Ukraine Dam Blast: ಉಕ್ರೇನ್‌ನಲ್ಲಿ ಡ್ಯಾಮ್‌ ಸ್ಫೋಟ, ನೂರಾರು ಜನರ ಸಾವು; ಯುದ್ಧದ ಗಾಯಕ್ಕೆ ಜಲಕಂಟಕದ ಬರೆ - Vistara News

ಪ್ರಮುಖ ಸುದ್ದಿ

Ukraine Dam Blast: ಉಕ್ರೇನ್‌ನಲ್ಲಿ ಡ್ಯಾಮ್‌ ಸ್ಫೋಟ, ನೂರಾರು ಜನರ ಸಾವು; ಯುದ್ಧದ ಗಾಯಕ್ಕೆ ಜಲಕಂಟಕದ ಬರೆ

Ukraine Dam Blast: ಉಕ್ರೇನ್‌ನ ಖೇರ್ಸನ್‌ನಲ್ಲಿರುವ ಜಲಾಶಯವು ಕೆಲವೇ ಸೆಕೆಂಡ್‌ಗಳಲ್ಲಿ ಸ್ಫೋಟಗೊಂಡಿದೆ. ಇದರಿಂದ ಗ್ರಾಮಕ್ಕೆ ಗ್ರಾಮಗಳೇ ಜಲಾವೃಗೊಂಡಿವೆ. ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ನೂರಾರು ಜನ ಮೃತಪಟ್ಟಿದ್ದಾರೆ ಎಂಬ ವರದಿ ಬಂದಿದೆ.

VISTARANEWS.COM


on

Dam Blast In Ukraine
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೀವ್:‌ 2022ರ ಫೆಬ್ರವರಿಯಿಂದಲೂ ಉಕ್ರೇನ್‌ ಮೇಲೆ ರಷ್ಯಾ ನಿರಂತರವಾಗಿ ಆಕ್ರಮಣ ಮಾಡುತ್ತಿರುವ ಕಾರಣ ಸಾವಿರಾರು ಜನ ಹತರಾಗಿದ್ದಾರೆ. ಲಕ್ಷಾಂತರ ಜನ ದೇಶವನ್ನೇ ಬಿಟ್ಟು ಹೋಗಿದ್ದಾರೆ. ಇನ್ನೂ ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ. ಈಗಲೂ ರಾಕೆಟ್‌, ಕ್ಷಿಪಣಿ, ಗುಂಡಿನ ಸದ್ದು ಜನರನ್ನು ಬೆಚ್ಚಿಬೀಳಿಸುತ್ತಲೇ ಇದೆ. ಇದರ ಬೆನ್ನಲ್ಲೇ ಉಕ್ರೇನ್‌ನ ಖೇರ್ಸನ್‌ನಲ್ಲಿರುವ ಜಲಾಶಯವೊಂದು ಸ್ಫೋಟಗೊಂಡಿದ್ದು (Ukraine Dam Blast), ಗ್ರಾಮಕ್ಕೆ ಗ್ರಾಮಗಳೇ ಮುಳುಗಿಹೋಗಿವೆ. ಸಾವಿರಾರು ಜನ ನಿರಾಶ್ರಿತರಾಗಿದ್ದು, ನೂರಾರು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ ರಷ್ಯಾ ದಾಳಿಗೆ ನಲುಗಿರುವ ಉಕ್ರೇನ್‌ಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ನಿಪ್ರೋ ನದಿಗೆ ಅಡ್ಡಲಾಗಿ ಕಟ್ಟಿರುವ (Dnipro River) ನೋವಾ ಕಖೋವಾ ಜಲಾಶಯವು ಕೆಲವೇ ಸೆಕೆಂಡ್‌ಗಳಲ್ಲಿ ಸ್ಫೋಟಗೊಂಡಿದೆ. ಡ್ಯಾಮ್‌ ಮೇಲೆ ದಾಳಿ ನಡೆಸಿದ ಕಾರಣ ಅದು ಕುಸಿದಿದೆ ಎಂದು ತಿಳಿದುಬಂದಿದೆ. ಡ್ಯಾಮ್‌ ಸ್ಫೋಟದಿಂದ ಸುಮಾರು 24 ಗ್ರಾಮಗಳು ಸಂಪೂರ್ಣವಾಗಿ ಮುಳುಗಿವೆ. ಇದುವರೆಗೆ 17 ಸಾವಿರ ಜನರನ್ನು ರಕ್ಷಿಸಲಾಗಿದ್ದು, ಇನ್ನೂ 42 ಸಾವಿರ ಜನರ ಪರಿಸ್ಥಿತಿ ಅತಂತ್ರವಾಗಿದೆ. ಗ್ರಾಮಕ್ಕೆ ಗ್ರಾಮಗಳೇ ಮುಳುಗಿದ ಕಾರಣ ನೂರಾರು ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹೀಗಾಗಿದೆ ಜಲಪ್ರಳಯ

ಇದನ್ನೂ ಓದಿ: Naatu Naatu : ಉಕ್ರೇನ್‌ನ ಯೋಧರಿಂದಲೂ ನಾಟು ನಾಟು ಡ್ಯಾನ್ಸ್‌! ಸಕತ್‌ ಆಗಿದೆ ಇಲ್ಲಿರುವ ಟ್ವಿಸ್ಟ್‌

