Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ - Vistara News

ಉದ್ಯೋಗ

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job: ಸರ್ಕಾರಿ ಇಲಾಖೆಯಲ್ಲಿ 7 ಲಕ್ಷ ಜನ ಮಾಡಬೇಕಾದ ಕೆಲಸವನ್ನು ಈಗ 4 ಲಕ್ಷ ಜನರು ಮಾಡುತ್ತಲಿದ್ದಾರೆ. ಇದರ ಬಗ್ಗೆ ವಿಸ್ತಾರ ನ್ಯೂಸ್‌ನಲ್ಲಿ (Vistara News) ಪ್ರಸಾರ ಮಾಡಲಾಗಿದೆ. ಸರ್ಕಾರ ಹುದ್ದೆಗಳ ಬಗ್ಗೆ ಕೊಟ್ಟ ಉತ್ತರ ಅಸಮರ್ಪಕವಾಗಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರೇ ಉತ್ತರ ಕೊಡಬೇಕು ಎಂದು ಪಟ್ಟು ಹಿಡಿದಿದ್ದು, ಗದ್ದಲಕ್ಕೆ ಕಾರಣವಾಗಿದೆ.

VISTARANEWS.COM


on

Government Job Vistara Exclusive and CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ರಾಜ್ಯದಲ್ಲಿ ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳು (Government Job) ಖಾಲಿ ಇರುವ ಬಗ್ಗೆ ವಿಸ್ತಾರ ನ್ಯೂಸ್‌ ಬಿತ್ತರಿಸಿದ ಎಕ್ಸ್‌ಕ್ಲೂಸಿವ್‌ ವರದಿಯು ಬೆಳಗಾವಿ ಚಳಿಗಾಳದ ಅಧಿವೇಶನದಲ್ಲಿ (Belagavi Winter Session) ಚರ್ಚೆಗೆ ಬಂದಿದ್ದು, ಆಡಳಿತ ಮತ್ತು ವಿಪಕ್ಷಗಳ ವಾಗ್ವಾದಕ್ಕೆ ಕಾರಣವಾಗಿದೆ. ಪರಿಷತ್‌ ಕಲಾಪದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಬಿಜೆಪಿ ಸದಸ್ಯೆ ತೇಜಸ್ವಿನಿ ರಮೇಶ್‌, ಸರ್ಕಾರಿ ಇಲಾಖೆಯಲ್ಲಿ (Government Department) 7 ಲಕ್ಷ ಜನ ಮಾಡಬೇಕಾದ ಕೆಲಸವನ್ನು ಈಗ 4 ಲಕ್ಷ ಜನರು ಮಾಡುತ್ತಲಿದ್ದಾರೆ. ಇದರ ಬಗ್ಗೆ ವಿಸ್ತಾರ ನ್ಯೂಸ್‌ನಲ್ಲಿ (Vistara News) ಪ್ರಸಾರ ಮಾಡಲಾಗಿದೆ. ಸರ್ಕಾರ ಹುದ್ದೆಗಳ ಬಗ್ಗೆ ಕೊಟ್ಟ ಉತ್ತರ ಅಸಮರ್ಪಕವಾಗಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರೇ ಉತ್ತರ ಕೊಡಬೇಕು ಎಂದು ಪಟ್ಟು ಹಿಡಿದಿದ್ದು, ಗದ್ದಲಕ್ಕೆ ಕಾರಣವಾಗಿದೆ.

ಖಾಲಿ ಹುದ್ದೆ ಬಗ್ಗೆ ಸರ್ಕಾರ ಕೊಟ್ಟ ಉತ್ತರ ಅಸಮರ್ಪಕವಾಗಿದೆ ಎಂದು ತೇಜಸ್ವಿನಿ ರಮೇಶ್‌ ಹೇಳಿಕೆ ನೀಡುತ್ತಿದ್ದಂತೆ ಮಧ್ಯ ಪ್ರವೇಶ ಮಾಡಿದ ಸಲೀಂ ಅಹಮದ್‌, ಸರ್ಕಾರ ಈಗಾಗಲೇ ಉತ್ತರ ಕೊಟ್ಟಿದೆ ಎಂದು ಹೇಳಿದರು. ಆಗ ಕಾಂಗ್ರೆಸ್ ಸದಸ್ಯ ಯು.ಬಿ. ವೆಂಕಟೇಶ್ ಮಾತನಾಡಿ, ಈ ಹಿಂದೆ ನಿಮ್ಮ ಸರ್ಕಾರದ ಇತ್ತಲ್ಲವೇ? ಆಗ ಏನು ಕತ್ತೆ ಕಾಯ್ತಾ ಇದ್ರಾ? ಕೇಂದ್ರ ಸರ್ಕಾರದಲ್ಲಿ ಒಂದು ಕೋಟಿ ಹುದ್ದೆ ಖಾಲಿ ಇದೆ ಎಂದು ಹೇಳಿದರು. ಇದು ಬಿಜೆಪಿ ಸದಸ್ಯರನ್ನು ಮತ್ತಷ್ಟು ಕೆರಳಿಸಿತು.

ಸಿಎಂ ಕಲಾಪಕ್ಕೆ ಬಂದು ಉತ್ತರಿಸಲಿ

ಈ ಹೇಳಿಕೆಯಿಂದ ಆಕ್ರೋಶಗೊಂಡ ಪ್ರತಿಪಕ್ಷ ಬಿಜೆಪಿ ಸದಸ್ಯರು, ಕತ್ತೆ ಅನ್ನೋ ಪದವನ್ನು ಕಡಿತದಿಂದ ತೆಗೆಯಲು ಒತ್ತಾಯ ಮಾಡಿದರು. ಬಳಿಕ ಮಾತನಾಡಿದ ತೇಜಸ್ವಿನಿ ರಮೇಶ್‌, ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ನಮಗೆ ಆರೋಪಿಸುತ್ತಾರೆ. ಆದರೆ, ನಾವು ಬ್ಲಾಕ್‌ಮೇಲ್ ಮಾಡುತ್ತಿಲ್ಲ. ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದೇವೆ. ಖಾಲಿ ಹುದ್ದೆ ಬಗ್ಗೆ ವಿಸ್ತಾರ ನ್ಯೂಸ್‌ನಲ್ಲಿ ಪ್ರಸಾರ ಆಗುತ್ತಾ ಇದೆ. ಯಾವ ಯಾವ ಇಲಾಖೆಗಳಲ್ಲಿ ಎಷ್ಟೆಷ್ಟು ಸರ್ಕಾರಿ ಹುದ್ದೆಗಳು ಖಾಲಿ ಇವೆ ಅಂತ ತೋರಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಕಲಾಪಕ್ಕೆ ಆಗಮಿಸಿ ಉತ್ತರಿಸಬೇಕು ಎಂದು ಆಗ್ರಹಿಸಿದರು.

