Invest Karnataka: ಸನ್ಸೇರಾ ಕಂಪನಿಯಿಂದ ರಾಜ್ಯದಲ್ಲಿ 2,100 ಕೋಟಿ ರೂ. ಹೂಡಿಕೆ; ರಾಮನಗರದಲ್ಲಿ ಘಟಕ - Vistara News

ಇನ್ವೆಸ್ಟ್ ಕರ್ನಾಟಕ

Invest Karnataka: ಸನ್ಸೇರಾ ಕಂಪನಿಯಿಂದ ರಾಜ್ಯದಲ್ಲಿ 2,100 ಕೋಟಿ ರೂ. ಹೂಡಿಕೆ; ರಾಮನಗರದಲ್ಲಿ ಘಟಕ

Invest Karnataka: ವಾಹನಗಳ ಮತ್ತು ವೈಮಾನಿಕ‌ ಬಿಡಿಭಾಗಗಳನ್ನು ತಯಾರಿಸುವ ಸನ್ಸೇರಾ ಕಂಪನಿಯು ರಾಜ್ಯದಲ್ಲಿ ರೂ.2,100 ಕೋಟಿ ಹೂಡಲಿದೆ. ಈ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ಅವರ ಸಮ್ಮುಖದಲ್ಲಿ ಬುಧವಾರ ಒಡಂಬಡಿಕೆಗೆ ಅಂಕಿತ ಹಾಕಲಾಯಿತು. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

2100 crore rupees investment in the state by Sunsera Company; Sign the agreement
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ವಾಹನಗಳ ಮತ್ತು ವೈಮಾನಿಕ‌ ಬಿಡಿಭಾಗಗಳನ್ನು ತಯಾರಿಸುವ ಸನ್ಸೇರಾ ಕಂಪನಿಯು ರಾಜ್ಯದಲ್ಲಿ ರೂ. 2,100 ಕೋಟಿ ಹೂಡಲಿದೆ (Invest Karnataka). ಈ ಸಂಬಂಧ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ಅವರ ಸಮ್ಮುಖದಲ್ಲಿ ಬುಧವಾರ ಒಡಂಬಡಿಕೆಗೆ ಅಂಕಿತ ಹಾಕಲಾಯಿತು.

ಖನಿಜ ಭವನದಲ್ಲಿ ನಡೆದ ಸಮಾರಂಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಮತ್ತು ಸೆನ್ಸೇರಾ ಕಂಪನಿಯ ಸಿಇಒ ಶೇಖರ್ ವಾಸನ್ ಒಡಂಬಡಿಕೆಗೆ ಸಹಿ ಹಾಕಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸನ್ಸೇರಾ ಎಂಜಿನಿಯರಿಂಗ್ ಲಿಮಿಟೆಡ್ ಸಂಸ್ಥೆಯು ಮುಂದಿನ ಐದು ವರ್ಷಗಳಲ್ಲಿ ಹಂತಹಂತವಾಗಿ ಈ ಹೂಡಿಕೆ ಮಾಡಲಿದೆ. ಇದರಿಂದ 3,500 ಉದ್ಯೋಗಗಳು ಸೃಷ್ಟಿ ಆಗಲಿವೆ ಎಂದರು.

ಕಂಪನಿಯು ರಾಮನಗರ ಜಿಲ್ಲೆಯ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 55 ಎಕರೆ ಪ್ರದೇಶದಲ್ಲಿ ತನ್ನ ಉತ್ಪಾದನಾ ಘಟಕ ಆರಂಭಿಸಲಿದೆ. ಇದರಿಂದ ರಾಜ್ಯದ ರಫ್ತು ವಹಿವಾಟಿಗೂ ಅನುಕೂಲ ಆಗಲಿದೆ ಎಂದರು.

ಇದನ್ನೂ ಓದಿ: FASTag new rule: ಫಾಸ್ಟ್‌ಟ್ಯಾಗ್‌ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!

