Ashwin Ramaswami: ಅಮೆರಿಕ ಚುನಾವಣೆಯಲ್ಲಿ ಹವಾ ಎಬ್ಬಿಸುತ್ತಿರುವ ಭಾರತ ಮೂಲದ 'ಜೆನ್ ಜಿ' ಯುವಕ ಅಶ್ವಿನ್ ರಾಮಸ್ವಾಮಿ - Vistara News

ವಿದೇಶ

Ashwin Ramaswami: ಅಮೆರಿಕ ಚುನಾವಣೆಯಲ್ಲಿ ಹವಾ ಎಬ್ಬಿಸುತ್ತಿರುವ ಭಾರತ ಮೂಲದ ‘ಜೆನ್ ಜಿ’ ಯುವಕ ಅಶ್ವಿನ್ ರಾಮಸ್ವಾಮಿ

Ashwin Ramaswami: ಮೊದಲ ಜೆನ್ ಜಿ ಇಂಡಿಯನ್-ಅಮೆರಿಕನ್ ಅಶ್ವಿನ್ ರಾಮಸ್ವಾಮಿ ಅವರು ಡೆಮಾಕ್ರಟಿಕ್ ಪಕ್ಷದಿಂದ ಸೆನೆಟರ್ ಆಗಲು ಜಾರ್ಜಿಯಾ ಕ್ಷೇತ್ರದಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಅವರಿಗೆ ಕೇವಲ 24 ವರ್ಷವಷ್ಟೆ.

VISTARANEWS.COM


on

Who is Ashwin Ramaswami? Gen Z Indian American contesting from Georgia State senate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್: ಕೇವಲ 24 ವರ್ಷದ ಭಾರತೀಯ ಮೂಲದ ಜೆನ್ ಜಿ(ಜನರೇಷನ್ ಜೆಡ್ Gen Z) ಅಶ್ವಿನ್ ರಾಮಸ್ವಾಮಿ (Aswhin Ramaswami)ಅವರು ಅಮೆರಿಕದ ಸಂಸತ್ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಮೂಲಕ ಜಾರ್ಜಿಯಾದಿಂದ ಸೆನೆಟರ್ (Senator From Georgia) ಆಗುವ ಪ್ರಯತ್ನದಲ್ಲಿದ್ದಾರೆ. 1997ರಿಂದ 2012 ನಡುವೆ ಜನಿಸಿದವರನ್ನು ಜನರೇಷನ್ ಜೆಡ್ (Generation Z) ಕರೆಯಲಾಗುತ್ತದೆ. ಇವರನ್ನು ಝೂಮರ್ಸ್ (Zoomers) ಎಂದೂ ಕರೆಯಲಾಗುತ್ತದೆ.

ಸಮುದಾಯಕ್ಕೆ ಸೇವೆ ಸಲ್ಲಿಸುವ ಗುರಿಯಯೊಂದಿಗೆ ಜಾನ್ಸ್ ಕ್ರೀಕ್, ಸುವಾನೀ, ಆಲ್ಫರೆಟ್ಟಾ, ಕಮ್ಮಿಂಗ್, ಶುಗರ್ ಹಿಲ್ ಮತ್ತು ಬುಫೋರ್ಡ್‌ನ ಭಾಗಗಳನ್ನು ಒಳಗೊಂಡಿರುವ ಜಾರ್ಜಿಯಾದ 48ನೇ ಜಿಲ್ಲೆಯಲ್ಲಿ ಸೆನೆಟ್‌ಗೆ ಡೆಮಾಕ್ರಟಿಕ್ ಪಕ್ಷದಿಂದ ರಾಮಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಸದ್ಯಕ್ಕೆ ಈ ಕ್ಷೇತ್ರವನ್ನು ರಿಪಬ್ಲಿಕ್ ಪಕ್ಷದ ಶಾವನ್ ಸ್ಟಿಲ್ ಅವರು ಪ್ರತಿನಿಧಿಸುತ್ತಿದ್ದಾರೆ. 2020 ಚುನಾವಣೆ ಫಲಿತಾಂಶಗಳನ್ನು ಬುಡಮೇಲು ಆರೋಪವನ್ನು ಡೋನಾಲ್ಡ್ ಟ್ರಂಪ್ ಅವರೊಂದಿಗೆ ಇವರು ಎದುರಿಸುತ್ತಿದ್ದಾರೆ.

1990ರಲ್ಲಿ ತಮಿಳುನಾಡಿನಿಂದ ಅಮೆರಿಕಕ್ಕೆ ವಲಸೆ ಬಂದ ಪೋಷಕರಿಗೆ ಜನಿಸಿದ ರಾಮಸ್ವಾಮಿ ಅವರು 2021ರಲ್ಲಿ ಸ್ಟ್ಯಾನ್‌ಫೋರ್ಡ್‌ನಿಂದ ಪದವಿ ಪಡೆದರು, ಅಲ್ಲಿ ಅವರು ಕಂಪ್ಯೂಟರ್ ವಿಜ್ಞಾನವನ್ನು ಅಧ್ಯಯನ ಮಾಡಿದರು.

ನಾನು ವಲಸಿಗರ ಮಗು. ಆದರೆ, ನಾನು ಜಾನ್ಸ್ ಕ್ರೀಕ್‌ನಲ್ಲಿ ಹುಟ್ಟಿ ಬೆಳೆದೆ. ದೀರ್ಘಕಾಲದವರೆಗೆ, ನನ್ನ ಸಮುದಾಯಕ್ಕೆ ನಾನು ಹೇಗೆ ಸೇವೆ ಸಲ್ಲಿಸಬಹುದು ಎಂದು ಯೋಚಿಸುತ್ತಿದ್ದೆ. ನಾನು ಸಂಕುಚಿತವಾಗಿ ಉಳಿಯಲು ಬಯಸುವುದಿಲ್ಲ. ಸಮಾಜಕ್ಕೆ ನಾನು ಏನಾದರೂ ವಾಪಸ್ ನೀಡಲು ಬಯಸುತ್ತೇನೆ ಎನ್ನುತ್ತಾರೆ 24 ವರ್ಷದ ರಾಮಸ್ವಾಮಿ ಅವರು. ನನಗೆ ಬಲವಾದ ಬದ್ಧತೆ ಇದೆ. ಜಾರ್ಜಿಯಾ ಸ್ಟೇಟ್ ಸೆನೆಟ್‌ನ ಮೊದಲ ಭಾರತೀಯ ಅಮೆರಿಕನ್ ಮತ್ತು ಜನರಲ್ ಜೆಡ್ ಎಂಬ ವಿಷಯದಲ್ಲಿ ನಾನು ಅಡೆತಡೆಗಳನ್ನು ಮೀರುತ್ತೇನೆ. ಹಾಗಾಗಿ ನಾನು ರಾಜಕೀಯಕ್ಕೆ ಹೊಸ ಧ್ವನಿಯನ್ನು ತರುತ್ತೇನೆ ಎಂದು ಅವರು ಹೇಳಿದರು.

