ʼಹಷ್‌ ಮನಿʼ ಪ್ರಕರಣದಲ್ಲಿ ಟ್ರಂಪ್‌ ದೋಷಿ; ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಅಮೆರಿಕದ ಮಾಜಿ ಅಧ್ಯಕ್ಷರಿಗೆ ಶತಕೋಟಿ ರೂ. ನಷ್ಟ - Vistara News

ವಿದೇಶ

ʼಹಷ್‌ ಮನಿʼ ಪ್ರಕರಣದಲ್ಲಿ ಟ್ರಂಪ್‌ ದೋಷಿ; ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ಅಮೆರಿಕದ ಮಾಜಿ ಅಧ್ಯಕ್ಷರಿಗೆ ಶತಕೋಟಿ ರೂ. ನಷ್ಟ

Donald Trump: ನೀಲಿಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್‌ ಜತೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ 77 ವರ್ಷದ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 34 ಆರೋಪಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಸದ್ಯ ಈ ತೀರ್ಪು ಟ್ರಂಪ್‌ಗೆ ಭಾರೀ ಹಿನ್ನಡೆ ನೀಡಿದ್ದು, ಅವರ ಸಂಪತ್ತಿನ ಮೇಲೂ ಪರಿಣಾಮ ಬೀರಿದೆ. ತೀರ್ಪು ಪ್ರಕಟವಾದ ಸುಮಾರು ಗಂಟೆಯಲ್ಲಿ ಟ್ರಂಪ್ ಮೀಡಿಯಾದ ಷೇರುಗಳು ಶೇ. 9ರಷ್ಟು ಕುಸಿದು ಸುಮಾರು 500 ಮಿಲಿಯನ್ ಡಾಲರ್ (41,62,12,50,000 ರೂ.) ನಷ್ಟವಾಗಿದೆ.

VISTARANEWS.COM


on

Donald Trump
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ವಾಷಿಂಗ್ಟನ್‌: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ʼಹಷ್‌ ಮನಿʼ (Hush Money) ಪ್ರಕರಣದಲ್ಲಿ ದೋಷಿ ಎಂದು ನ್ಯಾಯಾರ್ಕ್‌ನ ನ್ಯಾಯಾಲಯ ತೀರ್ಪು ನೀಡಿದೆ. ಈ ಮೂಲಕ ನೀಲಿಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್‌ (Stormy Daniels) ಜತೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ 77 ವರ್ಷದ ಟ್ರಂಪ್‌ 34 ಆರೋಪಗಳಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಸದ್ಯ ಈ ತೀರ್ಪು ಟ್ರಂಪ್‌ಗೆ ಭಾರೀ ಹಿನ್ನಡೆ ನೀಡಿದ್ದು, ಅವರ ಸಂಪತ್ತಿನ ಮೇಲೂ ಪರಿಣಾಮ ಬೀರಿದೆ. ತೀರ್ಪು ಪ್ರಕಟವಾದ ಸುಮಾರು ಗಂಟೆಯಲ್ಲಿ ಟ್ರಂಪ್ ಮೀಡಿಯಾ (Trump Media)ದ ಷೇರುಗಳು ಶೇ. 9ರಷ್ಟು ಕುಸಿದು ಸುಮಾರು 500 ಮಿಲಿಯನ್ ಡಾಲರ್ (41,62,12,50,000 ರೂ.) ನಷ್ಟವಾಗಿದೆ. ಈ ಕಂಪನಿಯು ಟ್ರೂತ್ ಸೋಷಿಯಲ್ ಪ್ಲಾಟ್ ಫಾರ್ಮ್‌ (Truth Social platform)ನ ಮಾತೃ ಸಂಸ್ಥೆಯಾಗಿದೆ.

