ವಾಷಿಂಗ್ಟನ್: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್ (Sunita Williams) ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಆದರೆ, ಸುನೀತಾ ವಿಲಿಯಮ್ಸ್ ಹಾಗೂ ಮತ್ತೊಬ್ಬ ಗಗನಯಾತ್ರಿ ಬುಚ್ ವಿಲ್ಮೋರ್ (Butch Wilmore) ಅವರು ಬಾಹ್ಯಾಕಾಶದಲ್ಲಿಯೇ ಸಿಲುಕಿದ್ದು, ಇವರು 2025ರ ಫೆಬ್ರವರಿಯಲ್ಲಿ ವಾಪಸಾಗಲಿದ್ದಾರೆ ಎಂದು ಅಮೆರಿಕ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ (NASA) ತಿಳಿಸಿದೆ.
ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನವನ್ನು ಜೂನ್ 5ರಂದು ಆರಂಭಿಸಿದ್ದರು. ಜೂನ್ 6ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ಸ್ಟೇಷನ್ ತಲುಪಿದ್ದ ಅವರು ಒಂದು ವಾರ ಸಂಶೋಧನೆ ನಡೆಸಿ ವಾಪಸಾಗಬೇಕಿತ್ತು. ಆದರೆ, ತಾಂತ್ರಿಕ ಕಾರಣದಿಂದ ಅವರು ಅಲ್ಲಿಯೇ ಸಿಲುಕಿದ್ದಾರೆ. ಇವರು ಯಾವಾಗ ಬರುತ್ತಾರೆ ಎಂಬುದರ ಕುರಿತು ನಾಸಾ ಈಗ ಮಾಹಿತಿ ನೀಡಿದೆ.
#BREAKING : NASA Astronauts Sunita Williams and Butch Wilmore, currently aboard the International Space Station (ISS), might return to Earth on SpaceX's Crew Dragon in February 2025 instead of Boeing's Starliner.#NASA #SunitaWilliams #ButchWilmore #Starliner #Boeing… pic.twitter.com/yLEAYKnzX4
— upuknews (@upuknews1) August 8, 2024
“ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿರುವ ಸುನೀತಾ ವಿಲಿಯಮ್ಸ್ ಅವರು 2025ರ ಫೆಬ್ರವರಿಯಲ್ಲಿ ವಾಪಸಾಗಲಿದ್ದಾರೆ. ಇವರು ಬೋಯಿಂಗ್ ಸ್ಟಾರ್‌ಲೈನರ್ ಬದಲು ಸ್ಪೇಸ್‌ಎಕ್ಸ್‌ನ ಕ್ರ್ಯೂ ಡ್ರ್ಯಾಗನ್‌ನಲ್ಲಿ ವಾಪಸಾಗಲಿದ್ದಾರೆ. ಸ್ಟಾರ್‌ಲೈನರ್‌ನಲ್ಲಿ ಹಲವು ತಾಂತ್ರಿಕ ದೋಷಗಳು ಉಂಟಾಗಿರುವ ಕಾರಣ ಕ್ರ್ಯೂ ಡ್ರ್ಯಾಗನ್‌ನಲ್ಲಿ ಕರೆದುಕೊಂಡು ಬರಲು ತೀರ್ಮಾನಿಸಲಾಗಿದೆ” ಎಂಬುದಾಗಿ ನಾಸಾ ತಿಳಿಸಿದೆ.
ಸುನೀತಾ ವಿಲಿಯಮ್ಸ್ ಹಿನ್ನೆಲೆ
ಭಾರತದ ಮೂಲದ ಡಾ. ದೀಪಕ್ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.
ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು. ʼʼಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆʼʼ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದರು.
ಇದನ್ನೂ ಓದಿ: 2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್; ಕೇಂದ್ರ ಸಚಿವ ಮಹತ್ವದ ಘೋಷಣೆ