Viral news: ಭೂಮಿಗೆ ಇನ್ನೊಂದು ಭಾರೀ ತೂತು ಕೊರೆಯಲಿದೆ ಚೀನಾ! - Vistara News

ವಿದೇಶ

Viral news: ಭೂಮಿಗೆ ಇನ್ನೊಂದು ಭಾರೀ ತೂತು ಕೊರೆಯಲಿದೆ ಚೀನಾ!

ಈ ಮೊದಲು ಕ್ಷಿನ್‌ಜಿಯಾಂಗ್‌ ಪ್ರಾಂತ್ಯದಲ್ಲಿ ಕೊರೆದಿದ್ದ ಇಷ್ಟೇ ಆಳದ ಬಾವಿ ಕೊರೆಯುವ ಸಾಧನಗಳ ಶಕ್ತಿ ಪರಿಶೀಲನೆಯ ಪ್ರಾಯೋಗಿಕ ಉದ್ದೇಶ ಹೊಂದಿತ್ತು. ಪ್ರಸ್ತುತ ಸಿಚುಯಾನ್‌ನಲ್ಲಿ ಕೊರೆಯಲಾಗುವ ಈ ಬಾವಿಯ ಉದ್ದೇಶ ನೈಸರ್ಗಿಕ ಅನಿಲದ ಶೋಧ.

VISTARANEWS.COM


on

china drilling
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಮೇ ತಿಂಗಳಲ್ಲಿ ಭೂಮಿಗೆ 10,000 ಮೀಟರ್‌ (10 ಕಿಲೋಮೀಟರ್) ಆಳದ ಭಾರೀ ಬಾವಿಯನ್ನು ಕೊರೆದಿದ್ದ ಚೀನಾ, ಇನ್ನೊಂದು ಅಷ್ಟೇ ಆಳದ ಬಾವಿಯನ್ನು ಮತ್ತೊಮ್ಮೆ ಕೊರೆಯಲು ಹೊರಟಿದೆ. ಈ ಭೂಮಿಯಾಳದಲ್ಲಿರುವ ನೈಸರ್ಗಿಕ ಅನಿಲ ಸಂಪನ್ಮೂಲಕ್ಕೆ ಕನ್ನ ಹಾಕಲು ಮುಂದಾಗಿದೆ.

ಇದನ್ನು ಮಾಡಲು ಹೊರಟಿರುವುದು ಚೀನಾದ ನ್ಯಾಷನಲ್‌ ಪೆಟ್ರೋಲಿಯಂ ಕಾರ್ಪೊರೇಷನ್‌ (CNPC). ಶೆಂಡೊ ಚುವಾಂಕೆ- 1 ಎಂಬ ಹೆಸರಿನ ಈ ಬಾವಿಯನ್ನು ಅದು ಕೊರೆಯಲು ಮುಂದಾಗಿದೆ. ಇದರ ಅಂದಾಜು ಆಳ 10,520 ಮೀಟರ್‌ ಅಥವಾ 6.5 ಮೈಲು. ಈ ಮೊದಲು ಕ್ಷಿನ್‌ಜಿಯಾಂಗ್‌ ಪ್ರಾಂತ್ಯದಲ್ಲಿ ಕೊರೆದಿದ್ದ ಇಷ್ಟೇ ಆಳದ ಬಾವಿ ಕೊರೆಯುವ ಸಾಧನಗಳ ಶಕ್ತಿ ಪರಿಶೀಲನೆಯ ಪ್ರಾಯೋಗಿಕ ಉದ್ದೇಶ ಹೊಂದಿತ್ತು. ಪ್ರಸ್ತುತ ಸಿಚುಯಾನ್‌ನಲ್ಲಿ ಕೊರೆಯಲಾಗುವ ಈ ಬಾವಿಯ ಉದ್ದೇಶ ನೈಸರ್ಗಿಕ ಅನಿಲದ ಶೋಧ.

ಚೀನಾದ ಸಿಚುಯಾನ್‌ ಪ್ರಾಂತ್ಯದಲ್ಲಿ ಹಲವು ಅನಿಲ ಬಾವಿಗಳಿವೆ. ಮನೋಹರ ಪರ್ವತಗಳನ್ನೂ ಇದು ಹೊಂದಿದೆ. ಇಲ್ಲಿ ತೈಲ ಬಾವಿ ಕೊರೆಯುವುದು ಭೌಗೋಳಿಕ ಸವಾಲು ಕೂಡ ಆಗಿದೆ. ಇತ್ತೀಚಿನ ದಿನಗಳಲ್ಲಿ ಇಂಧನ ಸ್ವಾವಲಂಬನೆಗಾಗಿ ಚೀನಾ ಸರ್ಕಾರ ಅಲ್ಲಿನ ಇಂಧನ ಕಂಪನಿಗಳ ಮೇಲೆ ಹೆಚ್ಚಿನ ಒತ್ತಡ ಹೇರುತ್ತಿದೆ. ಜಾಗತಿಕ ತೈಲ ಬೆಲೆಯಲ್ಲಿನ ಏರಿಳಿತಗಳ ಪರಿಣಾಮವನ್ನು ತಪ್ಪಿಸಲು ಈ ಕ್ರಮ ಎಂದಿದೆ.

