Site icon Vistara News

KPSC Recruitment: 230 ಕಮರ್ಷಿಯಲ್ ಟ್ಯಾಕ್ಸ್​ ಇನ್ಸ್​ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

kpsc

kpsc

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission-KPSC Recruitment) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸದ್ಯ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಹಿಂದೆ ಸೆಪ್ಟಂಬರ್‌ 30ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಹೇಳಲಾಗಿತ್ತು. ಆದರೆ ಇದೀಗ ದಿನಾಂಕವನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ. ಒಟ್ಟು 230 ಕಮರ್ಷಿಯಲ್ ಟ್ಯಾಕ್ಸ್​ ಇನ್ಸ್​ಪೆಕ್ಟರ್ (RPC) ಹುದ್ದೆಗಳು ಖಾಲಿ ಇವೆ. ವೆಬ್‌ಸೈಟ್‌ ವಿಳಾಸ kpsc.kar.nic.in ಗಮನಿಸಿ.

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಪದವಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು.

ಆಯ್ಕೆ ವಿಧಾನ

ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟಂಬರ್‌ 30, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ/ ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ/2ಬಿ/3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಎಚ್‌/ ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಸಾಮಾನ್ಯ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 300 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು- 50 ರೂ. ಪಾವತಿಸಬೇಕು. ಎಸ್‌ಸಿ/ಎಸ್‌ಟಿ/ ಪ್ರವರ್ಗ-1 & ಪಿಎಚ್‌ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಆನ್​ಲೈನ್ ಮೂಲಕವೇ ಶುಲ್ಕ ಪಾವತಿಸಬೇಕು.

ಇದನ್ನೂ ಓದಿ: Job News : ಅರಣ್ಯ ಇಲಾಖೆಯಲ್ಲಿ 310 ವೀಕ್ಷಕ ಹುದ್ದೆ ಭರ್ತಿ; ಅರ್ಜಿ ಸಲ್ಲಿಕೆ ಹೇಗೆ, ಕೊನೇ ದಿನಾಂಕ ಎಂದು?

ಅರ್ಜಿ ಸಲ್ಲಿಕೆ ವಿಧಾನ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-30574957/30574901 ಅನ್ನು ಸಂಪರ್ಕಿಸಿ. ಮೈಸೂರು ಕಚೇರಿ ದೂರವಾಣಿ ಸಂಖ್ಯೆ:  0821-2545956. ಬೆಳಗಾವಿ ಕಚೇರಿ 0831-2475345, ಕಲಬುರಗಿ ಕಚೇರಿ 08472-227944, ಶಿವಮೊಗ್ಗ ಕಚೇರಿ 08182-228099.

ಇನ್ನಷ್ಟು ಉದ್ಯೋಗ ಸುದ್ದಿಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

Exit mobile version