ಸಿಎಂ ಉತ್ತರಕ್ಕಾಗಿ ಪಟ್ಟು

ಆಗ ಮಾತನಾಡಿದ ಯು.ಬಿ. ವೆಂಕಟೇಶ್, ಈಗಾಗಲೇ ಮುಖ್ಯಮಂತ್ರಿಗಳಿಂದಲೇ ಉತ್ತರ ಕೊಡಿಸಿಯಾಗಿದೆ. ಇವರು ಕಳೆದ ಐದು ವರ್ಷದಿಂದ ಏನ್ ಕತ್ತೆ ಕಾಯುತ್ತಿದ್ದರಾ? ಯಾಕೆ ಏಳನೇ ವೇತನ ಆಯೋಗ ಜಾರಿ ಮಾಡಲಿಲ್ಲ? ಎಂದು ಪ್ರಶ್ನೆ ಮಾಡಿದರು. ಇದರಿಂದ ಅಸಮಾಧಾನಗೊಂಡ ತೇಜಸ್ವಿನಿ ರಮೇಶ್, ಕತ್ತೆ ಕಾಯುವ ಕೆಲಸ ಸದನದಲ್ಲಿ ಮಾಡಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನಕ್ಕೆ ಬಂದು ಉತ್ತರ ಕೊಡಬೇಕು. ಅಲ್ಲಿಯವರೆಗೂ ಧರಣಿ ವಾಪಸ್ ಪಡೆಯಲ್ಲ ಎಂದು ಪಟ್ಟುಹಿಡಿದು ಕುಳಿತರು.

ಕತ್ತೆಯ ಗುಣವನ್ನು ಬೆಳೆಸಿಕೊಳ್ಳಬೇಕು

ಆಗ ಬೋಜೇಗೌಡ ಮಾತನಾಡಿ, ಕತ್ತೆಗಿರುವ ಗೌರವವನ್ನು ಸಹ ಕಾಂಗ್ರೆಸ್‌ನವರು ಹಾಳು ಮಾಡಿದ್ದಾರೆ. ಕತ್ತೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಹೇಳಿದರು. ಆಗ ಸಚಿವ ಕೃಷ್ಣ ಬೈರೆಗೌಡ ಮಾತನಾಡಿ, ಸುಗಮ ಕಲಾಪಕ್ಕೆ ಅನುವು ಮಾಡಿಕೊಡಿ. ಸಿಎಂ ಬೆಂಗಳೂರಿನ ಕಾರ್ಯಕ್ರಮದಲ್ಲಿದ್ದಾರೆ. ಅವರು ಬಂದ ಕೂಡಲೇ ಗಮನಕ್ಕೆ ತರುತ್ತೇವೆ ಎಂದು ಹೇಳಿದರು.

ಸಿಎಂರಿಂದ ಉತ್ತರ ಕೊಡಿಸುವ ಭರವಸೆ

ಇಷ್ಟಾದರೂ ಗದ್ದಲ ನಿಲ್ಲದೇ ಇದ್ದಾಗ ಸಭಾಪತಿ ಬಸವರಾಜ ಹೊರಟ್ಟಿ ಮಧ್ಯಪ್ರವೇಶಿಸಿ, ಸದನದ ಕಲಾಪವನ್ನು ನಡೆಸಲು ಬಿಡಿ. ಇದೇ ರೀತಿಯಾದರೆ ಸದನವನ್ನು ಮುಂದೂಡುತ್ತೇನೆ. ಏನ್ ಹುಡುಗಾಟಿಕೆ ಮಾಡಿಕೊಂಡಿದ್ದೀರಿ? ಎಂದು ಗರಂ ಆದರು. ಸಿಎಂ ಸಿದ್ದರಾಮಯ್ಯ ಅವರಿಂದ ಉತ್ತರ ಕೊಡಿಸುವ ಭರವಸೆ ಸಿಕ್ಕ ಮೇಲೆ ಪ್ರತಿಪಕ್ಷಗಳು ಧರಣಿಯನ್ನು ವಾಪಸ್‌ ಪಡೆದವು.

‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

VISTARA-EXCLUSIVE

ವಿಸ್ತಾರ ನ್ಯೂಸ್‌ನಲ್ಲಿ ಮೆಗಾ EXCLUSIVE ಸ್ಟೋರಿ ಇದಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಲಕ್ಷ, ಲಕ್ಷ ಖಾಲಿ ಹುದ್ದೆ (Government Job) ಇರುವುದು ಗೊತ್ತಾಗಿದೆ. ಗ್ಯಾರಂಟಿ ಯೋಜನೆಯನ್ನು ಕೊಟ್ಟಿರುವ ಕಾಂಗ್ರೆಸ್‌ ಸರ್ಕಾರದಲ್ಲಿ (Congress Government) ಉದ್ಯೋಗ ಸೃಷ್ಟಿಗೆ ‘ಗ್ಯಾರಂಟಿ’ಯೇ ಇಲ್ಲ ಎನ್ನುವಂತೆ ಆಗಿದೆ. ಸರ್ಕಾರ ಬಂದು 6 ತಿಂಗಳು ಕಳೆದರೂ ಉದ್ಯೋಗ ಭರ್ತಿಗೆ ಹೊಸ ನೋಟಿಫಿಕೇಷನ್ ಮಾಡಲಾಗಿಲ್ಲ. ಖಾಲಿ ಹುದ್ದೆ ಭರ್ತಿ ಹೇಳಿಕೆಯು ಕೇವಲ ಬಜೆಟ್‌ಗೆ ಸೀಮಿತವಾಗಿದೆ. ಯಾವ್ಯಾವ ಸರ್ಕಾರಿ ಇಲಾಖೆಯಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇವೆ? ಎಂಬ ಬಗ್ಗೆ ಇಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ.

ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಆರೋಗ್ಯ – ವೈದ್ಯಕೀಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ, ಕೃಷಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆಗಳಲ್ಲಿ ಒಟ್ಟು 2,47,558 ಹುದ್ದೆಗಳು ಖಾಲಿ ಇವೆ.