ಅತ್ಯಂತ ಆಳದ ಬಾವಿಯನ್ನು ಕೊರೆದ ದಾಖಲೆ ರಷ್ಯಾದ ಹೆಸರಿನಲ್ಲಿದೆ. ವಾಯುವ್ಯ ರಷ್ಯಾದ ಕೋಲಾ ಸೂಪರ್‌ಡೀಪ್‌ ಬೋರ್‌ಹೋಲ್‌ನ ಆಳ 12,262 ಮೀಟರ್.‌

ಇದನ್ನೂ ಓದಿ: Viral Post: ಕಲ್ಲು ತಿನ್ನುವ ಸಮಯ: ಚೀನಾದ ಈ ಕಲ್ಲಿನಡುಗೆ ವಿಶ್ವದ ಅತ್ಯಂತ ಕಠಿಣ ಅಡುಗೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Azam Cheema: 2008ರ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ ಅಜಮ್‌ ಚೀಮಾ ಸಾವು

Azam Cheema: ಲಷ್ಕರ್‌-ಎ-ತೊಯ್ಬಾ (Lashkar-e-Taiba) ನಾಯಕ, 2008ರ ಮುಂಬೈಯ ಭಯೋತ್ಪಾದನಾ ದಾಳಿಯ ಪ್ರಮುಖ ರೂವಾರಿ ಅಜಮ್‌ ಚೀಮಾ ಪಾಕಿಸ್ತಾನದ ಫೈಸಲಾಬಾದ್‌ ನಗರದಲ್ಲಿ ಸಾವನ್ನಪ್ಪಿದ್ದಾನೆ.

VISTARANEWS.COM


on

mumbai attack
Koo

ನವದೆಹಲಿ: ಲಷ್ಕರ್‌-ಎ-ತೊಯ್ಬಾ (Lashkar-e-Taiba) ನಾಯಕ, 2008ರ ಮುಂಬೈಯ ಭಯೋತ್ಪಾದನಾ ದಾಳಿಯ ಪ್ರಮುಖ ರೂವಾರಿ ಅಜಮ್‌ ಚೀಮಾ (Azam Cheema) ಪಾಕಿಸ್ತಾನದ ಫೈಸಲಾಬಾದ್‌ ನಗರದಲ್ಲಿ ಸಾವನ್ನಪ್ಪಿದ್ದಾನೆ ಎಂದು ಮೂಲಗಳು ತಿಳಿಸಿವೆ. 2006ರ ಮುಂಬೈ ರೈಲು ಸ್ಫೋಟದ ಮಾಸ್ಟರ್‌ ಮೈಂಡ್‌ ಕೂಡ ಆಗಿದ್ದ ಅಜಮ್‌ ಚೀಮಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಆತನಿಗೆ 70 ವರ್ಷ ವಯಸ್ಸಾಗಿತ್ತು.

ಕ್ರೂರ ಕೃತ್ಯ ಒಂದೆರಡಲ್ಲ

ಅಜಮ್‌ ಚೀಮಾ 2008ರಲ್ಲಿ ಬಹವಾಲ್‌ಪುರದಲ್ಲಿ ಲಷ್ಕರ್‌ ಕಮಾಂಡರ್‌ ಆಗಿದ್ದ. ಆಗ ಅವನನ್ನು ಝಕಿ-ಉರ್‌-ರೆಹಮಾನ್‌-ಲಖ್ವಿಯ ಕಾರ್ಯಾಚರಣೆಯ ಸಲಹೆಗಾರನನ್ನಾಗಿ ನೇಮಿಸಲಾಗಿತ್ತು. ಆ ವರ್ಷ ಮುಂಬೈಯ ತಾಜ್‌ ಹೋಟೆಲ್‌ ಮೇಲೆ ನಡೆದ ದಾಳಿಯ ಸಂಚು ರೂಪಿಸುವಲ್ಲಿ ಈತ ಪ್ರಧಾನ ಪಾತ್ರ ವಹಿಸಿದ್ದ. ಆ ದಾಳಿಯಲ್ಲಿ ಸುಮಾರು 175 ಮಂದಿ ಮೃತಪಟ್ಟು 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಈ ಘಟನೆಯಲ್ಲಿ ಮೃತಪಟ್ಟವರಲ್ಲಿ ಅಮೆರಿಕನ್ನರೂ ಸೇರಿದ್ದರು. ಹೀಗಾಗಿ ಭಯೋತ್ಪಾದಕರಿಗೆ ತರಬೇತಿ ನೀಡಿದ್ದಕ್ಕಾಗಿ ಈತ ಅಮೆರಿಕಗೂ ಬೇಕಾಗಿದ್ದ ವ್ಯಕ್ತಿಯಾಗಿದ್ದ.

