Agneepath | ಅಗ್ನಿವೀರರ ನೇಮಕ; ಸೇನಾ ರ‍್ಯಾಲಿಯಲ್ಲಿ ಹೆಚ್ಚಿನ ಬದಲಾವಣೆ ಇಲ್ಲ! - Vistara News

ಉದ್ಯೋಗ

Agneepath | ಅಗ್ನಿವೀರರ ನೇಮಕ; ಸೇನಾ ರ‍್ಯಾಲಿಯಲ್ಲಿ ಹೆಚ್ಚಿನ ಬದಲಾವಣೆ ಇಲ್ಲ!

ಭಾರತೀಯ ಸೇನೆಯು ಅಗ್ನಿಪಥ ಯೋಜನೆ ಮೂಲಕ ಅಗ್ನಿವೀರರ ನೇಮಕಕ್ಕೆ ಸಿದ್ಧತೆ ನಡೆಸುತ್ತಿದೆ. ನೇಮಕಕ್ಕಾಗಿ ನಡೆಸಲಾಗುವ ರ‍್ಯಾಲಿ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

VISTARANEWS.COM


on

Agneepath Scheme 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಸರ್ಕಾರವು ಸೇನಾ ನೇಮಕಾತಿಗೆ ಹೊಸ ಯೋಜನೆ ʼಅಗ್ನಿಪಥʼ (Agneepath) ಘೋಷಿಸಿದ ಸಂದರ್ಭದಲ್ಲಿ ಅಗ್ನಿವೀರರನ್ನು ಪಾರದರ್ಶವಾಗಿ ನೇಮಕ ಮಾಡಿಕೊಳ್ಳಲಾಗುವುದು, ಇದಕ್ಕಾಗಿ ದೇಶಾದ್ಯಂತ ಏಕರೂಪದ ಪರೀಕ್ಷೆ ನಡೆಸಲಾಗುವುದು ಎಂದೆಲ್ಲಾ ಹೇಳಿತ್ತು.

ಈಗ ನೇಮಕ ಪ್ರಕ್ರಿಯೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಭಾರತೀಯ ಸೇನೆ ಹೊರಡಿಸಿದ್ದು, ಇದರ ಪ್ರಕಾರ ನೇಮಕ ಪ್ರಕ್ರಿಯೆಯಲ್ಲಿ, ಅರ್ಹತೆಗಳಲ್ಲಿ ಹೆಚ್ಚಿನ ಬದಲಾವಣೆ ಮಾಡಲಾಗಿಲ್ಲ. ಈ ಹಿಂದೆ ಸೈನಿಕ ಹುದ್ದೆಗಳಿಗೆ ಹೇಗೆ ರ‍್ಯಾಲಿ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತಿತ್ತೋ ಅದೇ ರೀತಿಯಲ್ಲಿ ಇನ್ನು ಮುಂದೆಯೂ ನೇಮಕ ನಡೆಯಲಿದೆ.

agneepath

ಮಹತ್ವದ ಬದಲಾವಣೆ ಎಂದರೆ ನೇಮಕಗೊಳ್ಳುವ ಅಭ್ಯರ್ಥಿಗಳು ಇನ್ನು ಮುಂದೆ ನಾಲ್ಕು ವರ್ಷಗಳ ಕಾಲ ಮಾತ್ರ ಖಚಿತವಾಗಿ ಸೇನೆಯಲ್ಲಿ ಸೇವೆ ಸಲ್ಲಿಸಬಹುದಾಗಿರುತ್ತದೆ. ಈ ಸಂದರ್ಭದಲ್ಲಿ ಅತ್ಯುತ್ತಮ ಸಾಧನೆ ತೋರಿಸಿದರೆ ಮಾತ್ರ ಕಾಯಂ ಸೈನಿಕ ಹುದ್ದೆಗಳಿಗೆ ನೇಮಕಗೊಳ್ಳಲಿದ್ದಾರೆ.

ಭಾರತೀಯ ಸೇನೆಯು ಬಿಡುಗಡೆ ಮಾಡಿರುವ ಅಧಿಸೂಚನೆ ನೋಡಲು ಇಲ್ಲಿ ಕ್ಲಿಕ್‌ ಮಾಡಿ

ಏಕರೂಪದ ಪರೀಕ್ಷೆ ಇಲ್ಲ
ಅಗ್ನಿಪಥ ಯೋಜನೆ ಘೋಷಿಸಿದ ಸಂದರ್ಭದಲ್ಲಿ ಅಗ್ನಿವೀರರ (ಸೈನಿಕರ) ನೇಮಕವನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಾಗುವುದು. ಇದಕ್ಕಾಗಿ ದೇಶಾದ್ಯಂತ ಏಕರೂಪದ ಪರೀಕ್ಷೆ ನಡೆಸಲಾಗುವುದು ಎಂದೆಲ್ಲಾ ಹೇಳಲಾಗಿತ್ತು. ಆದರೆ ಈಗ ಹೊರಡಿಸಿರುವ ಅಧಿಸೂಚನೆಯಲ್ಲಿ ಪರೀಕ್ಷೆಯನ್ನು ಈ ಹಿಂದಿನಂತೆಯೇ ನಡೆಸಲಾಗುತ್ತದೆ ಎಂಬ ಮಾಹಿತಿ ನೀಡಲಾಗಿದೆ.

