ನೀರು ಕುಡಿದ ನಂತರ ಟ್ಯಾಪ್‌ ಆಫ್‌ ಮಾಡುವ ನಾಯಿ! - Vistara News

ವಿದೇಶ

ನೀರು ಕುಡಿದ ನಂತರ ಟ್ಯಾಪ್‌ ಆಫ್‌ ಮಾಡುವ ನಾಯಿ!

ನಾಯಿಯೊಂದು ನೀರು ಕುಡಿದು ಆನಂತರ ಟ್ಯಾಪ್ ಆಫ್ ಮಾಡುವ ವಿಡಿಯೊವನ್ನು ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು ಟ್ವಿಟರ್‌ನಲ್ಲಿ ಶೇರ್‌ ಮಾಡಿದ್ದಾರೆ.

VISTARANEWS.COM


on

ನೀರಡಿಕೆ ತಣಿದ ಮೇಲೆ ಟ್ಯಾಫ್ ಆಫ್‌ ಮಾಡುತ್ತಿರುವ ನಾಯಿಯ ವಿಡಿಯೊ ವೈರಲ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಸೋಶಿಯಲ್‌ ಮೀಡಿಯಾದಲ್ಲಿ ಪ್ರಾಣಿಗಳಿಗೆ ಸಂಬಂಧಿಸಿದ ಮುದ್ದಾದ ವಿಡಿಯೊಗಳು ಹೆಚ್ಚು ಹೆಚ್ಚು ವೈರಲ್‌ ಆಗುತ್ತಲೇ ಇರುತ್ತವೆ. ಇವುಗಳಲ್ಲಿನ ಬಹಳಷ್ಟು ವಿಡಿಯೊಗಳು ಮನರಂಜನೆಗೆ ಮಾತ್ರ ಸೀಮಿತವಲ್ಲ, ವಿಶೇಷ ಸಂದೇಶಗಳನ್ನೂ ನೀಡುತ್ತವೆ. ಟ್ಯಾಪ್‌ನಿಂದ ನೀರು ಕುಡಿಯಲು ಪ್ರಯತ್ನಿಸುತ್ತಿರುವ ನಾಯಿಯ ವಿಡಿಯೊವೊಂದು ಈಗ ವೈರಲ್ ಆಗಿದೆ. ಈ ವಿಡಿಯೊ ನೋಡಿದಾಗ ನೀವು ನಗಬಹುದು. ಆದರೆ, ನೀರನ್ನು ಮಿತವಾಗಿ ಬಳಸಿ ಎಂಬ ಸಂದೇಶವನ್ನು ಈ ನಾಯಿಯಿಂದ ನಾವು ಕಲಿಯಬಹುದು.

ಈ ವಿಡಿಯೊವನ್ನು ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ನಾಯಿಯೊಂದು ನೀರು ಕುಡಿಯಲು ತನ್ನ ಪಂಜದಿಂದ ಟ್ಯಾಪ್ ತೆರೆಯುವುದನ್ನು ತೋರಿಸುತ್ತದೆ. ತನ್ನ ಬಾಯಾರಿಕೆ ತಣಿದ ನಂತರ ಅದು ನಳದ ಟ್ಯಾಪ್ ಅನ್ನು ಚುರುಕಾಗಿ ಆಫ್ ಮಾಡುತ್ತದೆ!

“ಪ್ರತಿ ಹನಿಯೂ ಎಷ್ಟು ಅಮೂಲ್ಯ ಎಂಬುದು ನಾಯಿಗೂ ಅರ್ಥವಾಯಿತು. ಇನ್ನು ಮನುಷ್ಯರಾದ ನಮಗೆ ಯಾವಾಗ ಅರ್ಥವಾಗುತ್ತದೆ?” ಎಂಬ ಶೀರ್ಷಿಕೆ ನೆಟ್ಟಿಗರನ್ನು ಸಖತ್‌ ನಾಟುತ್ತದೆ.

ನಾಯಿಯ ವಿಡಿಯೊ

ಈ ವಿಡಿಯೊ ನೋಡಿ ನೂರಾರು ಮಂದಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಮಕ್ಕಳ ಕಥೆ: ನಾಯಿಗಳಿಗೆ ನಮ್ಮೊಂದಿಗೆ ಸ್ನೇಹವೇಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Sunita Williams: ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ; ಮೇ 17ಕ್ಕೆ ಮುಂದೂಡಿಕೆ

Sunita Williams:ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಕಾರ್ಯಾಚರಣೆಯಲ್ಲಿ ಗಗನಯಾನ ಕೈಗೊಳ್ಳಲು ಸಿದ್ಧತೆ ನಡೆಸಿದ್ದರು. ಆದರೆ ಉದ್ದೇಶಿತ ಉಡಾವಣೆಯ ಎರಡು ಗಂಟೆಗಳ ಮೊದಲು ರದ್ದು ಪಡಿಸಲಾಯಿತು

VISTARANEWS.COM


on

Sunita Williams
Koo

ವಾಷಿಂಗ್ಟನ್‌: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ. ಮೇ 7ರಂದು ಬಾಹ್ಯಾಕಾಶ ನೌಕೆ (Spacecraft)ಯ ಉಡಾವಣೆಯನ್ನು ತಾಂತ್ರಿಕ ಕಾರಣಗಳಿಂದ ರದ್ದುಗೊಂಡಿತ್ತು. ಬಳಿಕ ಈ ಗಗನಯಾತ್ರೆಯ ದಿನಾಂಕ ನಾಳೆಗೆ(ಮೇ10) ನಿಗದಿ ಪಡಿಸಲಾಗಿತ್ತು. ಆದರೆ ಇದೀಗ ಮತ್ತೆ ಸುನೀತಾ ವಿಲಿಯಮ್ಸ್‌ ಅವರನ್ನೊಳಗೊಂಡ ಬಾಹ್ಯಾಕಾಶ ನೌಕೆ (Spacecraft)ಯ ಉಡಾವಣೆಯನ್ನು ದಿನಾಂಕವನ್ನು ಮೇ 17ಕ್ಕೆ ಮುಂದೂಡಲಾಗಿದೆ.

ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಕಾರ್ಯಾಚರಣೆಯಲ್ಲಿ ಗಗನಯಾನ ಕೈಗೊಳ್ಳಲು ಸಿದ್ಧತೆ ನಡೆಸಿದ್ದರು. ಆದರೆ ಉದ್ದೇಶಿತ ಉಡಾವಣೆಯ ಎರಡು ಗಂಟೆಗಳ ಮೊದಲು ರದ್ದು ಪಡಿಸಲಾಯಿತು. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಾಸಾ ಮಾಹಿತಿ ನೀಡಿದ್ದು, “ಅಟ್ಲಾಸ್ ವಿಯಲ್ಲಿನ ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಇಂದಿನ ಸ್ಟಾರ್‌ಲೈನರ್ ಉಡಾವಣೆಯನ್ನು ರದ್ದುಪಡಿಸಲಾಗಿದೆ. ನಮ್ಮ ಗಗನಯಾತ್ರಿಗಳು ಸ್ಟಾರ್‌ಲೈನರ್‌ನಿಂದ ನಿರ್ಗಮಿಸಿದ್ದಾರೆʼʼ ಎಂದು ಬರೆದುಕೊಂಡಿತ್ತು.

ವಿಶೇಷ ಎಂದರೆ ಈ ಮೂಲಕ ಸುನೀತಾ ವಿಲಿಯಮ್ಸ್‌ ಮೂರನೇ ಬಾರಿ ಗಗನಯಾತ್ರೆ ಕೈಗೊಳ್ಳಲು ಸಜ್ಜಾಗಿದ್ದರು. ಇಬ್ಬರು ಗಗನಯಾತ್ರಿಗಳೊಂದಿಗೆ ಬೋಯಿಂಗ್ ಸ್ಟಾರ್‌ಲೈನರ್ ಅನ್ನು ಮೇ 10ರಂದು ಉಡಾವಣೆ ಮಾಡಲು ಪ್ರಯತ್ನಿಸಲಾಗುವುದು ಎಂದು ನಾಸಾ ತಿಳಿಸಿತ್ತು. ಆದರೆ ಇನ್ನು ಒಂದೆರಡು ದಿನಗಳ ಕಾಲಾವಕಾಶ ಬೇಕಾಗಿರುವ ಹಿನ್ನೆಲೆಯಲ್ಲಿ ದಿನಾಂಕವವನ್ನು ಏ.17ಕ್ಕೆ ಮುಂದೂಡಲಾಗಿದೆ. ಏಪ್ರಿಲ್‌ 17ರಂದು ಸಂಜೆ 6.16ಕ್ಕೆ ಬಾಹ್ಯಾಕಾಶ ನೌಕೆ ಉಡಾವಣೆಯಾಗಲಿದೆ ಎಂದು ಇದೀಗ ನಾಸಾ ಮತ್ತೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದೆ.

ಸುನೀತಾ ವಿಲಿಯಮ್ಸ್‌ ಹಿನ್ನೆಲೆ

ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.

ಇದನ್ನೂ ಓದಿ:Sangeeth Sivan dies: ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು. ʼʼಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆʼʼ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದರು.

ʼʼಯಾವುದೇ ಕೆಲಸಕ್ಕೂ ಮೊದಲು ಗಣೇಶನ ಪ್ರಾರ್ಥಿಸುತ್ತೇನೆ. ಸಿದ್ಧಿ ವಿನಾಯಕ ನನ್ನ ಶುಭ ಸಂಕೇತʼʼ ಎಂದು ಅವರು ಈ ಹಿಂದೆ ಹೇಳಿದ್ದರು. ʼʼಬಾಹ್ಯಾಕಾಶ ಪ್ರಯಾಣ ಸೇರಿದಂತೆ ಯಾವುದೇ ಕೆಲಸಕ್ಕೂ ಗಣೇಶನ ಆಶೀರ್ವಾದ ನನಗೆ ಬೇಕು. ಗಣೇಶ ನನ್ನ ಎಲ್ಲ ಕಾರ್ಯಗಳಿಗೆ ಶಕ್ತಿಯಾಗಿದ್ದಾನೆ. ಪ್ರತಿ ಬಾರಿ ನಾನು ಬಾಹ್ಯಾಕಾಶ ಪ್ರಯಾಣದಲ್ಲೂ ಸಣ್ಣ ಗಣೇಶನ ವಿಗ್ರಹವನ್ನು ತೆಗೆದುಕೊಂಡು ಹೋಗುತ್ತೇನೆʼʼ ಎಂದು ಸುನೀತಾ ವಿಲಿಯಮ್ಸ್ ತಿಳಿಸಿದ್ದರು. ಈ ಹಿಂದೆ ಅವರು ಬಾಹ್ಯಾಕಾಶಕ್ಕೆ ಭಗವದ್ಗೀತೆ ಒಯ್ಯುವ ಮೂಲಕ ಭಾರತೀಯರ ಗಮನ ಸೆಳೆದಿದ್ದರು.

