Site icon Vistara News

Indian Coast Guard: 290 ನಾವಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಅಪ್ಲೈ ದಿನಾಂಕ ವಿಸ್ತರಣೆ

coast guard

coast guard

ದೇಶಕ್ಕಾಗಿ ಸೇವೆ ಸಲ್ಲಿಸಬೇಕು ಎಂದುಕೊಂಡಿರುವವರಿಗೆ ಇಲ್ಲಿದೆ ಗುಡ್‌ ನ್ಯೂಸ್‌. ಇಂಡಿಯನ್‌ ಕೋಸ್ಟ್‌ ಗಾರ್ಡ್‌(Indian Coast Guard) ಖಾಲಿ ಇರುವ 290 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ನಾವಿಕ(General Duty) 260 ಮತ್ತು ನಾವಿಕ(Domestic Branch) 30 ಹುದ್ದೆಗಳಿವೆ. ಕಡಲ ತೀರದ ರಕ್ಷಣೆಯ ಮೂಲಕ ತಾಯಿ ನಾಡಿಗಾಗಿ ಸೇವೆ ಸಲ್ಲಿಸಲಿರುವ ಅಪೂರ್ವ ಅವಕಾಶ ಇದಾಗಿದೆ. ಈ ಹಿಂದೆ ಆನ್‌ಲೈನ್ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 8 ಕೊನೆಯ ದಿನ ಎಂದು ಹೇಳಲಾಗಿತ್ತಾದರೂ ಇದೀಗ ಸಮಯಾವಕಾಶವನ್ನು ಸೆಪ್ಟಂಬರ್‌ 27ರವರೆಗೆ ವಿಸ್ತರಿಸಲಾಗಿದೆ.

ವಿದ್ಯಾರ್ಹತೆ

ನಾವಿಕ(Domestic Branch) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು Council of Boards of School Education (COBSE) ಮಾನ್ಯತೆ ಪಡೆದ ಮಂಡಳಿಯಿಂದ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು +2 ಕೋರ್ಸ್‌ನಲ್ಲಿ ಗಣಿತ ಮತ್ತು ಭೌತಶಾಸ್ತ್ರ ವನ್ನು ಓದಿದವರು ನಾವಿಕ(General Duty) ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು ಎಂದು ಪ್ರಕಟಣೆ ತಿಳಿಸಿದೆ. ತಮ್ಮ ಹುದ್ದೆಯ ಬಗ್ಗೆ ಪ್ರಾಥಮಿಕ ಜ್ಞಾನ ಹೊಂದಿರುವುದು ಕಡ್ಡಾಯ.

ವೇತನದ ವಿವರ

ನಾವಿಕ(General Duty)-21700-69,100 ರೂ., ನಾವಿಕ(Domestic Branch)-21700-69,100 ರೂ. ವೇತನ ನಿಗದಿ ಪಡಿಸಲಾಗಿದೆ. ಇದಲ್ಲದೆ ಕೋಸ್ಟ್‌ ಗಾರ್ಡ್‌ ತನ್ನ ಸದಸ್ಯರಿಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮತ್ತು ಸಾಹಸಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶವನ್ನೂ ಒದಗಿಸಲಿದೆ.

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 22 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯಸ್ಸಿನಲ್ಲಿ ರಿಯಾಯಿತಿ ಇದೆ. ಎಸ್‌.ಸಿ. ಮತ್ತು ಎಸ್‌.ಟಿ. ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒ.ಬಿ.ಸಿ. ಅಭ್ಯರ್ಥಿಗಳಿಗೆ 3 ವರ್ಷಗಳ ರಿಯಾಯಿತಿ ಅನ್ವಯವಾಗಲಿದೆ.

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ವಿವಿಧ ಹಂತಗಳ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಆರಂಭದಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯಬೇಕು. ಅದರಲ್ಲಿ ಉತ್ತೀರ್ಣರಾದವರನ್ನು ಫಿಸಿಕಲ್‌ ಫಿಟ್ನೆಸ್‌ ಪರೀಕ್ಷೆಗೆ ಕರೆಯಲಾಗುತ್ತದೆ. ಇದರಲ್ಲಿ 1.6 ಕಿ.ಮೀ.ಯನ್ನು 7 ನಿಮಿಷಗಳಲ್ಲಿ ತಲುಪಬೇಕು ಮತ್ತು 20 ಸ್ಕ್ವಾಟ್‌ ಅಪ್ಸ್‌, 10 ಪುಶ್‌ ಅಪ್‌ ಮಾಡುವಂತಿರಬೇಕು. ಬಳಿಕ ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಕೊನೆಯ ಹಂತದಲ್ಲಿ ಭಾರತೀಯ ಕೋಸ್ಟ್ ಗಾರ್ಡ್ ಸಂಬಂಧಿತ ಮಂಡಳಿಗಳು, ವಿಶ್ವವಿದ್ಯಾಲಯಗಳು ಮತ್ತು ರಾಜ್ಯ ಸರ್ಕಾರಗಳ ಮೂಲಕ ಎಲ್ಲಾ ಮೂಲ ದಾಖಲೆಗಳ ಸಮಗ್ರ ಪರಿಶೀಲನೆಯನ್ನು ಕೈಗೊಳ್ಳುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಪಾವತಿಸಬೇಕು. ಎಸ್‌.ಸಿ. ಮತ್ತು ಎಸ್‌.ಟಿ. ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು. ನೆಟ್‌ ಬ್ಯಾಂಕಿಂಗ್‌, ಕ್ರೆಡಿಟ್‌/ಡೆಬಿಟ್‌ ಕಾರ್ಡ್‌ ಅಥವಾ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ.

ಇದನ್ನೂ ಓದಿ: Job Alert: ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿವೆ ಭರಪೂರ ಅವಕಾಶಗಳು

ಹೆಚ್ಚಿನ ಮಾಹಿತಿಗೆ ಇಂಡಿಯಾ ಕೋಸ್ಟ್‌ ಗಾರ್ಡ್ ವೆಬ್‌ ಸೈಟ್‌ ಕ್ಲಿಕ್‌ ಮಾಡಿ. ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

Exit mobile version