ಇಲ್ಲಿ ದಾಖಲೆಗಳ ಸಮೇತ ಖಾಲಿ ಹುದ್ದೆಗಳ ವಿವರ; ಇಲ್ಲಿದೆ ವಿಡಿಯೊ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ

  • ಮಂಜೂರಾದ ಹುದ್ದೆಗಳು – 2,82,862
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 2,16,803
  • ಖಾಲಿ ಹುದ್ದೆಗಳು- 66,059

ಒಳಾಡಳಿತ ಇಲಾಖೆ

  • ಮಂಜೂರಾದ ಹುದ್ದೆಗಳು – 1,26,913
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -1,03,356
  • ಖಾಲಿ ಹುದ್ದೆಗಳು – 23,557

ಉನ್ನತ ಶಿಕ್ಷಣ ಇಲಾಖೆ

  • ಮಂಜೂರಾದ ಹುದ್ದೆಗಳು – 24,785
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -12,111
  • ಖಾಲಿ ಹುದ್ದೆಗಳು- 12,674

ಆರೋಗ್ಯ ಮತ್ತು ವೈದ್ಯಕೀಯ

  • ಮಂಜೂರಾದ ಹುದ್ದೆಗಳು – 74,857
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -40,213
  • ಖಾಲಿ ಹುದ್ದೆಗಳು- 34,644

ಕಂದಾಯ ಇಲಾಖೆ

  • ಮಂಜೂರಾದ ಹುದ್ದೆಗಳು – 32,309
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -21,688
  • ಖಾಲಿ ಹುದ್ದೆಗಳು – 10,621

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

  • ಮಂಜೂರಾದ ಹುದ್ದೆಗಳು – 6,940
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -3,710
  • ಖಾಲಿ ಹುದ್ದೆಗಳು – 3,230

ಆರ್ಥಿಕ ಇಲಾಖೆ

  • ಮಂಜೂರಾದ ಹುದ್ದೆಗಳು – 18,892
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,113
  • ಖಾಲಿ ಹುದ್ದೆಗಳು – 8,779

ಕೃಷಿ ಇಲಾಖೆ

  • ಮಂಜೂರಾದ ಹುದ್ದೆಗಳು – 10,324
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 4,008
  • ಖಾಲಿ ಹುದ್ದೆಗಳು – 6,316

ಪಶುಸಂಗೋಪನೆ ಇಲಾಖೆ

  • ಮಂಜೂರಾದ ಹುದ್ದೆಗಳು – 19,610
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 8,581
  • ಖಾಲಿ ಹುದ್ದೆಗಳು – 11,029

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ

  • ಮಂಜೂರಾದ ಹುದ್ದೆಗಳು – 10,986
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,248
  • ಖಾಲಿ ಹುದ್ದೆಗಳು – 5,738

ಗ್ರಾಮೀಣಾಭಿವೃದ್ಧಿ ಇಲಾಖೆ

  • ಮಂಜೂರಾದ ಹುದ್ದೆಗಳು – 28,223
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 17,814
  • ಖಾಲಿ ಹುದ್ದೆಗಳು – 10,409

ಸಮಾಜ ಕಲ್ಯಾಣ ಇಲಾಖೆ

  • ಮಂಜೂರಾದ ಹುದ್ದೆಗಳು – 15,177
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,585
  • ಖಾಲಿ ಹುದ್ದೆಗಳು – 9,592

ಲೋಕೋಪಯೋಗಿ ಇಲಾಖೆ

  • ಮಂಜೂರಾದ ಹುದ್ದೆಗಳು – 16,635
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,602
  • ಖಾಲಿ ಹುದ್ದೆಗಳು – 6,033

ನೀರಾವರಿ ಇಲಾಖೆ

  • ಮಂಜೂರಾದ ಹುದ್ದೆಗಳು – 10,623
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 6,401
  • ಖಾಲಿ ಹುದ್ದೆಗಳು – 4,222

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಅಡಿಕೆ ಬೆಳೆಯ ಸಂಕಷ್ಟಗಳನ್ನು ನಿವಾರಿಸಿ

ಒಟ್ಟು 2,47,558 ಹುದ್ದೆಗಳು ಖಾಲಿ ಇದ್ದು, ಇದರ ಭರ್ತಿಗೆ ರಾಜ್ಯ ಸರ್ಕಾರ ಚಿಂತನೆಯನ್ನೇ ನಡೆಸಿಲ್ಲ. ಸರ್ಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಕಳೆದರೂ ಸಹ ಯಾವುದೇ ನೋಟಿಫಿಕೇಶನ್‌ ಆಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂಬ ಆಗ್ರಹಗಳು ಕೇಳಿ ಬಂದಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಗುಡ್‌ನ್ಯೂಸ್‌: 364 ಭೂಮಾಪಕರ ಹುದ್ದೆಗೆ ಮಾ. 11ರಿಂದ ಅರ್ಜಿ ಸಲ್ಲಿಸಿ

Job Alert: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ 364 ಗ್ರೂಪ್‌ ಸಿ ಭೂ ಮಾಪಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಮಾರ್ಚ್‌ 11ರಂದು ಆರಂಭವಾಗಲಿದ್ದು, ಕೊನೆಯ ದಿನ ಏಪ್ರಿಲ್‌ 10.

VISTARANEWS.COM


on

kpsc
Koo

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(Karnataka Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ ಸುಮಾರು 364 ಗ್ರೂಪ್‌ ಸಿ ಭೂ ಮಾಪಕರ ಹುದ್ದೆ ಇದಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (KPSC Land Surveyor Recruitment 2024). ಮಾರ್ಚ್‌ 11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್‌ 10ರ ವರೆಗೆ ಸಲ್ಲಿಸಬಹುದು (Job Alert).

ವಿದ್ಯಾರ್ಹತೆ

ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಬಿ.ಇ. (ಸಿವಿಲ್‌) / ಬಿ.ಟೆಕ್‌ (ಸಿವಿಲ್‌) ಅಥವಾ ಡಿಪ್ಲೋಮಾ (ಸಿವಿಲ್‌ ಎಂಜಿನಿಯರಿಂಗ್‌) ಉತ್ತೀರ್ಣರಾಗಿರಬೇಕು ಅಥವಾ ಪಿಯುಸಿ ಅಥವಾ ಸಿಬಿಎಸ್‌ಇ ಅಥವಾ ಐಸಿಎಸ್‌ಇಯ 12ನೇ ತರಗತಿ ಉತ್ತೀರ್ಣರಾಗಿರಬೇಕು (ಗಣಿತ ವಿಷಯದಲ್ಲಿ 60% ಅಂಕ ಪಡೆದಿರಬೇಕು) ಅಥವಾ ಕರ್ನಾಟಕ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್‌ & ಸಿಟಿ ಸರ್ವೆಯ ಪದವಿ ಪೂರ್ವ ಡಿಪ್ಲೋಮಾ ಉತ್ತೀರ್ಣವಾಗಿರಬೇಕು ಇಲ್ಲವೇ ಕರ್ನಾಟಕ ಸರ್ಕಾರದ ಉದ್ಯೋಗ ಮತ್ತು ತರಬೇತಿ ಇಲಾಖೆ ನಡೆಸುವ ಐಟಿಐ ಇನ್‌ ಸರ್ವೆ ಟ್ರೇಡ್‌ನಲ್ಲಿ ತೇರ್ಗಡೆಯಾಗಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 600 ರೂ., ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ) ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಮತ್ತು ಅರ್ಜಿ ಶುಲ್ಕ ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸ ಬೇಕಾಗಿಲ್ಲ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸ್ಪರ್ಧಾತ್ಮಕ ಪರೀಕ್ಷೆ, ಡಾಕ್ಯುಮಂಎಟ್‌ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾಗುವವರಿಗೆ 23,500 ರೂ.-47,650 ರೂ. ಮಾಸಿಕ ವೇತನ ದೊರೆಯಲಿದೆ.

