Chief Memes Officer : ಬೆಂಗಳೂರಿನ ಸ್ಟಾರ್ಟಪ್‌ಗೆ ಬೇಕಾಗಿದ್ದಾರೆ ಚೀಫ್‌ ಮೀಮ್ಸ್‌ ಆಫೀಸರ್‌, ತಿಂಗಳಿಗೆ 1 ಲಕ್ಷ ರೂ. ಸಂಬಳ - Vistara News

ಉದ್ಯೋಗ

Chief Memes Officer : ಬೆಂಗಳೂರಿನ ಸ್ಟಾರ್ಟಪ್‌ಗೆ ಬೇಕಾಗಿದ್ದಾರೆ ಚೀಫ್‌ ಮೀಮ್ಸ್‌ ಆಫೀಸರ್‌, ತಿಂಗಳಿಗೆ 1 ಲಕ್ಷ ರೂ. ಸಂಬಳ

ಬೆಂಗಳೂರಿನ ಸ್ಟಾಕ್‌ ಮಾರ್ಕೆಟ್‌ ಸಂಬಂಧಿತ ಸ್ಟಾರ್ಟಪ್‌ ಸ್ಟಾಕ್‌ಗ್ರೊ, ಚೀಫ್‌ ಮೀಮ್ಸ್‌ ಆಫೀಸರ್‌ ಹುದ್ದೆಯನ್ನು (Chief Memes Officer) ಸೃಷ್ಟಿಸಿದೆ. ಏನಿದು? ಇಲ್ಲಿದೆ ಆಸಕ್ತಿಕರ ವಿವರ.

VISTARANEWS.COM


on

stock trading
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನೀವು ಸಾಮಾಜಿಕ ಜಾಲತಾಣಗಳಲ್ಲಿ ಮೀಮ್ಸ್‌ಗಳನ್ನು (Chief Memes Officer) ಕಂಡು ನಕ್ಕು ಹಗುರವಾಗಿರಬಹುದು. ಆನಂದಿಸಿರಬಹುದು. ಇದೀಗ ಬೆಂಗಳೂರಿನ ಸ್ಟಾಕ್‌ಗ್ರೊ (StockGro) ಎಂಬ ಸ್ಟಾಕ್‌ ಮಾರ್ಕೆಟ್‌ ಸಂಬಂಧಿತ ಸ್ಟಾರ್ಟಪ್, ಚೀಫ್‌ ಮೀಮ್ಸ್ ಆಫೀಸರ್‌ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಹಾಗೂ ತಿಂಗಳಿಗೆ 1 ಲಕ್ಷ ರೂ. ವೇತನವನ್ನು ನೀಡುವುದಾಗಿ ತಿಳಿಸಿದೆ.

ಹಣಕಾಸು ಸಂಬಂಧಿತ ವಿಚಾರಗಳನ್ನು, ಮಾರುಕಟ್ಟೆ ಟ್ರೆಂಡ್‌ಗಳನ್ನು ಸರಳ ಹಾಗೂ ಹಾಸ್ಯ ಪ್ರಜ್ಞೆಯೊಂದಿಗೆ ಜನರಿಗೆ ಅರ್ಥ ಮಾಡಿಸಲು ಚೀಫ್‌ ಮೀಮ್ಸ್‌ ಆಫೀಸರ್‌ ಹುದ್ದೆಯನ್ನು ಸ್ಟಾಕ್‌ಗ್ರೊ ನೇಮಿಸುತ್ತಿದೆ.‌ ಈಗಾಗಲೇ ಈ ಹುದ್ದೆಗೆ 200 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಸ್ಟಾರ್ಟಪ್‌ ತನ್ನ ಲಿಂಕ್ಡ್‌ ಇನ್‌ ತಾಣದಲ್ಲಿ ತಿಳಿಸಿದೆ. ಇದು ಫುಲ್‌ ಟೈಮ್‌ ಹುದ್ದೆಯಾಗಿದೆ.

ಅರ್ಹತೆ ಏನು?

ಹಣಕಾಸು, ಸ್ಟಾಕ್ ಮಾರುಕಟ್ಟೆ ಬಗ್ಗೆ ಜ್ಞಾನ ಇರಬೇಕು.

ಹಣಕಾಸು ಮತ್ತು ಫನ್ನಿ ಟ್ರೆಂಡ್‌ಗಳ ಬಗ್ಗೆ ಲಿಂಕ್‌ ಮಾಡಬಲ್ಲ ಸೃಜನಶೀಲತೆ ಇರಬೇಕು.