ನೇಮಕಕ್ಕೆ ಸಂಬಂಧಿಸಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆ (CEE)ಯನ್ನು ರ‍್ಯಾಲಿಯನ್ನು ವೈದ್ಯಕೀಯವಾಗಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮಾತ್ರ ನಡೆಸಲಾಗುತ್ತದೆ. ರ‍್ಯಾಲಿಯಲ್ಲಿಯೇ ಈ ಬಗ್ಗೆ ಅಭ್ಯರ್ಥಿಗಳಿಗೆ ಸೂಚನೆ ನೀಡಿ, ಪ್ರವೇಶ ಪತ್ರ ಒದಗಿಸಲಾಗುತ್ತದೆ. ನಿಗದಿತ ಸ್ಥಳದಲ್ಲಿಯೇ ಪರೀಕ್ಷೆ ನಡೆಸಲಾಗುತ್ತದೆ. ಎನ್‌ಸಿಸಿಯಲ್ಲಿ “ಸಿʼʼ ಸರ್ಟಿಫಿಕೇಟ್‌ ಹೊಂದಿವರಿಗೆ ಮಾತ್ರ ಲಿಖಿತ ಪರೀಕ್ಷೆಯಿಂದ ರಿಯಾಯಿತಿ ನೀಡಲಾಗಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

agneepath

ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (CEE) ಎಂದು, ಎಲ್ಲಿ ನಡೆಸಲಾಗುತ್ತದೆ ಎಂದು ರ‍್ಯಾಲಿಯಲ್ಲಿಯೇ ಅಭ್ಯರ್ಥಿಗಳಿಗೆ ಈ ಹಿಂದಿನಂತೆಯೇ ತಿಳಿಸಲಾಗುವುದರಿಂದ ಈ ಹಿಂದಿನಂತೆಯೇ ಪರೀಕ್ಷೆ ನಡೆಯುತ್ತದೆ ಎಂದೇ ಹೇಳಲಾಗುತ್ತಿದೆ. ರ‍್ಯಾಲಿಗಳಲ್ಲಿನ ನೇಮಕ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಕೂಡ ಬದಲಾವಣೆಗಳನ್ನೇನೂ ಮಾಡಲಾಗಿಲ್ಲ.

ದೈಹಿಕ ಅರ್ಹತೆಯಲ್ಲಿ ಬದಲಾವಣೆ ಇಲ್ಲ

ಭಾರತೀಯ ಸೇನೆ ಸೇರಬೇಕೆಂದರೆ ಅಭ್ಯರ್ಥಿಯು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿರಲೇಬೇಕು. ಈ ಅರ್ಹತೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಸೈನಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಲ ಹುದ್ದೆಗಳಿಗೆ 162 ಮತ್ತು ಇನ್ನು ಕೆಲವು ಹುದ್ದೆಗಳಿಗೆ 165 ಸೆಂ.ಮೀ. ಎತ್ತರ ಇರಲೇಬೇಕಿರುತ್ತದೆ. ಎತ್ತರಕ್ಕೆ ತಕ್ಕ ತೂಕವನ್ನೂ ಹೊಂದಿರಬೇಕು. ಎಷ್ಟು ಎತ್ತರದವರು ಎಷ್ಟು ತೂಕ ಹೊಂದಿರಬೇಕೆಂಬ ಮಾಹಿತಿಯನ್ನು ಸೇನೆಯೇ ನಿಗದಿಪಡಿಸಿರುತ್ತದೆ. ಅಭ್ಯರ್ಥಿಗಳು ಅದನ್ನು ನೋಡಿಕೊಂಡೇ ಅರ್ಜಿ ಸಲ್ಲಿಸಬೇಕು. ಇದಲ್ಲದೆ 77 ಸೆಂ.ಮೀ. ಎದೆಯ ಸುತ್ತಳತೆ (ಹಿಗ್ಗಿಸಿದಾಗ 5 ಸೆಂ.ಮೀ ಹೆಚ್ಚು) ಹೊಂದಿರಲೇಬೇಕು. ಈಗ ಪ್ರಕಟಿಸಿರುವ ಅಧಿಸೂಚನೆಯಲ್ಲಿ ʼಈ ಹಿಂದಿನ ದೈಹಿಕ ಅರ್ಹತೆಯನ್ನೇ ಮುಂದುವರಿಸಲಾಗಿದೆʼ ಎಂದು ಪ್ರಕಟಿಸಲಾಗಿದೆ.

ದೈಹಿಕ ಸಾಮರ್ಥ್ಯ ಪರೀಕ್ಷೆ ಹೇಗೆ?