ಟ್ರಂಪ್‌ ಈ ಕಂಪನಿಯಲ್ಲಿ ಶೇ. 65ರಷ್ಟು ಪಾಲು ಹೊಂದಿದ್ದಾರೆ. ಸುಮಾರು ಶೇ. 10ರಷ್ಟು ಕುಸಿತವು ಮಾಜಿ ಅಧ್ಯಕ್ಷರ ಷೇರುಗಳ ಮೌಲ್ಯದಲ್ಲಿ 532 ಮಿಲಿಯನ್ ಡಾಲರ್ ಕುಸಿತಕ್ಕೆ ಕಾರಣವಾಗುತ್ತದೆ ಎಂದು ಫೋರ್ಬ್ಸ್ ತನ್ನ ವರದಿಯಲ್ಲಿ ಬಹಿರಂಗಪಡಿಸಿದೆ. ಫೇಸ್‌ಬುಕ್‌ (Facebook) ಮತ್ತು ಎಕ್ಸ್‌ (ಹಿಂದಿನ ಟ್ವಿಟ್ಟರ್‌)ಗೆ ಸವಾಲು ಸ್ಪರ್ಧೆ ಒಡ್ಡಲು ಡೊನಾಲ್ಡ್ ಟ್ರಂಪ್ ತಮ್ಮದೇ ಹೊಸ ಸೋಷಿಯಲ್ ಮೀಡಿಯಾ ಆದ ಟ್ರೂತ್ ಸೋಷಿಯಲ್ (Truth Social) ಆರಂಭಿಸಿದ್ದರು.

2021ರಲ್ಲಿ ಅಮೆರಿಕ ಸಂಸತ್‌ ಭವನದಲ್ಲಿ ಟ್ರಂಪ್‌ ಬೆಂಬಲಿಗರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅವರಿಗೆ ಎಲ್ಲ ಸಾಮಾಜಿಕ ಜಾಲತಾಣಗಳು ನಿಷೇಧ ಹೇರಿದ್ದವು. ಹೀಗಾಗಿ ಅವರು 2021ರ ಅಕ್ಟೋಬರ್‌ನಲ್ಲಿ ಸ್ವಂತ ಸಾಮಾಜಿಕ ಜಾಲತಾಣ ಆರಂಭಿಸುವುದಾಗಿ ಘೋಷಿಸಿದ್ದರು. ಅದಂತೆ 2022ರಲ್ಲಿ ಟ್ರೂತ್ ಸೋಷಿಯಲ್ ಅಪ್ಲಿಕೇಷನ್‌ ಆರಂಭಿಸಿದ್ದರು. ಟ್ರಂಪ್‌ ಮೀಡಿಯಾ ಆ್ಯಂಡ್‌ ಟೆಕ್ನಾಲಜಿ ಗ್ರೂಪ್‌ನ ಮಾಲಿಕತ್ವದಲ್ಲಿ ಈ ಅಪ್ಲಿಕೇಷನ್‌ ಅನ್ನು ಆರಂಭಿಸಲಾಗಿತ್ತು.

ಇದನ್ನೂ ಓದಿ: Worst President: ಅಮೆರಿಕ ಇತಿಹಾಸದಲ್ಲೇ ಡೊನಾಲ್ಡ್‌ ಟ್ರಂಪ್‌ ಕೆಟ್ಟ ಅಧ್ಯಕ್ಷ; ಬೆಸ್ಟ್‌ ಯಾರು?

ಏನಿದು ಪ್ರಕರಣ?