ನೋವಾ ಕಖೋವಾ ಡ್ಯಾಮ್‌ ಸ್ಫೋಟಗೊಂಡ ಕಾರಣ ರಕ್ಷಣಾ ಕಾರ್ಯಾಚರಣೆ ವೇಗವಾಗಿ ಸಾಗುತ್ತಿದೆ. ಆದರೆ, ಖೇರ್ಸನ್‌ ಸುತ್ತಮುತ್ತ ನೀರೇ ಆವರಿಸಿರುವ ಕಾರಣ ಜನರ ರಕ್ಷಣೆಯೂ ತೊಂದರೆಯಾಗುತ್ತಿದೆ. ಇನ್ನು ಪ್ರಾಣಿ ಸಂಗ್ರಹಾಲಯಗಳು ಕೂಡ ಮುಳುಗಿಹೋದ ಕಾರಣ ಇದುವರೆಗೆ 300ಕ್ಕೂ ಅಧಿಕ ಪ್ರಾಣಿಗಳು ಮೃತಪಟ್ಟಿವೆ. ಸ್ಫೋಟದ ಕಾರಣ ಜಲಾಶಯಕ್ಕೆ 150 ಟನ್‌ ಎಂಜಿನ್‌ ಆಯಿಲ್‌ ಬಿದ್ದಿದ್ದು, ಇದರಿಂದ ಪರಿಸರದ ಮೇಲೂ ಪರಿಣಾಮ ಬೀರಲಿದೆ. ನೀರು ಕುಡಿದವರಿಗೆ ಅಪಾಯ ತಪ್ಪಿದ್ದಲ್ಲ ಎಂಬ ಎಚ್ಚರಿಕೆ ನೀಡಲಾಗಿದೆ.

ಡ್ಯಾಮ್‌ ಮೇಲೆ ರಷ್ಯಾ ದಾಳಿ?

ಒಂದು ವರ್ಷಕ್ಕೂ ಅಧಿಕ ಸಮಯದಿಂದ ನಿರಂತರವಾಗಿ ಉಕ್ರೇನ್‌ ಮೇಲೆ ದಾಳಿ ಮಾಡುತ್ತಿರುವ ರಷ್ಯಾವೇ ನೋವಾ ಕಖೋವಾ ಡ್ಯಾಮ್‌ ಮೇಲೂ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ ರಷ್ಯಾ ಮೇಲೆ ಉಕ್ರೇನ್‌ ಆರೋಪ ಮಾಡಿದೆ. ರಷ್ಯಾ ಮಾತ್ರ ಇಂತಹ ಕ್ರೌರ್ಯ ಮೆರೆಯಲು ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಆದರೆ, ಡ್ಯಾಮ್‌ ಮೇಲಿನ ದಾಳಿಯನ್ನು ರಷ್ಯಾ ನಿರಾಕರಿಸಿದೆ. ಉಕ್ರೇನ್‌ ತಾನೇ ದಾಳಿ ಮಾಡಿ, ನಮ್ಮ ಮೇಲೆ ಆರೋಪ ಮಾಡುತ್ತಿದೆ ಎಂದು ರಷ್ಯಾ ಹೇಳಿದೆ. ದಾಳಿಯ ಬಳಿಕವೂ ಎದೆಗುಂದದ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್‌ಸ್ಕಿ, ಡ್ಯಾಮ್‌ ಮೇಲೆ ದಾಳಿಯಾದರೂ ಮಿಲಿಟರಿ ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದು ರಷ್ಯಾಗೆ ತಿರುಗೇಟು ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ಏಕಾದಶಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಶುಕ್ರವಾರ ಕನ್ಯಾ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ ಮತ್ತು ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ವೃಷಭ ರಾಶಿಯವರು ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತರು ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಸಿಂಹ ರಾಶಿಯವರು ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗುವರು. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (19-04-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.
ತಿಥಿ: ಏಕಾದಶಿ 20:04 ವಾರ: ಶುಕ್ರವಾರ
ನಕ್ಷತ್ರ: ಮಘಾ 10:55 ಯೋಗ: ವೃದ್ಧಿ 25:43
ಕರಣ: ವಣಿಜ 06:46 ಅಮೃತಕಾಲ: ಬೆಳಗ್ಗೆ 08:15 ರಿಂದ 10:03
ದಿನದ ವಿಶೇಷ: ಬೇಲೂರು ಚೆನ್ನಕೇಶವ ರಥ, ಶುಕ್ರ ಜಯಂತಿ, ಸರ‍್ವೇಷಾಮೇಕಾದಶಿ

ಸೂರ್ಯೋದಯ : 06:05   ಸೂರ್ಯಾಸ್ತ : 06:33

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಈ ಹಿಂದೆ ಮಾಡಿದ ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಲಾಭ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹಕಾರ ಸಿಗಲಿದೆ. ಸಭೆ- ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವೃಷಭ: ಒತ್ತಡವನ್ನು ನಿವಾರಿಸಲು ವ್ಯಸನಗಳಿಗೆ ಬಲಿಯಾಗುವುದು ಬೇಡ, ಅಧ್ಯಾತ್ಮದ ಹಾದಿ ಸಮಾಧಾನ ನೀಡುವುದು. ಕುಟುಂಬದ ಆಪ್ತರು ಸ್ನೇಹಿತರಿಂದ ಆರ್ಥಿಕ ಸಹಾಯ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