ಫನ್ನಿ ಅನ್ನಿಸುವ ಹಾಗೂ ಹಣಕಾಸು ಸಂಬಂಧಿತ ಮೀಮ್ಸ್‌ಗಳನ್ನು ಸೃಷ್ಟಿಸಬೇಕು.

ಹಾಸ್ಯ ಪ್ರಜ್ಞೆ ಇರಬೇಕು

ಸಂವಹನಾ ಕೌಶಲ, ಟೀಮ್‌ ಸ್ಪಿರಿಟ್‌ನಲ್ಲಿ ಕೆಲಸ ಮಾಡುವ ಸ್ವಭಾವ ಇರಬೇಕು.

ನಕ್ಕು ನಗಿಸಬಲ್ಲ ಮೀಮ್ಸ್‌ಗಳು ಅದೇ ವೇಳೆ ಹಣಕಾಸು ವಿಷಯಗಳನ್ನೂ ಒಳಗೊಂಡಿರಬೇಕು.

ಅದ್ಭುತವಾಗಿ ಬರೆಯಲು ಗೊತ್ತಿರಬೇಕು.

ಚೀಫ್‌ ಮೀಮ್ಸ್‌ ಆಫೀಸರ್‌ ಹುದ್ದೆ ಅಸಾಂಪ್ರದಾಯಿಕವಾಗಿದ್ದು, ಈಗಿನ ಗ್ರಾಹಕರ ಅಗತ್ಯಕ್ಕೆ ಅನುಗುಣವಾಗಿದೆ ಎಂದು ಸ್ಟಾಕ್‌ ಗ್ರೊ ಕಂಪನಿಯ ಸಿಇಒ ಅಜಯ್‌ ಲಾಖೋಟಿಯಾ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬಿಬಿಎಂಪಿಯಿಂದ ಬರೋಬ್ಬರಿ 11,307 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Job Alert: ಬೆಂಗಳೂರಿನಲ್ಲೇ ಕೆಲಸ ಹುಡುಕುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಖಾಲಿ ಇರುವ ಬರೋಬ್ಬರಿ 11,307 ಡಿ ಗ್ರೂಪ್‌ನ ಪೌರ ಕಾರ್ಮಿಕರ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದೆ. ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 15. ಈ ಹುದ್ದೆಗೆ ಯಾವುದೇ ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿಲ್ಲ. ಕನ್ನಡ ಮಾತನಾಡಲು ತಿಳಿದಿರುವವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ಘನತ್ಯಾಜ್ಯ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಬರೋಬ್ಬರಿ 11,307 ಡಿ ಗ್ರೂಪ್‌ನ ಪೌರ ಕಾರ್ಮಿಕರ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದೆ (BBMP Recruitment 2024). ಘನತ್ಯಾಜ್ಯ ನಿರ್ವಹಣೆ ವಿಭಾಗದಡಿ ನೇಮಕಾತಿ ನಡೆಯಲಿದೆ. ಕನ್ನಡ ಬಲ್ಲವರು ಅರ್ಜಿ ಸಲ್ಲಿಸಬಹುದು. ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 15 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸ್ಥಳೀಯ ವೃಂದದ-ಹುದ್ದೆಗಳು, ಕಲ್ಯಾಣ ಕರ್ನಾಟಕ (KK)-905 ಮತ್ತು ಉಳಿಕೆ ಮೂಲ ವೃಂದ (RPC)-10,402 ಹುದ್ದೆಗಳಿವೆ. ಈ ಹುದ್ದೆಗೆ ಯಾವುದೇ ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿಲ್ಲ. ಕನ್ನಡ ಮಾತನಾಡಲು ತಿಳಿದಿರುವವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಅಭ್ಯರ್ಥಿಗಳ ಗರಿಷ್ಠ ವಯಸ್ಸು 55 ವರ್ಷ. ಅಭ್ಯರ್ಥಿಗಳು ಭಾರತೀಯ ನಾಗರೀಕರಾಗಿರಬೇಕು. ಬಿಬಿಎಂಪಿಯಲ್ಲಿ ನೇರ ಪಾವತಿ / ಕ್ಷೇಮಾಭಿವೃದ್ಧಿ / ದಿನಗೂಲಿ ಆಧಾರದಲ್ಲಿ ಎರಡು ವರ್ಷ ಕಡಿಮೆ ಇಲ್ಲದಂತೆ, ನಿರಂತರವಾಗಿ ಕೆಲಸ ನಿರ್ವಹಿಸಿರುವ ಮತ್ತು ಎರಡು ವರ್ಷಗಳಿಗೂ ಮೇಲ್ಪಟ್ಟು ಪಾಲಿಕೆಯಿಂದ ವೇತನ ಪಡೆಯುವವರಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಆಯ್ಕೆಯಾದವರಿಗೆ 17,000 ರೂ. – 28,950 ರೂ. ಮಾಸಿಕ ವೇತನ ದೊರೆಯಲಿದೆ.

