Site icon Vistara News

Bank Jobs 2023 | ದಿ ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕ

Bank Jobs 2023 bank job news bangalore job news

ಬೆಂಗಳೂರು: ನಗರದ ಜಯನಗರದಲ್ಲಿರುವ ದಿ ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ನಲ್ಲಿ ಖಾಲಿ ಇರುವ 22 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು (Bank Jobs 2023), ಅರ್ಹ ಅಭ್ಯರ್ಥಿಗಳಿಂದ ಖುದ್ದಾಗಿ/ಅಂಚೆ ಅಥವಾ ಕೊರಿಯರ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕ ನಡೆಯಲಿದ್ದು, ಅರ್ಜಿ ಸಲ್ಲಿಸಲು ಜನವರಿ 27 ಕೊನೆಯ ದಿನವಾಗಿದೆ. ಅರ್ಜಿಯ ಜತೆಗೆ ಶುಲ್ಕವನ್ನೂ ಪಾವತಿಸಬೇಕಿರುತ್ತದೆ.

ಯಾವೆಲ್ಲಾ ಹುದ್ದೆಗಳಿಗೆ ನೇಮಕ?

ವಿದ್ಯಾರ್ಹತೆ ಏನು?
ಹಿರಿಯ ವ್ಯವಸ್ಥಾಪಕರ ಹುದ್ದೆಗೆ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ ಜತೆಗೆ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಮಧ್ಯಮ/ಹಿರಿಯ ಶ್ರೇಣಿಯಲ್ಲಿ ಕನಿಷ್ಠ 5 ವರ್ಷ ಸೇವೆ ಮಾಡಿದ ಅನುಭವವಿರಬೇಕು. ಕಂಪ್ಯೂಟರ್‌ ಮ್ಯಾನೇಜರ್‌ ಹುದ್ದೆಗೆ ಕಂಪ್ಯೂಟರ್‌ ಸೈನ್ಸ್‌ನಲ್ಲಿ ಬಿಇ ಮಾಡಿರಬೇಕು ಮತ್ತು ಕಂಪ್ಯೂಟರ್‌ ಅಪ್ಲಿಕೇಷನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಐದು ವರ್ಷಗಳ ಅನುಭವ ಅಗತ್ಯ.
ವ್ಯವಸ್ಥಾಪಕರ ಹುದ್ದೆಗೆ ಯಾವುದೇ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ ಜತೆಗೆ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕನಿಷ್ಠ ಐದು ವರ್ಷ ಸೇವೆ ಸಲ್ಲಿಸಿದ ಅನುಭವ ಇರಬೇಕು. ಅಕೌಂಟೆಂಟ್‌ ಹುದ್ದೆಗೆ ಅಭ್ಯರ್ಥಿಯು ವಾಣಿಜ್ಯ/ ಸಹಕಾರ/ ಮ್ಯಾನೇಜ್‌ ಮೆಂಟ್‌ ವಿಷಯಗಳಲ್ಲಿ ಪದವಿ ಪಡೆದಿರಬೇಕು ಮತ್ತು ಟ್ಯಾಲಿ ಕೋರ್ಸ್‌ ಮಾಡಿರಬೇಕು.
ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಕಂಪ್ಯೂಟರ್‌ನಲ್ಲಿ ಕಾರ್ಯನಿರ್ವಹಿಸುವ ಜ್ಞಾನ ಅವಶ್ಯಕ. ಅಟೆಂಡರ್‌ ಹುದ್ದೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕಾದದು ಅವಶ್ಯಕ.

ವಯೋಮಿತಿ ಎಷ್ಟು?
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಹಿಂದುಳಿದ ವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ. ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ ಹಾಗೂ ಹಿಂದುಳಿದ ಅಭ್ಯರ್ಥಿಗಳಿಗೆ ಸಾವಿರ ರೂ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗ-1 ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವನ್ನು “ದಿ ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ಲಿʼʼ ಹೆಸರಿಗೆ ಡಿಡಿ/ ಪೇ ಆಡರ್ಸ್‌/ ಪೋಸ್ಟಲ್‌ ಆಡರ್ಸ್‌ ಮೂಲಕ ಪಾವತಿಸಲು ಸೂಚಿಸಲಾಗಿದೆ.

ನೇಮಕದ ಕುರಿತ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್‌ (Click Here) ಮಾಡಿ

Exit mobile version