Horoscope Today

ಮಿಥುನ: ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಇತರರನ್ನು ಆಕರ್ಷಿಸುತ್ತಿರಿ. ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಇಂದು ಎಂದು ಸಿಗದ ಉತ್ಸಾಹ, ನೆಮ್ಮದಿ, ಸಂತೋಷ ಸಿಗುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಬದುಕಿನ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕಟಕ: ಅನೇಕ ಒತ್ತಡಗಳಿಂದ ಮುಕ್ತರಾಗುವಿರಿ. ಸಾಲದ ಮರುಪಾವತಿಯಾಗಿ ಆರ್ಥಿಕವಾಗಿ ಬಲಗೊಳ್ಳುವಿರಿ.ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಸಂಗಾತಿಯ ಮಧುರ ಮಾತುಗಳು ಕುಟುಂಬದಲ್ಲಿ ಭರವಸೆಯನ್ನು ಹೆಚ್ಚಿಸಲಿದೆ. ಆರೋಗ್ಯ ಪರಿಪೂರ್ಣ.ಕೌಟುಂಬಿಕ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಕುಟುಂಬದ ಆಪ್ತರಿಂದ ಸಹಾಯ ಸಹಕಾರ ಸಿಗಲಿದೆ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಭರವಸೆಯ ಹೊಸ ಅವಕಾಶಗಳು ಸಿಗಲಿದೆ. ನಿಮ್ಮನ್ನು ದ್ವೇಷಿಸುವ ಜನರೇ ನಿಮ್ಮ ಸ್ನೇಹಿತರಾಗಿ ಪರಿವರ್ತನೆ ಆಗುವರು. ಅಂದುಕೊಂಡ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕನ್ಯಾ: ಉತ್ಸಾಹದಿಂದ ಇರುವಿರಿ. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹಣಕಾಸು ಪ್ರಗತಿ ಉತ್ತಮವಾಗಿರಲಿದೆ. ಕುಟುಂಬದಲ್ಲಿ ಪರಸ್ಪರರ ಸಾಮರಸ್ಯ ಮೂಡಲಿದೆ‌. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಅತಿಯಾದ ಒತ್ತಡದಿಂದ ಮಾನಸಿಕ ಚಿಂತೆ ಕಾಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವಿನಾಕಾರಣ ಅಪರಿಚಿತರೊಂದಿಗೆ ಕಲಹವಾಗುವ ಸಾಧ್ಯತೆ ಇದೆ. ಮಾತಿನ ಮೇಲೆ ಹಿಡಿತವಿರಲಿ. ಉದ್ಯೋಗದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ರಹಸ್ಯ ಕಾರ್ಯಗಳು ಸಹ ಯಶಸ್ಸನ್ನು ನೀಡಲಿದೆ. ಮಾತುಗಳು ಮಥಿಸಿ ಕಲಹವು ಸಂಬಂಧಿಗಳ ಮಧ್ಯೆ ಬಿರುಕು ಮೂಡುವ ಸಾಧ್ಯತೆ ಇದೆ. ಕೌಶಲ್ಯಕ್ಕ ತಕ್ಕ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಆಪ್ತರ ಬೆಂಬಲ ಸಿಗಲಿದೆ. ಇತರ ಕೆಲಸ ಕಾರ್ಯಗಳಲ್ಲಿ ಸಹಾಯ ಮಾಡುವಿರಿ. ದಿನದ ಕೊನೆಯಲ್ಲಿ ಯಾರೊಂದಿಗೂ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಹಿಂದೆ ಮಾಡಿರುವ ಧನ ಸಹಾಯ ಇಂದು ತಮಗೆ ಮರಳುವ ಸಾಧ್ಯತೆ ಇದೆ. ಅಲ್ಪಸಮಯದ ಕೋಪ ನಿಮ್ಮ ಮನಸ್ಥಿತಿ ಹಾಳುಮಾಡುವ ಸಾಧ್ಯತೆ ಇದೆ, ಆದರಿಂದ ಶಾಂತವಾಗಿರಿ. ಸೂಕ್ತ ವ್ಯಕ್ತಿಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗದಲ್ಲಿ ಸ್ವಲ್ಪ ಮಟ್ಟಿಗೆ ಒತ್ತಡ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ಮನೋರಂಜನೆಯಿಂದಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ.ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ಸಿಗಲಿದೆ. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮೌನವಾಗಿರುವುದು ಉತ್ತಮ. ಆರೋಗ್ಯ ಉತ್ತಮ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಸಂಗಾತಿಯಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