ಇದನ್ನು ಗಮನಿಸಿ

ಈ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಒಂದು ಬಾರಿಯ ನೋಂದಣಿ ಪ್ರಕ್ರಿಯೆ (OTR-One Time Registration)ಯನ್ನು ಒಳಗೊಂಡಿದ್ದು, ಅಭ್ಯರ್ಥಿಗಳು ನೀಡಿರುವ ಮಾಹಿತಿಗಳನ್ನು ಮುಂದಿನ ಎಲ್ಲ ಅಧಿಸೂಚನೆಗಳಿಗೂ ಪರಿಗಣಿಸುವುದರಿಂದ, ಜಾಗರೂಕತೆಯಿಂದ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ.

ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌ ವಿಳಾಸ: https://kpsc.kar.nic.in/

ಅಧಿಸೂಚನೆಗಾಗಿ ಇಲ್ಲಿ ಇಲ್ಲಿ ಕ್ಲಿಕ್‌ ಮಾಡಿ (HK)

ಅಧಿಸೂಚನೆಗಾಗಿ ಇಲ್ಲಿ ಇಲ್ಲಿ ಕ್ಲಿಕ್‌ ಮಾಡಿ (RPC)

ಇದನ್ನೂ ಓದಿ: Job Alert: ಯುಪಿಎಸ್‌ಸಿಯಿಂದ 1,056 ಹುದ್ದೆಗಳ ಭರ್ತಿ; ಮಾ. 5ರೊಳಗೆ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ದ್ವಿತೀಯ ಪಿಯುಸಿ ಪಾಸ್‌ ಆದವರಿಗೆ ಗುಡ್‌ನ್ಯೂಸ್‌; 2,500 ಬಿಎಂಟಿಸಿ ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಿ

Job Alert: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಬರೋಬ್ಬರಿ 2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಮಾರ್ಚ್‌ 10ರಿಂದ ಆನ್‌ಲೈನ್‌ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಏಪ್ರಿಲ್‌ 10.

VISTARANEWS.COM


on

bmtc
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯಲ್ಲಿ ಖಾಲಿ ಇರುವ ಬರೋಬ್ಬರಿ 2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (Bmtc Conductor Recruitment 2024). ದ್ವಿತೀಯ ಪಿಯುಸಿ ಪಾಸ್‌ ಆದರವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್‌ 10ರಿಂದ ಆನ್‌ಲೈನ್‌ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಏಪ್ರಿಲ್‌ 10 (Job alert).

ವಿದ್ಯಾರ್ಹತೆ

ದ್ವಿತೀಯ ಪಿಯುಸಿ ಪಾಸ್ ಅಥವಾ ಐಸಿಎಸ್‌ಇ / ಸಿಬಿಎಸ್‌ಇ ಹನ್ನೆರಡನೇ ತರಗತಿ ಪಾಸ್ ಆದರವರು ಅರ್ಜಿ ಸಲ್ಲಿಸಬಹುದು. ಜತೆಗೆ 3 ವರ್ಷಗಳ ಡಿಪ್ಲೊಮಾ ತೇರ್ಗಡೆಯಾದವರು ಕೂಡ ಅರ್ಹರು. ಜತೆಗೆ ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್‌ ಅನ್ನು ಹೊಂದಿರತಕ್ಕದ್ದು. ಪುರುಷರ ಎತ್ತರ 160 ಸೆಂಟಿ ಮೀಟರ್‌, ಮಹಿಳೆಯರ ಎತ್ತರ 150 ಸೆಂಟಿ ಮೀಟರ್‌ ಇರಬೇಕು. ಗಮನಿಸಿ: ಮುಕ್ತ ಶಾಲೆ ಅಥವಾ ಮುಕ್ತ ವಿವಿಯಿಂದ ಪಿಯುಸಿ/ 12ನೇ ತರಗತಿ ಪಾಸಾದವರು ಅಥವಾ ಜೆಒಸಿ / ಜೆಎಲ್‌ಸಿ ಕೋರ್ಸ್‌ಗಳನ್ನು ಮಾಡಿದವರು ಅರ್ಜಿ ಸಲ್ಲಿಸಲು ಅರ್ಹರಲ್ಲ.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಮಾಜಿ ಸೈನಿಕ / ಇಲಾಖಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 750 ರೂ. ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಶೇಷ ಚೇತನ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ

ಸಾಮಾನ್ಯ ಸಾಮರ್ಥ್ಯ ಪರೀಕ್ಷೆ (Commong Aptitude Test), ದೇಹದಾರ್ಢ್ಯತೆ ಪರಿಶೀಲನೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸಾಮಾನ್ಯ ಸಾಮರ್ಥ್ಯ ಪರೀಕ್ಷೆ ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಯಲಿದೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪ್ರಶ್ನೆಗಳು ಇರಲಿದ್ದು, 200 ಅಂಕಗಳನ್ನು ಹೊಂದಿದೆ. ಗಮನಿಸಿ ತಪ್ಪು ಉತ್ತರಕ್ಕೆ ನೆಗೆಟಿವ್‌ ಅಂಕಗಳಿದ್ದು, ಬರೆಯುವಾಗ ಎಚ್ಚರ ವಹಿಸಬೇಕು. ಈ ಪರೀಕ್ಷೆ ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಬಳ್ಳಾರಿ, ಬೀದರ್‌, ಕೊಪ್ಪಳ, ರಾಯಚೂರು ಮತ್ತು ಕಲಬುರ್ಗಿ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಧಾಕಾರದ ವೆಬ್‌ಸೈಟ್‌ನಿಂದ ಡೌಲ್‌ಲೋಡ್‌ ಮಾಡಿಕೊಳ್ಳಬೇಕು. ಇದರ ದಿನಾಂಕವನ್ನು ಬಳಿಕ ತಿಳಿಸಲಾಗುವುದು. ಪರೀಕ್ಷೆ ಬರೆಯಲು ಪ್ರವೇಶ ಪತ್ರದೊಂದಿಗೆ ಪ್ಯಾನ್‌ ಕಾರ್ಡ್‌ / ಲೈಸನ್ಸ್‌ / ಆಧಾರ್‌ ಕಾರ್ಡ್‌ / ಪಾಸ್‌ಪೋರ್ಟ್‌ / ವೋಟರ್‌ ಐಡಿ / ಸರ್ಕಾರಿ ನೌಕರರ ಐಡಿ ಪೈಕಿ ಒಂದು ಮೂಲ ಗುರುತಿನ ಚೀಟಿ ಹಾಜರು ಪಡಿಸಬೇಕು.

ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷ ವೃತ್ತಿ ತರಬೇತಿ ನೀಡಲಾಗುವುದು. ಈ ತರಬೇತಿ ಅವಧಿಯಲ್ಲಿ ಮಾಸಿಕ ಸಮಗ್ರ ತರಬೇತಿ ಭತ್ಯೆಯಾಗಿ 9,100 ರೂ. ನೀಡಲಾಗುವುದು. ಈ ತರಬೇತಿಯನ್ನು ಸಮರ್ಪಕವಾಗಿ ಪೂರೈಸಿದವರುನ್ನು ಎರಡು ವರ್ಷಗಳ ಅವಧಿಗೆ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆಗೆ ನೇಮಕಗೊಳಿಸಲಾಗುತ್ತದೆ. ಇದನ್ನು ತೃಪ್ತಿಕರವಾಗಿ ಪೂರೈಸಿದವರನ್ನು ನೇಮಕಾತಿ ಪ್ರಾಧಿಕಾರದಿಂದ ಖಾಯಂಗೊಳಿಸಲಾಗುವುದು.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ಮೂಲಕ ಮಾರ್ಚ್‌ 10ರಿಂದ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Job Alert: ಯುಪಿಎಸ್‌ಸಿಯಿಂದ 1,056 ಹುದ್ದೆಗಳ ಭರ್ತಿ; ಮಾ. 5ರೊಳಗೆ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

KAS Recruitment 2024: 384 ಕೆಎಎಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾರ್ಚ್‌ 4ರಿಂದಲೇ ಅರ್ಜಿ ಸಲ್ಲಿಸಿ

KAS Recruitment 2024: 2024ರ ಮಾರ್ಚ್‌ 4ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಏಪ್ರಿಲ್‌ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸದ್ಯ ಪೂರ್ವಭಾವಿ ಪರೀಕ್ಷಾ ದಿನಾಂಕವನ್ನು (ತಾತ್ಕಾಲಿಕ) ಪ್ರಕಟ ಮಾಡಲಾಗಿದ್ದು, 2024ರ ಮೇ 5ರಂದು ಪರೀಕ್ಷೆ ನಡೆಯಲಿದೆ.

VISTARANEWS.COM


on

KAS Recruitment 2024 invited for 384 KAS posts Apply from March 4
Koo

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) (kpsc recruitment 2024) ಗೆಜೆಟೆಡ್‌ ಪ್ರೊಬೆಷನರಿಯ (ಕೆಎಎಸ್) (KAS Recruitment 2024) ಗ್ರೂಪ್‌ “ಎ” ಮತ್ತು ಗ್ರೂಪ್‌ “ಬಿ” ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹೈದರಾಬಾದ್‌ ಕರ್ನಾಟಕ ಹಾಗೂ ಉಳಿಕೆ ವೃಂದಗಳಲ್ಲಿ ಅರ್ಜಿ ಆಹ್ವಾನ ಮಾಡಲಾಗಿದ್ದು, ಒಟ್ಟು 384 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸುಮಾರು ಆರು ವರ್ಷಗಳ ನಂತರ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

2024ರ ಮಾರ್ಚ್‌ 4ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಏಪ್ರಿಲ್‌ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸದ್ಯ ಪೂರ್ವಭಾವಿ ಪರೀಕ್ಷಾ ದಿನಾಂಕವನ್ನು (ತಾತ್ಕಾಲಿಕ) ಪ್ರಕಟ ಮಾಡಲಾಗಿದ್ದು, 2024ರ ಮೇ 5ರಂದು ಪರೀಕ್ಷೆ ನಡೆಯಲಿದೆ. ಈ ಬಾರಿ ಮಾತ್ರ ವಯೋಮಿತಿಯಲ್ಲಿ ಮೂರು ವರ್ಷ ಹೆಚ್ಚಳ ಮಾಡಲಾಗಿದೆ. ಕನಿಷ್ಠ 21 ವರ್ಷವಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 38 (ಮೂರು ವರ್ಷ ಹೆಚ್ಚಳ), ಪ್ರವರ್ಗ 2ಎ, 2ಬಿ, 3ಎ, 3 ಬಿ ಅಭ್ಯರ್ಥಿಗಳಿಗೆ 41 ವರ್ಷ, ಎಸ್‌ಸಿ, ಎಸ್‌ಟಿ ಪ್ರವರ್ಗ 1ಕ್ಕೆ 43 ವರ್ಷ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ಗ್ರೂಪ್‌ ಎ ಹುದ್ದೆ ವಿವರ

KAS Recruitment 2024 Good news for KAS aspirants Applications invited for 384 vacancies and kpsc recruitment 2024

ಸಂದರ್ಶನ ನಡೆಯಲಿದೆ

ಪೂರ್ವಭಾವಿ ಪರೀಕ್ಷೆ ಬಳಿಕ ಮುಖ್ಯ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವವರು ಸಂದರ್ಶನಕ್ಕೆ ಹಾಜರಾಗಬೇಕಿರುತ್ತದೆ.

ಗ್ರೂಪ್‌ ಬಿ ಹುದ್ದೆಗಳ ವಿವರ

KAS Recruitment 2024 Good news for KAS aspirants Applications invited for 384 vacancies and kpsc recruitment 2024

ಸಮಸ್ಯೆಯಾದರೆ ಈ ಸಹಾಯವಾಣಿಗೆ ಕರೆ ಮಾಡಿ

ಅರ್ಜಿ ಸಲ್ಲಿಸಲು ಸಮಸ್ಯೆಗಳು ಎದುರಾದಲ್ಲಿ ಹೆಲ್ಪ್‌ಲೈನ್‌ ನಂಬರ್‌ ನೀಡಲಾಗಿದ್ದು, 080-30574957 / 30574901 ಗೆ ಕರೆ ಮಾಡಲು ಸೂಚಿಸಲಾಗಿದೆ.

ತಪ್ಪು ಸರಿಪಡಿಸಲು ಕೊನೇ ಅವಕಾಶ

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ವಿಳಾಸ, ಪ್ರವರ್ಗ, ತಂದೆ-ತಾಯಿ ಹೆಸರು, ವಿದ್ಯಾರ್ಹತೆ ಮುಂತಾದ ವಿಷಯಗಳನ್ನು ತಪ್ಪಾಗಿ ನಮೂದಿಸಿರುವುದಾಗಿ 302 ಸದರಿ ಮಾಹಿತಿಗಳನ್ನು ಬದಲಾವಣೆ ಮಾಡುವಂತೆ ಮನವಿ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಯೋಗಕ್ಕೆ ಒಂದು ಬಾರಿ ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ಸದರಿ ಅರ್ಜಿಯಲ್ಲಿನ ಮಾಹಿತಿಗಳನ್ನು ಆಯೋಗದ ಅಧಿಕಾರಿ/ಸಿಬ್ಬಂದಿಗೆ ತಂತ್ರಾಂಶದಲ್ಲಿ ಬದಲಾವಣೆ ಮಾಡಲು ಸಾಧ್ಯವಿರದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳೇ ನೇರವಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಮಾಹಿತಿಗಳನ್ನು ಸರಿಪಡಿಸಿ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಈ ಸಂಬಂಧ ತದನಂತರ ಸಲ್ಲಿಸಲಾಗುವ ಯಾವುದೇ ಕೋರಿಕೆ/ಮನವಿಗಳನ್ನು ಆಯೋಗದಿಂದ ಪುರಸ್ಕರಿಸಲಾಗುವುದಿಲ್ಲ.

ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಿ

ಅರ್ಜಿಗಳನ್ನು ಆನ್‌ಲೈನ್‌ (Online) ಮೂಲಕವೇ ಭರ್ತಿ ಮಾಡಿ ಭಾವಚಿತ್ರ/ಸಹಿ /ವಯೋಮಿತಿ/ ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ನಂತರ ಶುಲ್ಕವನ್ನು ನೆಟ್ ಬ್ಯಾಂಕಿಂಗ್ / ಡೆಬಿಟ್‌ ಕಾರ್ಡ್/ ಕ್ರೆಡಿಟ್‌ ಕಾರ್ಡ್‌/ ಯುಪಿಐ ಮೂಲಕ ಸಂದಾಯ ಮಾಡಬಹುದಾಗಿರುತ್ತದೆ. ಶುಲ್ಕವನ್ನು ಪಾವತಿಸದ ಹಾಗೂ ದಾಖಲೆಗಳನ್ನು/ ಭಾವಚಿತ್ರ/ ಸಹಿಯನ್ನು ಅಪ್ಲೋಡ್ ಮಾಡದೇ ಇರುವ/ಅಸ್ಪಷ್ಟ ದಾಖಲೆಗಳನ್ನು ಅಪ್ಲೋಡ್ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಕೆಪಿಎಸ್‌ಸಿ ತಿಳಿಸಿದೆ.

ಕೆಪಿಎಸ್‌ಸಿ ಹೊರಡಿಸಿರುವ ಅಧಿಸೂಚನೆಯ ಪಿಡಿಎಫ್‌ ಪ್ರತಿಯನ್ನು ಈ ಕೆಳಗೆ ಲಗತ್ತಿಸಲಾಗಿದೆ. ಆಸಕ್ತರು ಡೌನ್ಲೋಡ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಓದಬಹುದು.

ಇದನ್ನೂ ಓದಿ: Job Alert: ಗುಡ್‌ನ್ಯೂಸ್; 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಮಾರ್ಚ್‌ 4ರಿಂದ ಅರ್ಜಿ ಸಲ್ಲಿಸಿ

ಜಾಗ್ರತೆಯಿಂದ ಅರ್ಜಿ ಸಲ್ಲಿಸಿ

ಸದರಿ ಹುದ್ದೆಗಳಿಗೆ ಆನ್‌ಲೈನ್ ಅರ್ಜಿಯೊಂದಿಗೆ ಸಲ್ಲಿಸುವ ಲಗತ್ತುಗಳನ್ನು ಅವಶ್ಯಕ ಸಂದರ್ಭಗಳಲ್ಲಿ ಆಯೋಗವು ಪರಿಶೀಲನೆಗೆ ಒಳಪಡಿಸಬಹುದಾಗಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ಜಾಗರೂಕತೆಯಿಂದ ತಮಗೆ ಅನ್ವಯಿಸುವ ಎಲ್ಲ ದಾಖಲೆಗಳನ್ನು ಸ್ಪಷ್ಟವಾಗಿ ಗೋಚರಿಸುವ ರೀತಿಯಲ್ಲಿ ಅಪ್‌ಲೋಡ್ ಮಾಡತಕ್ಕದ್ದು. ಮೂಲ ದಾಖಲೆಗಳ ಪರಿಶೀಲನೆಯ ಸಂದರ್ಭದಲ್ಲಿ ಈಗಾಗಲೇ ಆನ್‌ಲೈನ್ ಅರ್ಜಿಯೊಂದಿಗೆ ಅಪ್‌ಲೋಡ್ ಮಾಡಿರುವ ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ತಪ್ಪದೇ ಹಾಜರುಪಡಿಸತಕ್ಕದ್ದು ಎಂದು ಕೆಪಿಎಸ್‌ಸಿ ಹೇಳಿದೆ.

Continue Reading

ಉದ್ಯೋಗ

Job Fair : ಉದ್ಯೋಗ ಮೇಳದಲ್ಲಿ 9,651 ಮಂದಿಗೆ ನೇರ ಜಾಬ್‌; ಇನ್ನು ವಿಭಾಗ ಮಟ್ಟದಲ್ಲಿ ಜಾಬ್‌ ಫೇರ್‌

Job Fair : ಬೆಂಗಳೂರಿನಲ್ಲಿ ನಡೆದ ಉದ್ಯೋಗ ಮೇಳ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ವಿಭಾಗ ಮಟ್ಟದಲ್ಲಿ ಇದನ್ನು ಆಯೋಜಿಸಲಾಗುತ್ತದೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದರು.

VISTARANEWS.COM


on

Job Fair Job News3
Koo

ಬೆಂಗಳೂರು: ರಾಜಧಾನಿ ಬೆಂಗಳೂರು ಅರಮನೆ ಮೈದಾನದಲ್ಲಿ (Bangalore Palace Ground) ಫೆಬ್ರವರಿ 26 ಮತ್ತು 27ರಂದು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ನಡೆದ ಯುವ ಸಮೃದ್ಧಿ ಸಮ್ಮೇಳನದಲ್ಲಿ (Job Fair) ಸುಮಾರು 9,651 ಉದ್ಯೋಗ ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ (Direct Job) ನೀಡುವ ಮೂಲಕ ಹೊಸ ದಾಖಲೆ ಬರೆದಿದ್ದೇವೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ (Dr Sharanaprakash Pateel) ಹೇಳಿದರು.

ಬುಧವಾರ ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ಯುವ ಸಮೃದ್ಧಿ ಸಮ್ಮೇಳನದ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 53,913 ಪುರುಷರು, 32,494 ಮಹಿಳೆಯರು, ಇತರೆ 42 ಸೇರಿದಂತೆ ಒಟ್ಟು ಆನ್‍ಲೈನ್ ಮೂಲಕ 86,451 ಅಭ್ಯರ್ಥಿಗಳು ಹೆಸರನ್ನು ನೋಂದಣಿ ಮಾಡಿಕೊಂಡಿದ್ದರು. ಸಮ್ಮೇಳನಕ್ಕೆ 44527 ಅಭ್ಯರ್ಥಿಗಳು ಹಾಜರಾಗಿದ್ದರು. ಇದರಲ್ಲಿ ಶೈಕ್ಷಣಿಕ ಅರ್ಹತೆಗನುಗುಣವಾಗಿ ಒಟ್ಟು 9,651 ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ನೀಡಿದ್ದೇವೆ ಎಂದು ಪಾಟೀಲ್‌ ಮಾಹಿತಿ ನೀಡಿದರು.