ಇನ್ನು 2006ರಲ್ಲಿ ಮುಂಬೈಯಲ್ಲಿ ನಡೆದ ರೈಲು ಬಾಂಬ್‌ ಸ್ಫೋಟ ಪ್ರಕರಣಕ್ಕೂ ಈತನೇ ಮುಖ್ಯ ಸೂತ್ರಧಾರ ಎನ್ನಲಾಗಿದೆ. ಈ ಘಟನೆಯಲ್ಲಿ ಸುಮಾರು 188 ಮಂದಿ ಮೃತಪಟ್ಟು, 800ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈತನನ್ನು ಭೂಪಟ ತಜ್ಞ ಎಂದೇ ಕರೆಯಲಾಗುತ್ತಿತ್ತು. ಪಾಕಿಸ್ತಾನದಲ್ಲಿ ಆಶ್ರಯ ಪಡೆದುಕೊಂಡಿದ್ದ ಈತ ಸದಾ 6 ಮಂದಿ ಅಂಗರಕ್ಷಕರೊಂದಿಗೆ ಓಡಾಡುತ್ತಿದ್ದ. ಭಯೋತ್ಪಾದಕರಿಗೆ ನಕ್ಷೆಯಲ್ಲಿ ಭಾರತದ ಪ್ರಮುಖ ಸ್ಥಳಗಳನ್ನು ನೋಡಲು ಕಲಿಸಿದ್ದ ಈತ ಸ್ಯಾಟ್‌ಲೈಟ್‌ ಫೋನ್‌ ಮೂಲಕ ಪಾಕಿಸ್ತಾನದಲ್ಲಿಯೇ ಕುಳಿತು ಉಗ್ರರಿಗೆ ಸೂಚನೆ ನೀಡುತ್ತಿದ್ದ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಆಶ್ರಯ ಪಡೆದಿರುವ ಭಯೋತ್ಪಾದಕರ ಪೈಕಿ ಒಬ್ಬೊಬ್ಬರೇ ಸಾಯುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಪಾಕ್‌ ನೆಲದಲ್ಲಿ ಲಷ್ಕರ್‌ ಭಯೋತ್ಪಾದಕರು ನಿಗೂಡವಾಗಿ ಸಾವನ್ನಪ್ಪಿದ್ದರು. ಇದು ಪಾಕಿಸ್ತಾನದ ತಲೆ ನೋವಿಗೆ ಕಾರಣವಾಗಿದೆ. ಈ ಹತ್ಯೆಗಳ ಹಿಂದೆ ಭಾರತದ ಕೈವಾಡವಿದೆ ಎಂದೂ ಅದು ಆರೋಪಿಸಿದೆ. ಆದರೆ ಭಾರತ ಇದನ್ನು ಸ್ಪಷ್ಟವಾಗಿ ನಿರಾಕರಿಸಿದೆ. ಚೀಮಾ ಅಂತ್ಯಕ್ರಿಯೆಯನ್ನು ಫೈಸಲಾಬಾದ್‌ನ ಮಲ್ಖಾನ್‌ವಾಲಾದಲ್ಲಿ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ: Lakhbir Singh: ಸಿಖ್​ ಪ್ರತ್ಯೇಕತವಾದಿ ಸಂಘಟನೆ ಮುಖ್ಯಸ್ಥ ಲಖ್ಬೀರ್ ಸಿಂಗ್ ಸಾವು

ಪಾಕಿಸ್ತಾನದಲ್ಲೇ 306 ಉಗ್ರ ದಾಳಿ; 693 ಮಂದಿ ಸಾವು!

ʼಉಗ್ರರ ಸ್ವರ್ಗ’ ಎನಿಸಿರುವ ಪಾಕಿಸ್ತಾನದಲ್ಲಿ ಉಗ್ರ ಕೃತ್ಯಗಳು ಹೆಚ್ಚಾಗತೊಡಗಿವೆ. 2023ರಲ್ಲಿ ಪಾಕಿಸ್ತಾನದಲ್ಲಿನ ಭಯೋತ್ಪಾದನಾ ಕೃತ್ಯಗಳಲ್ಲಿ ಶೇ. 17ರಷ್ಟು ಏರಿಕೆಯಾಗಿದೆ. ಕಳೆದ ವರ್ಷ ಒಟ್ಟು 306 ಉಗ್ರ ದಾಳಿಗಳು ನಡೆದಿದ್ದು, 693 ಜನರು ಮೃತಪಟ್ಟಿದ್ದಾರೆ. ಒಟ್ಟು ಉಗ್ರ ಚಟುವಟಿಕೆಗಳ ಪೈಕಿ ನಿಷೇಧಿತ ಸಂಘಟನೆಗಳಾದ ಪಾಕಿಸ್ತಾನಿ ತಾಲಿಬಾನ್, ಇಸ್ಲಾಮಿಕ್ ಸ್ಟೇಟ್ ಖೋರಾಸನ್, ಬಲೂಚಿಸ್ತಾನ್ ಲಿಬರೇಷನ್ ಆರ್ಮಿ‌ಗಳಿಂದ ಶೇ. 82ರಷ್ಟು ಕೊಡುಗೆ ಇದೆ ಎಂದು ವರದಿಯೊಂದು ತಿಳಿಸಿದೆ. 23 ಆತ್ಮಹತ್ಯಾ ಬಾಂಬ್ ದಾಳಿಗಳು ಸೇರಿದಂತೆ ಒಟ್ಟು 306 ಭಯೋತ್ಪಾದಕ ದಾಳಿಗಳಲ್ಲಿ 330 ಭದ್ರತಾ ಸಿಬ್ಬಂದಿ, 260 ನಾಗರಿಕರು ಮತ್ತು 103 ಉಗ್ರಗಾಮಿಗಳು ಮೃತರಾಗಿದ್ದಾರೆ. 1,124 ಮಂದಿ ಗಾಯಗೊಂಡಿದ್ದಾರೆ. 

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿದೇಶ

UAE Hindu Temple: ಅಬುಧಾಬಿಯ ಹಿಂದು ದೇಗುಲ ಭಕ್ತರ ಪ್ರವೇಶಕ್ಕೆ ಮುಕ್ತ; ಭೇಟಿ ನೀಡುವ ಮುನ್ನ ಈ ನಿಯಮ ಪಾಲಿಸಿ

UAE Hindu Temple: ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಅಬುಧಾಬಿಯ ಹಿಂದು ದೇಗುಲ ಭಕ್ತರ ಪ್ರವೇಶಕ್ಕೆ ಮುಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಗುಲ ಭಕ್ತರಿಗೆ ಕೆಲವೊಂದು ಸೂಚನೆ ನೀಡಿದೆ.