ರಾಮಸ್ವಾಮಿ ಅವರ ತಂದೆ ತಾಯಿ ಇಬ್ಬರೂ ಐಟಿ ವಲಯದಿಂದ ಬಂದಿದ್ದಾರೆ. ಭಾರತೀಯ ಸಂಸ್ಕೃತಿ ತತ್ವಶಾಸ್ತ್ರದಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದಾರೆ. ರಾಮಸ್ವಾಮಿ ಅವರಿಗೂ ರಾಮಾಯಣ, ಮಹಾಭಾರತ ಮತ್ತು ಭಗವದ್ಗೀತೆಯಂತಹ ಮಹಾಕಾವ್ಯಗಳ ಬಗ್ಗೆ ಹೆಚ್ಚು ಆಸಕ್ತಿಯೂ ಇದೆ.

ನನ್ನ ತಂದೆ-ತಾಯಿ ಇಬ್ಬರೂ 1990ರ ದಶಕದಲ್ಲಿ ತಮಿಳುನಾಡಿನಿಂದ ಅಮೆರಿಕಕ್ಕೆ ಬಂದರು. ನನ್ನ ತಾಯಿ ಚೆನ್ನೈನವರು, ನನ್ನ ತಂದೆ ಕೊಯಮತ್ತೂರಿನವರು. ನಾನು ಯಾವಾಗಲೂ ಭಾರತೀಯ ಸಂಸ್ಕೃತಿಯೊಂದಿಗೆ ಬೆಳೆದಿದ್ದೇನೆ ಮತ್ತು ಅಮೆರಿಕನ್ ಸಂಸ್ಕೃತಿಯೊಂದಿಗೂ ಬೆಳೆಯುತ್ತಿದ್ದೇನೆ. ನಾನೊಬ್ಬ ಹಿಂದೂ. ನನ್ನ ಇಡೀ ಜೀವನದಲ್ಲಿ ನಾನು ಭಾರತೀಯ ಸಂಸ್ಕೃತಿಯ ತತ್ವಶಾಸ್ತ್ರದಲ್ಲಿ ಬಹಳ ಆಸಕ್ತಿ ಹೊಂದಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ನಾನು ಸ್ಪರ್ಧಿಸುತ್ತಿರುವುದು ಉಂಟಾಗಿರುವ ಗ್ಯಾಪ್ ತುಂಬಲು. ಆದ್ದರಿಂದ, ಸಹಜವಾಗಿಉತ್ಸುಕರಾಗಿರುವ ನನ್ನ ವಯಸ್ಸಿನ ಜನರೊಂದಿಗೆ ಮಾತನಾಡುತ್ತಿದ್ದೇನೆ. ಅವರನನ್ನು ಅವರಂಥವರೇ ಯಾರಾದರೂ ಪ್ರತಿನಿಧಿಸುತ್ತಿದ್ದಾರೆ ಎಂಬ ನಿರೀಕ್ಷೆ ಇತ್ತು. ನಾನು ಯಶಸ್ವಿಯಾಗಲು ಅಗತ್ಯವಿರುವ ಸಂಪನ್ಮೂಲಗಳನ್ನು ಹೊಂದಿರುವ ಇತರ ಪೀಳಿಗೆಯ ಜನರೊಂದಿಗೆ ಸಾಕಷ್ಟು ಮಾತನಾಡುತ್ತಿದ್ದೇನೆ ಎಂದು ಅವರು ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Vivek Ramaswamy: ಅಮೆರಿಕ ಚುನಾವಣೆ ಮೊದಲೇ ಭಾರತ ಮೂಲದ ವಿವೇಕ್‌ ರಾಮಸ್ವಾಮಿಯನ್ನು ಹೊಗಳಿದ ಎಲಾನ್‌ ಮಸ್ಕ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PoK Crisis: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ದಂಗೆಯೆದ್ದ ಜನ, ಗಲಾಟೆ; ಭಾರತದ ಜತೆ ವಿಲೀನಕ್ಕೆ ಆಗ್ರಹ!

PoK Crisis: ಜಮ್ಮು-ಕಾಶ್ಮೀರ ಜಾಯಿಂಟ್‌ ಅವಾಮಿ ಆಕ್ಷನ್‌ ಕಮಿಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಇದರ ಹತ್ತಾರು ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್‌ ಮಾಡಿದರೂ ನಿಯಂತ್ರಿಸಲು ಆಗುತ್ತಿಲ್ಲ ಎನ್ನಲಾಗಿದೆ.

VISTARANEWS.COM


on

PoK
Koo

ಶ್ರೀನಗರ:‌ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ (PoK Crisisi) ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ಸರ್ಕಾರ, ಅಧಿಕಾರಿಗಳ ವಿರುದ್ಧವೇ ಜನ ದಂಗೆ ಎದ್ದಿದ್ದಾರೆ. ಹಣದುಬ್ಬರ ಏರಿಕೆ (Inflation), ಹೆಚ್ಚಿನ ತೆರಿಗೆ ಹಾಗೂ ವಿದ್ಯುತ್‌ ಪೂರೈಕೆಯ ಕೊರತೆಯಿಂದಾಗಿ ಬೇಸತ್ತಿರುವ ಜನ ಸರ್ಕಾರದ ಕಚೇರಿಗಳು, ಪೊಲೀಸ್‌ ಅಧಿಕಾರಿಗಳ ಮೇಲೆಯೇ ದಾಳಿ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲ, ಪಾಕ್‌ ಆಕ್ರಮಿತ ಕಾಶ್ಮೀರವನ್ನು ಭಾರತದ ಜತೆ ವಿಲೀನಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಹಾಗಾಗಿ, ಪಿಒಕೆ ಮೇಲೆ ಪಾಕಿಸ್ತಾನದ (Pakistan) ನಿಯಂತ್ರಣವು ಪೂರ್ತಿ ಕೈತಪ್ಪಿಹೋಗಿದೆ ಎಂದು ಹೇಳಲಾಗುತ್ತಿದೆ.