IPL 2024 : ಪಂಜಾಬ್​ ತಂಡಕ್ಕೆ ವಿರೋಚಿತ 9 ರನ್ ಸೋಲು, ಜಯದ ಹಳಿಗೆ ಮರಳಿದ ಮುಂಬೈ

IPL 2024: ಟಾಸ್​ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಮುಂಬಯಿ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 192 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಂಜಾಬ್​ 19.1 ಓವರ್​ಗಳಲ್ಲಿ 183 ರನ್​ಗೆ ಆಲ್​ಔಟ್​ ಆಗಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ಮಲ್ಲಾನ್​ಪುರ: ಅಶುತೋಷ್​ ಶರ್ಮಾ (61 ರನ್​, 28 ಎಸೆತ, 2 ಫೋರ್​, 7 ಸಿಕ್ಸರ್​), ಶಶಾಂಕ್ ಸಿಂಗ್​ (25 ಎಸೆತ, 41 ರನ್​, 2 ಫೋರ್​, 3 ಸಿಕ್ಸರ್​ ಮಧ್ಯಮ ಕ್ರಮಾಂಕದಲ್ಲಿ ದಿಟ್ಟ ಹೋರಾಟ ನಡೆಸಿದ ಹೊರತಾಗಿಯೂ ಅಗ್ರ ಕ್ರಮಾಂಕದ ಬ್ಯಾಟರ್​ಗಳ ತೀವ್ರ ವೈಫಲ್ಯದ ಹಿನ್ನೆಲೆಯಲ್ಲಿ ಪಂಜಾಬ್ ಕಿಂಗ್ಸ್​ ತಂಡ ಐಪಿಎಲ್​ 2024ನೇ (IPL 2024) ಆವೃತ್ತಿಯಲ್ಲಿ ಮತ್ತೊಂದು ಸೋಲಿಗೆ ಒಳಗಾಗಿದೆ. ಮುಂಬಯಿ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ 9 ರನ್​ಗಳ ವಿರೋಚಿತ ಸೋಲಿಗೆ ಒಳಗಾಗಿದೆ. ಪಂಜಾಬ್ ತಂಡಕ್ಕೆ ಇದು ಐದನೇ ಸೋಲಾಗಿದೆ. ಇದೇ ವೇಳೆ ಮುಂಬಯಿ ತಂಡ ಮತ್ತೆ ಗೆಲುವಿನ ಹಳಿಗೆ ಮರಳಿದೆ. ಆಡಿರುವ ಏಳು ಪಂದ್ಯಗಳಲ್ಲಿ ಮುಂಬಯಿಗೆ ದೊರೆತ ಮೂರನೇ ಗೆಲುವು ಇದು.

ಇಲ್ಲಿನ ಮಹಾರಾಜಾ ಯಾದವೀಂದ್ರ ಸಿಂಗ್​ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಮುಂಬಯಿ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 192 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಂಜಾಬ್​ 19.1 ಓವರ್​ಗಳಲ್ಲಿ 183 ರನ್​ಗೆ ಆಲ್​ಔಟ್​ ಆಗಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ: Preity Zinta : ರೋಹಿತ್​ ಶರ್ಮಾಗಾಗಿ ಪ್ರಾಣ ಪಣಕ್ಕಿಡಲು ಸಿದ್ಧ; ಪ್ರೀತಿ ಜಿಂಟಾ ಹೇಳಿಕೆ ಸಿಕ್ಕಾಪಟ್ಟೆ ವೈರಲ್​

ಮೊದಲು ಬ್ಯಾಟ್ ಮಾಡಿದ ಮುಂಬಯಿ ಪರ ಸೂರ್ಯಕುಮಾರ್​ ಅರ್ಧ ಶತಕ (78 ರನ್​) ಬಾರಿಸಿದರು. ಆದರೆ ಅವರ ಸ್ಕೋರ್ ಹೆಚ್ಚು ವೇಗವಾಗಿರಲಿಲ್ಲ. ರೋಹಿತ್ ಶರ್ಮಾ 36 ರನ್ ಬಾರಿಸಿದರೆ ತಿಲಕ್ ವರ್ಮಾ 34 ರನ್​ ಗಳಿಸಿದರು. ಹಾರ್ದಿಕ್ ಪಾಂಡ್ಯ 10 ರನ್ ಗೆ ಸೀಮಿತಗೊಂಡರೆ ಟಿಮ್ ಡೇವಿಡ್​ 14 ರನ್ ಬಾರಿಸಿದರು. ಆರಂಭಿಕ ಆಟಗಾರ ಇಶಾನ್ ಕಿಶನ್​ 8 ರನ್ ಬಾರಿಸಿ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಎದುರಿಸಿದರು.

ಅಶುತೋಷ್​ ಮಿಂಚಿನ ಬ್ಯಾಟಿಂಗ್

ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಪಂಜಾಬ್ ತಂಡ ಆರಂಭ ಹೀನಾಯವಾಗಿತ್ತು. 14 ರನ್​ಗಳಿಗೆ ಪ್ರಮುಖ 4 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಬಿತ್ತು. ಕರ್ರನ್​ 6 ರನ್ ಬಾರಿಸಿದರೆ, ಪ್ರಭ್​ಸಿಮ್ರಾನ್ ಸಿಂಗ್ ಶೂನ್ಯಕ್ಕೆ ಔಟಾದರು. ರೀಲಿ ರೊಸ್ಸೊ ಹಾಗೂ ಲಿಯಾಮ್ ಲಿವಿಂಗ್​ಸ್ಟನ್​ ತಲಾ ಒಂದು ರನ್ ಬಾರಿಸಿ ಔಟಾದರು. ಹರ್ಪ್ರೀತ್ ಸಿಂಗ್​ 13 ರನ್​ಗೆ ಸೀಮಿತಗೊಂಡರು. ಈ ವೇಳೆ ಶಶಾಂಕ್ ಸಿಂಗ್ ವಿಕೆಟ್​ ಪತನವಾಗುವುದನ್ನು ತಪ್ಪಿಸಿ 41 ರನ್ ಬಾರಿಸಿದರು. ಆದರೆ ಸ್ಫೋಟಕ ಬ್ಯಾಟರ್​ ಜಿತೇಶ್ ಶರ್ಮಾ 9 ರನ್​ಗೆ ಸೀಮಿತಗೊಂಡರು.