VISTARANEWS.COM


on

abudabi temple
Koo

ಅಬುಧಾಬಿ: ಕಳೆದ ತಿಂಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸಿದ್ದ ಅಬುಧಾಬಿಯ ಬೋಚಾಸನವಾಸಿ ಅಕ್ಷರ ಪುರುಷೋತ್ತಮ ಸಂಸ್ಥಾ (BAPS) ಮಂದಿರ ಮಾರ್ಚ್‌ 1ರಿಂದ ಸಾರ್ವಜನಿಕ ಪ್ರವೇಶಕ್ಕೆ ಮುಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಯುಎಇಯಲ್ಲಿನ ಹಿಂದು ದೇವಾಲಯ (UAE Hindu Temple) ತನ್ನ ವೆಬ್‌ಸೈಟ್‌ನಲ್ಲಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಯಾವ ರೀತಿಯ ಬಟ್ಟೆ ಧರಿಸಬೇಕು, ಯಾವೆಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎನ್ನುವುದನ್ನು ತಿಳಿಸಿದೆ.

ಡ್ರೆಸ್‌ಕೋಡ್‌

“ಕುತ್ತಿಗೆ, ಮೊಣಕೈ ಮತ್ತು ಪಾದಗಳ ನಡುವಿನ ದೇಹದ ಭಾಗ ಮುಚ್ಚಿರಬೇಕು. ಆಕ್ರಮಣಕಾರಿ ವಿನ್ಯಾಸಗಳನ್ನು ಹೊಂದಿರುವ ಟೋಪಿಗಳು, ಟೀ ಶರ್ಟ್‌ಗಳು ಮತ್ತು ಇತರ ಬಟ್ಟೆಗಳನ್ನು ಅನುಮತಿಸಲಾಗುವುದಿಲ್ಲ. ಅರೆ ಪಾರದರ್ಶಕ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸಬೇಡಿ. ಗಮನವನ್ನು ಬೇರೆಡೆಗೆ ಸೆಳೆಯುವ ಶಬ್ದಗಳು ಅಥವಾ ಪ್ರತಿಬಿಂಬಗಳನ್ನು ಉಂಟು ಮಾಡುವ ಬಟ್ಟೆ ಮತ್ತು ಪರಿಕರಗಳನ್ನು ತಪ್ಪಿಸಿ” ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಈ ನಿಯಮ ಗೊತ್ತಿರಲಿ

ದೇವಾಲಯದ ಒಳಕ್ಕೆ ಸಾಕು ಪ್ರಾಣಿಗಳಿಗೆ ಪ್ರವೇಶವಿಲ್ಲ. ಹೊರಗಿನ ಆಹಾರ ಮತ್ತು ಪಾನೀಯಗಳನ್ನು ದೇವಸ್ಥಾನದ ಸಂಕೀರ್ಣದ ಒಳಗೆ ತರುವಂತಿಲ್ಲ. ಅಲ್ಲದೆ ಡ್ರೋನ್‌ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಪ್ರಕಟಣೆ ಸೂಚಿಸಿದೆ. “ಪ್ರಶಾಂತ ವಾತಾವರಣವನ್ನು ಕಾಪಾಡಿಕೊಳ್ಳಲು ಮತ್ತು ನಮ್ಮ ಆವರಣದ ಕ್ರಮಬದ್ಧ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಈ ಮಾರ್ಗಸೂಚಿಗಳನ್ನು ಅನುಸರಿಸುವುದು ಅಗತ್ಯʼʼ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಬೋಚಾಸನವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ ದುಬೈ– ಅಬುಧಾಬಿ ಶೇಖ್‌ ಜಾಯೆದ್‌ ಹೆದ್ದಾರಿಯ ಅಬು ಮುರೇಖಾದಲ್ಲಿ 27 ಎಕರೆ ಪ್ರದೇಶದಲ್ಲಿ ಸುಮಾರು 700 ಕೋಟಿ ರೂ. ವೆಚ್ಚದಲ್ಲಿ ಈ ಭವ್ಯವಾದ ದೇವಾಲಯವನ್ನು ನಿರ್ಮಾಣ ಮಾಡಿದೆ. ಫೆಬ್ರವರಿ 14ರಂದು ಸುಮಾರು 5,000 ಮಂದಿಯ ಉಪಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ದೇಗುಲವನ್ನು ಉದ್ಘಾಟಿಸಿದ್ದರು. ಮಾರ್ಚ್‌ 1ರಿಂದ ಪ್ರವಾಸಿಗರ ಭೇಟಿಗೆ ಮಂದಿರ ಮುಕ್ತವಾಗಿದ್ದು, ಬೆಳಗ್ಗೆ 8 ಗಂಟೆಯಿಂದ ರಾತ್ರಿ 8ರವರೆಗೆ ದೇವಾಲಯವ ತೆರೆದಿರಲಿದೆ. ಪ್ರತಿ ಸೋಮವಾರ ಮಂದಿರ ಮುಚ್ಚಿರಲಿದೆ.

ಇದನ್ನೂ ಓದಿ: UAE Hindu Temple: ಯುಎಇ ಹಿಂದು ದೇಗುಲದ ಮೂರ್ತಿಗಳು ಹೇಗಿವೆ? ಇಲ್ಲಿವೆ ಫೋಟೊಗಳು