ಹೌದು, ಕಳೆದ ಎರಡು ದಿನಗಳಿಂದ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಸುಮಾರು 10 ಜಿಲ್ಲೆಗಳಲ್ಲಿ ಜನ ಅಕ್ಷರಶಃ ದಂಗೆಯೆದ್ದಿದ್ದಾರೆ. ಮುಜಫರಾಬಾದ್‌ನಿಂದ ರಾವಲ್‌ಕೋಟ್‌ವರೆಗೆ ಜನ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ. ಸೇನೆ ಹಾಗೂ ಪೊಲೀಸರ ವಾಹನಗಳ ಮೇಲೆ ಕಲ್ಲುತೂರಾಟ, ಸರ್ಕಾರಿ ಕಚೇರಿಗಳ ಮೇಲೆ ದಾಳಿ, ಪೊಲೀಸರ ಮೇಲೆ ಹಲ್ಲೆ ಸೇರಿ ಹಲವು ರೀತಿಯ ಹಿಂಸಾಚಾರ ಭುಗಿಲೆದ್ದಿದೆ. ಈಗಾಗಲೇ ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನವು ಪಿಒಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಭಾರತದ ಜತೆ ವಿಲೀನಕ್ಕೆ ಬೇಡಿಕೆ

ಭಾರತದ ಜತೆ ಪಾಕ್‌ ಆಕ್ರಮಿತ ಕಾಶ್ಮೀರವನ್ನು ವಿಲೀನಗೊಳಿಸಬೇಕು ಎಂಬುದು ಕೂಡ ಪ್ರತಿಭಟನಾಕಾರರ ಬೇಡಿಕೆಯಾಗಿದೆ. ಭಾರತದ ಪರ ಘೋಷಣೆಗಳು, ಭಾರತದ ಧ್ವಜ ಪ್ರದರ್ಶನಗಳು ಕೂಡ ನಡೆದಿವೆ. ಇನ್ನು, ಸ್ವಾತಂತ್ರ್ಯ ಬೇಕು, ಸ್ವಾತಂತ್ರ್ಯಕ್ಕಾಗಿ ಹೋರಾಟ ಎಂಬ ಘೋಷಣೆಗಳು ಕೂಡ ಕೇಳಿಬಂದಿವೆ. ಪೊಲೀಸರು, ಭದ್ರತಾ ಸಿಬ್ಬಂದಿ ಹಾಗೂ ಜನರ ನಡುವಿನ ಸಂಘರ್ಷಕ್ಕೆ ಒಬ್ಬ ಪೊಲೀಸ್‌ ಅಧಿಕಾರಿ ಬಲಿಯಾಗಿದ್ದಾರೆ. ಪೊಲೀಸರು, ಸೈನಿಕರು ಸೇರಿ ಸುಮಾರು 90 ಜನ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಯಾವುದೇ ಕಾರಣಕ್ಕೂ ಜನರನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿಗೆ ಆಗುತ್ತಿಲ್ಲ ಎಂಬುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳಿಂದ ಮಾಹಿತಿ ಲಭ್ಯವಾಗಿದೆ.

ಜಮ್ಮು-ಕಾಶ್ಮೀರ ಜಾಯಿಂಟ್‌ ಅವಾಮಿ ಆಕ್ಷನ್‌ ಕಮಿಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಇದರ ಹತ್ತಾರು ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್‌ ಮಾಡಿದರೂ ನಿಯಂತ್ರಿಸಲು ಆಗುತ್ತಿಲ್ಲ ಎನ್ನಲಾಗಿದೆ. ಈಗಾಗಲೇ ಪಿಒಕೆ ನಮ್ಮದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಪಿಒಕೆ ಜನರೇ ಭಾರತದ ಜತೆ ವಿಲೀನಗೊಳ್ಳಲು ಬಯಸುತ್ತಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಇದರ ಬೆನ್ನಲ್ಲೇ, ಬಲೂಚಿಸ್ತಾನದ ಜತೆಗೆ ಪಿಒಕೆಯಲ್ಲೂ ದಂಗೆ ಶುರುವಾಗಿದೆ.

ಇದನ್ನೂ ಓದಿ: Pakistan Occupied Kashmir: ಪಾಕ್‌ ದಿವಾಳಿ, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಹಿಂಸೆಯ ಹಾವಳಿ; ನಾಗರಿಕ ದಂಗೆ ಶುರು?

Continue Reading

ವಿದೇಶ

Pig Kidney: ಹಂದಿಯ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ 2 ತಿಂಗಳ ಬಳಿಕ ಸಾವು

Pig Kidney: ಆನುವಂಶಿಕವಾಗಿ ಮಾರ್ಪಡಿಸಿದ ಹಂದಿಯ ಮೂತ್ರಪಿಂಡ ಕಸಿ ಪಡೆದ ಮೊದಲ ವ್ಯಕ್ತಿ, ಇಂಗ್ಲೆಂಡ್‌ನ ವೇಮೌತ್‌ನ ನಿವಾಸಿ 62 ವರ್ಷದ ರಿಕ್ ಸ್ಲೇಮನ್ ಶಸ್ತ್ರ ಚಿಕಿತ್ಸೆ ನಡೆದ ಸುಮಾರು ಎರಡು ತಿಂಗಳ ನಂತರ ನಿಧನ ಹೊಂದಿದ್ದಾರೆ. ಆದರೆ ಅವರ ನಿಧನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕಿಡ್ನಿ ಕಸಿಯ ಪರಿಣಾಮದಿಂದ ಅವರು ನಿಧನ ಹೊಂದಿದ್ದಾರೆ ಎಂಬುದಕ್ಕೆ ನಮಗೆ ಯಾವುದೇ ಸೂಚನೆ ಸಿಕ್ಕಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