ಕಂಪನಿಯು ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ತರಬೇತಿ ಕೇಂದ್ರ ಆರಂಭಿಸಲಿದ್ದು, ಇದರಿಂದ ಸ್ಥಳೀಯರ ಕೌಶಲ ವೃದ್ಧಿಯಾಗಲಿದೆ. ಕಂಪನಿಯು ದೇಶದಲ್ಲಿ 16 ತಯಾರಿಕಾ ಘಟಕಗಳನ್ನು ಹೊಂದಿದ್ದು, ಅವುಗಳ ಪೈಕಿ 12 ಘಟಕಗಳು ರಾಜ್ಯದಲ್ಲೇ ಇವೆ ಎಂದು ಅವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕಂಪನಿಯ ಜಂಟಿ ವ್ಯವಸ್ಥಾಪಕ ನಿರ್ದೇಶಕ ಎಫ್‌.ಆರ್‌. ಸಿಂಘ್ವಿ, ಕಾರ್ಯದರ್ಶಿ ರಾಜೇಶ್‌ ಮೋದಿ ಉಪಸ್ಥಿತರಿದ್ದರು.

ಓಟಿಸ್ ಕಂಪನಿಯಿಂದ ರೂ.135 ಕೋಟಿ ಹೂಡಿಕೆ

ಎಲಿವೇಟರುಗಳನ್ನು ತಯಾರಿಸುವ ಓಟಿಸ್ ಕಂಪನಿ ಕೂಡ ರಾಜ್ಯದಲ್ಲಿ 135 ಕೋಟಿ ರೂಪಾಯಿ ಹೂಡಲು ಒಲವು ವ್ಯಕ್ತಪಡಿಸಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ಸಂಬಂಧವಾಗಿ ಕಂಪನಿಯ ಹಿರಿಯ ನಿರ್ದೇಶಕ ರವಿಶಂಕರ್ ನೇತೃತ್ವದ ತಂಡದೊಂದಿಗೆ ಮಾತುಕತೆ ನಡೆಸಿದರು.

ಇದನ್ನೂ ಓದಿ: Kannada New Movie: ರೆಟ್ರೋ ಸ್ಟೈಲ್‌ನಲ್ಲಿ ಮೂಡಿಬಂದ ʼಹೇಳು ಗೆಳತಿʼ; ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

ಇದಕ್ಕಾಗಿ ಕಂಪನಿಯು ಹಾರೋಹಳ್ಳಿಯಲ್ಲಿ 12 ಎಕರೆ ಭೂಮಿಯನ್ನು ಕೇಳಿದ್ದು, ಇದನ್ನು ಒದಗಿಸಲಾಗುವುದು. ಇದರಿಂದ 200ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ ಆಗಲಿದೆ ಎಂದು ಅವರು ಮಾಹಿತಿ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌: ಮತ್ತೇ ಇಳಿಕೆ ಕಂಡ ಚಿನ್ನ! ಖರೀದಿಗೆ ಇದೇ ಬೆಸ್ಟ್‌ ಟೈಮ್‌

VISTARANEWS.COM


on

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನದ ಬೆಲೆ ಇಳಿಕೆ ಕಾಣುವ ಮೂಲಕ ಆಭರಣ ಪ್ರಿಯರಿಗೆ ನೆಮ್ಮದಿ ತಂದಿದೆ. ಬುಧವಾರದ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆಯ ಮೇಲೆ 50 ರೂಪಾಯಿಗಳಷ್ಟು ಕುಸಿತ ಕಂಡುಬಂದಿದ್ದು, ಕಳೆದ ಮೂರು ದಿನಗಳಲ್ಲಿ ಒಟ್ಟು 100 ರೂಪಾಯಿಗಳಷ್ಟು ದರ ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಸ್ಥಿರತೆಯ ನಡುವೆಯೂ ಭಾರತೀಯ ಮಾರುಕಟ್ಟೆಯಲ್ಲಿನ ಈ ಇಳಿಕೆಯು ಮದುವೆ ಹಾಗೂ ಶುಭ ಸಮಾರಂಭಗಳಿಗಾಗಿ ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಉತ್ತಮ ಅವಕಾಶವನ್ನು ಕಲ್ಪಿಸಿಕೊಟ್ಟಿದೆ.

