ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯನಗರ, ಚಿಕ್ಕಮಗಳೂರು, ತುಮಕೂರು, ಕೊಪ್ಪಳ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಕ್ಕೆ (Anganwadi Recruitment) ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಚಿಕ್ಕಮಗಳೂರು, ವಿಜಯ ನಗರದಲ್ಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 6, ತುಮಕೂರು ಜಿಲ್ಲೆಯಲ್ಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27, ಕೊಪ್ಪಳದಲ್ಲಿನ ಹುದ್ದೆಗಳಿಗೆ ಸೆಪ್ಟೆಂಬರ್ 23, ಕೊಡಗು ಜಿಲ್ಲೆಯಲ್ಲಿನ ಹುದ್ದೆಗಳಿಗೆ ಸೆಪ್ಟೆಂಬರ್ 15, ಶಿವಮೊಗ್ಗ ಜಿಲ್ಲೆಯಲ್ಲಿನ ಹುದ್ದೆಗಳಿಗೆ ಸೆಪ್ಟೆಂಬರ್ 16 ಕೊನೆಯ ದಿನವಾಗಿರುತ್ತದೆ.
ಎಲ್ಲಿ ಎಷ್ಟು ಹುದ್ದೆ?
ವಿಜಯ ನಗರ: 15 ಅಂಗನವಾಡಿ ಕಾರ್ಯಕರ್ತೆಯರು, 48 ಅಂಗನವಾಡಿ ಸಹಾಯಕಿಯರು.
ಚಿಕ್ಕಮಗಳೂರು: 19 ಅಂಗನವಾಡಿ ಕಾರ್ಯಕರ್ತೆಯರು, 55 ಅಂಗನವಾಡಿ ಸಹಾಯಕಿಯರು.
ತುಮಕೂರು : 25 ಅಂಗನವಾಡಿ ಕಾರ್ಯಕರ್ತೆಯರು, 116 ಅಂಗನವಾಡಿ ಸಹಾಯಕಿಯರು.
ಕೊಪ್ಪಳ : 12 ಅಂಗನವಾಡಿ ಕಾರ್ಯಕರ್ತೆಯರು, 60 ಅಂಗನವಾಡಿ ಸಹಾಯಕಿಯರು.
ಕೊಡಗು : 12 ಅಂಗನವಾಡಿ ಕಾರ್ಯಕರ್ತೆಯರು, 50 ಅಂಗನವಾಡಿ ಸಹಾಯಕಿಯರು.
ಶಿವಮೊಗ್ಗ : 13 ಅಂಗನವಾಡಿ ಕಾರ್ಯಕರ್ತೆಯರು, 61 ಅಂಗನವಾಡಿ ಸಹಾಯಕಿಯರು.
ಎಲ್ಲ ಹುದ್ದೆಗಳು ಮೀಸಲಾತಿಯನ್ವಯ ಹಂಚಿಕೆಯಾಗಿರುತ್ತವೆ.
ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್: https://anganwadirecruit.kar.nic.in/
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಯು ಸಂಪೂರ್ಣವಾಗಿ ಗೌರವ ಸೇವೆಯಾಗಿದ್ದು, ಖಾಯಂ ಹುದ್ದೆಯಾಗಿರುವುದಿಲ್ಲ. ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ., ಮಿನಿ ಕಾರ್ಯಕರ್ತೆಯರಿಗೆ ಮಾಸಿಕ 6,250 ರೂ. ಹಾಗೂ ಸಹಾಯಕಿಯರಿಗೆ 5,000 ರೂ. ಗೌರವಧನ ನೀಡಲಾಗುತ್ತದೆ.
ಅರ್ಹತೆಗಳೇನು?
ಅಂಗನವಾಡಿ ಕಾರ್ಯರ್ತೆಯರ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿದ್ಯಾರ್ಹತೆಯನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಅಂಕಪಟ್ಟಿಯನ್ನು ಅಪ್‌ಲೋಡ್ ಮಾಡಬೇಕಾಗಿರುತ್ತದೆ.