BBMP Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಬಿಬಿಎಂಪಿಯ ಅಧಿಕೃತ ವೆಬ್‌ಸೈಟ್‌ bbmp.gov.in.ಗೆ ಭೇಡಿ ನೀಡಿ.
  • ಈಗ ತೆರೆದುಕೊಳ್ಳುವ ಹೋಮ್‌ಪೇಜ್‌ನಲ್ಲಿ ಕಂಡು ಬರುವ ಪೌರಕಾರ್ಮಿಕರ ಹುದ್ದೆಗಳ ಅರ್ಜಿ ನಮೂನೆ Click here to View ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಈಗ ಕಂಡು ಬರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್‌ ಮಾಡಿ.
  • ಪ್ರಿಂಟ್‌ಔಟ್‌ ತೆಗೆದು ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅದರಲ್ಲಿ ಕೇಳಿರುವ ದಾಖಲೆಗಳನ್ನು ಲಗತ್ತಿಸಿ.
  • ಭರ್ತಿ ಮಾಡಿದ ಅರ್ಜಿಯನ್ನು N.R. Square, Bengaluru -560002, Karnataka ಇಲ್ಲಿಗೆ ಸಲ್ಲಿಸಿ.

ಇದನ್ನೂ ಗಮನಿಸಿ

  • ಈ ಹುದ್ದೆಗಳಿಗೆ ಯಾವುದೇ ಸಂದರ್ಶನ ನಿಗದಿಪಡಿಸಿಲ್ಲ.
  • ಅಪೂರ್ಣ ಅರ್ಜಿಗಳನ್ನು ಕಡ್ಡಾಯವಾಗಿ ಸ್ವೀಕರಿಸುವುದಿಲ್ಲ.
  • ಅರ್ಜಿಯೊಂದಿಗೆ ಕಡ್ಡಾಯವಾಗಿ ದಾಖಲೆಗಳನ್ನು ಲಗತ್ತಿಸಬೇಕು.
  • ಒಂದಕ್ಕಿಂತ ಹೆಚ್ಚು ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಪತ್ನಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುವುದಿಲ್ಲ.
  • ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್‌ ಹಿನ್ನೆಲೆ ಹೊಂದಿರಬಾರದು.
  • ಈಗಾಗಲೇ ಗಂಭೀರ ಪ್ರಕರಣದ ಕಾರಣದಿಂದ ಕರ್ತವ್ಯದಿಂದ ತೆಗೆದು ಹಾಕಿರಬಾರದು.

ಇದನ್ನೂ ಓದಿ: Job Alert: ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿದೆ 4,660 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: 247 ಪಿಡಿಒ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ; ಇಲ್ಲಿದೆ ಡೈರೆಕ್ಟ್‌ ಲಿಂಕ್‌