VISTARANEWS.COM


on

Pig Kidney
Koo

ಬೋಸ್ಟನ್: ಆನುವಂಶಿಕವಾಗಿ ಮಾರ್ಪಡಿಸಿದ ಹಂದಿಯ ಮೂತ್ರಪಿಂಡ (Pig Kidney) ಕಸಿ ಪಡೆದ ಮೊದಲ ವ್ಯಕ್ತಿ, ಇಂಗ್ಲೆಂಡ್‌ನ ವೇಮೌತ್‌ನ ನಿವಾಸಿ 62 ವರ್ಷದ ರಿಕ್ ಸ್ಲೇಮನ್ (Rick Slayman) ಶಸ್ತ್ರ ಚಿಕಿತ್ಸೆ ನಡೆದ ಸುಮಾರು ಎರಡು ತಿಂಗಳ ನಂತರ ನಿಧನ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಮೆರಿಕದ ಬೋಸ್ಟನ್‌ನ ಮ್ಯಾಸಚೂಸೆಟ್ಸ್ ಜನರಲ್ ಆಸ್ಪತ್ರೆಯಲ್ಲಿ ಈ ವರ್ಷದ ಮಾರ್ಚ್‌ನಲ್ಲಿ ರಿಕ್ ಸ್ಲೇಮನ್ ಅವರಿಗೆ ಹಂದಿಯ ಮೂತ್ರಪಿಂಡ ಕಸಿ ಮಾಡಲಾಗಿತ್ತು. ʼʼಹಂದಿ ಮೂತ್ರಪಿಂಡವು ಕನಿಷ್ಠ ಎರಡು ವರ್ಷಗಳವರೆಗೆ ಕಾರ್ಯ ನಿರ್ವಹಿಸುತ್ತದೆ ಎಂದು ನಂಬಿದ್ದೆವು. ಆದರೆ ರಿಕ್ ಸ್ಲೇಮನ್ ಅವರ ಹಠಾತ್‌ ನಿಧನ ಆಘಾತ ತಂದಿದೆʼʼ ಎಂದು ವೈದ್ಯರು ತಿಳಿಸಿದ್ದಾರೆ.

“ರಿಕ್ ಸ್ಲೇಮನ್ ಅವರ ಹಠಾತ್ ನಿಧನದಿಂದ ತೀವ್ರ ದುಃಖವಾಗಿದೆ. ಕಿಡ್ನಿ ಕಸಿಯ ಪರಿಣಾಮದಿಂದ ಅವರು ನಿಧನ ಹೊಂದಿದ್ದಾರೆ ಎಂಬುದಕ್ಕೆ ನಮಗೆ ಯಾವುದೇ ಸೂಚನೆ ಸಿಕ್ಕಿಲ್ಲ. ಸ್ಲೇಮನ್ ಅವರನ್ನು ವಿಶ್ವಾದ್ಯಂತದ ಕಿಡ್ನಿ ಸಮಸ್ಯೆ ಇರುವವರ ಭರವಸೆ ಎಂದೇ ಪರಿಗಣಿಸಲಾಗುತ್ತದೆ. ಸ್ಲೇಮನ್ ಅವರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತಿದ್ದೇವೆʼʼ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಅಂತಿಮ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಸ್ಲೇಮನ್ ಅವರಿಗೆ ಮಾರ್ಚ್ 16ರಂದು ಶಸ್ತ್ರಚಿಕಿತ್ಸೆ ನಡೆಸಿ ಆನುವಂಶಿಕವಾಗಿ ಮಾರ್ಪಡಿಸಿದ ಹಂದಿಯ ಮೂತ್ರಪಿಂಡ ಕಸಿ ಮಾಡಲಾಗಿತ್ತು. ಟೈಪ್ 2 ಮಧುಮೇಹಿಯಾಗಿದ್ದ ಅವರು ಈ ಹಿಂದೆ 2018ರಲ್ಲಿ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದರು. ಆದಾಗ್ಯೂ ಐದು ವರ್ಷಗಳ ನಂತರ ಕಸಿ ಮಾಡಿಸಿಕೊಂಡಿದ್ದ ಮೂತ್ರಪಿಂಡ ವಿಫಲವಾಗಲು ಪ್ರಾರಂಭಿಸಿತು ಮತ್ತು ಅಂದಿನಿಂದ ಅವರು ಡಯಾಲಿಸಿಸ್‌ನಲ್ಲಿದ್ದರು.

ಕೊನೆಗೆ ಅವರು ಹಂದಿಯ ಮೂತ್ರಪಿಂಡವನ್ನು ಕಸಿ ಮಾಡಿಸಿಕೊಳ್ಳಲು ಒಪ್ಪಿಗೆ ನೀಡಿದ್ದರು. ಈ ವೇಳೆ ಅವರು ಇದು ತಾನು ಎದುರಿಸುವಂತಹ ಸಮಸ್ಯೆ ಇರುವವರಿಗೆ ಭರವಸೆಯ ಬೆಳಕನ್ನು ಒದಗಿಸಲಿದೆ ಎಂದು ಹೇಳಿದ್ದರು. ಅದರಂತೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.

ವೈದ್ಯರ ಪ್ರಯೋಗ ಯಶಸ್ವಿಯಾಗಿತ್ತು. ಆ ಮೂಲಕ ರಿಕ್ ಸ್ಲೇಮನ್ ಹಂದಿ ಮೂತ್ರಪಿಂಡ ಕಸಿ ಸ್ವೀಕರಿಸಿದ ವಿಶ್ವದ ಮೊದಲ ವ್ಯಕ್ತಿ ಎನಿಸಿಕೊಂಡಿದ್ದರು. ಶಸ್ತ್ರಚಿಕಿತ್ಸೆಯ ಬಳಿಕ ಸುಮಾರು ಎರಡು ವಾರಗಳ ಕಾಲ ಆಸ್ಪತ್ರೆಯಲ್ಲಿದ್ದು, ಬಳಿಕ ಮನೆಗೆ ತೆರಳಿದ್ದರು. ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡು ಬಂದಿದೆ. ಮನೆಯಲ್ಲಿ ಚಿಕಿತ್ಸೆ ಮುಂದುವರಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದರು. ʼʼಸ್ಲೇಮನ್‌ಗೆ ಕಸಿ ಮಾಡಲಾದ ಹಂದಿಯ ಮೂತ್ರಪಿಂಡವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ರಕ್ತದಲ್ಲಿನ ತ್ಯಾಜ್ಯವನ್ನು ತೆಗೆದು ಹಾಕುತ್ತಿದ್ದು, ಮೂತ್ರವನ್ನು ಉತ್ಪಾದಿಸುತ್ತದೆ. ದೇಹದ ದ್ರವಗಳನ್ನು ಸಮತೋಲನಗೊಳಿಸುತ್ತದೆʼʼ ಎಂದು ಅಂದು ಮ್ಯಾಸಚೂಸೆಟ್ಸ್ ಜನರಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಇದರಿಂದ ಮುಂಬರುವ ದಿನಗಳಲ್ಲಿ ಮಾನವನ ಮೇಲೆ ಪ್ರಾಣಿಗಳ ಅಂಗಾಂಗ ಕಸಿಯ ಪ್ರಯೋಗದ ಹೊಸ ಯುಗವೊಂದು ಪ್ರಾರಂಭವಾಗುವ ಸಾಧ್ಯತೆಯಿದೆ ಎಂದೇ ವಿಶ್ಲೇಷಿಸಲಾಗಿತ್ತು.

