ಲಂಡನ್: ಬ್ರಿಟನ್‌ನಲ್ಲಿ ಸಾರ್ವತ್ರಿಕ ಚುನಾವಣೆ(UK Election) ಫಲಿತಾಂಶ ಹೊರಬಿದ್ದಿದ್ದು, ಬರೋಬ್ಬರಿ 14ವರ್ಷಗಳ ಬಳಿಕ ಲೇಬರ್ ಪಕ್ಷ ಜಯಭೇರಿ ಭಾರಿಸಿದೆ. ಲೇಬರ್ ಪಕ್ಷ 360 ಸ್ಥಾನಗಳನ್ನು ಗಳಿಸಿ ಮ್ಯಾಜಿಕ್ ನಂಬರ್ 320 ಅನ್ನು ದಾಟುವ ಮೂಲಕ ಸರ್ಕಾರ ರಚನೆಗೆ ಮುಂದಾಗಿದೆ. ಹಾಲಿ ಪ್ರಧಾನಿ ರಿಷಿ ಸುನಕ್(Rishi Sunak) ಅವರ ಪಕ್ಷ ಕನ್ಸರ್ವೇಟಿವ್ ಪಕ್ಷ ಭಾರೀ ಹಿನ್ನಡೆ ಅನುಭವಿಸಿದ್ದು, ಲೇಬರ್ ಪಕ್ಷದ ಕೀರ್ ಸ್ಟಾರ್ಮರ್(Keir Starmer) ಅವರಿಗೆ ಪ್ರಧಾನಿ ಗಿಟ್ಟಿದೆ. ಇನ್ನು
ಫಲಿತಾಂಶ ಹೊರ ಬೀಳುತ್ತಿದ್ದಂತೆ ರಿಶಿ ಸುನಕ್ ಪ್ರತಿಕ್ರಿಯಿಸಿದ್ದು, ಈ ಸೋಲಿನ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ಹೇಳಿದ್ದಾರೆ. ಅಲ್ಲದೇ ಲೇಬರ್ ಪಕ್ಷದ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲೇಬರ್ ಪಕ್ಷವು ಈ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದಿದೆ ಮತ್ತು ಅವರ ವಿಜಯಕ್ಕಾಗಿ ಅಭಿನಂದಿಸಲು ನಾನು ಸರ್ ಕೀರ್ ಸ್ಟಾರ್ಮರ್‌ಗೆ ಕರೆ ಮಾಡಿದ್ದೇನೆ. ಇಂದು, ಅಧಿಕಾರವು ಶಾಂತಿಯುತವಾಗಿ ಮತ್ತು ಕ್ರಮಬದ್ಧವಾಗಿ ಅಧಿಕಾರ ಹಸ್ತಾಂತರಗೊಂಡಿದೆ. ಎಲ್ಲಾ ಕಡೆಯಿಂದಲೂ ಸದ್ಭಾವನೆ ಇರುತ್ತದೆ. ಇದು ನಮ್ಮ ದೇಶದ ಸ್ಥಿರತೆ ಮತ್ತು ಭವಿಷ್ಯದ ಬಗ್ಗೆ ನಮಗೆಲ್ಲರಿಗೂ ವಿಶ್ವಾಸವನ್ನು ನೀಡುವ ವಿಷಯವಾಗಿದೆ ಎಂದು ಹೇಳಿದ್ದಾರೆ.
ಪಕ್ಷಗಳ ಬಲಾಬಲ ಹೇಗಿದೆ?
ಇನ್ನು ಕಣದಲ್ಲಿರುವ ಪಕ್ಷಗಳ ಬಲಾಬಲ ಹೇಗಿದೆ ಎಂದು ನೋಡುವುದಾದರೆ,
- ಕನ್ಸರ್ವೇಟಿವ್ ಪಕ್ಷ ಕೇವಲ – 81
- ಲೇಬರ್ ಪಾರ್ಟಿ – 360
- ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP) – 3
- ಲಿಬರಲ್ ಡೆಮೋಕ್ರಾಟ್‌ಗಳು – 49
- ರಿಫಾರ್ಮ್ ಯುಕೆ – 3
- ಇತರೆ – 1
ಎಕ್ಸಿಟ್ ಪೋಲ್ ಭವಿಷ್ಯ ಏನು?
ಇನ್ನು ಚುನಾವಣಾ ಪೂರ್ವ ಸಮೀಕ್ಷೆಗಳು ಕನ್ಸರ್ವೇಟಿವ್ ಪಕ್ಷ ಈ ಬಾರಿ ಸೋಲುವುದು ಖಚಿತ ಎಂಬ ಭವಿಷ್ಯ ನುಡಿದಿತ್ತು. ಈ ಬಾರಿ ಕನ್ಸರ್ವೇಟಿಕವ್ ಪಕ್ದ್ ಸ್ಥಾನ 131ಕ್ಕೆ ಇಳಿಯಲಿದ್ದು, ಲೇಬರ್ ಪಕ್ಷ ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾಕ್ಕೆ ಬರಲಿದೆ ಎಂದು ಹೇಳಿದೆ. ಹಾಗಿದ್ದರೆ ಎಕ್ಸಿಟ್ ಪೋಲ್ ಪ್ರಕಾರ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ದೊರೆಯಲಿದೆ ನೋಡೋಣ.
- ಕನ್ಸರ್ವೇಟಿವ್: 131
- ಲೇಬರ್ ಪಕ್ಷ: 410
- ಲಿಬರಲ್ ಡೆಮೋಕ್ರಾಟ್‌ಗಳು: 61
- ಸ್ಕಾಟಿಷ್ ನ್ಯಾಶನಲಿಸ್ಟ್ ಪಾರ್ಟಿ (SNP): 10
- ರಿಫಾರ್ಮ್ ಯುಕೆ: 13
- ಪ್ಲೈಡ್ ಸಿಮ್ರು: 4
- ಗ್ರೀನ್ಸ್: 2
ರಿಷಿ ಸುನಕ್‌ಗೆ ಆಡಳಿತ ವಿರೋಧಿ ಅಲೆ
44 ವರ್ಷದ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, 61 ವರ್ಷದ ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಾರ್ಟಿಗಿಂತ ಕಳೆದ 6 ವಾರಗಳ ಪ್ರಚಾರದಲ್ಲಿ ಅತ್ಯಂತ ಹಿಂದುಳಿದಿದ್ದಾರೆ. ಇಂಗ್ಲೆಂಡ್, ಸ್ಕಾಟ್‌ಲ್ಯಾಂಡ್, ವೇಲ್ಸ್ ಮತ್ತು ಉತ್ತರ ಐರ್ಲೆಂಡ್‌ನಾದ್ಯಂತ 650 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ, ಮೊದಲ ಬಾರಿಗೆ ಪೋಸ್ಟ್ ಸಿಸ್ಟಮ್‌ನಲ್ಲಿ ಬಹುಮತಕ್ಕೆ 326 ಮತಗಳ ಅಗತ್ಯವಿದೆ.
ಇದನ್ನೂ ಓದಿ: Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ದೇಶದ ಕ್ರೀಡಾಪಟುಗಳ ಶ್ರೇಷ್ಠ ಪ್ರದರ್ಶನ; ಮೋದಿ ವಿಶ್ವಾಸ