Job Alert: ಕರ್ನಾಟಕ ಲೋಕಸೇವಾ ಆಯೋಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಭರ್ತಿಗೆ ಡೈರಕ್ಟ್‌ ಲಿಂಕ್‌ ಬಿಡುಗಡೆ ಮಾಡಿದೆ. ಒಟ್ಟು 247 ಹುದ್ದೆಗಳಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 15.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗ ಹುಡುಕುತ್ತಿರುವವರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಕರ್ನಾಟಕ ಲೋಕಸೇವಾ ಆಯೋಗ (KPSC) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ಭರ್ತಿಗೆ ಈ ಹಿಂದೆಯೇ ಅಧಿಸೂಚನೆ ಬಿಡುಗಡೆ ಮಾಡಿತ್ತು (Panchayat Development Officer Recruitment 2024).‌ ಉಳಿಕೆ ಮೂಲ ವೃಂದ ಹಾಗೂ ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ ಒಟ್ಟು 247 ಹುದ್ದೆಗಳಿವೆ. ಹೀಗಾಗಿ ಎರಡು ವೃಂದಗಳಿಗೆ ಪ್ರತ್ಯೇಕ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ಲಿಂಕ್‌ ಅನ್ನೂ ಬಿಡುಗಡೆ ಮಾಡಲಾಗಿದೆ. ಆಸಕ್ತರು ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 15 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 150 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 97 ಹುದ್ದೆಗಳಿವೆ. ಅಭ್ಯರ್ಥಿಗಳು ಭಾರತದ ಕಾನೂನಿನ್ವಯ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ. ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಿನಾಯಿತಿ ಇದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ., ಇತರ ಹಿಂದುಳಿದ ಎಲ್ಲ ವರ್ಗದ ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇನ್ನು ಅರ್ಜಿ ಶುಲ್ಕ ಸಲ್ಲಿಸುವವರು ಆನ್‌ಲೈನ್‌ ಮೂಲಕ ಪಾವತಿಸಬೇಕು. ಇದಕ್ಕಾಗಿ ನೆಟ್‌ ಬ್ಯಾಂಕಿಂಗ್‌, ಡೆಬಿಡ್‌, ಕ್ರೆಡಿಟ್‌ ಕಾರ್ಡ್‌ ಅಥವಾ ಯುಪಿಐ ವಿಧಾನವನ್ನು ಬಳಬಹುದು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 37,900 ರೂ. – 70,850 ರೂ. ಮಾಸಿಕ ವೇತನವಿದೆ.

ಸ್ಪರ್ಧಾತ್ಮಕ ಪರೀಕ್ಷೆಯ ವಿಧಾನ

ಎರಡು ಪತ್ರಿಕೆಗಳ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪತ್ರಿಕೆ-1ರಲ್ಲಿ ಸಾಮಾನ್ಯ ಜ್ಞಾನ, ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಕುರಿತ ವಸ್ತುನಿಷ್ಠ ಬಹು ಆಯ್ಕೆ ಪ್ರಶ್ನೆಗಳು ಇರುತ್ತವೆ. ಪತ್ರಿಕೆ-2ರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿಷಯಕ್ಕೆ ಸಂಬಂಧಿಸಿದ 100 ಪ್ರಶ್ನೆಗಳು ಇರುತ್ತವೆ. ಇದು ಕೂಡ ವಸ್ತುನಿಷ್ಠ ಬಹು ಆಯ್ಕೆ ಪ್ರಶ್ನೆಗಳಾಗಿರುತ್ತವೆ. ತಪ್ಪು ಉತ್ತರಕ್ಕೆ ನೆಗೆಟಿವ್‌ ಅಂಕಗಳಿದ್ದು ಗಮನಿಸಿ ಉತ್ತರಿಸುವುದು ಮುಖ್ಯ. ಪ್ರಶ್ನೆ ಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ. ಪರೀಕ್ಷೆಗಳನ್ನು ಆಯೋಗ ನಿಗದಿಪಡಿಸಿದ ಯಾವುದೇ ಕೇಂದ್ರದಲ್ಲಿ ನಡೆಸಲಾಗುವುದು.

ಪಿಡಿಒ ಉಳಿಕೆ ಮೂಲವೃಂದದ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.
ಪಿಡಿಒ ಉಳಿಕೆ ಹೈದರಾಬಾದ್‌ ಕರ್ನಾಟಕ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಬಳಿಕ ತೆರೆದುಕೊಳ್ಳುವ ಪುಟದ ಕೆಳಭಾಗದಲ್ಲಿರುವ Apply Online for various notifications ಆಯ್ಕೆಯನ್ನು ಕ್ಲಿಕ್‌ ಮಾಡಿ. ಬಳಿಕ Panchayat Development Officer ಆಪ್ಶನ್‌ ಸೆಲೆಕ್ಟ್‌ ಮಾಡಿ. ಹೆಸರು ನೋಂದಾಯಿಸಿದ ಬಳಿಕ ಅರ್ಜಿ ಭರ್ತಿ ಮಾಡಿ.

ಹೆಚ್ಚಿನ ವಿವರಗಳಿಗೆ: 080-30574957 / 30574901 ನಂಬರ್‌ ಸಂಪರ್ಕಿಸಿ.