ಟ್ರಂಪ್‌ ಅವರು ನಟಿ ಸ್ಟ್ರಾಮಿ ಡೇನಿಯಲ್ಸ್‌ಗೆ ಹಣ ಪಾವತಿಸಿದ ಆರೋಪ ಎದುರಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಹಷ ಮನಿ ಪ್ರಕರಣ ದಾಖಲಾಗಿದೆ. ಗೋಪ್ಯತೆ ರಕ್ಷಿಸಲು ನೀಡುವ ಹಣಕ್ಕೆ ಹಷ್‌ ಮನಿ ಎಂದು ಕರೆಯಲಾಗುತ್ತದೆ. ಸ್ಟಾರ್ಮಿ ಡೇನಿಯಲ್ಸ್‌ ಜತೆಗೆ ಟ್ರಂಪ್‌ 2006ರಲ್ಲಿ ಲೈಂಗಿಕ ಸಂಬಂಧ ಹೊಂದಿದ್ದರು. 2011ರಲ್ಲಿ ಸ್ಟಾರ್ಮಿ ಈ ವಿಷಯವನ್ನು ಬಹಿರಂಗಪಡಿಸಿದ್ದರು.

2016ರಲ್ಲಿ ಟ್ರಂಪ್‌ ಚುನಾವಣಾ ಕಣಕ್ಕೆ ಇಳಿದ ವೇಳೆ ಲೈಂಗಿಕ ಸಂಪರ್ಕದ ವಿಷಯ ಬಹಿರಂಗ ಮಾಡದಂತೆ ತಮ್ಮ ವಕೀಲರ ಮೂಲಕ ಸ್ಟಾರ್ಮಿಗೆ 1 ಕೋಟಿ ರೂ. ಹಣ ನೀಡಿದ್ದರು. ಬಳಿಕ ಟ್ರಂಪ್‌ ಹಣ ನೀಡಿದ ವಿಷಯ ಬೆಳಕಿಗೆ ಬಂದು ಪ್ರಕರಣ ದಾಖಲಾಗಿತ್ತು. ಮೊದಲು ಹಣ ನೀಡಿದ ಆರೋಪವನ್ನು ನಿರಾಕರಿಸಿದ್ದ ಟ್ರಂಪ್‌ ಬಳಿಕ ಒಪ್ಪಿಕೊಂಡಿದ್ದರು. ನವೆಂಬರ್‌ನಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಟ್ರಂಪ್‌ ಸ್ಪರ್ಧಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಜಕಾರ್ತಾದಲ್ಲಿ ರೈಲುಗಳ ಮುಖಾಮುಖಿ ಡಿಕ್ಕಿ: 7 ಮಂದಿ ಸಾವು, 81 ಜನರಿಗೆ ಗಾಯ! ಅಪಘಾತಕ್ಕೆ ಕಾರಣವಾಯಿತೇ ಟ್ಯಾಕ್ಸಿ?

VISTARANEWS.COM


on

ಇಂಡೋನೇಷ್ಯಾದ ರಾಜಧಾನಿ ಜಕಾರ್ತಾ ಹೊರವಲಯದ ಬೆಕಾಸಿಯಲ್ಲಿ ಸೋಮವಾರ ತಡರಾತ್ರಿ ಭೀಕರ ರೈಲು ಅಪಘಾತ ಸಂಭವಿಸಿದೆ. ದೂರದ ಊರುಗಳಿಗೆ ಸಂಚರಿಸುವ ಪ್ರಯಾಣಿಕ ರೈಲು ಮತ್ತು ಸ್ಥಳೀಯ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ ಮತ್ತು 81 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೊಳಗಾದ ರೈಲು ಬೋಗಿಗಳ ಒಳಗೆ ಅನೇಕರು ಸಿಲುಕಿಕೊಂಡಿದ್ದು, ರಕ್ಷಣಾ ಸಿಬ್ಬಂದಿ ಲೋಹವನ್ನು ಕತ್ತರಿಸುವ ಯಂತ್ರಗಳನ್ನು ಬಳಸಿ ಜನರನ್ನು ಹೊರತೆಗೆಯುತ್ತಿದ್ದಾರೆ. ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಆತಂಕವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಭೀಕರ ಅಪಘಾತಕ್ಕೆ ರೈಲು ಹಳಿ ಮೇಲೆ ಬಂದ ಟ್ಯಾಕ್ಸಿಯೇ ಕಾರಣ ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಹಳಿಗಳ ಮೇಲೆ ಚಲಿಸುತ್ತಿದ್ದ ಟ್ಯಾಕ್ಸಿಯೊಂದಕ್ಕೆ ಪ್ರಯಾಣಿಕರ ರೈಲು ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ನಿಯಂತ್ರಣ ತಪ್ಪಿದ ರೈಲು, ಪಕ್ಕದ ಹಳಿಯಲ್ಲಿ ಮಹಿಳೆಯರು ಮಾತ್ರ ಪ್ರಯಾಣಿಸುತ್ತಿದ್ದ ಮತ್ತೊಂದು ರೈಲಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಈ ಟ್ಯಾಕ್ಸಿಯು ವಿಯೆಟ್ನಾಂ ಮೂಲದ ‘ಗ್ರೀನ್ ಎಸ್‌ಎಂ’ ಎಂಬ ಸಂಸ್ಥೆಗೆ ಸೇರಿದ್ದಾಗಿದ್ದು, ಕಂಪನಿಯು ಈಗಾಗಲೇ ಅಪಘಾತದ ತನಿಖೆಗೆ ಸಹಕರಿಸುವುದಾಗಿ ಘೋಷಿಸಿದೆ.