Continue Reading

ವಿದೇಶ

Cancer-Causing Chemicals: ಕಾರು ಪ್ರಿಯರೇ ಎಚ್ಚರ …ಎಚ್ಚರ..‌ ಕಾರಿನಲ್ಲಿ ಉತ್ಪತ್ತಿ ಆಗ್ತಿದೆ ಕ್ಯಾನ್ಸರ್‌ ಕಾರಕ ಕೆಮಿಕಲ್

Cancer-Causing Chemicals:ಕಾರಿನಲ್ಲಿ ಉತ್ಪತ್ತಿಯಾಗಿರುವ ರಾಸಾಯನಿಕವೊಂದನ್ನು ಶ್ವಾಸಿಸುವುದರಿಂದ ಜನ ಕ್ಯಾನ್ಸರ್‌ಗೆ ತುತ್ತಾಗುತ್ತಾರೆ ಎಂಬ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ಅಮೆರಿಕಾದ ಪರಿಸರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಶೋಧಕರು( ಈ ಅಧ್ಯಯನ ನಡೆಸಿ ವರದಿ, ನೀಡಿದ್ದು, ಕಾರಿನೊಳಗೆ ಹೊರಬರುವ ಅಪಾಯಕಾರಿ ರಾಸಾಯನಿಕವನ್ನುಉಸಿರಾಡುವುದರಿಂದ ಜನ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

VISTARANEWS.COM


on

Cancer Causing Chemicals
Koo

ವಾಷಿಂಗ್ಟನ್‌: ಕಾರಿನಲ್ಲಿ ಲಾಂಗ್‌ ಡ್ರೈವ್‌ ಹೋಗೋದು ಬಹುತೇಕ ಎಲ್ಲರೂ ಇಷ್ಟ ಪಡುತ್ತಾರೆ. ತಣ್ಣನೇ ಎ ಸಿ ಹಾಕೊಂಡು ಕಿಲೋಮೀಟರ್‌ಗಟ್ಟಲೇ ಕಾರು ಚಲಾಯಿಸೋದೇ ಒಂದು ಕ್ರೇಜ್‌. ಕಾರು(Car) ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಕಾರು ಪ್ರಿಯರಿಗೊಂದು ಶಾಕಿಂಗ್‌ ವಿಚಾರವೊಂದು ಪತ್ತೆಯಾಗಿದೆ. ಕಾರಿನಲ್ಲಿ ಉತ್ಪತ್ತಿಯಾಗಿರುವ ರಾಸಾಯನಿಕವೊಂದನ್ನು ಶ್ವಾಸಿಸುವುದರಿಂದ ಜನ ಕ್ಯಾನ್ಸರ್‌ಗೆ(Cancer) ತುತ್ತಾಗುತ್ತಾರೆ ಎಂಬ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ಅಮೆರಿಕಾದ ಪರಿಸರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಶೋಧಕರು(Environmental Science & Technology) ಈ ಅಧ್ಯಯನ ನಡೆಸಿ ವರದಿ, ನೀಡಿದ್ದು, ಕಾರಿನೊಳಗೆ ಹೊರಬರುವ ಅಪಾಯಕಾರಿ ರಾಸಾಯನಿಕವನ್ನು(Cancer-Causing Chemicals) ಉಸಿರಾಡುವುದರಿಂದ ಜನ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಮೆರಿಕ ರಾಷ್ಟ್ರೀಯ ಟಾಕ್ಸೋಲಾಜಿ ಕಾರ್ಯಕ್ರಮದಡಿಯಲ್ಲಿ ಸಂಶೋಧಕರು ಈ ಅಧ್ಯಯನ ನಡೆಸಿದ್ದು, ಅದಕ್ಕಾಗಿ ಅವರು 2015 ಮತ್ತು 2019ರನಡುವೆ ತಯಾರಾಗಿರುವ 101 ಎಲ್ಲಾ ರೀತಿಯ ಅಂದರೆ ಎಲೆಕ್ಟ್ರಿಕ್‌, ಗ್ಯಾಸ್‌ ಮತ್ತು ಹೈಬ್ರಿಡ್‌ ಕಾರಗಳನ್ನು ಮಾದರಿಗಳನ್ನಾಗಿ ತೆಗೆದುಕೊಂಡಿದ್ದಾರೆ. ಈ ಕಾರುಗಳು ಶೇ.99ರಷ್ಟು ಕಾರುಗಳು TCIPP ಎಂಬ ಜ್ವಾಲೆ ನಿವಾರಕ ಸಾಧನವನ್ನು ಹೊಂದಿದೆ. ಇವುಗಳು ನೇರವಾಗಿ ಮನುಷ್ಯನ ನರಗಳು, ಸಂತಾನೋತ್ಪತ್ತಿ ಶಕ್ತಿ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಈ ಕಾರುಗಳಲ್ಲಿ ಪ್ರತಿನಿತ್ಯ ಒಂದು ಗಂಟೆಗಳ ಕಾಲ ಕಳೆದರೆ ಜನ ನಿಧಾನವಾಗಿ ಆರೋಗ್ಯ ಸಮಸ್ಯೆಗೆ ತುತ್ತಾಗುತ್ತಾರೆ ಎಂದು ಸಂಶೋಧಕರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಡ್ಯೂಕ್‌ ವಿಶ್ವವಿದ್ಯಾನಿಲಯದ ಪ್ರಮುಖ ಸಂಶೋಧಕರಾದ ರೆಬೆಕ್ಕಾ ಹೋಹೆನ್‌ ಮಾತನಾಡಿದ್ದು, ಪ್ರತಿನಿತ್ಯ ಕಾರಿನಲ್ಲೇ ಬಹುದೂರ ಪ್ರಯಾಣಿಸುವವರು ಮತ್ತು ಮಕ್ಕಳಲ್ಲಿ ಈ ಸಮಸ್ಯೆ ಅತಿ ಹೆಚ್ಚಾಗಿ ಕಂಡುಬರುತ್ತಿದೆ. ಬೇಸಿಗೆ ಕಾಲದಲ್ಲಿ ಕಾರಿನ ಸೀಟುಗಳಿಂದ ಈ ರಾಸಾಯನಿಕಗಳು ಅತಿ ಹೆಚ್ಚಾಗಿ ಹೊರಬರುತ್ತವೆ. ಇದು ಕ್ಯಾನ್ಸರ್‌ಗೆ ತುತ್ತು ಮಾಡುವಂತೆ ಅಪಾಯಕಾರಿ ರಾಸಾಯನಿಕಗಳಾಗಿವೆ. ಕಾರು ತಯಾರಕರು ಸೀಟಿನ ಒಳಗೆ ತುಂಬಿಸುವ ವಸ್ತುಗಳಿಗೆ(seat foam) ಮತ್ತು ಕಾರಿನ ಒಳಗಿರುವ ಇತರೇ ವಸ್ತುಗಳಿಗೆ ಬಹುಕಾಲ ಬಾಳಿಕೆ ಬರುವಂತೆ ಮಾಡುವ ಉದ್ದೇಶದಿಂದ ರಾಸಾಯನಿಕಗಳನ್ನು ಸೇರಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Gurpatwant Singh Pannun: ಪನ್ನುನ್‌ ಹತ್ಯೆ ಸಂಚಿನಲ್ಲಿ ಭಾರತದ ಕೈವಾಡ; ಅಮೆರಿಕ ಆರೋಪಕ್ಕೆ ರಷ್ಯಾ ಟಾಂಗ್‌