ಈ ಹಿಂದಿನಂತೆಯೇ ರ‍್ಯಾಲಿಯ ಆರಂಭದಲ್ಲಿ ಸಾಮಾನ್ಯ ಸ್ಕ್ರೀನಿಂಗ್‌ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಅಭ್ಯರ್ಥಿಯ ದೈಹಿಕ ಸದೃಢತೆಯನ್ನು ಪರೀಕ್ಷಿಸಲಾಗುತ್ತದೆ. ಈ ಪರೀಕ್ಷೆಯನ್ನು (ಪಿಇಟಿ)ಯನ್ನು ಎಲ್ಲಾ ವರ್ಗದ ಹುದ್ದೆಗಳಿಗೆ ಆಯಾ ಹುದ್ದೆಗಳಿಗೆ ತಕ್ಕಂತೆ ನಡೆಸಲಾಗುತ್ತದೆ.
ಪಿಇಟಿ ಹಂತದ ಪರೀಕ್ಷೆಗಳು ಈ ಕೆಳಗಿನಂತೆ ನಡೆಯಲಿವೆ.

agneepath

1. ತಾಳ್ವಿಕೆ ಪರೀಕ್ಷೆ 1.6 ಕಿ.ಮೀ. ಓಟ
2. ಬಲದ ಪರೀಕ್ಷೆಗಾಗಿ ಬೀಮ್ಸ್‌ಗಳಲ್ಲಿ ಫುಲ್ ಅಪ್ಸ್.
3. ಧೈರ್ಯದ ಪರೀಕ್ಷೆಗಾಗಿ 9 ಅಡಿ ಆಳದ ಹಳ್ಳ ನೆಗೆತ. (ಅರ್ಹತಾ ಪರೀಕ್ಷೆ)
4. ಸಮತೋಲನದ ಪರೀಕ್ಷೆಗಾಗಿ ಜಿಗ್‌ಜಾಗ್‌ ನಡಿಗೆ. (ಅರ್ಹತಾ ಪರೀಕ್ಷೆ)
ದೈಹಿಕ ಅರ್ಹತೆ ಮತ್ತು ದೈಹಿಕ ಸದೃಢತೆ ಪರೀಕ್ಷೆಯ ಜತೆಗೆ ವೈದ್ಯಕೀಯ ಪರೀಕ್ಷೆಯೂ ನಡೆಯಲಿದೆ. ಇದಾದ ಮೇಲೆ ಲಿಖಿತ ಪರೀಕ್ಷೆ ಇರುತ್ತದೆ. ಈ ಮೇಲಿನ ಎಲ್ಲಾ ಹಂತಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲಾಗುತ್ತದೆ.

ಹಿಂದಿನಂತೆಯೇ ಅರ್ಜಿ ಸಲ್ಲಿಕೆ

ಅಗ್ನಿಪಥ್‌ ಯೋಜನೆಯ ಮೂಲಕ ನಡೆಯುವ ನೇಮಕಾತಿ ರ‍್ಯಾಲಿಗೂ ಈ ಹಿಂದಿನಂತೆಯೇ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿರುತ್ತದೆ. ಸೇನೆಯು ವೆಬ್‌ನಲ್ಲಿ (http://joinindianarmy.nic.in ) ಅಧಿಸೂಚನೆ ಪ್ರಕಟಿಸುತ್ತದೆ, ಆಗ ಅಭ್ಯರ್ಥಿಗಳು ವೆಬ್‌ಗೆ ತೆರಲಿ ಅಲ್ಲಿ ಮೊದಲು ಹೆಸರು ನೊಂದಾಯಿಸಿಕೊಳ್ಳಬೇಕು. ಅಲ್ಲಿ ಕೇಳಲಾಗುವ ವಿದ್ಯಾರ್ಹತೆ, ವಯಸ್ಸು, ಊರು, ವಿಳಾಸ, ಇ-ಮೇಲ್‌ ವಿಳಾಸ ಮತ್ತಿತರ ಮಾಹಿತಿಯನ್ನು ಸರಿಯಾಗಿ ಒದಗಿಸಬೇಕು.

ಸೇನೆಯು ಅರ್ಜಿ ಸಲ್ಲಿಸದ ಅಭ್ಯರ್ಥಿಯ ಇ-ಮೇಲ್‌ ವಿಳಾಸಕ್ಕೆ ಪ್ರವೇಶ ಪತ್ರವನ್ನು (Admit Card) ಕಳುಹಿಸಿಕೊಡಲಿದ್ದು, ಇದನ್ನು ಪ್ರಿಂಟ್‌ಔಟ್‌ ತೆಗೆದುಕೊಂಡು ಬಂದವರಿಗೆ ಮಾತ್ರ ರ‍್ಯಾಲಿಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ಜುಲೈನಿಂದ ನೇಮಕ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಈಗಾಗಲೇ ಸೇನೆಯು ಪ್ರಕಟಿಸಿದೆ.

ಇದನ್ನೂ ಓದಿ | Agneepath | ನೀವೂ ʼಅಗ್ನಿಪಥ್‌ʼನಲ್ಲಿ ಸಾಗಿ ಸೇನೆ ಸೇರಬೇಕೇ? ನೇಮಕ ಹೇಗೆ ನಡೆಯುತ್ತದೆ ಗೊತ್ತೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

Job News: ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ವಿವರ ಇಲ್ಲಿದೆ.

VISTARANEWS.COM


on

Job News
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆದುಕೊಳ್ಳಬೇಕು ಎನ್ನುವುದು ಬಹತೇಕರ ಕನಸು. ಅದಕ್ಕಾಗಿ ಅನೇಕರು ಹಲವು ವರ್ಷಗಳಿಂದ ಕಠಿಣ ತಯಾರಿಯಲ್ಲಿ ತೊಡಗಿರುತ್ತಾರೆ. ಇದೀಗ ಅಂತಹದ್ದೊಂದು ಸುವರ್ಣಾವಕಾಶ ಬಂದಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ (Job News).

