Site icon Vistara News

Bank Jobs 2023 | ಕರ್ನಾಟಕ ಬ್ಯಾಂಕ್‌ನಲ್ಲಿ ಪ್ರೊಬೆಷನರಿ ಆಫೀಸರ್‌ ಹುದ್ದೆ; ಅರ್ಜಿ ಸಲ್ಲಿಸಲು ಇನ್ನು ನಾಲ್ಕು ದಿನ ಬಾಕಿ

bank jobs karnataka bank recruitment 2023

ದೇಶದ ಪ್ರಮುಖ ಖಾಸಗಿ ಬ್ಯಾಂಕ್‌ ಆಗಿ ಹೆಸರು ಮಾಡಿರುವ, ರಾಜ್ಯ ಮೂಲದ ಕರ್ನಾಟಕ ಬ್ಯಾಂಕ್‌ನಲ್ಲಿನ ಪ್ರೊಬೆಷನರಿ ಆಫೀಸರ್‌ ಹುದ್ದೆಗಳಿಗೆ (SCALE I) ಅರ್ಜಿ ಸಲ್ಲಿಸಲು (Bank Jobs 2023) ಇನ್ನು ನಾಲ್ಕು ದಿನ ಮಾತ್ರ ಬಾಕಿ ಇದೆ.

ಜನವರಿ 10 ಅರ್ಜಿ ಸಲ್ಲಿಸಲು ಕೊನೆಯ ದಿನವೆಂದು ನೇಮಕಾತಿ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದ್ದು, ಆನ್‌ಲೈನ್‌ನಲ್ಲಿಯೇ ಅರ್ಜಿ ಸಲ್ಲಿಸಬಹುದಾಗಿದೆ. ಎಷ್ಟು ಹುದ್ದೆಗಳಿಗೆ ನೇಮಕ ನಡೆಯಲಿದೆ ಎಂಬುದನ್ನು ಬ್ಯಾಂಕ್‌ ಇನ್ನೂ ಪ್ರಕಟಿಸಿಲ್ಲ. ಮುಂದೆ ಈ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಲಾಗಿದೆ. ನೇಮಕಗೊಂಡ ಅಭ್ಯರ್ಥಿಗಳು ದೇಶಾದ್ಯಂತ ಕಾರ್ಯನಿರ್ವಹಿಸಲು ಸಿದ್ಧರಿರಬೇಕಿರುತ್ತದೆ.

ಯಾರು ಅರ್ಜಿ ಸಲ್ಲಿಸಬಹುದು?
ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನೂ ಫಲಿತಾಂಶವನ್ನು ಪಡೆಯದೇ ಇರುವ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿಲ್ಲ. ಅಭ್ಯರ್ಥಿಗಳು 01-12-2022ಕ್ಕೂ ಮೊದಲು ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಯೋಮಿತಿ ಎಷ್ಟು?
ಗರಿಷ್ಠ 28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಂದರೆ ಅಭ್ಯರ್ಥಿಗಳು 02-12-1994 ರ ನಂತರ ಜನಿಸಿರಬೇಕು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಐದು ವರ್ಷ ಸಡಿಲಿಕೆ ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಅರ್ಜಿ ಶುಲ್ಕ ಎಷ್ಟು?
ಅಭ್ಯರ್ಥಿಗಳು 800ರೂ ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 700 ರೂ. ಶುಲ್ಕ ನಿಗದಿಪಡಿಸಲಾಗಿದೆ. ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ನೆಮಕ ಹೇಗೆ?
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಫೆಬ್ರವರಿಯಲ್ಲಿ ಆನ್‌ಲೈನ್‌ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ರಾಜ್ಯದ ಬೆಂಗಳೂರು, ಧಾರವಾಡ/ಹುಬ್ಬಳ್ಳಿ, ಮಂಗಳೂರು, ಮೈಸೂರು ಮತ್ತು ಶಿವಮೊಗ್ಗದಲ್ಲಿ ಪರೀಕ್ಷಾ ಕೇಂದ್ರಗಳಿರಲಿವೆ. ಪರೀಕ್ಷೆಯು ಆರು ವಿಷಯಗಳನ್ನು ಒಳಗೊಂಡಿದ್ದು, ಒಟ್ಟು 202 ಪ್ರಶ್ನೆಗಳನ್ನು ಕೇಳಲಾಗುತ್ತದೆ. 225 ಅಂಕ ನಿಗದಿಪಡಿಸಲಾಗಿರುತ್ತದೆ. 150 ನಿಮಿಷ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಪ್ರಶ್ನೆ ಪತ್ರಿಕೆಯು ಇಂಗ್ಲಿಷ್‌ನಲ್ಲಿ ಮಾತ್ರ ಇರಲಿದ್ದು, ಋಣಾತ್ಮಕ ಮೌಲ್ಯಮಾಪನವಿರುತ್ತದೆ. ಅಂದರೆ ಪ್ರತಿ ತಪ್ಪು ಉತ್ತರಗಳಿಗೆ 1/4 ಅಂಕ ಕಳೆಯಲಾಗುತ್ತದೆ. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ Induction Training Programme ಇರುತ್ತದೆ.

ವೇತನ ಎಷ್ಟು?
ನೇಮಕಗೊಂಡ ಅಭ್ಯರ್ಥಿಗಳಿಗೆ ಮಾಸಿಕ 84,000 ರೂ. ವೇತನ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ: Click Here

ಇದನ್ನೂ ಓದಿ | KPSC Recruitment 2022 | ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ; ಇನ್ನು ಒಮ್ಮೆ ಬರೆದರೆ ಸಾಕು!

Exit mobile version