Site icon Vistara News

US Sanction: ಭಾರತೀಯ ಮೂಲದ 3 ಕಂಪನಿಗಳಿಗೆ ಅಮೆರಿಕ ನಿರ್ಬಂಧ

ವಾಷಿಂಗ್ಟನ್‌: ಇರಾನಿಯನ್‌ ಸೇನೆ ಜೊತೆ ಅಕ್ರಮ ವ್ಯಾಪಾರ ವಹಿವಾಟು ಹೊಂದಿರುವ 12ಕ್ಕೂ ಅಧಿಕ ಕಂಪನಿಗಳು, ಹಡುಗುಗಳು ಮತ್ತು ಉದ್ಯಮಿಗಳ ಮೇಲೆ ಅಮೆರಿಕ ನಿರ್ಬಂಧ (US imposes sanctions) ವಿಧಿಸಿದೆ. ಇದರಲ್ಲಿ ಭಾರತ ಮೂರು ಕಂಪನಿಗಳು(Indian based firms) ಸೇರಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ರಷ್ಯಾ-ಉಕ್ರೇನ್‌ ಯುದ್ಧ(Russia Ukraine war) ಸಂದರ್ಭದಲ್ಲಿ ಈ ಕಂಪನಿಗಳು, ಹಡಗುಗಳು ಮತ್ತು ವ್ಯಕ್ತಿಗಳು ಇರಾನ್‌ನ ಮಾನವ ರಹಿತ ವೈಮಾನಿಕ ವಾಹನ- ಡ್ರೋನ್‌(UAVs) ಗಳನ್ನು ರಷ್ಯಾಗೆ ಪೂರೈಕೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದವು ಎಂದು ಅಮೆರಿಕದ ಹೇಳಿದೆ.

ಇನ್ನು ಇರಾನ್‌ನ ಸಾಗರೋತ್ತರ ವ್ಯಾಪಾರ ವಹಿವಾಟು ನೋಡಿಕೊಳ್ಳುತ್ತಿರುವ ಕಂಪನಿಗಳಲ್ಲಿ ಸಹರಾ ಥಂಡರ್‌ ಪ್ರಮುಖವಾಗಿದೆ. ಈ ಕಂಪನಿಗೆ ಭಾರತೀಯ ಮೂಲದ ಮೂರು ಕಂಪನಿಗಳು ಸಹಾಯ ನೀಡುತ್ತಿವೆ. ಹೀಗಾಗಿ ಭಾರತೀಯ ಮೂಲದ ಜೆನ್‌ ಶಿಪ್ಪಿಂಗ್‌, ಪೋರ್ಟ್‌ ಇಂಡಿಯಾ ಪ್ರೈವೆಟ್‌ ಲಿಮಿಟೆಡ್‌ ಮತ್ತು ಸೀ ಆರ್ಟ್‌ ಶಿಪ್‌ ಮ್ಯಾನೇಜ್‌ಮೆಂಟ್‌(OPC) ಪ್ರೈವೆಟ್‌ ಲಿಮಿಟೆಡ್‌ಗೆ ಅಮೆರಿಕ ನಿರ್ಬಂಧ ವಿಧಿಸಿದೆ.

ಸಹಾರಾ ಥಂಡರ್‌ ಕಂಪನಿ ಇರಾನ್‌ ಸೇನೆಯ ಪರವಾಗಿ ಇರಾನಿಯನ್‌ ಸರಕುಗಳನ್ನು ಚೀನಾ, ರಷ್ಯಾ ಮತ್ತು ವೆನೆಜುವೆಲಾಗಳಿಗೆ ಸಾಗಾಟ ಮಾಡುತ್ತಿದೆ. ಇದೀಗ ಈ ಕಂಪನಿ ಯುಎಇ ಮೂಲದ ಸೇಫ್ ಸೀಸ್ ಶಿಪ್ ಮ್ಯಾನೇಜ್‌ಮೆಂಟ್ ಎಫ್‌ಜೆಇನ ಕುಕ್ ಐಲ್ಯಾಂಡ್ಸ್-ಫ್ಲ್ಯಾಗ್ಡ್ ನೌಕೆ CHEM (IMO 9240914) ಗಾಗಿ ಭಾರತ ಮೂಲದ ಝೆನ್ ಶಿಪ್ಪಿಂಗ್ ಮತ್ತು ಪೋರ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡಿದೆ. ಭಾರತ ಮೂಲದ ಸೀ ಆರ್ಟ್ ಶಿಪ್ ಮ್ಯಾನೇಜ್‌ಮೆಂಟ್ (OPC) ಪ್ರೈವೇಟ್ ಲಿಮಿಟೆಡ್ ಮತ್ತು ಯುಎಇ ಮೂಲದ ಕಂಪನಿ ಟ್ರಾನ್ಸ್ ಗಲ್ಫ್ ಏಜೆನ್ಸಿ LLC ಸಹಾರಾ ಥಂಡರ್‌ಗೆ ಬೆಂಬಲವಾಗಿ ಹಡಗು ನಿರ್ವಹಣಾ ಸೇವೆಗಳನ್ನು ಒದಗಿಸಲು ಒಟ್ಟಾಗಿ ಕೆಲಸ ಮಾಡಿದೆ ಎಂದು ಅಮೆರಿಕ ಹೇಳಿದೆ.