ಗ್ರೂಪ್‌ ಬಿ ಹುದ್ದೆಗಳು

ರಾಜ್ಯ ಸರ್ಕಾರದ 9 ಇಲಾಖೆಗಳ ಉಳಿಕೆ ಮೂಲ ವೃಂದ ಹಾಗೂ ಎಚ್‌ಕೆ ವೃಂದದ ವಿವಿಧ ಗ್ರೂಪ್‌ ಬಿ 327 ಹುದ್ದೆಗಳ ಅರ್ಜಿಗೆ ಇಂದೇ (14-05-2024) ಕೊನೆ ದಿನವಾಗಿದೆ. ಇಂದು ರಾತ್ರಿ 11.59 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ಇದೆ. ತಾಂತ್ರಿಕ ಹಾಗೂ ತಾಂತ್ರಿಕೇತರ ಪದವಿ, ಸ್ನಾತಕೋತ್ತರ ಪದವಿ ಪಾಸ್‌ ಮಾಡಿದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಸಿಎಪಿಎಫ್‌ 506 ಹುದ್ದೆಗಳು

ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC)ನ ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್‌ ಪಡೆ, ಇಂಡೊ-ಟೆಬೆಟನ್ ಗಡಿ ಪೊಲೀಸ್‌ ಮತ್ತು ಸಶಸ್ತ್ರ ಸೀಮಾ ಬಲ ಪಡೆಗಳಲ್ಲಿನ 506 ಹುದ್ದೆಗಳಿಗೆ ಅಪ್ಲೈ ಮಾಡಲು ಇಂದು ಕೊನೆಯ ದಿನ (ಸಂಜೆ 6 ಗಂಟೆ). ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನ 4,660 ಹುದ್ದೆಗಳು

ರೈಲ್ವೆ ನೇಮಕಾತಿ ಮಂಡಳಿಯು ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿ ಖಾಲಿ ಇರುವ ಬರೋಬ್ಬರಿ 4,660 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಇಂದೇ ಕೊನೆಯ ದಿನ. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದ್ದು, ಎಸ್ಸೆಸ್ಸೆಲ್ಸಿ ತೆರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

247 ಪಿಡಿಒ ಹುದ್ದೆಗಳು

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಪಿಡಿಇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ (ಮೇ 15) ಕೊನೆಯ ದಿನ. ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. 150 ಆರ್‌ಪಿಸಿ ಮತ್ತು 97 ಎಚ್‌ಕೆ ಹುದ್ದೆಗಳು ಸೇರಿ ಒಟ್ಟು 247 ಪೋಸ್ಟ್‌ಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಮೇ 15ರ ರಾತ್ರಿ 11 ಗಂಟೆವರೆಗೆ ಅವಕಾಶ ಇದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು

ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫೆ. 20ರಂದು ಅಧಿಸೂಚನೆ ಹೊರಡಿಸಿತ್ತು. ಅದರಂತೆ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ. ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಲುಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Continue Reading

ಉದ್ಯೋಗ

Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Job Alert: ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ 200 ತರಬೇತುದಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಐಟಿಐ ತೇರ್ಗಡೆ ಹೊಂದಿದವರು ಮೇ 20ರಿಂದ 22ರ ತನಕ ಆಯೋಜಿಸಿರುವ ನೇರ ಸಂದರ್ಶದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನ ಹೈದರಾಬಾದ್‌ನಲ್ಲಿ ನಡೆಯಲಿದೆ. ವೇಳಾಪಟ್ಟಿ ಸೇರಿದಂತೆ ವಿವಿಧ ಮಾಹಿತಿ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (Hindustan Aeronautics Limited)ನಲ್ಲಿ ಖಾಲಿ ಇರುವ 200 ತರಬೇತುದಾರ ಹುದ್ದೆಗಳ (Apprentice posts) ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (HAL Recruitment 2024). ವಿವಿಧ ವಿಭಾಗಗಳಲ್ಲಿ ಐಟಿಐ ತೇರ್ಗಡೆ ಹೊಂದಿದವರು ಮೇ 20ರಿಂದ 22ರ ತನಕ ಆಯೋಜಿಸಿರುವ ನೇರ ಸಂದರ್ಶದಲ್ಲಿ ಪಾಲ್ಗೊಳ್ಳಬಹುದು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಲೆಕ್ಟ್ರಾನಿಕ್ ಮೆಕ್ಯಾನಿಕ್ – 55, ಫಿಟ್ಟರ್ – 35, ಎಲೆಕ್ಟ್ರಿಷಿಯನ್ – 25, ಮೆಷಿನಿಸ್ಟ್‌ – 8, ಟರ್ನರ್ – 6, ವೆಲ್ಡರ್ – 3, ರೆಫ್ರಿಜರೇಟರ್ & ಎಸಿ – 2, ಕೋಪಾ – 55, ಪ್ಲಂಬರ್ – 2, ಪೈಂಟರ್‌ – 5, ಡೀಸೆಲ್ ಮೆಕ್ಯಾನಿಕ್ – 1, ಮೋಟಾರು ವಾಹನ – 1, ಡ್ರಾಫ್ಟ್‌ಮ್ಯಾನ್‌ – ಸಿವಿಲ್ – 1, ಡ್ರಾಫ್ಟ್‌ಮ್ಯಾನ್‌ – ಮೆಕ್ಯಾನಿಕಲ್ – 1 ಹುದ್ದೆಗಳಿವೆ. ಅಂಗೀಕೃತ ಬೋರ್ಡ್‌ನಿಂದ ಹತ್ತನೇ ತರಗತಿ ತೇರ್ಡೆಯಾದ ಮತ್ತು ಸಂಬಂದಿಸಿದ ಟ್ರೇಟ್‌ನಲ್ಲಿ ಐಟಿಐ ಮುಗಿಸಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳಿಗೆ ಕನಿಷ್ಠ 16 ವರ್ಷ ತುಂಬಿರಬೇಕು ಮತ್ತು ಗರಿಷ್ಠ ವಯಸ್ಸು 23 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 3 ವರ್ಷ, ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ನೇರ ಸಂದರ್ಶನ ಎಲ್ಲಿ ಯಾವಾಗ?