ಈ ಹಿಂದೆ ಹಂದಿಯ ಹೃದಯವನ್ನು ಕಸಿ ಮಾಡಿದ ಕೆಲವೇ ವಾರಗಳಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಹೀಗಾಗಿ ಈ ಪ್ರಯೋಗ ಭರವಸೆ ಮೂಡಿತ್ತು.

ಇದನ್ನೂ ಓದಿ: Pig kidney: ಮನುಷ್ಯನಿಗೆ ಹಂದಿಯ ಕಿಡ್ನಿ ಅಳವಡಿಕೆ ಸಕ್ಸೆಸ್! ರೋಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್

Continue Reading

ವಿದೇಶ

Pakistan Occupied Kashmir: ಪಾಕ್‌ ದಿವಾಳಿ, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಹಿಂಸೆಯ ಹಾವಳಿ; ನಾಗರಿಕ ದಂಗೆ ಶುರು?

ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಶನಿವಾರ ಘರ್ಷಣೆ ಸಂಭವಿಸಿದ ಅನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (Pakistan occupied Kashmir) ಉದ್ವಿಗ್ನತೆ ಹೆಚ್ಚಾಗಿದೆ. ಮುಜಫರಾಬಾದ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿರುವುದರಿಂದ ಮೀರ್‌ಪುರ, ಆಜಾದ್ ಜಮ್ಮು ಮತ್ತು ಕಾಶ್ಮೀರ (ಎಜೆಕೆ) ನಲ್ಲಿ ಮಾರುಕಟ್ಟೆ, ಶಾಲೆ ಮತ್ತು ಕಚೇರಿಗಳನ್ನು ಮುಚ್ಚಲಾಗಿದೆ.

VISTARANEWS.COM


on

By

Pakistan Occupied Kashmir
Koo

ಪಾಕ್ ಆಕ್ರಮಿತ ಕಾಶ್ಮೀರದ (Pakistan occupied Kashmir) ಕೆಲವು ಭಾಗಗಳಲ್ಲಿ ಹಿಂಸಾತ್ಮಕ ಘರ್ಷಣೆಗಳು (protest) ಮುಂದುವರಿದಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಹಾಗೂ ಇಬ್ಬರು ನಾಗರಿಕರನ್ನು ಹತ್ಯೆ (murder) ಮಾಡಲಾಗಿದೆ. ಮುಜಫರಾಬಾದ್‌ನಲ್ಲಿ (Muzaffarabad) ಪ್ರತಿಭಟನಾಕಾರರನ್ನು ಪೊಲೀಸರು ನಿಯಂತ್ರಿಸಿದ್ದರೂ ಸಾಮಾನ್ಯ ಜನ ಜೀವನ ಮತ್ತು ವ್ಯವಹಾರಗಳು ಅಸ್ತವ್ಯಸ್ತಗೊಂಡಿದೆ.

ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಶನಿವಾರ ಘರ್ಷಣೆ ಸಂಭವಿಸಿದ ಅನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಮುಜಫರಾಬಾದ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿರುವುದರಿಂದ ಮೀರ್‌ಪುರ, ಆಜಾದ್ ಜಮ್ಮು ಮತ್ತು ಕಾಶ್ಮೀರ (jammu and kashmir) ನಲ್ಲಿ ಮಾರುಕಟ್ಟೆ, ಶಾಲೆ ಮತ್ತು ಕಚೇರಿಗಳನ್ನು ಮುಚ್ಚಲಾಗಿದೆ.

ಕಾರಣ ಏನು?

ಅವಾಮಿ ಆಕ್ಷನ್ ಕಮಿಟಿ (AAC) ಶುಕ್ರವಾರ ಹಣದುಬ್ಬರದ ವಿರುದ್ಧ ಪಿಒಕೆಯ ಕೆಲವು ಭಾಗಗಳಲ್ಲಿ ಪ್ರತಿಭಟನೆಗಳನ್ನು ನಡೆಸಿತು. ಇದು ಪಾಕಿಸ್ತಾನಿ ಭದ್ರತಾ ಪಡೆಗಳ ಮೇಲೆ ಹಲ್ಲೆಗೆ ಕಾರಣವಾಗಿತ್ತು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಮುಜಫರಾಬಾದ್‌ನಲ್ಲಿ ಮೇ 10 ರಂದು ನಡೆದ ಮುಷ್ಕರದಿಂದ ನಗರ ಸ್ತಬ್ಧವಾಗಿತ್ತು.

ಪ್ರತಿಭಟಕರರ ಶಾಂತಿಯುತ ಪ್ರದರ್ಶನಗಳಿಗೆ ಅಡ್ಡಿಯಾಗಿದ್ದರಿಂದ ಪ್ರತಿಭಟನೆ ಉಗ್ರ ರೂಪ ಪಡೆದಿತ್ತು.
ಎಎಸಿ ಹೆಚ್ಚಿನ ತೆರಿಗೆಗಳು, ವಿದ್ಯುತ್ ಬಿಲ್‌ಗಳು ಮತ್ತು ಹಣದುಬ್ಬರ ಹಠಾತ್ ಏರಿಕೆ ವಿರುದ್ಧ ಶುಕ್ರವಾರ ಎಎಸಿ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿತು. ಜನರ ಮನೆಗಳು ಮತ್ತು ಮಸೀದಿಗಳ ಸುತ್ತಲೂ ಪೊಲೀಸರು ಅಶ್ರುವಾಯು ಶೆಲ್ ಅನ್ನು ಆಶ್ರಯಿಸಿದಾಗ ಘರ್ಷಣೆಗಳು ಭುಗಿಲೆದ್ದಿತು.