ಇನ್ನು ಈ ಬಗ್ಗೆ ಆರೋಗ್ಯ ಸುರಕ್ಷತೆ ಮತ್ತು ಔಷಧಿ ವಿಭಾಗದ ನಿರ್ದೇಶಕ ಪ್ಯಾಟ್ರಿಕ್‌ ಮಾರಿಸನ್‌ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಕಾರಿನಲ್ಲಿ ಬಳಸುವ ಫಯರ್‌ ಫ್ಲೇಮ್‌ ನಿಯಂತ್ರಕ ರಾಸಾಯನಿಕಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಮುನುಷ್ಯನನ್ನು ಕ್ಯಾನ್ಸರ್‌ಗೆ ದೂಡುತ್ತಿವೆ. ಈ ರಾಸಾಯನಿಕಗಳು ಬೆಂಕಿಯನ್ನು ಜ್ವಾಲೆಯನ್ನು ನಂದಿಸುವ ಬದಲು ಒಳಗಿದ್ದ ವ್ಯಕ್ತಿಗೆ ಉಸಿರು ಕಟ್ಟುವಂತೆ ಮಾಡುತ್ತದೆ. ಹೀಗಾಗಿ ಅಮೆರಿಕ ರಸ್ತೆ ಸುರಕ್ಷತಾ ಪ್ರಾಧಿಕಾರ ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಹೇಳಿದ್ದಾರೆ.


Continue Reading

ವಿದೇಶ

Gurpatwant Singh Pannun: ಪನ್ನುನ್‌ ಹತ್ಯೆ ಸಂಚಿನಲ್ಲಿ ಭಾರತದ ಕೈವಾಡ; ಅಮೆರಿಕ ಆರೋಪಕ್ಕೆ ರಷ್ಯಾ ಟಾಂಗ್‌

Gurpatwant Singh Pannun: ಭಾರತದಲ್ಲಿ ಆಂತರಿಕ ರಾಜಕೀಯ ಸ್ಥಿತಿಗತಿಯನ್ನು ಅಲ್ಲೋಲ ಕಲ್ಲೋಲ ಮಾಡಲು ಅಮೆರಿಕ ಯತ್ನಿಸುತ್ತಿದೆ. ಭಾರತೀಯ ರಾಷ್ಟ್ರೀಯತೆ ಮನಸ್ಥಿತಿ ಮತ್ತು ಇತಿಹಾಸವನ್ನು ಅರ್ಥಮಾಡಿಕೊಳ್ಳದ ಅಮೆರಿಕ ಸುಖಾ ಸುಮ್ಮನೆ ಭಾರತದ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಆರೋಪ ಮಾಡುತ್ತಿದೆ. ಭಾರತದ ಆಂತರಿಕ ವಿಚಾರದಲ್ಲಿ ಅಮೆರಿಕ ನಿರಂತರವಾಗಿ ಮೂಗು ತೂರಿಸುವ ಪ್ರಯತ್ನ ನಡೆಸುತ್ತಲೇ ಇದೆ ಎಂದು ರಷ್ಯಾ ಹೇಳಿದೆ.

