಳಿದ್ದಳು. ಐದು ವರ್ಷದಿಂದ ಸಮಸ್ಯೆ ಇಲ್ಲದೇ, ಈಗ ಯಾಕೆ ದೂರು ಕೊಟ್ಟಳು. ಅವರು ಯಾವುದೇ ದೌರ್ಜನ್ಯವೂ ಮಾಡಿಲ್ಲ. ಯಾರದೋ ಒತ್ತಡದಿಂದ ಮಹಿಳೆ ದೂರು ಕೊಟ್ಟಿದ್ದಾಳೆ. ಭವಾನಿ ರೇವಣ್ಣ ನಮಗೆ ಎಲ್ಲಾ ರೀತಿಯ ಸಹಾಯ ಮಾಡಿದ್ದಾರೆ ಎಂದು ಹೇಳಿದ್ದಾರೆ.

ದೂರುದಾರೆ ಸಾಲ ಮಾಡಿಕೊಂಡಿದ್ದಾಗ, ಭವಾನಿ ರೇವಣ್ಣನವರೇ ಅವರಿಗೆ ಸಹಾಯ ಮಾಡಿ ಕೆಲಸ ಕೊಡಿಸಿದ್ದರು. ಚುನಾವಣೆ ಸಂದರ್ಭದಲ್ಲಿ ರೇವಣ್ಣನವರ ಕುಟುಂಬಕ್ಕೆ ಕೆಟ್ಟ ಹೆಸರು ತರಲು ಈ‌ ರೀತಿ ಮಾಡಿದ್ದಾರೆ. ಹೊಳೆನರಸೀಪುರ ನಗರ ಠಾಣೆಯಲ್ಲಿ ದೂರು ದಾಖಲಾಗಿರುವುದರಲ್ಲಿ ಸತ್ಯವಿಲ್ಲ. ರೇವಣ್ಣನವರ ಮನೆಯಲ್ಲಿ ಯಾರೂ ಕೂಡ ಹಿಂಸೆ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್‌ ಉಚ್ಚಾಟನೆಗೆ ದೇವೇಗೌಡರ ಹಿಂದೇಟು; ದೊಡ್ಡ ಗೌಡರ ಭಯಕ್ಕೆ ಏನು ಕಾರಣ?

ಯಾವುದೋ ಒತ್ತಡಕ್ಕೆ ಸಿಲುಕಿ ದೂರುದಾರೆ ಈ ರೀತಿ ಮಾತನಾಡುತ್ತಿದ್ದಾಳೆ. ಸರಿಯಾದ ಹೆಂಗಸಾಗಿದ್ದರೆ ಐದು ವರ್ಷದ ಹಿಂದೆಯೇ ಪ್ರಶ್ನೆ ಮಾಡಬೇಕಿತ್ತು. ಅಲ್ಲಿಂದ ಇಲ್ಲಿಯವರೆಗೂ ಯಾವುದೇ ವಿಚಾರ ಪ್ರಸ್ತಾಪ ಮಾಡಿಲ್ಲ. ಈಗ ಯಾವುದೋ ದುರುದ್ದೇಶ ಮತ್ತು ಒತ್ತಡದಿಂದ ಈ ರೀತಿ‌ ಮಾಡಿದ್ದಾರೆ. ಅವರ ದೂರಿನಲ್ಲಿ ಯಾವುದೇ ಸತ್ಯವಿಲ್ಲ, ಸರಿಯಾದ ರೀತಿ ತನಿಖೆ ಆಗಬೇಕು. ಪ್ರಕರಣದಿಂದ ನಮ್ಮ ಹಾಗೂ ರೇವಣ್ಣನವರ ಸಂಬಂಧ ಹಾಳಾಗುವ ಹಾಗೆ ಆಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

Continue Reading

ಕರ್ನಾಟಕ

ಪ್ರಜ್ವಲ್‌ ರೇವಣ್ಣ ವಿಡಿಯೊಗಳ ಕುರಿತು ಕೆಲ ತಿಂಗಳ ಮೊದಲೇ ಎಚ್ಚರಿಸಿದ್ದ ಬಿಜೆಪಿ ನಾಯಕ! ಯಾರವರು?