ಇದರಿಂದ ಸಮಹ್ನಿ, ಸೆಹನ್ಸಾ, ಮೀರ್‌ಪುರ್, ರಾವಲಕೋಟ್, ಖುಯಿರಟ್ಟಾ, ತಟ್ಟಪಾನಿ ಮತ್ತು ಹಟ್ಟಿಯಾನ್ ಬಾಲಾ ಮುಂತಾದ ಪಿಒಕೆಯ ಬಹು ಭಾಗಗಳಲ್ಲಿ ಮುಷ್ಕರಕ್ಕೆ ಕರೆ ನೀಡಲಾಯಿತು.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಏನಾಗುತ್ತಿದೆ?

ಅವಾಮಿ ಕ್ರಿಯಾ ಸಮಿತಿಯು ಪಿಒಕೆಯ ಮುಜಫರಾಬಾದ್‌ಗೆ ಶಾಂತಿಯುತ ಮೆರವಣಿಗೆಗಳನ್ನು ಶುಕ್ರವಾರ ನಡೆಸಿತು, ವಿದ್ಯುತ್ ಬಿಲ್‌ಗಳ ಮೇಲೆ ವಿಧಿಸಲಾದ “ಅನ್ಯಾಯ” ತೆರಿಗೆಗಳ ವಿರುದ್ಧ ಪ್ರತಿಭಟಿಸಿತು. ಇದು ಹಣದುಬ್ಬರ ಗಗನಕ್ಕೇರಲು ಕಾರಣವಾಯಿತು. ಇಸ್ಲಾಂ ಗಢ್ ಬಳಿ ಪ್ರತಿಭಟನಾಕಾರರು ಮತ್ತು ಪೊಲೀಸರು ಘರ್ಷಣೆ ಮಾಡಿದಾಗ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದವು.

ಎಎಸಿ ಮುಜಫರಾಬಾದ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿತು. ]ಇದು ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಿತು. ಮೆರವಣಿಗೆಯನ್ನು ತಡೆಯಲು ಪೊಲೀಸರು ನಗರಕ್ಕೆ ಹೋಗುವ ರಸ್ತೆಗಳಿಗೆ ಅಡ್ಡಲಾಗಿ ಬ್ಯಾರಿಕೇಡ್‌ಗಳನ್ನು ಹಾಕಿದರು. ಇದು ಘರ್ಷಣೆಗೆ ಕಾರಣವಾಯಿತು. ರಾತ್ರಿಯ ದಾಳಿಯಲ್ಲಿ ಪೊಲೀಸರು ಅನೇಕ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಿದಾಗ ಸಮಿತಿಯು ಶನಿವಾರ ಮುಷ್ಕರಕ್ಕೆ ಕರೆ ನೀಡಿತು.

ಪಿಒಕೆ ಸರ್ಕಾರವು ಈ ಪ್ರದೇಶದಲ್ಲಿ ಸೆಕ್ಷನ್ 144 ಅನ್ನು ವಿಧಿಸಿದರೆ, ಮೇ 10 ಮತ್ತು 11 ರಂದು ಶಿಕ್ಷಣ ಸಂಸ್ಥೆ ಮತ್ತು ಕಚೇರಿಗಳನ್ನು ಮುಚ್ಚಲಾಗಿತ್ತು. ಪಾಕ್ ಆಕ್ರಮಿತ ಕಾಶ್ಮೀರದ ಎಲ್ಲಾ ಜಿಲ್ಲೆಗಳಲ್ಲಿ ಶನಿವಾರ ಜನರು ಸಾವಿರಾರು ಸಂಖ್ಯೆಯಲ್ಲಿ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಸಾಮಾಜಿಕ ಮಾಧ್ಯಮಗಳಲ್ಲಿನ ವಿಡಿಯೋ ಮತ್ತು ಫೋಟೋಗಳಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ತಮ್ಮ ಲಾಠಿಗಳನ್ನು ಬಳಸಿರುವುದನ್ನು ತೋರಿಸಿತ್ತು. ಅಶ್ರುವಾಯು ಬಳಸಿ ಗುಂಪನ್ನು ಚದುರಿಸಲು ಪೊಲೀಸರು ಪ್ರಯತ್ನಿಸಿದರು. ಹಿಂಸಾತ್ಮಕ ಘರ್ಷಣೆಯ ಅನಂತರ ಶುಕ್ರವಾರ ಹತ್ತಾರು ಪೊಲೀಸ್ ಸಿಬ್ಬಂದಿ ಮತ್ತು ಪ್ರತಿಭಟನಾಕಾರರು ಗಾಯಗೊಂಡಿದ್ದರು.

ಇದನ್ನೂ ಓದಿ: America v/s Russia:ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪಕ್ಕೆ ಅಮೆರಿಕ ಹೇಳಿದ್ದೇನು?

ಮೂವರು ಸಾವು

ಪಾಕಿಸ್ತಾನಿ ಪಡೆಗಳು ನಿರಾಯುಧ ನಾಗರಿಕರ ಮೇಲೆ ಗುಂಡು ಹಾರಿಸಿದ್ದು ಘರ್ಷಣೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಹಾಗೂ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಪಿಒಕೆ ಕಾರ್ಯಕರ್ತ ಅಮ್ಜದ್ ಅಯೂಬ್ ಮಿರ್ಜಾ ಹೇಳಿದ್ದಾರೆ.‌ ಮಿರ್ಜಾ ಅವರು ಭಾರತ ಸರ್ಕಾರದ ಮಧ್ಯಪ್ರವೇಶಕ್ಕೆ ಕರೆ ನೀಡಿದ್ದು, ಪರಿಸ್ಥಿತಿ ಕೈ ಮೀರುತ್ತಿದೆ. ಕೇಂದ್ರವು ದೂರ ಉಳಿಯಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಭಾರತವು ಈಗ ತನ್ನೆಲ್ಲ ಗಮನವನ್ನು ಪಾಕಿಸ್ತಾನಿ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ ಮೇಲೆ ಕೇಂದ್ರೀಕರಿಸಬೇಕು ಮತ್ತು ಗಿಲ್ಗಿಟ್-ಬಾಲ್ಟಿಸ್ತಾನ್ ಸೇರಿದಂತೆ ಈ ಆಕ್ರಮಿತ ಪ್ರದೇಶದ ಸ್ವಾತಂತ್ರ್ಯಕ್ಕೆ ಸಹಾಯ ಮಾಡಬೇಕು ಎಂದು ತಿಳಿಸಿದರು.