VISTARANEWS.COM


on

Gurpatwant Singh Pannun
Koo

ಮಾಸ್ಕೋ: ಅಮೆರಿಕದಲ್ಲಿ ಖಲಿಸ್ತಾನಿ ನಾಯಕ (Khalistan Leader) ಗುರುಪತ್‌ವಂತ್ ಸಿಂಗ್ ಪನ್ನುನ್ (Gurpatwant Singh Pannun) ಹತ್ಯೆಯ ಸಂಚಿನಲ್ಲಿ (Murder plot) ಭಾರತದ ʼರಾʼ (RAW) ಅಧಿಕಾರಿಯ ಕೈವಾಡದ ಕುರಿತು ವಾಷಿಂಗ್ಟನ್ ಪೋಸ್ಟ್ (Washington Post) ಮಾಡಿದ ವರದಿಯನ್ನು ರಷ್ಯಾ ತಿರಸ್ಕರಿಸಿದೆ. ಅಮೆರಿಕ ತನ್ನ ಆರೋಪಕ್ಕೆ ಪೂರಕವಾದ ಸಾಕ್ಷ್ಯಾಧಾರ ನೀಡಿಲ್ಲ. ಹೀಗಾಗಿ ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಭಾರತದ ಪರ ರಷ್ಯಾ ಧ್ವನಿ ಎತ್ತಿದೆ.

ಈ ಕುರಿತು ಮರಿಯಾ ಜಾಖರೋವಾ ಪ್ರತಿಕ್ರಿಯಿಸಿದ್ದು, ಭಾರತದಲ್ಲಿ ಆಂತರಿಕ ರಾಜಕೀಯ ಸ್ಥಿತಿಗತಿಯನ್ನು ಅಲ್ಲೋಲ ಕಲ್ಲೋಲ ಮಾಡಲು ಅಮೆರಿಕ ಯತ್ನಿಸುತ್ತಿದೆ. ಭಾರತೀಯ ರಾಷ್ಟ್ರೀಯತೆ ಮನಸ್ಥಿತಿ ಮತ್ತು ಇತಿಹಾಸವನ್ನು ಅರ್ಥಮಾಡಿಕೊಳ್ಳದ ಅಮೆರಿಕ ಸುಖಾ ಸುಮ್ಮನೆ ಭಾರತದ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಆರೋಪ ಮಾಡುತ್ತಿದೆ. ಭಾರತದ ಆಂತರಿಕ ವಿಚಾರದಲ್ಲಿ ಅಮೆರಿಕ ನಿರಂತರವಾಗಿ ಮೂಗು ತೂರಿಸುವ ಪ್ರಯತ್ನ ನಡೆಸುತ್ತಲೇ ಇದೆ. ಭಾರತವನ್ನು ಗೌರವಿಸುವ ಮನಸ್ಸು ಅಮೆರಿಕಕ್ಕೆ ಇಲ್ಲ. ಅಮೆರಿಕದ ಆರೋಪಗಳು ಸುಳ್ಳು ಮತ್ತು ನಿರಾಧಾರವಾಗಿದ್ದು, ಅದನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಖಡಕ್ಕಾಗಿ ಹೇಳಿದೆ.

ವಿಕ್ರಮ್ ಯಾದವ್ ಎಂದು ಗುರುತಿಸಲಾದ ರಾ ಅಧಿಕಾರಿಯು ಯುಎಸ್‌ನಲ್ಲಿ ಗುರುಪತ್‌ವಂತ್ ಸಿಂಗ್ ಪನ್ನುನ್ ಹತ್ಯೆಯ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್‌ನ “ತನಿಖಾ” ವರದಿ ಮಾಡಿತ್ತು. ಈ ಬಳಿಕ MEA ಹೇಳಿಕೆ ಬಂದಿದೆ. ಆ ಸಂದರ್ಭದಲ್ಲಿ ಬೇಹುಗಾರಿಕಾ ಸಂಸ್ಥೆಯ ಮುಖ್ಯಸ್ಥ ಸಮಂತ್ ಗೋಯೆಲ್ ಆಗಿದ್ದರು ಎಂದು ವರದಿ ತಿಳಿಸಿದೆ. ಖಲಿಸ್ತಾನ್ ಚಳವಳಿಯ ಪ್ರಮುಖ ಉಗ್ರರಲ್ಲಿ ಒಬ್ಬನಾದ ಗುರುಪತ್ವಂತ್ ಸಿಂಗ್ ಪನ್ನುನ್, ಸಿಖ್ಸ್ ಫಾರ್ ಜಸ್ಟಿಸ್‌ನ ಕಾನೂನು ಸಲಹೆಗಾರ ಮತ್ತು ವಕ್ತಾರನಾಗಿದ್ದಾನೆ. ಇದು ಪ್ರತ್ಯೇಕ ಸಿಖ್ ದೇಶದ ಕಲ್ಪನೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಭಾರತ ಸರ್ಕಾರ ಗುರುಪತ್ವಂತ್ ಸಿಂಗ್ ಪನ್ನೂನ್‌ನನ್ನು ಭಯೋತ್ಪಾದಕ ಎಂದು ಘೋಷಿಸಿದೆ.