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ನಾಲ್ಕನೇ ತರಗತಿಯಿಂದ 9ನೇ ತರಗತಿಯವರೆಗೆ ಓದಿರಬೇಕು. ಎಸ್‌ಎಸ್‌ಎಲ್‌ಸಿ ಓದಿದವರೂ ಅರ್ಜಿ ಸಲ್ಲಿಸಿದರೆ 9ನೇ ತರಗತಿಯ ಅಂಕಪಟ್ಟಿಯನ್ನು ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ.
ವಯೋಮಿತಿ: ಕನಿಷ್ಠ 18 ವರ್ಷದಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ವಿಕಲೇತನರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿರುತ್ತದೆ.
ಅರ್ಜಿ ಶುಲ್ಕ ಎಷ್ಟು?
ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಆಧರೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಶುಲ್ಕ ನಿಗದಿಪಡಿಸಲಾಗಿರುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
- anganwadirecruit.kar.nic.in ವೆಬ್‌ಸೈಟ್ ಗೆ ಭೇಟಿ ನೀಡಿ.
- ನೇಮಕಾತಿ ಬಯಸುವ ಜಿಲ್ಲೆ ಮತ್ತು ನೇಮಕಾತಿ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ
- ‘ಸಲ್ಲಿಸಿ’ ಬಟನ್ ಮೇಲೆ ಕ್ಲಿಕ್ ಮಾಡಿ
- ಓಪನ್ ಆದ ಹೊಸ ಪೇಜ್ನಲ್ಲಿ ಅಗತ್ಯ ಮಾಹಿತಿಗಳನ್ನು ದಾಖಲಿಸಿ ಅರ್ಜಿ ಸಲ್ಲಿಸಬಹುದು.
- ಪ್ರಮಾಣ ಪತ್ರಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್ ಕ್ಲಿಕ್ ಮಾಡಿ ಅಪ್‌ಲೋಡ್ ಮಾಡಬೇಕು.
ಒಮ್ಮೆ ಅರ್ಜಿ ಸಲ್ಲಿಸಿದ ಮೇಲೆ ಯಾವುದಾದರೂ ದಾಖಲೆ ಸಲ್ಲಿಸಬೇಕಿದ್ದರೆ ಅದಕ್ಕೂ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ʼಅಪ್‌ಲೋಡ್ ಮಿಸ್ಸಿಂಗ್ ಡಾಕ್ಯೂಮೆಂಟ್ʼ ಕ್ಲಿಕ್ ಮಾಡಿ ಇವುಗಳನ್ನು ಅಪ್‌ಲೋಡ್ ಮಾಡಬಹುದು. ಅರ್ಜಿ ಸಲ್ಲಿಸಿರುವುದಕ್ಕೆ “ಸ್ವೀಕೃತಿʼʼಯನ್ನೂ ಪಡೆದುಕೊಳ್ಳಬಹುದಾಗಿದೆ.
ಅಭ್ಯರ್ಥಿಗಳು ಸರಿಯಾದ ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ನೀಡಬೇಕಾಗಿರುತ್ತದೆ. ಇದರ ಮೂಲಕ ಸಂಪರ್ಕಿಸಲಾಗುತ್ತದೆ. ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಲ್ಲಿಸಬಹುದು.
ನೇಮಕ ಹೇಗೆ?
ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯು ಸರ್ಕಾರದ ಮಾನದಂಡಗಳ ಪ್ರಕಾರ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಇದಕ್ಕಾಗಿ ಯಾವುದೇ ಪರೀಕ್ಷೆ, ಸಂದರ್ಶನ ನಡೆಸಲಾಗುವುದಿಲ್ಲ.
ಇದನ್ನೂ ಓದಿ| KPSC Recruitment 2022 | ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