Continue Reading

ವಿದೇಶ

Nijjar Killing Case: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ; ನಾಲ್ಕನೇ ಆರೋಪಿ ಅರೆಸ್ಟ್‌

Nijjar Killing Case: ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ಕನೇ ಆರೋಪಿ, ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು 22 ವರ್ಷದ ಅಮನ್‌ದೀಪ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕೊಲೆ ಮತ್ತು ನಿಜ್ಜರ್ ಹತ್ಯೆಯ ಪಿತೂರಿ ನಡೆಸಿರುವ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ನಿಜ್ಜಾರ್‌ ಹತ್ಯೆ ಪ್ರಕರಣದಲ್ಲಿ ಭಾರತೀಯ ಮೂಲದ ಕರನ್‌ ಬ್ರಾರ್‌ (22), ಕಮಲ್‌ಪ್ರೀತ್‌ ಸಿಂಗ್‌ (22) ಮತ್ತು ಕರಣ್‌ಪ್ರೀತ್‌ ಸಿಂಗ್‌ (28) ಎಂಬ ಮೂವರನ್ನು ಬಂಧಿಸಲಾಗಿತ್ತು.

VISTARANEWS.COM


on

Nijjar Killing Case
Koo

ಒಟ್ಟಾವ: ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ (Khalistani Terrorist) ಹರ್ದೀಪ್‌ ಸಿಂಗ್‌ ನಿಜ್ಜಾರ್‌ (Nijjar Killing Case)ನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ಕನೇ ಆರೋಪಿ, ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೆನಡಾದ ತನಿಖಾ ತಂಡ ತಿಳಿಸಿದೆ.

ಬಂಧಿತ ಆರೋಪಿಯನ್ನು 22 ವರ್ಷದ ಅಮನ್‌ದೀಪ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕೊಲೆ ಮತ್ತು ನಿಜ್ಜರ್ ಹತ್ಯೆಯ ಪಿತೂರಿ ನಡೆಸಿರುವ ಪ್ರಕರಣ ದಾಖಲಿಸಲಾಗಿದೆ. ಬ್ರಾಂಪ್ಟನ್, ಸರ್ರೆ ಮತ್ತು ಅಬಾಟ್ಸ್ಫೋರ್ಡ್‌ನಲ್ಲಿ ವಾಸಿಸುತ್ತಿದ್ದ ಅಮನ್‌ದೀಪ್‌ ಸಿಂಗ್‌ನನ್ನು ಈ ಮೊದಲೇ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿ ಒಂಟಾರಿಯೊದಲ್ಲಿ ವಶಕ್ಕೆ ಪಡೆಯಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಪರಾಧಿಗಳ ಪತ್ತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಹಿಂದೆ ನಿಜ್ಜಾರ್‌ ಹತ್ಯೆ ಪ್ರಕರಣದಲ್ಲಿ ಭಾರತೀಯ ಮೂಲದ ಕರನ್‌ ಬ್ರಾರ್‌ (22), ಕಮಲ್‌ಪ್ರೀತ್‌ ಸಿಂಗ್‌ (22) ಮತ್ತು ಕರಣ್‌ಪ್ರೀತ್‌ ಸಿಂಗ್‌ (28) ಎಂಬ ಮೂವರನ್ನು ಬಂಧಿಸಲಾಗಿತ್ತು. ಇವರ ವಿರುದ್ಧವೂ ನಿಜ್ಜಾರ್‌ ಹತ್ಯೆಯ ಸಂಚು ನಡೆಸಿದ ಆರೋಪ ಕೇಳಿ ಬಂದಿದೆ.

ಪ್ರಕರಣದ ಹಿನ್ನೆಲೆ

ಕಳೆದ ವರ್ಷ ಜನವರಿಯಲ್ಲಿ ನಿಜ್ಜಾರ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಮಾಜಿ ಪ್ರಧಾನಿ ಇಂಧಿರಾ ಗಾಂಧಿ ಅವರ ಹತ್ಯೆಯನ್ನು ಕೆನಡಾದಲ್ಲಿರುವ ಖಲಿಸ್ತಾನಿಗಳು ಸಂಭ್ರಮಾಚರಣೆ ಮಾಡಿದ ಕೆಲವೇ ದಿನಗಳಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ನನ್ನು ಕೆನಡಾದ ಸುರ‍್ರೆ ನಗರದಲ್ಲಿ ಕೊಲೆ ಮಾಡಲಾಗಿತ್ತು.

ಪಂಜಾಬಿಗಳೇ ಹೆಚ್ಚಿರುವ ಸುರ‍್ರೆ ನಗರದ ಗುರುನಾನಕ್‌ ಸಿಖ್‌ ಗುರುದ್ವಾರದ ಬಳಿಕ ಖಲಿಸ್ತಾನಿ ಉಗ್ರನ ಹತ್ಯೆ ನಡೆದಿತ್ತು. ಪಂಜಾಬ್‌ನಲ್ಲಿ ಅರ್ಚಕರೊಬ್ಬರ ಕೊಲೆಗೆ ಪಿತೂರಿ ನಡೆಸಿರುವುದು, ಮೂಲಭೂತವಾದದ ಪ್ರಸರಣ ಸೇರಿ ನಾಲ್ಕು ಪ್ರಕರಣಗಳಲ್ಲಿ ಎನ್‌ಐಎ ಈತನ ವಿರುದ್ಧ ತನಿಖೆ ನಡೆಸುತ್ತಿದೆ. ಅಲ್ಲದೆ ಈತನ ಕುರಿತು ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಕೂಡ ಎನ್‌ಐಎ ಘೋಷಿಸಿತ್ತು.