ದೇಗುಲದ ವಿಶೇಷತೆ

ರಾಜಸ್ಥಾನದ ಮಾರ್ಬಲ್‌ಗಳು, ಅಮೃತಶಿಲೆ ಹಾಗೂ ಪಿಂಕ್‌ ಸ್ಯಾಂಡ್‌ಸ್ಟೋನ್‌ಗಳನ್ನು ಬಳಸಿ ದೇವಾಲಯವನ್ನು ನಿರ್ಮಿಸಲಾಗಿದೆ. ಮೂರ್ತಿ, ಗೋಪುರ, ಕಲಾಕೃತಿಗಳಿಗೂ ಇದೇ ಶಿಲೆಗಳನ್ನು ಬಳಸಲಾಗಿದೆ. ಪ್ರತಿಯೊಂದು ಶಿಖರದ ಕೆತ್ತನೆಯು ರಾಮಾಯಣ, ಶಿವಪುರಾಣ, ಭಾಗವತಂ ಹಾಗೂ ಮಹಾಭಾರತದಿಂದ ಸ್ಫೂರ್ತಿ ಪಡೆದಿದೆ. ರಾಜಸ್ಥಾನದಿಂದ ಅಮೃತಶಿಲೆಗಳು, ಪಿಂಕ್‌ ಸ್ಯಾಂಡ್‌ಸ್ಟೋನ್‌ಗಳನ್ನು ಇದಕ್ಕಾಗಿ ಬಳಸಲಾಗಿದೆ. ಯುಎಇಯ ಏಳು ಎಮಿರೇಟ್‌ಗಳನ್ನು ಪ್ರತಿನಿಧಿಸುವ ಏಳು ಗೋಪುರಗಳು ಇಲ್ಲಿವೆ. ಈ ಏಳು ಗೋಪುರಗಳಲ್ಲಿ ರಾಮ, ಶಿವ, ಜಗನ್ನಾಥ, ಕೃಷ್ಣ, ಸ್ವಾಮಿನಾರಾಯಣ, ತಿರುಪತಿ ಬಾಲಾಜಿ ಮತ್ತು ಅಯಪ್ಪ ಸೇರಿದಂತೆ ಹಲವು ದೇವರ ವಿಗ್ರಹಗಳನ್ನು ಕೆತ್ತಲಾಗಿದೆ. ಭಾರತೀಯ ಪುರಾಣಗಳಲ್ಲಿ ಪ್ರಮುಖ ಸ್ಥಾನವನ್ನು ಹೊಂದಿರುವ ಆನೆಗಳು, ಒಂಟೆಗಳು ಮತ್ತು ಸಿಂಹಗಳಂತಹ ಪ್ರಾಣಿಗಳ ಜತೆಗೆ, ಯುಎಇಯ ರಾಷ್ಟ್ರೀಯ ಪಕ್ಷಿ, ಫಾಲ್ಕನ್ ಅನ್ನು ಸಹ ದೇವಾಲಯದ ವಿನ್ಯಾಸದಲ್ಲಿ ಸೇರಿಸಿರುವುದು ವಿಶೇಷ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

ಅಮೆರಿಕದಲ್ಲಿ ಕೋಲ್ಕೊತಾ ಮೂಲದ ನೃತ್ಯಪಟು ಹತ್ಯೆ; ಭಾರತೀಯರ ಪ್ರಾಣಕ್ಕಿಲ್ಲವೇ ಬೆಲೆ?

ಅಮೆರಿಕದಲ್ಲಿ ಅಧ್ಯಯನಕ್ಕೆಂದು ತೆರಳಿರುವ ಭಾರತದ ಸಾಲು ಸಾಲು ವಿದ್ಯಾರ್ಥಿಗಳು ಹತ್ಯೆಗೀಡಾಗುತ್ತಿದ್ದಾರೆ. ಈಗ ಭಾರತ ಮೂಲದ ಮತ್ತೊಬ್ಬ ನೃತ್ಯಪಟುವನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.

VISTARANEWS.COM


on

Amarnath Ghosh
Koo

ವಾಷಿಂಗ್ಟನ್:‌ ಅಮೆರಿಕದಲ್ಲಿ ಭಾರತೀಯರಿಗೆ (Indians) ರಕ್ಷಣೆಯೇ ಇಲ್ಲದಂತಾಗಿದೆ. ಅದರಲ್ಲೂ, ಅಮೆರಿಕದಲ್ಲಿ ಅಧ್ಯಯನಕ್ಕೆಂದು ತೆರಳಿದ ಭಾರತದ ಹಲವು ವಿದ್ಯಾರ್ಥಿಗಳ ಹತ್ಯೆಯಾಗಿದೆ. ಇದರಿಂದಾಗಿ ಭಾರತದಲ್ಲಿರುವ ಪೋಷಕರು ಆತಂಕಕ್ಕೀಡಾಗಿದ್ದಾರೆ. ಇದರ ಬೆನ್ನಲ್ಲೇ, ಅಮೆರಿಕದಲ್ಲಿ ಕೋಲ್ಕೊತಾ ಮೂಲದ ಖ್ಯಾತ ಭರತನಾಟ್ಯ ಹಾಗೂ ಕೂಚಿಪುಡಿ ನೃತ್ಯಪಟು ಅಮರ್‌ನಾಥ್‌ ಘೋಷ್‌ (Amarnath Ghosh) ಅವರು ಹತ್ಯೆಗೀಡಾಗಿದ್ದು, ಅಮೆರಿಕದಲ್ಲಿರುವ ಭಾರತೀಯರು ಭೀತಿಯಲ್ಲಿದ್ದಾರೆ.