77 ರನ್​ಗೆ 6 ವಿಕೆಟ್​ಕಳೆದುಕೊಂಡ ಪಂಜಾಬ್​ 100 ರನ್ ಒಳಗೆ ಆಲ್​ಔಟ್ ಆಗುವುದಾಗಿ ಭಾವಿಸಲಾಗಿತ್ತು. ಆದರೆ ಅಶುತೋಷ್​ ಸ್ಟೈಲಿಶ್​ ಬೌಂಡರಿ ಹಾಗೂ ಸಿಕ್ಸರ್​ಗಳ ಮೂಲಕ ಪಂದ್ಯದ ಗತಿಯನ್ನು ಬದಲಾಯಿಸಿದರು. ಪಂಜಾಬ್ ಗೆಲ್ಲುತ್ತದೆ ಎಂಬ ಹಂತಕ್ಕೆ ಹೋಯಿತು. ಈ ವೇಳೆ ಅಶುತೋಷ್​ ಔಟಾದರು. ಜತೆಗೆ ಹರ್ಪ್ರೀತ್ ಬ್ರಾರ್ ಕೂಡ ಔಟಾದರು. ಕೊನೆಯಲ್ಲಿ ರಬಾಡ ಗೆಲ್ಲಿಸುವರೆಂಬ ಆಶಾಭಾವ ಉಂಟಾಗಿತ್ತು. ಆದರೆ ಅವರು ರನ್ಔಟ್ ಆದರು.

ಮುಂಬಯಿ ಪರ ಬುಮ್ರಾ ಹಾಗೂ ಕೋಜಿ ತಲಾ 3 ವಿಕೆಟ್​ ಉರುಳಿಸಿದರು.

Continue Reading

ದೇಶ

Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Physical Abuse : ಅವರು ತಂಗಿದ್ದ ಕ್ಯಾಂಪ್​ನಲ್ಲಿ ನಡೆದ ಘಟನೆಯ ಭೀಕರತೆಯನ್ನು ವಿವರಿಸಲಾಗಿದೆ. ಸ್ಥಳವನ್ನು ವೀಡಿಯೊ ಬಹಿರಂಗಪಡಿಸಿದೆ. ದಂಪತಿ ಹಗಲು ಹೊತ್ತಿನಲ್ಲಿ ತಾವು ಭೇಟಿಯಾದ ವ್ಯಕ್ತಿಗಳೊಂದಿಗಿನ ನಡೆಸಿದ ಸಂಭಾಷಣೆಯನ್ನೂ ಬಹಿರಂಗ ಮಾಡಿದ್ದಾರೆ. ಅವರಲ್ಲಿ ಇಬ್ಬರು ಮಹಿಳೆಯನ್ನು ಅತ್ಯಾಚಾರ ಮಾಡಿದವರಾಗಿದ್ದಾರೆ.

VISTARANEWS.COM


on

Physical Abuse
Koo

ರಾಂಚಿ: ಜಾರ್ಖಂಡ್​ನ ದುಮ್ಕಾ ಜಿಲ್ಲೆಯಲ್ಲಿ ಸ್ಪೇನ್​ನಿಂದ ಬಂದಿದ್ದ ಪ್ರವಾಸಿ ಮಹಿಳೆಯೊಬ್ಬಳ ಮೇಲೆ ಏಳು ಜನರು ಸಾಮೂಹಿಕ ಅತ್ಯಾಚಾರ (Physical Abuse) ಎಸಗಿದ ಭಯಾನಕ ಘಟನೆ ನಡೆದಿದೆ. ಈ ಘಟನೆ ಮಾರ್ಚ್​ನಲ್ಲಿ ನಡೆದಿದೆ. ಮಹಿಳೆ ಹಾಗೂ ಆಕೆಯ ಪತಿ ಆಘಾತಕಾರಿ ಘಟನೆಗ ಮತ್ತು ನಂತರದ ವಿವರಗಳನ್ನು ದಾಖಲಿಸುವ ವೀಡಿಯೊವೊಂದನ್ನು ತಮ್ಮ ದೇಶಕ್ಕೆ ಮರಳಿದ ಬಳಿಕ ಬಿಡುಗಡೆ ಮಾಡಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ವಿವರ ನೀಡಿದ್ದು, ಭಾರತದಲ್ಲಿ ಆಗಿರುವ ಕಹಿಘಟನೆಯನ್ನು ವಿವರಿಸಿದ್ದಾರೆ.

ವಿಡಿಯೊದ ಆರಂಭದಲ್ಲಿ ದಂಪತಿ “ಈ ಸುದೀರ್ಘ ಅಧ್ಯಾಯದ ನಂತರ ನಾವು ಈ ಅಹಿತಕರ ಹಂತವನ್ನು ದಾಟಿದ್ದೇವೆ. ಮತ್ತೆ ನಮ್ಮ ಪ್ರವಾಸ ಆರಂಭಿಸುತ್ತೇವೆ. ಆದರೆ ನಮಗಿದು ಮರುಹುಟ್ಟು. ನಾವು ಇದುವರೆಗೆ ಪಡೆದ ಈ ವಿರಾಮಕ್ಕೆ ಕಾರಣವಿದೆ ಎಂದು ಹೇಳಿ ಭಾರತದಲ್ಲಿ ಆದ ಘಟನೆಗಳನ್ನು ವಿವರಿಸಿದ್ದಾರೆ. ಅಲ್ಲದೆ, ಇಂದಿನಿಂದ ನಾವು ವಾರಕ್ಕೊಮ್ಮೆ ನಮ್ಮ ವೀಡಿಯೊಗಳನ್ನು ಪೋಸ್ಟ್ ಮಾಡುವುದನ್ನು ಮುಂದುವರಿಸಲು ಪ್ರಯತ್ನಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಅವರಿಬ್ಬರೂ ಯೂಟ್ಯೂಬರ್​ಗಳಾಗಿದ್ದು ಬೈಕ್​ ಮೂಲಕ ಹಲವು ದೇಶಗಳನ್ನು ಸುತ್ತುತ್ತಿರುತ್ತಾರೆ.