ಇಂಡೋನೇಷ್ಯಾದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಸಮಿತಿ (KNKT) ಘಟನೆಯ ಬಗ್ಗೆ ಸಮಗ್ರ ತನಿಖೆ ಆರಂಭಿಸಿದೆ. ರೈಲು ಬೋಗಿಗಳ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವುದು ಈಗ ದೊಡ್ಡ ಸವಾಲಾಗಿದ್ದು, ತಜ್ಞರ ತಂಡವು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಇಂಡೋನೇಷ್ಯಾದಲ್ಲಿ ಸಾರಿಗೆ ಸುರಕ್ಷತೆಯ ಕೊರತೆಯಿಂದಾಗಿ ರೈಲು ಅಪಘಾತಗಳು ಆಗಾಗ ಸಂಭವಿಸುತ್ತಲೇ ಇರುತ್ತವೆ, ಆದರೆ ಎರಡು ರೈಲುಗಳ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿಯು ಇತ್ತೀಚಿನ ವರ್ಷಗಳಲ್ಲೇ ನಡೆದ ಅತ್ಯಂತ ದೊಡ್ಡ ದುರಂತ ಎಂದು ಹೇಳಲಾಗುತ್ತಿದೆ.

Continue Reading

Latest

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

VISTARANEWS.COM


on

ಜಾಗತಿಕ ಆರ್ಥಿಕ ಬದಲಾವಣೆಗಳ ನಡುವೆ ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಸವಾಲು ಎದುರಾಗಿದೆ. ತಾನು ನೀಡಿದ್ದ 3.5 ಬಿಲಿಯನ್ ಡಾಲರ್ ಮೊತ್ತದ ಸಾಲವನ್ನು ಮರಳಿ ನೀಡುವಂತೆ ಸಂಯುಕ್ತ ಅರಬ್ ಸಂಸ್ಥಾನ (UAE) ಪಾಕಿಸ್ತಾನಕ್ಕೆ ತಿಳಿಸಿದೆ. ಈ ಹಿಂದೆ ಆರ್ಥಿಕ ಸ್ಥಿರತೆಗಾಗಿ ಯುಎಇ ಈ ಮೊತ್ತವನ್ನು ಪಾಕಿಸ್ತಾನದ ಸೆಂಟ್ರಲ್ ಬ್ಯಾಂಕ್‌ನಲ್ಲಿ ಇರಿಸಿತ್ತು. ಆದರೆ ಈಗಿನ ಭೌಗೋಳಿಕ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಈ ಮೊತ್ತವನ್ನು ವಾಪಸ್ ಪಡೆದಿರುವುದು ಪಾಕಿಸ್ತಾನದ ವಿದೇಶಿ ವಿನಿಮಯ ಮೀಸಲು ನಿಧಿಯ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡಿದೆ.