Job Fair Job News

16,865 ಅರ್ಜಿಗಳು ಪರಿಶೀಲನೆ ಹಂತದಲ್ಲಿವೆ. 2,457 ಅರ್ಜಿಗಳನ್ನು ತಾಂತ್ರಿಕ ಕಾರಣಗಳಿಂದ ತಿರಸ್ಕರಿಸಲಾಗಿದೆ. 15,461 ಅಭ್ಯರ್ಥಿಗಳು ಸಂದರ್ಶನಕ್ಕೊಳಗಾಗಿದ್ದರು. ಅಭ್ಯರ್ಥಿಗಳ ಪೂರ್ಣ ವಿವರಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಇವರಿಗೂ ಕೂಡ ಉದ್ಯೋಗ ನೀಡಲಾಗುತ್ತದೆ. ಒಟ್ಟಾರೆ ಎರಡು ದಿನ ನಡೆದ ಸಮ್ಮೇಳನ ನಮ್ಮ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ ಎಂದರು.

Job Fair : ಯಾವ ಯಾವ ವಲಯದಲ್ಲಿ ಉದ್ಯೋಗ ಸಿಕ್ಕಿದೆ?

ಸಮ್ಮೇಳನದಲ್ಲಿ ವೈಮಾನಿಕ ಮತ್ತು ನಾಗರಿಕ ವಲಯದಿಂದ 26
ಕೃಷಿ 6, ಉಡುಪು ವಲಯ 6, ಆಟೋಮೆಟಿವ್ 74
ಸೌಂದರ್ಯ ವಲಯ 3, ಆರೋಗ್ಯ ಕ್ಷೇತ್ರ 27
ಎಲೆಕ್ಟ್ರಾನಿಕ್ ವಲಯ 29, ಜವಳಿ 1, ಟೆಲಿಕಾಂ 19,
ಸೇವಾ ವಲಯ 36, ಮೂಲಭೂತ ಉಪಕರಣಗಳ ವಲಯ 1
ಸೇರಿದಂತೆ ವಿವಿಧ ವಲಯಗಳಲ್ಲಿ ಉದ್ಯೋಗ ನೀಡಲಾಗಿದೆ.

ಇದನ್ನೂ ಓದಿ : Job News: ಶೀಘ್ರ 1 ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕ; ವೇತನದಲ್ಲೂ ಹೆಚ್ಚಳ!

Job Fair Job News

Job Fair : ರಾಜ್ಯದ ಮೂರು ವಿಭಾಗಗಳಲ್ಲಿ ಇನ್ನು ಉದ್ಯೋಗ ಮೇಳ

ಮೊದಲ ಹಂತದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಯಶಸ್ವಿ ಯುವ ಸಮೃದ್ಧಿ ಸಮ್ಮೇಳನ ನಡೆದಿರುವ ಹಿನ್ನಲೆಯಲ್ಲಿ ಇನ್ನು ಮುಂದೆ ರಾಜ್ಯದ ಮೂರು ಪ್ರಮುಖ ವಿಭಾಗಗಳಲ್ಲಿ ಯುವ ಸಮೃದ್ಧಿ ಸಮ್ಮೇಳನ ನಡೆಸಲಾಗುವುದು ಎಂದು ಶರಣಪ್ರಕಾಶ್ ಪಾಟೀಲ್ ಹೇಳಿದರು. ಕಲಬುರಗಿ, ಬೆಳಗಾವಿ ಮತ್ತು ಮೈಸೂರಿನಲ್ಲಿ ಉದ್ಯೋಗ ಮೇಳವನ್ನು ನಡೆಸಲಾಗುವುದು. ಇದಕ್ಕಾಗಿ ಈಗಾಗಲೇ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಹೇಳಿದರು.

Job Fair Job News

ಕೊಪ್ಪಳ, ಮೈಸೂರಿನಲ್ಲಿ ಎರಡು ತರಬೇತಿ ಕೇಂದ್ರ ಸ್ಥಾಪನೆ

ವಿಭಾಗವಾರು ಉದ್ಯೋಗ ಮೇಳ ನಡೆಸುವ ಮಾದರಿಯಂತೆ ರಾಜ್ಯದ ಎರಡು ಕಡೆ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ ಕೇಂದ್ರ ಪ್ರಾರಂಭಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಹಾಗೂ ಮೈಸೂರಿನಲ್ಲಿ ಈ ಎರಡು ತರಬೇತಿ ಕೇಂದ್ರಗಳು ಪ್ರಾರಂಭವಾಗಲಿವೆ. ವಿವಿಧ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಸುಮಾರು 25 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುತ್ತದೆ. ಈಗಾಗಲೇ ಇದಕ್ಕೆ ಇಲಾಖೆ ವತಿಯಿಂದ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪಾಟೀಲ್ ಹೇಳಿದರು.

ಕೇರಳ ಮಾದರಿಯಲ್ಲಿ ಸಾಗರೋತ್ತರ ಕಂಪನಿ ಪ್ರಾರಂಭ

ವಿದೇಶಿ ಕಂಪನಿಗಳಿಗೆ ಬೇಕಾದ ಮಾನವ ಸಂಪನ್ಮೂಲ ಒದಗಿಸಿಕೊಡಲು ಅನುಕೂಲವಾಗುವಂತೆ ರಾಜ್ಯ ಸರ್ಕಾರವು ಕೇರಳ ಮಾದರಿಯಲ್ಲಿ ಸಾಗರೋತ್ತರ ಕಂಪನಿ ಪ್ರಾರಂಭಿಸಲಿದೆ ಎಂದು ಶರಣಪ್ರಕಾಶ್ ಪಾಟೀಲ್ ಪ್ರಕಟಿಸಿದರು.
ಕೇರಳದಲ್ಲಿ ಈಗಾಗಲೇ ಸಾಗರೋತ್ತರ ಕಂಪನಿ ರಚನೆ ಮಾಡಲಾಗಿದೆ. ಇದೇ ಮಾದರಿಯನ್ನು ಇಟ್ಟುಕೊಂಡು ಕರ್ನಾಟಕದಲ್ಲೂ ಪ್ರಾರಂಭ ಮಾಡುತ್ತೇವೆ ಎಂದು ಹೇಳಿದರು.

ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಸೇರಿದಂತೆ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಉದ್ಯೋಗ ಆಕಾಂಕ್ಷಿಗಳಿಗೆ ಸಾಗರೋತ್ತರ ಕಂಪನಿಗಳ ಮೂಲಕ ಮಾಹಿತಿ ಕೊಡಲಾಗುವುದು. ಈಗಾಗಲೇ 49 ಕಂಪನಿಗಳು ಮುಂದೆ ಬಂದಿವೆ ಎಂದು ತಿಳಿಸಿದರು.