ಏತನ್ಮಧ್ಯೆ, ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಯ ಸಂಚಿನ ಆರೋಪಗಳನ್ನು ಭಾರತ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಶ್ವೇತಭವನ ಸೋಮವಾರ ಹೇಳಿದೆ. ಆದಾಗ್ಯೂ, ಈ ವಿಷಯದ ಬಗ್ಗೆ ಎಫ್‌ಬಿಐ ತನಿಖೆ ಮತ್ತು ನ್ಯಾಯಾಂಗ ಇಲಾಖೆ ಸಲ್ಲಿಸಿದ ಕ್ರಿಮಿನಲ್ ಮೊಕದ್ದಮೆಯ ಬಗ್ಗೆ ಪ್ರತಿಕ್ರಿಯಿಸಿಲ್ಲ. ವಾಷಿಂಗ್ಟನ್ ಪೋಸ್ಟ್‌ನ ವರದಿಯ ಕುರಿತು ಪ್ರಶ್ನೆಗಳಿಗೆ ಉತ್ತರಿಸಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್, ತನಿಖೆ ನಡೆಯುತ್ತಿದೆ ಮತ್ತು ನ್ಯಾಯಾಂಗ ಇಲಾಖೆ (ಡಿಒಜೆ) ಕ್ರಿಮಿನಲ್ ತನಿಖೆ ನಡೆಸುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ:Nijjar Killing: ಒಂದೇ ದಿನದಲ್ಲಿ ಸ್ಟೂಡೆಂಟ್‌ ವೀಸಾ ಪಡೆದು ಕೆನಡಾಕ್ಕೆ ಬಂದಿದ್ನಂತೆ ನಿಜ್ಜರ್‌ ಹಂತಕ

ಸುದ್ದಿ ವರದಿಯ ಬಗ್ಗೆ, “ಇದು ಗಂಭೀರ ವಿಷಯವಾಗಿದೆ ಮತ್ತು ನಾವು ಬಹಳ ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ತಾವು ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ಭಾರತ ಸರ್ಕಾರವು ನಮ್ಮೊಂದಿಗೆ ಸ್ಪಷ್ಟವಾಗಿ ಹೇಳಿದೆ” ಎಂದು ಜೀನ್-ಪಿಯರ್ ಹೇಳಿದರು. “ನಾವು ಅದರ ಆಧಾರದ ಮೇಲೆ ಭಾರತ ಸರ್ಕಾರದಿಂದ ಉತ್ತರದಾಯಿತ್ವವನ್ನು ನಿರೀಕ್ಷಿಸುತ್ತೇವೆ. ನಾವು ನಮ್ಮ ಕಳವಳ ವ್ಯಕ್ತಪಡಿಸುವುದನ್ನು ಮುಂದುವರಿಸಲಿದ್ದೇವೆ” ಎಂದಿದ್ದಾರೆ.

Continue Reading

ವಿದೇಶ

Nijjar Killing: ಒಂದೇ ದಿನದಲ್ಲಿ ಸ್ಟೂಡೆಂಟ್‌ ವೀಸಾ ಪಡೆದು ಕೆನಡಾಕ್ಕೆ ಬಂದಿದ್ನಂತೆ ನಿಜ್ಜರ್‌ ಹಂತಕ

Nijjar Killing:ಮೇ 3ರಂದು ಬಂಧನಕ್ಕೊಳಗಾಗಿರುವ ಕರಣ್‌ ಬ್ರಾರ್‌ 2019ರಲ್ಲಿ ಪಂಜಾಬ್‌ನ ಭಟಿಂಡಾದಲ್ಲಿರುವ ಎಥಿಕ್‌ವರ್ಕ್ಸ್‌ ಇಮಿಗ್ರೇಶನ್‌ ಕೇಂದ್ರದಲ್ಲಿ ವಿದ್ಯಾರ್ಥಿ ವೀಸಾ ಪಡೆದಿದ್ದ. ಕೆನಡಾ ವಿದ್ಯಾರ್ಥಿ ವೀಸಾ ಪಡೆಯಲು ಸಾಮಾನ್ಯವಾಗಿ 7–9ವಾರಗಳು ಬೇಕಾಗುತ್ತದೆ. ಆದರೆ ಈತ ಕೇವಲ ಒಂದೇ ದಿನದಲ್ಲಿ ವೀಸಾ ಪಡೆದಿದ್ದ ಎಂಬ ಗಂಭೀರ ವಿಚಾರ ಬೆಳಕಿಗೆ ಬಂದಿದೆ.

VISTARANEWS.COM


on

Nijjar Killling
Koo

ಒಟ್ಟವಾ:ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಕೊಲೆ(Nijjar Killing) ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ಮೂವರು ಭಾರತೀಯ ಮೂಲದ ಆರೋಪಿಗಳಲ್ಲಿ ಒಬ್ಬ ತಾನೂ ವಿದ್ಯಾರ್ಥಿ ವೀಸಾ(Student Visa)ದಲ್ಲಿ ಕೆನಡಾಗೆ(Canada) ಬಂದಿದ್ದ ಎಂಬುದನ್ನು ಒಪ್ಪಿಕೊಂಡಿದ್ದಾನೆ. ಮೇ 3ರಂದು ಬಂಧನಕ್ಕೊಳಗಾಗಿರುವ ಕರಣ್‌ ಬ್ರಾರ್‌ 2019ರಲ್ಲಿ ಪಂಜಾಬ್‌ನ ಭಟಿಂಡಾದಲ್ಲಿರುವ ಎಥಿಕ್‌ವರ್ಕ್ಸ್‌ ಇಮಿಗ್ರೇಶನ್‌ ಕೇಂದ್ರದಲ್ಲಿ ವಿದ್ಯಾರ್ಥಿ ವೀಸಾ ಪಡೆದಿದ್ದ. ಕೆನಡಾ ವಿದ್ಯಾರ್ಥಿ ವೀಸಾ ಪಡೆಯಲು ಸಾಮಾನ್ಯವಾಗಿ 7–9ವಾರಗಳು ಬೇಕಾಗುತ್ತದೆ. ಆದರೆ ಈತ ಕೇವಲ ಒಂದೇ ದಿನದಲ್ಲಿ ವೀಸಾ ಪಡೆದಿದ್ದ ಎಂಬ ಗಂಭೀರ ವಿಚಾರ ಬೆಳಕಿಗೆ ಬಂದಿದೆ.