ಮೇ 20ರಂದು ಬೆಳಗ್ಗೆ 9 ಗಂಟೆಗೆ ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಡೀಸೆಲ್ ಮೆಕ್ಯಾನಿಕ್ ಮತ್ತು ಮಧ್ಯಾಹ್ನ 1 ಗಂಟೆಗೆ ಫಿಟ್ಟರ್‌, ಪ್ಲಂಬರ್‌, ಪೈಂಟರ್‌ ಹುದ್ದೆಗಳ ಆಕಾಂಕ್ಷಿಗಳು ಹಾಜರಾಗಬೇಕು. ಮೇ 21ರ ಬೆಳಗ್ಗೆ 9 ಗಂಟೆಗೆ ಕೋಪಾ, ಮೋಟಾರು ವಾಹನ ಮೆಕ್ಯಾನಿಕ್‌ ಮತ್ತು ಮಧ್ಯಾಹ್ನ 1 ಗಂಟೆಗೆ ಎಲೆಕ್ಟ್ರೀಷಿಯನ್‌, ಡ್ರಾಫ್ಟ್‌ಮ್ಯಾನ್‌-ಮೆಕ್ಯಾನಿಕಲ್‌ ಹುದ್ದೆಗಳ ಸಂದರ್ಶನ ನಡೆಯಲಿದೆ. ಮೇ 22ರಂದು ಬೆಳಗ್ಗೆ 9 ಗಂಟೆಗೆ ಮೆಷಿನಿಸ್ಟ್‌, ರೆಫ್ರಿಜರೇಷನ್‌ & ಎಸಿ, ಟರ್ನರ್‌ ಹುದ್ದೆಗೆ ಮತ್ತು ಮಧ್ಯಾಹ್ನ 1 ಗಂಟೆಗೆ ಡ್ರಾಫ್ಟ್‌ಮ್ಯಾನ್‌ -ಸಿವಿಲ್‌, ವೆಲ್ಡರ್‌ಗಳ ಸಂದರ್ಶನ ಆಯೋಜಿಸಲಾಗಿದೆ. ಆಯ್ಕೆಯಾದವರಿಗೆ 1 ವರ್ಷಗಳ ತರಬೇತಿ ನೀಡಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ:

Auditorium, Behaind Department of Trainning & Development,
Hindustan Aeronautics Limited, Avionics Division, Balanagar, Hyderabad-500042.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಸಂದರ್ಶನಕ್ಕೆ ಹಾಜರಾಗುವ ವೇಳೆ ಬೇಕಾದ ದಾಖಲೆಗಳು

  • ಆಧಾರ್‌ ಕಾರ್ಡ್‌.
  • ಎಸ್ಸೆಸ್ಸೆಲ್ಸಿ ಮತ್ತು ಐಟಿಐಯ ಎಲ್ಲ ಸೆಮಿಸ್ಟರ್‌ನ ಸರ್ಟಿಫಿಕೆಟ್‌.
  • ಮೀಸಲಾತಿಯ ಸರ್ಟಿಫಿಕೆಟ್‌.
  • ಹೆಸರು ನೋಂದಣಿಯ ಮಾಡಿಕೊಂಡಿರುವ ಅಪ್ಲಿಕೇಷನ್‌ ಫಾರಂ.
  • ಎರಡು ಪಾಸ್‌ಪೋರ್ಟ್‌ ಅಳತೆಯ ಫೋಟೊ.

ಹೆಸರು ನೋಂದಾಯಿಸಲು ಇಲ್ಲಿ ಕ್ಲಿಕ್‌ ಮಾಡಿ.