ರಷ್ಯಾ-ಉಕ್ರೇನ್‌ ಯುದ್ಧದ ಸಂದರ್ಭದಲ್ಲಿ ಇರಾನ್‌, ರಷ್ಯಾಗೆ ತನ್ನ ಬೆಂಬಲ ಸೂಚಿಸಿತ್ತು. ಅಲ್ಲದೇ ಇದೀಗ ಇಸ್ರೇಲ್‌ ಮೇಲೂ ದಾಳಿ ಮಾಡುವ ಮೂಲಕ ತನ್ನ ಉದ್ದಟತನ ಮೆರೆದಿದೆ. ಡ್ರೋನ್‌, ಯುದ್ಧ ಸಾಮಾಗ್ರಿಗಳು ಉಗ್ರರ ಕೈಗೆ ಸುಲಭವಾಗಿ ಸಿಗುವಂತೆ ಮಾಡುವ ಮೂಲಕ ವಿನಾಶಕಾರಿಯಾಗಿ ಇರಾನ್‌ ಬೆಳೆಯುತ್ತಿದೆ ಎಂದು ಅಮೆರಿಕ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ:China Missile : ಪಾಕಿಸ್ತಾನಕ್ಕೆ ಗುಟ್ಟಾಗಿ ಕ್ಷಿಪಣಿ ಕಳುಹಿಸಿದ ಚೀನಾದ ಎರಡು ಕಂಪನಿಗಳಿಗೆ ಅಮೆರಿಕದ ನಿರ್ಬಂಧ

ಇಸ್ರೇಲ್ ಮೇಲಿನ ಇರಾನ್​ ಮಿಲಿಟರಿ ದಾಳಿಗೆ ಪ್ರತಿಕ್ರಿಯೆಯಾಗಿ ಯುನೈಟೆಡ್ ಸ್ಟೇಟ್ಸ್ ಅಮೆರಿಕ ಮತ್ತು ಯುನೈಟೆಡ್ ಕಿಂಗ್ಡಮ್ ಗುರುವಾರ ವ್ಯಾಪಕ ಕೈಗಾರಿಕೆ ಬೆಂಬಲ ಹಿಂದೆಗೆತ ಸೇರಿದಂತೆ ನಿರ್ಬಂಧಗಳನ್ನು ವಿಧಿಸಿತ್ತು . ಏಪ್ರಿಲ್ 13 ರ ದಾಳಿಯಲ್ಲಿ ಬಳಸಲಾದ ಇರಾನ್​ನ ಮಾನವ ರಹಿತ ಯುದ್ಧ ವಿಮಾನಗಳ ಕಾರ್ಯಾಚರಣೆಯಾಗಿರುವ ಶಹೀದ್​​ಗೆ ಎಂಜಿನ್ ಪೂರೈಕೆಗಳ ಮೇಲೆ ನಿರ್ಬಂಧ ಹೇರಿತ್ತು. ಜತೆಗೆ ಯುಎವಿ (ಮಾನವ ರಹಿತ ಯುದ್ಧ ಡ್ರೊನ್​ಗಳು) ಉತ್ಪಾದನೆಗೆ ನೆರವಾಗುವ 16 ವ್ಯಕ್ತಿಗಳು ಮತ್ತು ಎರಡು ಘಟಕಗಳಿಗೆ ನಿರ್ಬಂಧಗಳನ್ನು ಪ್ರಕಟಿಸಲಾಗಿತ್ತು. ಇರಾನ್​​ನ ಯುಎವಿ ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ಕೈಗಾರಿಕೆಗಳಲ್ಲಿ ಭಾಗಿಯಾಗಿರುವ ಹಲವಾರು ಮಿಲಿಟರಿ ಸಂಸ್ಥೆಗಳು, ವ್ಯಕ್ತಿಗಳು ಮತ್ತು ಘಟಕಗಳಿಗೆ ಯುನೈಟೆಡ್ ಕಿಂಗ್ಡಮ್ ನಿರ್ಬಂಧಗಳನ್ನು ವಿಧಿಸಿದೆ.

Exit mobile version