ಬ್ರಾರ್‌ ವೀಸಾ ಪಡೆದಿದ್ದ ಬಗ್ಗೆ ಎಥಿಕ್‌ವರ್ಕ್ಸ್‌ ಇಮಿಗ್ರೇಶನ್‌ ಸೇವೆ ತನ್ನ ಫೇಸ್‌ಬುಕ್‌ ಪೇಜ್‌ನಲ್ಲಿ ಫೊಟೋ, ವಿಡಿಯೋ ಸಹಿತ ಪ್ರಕಟಿಸಿತ್ತು. ಕೆನಡಾ ಸ್ಟಡಿ ವೀಸಾ ಪಡೆದಿರುವ ಬ್ರಾರ್‌ ಅವರಿಗೆ ಅಭಿನಂದನೆಗಳು…ಮತ್ತೊರ್ವ ಹ್ಯಾಪಿ ಕ್ಲೈಂಟ್‌ ಎಂದು ಪೋಸ್ಟ್‌ ಕೂಡ ಮಾಡಿತ್ತು. ಬಳಿಕ ಅದನ್ನು ಡಿಲೀಟ್‌ ಮಾಡಿತ್ತು ಎನ್ನಲಾಗಿದೆ. ಇದೀಗ ಪೊಲೀಸ್‌ ವಿಚಾರಣೆ ವೇಳೆ ತಾಬು ಸ್ಟಡಿ ವೀಸಾದಲಿ ಕೆನಡಾಗೆ ಬಂದಿದ್ದೆ ಎಂದು ಬ್ರಾರ್‌ ಒಪ್ಪಿಕೊಂಡಿದ್ದಾನೆ.

ಕಳೆದ ವರ್ಷ ಕೆನಡಾದ ಬ್ರಿಟೀಷ್‌ ಕೊಲಂಬಿಯಾದಲ್ಲಿ ಹರ್ದೀಪ್‌ ಸಿಂಗ್‌ನನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಪೊಲೀಸರು ಮೂವರು ಹಂತಕರನ್ನು ಕೆನಡಾ ಪೊಲೀಸರು ಅರೆಸ್ಟ್‌ ಮಾಡಿದ್ದರು. ಬಂಧಿತರನ್ನು ಕರಣ್‌ ಪ್ರಿತ್‌ ಸಿಂಗ್(28) ಕಮಲ್‌ ಪ್ರಿತ್‌ ಸಿಂಗ್‌(22) ಮತ್ತು ಕರಣ್‌ ಬ್ರಾರ್‌(22) ಎಂದು ಗುರುತಿಸಲಾಗಿದೆ. ಅಲ್ಲದೇ ಪೊಲೀಸರು ಮೂವರು ಹಂತಕರ ಫೊಟೋವನ್ನೂ ಕೂಡ ರಿಲೀಸ್‌ ಮಾಡಿದ್ದರು. ಆರೋಪಿಗಳ ವಿರುದ್ಧ ಕೊಲೆಗೆ ಸಂಚು ಮತ್ತು ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಕೋರ್ಟ್‌ಗೆ ಎಲ್ಲಾ ದಾಖಲೆಗಳನ್ನು ಸಲ್ಲಿಸಲಾಗಿದೆ.

ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತೀಯ ಮೂಲದ ಮೂವರನ್ನು ಅರೆಸ್ಟ್‌ ಮಾಡಿರುವ ಬೆನ್ನಲ್ಲೇ ಕೆನಡಾ ಮತ್ತೆ ಭಾರತದತ್ತ ಬೊಟ್ಟು ಮಾಡಿ ತೋರಿಸಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕೆನಡಾ ಸಂಸದ ಜಗ್ಮಿತ್‌ ಸಿಂಗ್‌, ಪ್ರಕರಣದಲ್ಲಿ ಭಾರತದ ಕೈವಾಡವಿರುವುದು ಸಾಬೀತಾಗಿದೆ. ಕೆನಡಾದಂತಹ ಪೂಜ್ಯನೀಯ ಸ್ಥಳದಲ್ಲಿ ಕೆನಡಾ ಪ್ರಜೆಯನ್ನು ಕೊಲ್ಲಲು ಭಾರತ ಹಂತಕರನ್ನು ನೇಮಿಸಿದೆ ಎಂದು ಆರೋಪಿಸಿದ್ದರು.

