ಲಂಡನ್: ಇಂಗ್ಲೆಂಡ್‌ನಲ್ಲಿ ಸಾರ್ವತ್ರಿಕ ಚುನಾವಣೆ(UK Election) ರಂಗೇರಿದ್ದು, ಬಹುತೇಕ ಫಲಿತಾಂಶ ಸ್ಪಷ್ಟವಾಗಿದೆ. ಈ ಬಾರಿ ಕನ್ಸರ್ವೇಟಿವ್ ಪಕ್ಷದ ರಿಷಿ ಸುನಕ್(Rishi Sunak)ಗೆ ಭಾರೀ ಹಿನ್ನಡೆ ಅನುಭವಿಸಿದ್ದು, ಕೇರ್ ಸ್ಟಾರ್ಮೆರ್ ಅವರ ಲೇಬರ್ ಪಕ್ಷ(Labour Party) ಭರ್ಜರಿ ಗೆಲುವು ಸಾಧಿಸುವುದು ಖಚಿತವಾಗಿದೆ. ಇದುವರೆಗಿನ ಫಲಿತಾಂಶ ಗಮನಿಸಿದರೆ ಕನ್ಸರ್ವೇಟಿವ್ ಪಕ್ಷ ಕೇವಲ 15 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಪಕ್ಷಗಳ ಬಲಾಬಲ ಹೇಗಿದೆ?
ಇನ್ನು ಕಣದಲ್ಲಿರುವ ಪಕ್ಷಗಳ ಬಲಾಬಲ ಹೇಗಿದೆ ಎಂದು ನೋಡುವುದಾದರೆ,
- ಕನ್ಸರ್ವೇಟಿವ್ ಪಕ್ಷ ಕೇವಲ 15
- ಲೇಬರ್ ಪಾರ್ಟಿ – 113
- ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP) – 1
- ಲಿಬರಲ್ ಡೆಮೋಕ್ರಾಟ್‌ಗಳು – 12
- ರಿಫಾರ್ಮ್ ಯುಕೆ – 1
- ಇತರೆ – 1
ಎಕ್ಸಿಟ್ ಪೋಲ್ ಭವಿಷ್ಯ ಏನು?
ಇನ್ನು ಚುನಾವಣಾ ಪೂರ್ವ ಸಮೀಕ್ಷೆಗಳು ಕನ್ಸರ್ವೇಟಿವ್ ಪಕ್ಷ ಈ ಬಾರಿ ಸೋಲುವುದು ಖಚಿತ ಎಂಬ ಭವಿಷ್ಯ ನುಡಿದಿತ್ತು. ಈ ಬಾರಿ ಕನ್ಸರ್ವೇಟಿಕವ್ ಪಕ್ದ್ ಸ್ಥಾನ 131ಕ್ಕೆ ಇಳಿಯಲಿದ್ದು, ಲೇಬರ್ ಪಕ್ಷ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾಕ್ಕೆ ಬರಲಿದೆ ಎಂದು ಹೇಳಿದೆ. ಹಾಗಿದ್ದರೆ ಎಕ್ಸಿಟ್ ಪೋಲ್ ಪ್ರಕಾರ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ದೊರೆಯಲಿದೆ ನೋಡೋಣ.
- ಕನ್ಸರ್ವೇಟಿವ್: 131
- ಲೇಬರ್ಸ್: 410
- ಲಿಬರಲ್ ಡೆಮೋಕ್ರಾಟ್‌ಗಳು: 61
- ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP): 10
- ರಿಫಾರ್ಮ್ ಯುಕೆ: 13
- ಪ್ಲೈಡ್ ಸಿಮ್ರು: 4
- ಗ್ರೀನ್ಸ್: 2
ರಿಷಿ ಸುನಕ್‌ಗೆ ಆಡಳಿತ ವಿರೋಧಿ ಅಲೆ
44 ವರ್ಷದ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, 61 ವರ್ಷದ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಾರ್ಟಿಗಿಂತ ಕಳೆದ 6 ವಾರಗಳ ಪ್ರಚಾರದಲ್ಲಿ ಅತ್ಯಂತ ಹಿಂದುಳಿದಿದ್ದಾರೆ. ಇಂಗ್ಲೆಂಡ್, ಸ್ಕಾಟ್‌ಲ್ಯಾಂಡ್, ವೇಲ್ಸ್ ಮತ್ತು ಉತ್ತರ ಐರ್ಲೆಂಡ್‌ನಾದ್ಯಂತ 650 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ, ಮೊದಲ ಬಾರಿಗೆ ಪೋಸ್ಟ್ ಸಿಸ್ಟಮ್‌ನಲ್ಲಿ ಬಹುಮತಕ್ಕೆ 326 ಮತಗಳ ಅಗತ್ಯವಿದೆ.
ಎರಡು ಪ್ರಮುಖ ಪಕ್ಷಗಳ ಹೊರತಾಗಿ, ಮತದಾರರು ಲಿಬರಲ್ ಡೆಮಾಕ್ರಾಟ್‌ಗಳು, ಗ್ರೀನ್ ಪಾರ್ಟಿ, ಸ್ಕಾಟಿಷ್ ನ್ಯಾಷನಲ್ ಪಾರ್ಟಿ (ಎಸ್‌ಎನ್‌ಪಿ), ಎಸ್‌ಡಿಎಲ್‌ಪಿ, ಡೆಮಾಕ್ರಟಿಕ್ ಯೂನಿಯನಿಸ್ಟ್ ಪಾರ್ಟಿ (ಡಿಯುಪಿ), ಸಿನ್ ಫಿಯೆನ್, ಪ್ಲೈಡ್ ಸಿಮ್ರು, ವಲಸೆ ವಿರೋಧಿ ಸುಧಾರಣೆಗಳನ್ನು ಪ್ರತಿನಿಧಿಸುವ ಅಭ್ಯರ್ಥಿಗಳ ಪಟ್ಟಿಯಿಂದ ಆಯ್ಕೆ ಮಾಡುತ್ತಾರೆ. ಪಕ್ಷ ಮತ್ತು ಹಲವರು ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ. ರಿಷಿ ಸುನಕ್ ಅವರು ಅವಧಿಗೆ ಮುನ್ನವೇ ಚುನಾವಣಾ ಘೋಷಣೆ ಮಾಡಿದ್ದು, ಚುನಾವಣೆ ಘೋಷಣೆ ಮಾಡಿದಾಗಿನಿಂದಲೂ ಲೇಬರ್ ಪಾರ್ಟಿ ಬಹುಮತ ಪಡೆಯಲಿದೆ ಎಂದು ಅಂದಾಜಿಸಲಾಗಿತ್ತು. ಪ್ರಚಾರ ಅಂತ್ಯಗೊಳ್ಳುವ ವೇಳೆ ಕೀರ್ ಸ್ಟಾರ್ಮರ್ ಅವರೇ ಪ್ರಧಾನಿಯಾಗಲಿದ್ದಾರೆ ಎನ್ನಲಾಗುತ್ತದೆ.
ಇದನ್ನೂ ಓದಿ: Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ದೇಶದ ಕ್ರೀಡಾಪಟುಗಳ ಶ್ರೇಷ್ಠ ಪ್ರದರ್ಶನ; ಮೋದಿ ವಿಶ್ವಾಸ