ಮಿಸೌರಿಯಲ್ಲಿ ಅಮರ್‌ನಾಥ್‌ ಘೋಷ್‌ ಅವರು ಸಂಜೆ ವಾಯುವಿಹಾರಕ್ಕೆ ಹೋಗಿದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಸೇಂಟ್‌ ಲೂಯಿಸ್‌ನಲ್ಲಿರುವ ವಾಷಿಂಗ್ಟನ್‌ ವಿಶ್ವವಿದ್ಯಾಲಯದಲ್ಲಿ ಅಮರ್‌ನಾಥ್‌ ಘೋಷ್‌ ಅವರು ಮಾಸ್ಟರ್‌ ಆಫ್‌ ಫೈನ್‌ ಆರ್ಟ್ಸ್‌ (MFA) ಅಧ್ಯಯನ ಮಾಡುತ್ತಿದ್ದರು. ಇವರು ಸಂಜೆ ವಾಕಿಂಗ್‌ ಹೋಗಿದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅಮರ್‌ನಾಥ್‌ ಘೋಷ್‌ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೋಲ್ಕೊತಾ ಮೂಲದವರಾದ ಇವರು ಭರತನಾಟ್ಯ ಹಾಗೂ ಕೂಚಿಪುಡಿ ನೃತ್ಯದಲ್ಲಿ ಅಪಾರ ಖ್ಯಾತಿ ಗಳಿಸಿದ್ದಾರೆ.

ಅಮರ್‌ನಾಥ್‌ ಘೋಷ್‌ ನಿಧನದ ಕುರಿತು ಅವರ ಸ್ನೇಹಿತೆ, ನಟಿ ದೇವೋಲೀನಾ ಭಟ್ಟಾಚಾರ್ಜಿ ಅವರು ಮಾಹಿತಿ ನೀಡಿದ್ದಾರೆ. “ನನ್ನ ಸ್ನೇಹಿತ ಅಮರ್‌ನಾಥ್‌ ಘೋಷ್‌ ಅಮೆರಿಕದಲ್ಲಿ ಹತ್ಯೆಗೀಡಾಗಿದ್ದಾನೆ. ಆತನಿಗೆ ಒಂದೇ ಮಗು ಇದೆ. ಮೂರು ವರ್ಷಗಳ ಹಿಂದೆ ತಾಯಿ ತೀರಿಕೊಂಡಿದ್ದಾರೆ. ಅಮರ್‌ನಾಥ್‌ ಘೋಷ್‌ ಬಾಲ್ಯದಲ್ಲಿರುವಾಗಲೇ ತಂದೆ ಅಗಲಿದ್ದಾರೆ. ಅಮೆರಿಕದಲ್ಲಿ ಆತನ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಗೆಳೆಯರ ಹೊರತಾಗಿ ಕುಟುಂಬದಲ್ಲಿ ಯಾರೂ ಇಲ್ಲ. ಭಾರತದ ರಾಯಭಾರ ಕಚೇರಿ, ಪ್ರಧಾನಿ ಹಾಗೂ ಕೇಂದ್ರ ಸಚಿವರು ಆತನ ಶವವನ್ನು ಭಾರತಕ್ಕೆ ತರಲು ವ್ಯವಸ್ಥೆ ಮಾಡಬೇಕು ಎಂಬುದಾಗಿ ಕೋರುತ್ತೇನೆ” ಎಂದು ಭಟ್ಟಾಚಾರ್ಜಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Shoot Out: ಅಮೆರಿಕದಲ್ಲಿ ದುಷ್ಕರ್ಮಿಯ ಗುಂಡಿಗೆ ಬಲಿಯಾದ ಭಾರತ ಮೂಲದ ಸತ್ಯೆನ್ ನಾಯಕ್​

ಅಮೆರಿಕದಲ್ಲಿ ಭಾರತದ ವಿದ್ಯಾರ್ಥಿಗಳ ಮೇಲೆ ದಾಳಿ, ಹತ್ಯೆಗಳು ಇತ್ತೀಚೆಗೆ ಜಾಸ್ತಿಯಾಗುತ್ತಿವೆ. ಕೆಲ ತಿಂಗಳ ಹಿಂದಷ್ಟೇ ಅಮೆರಿಕದಲ್ಲಿ ಭಾರತದ ವರುಣ್‌ ರಾಜ್ ಎಂಬ ವಿದ್ಯಾರ್ಥಿ ಹತ್ಯೆಗೀಡಾಗಿದ್ದ. ವಾಲ್ಪರೈಸೋ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್‌ ಸೈನ್ಸ್‌ ಓದುತ್ತಿದ್ದ ವರುಣ್‌ ರಾಜ್, ಅಕ್ಟೋಬರ್‌ 29ರಂದು ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿದ್ದ. ಇದೇ ವೇಳೆ ಜೋರ್ಡಾನ್‌ ಅಂಡ್ರಾಡೆ (24) ಎಂಬ ಯುವಕನು ಜಿಮ್‌ ಪ್ರವೇಶಿಸಿದ್ದ. ಜಿಮ್‌ ಪ್ರವೇಶಿಸಿದವನೇ ವರುಣ್‌ ರಾಜ್ ಪುಚಾನನ್ನು ಹುಡುಕಿ, ಆತನಿರುವ ಕಡೆ ತೆರಳಿ, ಆತನ ತಲೆಗೆ ಚಾಕು ಇರಿದಿದ್ದ. ಗಂಭೀರವಾಗಿ ಗಾಯಗೊಂಡಿದ್ದ ವರುಣ್‌ ರಾಜ್ ಪುಚಾನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ವರುಣ್‌ ರಾಜ್ ಪುಚಾ ಮೃತಪಟ್ಟಿದ್ದ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

ಅಂಬಾನಿ ಮಗನ ಮದುವೆ ಸಂಭ್ರಮದಲ್ಲಿ ರಿಹಾನಾ; ಶೋಗೆ ಪಡೆಯೋದು ಇಷ್ಟು ಕೋಟಿನಾ? ಅಬ್ಬಾ!

ಮುಕೇಶ್‌ ಅಂಬಾನಿ ಪುತ್ರ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರ ವಿವಾಹಪೂರ್ವ ಸಂಭ್ರಮಕ್ಕೆ ಶುಕ್ರವಾರ ಚಾಲನೆ ದೊರೆತಿದೆ. ಗಣ್ಯರ ದಂಡೇ ಜಾಮ್‌ನಗರದಲ್ಲಿ ನೆರೆದಿದೆ.