ಹಾಸನ ಜಿಲ್ಲೆಯ ಬಿಜೆಪಿ ಮುಖಂಡ, 2023ರ ವಿಧಾನಸಭೆ ಚುನಾವಣೆಯಲ್ಲಿ ಹೊಳೆನರಸೀಪುರ ಬಿಜೆಪಿ ಅಭ್ಯರ್ಥಿಯಾಗಿದ್ದ ಜಿ. ದೇವರಾಜೇಗೌಡ ಅವರು 2023ರ ಡಿಸೆಂಬರ್‌ 8ರಂದೇ ಬಿಜೆಪಿ ನಾಯಕರಿಗೆ ಪತ್ರ ಬರೆದು, ಪ್ರಜ್ವಲ್‌ ರೇವಣ್ಣ ವಿಡಿಯೊಗಳ ಕುರಿತು ಪ್ರಸ್ತಾಪಿಸಿದ್ದರು. ಇದು ಪಕ್ಷಕ್ಕೆ ಮುಜುಗರ ತರುತ್ತದೆ ಎಂದು ಕೂಡ ಎಚ್ಚರಿಸಿದ್ದರು. ಅದರಂತೆ ಈಗ, ಜೆಡಿಎಸ್‌ ಹಾಗೂ ಬಿಜೆಪಿಯು ಪ್ರಕರಣದಲ್ಲಿ ಮುಜುಗರಕ್ಕೀಡಾಗಿದೆ.

VISTARANEWS.COM


on

Hassan Pen Drive Case
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರು ಲೈಂಗಿಕ ದೌರ್ಜನ್ಯ ಎಸಗಿರುವ, ಅಶ್ಲೀಲ ವಿಡಿಯೊಗಳ ವೈರಲ್‌ ಆಗಿರುವ ಪ್ರಕರಣವು ಕರ್ನಾಟಕ ಮಾತ್ರವಲ್ಲ ದೇಶಾದ್ಯಂತ ಸುದ್ದಿಯಾಗಿದೆ. ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ (Hassan Pen Drive Case) ದಾಖಲಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಪಕ್ಷವಾದ ಬಿಜೆಪಿಗೂ ಇದು ಮುಜುಗರ ಉಂಟು ಮಾಡಿದೆ. ಇದರ ಬೆನ್ನಲ್ಲೇ, ಪ್ರಜ್ವಲ್‌ ರೇವಣ್ಣ ವಿಡಿಯೊಗಳ ಕುರಿತು ಬಿಜೆಪಿ ನಾಯಕರೊಬ್ಬರು ಕೆಲ ತಿಂಗಳ ಹಿಂದೆಯೇ ಎಚ್ಚರಿಸಿದ್ದರು. ಆದರೂ, ಪ್ರಜ್ವಲ್‌ ರೇವಣ್ಣಗೇ ಟಿಕೆಟ್‌ ಸಿಕ್ಕಿತು ಎಂಬ ವಿಷಯವೀಗ ಬಹಿರಂಗವಾಗಿದೆ.

ಹೌದು, ಹಾಸನ ಜಿಲ್ಲೆಯ ಬಿಜೆಪಿ ಮುಖಂಡ, 2023ರ ವಿಧಾನಸಭೆ ಚುನಾವಣೆಯಲ್ಲಿ ಹೊಳೆನರಸೀಪುರ ಬಿಜೆಪಿ ಅಭ್ಯರ್ಥಿಯಾಗಿದ್ದ ಜಿ. ದೇವರಾಜೇಗೌಡ ಅವರು 2023ರ ಡಿಸೆಂಬರ್‌ 8ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದರು. ಪ್ರಜ್ವಲ್‌ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೊಗಳು ಇವೆ. ಅವರಿಗೆ ಟಿಕೆಟ್‌ ನೀಡುವುದು ಒಳ್ಳೆಯದಲ್ಲ ಎಂಬುದಾಗಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದರು. ಅಷ್ಟೇ ಅಲ್ಲ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಅವರಿಗೂ ದೇವರಾಜೇಗೌಡ ಅವರು ಪತ್ರ ಬರೆದಿದ್ದರು. ಇಷ್ಟಾದರೂ, ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್‌ ರೇವಣ್ಣ ಕಣಕ್ಕಿಳಿದರು. ಈಗ ಇದು ಜೆಡಿಎಸ್‌ ಹಾಗೂ ಬಿಜೆಪಿಗೆ ಮುಜುಗರ ಉಂಟುಮಾಡಿದೆ.

Prajwal Revanna Hassan Pen Drive Case What will SIT probe look like

ಪತ್ರದಲ್ಲಿ ಏನಿತ್ತು?