ಹೆಚ್ಚಿನ ಮಾಹಿತಿಗೆ ಎಚ್‌ಎಎಲ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ https://www.hal-india.co.in/ಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Job Alert: ಭಾರತ ಸರ್ಕಾರದ ಜವಳಿ ಸಚಿವಾಲಯದ ಟೆಕ್ಸ್‌ಟೈಲ್ಸ್‌ ಕಮಿಟಿ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 40 ಪ್ರಾಜೆಕ್ಟ್‌ ಅಸಿಸ್ಟಂಟ್‌ ಹುದ್ದೆ ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿಯೂ ಹುದ್ದೆ ಖಾಲಿ ಇದ್ದು, ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಮೇ 31ರೊಳಗೆ ತಲುಪುವಂತಿರಬೇಕು. ಬಿಎಸ್‌ಸಿ (ಫಿಸಿಕ್ಸ್‌ ಅಥವಾ ಕೆಮಿಸ್ಟ್ರಿ) ಅಥವಾ ಟೆಕ್ಸ್‌ಟೈಲ್ಸ್‌ ಟೆಕ್ನಾಲಜಿಯಲ್ಲಿ ಬಿ.ಟೆಕ್‌ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಜವಳಿ ಸಚಿವಾಲಯ (Ministry of Textiles)ದ ಟೆಕ್ಸ್‌ಟೈಲ್ಸ್‌ ಕಮಿಟಿ (Textiles Committee) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 40 ಪ್ರಾಜೆಕ್ಟ್‌ ಅಸಿಸ್ಟಂಟ್‌ (Project Assistant) ಹುದ್ದೆ ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು (Textiles Committee Recruitment 2024). ಬೆಂಗಳೂರಿನಲ್ಲಿಯೂ ಹುದ್ದೆ ಖಾಲಿ ಇದ್ದು, ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಮೇ 31ರೊಳಗೆ ತಲುಪುವಂತಿರಬೇಕು ಎಂದು ಪ್ರಕಟಣೆ ತಿಳಿಸಿದೆ. ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು (Job Alert).

ಹುದ್ದೆಗಳ ವಿವರ

ಬೆಂಗಳೂರು – 4, ಮುಂಬೈ – 7, ನವಿ ಮುಂಬೈ – 3, ಚೆನ್ನೈ – 3, ಕಾನ್ಪುರ – 1, ಕಣ್ಣೂರು – 1, ಕರೂರು – 1, ಹೈದರಾಬಾದ್‌ – 4, ಗುರುಗ್ರಾಮ – 3, ಜೈಪುರ – 2, ತಿರುಪುರ – 3, ಗುಂಟೂರು – 1, ಕೊಯಂಬತ್ತೂರು – 5, ಲುಧಿಯಾನ – 1, ಕೋಲ್ಕತ್ತಾ – 1 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಬಿಎಸ್‌ಸಿ (ಫಿಸಿಕ್ಸ್‌ ಅಥವಾ ಕೆಮಿಸ್ಟ್ರಿ) ಅಥವಾ ಟೆಕ್ಸ್‌ಟೈಲ್ಸ್‌ ಟೆಕ್ನಾಲಜಿಯಲ್ಲಿ ಬಿ.ಟೆಕ್‌ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 26 ಸಾವಿರ ರೂ. ಮಾಸಿಕ ವೇತನ ದೊರೆಯಲಿದೆ. ಆಯ್ಕೆಯಾದವರನ್ನು 3 ವರ್ಷಗಳ ಅವಧಿಗೆ ತಾತ್ಕಾಲಿಕವಾಗಿ ನೇಮಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನು ಗಮನಿಸಿ

  • 2024ರ ಮಾರ್ಚ್‌ 31ಕ್ಕೆ ಹೊಂದಿಕೊಂಡು ಕನಿಷ್ಠ ಮತ್ತು ಗರಿಷ್ಠ ವಯಸ್ಸನ್ನು ನಿರ್ಧರಿಸಲಾಗುತ್ತದೆ.
  • ವಾರಕ್ಕೆ ಒಂದು ದಿನ ರಜೆ ಇರಲಿದ್ದು, ವರ್ಷಕ್ಕೆ 8 ಕ್ಯಾಶುವಲ್‌ ಲೀವ್‌ ನಿಗದಿಪಡಿಸಲಾಗಿದೆ.
  • ಟಿಎ / ಡಿಎ ಪಾವತಿಸಲಾಗುವುದಿಲ್ಲ.
  • ಅಭ್ಯರ್ಥಿಗಳು ಒಂದು ಕಡೆಗೆ ಮಾತ್ರ ಅರ್ಜಿ ಸಲ್ಲಿಸಬೇಕು.

Textiles Committee Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

Textiles Committee Recruitment 2024 ಅಪ್ಲಿಕೇಷನ್‌ ಫಾರಂಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅಪ್ಲಿಕೇಷನ್‌ ಫಾರಂ ಅನ್ನು ಡೌನ್‌ಲೋಡ್‌ ಮಾಡಿ ಪ್ರಿಂಟ್‌ ತೆಗೆದು ಭರ್ತಿ ಮಾಡಿ.
  • ಫೋಟೊ ಲಗತ್ತಿಸಿ.
  • ಸೆಲ್ಫ್‌ ಎಟೆಸ್ಟ್‌ ಮಾಡಿದ ಡಾಕ್ಯುಮೆಂಟ್‌ಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ:

Textiles Committee, FKCCI,
WTC Building, 1st Floor, Kempe Gowda Road,
Bangaluru – 560 009, Karnataka.