ಇದನ್ನೂ ಓದಿ: Job Alert: ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್‌ನ್ಯೂಸ್‌; ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಹುದ್ದೆಯ ಸಂದರ್ಶನಕ್ಕೆ ನೇರ ಹಾಜರಾಗಿ

Continue Reading

ಉದ್ಯೋಗ

Job Alert: ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿದೆ 4,660 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ರೈಲ್ವೆ ನೇಮಕಾತಿ ಮಂಡಳಿ 4,660 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 14. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇನ್ನು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಇಲ್ಲಿದೆ ಭರಪೂರ ಅವಕಾಶ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಭಾರೀ ಉದ್ಯೋಗಾವಕಾಶಗಳಿವೆ. ರೈಲ್ವೆ ನೇಮಕಾತಿ ಮಂಡಳಿ (Railway Recruitment Board) ಈ ನೇಮಕಾತಿ ನಡೆಸುತ್ತಿದೆ (RPF Recruitment 2024). ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ (Railway Protection Force)ನಲ್ಲಿ ಬರೋಬ್ಬರಿ 4,660 ಹುದ್ದೆಗಳಿವೆ. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದ್ದು, ಎಸ್ಸೆಸ್ಸೆಲ್ಸಿ ತೆರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 14 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕಾನ್‌ಸ್ಟೇಬಲ್‌ – 4,208, ಸಬ್‌ ಇನ್ಸ್‌ಪೆಕ್ಟರ್‌ – 452 ಹುದ್ದೆಗಳಿವೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇನ್ನು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ, ಗರಿಷ್ಠ ವಯಸ್ಸು 25 ವರ್ಷ. ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 28 ವರ್ಷ. ಅರ್ಜಿ ಶುಲ್ಕವಾಗಿ ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳು 500 ರೂ. ಮತ್ತು ಎಸ್‌ಸಿ, ಎಸ್‌ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳು 250 ರೂ. ಪಾವತಿಸಬೇಕು.

ವೇತನ ಮತ್ತು ಆಯ್ಕೆ ವಿಧಾನ

ಕಾನ್ಸ್‌ಟೇಬಲ್‌ ಹುದ್ದೆಗಳಿಗೆ 21,700 ರೂ. ಮತ್ತು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ 35,400 ರೂ. ಮಾಸಿಕ ವೇತನ ಲಭ್ಯ. ಕಂಪ್ಯೂಟರ್‌ ಆಧಾರಿತ ಪರೀಕ್ಷೆ (CBT), ದೈಹಿಕ ಸಾಮರ್ಥ್ಯ ಪರೀಕ್ಷೆ (PET, PMT), ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಆಯ್ಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಹೆಸರು, ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಈಗ ರಿಜಿಸ್ಟ್ರೇಷನ್‌ ಐಡಿ ಮತ್ತು ಪಾಸವರ್ಡ್‌ ದೊರೆಯುತ್ತದೆ. ಅದನ್ನು ಬಳಿಸಿ ಲಾಗಿನ್‌ ಆಗಿ.
  • ಈಗ ಕಂಡು ಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ. ವೈಯಕ್ತಿಕ, ಶೈಕ್ಷಣಿಕ ಮಾಹಿತಿ ನೀಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಗಮನಿಸಿ

ಲಿಖಿತ ಪರೀಕ್ಷೆಯಲ್ಲಿ ನೆಗೆಟಿವ್‌ ಅಂಕಗಳಿದ್ದು, ಎಚ್ಚರಿಕೆಯಿಂದ ಉತ್ತರ ಬರೆಯಬೇಕು ಎಂದು ಪ್ರಕಟಣೆ ತಿಳಿಸಿದೆ. ಲಿಖಿತ ಪರೀಕ್ಷೆಯ ಅವಧಿ 90 ನಿಮಿಷದ ಅವಧಿಯದ್ದಾಗಿದ್ದು, ಪ್ರಶ್ನೆಗಳು ಬಹು ಆಯ್ಕೆಯ ಉತ್ತರವನ್ನು ಒಳಗೊಂಡಿದೆ. ಕಾನ್‌ಸ್ಟೇಬಲ್‌ ಹುದ್ದೆಯ ಪರೀಕ್ಷೆ ಎಸ್ಸೆಸ್ಸೆಲ್ಸಿ ಹಂತದ ಪ್ರಶ್ನೆಗಳನ್ನು ಒಳಗೊಂಡಿದ್ದು, ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಯ ಪರೀಕ್ಷೆ ಪದವಿ ಹಂತದ ಪ್ರಶ್ನೆಗಳನ್ನು ಒಳಗೊಂಡಿದೆ.