VISTARANEWS.COM


on

Rahanna In Anant Ambani Pre Wedding
Koo

ಜಾಮ್‌ನಗರ: ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ, ವಿಶ್ವದ ಶ್ರೀಮಂತರಲ್ಲಿ ಒಬ್ಬರಾದ ಉದ್ಯಮಿ ಮುಕೇಶ್‌ (Mukesh Ambani) ಅಂಬಾನಿ ಪುತ್ರ ಅನಂತ್‌ ಅಂಬಾನಿ (Anant Ambani) ಹಾಗೂ ಉದ್ಯಮಿ ವಿರೇನ್‌ ಮರ್ಚಂಟ್‌ ಅವರ ಪುತ್ರಿ ರಾಧಿಕಾ ಮರ್ಚಂಟ್‌ (Radhika Merchant) ವಿವಾಹ ಪೂರ್ವ ಸಂಭ್ರಮದ ಹಿನ್ನೆಲೆಯಲ್ಲಿ ಗುಜರಾತ್‌ನ ಜಾಮ್‌ನಗರದಲ್ಲಿ ಸ್ವರ್ಗವೇ ಧರೆಗಿಳಿದಿದೆ. ಸಾವಿರಾರು ಗಣ್ಯರ ಆಗಮನದ ಮಧ್ಯೆಯೇ ಅದ್ಧೂರಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಇನ್ನು, ಮೂರು ದಿನಗಳ ಸಂಭ್ರಮಾಚರಣೆಯಲ್ಲಿ ಖ್ಯಾತ ಪಾಪ್‌ ಗಾಯಕಿ ರಿಹಾನಾ (Rihanna) ಅವರ ಲೈವ್‌ ಶೋ ಕೂಡ ಇರಲಿದೆ. ಇದಕ್ಕಾಗಿ ಜಾಗತಿ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ರಿಹಾನಾ ಅವರು ಸುಮಾರು 66-74 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಹೌದು, ಜಗತ್ತಿನ ಯಾವುದೇ ಮೂಲೆಯಲ್ಲಿ ರಿಹಾನಾ ಅವರ ಲೈವ್‌ ಮ್ಯೂಸಿಕ್‌ ಶೋ ನಡೆದರೆ, ಅಲ್ಲೆಲ್ಲ ಲಕ್ಷಾಂತರ ಜನ ಸೇರುತ್ತಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಅವರ ಹಾಡಿಗೆ ಕಿವಿಯಾಗುತ್ತಾರೆ. ಹಾಗಾಗಿ, ಯಾವುದೇ ಶೋಗೆ ಇಡೀ ತಂಡವನ್ನು ಕರೆದುಕೊಂಡು ಹೋಗುವ ರಿಹಾನಾ ಅವರು ಸುಮಾರು 66-74 ಕೋಟಿ ರೂ. ಚಾರ್ಜ್‌ ಮಾಡುತ್ತಾರೆ. ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರ ವಿವಾಹಪೂರ್ವ ಕಾರ್ಯಕ್ರಮದಲ್ಲೂ ಲೈವ್‌ ಶೋಗಾಗಿ ರಿಹಾನಾ ಅವರು ಸುಮಾರು 74 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ರಿಹಾನಾ ಅವರು ಇಡೀ ತಂಡದೊಂದಿಗೆ ಫೆಬ್ರವರಿ 29ರಂದೇ ಭಾರತಕ್ಕೆ ಆಗಮಿಸಿದ್ದಾರೆ. ಅವರ ಲಗೇಜ್‌ 4 ಟ್ರಕ್‌ಗಳಷ್ಟು ಇದೆ ಎಂದು ಕೂಡ ತಿಳಿದುಬಂದಿದೆ. ಲೈವ್‌ ಶೋನಲ್ಲಿ ರಿಹಾನಾ ಅವರು ಅಂಬಾನಿ ಪುತ್ರನ ಮದುವೆ ಪೂರ್ವ ಸಮಾರಂಭದ ವೇಳೆ ಡೈಮಂಡ್ಸ್‌, ಆಲ್‌ ಆಫ್‌ ದಿ ಲೈಟ್ಸ್‌, ವಿ ಫೌಂಟ್‌ ಲವ್‌ ಇನ್‌ ಎ ಹೋಪ್‌ಲೆಸ್‌ ಪ್ಲೇಸ್‌ ಸೇರಿ ಹಲವು ಹಿಟ್‌ ಹಾಡುಗಳನ್ನು ಹಾಡಲಿದ್ದಾರೆ ಎಂದು ತಿಳಿದುಬಂದಿದೆ. ಮಾರ್ಚ್‌ 1ರ ರಾತ್ರಿ ಸೇರಿ ಮೂರು ದಿನವೂ ಅವರ ಲೈವ್‌ ಶೋ ಇರಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಅನಂತ್‌ ಅಂಬಾನಿ ವಿವಾಹಪೂರ್ವ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಸ್ಟಾರ್​ ಕ್ರಿಕೆಟಿಗರು