ದರ ವಿವರಗಳನ್ನು ಗಮನಿಸುವುದಾದರೆ, ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ನ ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಮ್‌ಗೆ 14,185 ರೂಪಾಯಿಗಳಾಗಿದ್ದು, 10 ಗ್ರಾಮ್‌ ಚಿನ್ನದ ದರ 1,41,850 ರೂಪಾಯಿಗಳಿಗೆ ತಲುಪಿದೆ. ಇನ್ನು ಹೂಡಿಕೆದಾರರ ನೆಚ್ಚಿನ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ ಪ್ರತಿ ಗ್ರಾಮ್‌ಗೆ 15,475 ರೂಪಾಯಿಯಂತೆ 10 ಗ್ರಾಮ್‌ಗೆ 1,54,750 ರೂಪಾಯಿ ದಾಖಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ದುಬೈ ಹಾಗೂ ಸೌದಿ ಅರೇಬಿಯಾದಂತಹ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ದರ ಸ್ವಲ್ಪ ಹೆಚ್ಚಿದ್ದರೂ, ದೇಶಿಯ ಮಾರುಕಟ್ಟೆಯ ಇಂದಿನ ಇಳಿಕೆ ಗ್ರಾಹಕರಲ್ಲಿ ಹೊಸ ಉತ್ಸಾಹ ಮೂಡಿಸಿದೆ.

ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದರೂ, ಬೆಳ್ಳಿಯ ದರವು ಮಾರುಕಟ್ಟೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರು ಮತ್ತು ಮುಂಬೈನಲ್ಲಿ ಒಂದು ಗ್ರಾಮ್ ಬೆಳ್ಳಿ ಬೆಲೆ 265 ರೂಪಾಯಿ (100 ಗ್ರಾಂಗೆ 26,500 ರೂ.) ಇದ್ದರೆ, ಚೆನ್ನೈ ಮತ್ತು ಕೇರಳದಂತಹ ಭಾಗಗಳಲ್ಲಿ ಬೆಲೆ 275 ರೂಪಾಯಿಯಂತೆ ಸ್ವಲ್ಪ ಮಟ್ಟಿನ ಏರಿಕೆ ದಾಖಲಿಸಿದೆ. ವಿವಿಧ ನಗರಗಳ ನಡುವೆ ಬೆಲೆಯಲ್ಲಿ ಅಲ್ಪ ವ್ಯತ್ಯಾಸಗಳಿದ್ದರೂ, ಒಟ್ಟಾರೆ ಲೋಹದ ಮಾರುಕಟ್ಟೆಯು ಪ್ರಸ್ತುತ ಖರೀದಿದಾರರಿಗೆ ಪೂರಕವಾಗಿದ್ದು, ಆಭರಣ ಮಳಿಗೆಗಳಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.

Continue Reading

ವಿಜಯಪುರ

Invest Karnataka: ಕೆನಡಾದ ವಿಟೆರಾದಿಂದ ವಿಜಯಪುರದಲ್ಲಿ 250 ಕೋಟಿ ರೂ. ಹೂಡಿಕೆ: ಸಚಿವ ಎಂ.ಬಿ. ಪಾಟೀಲ್‌

ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ ರೂ. 250 ಕೋಟಿ ಮೊತ್ತದ ಬಂಡವಾಳ ಹೂಡಲಿದೆ (Invest Karnataka) ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Invest Karnataka

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ ರೂ. 250 ಕೋಟಿ ಮೊತ್ತದ ಬಂಡವಾಳ ಹೂಡಲಿದೆ (Invest Karnataka) ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ವಿಟೆರಾ ಕಂಪನಿಯ ಪ್ರತಿನಿಧಿಗಳ ಜತೆ ಸಚಿವರು ಇಲ್ಲಿನ ಖನಿಜ ಭವನದಲ್ಲಿ ನಡೆಸಿದ ಸಭೆಯಲ್ಲಿ ಈ ಬಂಡವಾಳ ಹೂಡಿಕೆ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Karnataka Weather : ಸಂಜೆ ಸುರಿದ ಭಾರಿ ಮಳೆಗೆ ನೆಲಕ್ಕುರುಳಿದ ಬೃಹತ್‌ ಮರ; ಕಾರು, ಶೆಡ್‌ ಜಖಂ

ವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ, ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ. ವಿಟೆರಾ ಕಂಪನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದ್ದು, ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೂ ಉತ್ತೇಜನ ದೊರೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: Passport Seva Portal: ಐದು ದಿನಗಳ ಕಾಲ ಪಾಸ್ ಪೋರ್ಟಲ್ ಸೇವಾ ಕಾರ್ಯ ಸ್ಥಗಿತ

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ. ಮಹೇಶ ಹಾಗೂ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಬೆಂಗಳೂರು

Invest Karnataka: ಇಂಧನ ತಂತ್ರಜ್ಞಾನ; ರಾಜ್ಯದಲ್ಲಿ 8,300 ಕೋಟಿ ರೂ. ಹೂಡಿಕೆ ಮಾಡಲಿರುವ ಷೆರ್ವನ್‌ ಇಂಡಿಯಾ

ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರ ಜತೆಗೆ ಷೆರ್ವನ್‌ ಇಂಡಿಯಾ ನಿಯೋಗವು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಬೆಂಗಳೂರಿನಲ್ಲಿ ತನ್ನ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ (ಇಎನ್‌ಜಿಐಎನ್‌ಇ) ಸ್ಥಾಪಿಸಲು 8,300 ಕೋಟಿ ರೂ. ಹೂಡಿಕೆ (Invest Karnataka) ಮಾಡುವುದಾಗಿ ಘೋಷಿಸಿದೆ. ಸಭೆಯಲ್ಲಿ ಷೆರ್ವನ್‌ ಇಂಡಿಯಾ ಮುಖ್ಯಸ್ಥ ಡಾ. ಅಕ್ಷಯ್‌ ಸಾಹ್ನಿ, ಜನರಲ್‌ ಮ್ಯಾನೇಜರ್‌ ಕೇಟ್‌ ಕಲಘನ್‌ ಇದ್ದರು. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Invest Karnataka

ಬೆಂಗಳೂರು: ಇಂಧನ ಪರಿಹಾರಗಳನ್ನು ನೀಡುವಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಷೆರ್ವನ್‌ ಕಂಪನಿಯು ಬೆಂಗಳೂರಿನಲ್ಲಿ ತನ್ನ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ (ಇಎನ್‌ಜಿಐಎನ್‌ಇ) ಸ್ಥಾಪಿಸಲು 8,300 ಕೋಟಿ ರೂ. ಹೂಡಿಕೆ (Invest Karnataka) ಮಾಡುವುದಾಗಿ ಇಂದು ಇಲ್ಲಿ ಪ್ರಕಟಿಸಿದೆ.

ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರ ಜತೆಗೆ ಷೆರ್ವನ್‌ ನಿಯೋಗವು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಈ ಹೂಡಿಕೆ ಘೋಷಿಸಲಾಗಿದೆ. ಸಭೆಯಲ್ಲಿ ಷೆರ್ವನ್‌ ಇಂಡಿಯಾ ಮುಖ್ಯಸ್ಥ ಡಾ. ಅಕ್ಷಯ್‌ ಸಾಹ್ನಿ, ಜನರಲ್‌ ಮ್ಯಾನೇಜರ್‌ ಕೇಟ್‌ ಕಲಘನ್‌ ಅವರು ಉಪಸ್ಥಿತರಿದ್ದರು.

ಇದನ್ನೂ ಓದಿ: Kannada New Movie: ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೇಲರ್ ರಿಲೀಸ್‌; ಸಿನಿಮಾ ಬಿಡುಗಡೆ ಯಾವಾಗ?