ಪಾಕಿಸ್ತಾನವು ನೆರೆಯ ರಾಷ್ಟ್ರಗಳಾದ ಇರಾನ್ ಮತ್ತು ಅಮೆರಿಕದ ಮೇಲೆ ಆರ್ಥಿಕ ನೆರವಿಗಾಗಿ ನಿರೀಕ್ಷೆ ಇಟ್ಟುಕೊಂಡಿತ್ತು. ಇರಾನ್ ಜೊತೆಗಿನ ಗಡಿ ಸಮಸ್ಯೆಗಳು ಮತ್ತು ಆಂತರಿಕ ಸಂಘರ್ಷಗಳ ಕಾರಣದಿಂದ ಅಲ್ಲಿಂದ ಬೆಂಬಲ ಸಿಗುವುದು ಕಷ್ಟಕರವಾಗಿದೆ. ಇತ್ತ ಅಮೆರಿಕ ಕೂಡ ಸಾಲದ ಮರುಪಾವತಿಯ ಶರತ್ತುಗಳನ್ನು ಕಠಿಣಗೊಳಿಸಿರುವುದರಿಂದ, ಪಾಕಿಸ್ತಾನಕ್ಕೆ ಹೊಸ ಸಾಲ ಪಡೆಯುವ ಹಾದಿಗಳು ಮುಚ್ಚಿದಂತಾಗಿವೆ. ಇದು ದೇಶದ ಆರ್ಥಿಕತೆಯನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳಿದೆ.

ಸದ್ಯಕ್ಕೆ ಪಾಕಿಸ್ತಾನ ಸರ್ಕಾರವು ಇಂಟರ್ನ್ಯಾಷನಲ್ ಮಾನಿಟರಿ ಫಂಡ್ (IMF) ಜೊತೆ ಮಾತುಕತೆ ನಡೆಸಿ ಈ ಬಿಕ್ಕಟ್ಟಿನಿಂದ ಹೊರಬರಲು ಪ್ರಯತ್ನಿಸುತ್ತಿದೆ. ಯುಎಇ ನಂತಹ ಮಿತ್ರ ರಾಷ್ಟ್ರಗಳು ಕೂಡ ಸಾಲದ ಅವಧಿಯನ್ನು ವಿಸ್ತರಿಸುವ ಬದಲು ವಾಪಸ್ ಕೇಳುತ್ತಿರುವುದು ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಆರ್ಥಿಕ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಮುಂದಿನ ದಿನಗಳಲ್ಲಿ ಪಾಕಿಸ್ತಾನವು ತನ್ನ ಆರ್ಥಿಕ ನೀತಿಗಳಲ್ಲಿ ಭಾರಿ ಬದಲಾವಣೆ ತರಬೇಕಾದ ಅನಿವಾರ್ಯತೆ ಎದುರಾಗಿದೆ.