ಹೆಚ್ಚಿನ ವಿವರಗಳಿಗೆ ಫೋನ್‌ ನಂಬರ್‌: (080) 2226 1401, ಇಮೇಲ್‌: blr.tc@nic.inಗೆ ಸಂಪರ್ಕಿಸಿ. ಗಮನಿಸಿ ನಿಮ್ಮ ಅಪ್ಲಿಕೇಷನ್‌ ಫಾರಂ ಮೇ 31ರೊಳಗೆ ತಲುಪುವಂತಿರಬೇಕು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job News: ಗುಡ್‌ನ್ಯೂಸ್‌; ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಶೀಘ್ರ 12,000 ಉದ್ಯೋಗಿಗಳ ನೇಮಕ

Job News: ಬ್ಯಾಂಕ್‌ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ದೇಶದ ಅತಿ ದೊಡ್ಡ ಬ್ಯಾಂಕ್‌ ಎನಿಸಿಕೊಂಡಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬರೋಬ್ಬರಿ 12,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಇತರ ವಿಭಾಗಗಳಲ್ಲಿ ಈ ನೇಮಕಾತಿ ನಡೆಲಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಅಧಿಸೂಚನೆ ಶೀಘ್ರದಲ್ಲಿಯೇ ಹೊರ ಬೀಳಲಿದೆ.

VISTARANEWS.COM


on

Job News
Koo

ನವದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕ್‌ ಎನಿಸಿಕೊಂಡಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (State Bank of India) ಬರೋಬ್ಬರಿ 12,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಮಾಹಿತಿ ತಂತ್ರಜ್ಞಾನ (Information Technology) ಮತ್ತು ಇತರ ವಿಭಾಗಗಳಲ್ಲಿ ಈ ನೇಮಕಾತಿ ನಡೆಲಿದೆ ಎಂದು ಅಧ್ಯಕ್ಷ ದಿನೇಶ್‌ ಖರಾ (Dinesh Khara) ಮಾಹಿತಿ ನೀಡಿದ್ದಾರೆ (Job News).

”ಸುಮಾರು 11,000ರಿಂದ 12,000 ಉದ್ಯೋಗಿಗಳ ನೇಮಕಾತಿಯ ಪ್ರಕ್ರಿಯೆ ನಡೆಯುತ್ತಿದೆ. ಈ ನೇಮಕಾತಿ ಬ್ಯಾಂಕ್‌ನ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿ ಹೊಂದಿದೆ. ಜತೆಗೆ ಸೇವೆಯ ಗುಣಮಟ್ಟವನ್ನು ವೃದ್ಧಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆʼʼ ಎಂದು ಅವರು ವಿವರಿಸಿದ್ದಾರೆ. ʼʼನೇಮಕಗೊಂಡವರಿಗೆ ಆರಂಭದಲ್ಲಿ ಬ್ಯಾಂಕಿಂಗ್‌ ವ್ಯವಸ್ಥೆಯ ಬಗ್ಗೆ ಸೂಕ್ತ ಮಾಹಿತಿ ನೀಡಿ ಬಳಿಕ ಅವರನ್ನು ಐಟಿ ವಿಭಾಗಕ್ಕೆ ಶಿಫಾರಸ್ಸು ಮಡಲಾಗುವುದುʼʼ ಎಂದು ಅವರು ಹೇಳಿದ್ದಾರೆ. ಈ ಮೂಲಕ ಬ್ಯಾಂಕ್‌ ಉದ್ಯೋಗ ಹೊಂದಬೇಕು ಎನ್ನುವವರ ಕನಸು ನನಸಾಗಲಿದೆ.

ಉದ್ಯೋಗಿಗಳ ಸಂಖ್ಯೆಯಲ್ಲಿ ಕುಸಿತ

ಮಾರ್ಚ್‌ ಅಂತ್ಯಕ್ಕೆ ಎಸ್‌ಬಿಐ ಉದ್ಯೋಗಿಗಳ ಸಂಖ್ಯೆ 2,32,296ಕ್ಕೆ ಕುಸಿದಿದೆ. ಕಳೆದ ವರ್ಷ ಇದೇ ವೇಳೆಗೆ 2,35,858 ಉದ್ಯೋಗಿಗಳಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು 2024ರ ಮಾರ್ಚ್‌ 31ಕ್ಕೆ ಕೊನೆಗೊಂಡ ತ್ರೈ ಮಾಸಿಕದಲ್ಲಿ ಎಸ್‌ಬಿಐಯ ನಿವ್ವಳ ಲಾಭ ಶೇ. 24ರಷ್ಟು ಏರಿಕೆ ದಾಖಲಿಸಿ 20,698 ಕೋಟಿ ರೂ.ಗೆ ತಲುಪಿದೆ. ಕಳೆದ ವರ್ಷ ಈ ಅವಧಿಯಲ್ಲಿ ಎಸ್‌ಬಿಐ 16,695 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. ಬಡ್ಡಿಯ ಆದಾಯ ಶೇ. 19ರಷ್ಟು ವೃದ್ಧಿಸಿ 92,951 ಕೋಟಿ ರೂ.ಯಿಂದ 1.11 ಲಕ್ಷ ಕೋಟಿ ರೂ.ಗೆ ತಲುಪಿದೆ. ದೇಶದಲ್ಲಿ ಉದ್ಯಮ ಆಧಾರಿತ ಚಟುವಟಿಕೆ ಹೆಚ್ಚುತ್ತಿರುವುದೇ ಇದಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಎಸ್‌ಬಿಐಯ ಒಟ್ಟು ಆದಾಯವೂ ಏರುಗತಿಯಲ್ಲಿದೆ. 1.06 ಲಕ್ಷ ಕೋಟಿ ರೂ.ಯಿಂದ 1.28 ಲಕ್ಷ ಕೋಟಿ ರೂ.ಗೆ ಜಿಗಿತ ಕಂಡಿದೆ. ಜತೆಗೆ ನಿರ್ವಹಣಾ ವೆಚ್ಚವೂ ಹಿಂದಿನ ವರ್ಷದ 29,732 ಕೋಟಿ ರೂ.ಗಳಿಂದ 30,276 ಕೋಟಿ ರೂ.ಗೆ ಏರಿಕೆ ಕಂಡಿದೆ ಎಂದು ಅಂಕಿ-ಅಂಶಗಳು ತಿಳಿಸಿವೆ.