ಈ ಬಗ್ಗೆ ಸಚಿವ ಎಂ.ಬಿ.ಪಾಟೀಲ ಮಾತನಾಡಿ, “ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿ ಉತ್ತೇಜಿಸುವಲ್ಲಿ ಕರ್ನಾಟಕವು ನಿರಂತರವಾಗಿ ಮುನ್ನಡೆ ಸಾಧಿಸುತ್ತಿದೆ. ₹8,300 ಕೋಟಿ ಮೊತ್ತದ ಈ ಹೂಡಿಕೆ ಕಾರ್ಯಗತಗೊಳಿಸುವಲ್ಲಿ ರಾಜ್ಯ ಸರ್ಕಾರ ಮತ್ತು ಷೆರ್ವನ್‌ ಕಂಪನಿ ನಡುವಣ ಸಹಯೋಗವು ಕರ್ನಾಟಕದ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಕ್ಷೇತ್ರದಲ್ಲಿನ ಮಹತ್ವದ ಪ್ರಗತಿಗೆ ಸ್ಪಷ್ಟ ನಿದರ್ಶನವಾಗಿದೆ. ನಾವೀನ್ಯತೆ, ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿ ಉತ್ತೇಜಿಸಲು ರಾಜ್ಯ ಸರ್ಕಾರವು ಬದ್ಧವಾಗಿದೆʼ ಎಂದು ತಿಳಿಸಿದ್ದಾರೆ.

ಷೆರ್ವನ್‌ ಇಂಡಿಯಾದ ಮುಖ್ಯಸ್ಥ ಅಕ್ಷಯ್ ಸಾಹ್ನಿ ಮಾತನಾಡಿ,”ಕೈಗೆಟುಕುವ, ವಿಶ್ವಾಸಾರ್ಹವಾದ ಶುದ್ಧ ಇಂಧನ ಒದಗಿಸಲು ಭಾರತದ ಅಸಾಧಾರಣ ಪ್ರತಿಭಾನ್ವಿತರು ನಮ್ಮ ಜಾಗತಿಕ ಜಾಲದ ಸಂಪನ್ಮೂಲ ಹಾಗೂ ಪರಿಣತಿ ಜತೆಗೆ ಕೆಲಸ ಮಾಡಲು ಈ ಕೇಂದ್ರವು ಅವಕಾಶ ಒದಗಿಸಲಿದೆʼ ಎಂದು ಹೇಳಿದ್ದಾರೆ.

ಈ ಕೇಂದ್ರದಲ್ಲಿ ಇಂಧನ ವ್ಯವಸ್ಥೆಯ ತಂತ್ರಜ್ಞಾನ ಆವಿಷ್ಕಾರಗಳಿಗೆ ವೇಗ ನೀಡಲು ಎಂಜಿನಿಯರಿಂಗ್‌ ಮತ್ತು ಡಿಜಿಟಲ್‌ ಸೇವೆಗಳಿಗೆ ಸಂಬಂಧಿಸಿದಂತೆ 2025ರ ವೇಳೆಗೆ 600 ತಂತ್ರಜ್ಞರನ್ನು ನೇಮಕ ಮಾಡಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಆವಿಷ್ಕಾರಕ್ಕೆ ಪೂರಕ ವಾತಾವರಣ ಸೃಷ್ಟಿಸಿರುವ ಪ್ರಗತಿಪರ ನೀತಿಗಳ ಮೂಲಕ ತಾಂತ್ರಿಕ ಪ್ರಗತಿ ಉತ್ತೇಜಿಸಲು ರಾಜ್ಯವು ಅನುಕರಣೀಯ ಕ್ರಮಗಳನ್ನು ತೆಗೆದುಕೊಂಡಿದೆ. ಬೆಂಗಳೂರು ಈಗಾಗಲೇ 500ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ (ಜಿಸಿಸಿ) ನೆಲೆಯಾಗಿದ್ದು, ಹಣಕಾಸು, ಆರೋಗ್ಯ, ರಿಟೇಲ್‌ ವ್ಯಾಪಾರ, ತಯಾರಿಕಾ ಮತ್ತಿತರ ವಲಯಗಳು ಸೇರಿದಂತೆ ಭಾರತದ ʼಜಿಸಿಸಿʼಗಳಲ್ಲಿ ಶೇ 30ಕ್ಕಿಂತ ಹೆಚ್ಚು ಪಾಲು ಹೊಂದಿದೆ ಎಂದು ಸಚಿವರು ವಿವರಿಸಿದರು.