Continue Reading

Latest

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

VISTARANEWS.COM


on

ಅಮೆರಿಕವು ಇತ್ತೀಚೆಗಷ್ಟೇ ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ, ಇರಾನ್ ಜಾಗತಿಕ ಸಂಘರ್ಷ ಶಮನಕ್ಕೆ ಹೊಸ ತಂತ್ರ ಹೂಡಿದೆ. ಪಾಕಿಸ್ತಾನದ ಸಂಧಾನಕಾರರ ಮೂಲಕ ವಾಷಿಂಗ್ಟನ್‌ಗೆ ಹೊಸ ಶಾಂತಿ ಪ್ರಸ್ತಾವನೆಯನ್ನು ರವಾನಿಸಿರುವ ಟೆಹ್ರಾನ್, ವಿಶ್ವದ ಅತ್ಯಂತ ಪ್ರಮುಖ ವ್ಯಾಪಾರ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ತಾವು ಸಿದ್ಧ ಎಂಬ ಆಶಯ ವ್ಯಕ್ತಪಡಿಸಿದೆ. ಪ್ರಸ್ತುತ ನಡೆಯುತ್ತಿರುವ ಉದ್ವಿಗ್ನತೆಯನ್ನು ತಣ್ಣಗಾಗಿಸಲು ಅತ್ಯಂತ ವಿವಾದಾತ್ಮಕವಾಗಿರುವ ಪರಮಾಣು ಕಾರ್ಯಕ್ರಮದ ಚರ್ಚೆಯನ್ನು ಸದ್ಯಕ್ಕೆ ಬದಿಗಿಟ್ಟು, ಮೊದಲು ಆರ್ಥಿಕ ಮತ್ತು ಭದ್ರತಾ ಹಿತಾಸಕ್ತಿಗಳ ಬಗ್ಗೆ ಮಾತುಕತೆ ನಡೆಸೋಣ ಎಂಬ ಪ್ರಸ್ತಾಪವನ್ನು ಇರಾನ್ ಮುಂದಿಟ್ಟಿದೆ.

ಇರಾನ್ ವಿಧಿಸಿರುವ ಈ ಹೊಸ ಷರತ್ತುಗಳ ಪ್ರಕಾರ, ಹಾರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಬೇಕಾದರೆ ಅಮೆರಿಕವು ಮೊದಲು ಇರಾನ್ ಬಂದರುಗಳ ಮೇಲೆ ಹೇರಿರುವ ನೌಕಾ ದಿಗ್ಬಂಧನವನ್ನು (Naval Blockade) ಹಿಂಪಡೆಯಬೇಕು. ಅಲ್ಲದೆ, ತನ್ನ ಮೇಲೆ ಹೇರಲಾಗಿರುವ ಕಠಿಣ ಆರ್ಥಿಕ ನಿರ್ಬಂಧಗಳನ್ನು ತೆಗೆದುಹಾಕಿ, ಜಪ್ತಿ ಮಾಡಲಾಗಿರುವ ಇರಾನ್ ಆಸ್ತಿಗಳನ್ನು ಬಿಡುಗಡೆ ಮಾಡಬೇಕೆಂದು ಟೆಹ್ರಾನ್ ಒತ್ತಾಯಿಸಿದೆ. ಸದ್ಯಕ್ಕೆ ಹಾರ್ಮುಜ್ ಜಲಸಂಧಿಯಲ್ಲಿ ಭಾರತ, ಚೀನಾ ಮತ್ತು ರಷ್ಯಾದಂತಹ ಸ್ನೇಹಿ ರಾಷ್ಟ್ರಗಳ ಹಡಗುಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಲಾಗುತ್ತಿದ್ದು, ಇತರ ರಾಷ್ಟ್ರಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ.

ಇರಾನ್‌ನ ಈ ಷರತ್ತುಬದ್ಧ ಆಫರ್ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಉನ್ನತ ಮಟ್ಟದ ಭದ್ರತಾ ಸಭೆಯನ್ನು ಕರೆದಿದ್ದಾರೆ. ಇರಾನ್‌ನ ಪರಮಾಣು ಚಟುವಟಿಕೆಗಳ ಮೇಲೆ ಸಂಪೂರ್ಣ ನಿಯಂತ್ರಣ ಹೇರದೆ ಅಮೆರಿಕ ಯಾವುದೇ ಶಾಶ್ವತ ಒಪ್ಪಂದಕ್ಕೆ ಸಹಿ ಹಾಕುವುದು ಅನುಮಾನ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಆದರೂ, ಜಾಗತಿಕ ತೈಲ ಮಾರುಕಟ್ಟೆ ಮತ್ತು ಇಂಧನ ಬೆಲೆಗಳ ದೃಷ್ಟಿಯಿಂದ ಈ ಸಂಧಾನ ಪ್ರಕ್ರಿಯೆಯು ಅತ್ಯಂತ ಮಹತ್ವ ಪಡೆದಿದ್ದು, ಟ್ರಂಪ್ ಸರ್ಕಾರದ ಮುಂದಿನ ನಡೆ ಇಡೀ ವಿಶ್ವದ ಕುತೂಹಲಕ್ಕೆ ಕಾರಣವಾಗಿದೆ.