ಇದನ್ನೂ ಓದಿ: Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್‌ನ್ಯೂಸ್‌; ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಹುದ್ದೆಯ ಸಂದರ್ಶನಕ್ಕೆ ನೇರ ಹಾಜರಾಗಿ

Job Alert: ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಲಿಮಿಟೆಡ್‌ ಖಾಲಿ ಇರುವ 422 ಹುದ್ದೆಗಳನ್ನು ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಹ್ಯಾಂಡಿ ಮ್ಯಾನ್‌, ಹ್ಯಾಂಡಿ ವುಮೆನ್, ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್ ಹುದ್ದೆ ಇದಾಗಿದ್ದು, ಎಸ್ಸೆಸ್ಸೆಲ್ಸಿ ಪಾಸಾದವರು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಉದ್ಯೋಗ ಸ್ಥಳ: ಚೆನ್ನೈ. ಮೇ 2 ಮತ್ತು ಮೇ 4ರಂದು ಆಸಕ್ತರು ಸಂದರ್ಶನಕ್ಕೆ ಹಾಜರಾಗಬಹುದು.

VISTARANEWS.COM


on

Job Alert
Koo

ನವದೆಹಲಿ: ಉತ್ತಮ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಲಿಮಿಟೆಡ್‌ (Air India Air Transport Services Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಹ್ಯಾಂಡಿ ಮ್ಯಾನ್‌, ಹ್ಯಾಂಡಿ ವುಮೆನ್, ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್ ಸೇರಿ 422 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ (AIATSL Recruitment 2024) ಎಂದು ಪ್ರಕಟಣೆ ತಿಳಿಸಿದೆ. ಉದ್ಯೋಗದ ಸ್ಥಳ: ಚೆನ್ನೈ ಇಂಟರ್‌ ನ್ಯಾಷನಲ್‌ ಏರ್‌ಪೋರ್ಟ್‌. ಆಸಕ್ತರು ಅರ್ಜಿ ಸಲ್ಲಿಸಬೇಕಾಗಿಲ್ಲ, ಪರೀಕ್ಷೆ ಬರೆಯಬೇಕಾಗಿಲ್ಲ. ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್: 130, ಹ್ಯಾಂಡಿ ಮ್ಯಾನ್ / ಹ್ಯಾಂಡಿ ವುಮೆನ್: 292 ಹುದ್ದೆಗಳಿವೆ. ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ಪಾಸ್ ಜತೆಗೆ, ಹೆವಿ ಮೋಟಾರ್ ವೆಹಿಕಲ್ ಚಾಲನ ಪರವಾನಗಿ ಹೊಂದಿರಬೇಕು. ಹ್ಯಾಂಡಿ ಮ್ಯಾನ್ / ಹ್ಯಾಂಡಿ ವುಮೆನ್ ಹುದ್ದೆಗೆ ಬೇಕಾದ ಅರ್ಹತೆ ಎಂದರೆ ಎಸ್ಸೆಸ್ಸೆಲ್ಸಿ ಪಾಸ್ ಜತೆಗೆ ಇಂಗ್ಲಿಷ್ ಭಾಷೆ ಓದಲು, ಬರೆಯಲು ಬರಬೇಕು. ಸ್ಥಳೀಯ ಭಾಷೆ ಮತ್ತು ಹಿಂದಿ ಮಾತನಾಡಲು ಗೊತ್ತಿರಬೇಕು.

ವಯೋಮಿತಿ ಮತ್ತು ಆಯ್ಕೆ ವಿಧಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವರಿಷ್ಠ ವಯೋಮಿತಿ 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಆಸಕ್ತರು ನೇರ ಸಂದರ್ಶನಕ್ಕೆ ಈ ಕೆಳಗಿನ ವಿಳಾಸಕ್ಕೆ ಹಾಜರಾಗಬೇಕು.

Office of the HRD Department,
AI Unity Complex, Pallavaram Cantonment, Chennai – 600 043.
Land Mark: Near Taj Catering.

ದಿನಾಂಕ: ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್: ಮೇ 2 (ಬೆಳಿಗ್ಗೆ 9-12).