ಐಬಿಎಂ ಕಂಪನಿಯವರೇ 5 ಲಕ್ಷ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ ನೀಡಲು ಮುಂದೆ ಬಂದಿದ್ದಾರೆ. ಸಾಗರೋತ್ತರ ಕಂಪನಿಯು ಸಂವಹನ ಮಾಧ್ಯಮವಾಗಿ ರಾಜ್ಯದಲ್ಲಿ ಲಭ್ಯವಿರುವ ಮಾನವ ಸಂಪನ್ಮೂಲಗಳ ಬಗ್ಗೆ ಮಾಹಿತಿ ನೀಡಲಿದೆ. ಇದರಿಂದ ಉದ್ಯೋಗ ಆಕಾಂಕ್ಷಿಗಳು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಅಲೆಯುವುದು ತಪ್ಪುತ್ತದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಅಭಿಪ್ರಾಯಪಟ್ಟರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಕೌಶಲಾಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಎಂ.ಕನಗವಲ್ಲಿ ಮತ್ತು ಎಕ್ಸಿಕ್ಯುಟಿವ್‌ ಡೈರೆಕ್ಟರ್ ಸಿ.ಆರ್ ಕೃಷ್ಣ ಕುಮಾರ್ ಉಪಸ್ಥಿತರಿದ್ದರು.

Continue Reading
Advertisement
kpsc
ಉದ್ಯೋಗ19 seconds ago

Job Alert: ಗುಡ್‌ನ್ಯೂಸ್‌: 364 ಭೂಮಾಪಕರ ಹುದ್ದೆಗೆ ಮಾ. 11ರಿಂದ ಅರ್ಜಿ ಸಲ್ಲಿಸಿ

R Ashok
ಪ್ರಮುಖ ಸುದ್ದಿ30 mins ago

R Ashok : ರಾಜ್ಯ ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ

Lakshmi Hebbalkar Handicapped
ಬೆಂಗಳೂರು58 mins ago

Lakshmi Hebbalkar : ವಿಕಲಚೇತನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿದ ಸಚಿವೆ ಹೆಬ್ಬಾಳ್ಕರ್

FSL Report
ಪ್ರಮುಖ ಸುದ್ದಿ1 hour ago

Sedition Case : ವಿಧಾನಸೌಧದಲ್ಲಿ ಪಾಕ್​ ಜಿಂದಾಬಾದ್​ ಕೇಸ್​​ನ ಎಫ್​ಎಸ್​​ಎಲ್​ ವರದಿ ಸಲ್ಲಿಕೆ

Russia Ukraine War
ವಿದೇಶ1 hour ago

Russia Ukraine War: ರಷ್ಯಾ ಸೇನೆಯಲ್ಲಿರುವ ಭಾರತೀಯರು ಶೀಘ್ರ ತಾಯ್ನಾಡಿಗೆ; ವಿದೇಶಾಂಗ ಸಚಿವಾಲಯದ ಭರವಸೆ

Modi GDP
ಪ್ರಮುಖ ಸುದ್ದಿ2 hours ago

GDP Growth : ಜಿಡಿಪಿಯ ಭರ್ಜರಿ ಏರಿಕೆಗೆ ಮೋದಿ ಸಂತಸ; ಏನಂದ್ರು ಅವರು?

2nd PU Exam from tomorrow what are the conditions
ಶಿಕ್ಷಣ2 hours ago

2nd PU Exam: ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ; ವಿದ್ಯಾರ್ಥಿಗಳಿಗೆ ಇಲ್ಲಿದೆ ಕಂಡಿಷನ್!

insurance
ಮನಿ-ಗೈಡ್2 hours ago

Money Guide: ಸಾಮಾನ್ಯ ವಿಮೆ v/s ಜೀವ ವಿಮೆ; ಯಾವುದು ಉತ್ತಮ? ನಿಮಗೆ ತಿಳಿದಿರಲೇಬೇಕಾದ ಮಾಹಿತಿ ಇಲ್ಲಿದೆ

Budget session Siddaramaiah
ವಿಧಾನಮಂಡಲ ಅಧಿವೇಶನ2 hours ago

Budget Session : ಬಿಜೆಪಿಯ ಜೈ ಶ್ರೀರಾಮ್‌ VS ಸಿದ್ದರಾಮಯ್ಯರ ಜೈ ಸೀತಾರಾಮ್‌!

Nitasha Kaul
ದೇಶ3 hours ago

Nitasha Kaul : ಬ್ರಿಟನ್​ ಲೇಖಕಿಯನ್ನು ಏರ್​ಪೋರ್ಟ್​​ನಿಂದಲೇ ವಾಪಸ್​ ಕಳಿಸಿದ್ದಕ್ಕೆ ಕಾರಣ ಕೊಟ್ಟ ಕೇಂದ್ರ ಸರ್ಕಾರ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for February 28 2024
ಭವಿಷ್ಯ17 hours ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ2 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Ghar Wapsi ST Somashekhar and Shivaram Hebbar to quit BJP
ರಾಜಕೀಯ2 days ago

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

Rajyasabha Elections 42 Congress MLAs contacted by JDS candidate says DK Shivakumar
ರಾಜಕೀಯ2 days ago

Rajya sabha Election: ಕಾಂಗ್ರೆಸ್‌ನ 42 ಶಾಸಕರನ್ನು ಸಂಪರ್ಕ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

read your daily horoscope predictions for february 27 2024
ಭವಿಷ್ಯ3 days ago

Dina Bhavishya : ಇಂದು ಆಪ್ತರಿಂದಲೇ ಈ ರಾಶಿಯವರಿಗೆ ಕಂಟಕ!

Crowd mistakes Arabic words as Quran Verses on the kurta and Pak Women mobbed
ವಿದೇಶ3 days ago

Pak Woman: ಕುರ್ತಾ ಮೇಲಿನ ಅರೇಬಿಕ್ ಪದಗಳನ್ನು ತಪ್ಪಾಗಿ ತಿಳಿದು ಮಹಿಳೆ ಮೇಲೆ ಹಲ್ಲೆಗೆ ಯತ್ನ

read your daily horoscope predictions for february 26 2024
ಭವಿಷ್ಯ4 days ago

Dina Bhavishya : ಈ ಮೂರು ರಾಶಿಯವರು ಇಂದು ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯವರು ಆಪ್ತರೊಂದಿಗೆ ಗೌಪ್ಯ ವಿಷಯವನ್ನು ಹೇಳುವಾಗ ಎಚ್ಚರ!

Video Viral Student falls under school bus He escaped with minor injuries
ವೈರಲ್ ನ್ಯೂಸ್5 days ago

Video Viral: ಸ್ಕೂಲ್ ಬಸ್‌ನಡಿ ಬಿದ್ದ ವಿದ್ಯಾರ್ಥಿ; ಪಾರಾಗಿದ್ದೇ ಪವಾಡ!

ಟ್ರೆಂಡಿಂಗ್‌