“ಪ್ರಜ್ವಲ್‌ ರೇವಣ್ಣ ಸೇರಿ ಎಚ್‌.ಡಿ.ದೇವೇಗೌಡ ಕುಟುಂಬದ ಹಲವರ ವಿರುದ್ಧ ಹತ್ತಾರು ಆರೋಪಗಳಿವೆ. ಪ್ರಜ್ವಲ್‌ ರೇವಣ್ಣ ಅವರ 2,976 ಅಶ್ಲೀಲ ವಿಡಿಯೊಗಳು ಇರುವ ಪೆನ್‌ಡ್ರೈವ್‌ ನನಗೆ ಸಿಕ್ಕಿದೆ. ಅವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಗಳು, ಅದಕ್ಕೆ ಸಾಕ್ಷ್ಯಗಳು ಇವೆ. ಹಾಗಾಗಿ, ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ಅವರು ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಬಿಜೆಪಿಗೆ ಮುಜುಗರ ಉಂಟಾಗುತ್ತದೆ. ಅವರ ವಿಡಿಯೊಗಳೇ ಮುಂದೆ ನಮ್ಮ ವಿರುದ್ಧ ಬ್ರಹ್ಮಾಸ್ತ್ರವನ್ನಾಗಿ ಬಳಸಲಾಗುತ್ತದೆ. ಹಾಗಾಗಿ, ಟಿಕೆಟ್‌ ಘೋಷಣೆ ಮಾಡುವ ಮುನ್ನ ಯೋಚನೆ ಮಾಡುವುದು ಒಳಿತು” ಎಂಬುದಾಗಿ ಡಿ. ದೇವರಾಜೇಗೌಡ ಪತ್ರದ ಮೂಲಕ ಎಚ್ಚರಿಸಿದ್ದರು ಎಂದು ತಿಳಿದುಬಂದಿದೆ.

ಆರೋಪ ಸಾಬೀತಾದರೆ ಏನು ಶಿಕ್ಷೆ?

ಐಪಿಸಿ ಸೆಕ್ಷನ್ 354A, 354D, 506, 509 ಅಡಿ ಕೇಸ್‌ ದಾಖಲಾಗಿದ್ದು, ಆರೋಪ ಸಾಬೀತಾದರೆ ಏನೆಲ್ಲಾ ಶಿಕ್ಷೆ ಆಗುತ್ತದೆ ಎಂಬ ಚರ್ಚೆಗಳು ನಡೆಯುತ್ತಿವೆ. ಮಹಿಳೆಯ ಜತೆ ಲೈಂಗಿಕ ಸಂಪರ್ಕ ಬೆಳೆಸುವುದು, ಲೈಂಗಿಕ‌ ಅನುಕೂಲಕ್ಕಾಗಿ ಬೇಡಿಕೆ ಇಡುವುದು. ಮಹಿಳೆಗೆ ಇಚ್ಛೆಗೆ ವಿರುದ್ಧವಾಗಿ ಅಶ್ಲೀಲತೆ ತೋರಿಕೆ ಮಾಡಿದವರ ವಿರುದ್ಧ ಐಪಿಸಿ ಸೆಕ್ಷನ್ 354A ಅಡಿ ಸೆಕ್ಷನ್ ದಾಖಲು ಮಾಡಲಾಗುತ್ತದೆ. ಈ ಸೆಕ್ಷನ್ ಅಡಿ ಆರೋಪಿತ ವ್ಯಕ್ತಿಗೆ ಒಂದು ವರ್ಷ ಜೈಲು ಅಥವಾ ದಂಡ ವಿಧಿಸಲಾಗುತ್ತದೆ.

ಐಪಿಸಿ ಸೆಕ್ಷನ್ 354D– ಪದೇ ಪದೇ ಮಹಿಳೆಯರ ಸಂಪರ್ಕ ಬೆಳೆಸಲು ಪ್ರಯತ್ನ, ಇಂಟರ್ನೆಟ್ ಅಥವಾ ಇಮೇಲ್ ಅಥವಾ ವಿಡಿಯೊ ಕಾಲ್ ಸಂವಹನ ಮಾಡಿದರೆ ಈ ಸೆಕ್ಷನ್ ಅಡಿ ಪ್ರಕರಣ ದಾಖಲಾಗುತ್ತದೆ. ಇದಕ್ಕೆ ದಂಡ ಅಥವಾ ಮೂರು ವರ್ಷ ಜೈಲು ವಿಧಿಸುವ ಸಾಧ್ಯತೆ.