ಅವರು ತಂಗಿದ್ದ ಕ್ಯಾಂಪ್​ನಲ್ಲಿ ನಡೆದ ಘಟನೆಯ ಭೀಕರತೆಯನ್ನು ವಿವರಿಸಲಾಗಿದೆ. ಸ್ಥಳದಲ್ಲಿದ್ದ ವೇಳೆ ಚಿತ್ರೀಕರಿಸಿದ ವೀಡಿಯೊ ಬಹಿರಂಗಪಡಿಸಿದ್ದಾರೆ. ದಂಪತಿ ಹಗಲು ಹೊತ್ತಿನಲ್ಲಿ ತಾವು ಭೇಟಿಯಾದ ವ್ಯಕ್ತಿಗಳೊಂದಿಗಿನ ನಡೆಸಿದ ಸಂಭಾಷಣೆಯನ್ನೂ ಬಹಿರಂಗ ಮಾಡಿದ್ದಾರೆ. ಅವರಲ್ಲಿ ಇಬ್ಬರು ಮಹಿಳೆಯನ್ನು ಅತ್ಯಾಚಾರ ಮಾಡಿದವರಾಗಿದ್ದಾರೆ.

ದಂಪತಿ ಅತ್ಯಾಚಾರ ಮಾಡಿದವರಲ್ಲಿ ಒಬ್ಬನ ಗುರುತನ್ನು ಬಹಿರಂಗಪಡಿಸಿದ್ದಾರೆ. ಮಹಿಳೆ ಕಡಲೆಕಾಯಿ ತಿನ್ನುತ್ತಿದ್ದಾಗ ಆ ವ್ಯಕ್ತಿ ಮಾತನಾಡಿಸಿದ್ದ. ಅಲ್ಲದೆ ಅವರ ಜತೆ ಅನುಚಿತವಾಗಿ ವರ್ತಿಸಿದ್ದ. ಬಳಿಕ ದಂಪತಿ ಆ ಪ್ರದೇಶವನ್ನು ತೊರೆದು ಕೆಲವು ಗಂಟೆಗಳ ನಂತರ ತಮ್ಮ ಕ್ಯಾಂಪ್​ಗೆ ಮರಳಿದ್ದರು. ಅವರು ತಂಗಿದ್ದ ಜಾಗ ನಿರ್ಜನವಾಗಿತ್ತು. ಆ ಬಳಿಕ ಅವರು ‘ತಮ್ಮ ಜೀವನದ ಭಯಾನಕ 3 ಗಂಟೆಗಳನ್ನು’ ನೆನಪಿಸಿಕೊಂಡಿದ್ದಾರೆ. “ರಾತ್ರಿ 8 ಗಂಟೆಗೆ ಪ್ರಾರಂಭವಾದ ತೊಂದರೆ ರಾತ್ರಿ 11 ಗಂಟೆಗೆ ಕೊನೆಗೊಂಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

“ನಾನು ಏನು ಮಾಡಬೇಕೆಂದು ಆ ವೇಳೆ ನನಗೆ ತಿಳಿಯಲಿಲ್ಲ. ಪತ್ನಿ ಪೊದೆಯ ಮಧ್ಯೆ ಬಿದ್ದಿದ್ದಳು. ನಾನು ಎದ್ದು ಅವಳ ಬಳಿ ಓಡಿದೆ ಎಂದು ಪತಿ ವಿಡಿಯೊದಲ್ಲಿ ಹೇಳಿದ್ದಾರೆ. ನಂತರ ಇಬ್ಬರೂ ಆಸ್ಪತ್ರೆಗೆ ತೆರಳಿದೆವು ಏಳು ಜನರು ಅವಳ ಮೇಲೆ ಹಲವಾರು ಬಾರಿ ಅತ್ಯಾಚಾರ ಮಾಡಿದ್ದರು. ಅವರು ಅವಳನ್ನು ಹೊಡೆದಿದ್ದರು.. ಅವರು ನನಗೂ ಹೆಲ್ಮೆಟ್​ನಿಂದ ಹಲವು ಬಾರಿ ಹೊಡಿದಿದ್ದಾರೆ. ಕಲ್ಲುಗಳಿಂದ ಹಲ್ಲೆ ನಡೆಸಿದರು” ಎಂದು ಸಂತ್ರಸ್ತೆಯ ಪತಿ ಹೇಳಿದ್ದಾರೆ.

ನಂತರ ಅವರು ಪೊಲೀಸ್ ರಕ್ಷಣೆ ಪಡೆದು ಮೂರು ದಿನಗಳ ಕಾಲ ಇದ್ದರು. ನಾವು ಮುಂದುವರಿಯಲಿದ್ದೇವೆ, ವಿಧಿ ನಮಗೆ ಎರಡನೇ ಅವಕಾಶವನ್ನು ನೀಡಿದೆ. ನಾವು ಸಾವನ್ನು ಹತ್ತಿರದಿಂದ ನೋಡಿದ್ದೇವೆ ಎಂದು ಅವರು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಾರ್ಖಂಡ್ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ. ಇದಲ್ಲದೆ, ಸಂತ್ರಸ್ತೆಯ ಪತಿಗೆ ಪೊಲೀಸರು 10 ಲಕ್ಷ ರೂ.ಗಳ ಪರಿಹಾರವನ್ನು ಸಹ ನೀಡಿದ್ದಾರೆ.