Continue Reading

Latest

ಅಧ್ಯಕ್ಷ ಹುದ್ದೆ ಇಷ್ಟು ಡೇಂಜರ್ ಅಂತ ಗೊತ್ತಿರಲಿಲ್ಲ!”: ಗುಂಡಿನ ದಾಳಿಯಿಂದ ಬಚಾವಾದ ಬೆನ್ನಲ್ಲೇ ಟ್ರಂಪ್ ವ್ಯಂಗ್ಯ

VISTARANEWS.COM


on

ವಾಷಿಂಗ್ಟನ್‌ನ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ವಾರ್ಷಿಕ ‘ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್’ ವೇಳೆ ಸಂಭವಿಸಿದ ಗುಂಡಿನ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಘಟನೆಯ ನಂತರ ಮಾಧ್ಯಮಗಳ ಮುಂದೆ ತಮ್ಮದೇ ವಿಶಿಷ್ಟ ಶೈಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. “ಅಧ್ಯಕ್ಷ ವೃತ್ತಿ ಇಷ್ಟೊಂದು ಅಪಾಯಕಾರಿ ಎಂದು ಯಾರೂ ನನಗೆ ಎಚ್ಚರಿಸಿರಲಿಲ್ಲ. ಒಂದು ವೇಳೆ ನನ್ನ ಮಿತ್ರ ಮಾರ್ಕೊ ರೂಬಿಯೋ ಈ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರೆ, ಬಹುಶಃ ನಾನು ಚುನಾವಣೆಗೆ ಸ್ಪರ್ಧಿಸುವ ಮುನ್ನ ಎರಡು ಬಾರಿ ಯೋಚಿಸುತ್ತಿದ್ದೆ” ಎಂದು ಹಾಸ್ಯ ಚಟಾಕಿ ಹಾರಿಸುವ ಮೂಲಕ ಭದ್ರತಾ ಲೋಪವನ್ನು ವ್ಯಂಗ್ಯವಾಡಿದ್ದಾರೆ.

ಅಮೆರಿಕದ ಇತಿಹಾಸವನ್ನು ಉಲ್ಲೇಖಿಸಿದ ಟ್ರಂಪ್, ಅಂಕಿಅಂಶಗಳ ಪ್ರಕಾರ ಸುಮಾರು 8% ಅಧ್ಯಕ್ಷರ ಮೇಲೆ ಗುಂಡಿನ ದಾಳಿ ನಡೆದಿದೆ ಮತ್ತು 5.8% ಅಧ್ಯಕ್ಷರು ಹತ್ಯೆಗೀಡಾಗಿದ್ದಾರೆ ಎಂಬ ಆಘಾತಕಾರಿ ಸತ್ಯವನ್ನು ಬಿಚ್ಚಿಟ್ಟರು. ಇದು ಜಗತ್ತಿನ ಅತ್ಯಂತ ಅಪಾಯಕಾರಿ ಉದ್ಯೋಗಗಳಲ್ಲಿ ಒಂದು ಎಂದು ಗಂಭೀರವಾಗಿ ನುಡಿದ ಅವರು, ಎಷ್ಟೇ ಅಪಾಯವಿದ್ದರೂ ಅಮೆರಿಕದ ಜನರ ಸೇವೆ ಮಾಡುವುದರಲ್ಲಿ ನನಗೆ ಹೆಮ್ಮೆ ಇದೆ ಎಂದು ತಮ್ಮ ದೇಶಪ್ರೇಮ ಮತ್ತು ಬದ್ಧತೆಯನ್ನು ಪುನರುಚ್ಚರಿಸಿದರು.