ಷೆರ್ವನ್‌ ಶ್ರೇಷ್ಠತಾ ಕೇಂದ್ರವು (ಇಎನ್‌ಜಿಐಎನ್‌ಇ) ಸ್ಥಳೀಯ ವೃತ್ತಿಪರರಿಗೆ ಗಮನಾರ್ಹ ಪ್ರಮಾಣದಲ್ಲಿ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲಿದೆ. ಸದ್ಯದ ಜಾಗತಿಕ ಇಂಧನ ಬೇಡಿಕೆಗಳನ್ನು ಪೂರೈಸುವ ಸವಾಲಿಗೆ ಸ್ಪಂದಿಸಲು ಮತ್ತು ಭವಿಷ್ಯದಲ್ಲಿ ಕಡಿಮೆ ಇಂಗಾಲ ಹೊರಸೂಸುವ ಶುದ್ಧ ಇಂಧನ ತಯಾರಿಸುವುದಕ್ಕೆ ಕೊಡುಗೆ ನೀಡಲು ಅವರಿಗೆ ಅವಕಾಶ ನೀಡಲಿದೆ. ಇಲ್ಲಿ ಕಾರ್ಯನಿರ್ವಹಿಸಲಿರುವ ಷೆರ್ವನ್‌ ತಂಡವು ಅಂತಾರಾಷ್ಟ್ರೀಯ ಭಾಗಿದಾರರ ಸಹಭಾಗಿತ್ವದಲ್ಲಿ ಸಂಕೀರ್ಣ ಸ್ವರೂಪದ ಜಾಗತಿಕ ಕಾರ್ಯಾಚರಣೆಗಳು ಮತ್ತು ಇಂಧನ ಯೋಜನೆಗಳನ್ನು ಕಾರ್ಯಗತಗೊಳಿಸಲಿದೆ ಎಂದು ಸಚಿವ ಎಂ.ಬಿ. ಪಾಟೀಲ ವಿವರಿಸಿದರು.

ಬೆಂಗಳೂರಿನಲ್ಲಿ ಷೆರ್ವನ್‌ ಶ್ರೇಷ್ಠತಾ ಕೇಂದ್ರದ ಸ್ಥಾಪನೆಯು ತಂತ್ರಜ್ಞಾನ, ನಾವೀನ್ಯತೆ ಮತ್ತು ಕೌಶಲ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಆದ್ಯತೆಗಳಿಗೆ ಸೂಕ್ತವಾಗಿ ಹೊಂದಿಕೊಳ್ಳಲಿದೆ. ಈ ಹೂಡಿಕೆಯು ಜಾಗತಿಕ ಕಂಪನಿಗಳ ಪಾಲಿಗೆ ಕರ್ನಾಟಕವು ಪ್ರಮುಖ ತಾಣವಾಗಿರುವುದರ ಮಹತ್ವವನ್ನು ಬಿಂಬಿಸುತ್ತದೆ. ರಾಜ್ಯದ ಅಭಿವೃದ್ಧಿಯಲ್ಲಿ ಉದ್ಯಮ, ನಾವೀನ್ಯತೆ ಮತ್ತು ತಂತ್ರಜ್ಞಾನವನ್ನು ಉತ್ತೇಜಿಸುವ ಕರ್ನಾಟಕ ಸರ್ಕಾರದ ಅಚಲ ಬದ್ಧತೆಗೂ ಇದು ಸಾಕ್ಷಿಯಾಗಿದೆ ಎಂದೂ ಸಚಿವರು ಹೇಳಿದರು.

ಇದನ್ನೂ ಓದಿ: Kannada New Movie: ʼಪೆನ್ ಡ್ರೈವ್ʼ ಚಿತ್ರದಲ್ಲಿ ಮಾಲಾಶ್ರೀ; ಇದು ತನಿಷಾ ಕುಪ್ಪಂಡ ಅಭಿನಯದ ಚಿತ್ರ

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಮತ್ತು ಷೆರ್ವನ್‌ನ ಪ್ರತಿನಿಧಿಗಳು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Foreign Investment: ರಾಜ್ಯದಲ್ಲಿ ಹೂಡಿಕೆಗೆ ದ. ಕೊರಿಯಾ ಆಸಕ್ತಿ; ಸಚಿವ ಎಂ‌.ಬಿ. ಪಾಟೀಲ್‌ ಚರ್ಚೆ