ಇದನ್ನೂ ಓದಿ: Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ

ನಿರೀಕ್ಷೆ ಮೀರಿದ ಲಾಭಾಂಶ

ಆರ್ಥಿಕ ತಜ್ಞರು ಈ ತ್ರೈಮಾಸಿಕದಲ್ಲಿ ಎಸ್‌ಬಿಐ 13,400 ಕೋಟಿ ರೂ. ಲಾಭ ದಾಖಲಿಸಬಹುದು ಎಂದು ನಿರೀಕ್ಷಿಸಿದ್ದರು. ಆದರೆ ಫಲಿತಾಂಶ ಈ ಎಲ್ಲ ನಿರೀಕ್ಷೆಗಳನ್ನೂ ಮೀರಿದ್ದು, ಬರೋಬ್ಬರಿ 20,698 ಕೋಟಿ ರೂ. ನಿವ್ವಳ ಲಾಭ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಎಸ್‌ಬಿಐ ತನ್ನ ಪ್ರತಿ ಈಕ್ವಿಟಿ ಷೇರಿಗೆ 13.70 ರೂ. ಲಾಭಾಂಶ ಘೋಷಿಸಿದೆ. ತ್ರೈ ಮಾಸಿಕ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಎಸ್‌ಬಿಐ ಷೇರುಗಳಲ್ಲಿ ಜಿಗಿತ ಕಂಡು ಬಂದಿದೆ. ಮೇ 9ರಂದು ಎಸ್‌ಬಿಐ ಷೇರುಗಳು ಸುಮಾರು ಶೇ. 3ರಷ್ಟು ಹೆಚ್ಚಾಗಿ 834.40 ರೂ.ನಲ್ಲಿ ವಹಿವಾಟು ನಡೆಸುವುದು ಕಂಡುಬಂತು. ಎಸ್‌ಬಿಐನ ಒಟ್ಟು ಅನುತ್ಪಾದಕ ಆಸ್ತಿ (ಜಿಎನ್‌ಪಿಎ) ಪ್ರಮಾಣ ಶೇ.2.24ಕ್ಕೆ ಇಳಿಕೆಯಾಗಿದೆ. ಇದು ಕಳೆದ ವರ್ಷ ಶೇ . 2.78ರಷ್ಟು ಇತ್ತು.

Continue Reading
Advertisement
Team India
ಪ್ರಮುಖ ಸುದ್ದಿ27 mins ago

Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

Victoria Hospital
ಕರ್ನಾಟಕ39 mins ago

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

KL Rahul
ಕ್ರೀಡೆ55 mins ago

KL Rahul : ಗಲಾಟೆ ಚಾಪ್ಟರ್ ಕ್ಲೋಸ್​​; ಕೆ. ಎಲ್​ ರಾಹುಲ್​ ಹಿಡಿದ ಕ್ಯಾಚ್​ಗೆ ಮೆಚ್ಚಿ ಚಪ್ಪಾಳೆ ತಟ್ಟಿದ ಗೋಯೆಂಕಾ

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

Bank Loan Fraud
ಪ್ರಮುಖ ಸುದ್ದಿ2 hours ago

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Shri Raghaveshwar Bharati Swamiji spoke in Bhava Ramayana Ramavataran Certificate Course and Short Term Courses Class
ಉತ್ತರ ಕನ್ನಡ2 hours ago

Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Swati Maliwal
ಪ್ರಮುಖ ಸುದ್ದಿ3 hours ago

Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

Karnataka weather Man from Siddapura killed in lightning Heavy rain warning for four more days
ಕರ್ನಾಟಕ3 hours ago

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Manjappa Magodi
ಚಿತ್ರದುರ್ಗ3 hours ago

Manjappa Magodi: ಕೆಇಎಸ್‌ ಅಧಿಕಾರಿ ಮಂಜಪ್ಪ ಮಾಗೊದಿಗೆ ಕುವೆಂಪು ವಿವಿಯಿಂದ ಡಾಕ್ಟರೇಟ್

Viral News
ವಿದೇಶ3 hours ago

Viral News: ಗಾಜಾದಲ್ಲಿ ಆಹಾರ ಸಿಗದೆ ನಾಣ್ಯ, ಕಲ್ಲು, ಬ್ಯಾಟರಿ ತಿನ್ನುತ್ತಿರುವ ಮಕ್ಕಳು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ4 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20247 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202410 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ11 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು12 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ18 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

ಟ್ರೆಂಡಿಂಗ್‌