ಶನಿವಾರ ರಾತ್ರಿ ಭೋಜನಕೂಟದ ವೇಳೆ ಶಂಕಿತ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದರೂ, ಸೀಕ್ರೆಟ್ ಸರ್ವಿಸ್ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಟ್ರಂಪ್ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರು. ಈ ಹಿಂದೆ ಅಬ್ರಹಾಂ ಲಿಂಕನ್ ಮತ್ತು ಜಾನ್ ಎಫ್ ಕೆನಡಿ ಸೇರಿದಂತೆ ನಾಲ್ವರು ಅಧ್ಯಕ್ಷರು ಇಂತಹ ದಾಳಿಗಳಿಗೆ ಬಲಿಯಾಗಿದ್ದ ಇತಿಹಾಸವಿದ್ದು, ಸದ್ಯ ಟ್ರಂಪ್ ಮೇಲಿನ ದಾಳಿಕೋರನನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

Continue Reading
Advertisement
Latest1 hour ago

ಸಾಲದ ಸುಳಿಯಲ್ಲಿ ರಾಜ್ಯ ಸರ್ಕಾರ! ಆರ್ಥಿಕ ಶಿಸ್ತಿನ ಬಗ್ಗೆ ಹೆಚ್‌ಡಿಕೆ ಆತಂಕ

Latest1 hour ago

ರಿಷಬ್ ಶೆಟ್ಟಿ ಸಿನಿಮಾದ ತೆಲುಗು ವರ್ಷನ್ ರೆಡಿ: ಟಾಲಿವುಡ್‌ನಲ್ಲಿ ಬಿಡುಗಡೆಗೆ ದಿನಾಂಕ ನಿಗದಿ! ಯಾವುದು ಆ ಸಿನಿಮಾ?

Latest2 hours ago

‘ಕೆಡಿ’ ಹಾಡಿನ ವಿವಾದಕ್ಕೆ ತೆರೆ: ಕ್ಷಮೆಯಾಚಿಸಿ 50 ಬುಡಕಟ್ಟು ಹುಡುಗಿಯರ ಶಿಕ್ಷಣದ ಜವಾಬ್ದಾರಿ ಹೊತ್ತ ಸಂಜಯ್ ದತ್!

Latest2 hours ago

ಜಕಾರ್ತಾದಲ್ಲಿ ರೈಲುಗಳ ಮುಖಾಮುಖಿ ಡಿಕ್ಕಿ: 7 ಮಂದಿ ಸಾವು, 81 ಜನರಿಗೆ ಗಾಯ! ಅಪಘಾತಕ್ಕೆ ಕಾರಣವಾಯಿತೇ ಟ್ಯಾಕ್ಸಿ?

Latest19 hours ago

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

Latest19 hours ago

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

Latest20 hours ago

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

ಸಿನಿಮಾ21 hours ago

ಎಲೆಕ್ಷನ್ ಮುಗಿದರೂ ಮುಗಿಯದ ದಳಪತಿ ಆಸ್ತಿ ಸಂಘರ್ಷ: ಹೆಂಡತಿಗೆ ಕೊಟ್ಟ 12 ಕೋಟಿ ಸಾಲದ ರಹಸ್ಯವೇನು?

Latest21 hours ago

ಹರಿಹರ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ, ಟ್ರಸ್ಟಿಗಳ ನಡುವೆ ಆರೋಪ-ಪ್ರತ್ಯಾರೋಪ.

Latest22 hours ago

RCB v/s GT ಪಂದ್ಯದ ವೇಳೆ ಭದ್ರತಾ ವೈಫಲ್ಯ: 240 ಸಿಸಿಟಿವಿಗಳನ್ನು ನಿಷ್ಕ್ರಿಯಗೊಳಿಸಿದ್ದೇಕೆ? ಹೊರಬಿತ್ತು ಶಾಕಿಂಗ್‌ ಸತ್ಯ!

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