ಇದನ್ನೂ ಓದಿ: Avtar Khanda Dies: ಬ್ರಿಟನ್‌ನಲ್ಲಿ ಭಾರತದ ತಿರಂಗಾ ಕೆಳಗಿಳಿಸಿದ್ದ ಖಲಿಸ್ತಾನ್ ಉಗ್ರ ಅವತಾರ್‌ ಖಂಡಾ ಸಾವು

ಖಲಿಸ್ತಾನ್‌ ಟೈಗರ್‌ ಫೋರ್ಸ್‌ (KTF) ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ ಈತ ಪ್ರತ್ಯೇಕವಾದಿಗಳಿಗೆ ಹೆಚ್ಚಿನ ನೆರವು ಒದಗಿಸುತ್ತಿದ್ದ. ಭಾರತದಲ್ಲಿ ಹಲವು ಉಗ್ರ ಚಟುವಟಿಕೆಗಳ ಹಿಂದೆ ಈತನ ಕೈವಾಡವಿದೆ. ಕೆನಡಾದಲ್ಲೂ ಸಿಖ್‌ ಸಮುದಾಯದವರನ್ನು ಎತ್ತಿ ಕಟ್ಟುತ್ತಿದ್ದ. ಹಾಗಾಗಿ ಈತನು ಸೇರಿ ಸುಮಾರು 40 ಉಗ್ರರನ್ನು ಭಾರತವು ಮೋಸ್ಟ್‌ ವಾಂಟೆಡ್‌ ಉಗ್ರರ ಪಟ್ಟಿಗೆ ಸೇರಿಸಿತ್ತು. ಇದಕ್ಕೂ ಮೊದಲು ಖಲಿಸ್ತಾನಿ ಉಗ್ರ, ಖಲಿಸ್ತಾನ್‌ ನಾಯಕ, ಬಂಧಿತ ಅಮೃತ್‌ಪಾಲ್‌ ಸಿಂಗ್‌ನ ಆಪ್ತ, ಲಂಡನ್‌ನಲ್ಲಿರುವ ಭಾರತದ ಹೈಕಮಿಷನ್‌ ಕಚೇರಿ ಮೇಲೆ ಖಲಿಸ್ತಾನಿಗಳು ದಾಳಿ ನಡೆಸಿದ್ದರ ರೂವಾರಿ ಅವತಾರ್‌ ಸಿಂಗ್‌ ಖಂಡಾ ಲಂಡನ್‌ನಲ್ಲಿ ಮೃತಪಟ್ಟಿದ್ದ. ಅಮೃತ್‌ಪಾಲ್‌ ಸಿಂಗ್‌ ಬಂಧನದ ಬಳಿಕ ಕೆನಡಾದಲ್ಲಿರುವ ಖಲಿಸ್ತಾನಿಗಳು ಇನ್ನಷ್ಟು ತೀವ್ರವಾಗಿ ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದರು.

Continue Reading
Advertisement
Adhir Ranjan
ದೇಶ1 min ago

Adhir Ranjan: ಅಂಬಾನಿ ದುಡ್ಡು ಕೊಟ್ಟರೆ ನಾವೂ ಸುಮ್ಮನಾಗುತ್ತೇವೆ ಎಂದ ಕಾಂಗ್ರೆಸ್‌ ನಾಯಕ; ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ25 mins ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

felicitation programme for SSLC student Harshita D M who got 2nd place in the state
ತುಮಕೂರು35 mins ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ 2ನೇ ಸ್ಥಾನ ಪಡೆದ ಹರ್ಷಿತಾಗೆ ಸನ್ಮಾನ

130 crore crop compensation amount paid to Vijayanagara district says DC m S Diwakar
ವಿಜಯನಗರ37 mins ago

Vijayanagara News: ವಿಜಯನಗರ ಜಿಲ್ಲೆಗೆ 130 ಕೋಟಿ ರೂ. ಬೆಳೆ ಪರಿಹಾರ: ಡಿಸಿ

Prajwal Revanna Case Naveen Gowda post against MLA A Manju
ರಾಜಕೀಯ40 mins ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

ಕರ್ನಾಟಕ53 mins ago

MLC Election: ಪರಿಷತ್‌ ಚುನಾವಣೆಗೂ ಮುನ್ನ ಒಪಿಎಸ್‌ ಮರು ಜಾರಿಗೆ ಮುಂದಾಯ್ತಾ ಕಾಂಗ್ರೆಸ್‌ ಸರ್ಕಾರ?

Queen's Premier League start
ಕ್ರಿಕೆಟ್1 hour ago

Queen’s Premier League: ಕಿರುತೆರೆ ,ಹಿರಿತೆರೆ ಹೆಣ್ಮಕ್ಕಳಿಗಾಗಿ ಶುರುವಾಯ್ತು ಕ್ವೀನ್ಸ್‌ ಪ್ರೀಮಿಯರ್ ಲೀಗ್!

Prajwal Revanna Case What was plan of advocate Devaraje Gowda Why did you leave for Delhi
ಕ್ರೈಂ1 hour ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ವಕೀಲ ದೇವರಾಜೇಗೌಡ ಪ್ಲ್ಯಾನ್‌ ಏನಿತ್ತು? ದೆಹಲಿಗೆ ಹೊರಟಿದ್ದು ಏಕೆ?

Mental Health Awareness Month
ಆರೋಗ್ಯ1 hour ago

Mental Health Awareness Month: ಮಾನಸಿಕ ಆರೋಗ್ಯ ಜಾಗೃತಿ ಮಾಸ; ಮತ್ತೆ ಮಗುವಿನಂತಾಗಲು ಪ್ರಯತ್ನಿಸಿ!

Narendra Modi
ದೇಶ1 hour ago

Narendra Modi: ತಾಯಂದಿರ ದಿನದಂದು ಮೋದಿಗೆ ವಿಶೇಷ ಉಡುಗೊರೆ ಕೊಟ್ಟ ಫ್ಯಾನ್ಸ್; ಏನದು ನೋಡಿ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast Heavy rain in chikkmagalur
ಮಳೆ25 mins ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ40 mins ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ4 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ6 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ13 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

ಟ್ರೆಂಡಿಂಗ್‌