Continue Reading

ದೇಶ

Amanatullah Khan: ಆಪ್‌ಗೆ ಮತ್ತಷ್ಟು ಸಂಕಷ್ಟ; ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್‌

Amanatullah Khan: ದೆಹಲಿ ಅಬಕಾರಿ ನೀತಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ಒಂದು ತಿಂಗಳೊಳಗೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಅರೆಸ್ಟ್‌ ಮಾಡಲಾಗಿದೆ. ದೆಹಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಶಾಸಕರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Amanatullah Khan
Koo

ನವದೆಹಲಿ: ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷ (AAP)ಕ್ಕೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ದೆಹಲಿ ಅಬಕಾರಿ ನೀತಿ ಹಗರಣ (Delhi Liquor Scam)ದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಬಂಧಿಸಿದ ಒಂದು ತಿಂಗಳೊಳಗೆ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ (Amanatullah Khan) ಅವರನ್ನು ಜಾರಿ ನಿರ್ದೇಶನಾಲಯ (Enforcement Directorate) ವಶಕ್ಕೆ ತೆಗೆದುಕೊಂಡಿದೆ. ದೆಹಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ (Waqf Board-linked money laundering case) ಸಂಬಂಧಿಸಿದಂತೆ ಶಾಸಕರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಏನಿದು ಪ್ರಕರಣ?

ದೆಹಲಿ ವಕ್ಫ್ ಬೋರ್ಡ್ ಹಗರಣದಲ್ಲಿನ ಅಕ್ರಮ ಹಣ ವರ್ಗಾವಣೆ ಹಾಗೂ ಅಕ್ರಮ ನೇಮಕಾತಿ ಕುರಿತು ತನಿಖೆ ನಡೆಸುತ್ತಿರುವ ಇ.ಡಿ ಅಧಿಕಾರಿಗಳು ಇದೀಗ ಆಪ್ ನಾಯಕನನ್ನು ಬಂಧಿಸಿದೆ. ಸತತ 9 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇ.ಡಿ ಅಧಿಕಾರಿಗಳು ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಂಧನಕ್ಕೂ ಮುನ್ನ ಖಾನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೊ ಸಂದೇಶವನ್ನು ಪೋಸ್ಟ್ ಮಾಡಿದ್ದು ಅದರಲ್ಲಿ, ʼʼಜೈಲಿನಲ್ಲಿರುವ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಸಾಕ್ಷಿ ಹೇಳಲು ಏಜೆನ್ಸಿ ಬಯಸಿದೆʼʼ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಶಾಸಕರ ನಿವಾಸದ ಮೇಲೆ ದಾಳಿ ನಡೆಸಿದ್ದ ಇ.ಡಿ ದೆಹಲಿ ವಕ್ಫ್ ಮಂಡಳಿಯಲ್ಲಿ ಸಿಬ್ಬಂದಿಯನ್ನು ಅಕ್ರಮವಾಗಿ ನೇಮಕ ಮಾಡುವ ಮೂಲಕ ಖಾನ್ ಅಪಾರ ಪ್ರಮಾಣದ ಹಣವನ್ನು ನಗದು ರೂಪದಲ್ಲಿ ಗಳಿಸಿದ್ದಾರೆ ಮತ್ತು ತಮ್ಮ ಸಹವರ್ತಿಗಳ ಹೆಸರಿನಲ್ಲಿ ಸ್ಥಿರಾಸ್ತಿಗಳನ್ನು ಖರೀದಿಸಲು ಹೂಡಿಕೆ ಮಾಡಿದ್ದಾರೆ ಎಂದು ಹೇಳಿತ್ತು. ಇ.ಡಿ ಅಧಿಕಾರಿಗಳ ತನಿಖೆ ಚುರುಕುಗೊಳ್ಳುತ್ತಿದ್ದಂತೆ ಖಾನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಕುರಿತು ಮಧ್ಯಪ್ರವೇಶಿಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಬಳಿಕ ಇ.ಡಿ ಅಧಿಕಾರಿಗಳು ಖಾನ್ ಅವರ ವಿಚಾರಣೆ ನಡೆಸಿದ್ದರು. ಹಲವು ಗಂಟೆಗಳ ಕಾಲ ವಿಚಾರಣೆ ಮುಂದುವರಿದಿತ್ತು. ಕೊನೆಗೆ ಅಮಾನತುಲ್ಲಾ ಖಾನ್ ಅವರನ್ನು ಬಂಧಿಸಲಾಗಿದೆ.