ಐಪಿಸಿ ಸೆಕ್ಷನ್ 509: ಮಹಿಳೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಪದ, ಸನ್ನೆ ಅಥವಾ ಕ್ರಿಯೆ.ಈ ಸೆಕ್ಷನ್ ಅಡಿ 3ವರ್ಷ ಸರಳ ಜೈಲು ಅಥವಾ ದಂಡ ವಿಧಿಸುವ ಸಾಧ್ಯತೆ ಇದೆ. ಸದ್ಯ ಈ ಎಲ್ಲಾ ಸೆಕ್ಷನ್‌ಗಳ ಅಡಿ ಸಂಸದ ಪ್ರಜ್ವಲ್‌ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೀಗಾಗಿ ಪ್ರಕರಣದ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಎಲ್ಲಾ ಮಾಹಿತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

Continue Reading
Advertisement
IPL 2024
ಕ್ರೀಡೆ30 mins ago

IPL 2024: ಆರ್​ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ; ಸದ್ಯದ​ ಲೆಕ್ಕಾಚಾರ ಹೇಗಿದೆ?

Hassan Pen Drive Case Where is Prajwal in Germany SIT is on lookout
ಕ್ರೈಂ34 mins ago

Hassan Pen Drive Case: ಜರ್ಮನಿಯಲ್ಲಿ ಪ್ರಜ್ವಲ್‌ ಎಲ್ಲಿದ್ದಾರೆ? ಪತ್ತೆ ಮಾಡುತ್ತಿದೆ ಎಸ್‌ಐಟಿ!

Hassan Pen Drive Case
ಕರ್ನಾಟಕ49 mins ago

Hassan Pen Drive Case: ಪ್ರಜ್ವಲ್ ರೇವಣ್ಣ ಉಚ್ಚಾಟನೆ ನಿರ್ಧಾರ ಆಗಿದೆ ಎಂದ ಎಚ್‌ಡಿಕೆ

Star Saree Fashion
ಫ್ಯಾಷನ್53 mins ago

Star Saree Fashion: ಪಾಸ್ಟೆಲ್‌ ಅರ್ಗಾನ್ಜಾ ಸೀರೆಯಲ್ಲಿ ಮಿಂಚಬೇಕೆ? ನಟಿ ಮೋಕ್ಷಿತಾ ಪೈ ನೀಡಿದ್ದಾರೆ 5 ಸಿಂಪಲ್‌ ಐಡಿಯಾ

Vinay Gowda Got three Film Offer
ಸ್ಯಾಂಡಲ್ ವುಡ್1 hour ago

Vinay Gowda: ಮೂರು ಸಿನಿಮಾಗಳಿಗೆ ಸಹಿ ಮಾಡಿದ ʻಬಿಗ್‌ ಬಾಸ್‌ʼ ಖ್ಯಾತಿಯ ವಿನಯ್‌ ಗೌಡ!

Hassan Pen Drive Case
ಕರ್ನಾಟಕ1 hour ago

ಪ್ರಜ್ವಲ್‌ ರೇವಣ್ಣ ವಿಡಿಯೊಗಳ ಕುರಿತು ಕೆಲ ತಿಂಗಳ ಮೊದಲೇ ಎಚ್ಚರಿಸಿದ್ದ ಬಿಜೆಪಿ ನಾಯಕ! ಯಾರವರು?

Politicians Scandals
Latest1 hour ago

Politicians Scandals : ದೇಶದ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಲೈಂಗಿಕ ಹಗರಣಗಳಿವು!

MS Dhoni
ಕ್ರೀಡೆ1 hour ago

MS Dhoni: ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಆದ ಧೋನಿ ಅಭಿಮಾನಿ

Hassan Pen drive case
ಕರ್ನಾಟಕ2 hours ago

Hassan Pen Drive Case: ಪ್ರಜ್ವಲ್‌ ಪ್ರಕರಣಕ್ಕೆ ಅಚ್ಚರಿಯ ತಿರುವು; ಅವರು ಹಾಗೆ ಮಾಡಿಯೇ ಇಲ್ಲ ಎಂದ ದೂರುದಾರೆಯ ಅತ್ತೆ!

Actor Dharmendra not spending enough time with parents
ಸಿನಿಮಾ2 hours ago

Actor Dharmendra: ಪೋಷಕರ ಜತೆ ಸಾಕಷ್ಟು ಸಮಯ ಕಳೆಯಲೇ ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ರಾ ನಟ ಧರ್ಮೇಂದ್ರ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20245 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ13 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