Foreign Investment: ದಕ್ಷಿಣ ಕೊರಿಯಾದ ಕಾನ್ಸುಲ್ ಜನರಲ್ ಚಾಂಗ್ ನ್ಯುನ್ ಕಿಮ್ ನೇತೃತ್ವದ ನಿಯೋಗವು ಮಂಗಳವಾರ ಬೃಹತ್ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ, ಮಾತುಕತೆ ನಡೆಸಿತು. ಈ ವೇಳೆ ಸಚಿವರು, ರಾಜ್ಯದಲ್ಲಿ ಇರುವ ಕೈಗಾರಿಕಾ ಕಾರ್ಯಪರಿಸರ ಮತ್ತು ಉದ್ಯಮಸ್ನೇಹಿ ನೀತಿಗಳನ್ನು ವಿವರಿಸಿದರು.

VISTARANEWS.COM


on

Foreign Investment investment in the state South Korea Consul General along with Minister M.B. Patil discussion

ಬೆಂಗಳೂರು: ದಕ್ಷಿಣ ಕೊರಿಯಾದ ಕಾನ್ಸುಲ್ ಜನರಲ್ ಚಾಂಗ್ ನ್ಯುನ್ ಕಿಮ್ ನೇತೃತ್ವದ ನಿಯೋಗ ಮಂಗಳವಾರ ಬೃಹತ್ ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ, ಮಾತುಕತೆ (Foreign Investment) ನಡೆಸಿತು.

ಸಚಿವ ಪಾಟೀಲ ನೇತೃತ್ವದ ರಾಜ್ಯ ನಿಯೋಗವು ಇತ್ತೀಚಿಗೆ ಕೊರಿಯಾಕ್ಕೆ ಭೇಟಿ ನೀಡಿ, ರಾಜ್ಯದಲ್ಲಿ ಹೆಚ್ಚು ಬಂಡವಾಳ ನೀಡುವಂತೆ ಅಲ್ಲಿನ‌ ಉದ್ದಿಮೆಗಳಿಗೆ ಆಹ್ವಾನಿಸಿತ್ತು.

ಇದನ್ನೂ ಓದಿ: Bengaluru Power Cut: ಜು.25ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಇಂದಿನ ಭೇಟಿಯ ಸಂದರ್ಭದಲ್ಲಿ ಎಂ‌.ಬಿ. ಪಾಟೀಲ ಅವರು, ರಾಜ್ಯದಲ್ಲಿ ಇರುವ ಕೈಗಾರಿಕಾ ಕಾರ್ಯಪರಿಸರ ಮತ್ತು ಉದ್ಯಮಸ್ನೇಹಿ ನೀತಿಗಳನ್ನು ವಿವರಿಸಿದರು. ಮುಖ್ಯವಾಗಿ ವಿದ್ಯುತ್ ಚಾಲಿತ ವಾಹನ ತಯಾರಿಕೆ, ಗ್ರೀನ್ ಎನರ್ಜಿ, ಮರುಬಳಕೆ ಇಂಧನ, ಆಟೋಮೊಬೈಲ್, ವೈಮಾಂತರಿಕ್ಷ ಮತ್ತು ಸಂಶೋಧನೆ ಮುಂತಾದ ವಲಯಗಳಿಗೆ ನೀಡಿರುವ ಆದ್ಯತೆ ಬಗ್ಗೆ ಮನದಟ್ಟು ಮಾಡಿಕೊಟ್ಟರು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಕೊರಿಯಾ ನಿಯೋಗದಲ್ಲಿ ಸಂಶೋಧಕರಾದ ಜೂನ್ ಸಿಕ್ ಹ್ವಾಂಗ್, ಇಂದುಜಾ ಅಗರವಾಲ್, ಸಿಯೋ ಯಂಗ್ ಮೂನ್ ಕೂಡ ಇದ್ದರು.

Continue Reading
Advertisement
Rakshit Shetty Richard Anthony Produce By Hombale
ದೇಶ6 hours ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ6 hours ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ6 hours ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ1 day ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ1 day ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ1 day ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ1 day ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ1 day ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest2 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest2 days ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