ಅಮಾನತುಲ್ಲಾ ಖಾನ್‌ ಬಂಧನಕ್ಕೂ ಮುನ್ನ ಆಪ್‌ ಸಂಸದ ಸಂಜಯ್ ಸಿಂಗ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮೋದಿ ಸರ್ಕಾರ ಆಪರೇಷನ್ ಕಮಲದಲ್ಲಿ ಸಂಪೂರ್ಣವಾಗಿ ಭಾಗಿಯಾಗಿದೆ ಮತ್ತು ಸಚಿವರು ಮತ್ತು ಶಾಸಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಅವರನ್ನು ಬಂಧಿಸಲಾಗುತ್ತಿದೆ ಎಂದು ಆರೋಪಿಸಿದ್ದರು. “ಅಮಾನತುಲ್ಲಾ ಖಾನ್‌ ವಿರುದ್ಧ ಆಧಾರರಹಿತ ಪ್ರಕರಣ ದಾಖಲಿಸುವ ಮೂಲಕ ಅವರನ್ನು ಬಂಧಿಸಲು ಇ.ಡಿ ಸಿದ್ಧತೆ ನಡೆಸುತ್ತಿದೆ. ಸರ್ವಾಧಿಕಾರ ಶೀಘ್ರದಲ್ಲೇ ಕೊನೆಗೊಳ್ಳುತ್ತದೆ. ನಾನು ಅವರ ಕುಟುಂಬವನ್ನು ಭೇಟಿಯಾಗಲಿದ್ದೇನೆ” ಎಂದು ಸಿಂಗ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.

ಅಮಾನತುಲ್ಲಾ ಖಾನ್‌ ದೆಹಲಿ ವಕ್ಫ್ ಬೋರ್ಡ್ ಮುಖ್ಯಸ್ಥರಾಗಿದ್ದ ವೇಳೆ ಭಾರಿ ಹಗರಣ ನಡೆಸಿದ್ದಾರೆ ಎನ್ನುವ ಆರೋಪದಡಿಯಲ್ಲಿ ತನಿಖೆ ನಡೆಯುತ್ತಿದೆ. ಅಮಾನತುಲ್ಲಾ ಖಾನ್‌ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಆಪ್ ಸಚಿವೆ ಆತೀಷಿ ಹಾಗೂ ನಾಯಕ ಸಂಜಯ್ ಸಿಂಗ್ ಅಮಾನತುಲ್ಲಾ ಖಾನ್‌ ಮನೆಗೆ ತೆರಳಿದ್ದಾರೆ.

ಇದನ್ನೂ ಓದಿ: Arvind Kejriwal : ಅಬಕಾರಿ ಲಂಚ ಪ್ರಕರಣದಲ್ಲಿ ಡೆಲ್ಲಿ ಸಿಎಂ ಅರವಿಂದ್​ ಕೇಜ್ರಿವಾಲ್ ಅರೆಸ್ಟ್​​

Continue Reading
Advertisement
Dina bhavishya
ಭವಿಷ್ಯ47 mins ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Steet Food
ಆಹಾರ/ಅಡುಗೆ6 hours ago

ವಿಸ್ತಾರ ಸಂಪಾದಕೀಯ: ಸಾರ್ವಜನಿಕ ಆಹಾರದಲ್ಲಿ ಆರೋಗ್ಯ ಕಾಳಜಿ ಪ್ರಮುಖವಾಗಿರಲಿ

IPL 2024
ಪ್ರಮುಖ ಸುದ್ದಿ6 hours ago

IPL 2024 : ಪಂಜಾಬ್​ ತಂಡಕ್ಕೆ ವಿರೋಚಿತ 9 ರನ್ ಸೋಲು, ಜಯದ ಹಳಿಗೆ ಮರಳಿದ ಮುಂಬೈ

Physical Abuse
ದೇಶ6 hours ago

Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Amanatullah Khan
ದೇಶ7 hours ago

Amanatullah Khan: ಆಪ್‌ಗೆ ಮತ್ತಷ್ಟು ಸಂಕಷ್ಟ; ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್‌

Moral policing
ಪ್ರಮುಖ ಸುದ್ದಿ7 hours ago

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Rishab Shetty
ಸಿನಿಮಾ7 hours ago

Rishab Shetty: ರಿಷಬ್‌ ಮೀಟ್ಸ್‌ ಮೋಹನ್‌ಲಾಲ್‌; ʼಕಾಂತಾರʼ ಪ್ರೀಕ್ವೆಲ್​ನಲ್ಲಿ ಅಭಿನಯಿಸುತ್ತಾರಾ ಮಾಲಿವುಡ್‌ ಸೂಪರ್‌ ಸ್ಟಾರ್‌?

lok Sabha Election
ಪ್ರಮುಖ ಸುದ್ದಿ7 hours ago

Lok Sabha Election : ಕಾಂಗ್ರೆಸ್​​ಗೆ ಹಿನ್ನಡೆಯಾದರೆ ಸಿದ್ದರಾಮಯ್ಯ ಸ್ಥಾನಕ್ಕೆಕಂಟಕ​​​; ಚರ್ಚೆ ಹುಟ್ಟು ಹಾಕಿದ ಬೈರತಿ ಸುರೇಶ್​ ಹೇಳಿಕೆ

Hubli Murder Case
ಪ್ರಮುಖ ಸುದ್ದಿ8 hours ago

Hubli murder case : ನೇಹಾಳನ್ನು ಕೊಲ್ಲಲೆಂದೇ ಕಾಲೇಜಿಗೆ ಸಜ್ಜಾಗಿ ಬಂದಿದ್ದ ಶಿಕ್ಷಕರ ಪುತ್ರ ಫಯಾಜ್!

congress workers meeting in kudligi
ವಿಜಯನಗರ8 hours ago

Lok Sabha Election 2024: ಬಳ್ಳಾರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಗೆಲ್ಲಿಸಲು ಸಂತೋಷ್‌ ಲಾಡ್‌ ಮನವಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ47 mins ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