2023ರ ಜೂನ್‌ 18ರಂದು ಕೆನಡಾದಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೀಡಾಗಿದ್ದ. ಇದರ ಹಿಂದೆ ಭಾರತದ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಆರೋಪ ಕೂಡ ಮಾಡಿದ್ದರು. ಹೀಗೆ, ಕೆನಡಾವನ್ನು ಭಾರತದ ವಿರುದ್ಧ ಎತ್ತಿಕಟ್ಟಲು ಪಾಕಿಸ್ತಾನದ ಐಎಸ್‌ಐ ಇಂತಹ ಕುತಂತ್ರ ಮಾಡಿದೆ. ಆದರೆ, ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಆರೋಪವನ್ನು ತಿರಸ್ಕರಿಸುವ ಭಾರತ, ಆರೋಪಗಳಿಗೆ ಸಾಕ್ಷ್ಯ ಕೊಡಿ ಎಂದು ತಿರುಗೇಟು ನೀಡಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈಗ ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿದೆ.

ಇದನ್ನೂ ಓದಿ: SSLC Exam Result 2024: ಇಂದು ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಪ್ರಕಟ; ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು? ಇಲ್ಲಿದೆ ಡಿಟೇಲ್ಸ್‌

“ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಕುರಿತು ನಾನು ಭಾರತದ ಜತೆ ಮಾತನಾಡಿದ್ದೇನೆ. ಆದರೆ, ಆತನ ಹತ್ಯೆಯ ಕುರಿತು ಭಾರತಕ್ಕೆ ತುಂಬ ವಾರಗಳ ಹಿಂದೆಯೇ ನಂಬಲರ್ಹ ಆರೋಪಗಳ ಕುರಿತು ಮಾಹಿತಿಯನ್ನು ಒದಗಿಸಲಾಗಿದೆ. ತುಂಬ ಗಂಭೀರವಾದ ವಿಚಾರದ ಕುರಿತು ಭಾರತ ಹಾಗೂ ಕೆನಡಾ ಒಗ್ಗೂಡಿ ಕಾರ್ಯನಿರ್ವಹಿಸುವ ಕುರಿತು ಕೂಡ ಮನವರಿಕೆ ಮಾಡಲಾಗಿದೆ. ಗಂಭೀರ ಹತ್ಯೆಯ ವಿಚಾರದಲ್ಲಿ ಭಾರತವು ನಮ್ಮ ಜತೆ ಕೈಗೂಡಿಸುತ್ತದೆ ಎಂಬ ಆಶಾಭಾವನೆಯಲ್ಲಿ ಇದ್ದೇವೆ” ಎಂದು ಜಸ್ಟಿನ್‌ ಟ್ರುಡೋ ಹೇಳಿದ್ದರು. ಆದರೆ, ಭಾರತ ಮಾತ್ರ ಸರಿಯಾದ ಸಾಕ್ಷ್ಯ ಕೊಡಿ ಎಂದು ಹೇಳಿದೆ.


Continue Reading
Advertisement
T20 World Cup 2024
ಕ್ರೀಡೆ4 mins ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಪುವಾ ನ್ಯೂಗಿನಿಯಾ, ಐರ್ಲೆಂಡ್

Sunita Williams
ವಿದೇಶ13 mins ago

Sunita Williams: ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ; ಮೇ 17ಕ್ಕೆ ಮುಂದೂಡಿಕೆ

Ananya Panday Aditya Roy Kapur parties with Sara Ali Khan
ಬಾಲಿವುಡ್15 mins ago

Ananya Panday: ಅನನ್ಯಾ ಪಾಂಡೆ ಜತೆ ಆದಿತ್ಯ ರಾಯ್ ಕಪೂರ್ ಬ್ರೇಕಪ್‌? ಸೈಫ್‌ ಪುತ್ರಿ ಜತೆ ಲವ್‌ ಸ್ಟಾರ್ಟ್‌!

SSLC Result 2024 secret behind 20 percent grace marks
ಕರ್ನಾಟಕ26 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

gold rate today sreeleela
ಚಿನ್ನದ ದರ39 mins ago

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

SSLC Result 2024 78 schools get zero results in SSLC exams
ಬೆಂಗಳೂರು43 mins ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

Viral video
ವೈರಲ್ ನ್ಯೂಸ್44 mins ago

Viral Video: ಬಸ್‌, ರೈಲಿನಲ್ಲಿ ಮಾತ್ರ ಅಲ್ಲ.. ಫ್ಲೈಟ್‌ನಲ್ಲೂ ನಡೆಯುತ್ತೆ ಸೀಟಿಗಾಗಿ ಮಾರಾಮಾರಿ

SSLC Result 2024 SSLC students get 20 percent grace marks but result is very poor
ಶಿಕ್ಷಣ1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

Andre Russell
ಕ್ರೀಡೆ1 hour ago

Andre Russell: ಸ್ಟಾರ್​​ ನಟಿಯೊಂದಿಗೆ ಕೇಸರಿ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ ಆಂಡ್ರೆ ರಸೆಲ್

Deepika Padukone pushes away fan camera at airport
ಬಾಲಿವುಡ್1 hour ago

Deepika Padukone: ಕ್ಯಾಮೆರಾ ತಳ್ಳಿ ಮುಂದೆ ನಡೆದ ದೀಪಿಕಾ! ನಾಚಿಕೆಗೇಡಿನ ವರ್ತನೆ ಅಂದ್ರು ನೆಟ್ಟಿಗರು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Result 2024 secret behind 20 percent grace marks
ಕರ್ನಾಟಕ26 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು43 mins ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ1 hour ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು2 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

ಟ್ರೆಂಡಿಂಗ್‌