ಹ್ಯಾಂಡಿ ಮ್ಯಾನ್ / ಹ್ಯಾಂಡಿ ವುಮೆನ್: ಮೇ 4 (ಬೆಳಿಗ್ಗೆ 9-12).

ಆಯ್ಕೆಯಾದವರನ್ನು 3 ವರ್ಷಗಳ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುತ್ತದೆ. ಬಳಿಕ ಅವರ ಕಾರ್ಯ ಕ್ಷಮತೆಯ ಆಧಾರದಲ್ಲಿ ಉದ್ಯೋಗದ ಅವಧಿಯನ್ನು ಮುಂದುವರಿಸಲಾಗುತ್ತದೆ. ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್ ಹುದ್ದೆಗೆ ಆಯ್ಕೆಯಾಗುವವರು ಟ್ರ್ಯಾಕ್ಟರ್, ಬಸ್ ಮತ್ತು ಗ್ರೌಂಡ್ ಸರ್ವಿಸ್ ಉಪಕರಣಗಳಂತಹ ಭಾರೀ ವಾಹನಗಳನ್ನು ಚಲಾಯಿಸಬೇಕಾಗುತ್ತದೆ. ಹ್ಯಾಂಡಿ ಮ್ಯಾನ್ / ಹ್ಯಾಂಡಿ ವುಮೆನ್ ಹುದ್ದೆಗೆ ಆಯ್ಕೆಯಾಗುವವರು ವಿಮಾನ ನಿಲ್ದಾಣದಲ್ಲಿ ಬ್ಯಾಗೇಜ್ / ಸರಕು ಲೋಡ್ ಮಾಡುವುದು ಮತ್ತು ಕ್ಯಾಬಿನ್‌ನಿಂದ ಅನ್‌ಲೋಡ್‌ ಮಾಡುವುದು, ವಿಮಾನವನ್ನು ಸ್ವಚ್ಛಗೊಳಿಸುವುದು, ಕಾರ್ಯಾಗಾರದಲ್ಲಿ ತಂತ್ರಜ್ಞರಿಗೆ ನೆರವಾಗುವುದು, ವ್ಹೀಲ್ ಚೇರ್ ಶುಚಿಗೊಳಿಸುವುದು ಮುಂತಾದ ಕಾರ್ಯಗಳು ನಿರ್ವಹಿಸಬೇಕಾಗುತ್ತದೆ.

ಸಂದರ್ಶನಕ್ಕೆ ಹಾಜರಾಗುವುದು ಹೇಗೆ?

ಅರ್ಹತಾ ಮಾನದಂಡಗಳನ್ನು ಪೂರೈಸುವ ಅರ್ಜಿದಾರರು ಅಧಿಸೂಚನೆಯೊಂದಿಗೆ ನೀಡಲಾದ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿದ ಅಗತ್ಯ ಪ್ರಮಾಣ ಪತ್ರಗಳು / ಪ್ರಮಾಣಪತ್ರಗಳ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಜತೆಗೆ ಸಾಮಾನ್ಯ, ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂಪಾಯಿಯನ್ನು “AI AIRPORT SERVICES LIMITEDʼʼ ಈ ಹೆಸರಿಗೆ ಡಿಮ್ಯಾಂಡ್‌ ಡ್ರಾಫ್ಟ್‌ ಮಾಡಬೇಕು. ಡಿಮ್ಯಾಂಡ್‌ ಡ್ರಾಫ್ಟ್‌ ಹಿಂಭಾಗದಲ್ಲಿ ನಿಮ್ಮ ಪೂರ್ತಿ ಹೆಸರು, ಮೊಬೈಲ್‌ ನಂಬರ್‌ ಬರೆಯುವುದನ್ನು ಮರೆಯಬೇಡಿ. ಗಮನಿಸಿ, ಮಾಜಿ ಯೋಧರು, ಎಸ್‌ಸಿ / ಎಸ್‌ಟಿ ವಿಭಾಗದವರಿಗೆ ಅರ್ಜಿ ಶುಲ್ಕವಿಲ್ಲ.