ಗಣ್ಯರ ದಂಡೇ ಆಗಮನ

ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರ ವಿವಾಹ ಪೂರ್ವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಾಮ್‌ನಗರಕ್ಕೆ ಗಣ್ಯರ ದಂಡೇ ಆಗಮಿಸಿದೆ. ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪುತ್ರಿ ಇವಾಂಕಾ ಟ್ರಂಪ್‌, ವೆಸ್ಟ್‌ ಇಂಡೀಸ್‌ ಕ್ರಿಕೆಟಿಗ ಡ್ವೇನ್‌ ಬ್ರಾವೋ, ಬಾಲಿವುಡ್‌ ನಟರಾದ ಅಕ್ಷಯ್‌ ಕುಮಾರ್‌, ಸುನೀಲ್‌ ಶೆಟ್ಟಿ, ಕ್ರಿಕೆಟಿಗರಾದ ಸೂರ್ಯಕುಮಾರ್‌ ಯಾದವ್‌, ಇಶಾನ್‌ ಕಿಶನ್‌ ಸೇರಿ ಸಾವಿರಾರು ಗಣ್ಯರು ಜಾಮ್‌ನಗರದಲ್ಲಿ ಬೀಡು ಬಿಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
rameshwaram cafe bengaluru incident
ಬೆಂಗಳೂರು3 mins ago

Blast In Bengaluru: ಬೆಂಗಳೂರಿಗರೇ Be alert; ಸಂಶಯ ಬಂದರೆ ಇಲ್ಲಿಗೆ ಕಾಲ್‌ ಮಾಡಿ

Blast in Bengaluru Karnataka is becoming a haven for terrorists under Congress rule says Pralhad Joshi
ಕ್ರೈಂ4 mins ago

Blast in Bengaluru: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕವಾಗುತ್ತಿದೆ ಉಗ್ರರ ಸ್ವರ್ಗ: ಪ್ರಲ್ಹಾದ್‌ ಜೋಶಿ

Narendra Modi
ದೇಶ11 mins ago

ಮ್ಯಾಟ್ರಿಮೋನಿ ಸೇರಿ ಹಲವು ಆ್ಯಪ್‌ಗಳಿಗೆ ಗೂಗಲ್‌ ಕೊಕ್;‌ ಕೇಂದ್ರದ ಮುಂದಿನ ನಡೆ ಏನು?

Yuvraj Singh
ಕ್ರೀಡೆ34 mins ago

Yuvraj Singh: ಲೋಕಸಭಾ ಸ್ಪರ್ಧೆ ಬಗ್ಗೆ ಅಧಿಕೃತ ಮಾಹಿತಿ ನೀಡಿದ ಯುವರಾಜ್​ ಸಿಂಗ್​

Anant Ambani wedding bollywood celebrities Pose
ಬಾಲಿವುಡ್38 mins ago

Anant Ambani: ಅಂಬಾನಿ ಫ್ಯಾಮಿಲಿಯ ಪ್ರಿ-ವೆಡ್ಡಿಂಗ್‌ಗೆ ಬಾಲಿವುಡ್‌ ಸೆಲೆಬ್ರಿಟಿಗಳು ಪೋಸ್‌ ಕೊಟ್ಟಿದ್ದು ಹೀಗೆ!

Share Market
ದೇಶ38 mins ago

Stock Market: ರಜಾ ದಿನವೂ ಸ್ಪೆಷಲ್‌ ಟ್ರೇಡಿಂಗ್, ಸೆನ್ಸೆಕ್ಸ್‌, ನಿಫ್ಟಿ ಅಬ್ಬರ ಜೋರು

Blast in Bengaluru NIA to take over probe into Rameswaram Cafe bomb blast case
ಕ್ರೈಂ45 mins ago

Blast in Bengaluru: ರಾಮೇಶ್ವರಂ ಕೆಫೆ ಬಾಂಬ್‌ ಬ್ಲಾಸ್ಟ್ ಕೇಸ್‌ ತನಿಖೆ NIA ಹೆಗಲಿಗೆ? ಇಂದೇ ಹಸ್ತಾಂತರ!

no abuse
ಕ್ರೈಂ46 mins ago

ಮಾತು ಬಾರದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಗುದ ದ್ವಾರಕ್ಕೆ ಪೆನ್‌ ತುರುಕಿಸಿ ವಿಕೃತಿ ಮೆರೆದ ಸಂಬಂಧಿಕರು

ಕ್ರೀಡೆ1 hour ago

BCCI Annual Contract: ಅಯ್ಯರ್, ಇಶಾನ್​ಗೆ ಗುತ್ತಿಗೆ ಪಟ್ಟಿ ಸೇರಲು ಇನ್ನೂ ಇದೆ ಅವಕಾಶ; ಈ ಷರತ್ತು ಅನ್ವಯ!

Minister MB Patil important meeting with senior officers of Lulu Group
ಕರ್ನಾಟಕ1 hour ago

Bengaluru News: ವಿಜಯಪುರದಲ್ಲಿ ರಫ್ತು ಆಧಾರಿತ ಆಹಾರ ಸಂಸ್ಕರಣ ಘಟಕ, ಸಚಿವ ಎಂ.ಬಿ.ಪಾಟೀಲ್ ಮಹತ್ವದ ಸಭೆ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rameswaram Cafe Blast Suspected travels in BMTC Volvo bus
ಬೆಂಗಳೂರು3 hours ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು22 hours ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು24 hours ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ1 day ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ1 day ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

dina bhavishya read your daily horoscope predictions for February 28 2024
ಭವಿಷ್ಯ2 days ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ4 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Ghar Wapsi ST Somashekhar and Shivaram Hebbar to quit BJP
ರಾಜಕೀಯ4 days ago

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

Rajyasabha Elections 42 Congress MLAs contacted by JDS candidate says DK Shivakumar
ರಾಜಕೀಯ4 days ago

Rajya sabha Election: ಕಾಂಗ್ರೆಸ್‌ನ 42 ಶಾಸಕರನ್ನು ಸಂಪರ್ಕ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

ಟ್ರೆಂಡಿಂಗ್‌