ವೇತನ

ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್: 24,960 ರೂ., ಹ್ಯಾಂಡಿಮ್ಯಾನ್ / ಹ್ಯಾಂಡಿ ವುಮೆನ್: 22,530 ರೂ. ಮಾಸಿಕ ವೇತನ ಲಭ್ಯ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

Continue Reading
Advertisement
Farmers Protest
ದೇಶ2 mins ago

Farmers Protest: ರೈತರ ಪ್ರತಿಭಟನೆ; ಅಂಬಾಲಾ-ಅಮೃತಸರ ಮಾರ್ಗದ 54 ರೈಲು ಸಂಚಾರ ರದ್ದು

Vinesh Phogat
ಕ್ರೀಡೆ13 mins ago

Vinesh Phogat: ಖೇಲ್ ರತ್ನ ಪ್ರಶಸ್ತಿಯನ್ನು ಪಾದಚಾರಿ ಮಾರ್ಗದಲ್ಲಿ ತೊರೆದಿದ್ದ ವಿನೇಶ್ ಫೋಗಟ್​ಗೆ ಒಲಿದ ಒಲಿಂಪಿಕ್ಸ್​ ಟಿಕೆಟ್​

Dalit Student
ದೇಶ14 mins ago

Dalit Student: ದೇಶ, ರಾಮನ ವಿರೋಧ; ದಲಿತ ಪಿಎಚ್‌.ಡಿ ವಿದ್ಯಾರ್ಥಿಯ ಅಮಾನತು!

Apricot Benefits
ಆರೋಗ್ಯ28 mins ago

Apricot Benefits: ನಿಮಗೆ ಇಂತಹ ಸಮಸ್ಯೆಗಳಿವೆಯೇ?: ಹಾಗಾದರೆ ನಿತ್ಯವೂ ಆಪ್ರಿಕಾಟ್‌ ತಿನ್ನಿ!

Family health insurance
ಮನಿ ಗೈಡ್28 mins ago

Money Guide: ಕುಟುಂಬಕ್ಕಾಗಿ ಆರೋಗ್ಯ ವಿಮೆ; ಖರೀದಿ ಮುನ್ನ ತಿಳಿದಿರಲಿ ಕೆಲವು ವಿಚಾರ

Modi in Karnataka
ಪ್ರಮುಖ ಸುದ್ದಿ33 mins ago

Modi in Karnataka: ಪ್ರಧಾನಿ ಮೋದಿ ತೆರಳುವಾಗ ಚೆಂಬು ಪ್ರದರ್ಶನ; ನಲಪಾಡ್‌ ಸೇರಿ ಹಲವರು ವಶಕ್ಕೆ

Modi in Karnataka Govt turns tax city Bengaluru into tanker city and attacks girls too PM Narendra Modi
ಕರ್ನಾಟಕ1 hour ago

Modi in Karnataka: ಟ್ಯಾಕ್ಸ್ ಸಿಟಿ ಬೆಂಗಳೂರನ್ನು ಟ್ಯಾಂಕರ್ ಸಿಟಿ ಮಾಡಿದ ಸರ್ಕಾರ, ಹೆಣ್ಣು ಮಕ್ಕಳ ಮೇಲೂ ಹಲ್ಲೆ: ಮೋದಿ ವಾಗ್ದಾಳಿ

Kalki 2898 AD
ಸಿನಿಮಾ1 hour ago

Kalki 2898 AD: ನಾಳೆ ಮಹತ್ವದ  ಅಪ್‌ಡೇಟ್‌ ನೀಡಲಿದೆ ಪ್ರಭಾಸ್‌ ಅಭಿನಯದ ʼಕಲ್ಕಿ 2898 ಎಡಿʼ ಚಿತ್ರತಂಡ; ಹೊಸ ರಿಲೀಸ್‌ ದಿನಾಂಕ ಘೋಷಣೆ?

Lok Sabha Election
ದೇಶ1 hour ago

Lok Sabha Election: ನಿನ್ನೆ ಈ ಗ್ರಾಮದ ಒಬ್ಬರೂ ಮತ ಹಾಕಲಿಲ್ಲ; ಇದ್ದಿದ್ದು ಯಾರ ಭಯ?

Ashutosh Sharma
ಕ್ರೀಡೆ1 hour ago

Ashutosh Sharma: ಖಿನ್ನತೆಗೆ ಒಳಗಾಗಿದ್ದ ಬಿಗ್​ ಹಿಟ್ಟರ್​ ಅಶುತೋಷ್‌ ಶರ್ಮ; ಕ್ರಿಕೆಟ್​ ಜರ್ನಿಯೇ ರೋಚಕ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 hours ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 hours ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20245 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ7 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ8 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ2 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ4 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ5 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